Physical Abuse: ಸ್ನೇಹದ ನೆಪದಲ್ಲಿ ನೆರೆಮನೆಗೆ ತೆರಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಕಾಮುಕನ ಬಂಧನ - Vistara News

ಕ್ರೈಂ

Physical Abuse: ಸ್ನೇಹದ ನೆಪದಲ್ಲಿ ನೆರೆಮನೆಗೆ ತೆರಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಕಾಮುಕನ ಬಂಧನ

Physical Abuse: ನೆರೆಮನೆಯ 13 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಮತ್ತು ಹಲ್ಲೆ ನಡೆಸಿದ ವ್ಯಕ್ತಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಥಾಣೆಯಲ್ಲಿ ಈ ಘಟನೆ ನಡೆದಿದೆ. ಭಿವಾಡಿಯ ನ್ಯೂ ಆಜಾದ್‌ ನಗರದ ನಿವಾಸಿ, 28 ವರ್ಷದ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರೋಪಿಯು ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ಆಗಾಗ ಆಕೆಯ ಮನೆಗೆ ಭೇಟಿ ನೀಡುತ್ತಿದ್ದ.

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬೈ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅದರಲ್ಲಿಯೂ ಅಪ್ರಾಪ್ತೆಯರ ಮೇಲಿನ ದೌರ್ಜನ್ಯ ಮಿತಿ ಮೀರುತ್ತಿರುವುದು ಕಳವಳವನ್ನುಂಟು ಮಾಡಿದೆ. ಅಂತಹದ್ದೇ ಪ್ರಕರಣವೊಂದು ಇದೀಗ ಮಹಾರಾಷ್ಟ್ರದಲ್ಲಿ ನಡೆದಿದ್ದು, ನೆರೆಮನೆಯ 13 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಮತ್ತು ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದೆ (Physical Abuse).

ಭಿವಾಡಿಯ ನ್ಯೂ ಆಜಾದ್‌ ನಗರದ ನಿವಾಸಿ, 28 ವರ್ಷದ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರೋಪಿಯು ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ಆಗಾಗ ಆಕೆಯ ಮನೆಗೆ ಭೇಟಿ ನೀಡುತ್ತಿದ್ದ.

ಘಟನೆ ವಿವರ

ಆರೋಪಿ ಆರಂಭದಲ್ಲಿ ತನ್ನ ಪಕ್ಕದ ಮನೆಯಲ್ಲಿದ್ದ ಸಂತ್ರಸ್ತ ಬಾಲಕಿಯ ಕುಟುಂಬದವರೊಂದಿಗೆ ಪರಿಚಯ ಮಾಡಿಕೊಂಡಿದ್ದ. ಇದನ್ನೇ ನೆಪ ಮಾಡಿಕೊಂಡಿದ್ದ ಆತ ಪದೇ ಪದೆ ಬಾಲಕಿ ಮನೆಗೆ ಭೇಟಿ ನೀಡುತ್ತಿದ್ದ. ಬಾಲಕಿಯ ಪೋಷಕರು ಕೆಲಸಕ್ಕಾಗಿ ಮನೆಯಿಂದ ಹೊರಗೆ ಹೋದ ಸಮಯ ನೋಡಿ ಮನೆಗೆ ತೆರಳುತ್ತಿದ್ದ ಆತ ಅವಳನ್ನು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ ತಿಂಗಳಿನಿಂದಲೇ ದೌರ್ಜನ್ಯ ಎಸಗಲು ಆರಂಭಿಸಿದ್ದ. ಸೋಮವಾರ (ಆಗಸ್ಟ್‌ 26) ಬಾಲಕಿ ಆತನ ಕೃತ್ಯವನ್ನು ವಿರೋಧಿಸಿದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಮಾತ್ರವಲ್ಲ ಇದನ್ನು ಯಾರ ಬಳಿಯೂ ಬಾಯ್ಬಿಡದಂತೆ ಬೆದರಿಕೆ ಹಾಕಿದ್ದಾನೆ. ಇದೀಗ ಬಾಲಕಿ ಆತನ ಬೆದರಿಕೆ ಜಗ್ಗದೆ ಪೊಲೀಸ್‌ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾಳೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಸ್ಕೋ (POCSO) ಕಾಯ್ದೆಯಡಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

11 ವರ್ಷದ ತಂಗಿ ಮೇಲೆ 16 ವರ್ಷದ ಬಾಲಕನಿಂದ ನಿರಂತರ ಅತ್ಯಾಚಾರ

ಚೆನ್ನೈ: 16 ವರ್ಷದ ಬಾಲಕನೊಬ್ಬ ತನ್ನ 11 ವರ್ಷದ ಸಹೋದರಿ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಸೋಮವಾರ ಬೆಳಕಿಗೆ ಬಂದಿತ್ತು. ಇತ್ತೀಚೆಗೆ ಸಂತ್ರಸ್ತ ಬಾಲಕಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ ಹೆತ್ತವರು ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರು ಪರೀಕ್ಷಿಸಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಎನ್ನುವುದು ತಿಳಿದು ಬಂದಿತ್ತು. ಈ ವೇಳೆ ಆಕೆ ತನ್ನ ಸಹೋದರನ ನೀಚ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಳು.

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಜಿಂಜಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ತಮ್ಮ ಮನೆ ತುಂಬ ಚಿಕ್ಕದಾಗಿದ್ದು, ಜಾಗ ಇಲ್ಲದ ಕಾರಣ ತಾವು ಟೆರೇಸ್‌ ಮೇಲೆ ಮಲಗಿದರೆ, ಮನೆಯೊಳಗೆ ಮಕ್ಕಳಿಬ್ಬರು ಮಲಗುತ್ತಾರೆ. ಈ ವೇಳೆ ಸಹೋದರ ದೌರ್ಜನ್ಯ ಎಸಗಿದ್ದಾನೆ ಎಂದು ಹೆತ್ತವರು ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಆತ ನಿರಂತರವಾಗಿ ತನ್ನ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನು ತಂದೆ ತಾಯಿ ಬಳಿ ಹೇಳದಂತೆಯೋ ಬೆದರಿಕೆ ಹಾಕಿದ್ದ ಎಂದು ಆಕೆ ತಿಳಿಸಿದ್ದಳು.

ಇದನ್ನೂ ಓದಿ: Sexual Harassment: ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Murder Case : ತೆಲಂಗಾಣ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಸ್ಥಳ ಮಹಜರು ವೇಳೆ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

Murder Case

ಬೆಂಗಳೂರು: ಕೊಲೆ ಆರೋಪಿಯನ್ನು (Murder Case) ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ತೆಲಂಗಾಣ ರಾಜ್ಯದ ಉಪ್ಪಳ್‌ನಲ್ಲಿ ನಡೆದಿದೆ. ತೆಲಂಗಾಣದಲ್ಲಿ ಉದ್ಯಮಿಯನ್ನು ಹತ್ಯೆ ನಡೆಸಿ ಬಳಿಕ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಪನ್ಯದ ಎಸ್ಟೇಟ್‌ನಲ್ಲಿ ಸುಟ್ಟುಹಾಕಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದರು.

ಓರ್ವ ನ್ಯಾಯಾಂಗ ಬಂಧನವಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪೈಕಿ ಅಂಕುರ್ ರಾಣಾ ಠಾಕೂರ್‌ನನ್ನು ಎರಡು ದಿನಗಳ ಹಿಂದೆ ತೆಲಂಗಾಣಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಪರಾರಿ ಸಂಬಂಧ ತೆಲಂಗಾಣ ಉಪ್ಪಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚುವರಿಯಾಗಿ ಕೊಡಗಿನ ಎರಡು ಎಕ್ಸ್ ಪರ್ಟ್ ಟೀಮ್ ಕೂಡ ತೆಲಂಗಾಣಕ್ಕೆ ತೆರಳಿದ್ದು ಹುಟುಕಾಟ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
ಬಂಧಿತ ಆರೋಪಿಗಳು

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಕೊಡಗು

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣವನ್ನು ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಪನ್ಯ ಎಫ್.ಸಿ. ತಂಡದ ಸದಸ್ಯರು ಸನ್ಮಾನಿಸಿ ಗೌರವಿಸಿದರು.

VISTARANEWS.COM


on

murder case

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಸಂದೇಶ್‌ ಎಂಬುವವರಿಗೆ ಸೇರಿದ ಪನ್ಯ ಕಾಫಿ ತೋಟದಲ್ಲಿ ವ್ಯಕ್ತಿಯನ್ನು ಕೊಲೆ (murder case) ಮಾಡಿ, ಸುಟ್ಟು ಹಾಕಿದ ಪ್ರಕರಣವನ್ನು ಸುಂಟಿಕೊಪ್ಪ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದರು. ಹೀಗಾಗಿ ಸುಂಟಿಕೊಪ್ಪ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಪನ್ಯತೋಟದ ಪನ್ಯ ಎಫ್.ಸಿ. ತಂಡದ ಸದಸ್ಯರು ಸುಂಟಿಕೊಪ್ಪ ಠಾಣೆಗೆ ತೆರಳಿ ಕುಶಾಲನಗರ ವೃತ್ತ ನಿರೀಕ್ಷಕ ಮುದ್ದು ಮಾದೇವ, ಸುಂಟಿಕೊಪ್ಪದ ಠಾಣಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯಾಚರಣೆಯಲ್ಲಿ ಭಾಗಿಯಾದ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು.

murder case

ಯಾವುದೆ ಸುಳಿವು ಇಲ್ಲದಿರೋ ಈ ಪ್ರಕರಣವನ್ನು ಪೊಲೀಸರು ಭೇದಿಸಿರೋದಕ್ಕೆ ಪನ್ಯ ಎಫ್.ಸಿ ತಂಡ ಶ್ಲಾಘನೆ ವ್ಯಕ್ತಪಡಿಸಿತ್ತು. ಪನ್ಯ ಎಫ್.ಸಿ. ತಂಡದ ಸುಮಾರು 25ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು. ಗ್ರಾ.ಪಂ. ಸದಸ್ಯ ಪ್ರಸಾದ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು

murder case

ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನಿಗೆ ಚಟ್ಟ ಕಟ್ಟಿದ್ದಳು

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಬೆಂಗಳೂರು

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

VISTARANEWS.COM


on

ಬೆಂಗಳೂರು: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸ್‌ ಠಾಣೆ (Assault Case) ಮೆಟ್ಟಿಲೇರಿದ್ದಾಳೆ. ಮಗುವನ್ನು ಬಲಿ ಕೊಡೋಣ, ಬಲಿ ಕೊಟ್ರೆ ನಿಧಿ ಸಿಗುತ್ತೆ. ಕುಟುಂಬದ ಸಮೃದ್ಧಿ ಹೆಚ್ಚಾಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿ ವಿರುದ್ಧ ಸಿಡಿದೆದ್ದ ಪತ್ನಿಯಿಂದ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಸದ್ದಾಂ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಾನೊಬ್ಬ ಹಿಂದು ಯುವಕಮ ನನ್ನ ಹೆಸರು ಆದಿಈಶ್ವರ್ ಎಂದು ಸುಳ್ಳು ಹೇಳಿ ಸದ್ದಾಂ ಹಿಂದು ಧರ್ಮದ ಯುವತಿಯನ್ನು ಮದುವೆಯಾಗಿದ್ದ.

Assault case A psychopathic husband in Bangalore Wife harassed for sacrificing her child for treasure

ಮದುವೆಯಾಗಿ ಪತ್ನಿ ಗರ್ಭಿಣಿಯಾದಾಗ ತಾನೊಬ್ಬ ಮುಸಲ್ಮಾನ್ ತನ್ನ ಹೆಸರು ಸದ್ದಾಂ ಎಂದು ಹೇಳಿಕೊಂಡಿದ್ದ.
ನೀನು ಮುಸಲ್ಮಾನ್ ಧರ್ಮಕ್ಕೆ ಮತಾಂತರವಾಗಬೇಕೆಂದು ಪತ್ನಿಯನ್ನು ಮತಾಂತರಿಸಿದ್ದ. ಅಲ್ಲದೇ ಪತ್ನಿಯ ಹೆಸರನ್ನು ಬದಲಾಯಿಸಿದ್ದ. ಪ್ರೀತಿಸಿ ಮದುವೆಯಾದವನು ಧರ್ಮ ಯಾವುದಾದರೇನು ಎಂದು ಪತ್ನಿಯೂ ಸುಮ್ಮನಾಗಿದ್ದಳು. ಆದರೆ ಇತ್ತೀಚಿಗೆ ಸೈಕೋ ರೀತಿಯಲ್ಲಿ ಸದ್ದಾಂ ವರ್ತಿಸುತ್ತಿದ್ದ.

Assault case A psychopathic husband in Bangalore Wife harassed for sacrificing her child for treasure

ಗಂಡು ಮಗು ಹುಟ್ಟಿದ ನಂತರ ಕುಟ್ಟಿ ಸೈತಾನ್ ಪೂಜೆ ಮಾಡಬೇಕು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನು ಬಲಿ ಕೊಡಬೇಕು. ಮಗುವನ್ನು ಬಲಿ ಕೊಟ್ರೆ ಸಮೃದ್ಧಿ ಹೆಚ್ಚಾಗತ್ತೆ, ಜತೆಗೆ ನಿಧಿ ಸಿಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸದ್ಯ ಸೈಕೋ ಗಂಡನಿಂದ ತಪ್ಪಿಸಿಕೊಂಡಿರುವ ಮಹಿಳೆ ತುಮಕೂರಿನ ತವರು ಮನೆ ಸೇರಿಕೊಂಡಿದ್ದಾಳೆ. ತುಮಕೂರಿಗೂ ತೆರಳಿ ಮಗುವನ್ನು ಬಲಿ ಕೊಡೋಣ ಮಗುವನ್ನು ಕೊಡು ಎಂದು ಟಾರ್ಚರ್ ಕೊಟ್ಟಿದ್ದಾನೆ. ಆರೋಪಿ ಸದ್ದಾಂ ಪತ್ನಿಯ ತಾಯಿಗೂ ಜೀವ ಬೆದರಿಕೆ ಹಾಕಿದ್ದಾನೆ.

Assault case A psychopathic husband in Bangalore Wife harassed for sacrificing her child for treasure

ಹೀಗಾಗಿ ಮಹಿಳೆ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾಳೆ. ಆದರೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ದಯಾನಂದ್‌ಗೆ ನೊಂದಾಕೆ ದೂರು ನೀಡಿದ್ದಾಳೆ. ತಡರಾತ್ರಿ ಎದ್ದು ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಪತಿಯ ವರ್ತನೆ ಕಂಡು ಭಯಭೀತಳಾಗಿದ್ದ ಮಹಿಳೆ, ದಿನ ಕಳೆದಂತೆ ಕುಟ್ಟಿ ಸೈತಾನ್ ಪೂಜೆಗೆ ಮಗುವನ್ನು ಬಲಿ ಕೊಡಬೇಕೆಂದು ಹಿಂಸೆ ನೀಡಲು ಶುರು ಮಾಡಿದ್ದ.

Continue Reading

ಉತ್ತರ ಕನ್ನಡ

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜತೆಗೆ ಇದ್ದವರೆ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

VISTARANEWS.COM


on

Murder case

ಉತ್ತರ ಕನ್ನಡ : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ (Murder Case) ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಸರ್ಕಾರಿ ಆಸ್ಪತ್ರೆ ಕ್ವಾರ್ಟರ್ಸ್ ಬಳಿ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಇಮ್ತಿಯಾಝ್(25) ಕೊಲೆಯಾದವನು.

ಗಾರೆ ಕೆಲಸಕ್ಕಾಗಿ ಇಮ್ತಿಯಾಝ್‌ ಕಳೆದೊಂದು ತಿಂಗಳಿನಿಂದ ಕುಮಟಾ ಸರಕಾರಿ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ತಂಗಿದ್ದ. ಈತನ ಜತೆ ಹುಬ್ಬಳ್ಳಿ ಮೂಲದ ಮೊಯುದ್ದೀನ್, ಮೌನೇಶ್ ಹಾಗೂ ಸಾದಿಕ್ ಎಂಬುವವರು ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಗಾರೆ ಕೆಲಸಕ್ಕಾಗಿಯೇ ಕುಮಟಾಕ್ಕೆ ಬಂದು, ನಾಲ್ವರು ಒಂದೇ ರೂಮಿನಲ್ಲಿ ತಂಗಿದ್ದ. ಇಮ್ತಿಯಾಝ್ ಕೊಲೆಯ ಬಳಿಕ ಜತೆಗಿದ್ದ ಮೂವರು ಪರಾರಿ ಆಗಿದ್ದಾರೆ.

ಇನ್ಸ್‌ಪೆಕ್ಟರ್ ಯೋಗೀಶ್ ನೇತೃತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
ಕರ್ನಾಟಕ4 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest7 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ8 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ8 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌