Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ - Vistara News

ಭವಿಷ್ಯ

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಗುರುವಾರವೂ ಕಟಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ವೃಷಭ ರಾಶಿಯವರು ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 25:36 ವಾರ: ಗುರುವಾರ
ನಕ್ಷತ್ರ: ಆರಿದ್ರಾ 16:38 ಯೋಗ: ಸಿದ್ಧಿ 18:15
ಕರಣ: ಭವ 13:24 ಅಮೃತಕಾಲ: ಬೆಳಗ್ಗೆ 06:20 ರಿಂದ 07:59
ದಿನದ ವಿಶೇಷ: ಸರ್ವತ್ರ ಏಕಾದಶಿ

ಸೂರ್ಯೋದಯ : 06:08   ಸೂರ್ಯಾಸ್ತ : 06:32

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ, ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya : ಈ ರಾಶಿಯವರು ಇಂದು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಬುಧವಾರ ಬೆಳಗ್ಗೆ 04:4ಕ್ಕೆ ಕಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಟಕ ರಾಶಿಯವರು ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 25:18 ವಾರ: ಬುಧವಾರ
ನಕ್ಷತ್ರ: ಮೃಗಶಿರಾ 15:51 ಯೋಗ: ವಜ್ರ 19:10
ಕರಣ: ವಣಿಜ 13:21 ಅಮೃತಕಾಲ: ಬೆಳಗ್ಗೆ 06:59 ರಿಂದ 08:36
ದಿನದ ವಿಶೇಷ: ಹೆಮ್ಮರಗಾಲ ಕೃಷ್ಣೋತ್ಸವ

ಸೂರ್ಯೋದಯ : 06:08   ಸೂರ್ಯಾಸ್ತ : 06:34

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡುವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ . ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬ ಸದಸ್ಯನ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಹೆಚ್ಚಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ- ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina bhavishya
Koo

ಚಂದ್ರನು ಮಂಗಳವಾರವೂ ಮಿಥುನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ವೃಷಭ ರಾಶಿಯವರು ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಹೂಡಿಕೆ ವ್ಯವಹಾರದ ಕುರಿತು ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದ ಕುರಿತಾಗಿ ಬೆಳೆಸಿದ ಪ್ರಯಾಣ ಲಾಭ ತಂದುಕೊಡಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 25:32 ವಾರ: ಮಂಗಳವಾರ
ನಕ್ಷತ್ರ: ರೋಹಿಣಿ 15:36 ಯೋಗ: ಹರ್ಷಣ 20:29
ಕರಣ: ತೈತುಲ 13:51 ಅಮೃತಕಾಲ: ಮಧ್ಯಾಹ್ನ 01:36 ರಿಂದ 03:09
ದಿನದ ವಿಶೇಷ: ನವಮಿ ಮಂಗಳಗೌರೀ ವ್ರತ, ಕೃಷ್ಣ ಜಯಂತಿ ಉಡುಪಿ ಉತ್ಸವ

ಸೂರ್ಯೋದಯ : 06:08   ಸೂರ್ಯಾಸ್ತ : 06:34

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಹೂಡಿಕೆ ವ್ಯವಹಾರದ ಕುರಿತು ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದ ಕುರಿತಾಗಿ ಬೆಳೆಸಿದ ಪ್ರಯಾಣ ಲಾಭ ತಂದುಕೊಡಲಿದೆ. ಉದ್ಯೋಗಿಗಳಿಗೆ ಮೆಚ್ಚುಗೆ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ.ಆರೋಗ್ಯದ ಕುರಿತು ಕಾಳಜಿ ಇರಲಿ.ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಇರಲಿದೆ. ಆರ್ಥಿಕ ಚಟುವಟಿಕೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಮಿಶ್ರ ಫಲ.ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದುರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರ ಆಸೆ-ಆಕಾಂಕ್ಷೆಗಳು ಇಂದು ಯಶಸ್ಸನ್ನು ತಂದುಕೊಡಲಿವೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ಕನ್ಯಾ ರಾಶಿಯವರು ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 26:19 ವಾರ: ಸೋಮವಾರ
ನಕ್ಷತ್ರ: ಕೃತ್ತಿಕಾ 15:54 ಯೋಗ: ವ್ಯಾಘಾತ 22:15
ಕರಣ: ಬಾಲವ 14:54 ಅಮೃತಕಾಲ: ಮಧ್ಯಾಹ್ನ 01:36 ರಿಂದ 03:09
ದಿನದ ವಿಶೇಷ: ಶ್ರೀಕೃಷ್ಣಾ ಜನ್ಮಾಷ್ಟಮಿ

ಸೂರ್ಯೋದಯ : 06:08   ಸೂರ್ಯಾಸ್ತ : 06:34

ರಾಹುಕಾಲ: ಬೆಳಗ್ಗೆ 07:42 ರಿಂದ 09:15
ಗುಳಿಕಕಾಲ: ಮಧ್ಯಾಹ್ನ 01:54 ರಿಂದ 03:28
ಯಮಗಂಡಕಾಲ: ಬೆಳಗ್ಗೆ 10:48 ರಿಂದ 12:21

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ .ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು.ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ.ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಭಾನುವಾರ ರಾತ್ರಿ 11:04ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಸಿಂಹ ರಾಶಿಯವರು ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 27:38 ವಾರ: ಭಾನುವಾರ
ನಕ್ಷತ್ರ: ಭರಣಿ 16:44 ಯೋಗ: ಧ್ರುವ 24:27
ಕರಣ: ವಿಷ್ಟಿ (ಭದ್ರ) 16:30 ಅಮೃತಕಾಲ: ಮಧ್ಯಾಹ್ನ 12:13 ರಿಂದ 01:44
ದಿನದ ವಿಶೇಷ: ಬಾಗೇವಾಡಿ ಜಾತ್ರೆ ತಲಕಾಡು ಬಾಲಕೃಷ್ಣಾನಂದ ವರ್ಧಂತಿ

ಸೂರ್ಯೋದಯ : 06:08   ಸೂರ್ಯಾಸ್ತ : 06:35

ರಾಹುಕಾಲ: ಸಂಜೆ 05:01 ರಿಂದ 06:35
ಗುಳಿಕಕಾಲ: ಮಧ್ಯಾಹ್ನ 03:28
ರಿಂದ 05:01
ಯಮಗಂಡಕಾಲ: ಮಧ್ಯಾಹ್ನ 12:22 ರಿಂದ 01:55

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ, ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮದಲ್ಲದ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Hair Combing
ಆರೋಗ್ಯ3 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ3 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ4 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು13 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು14 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್15 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ15 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು15 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ15 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌