Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ 'ಭುವನಂ ಗಗನಂ' ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌ - Vistara News

ಬೆಂಗಳೂರು

Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

ಪೃಥ್ವಿ ಅಂಬರ್ ಹಾಗೂ ಪ್ರಮೋದ್ ಅವರು ಮೊದಲ ಬಾರಿ ಒಟ್ಟಿಗೆ ತೆರೆ ಹಂಚಿಕೊಂಡಿರುವ ‘ಭುವನ್ ಗಗನಂ’ ಸಿನಿಮಾಕ್ಕೆ (Kannada New Movie) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ ಕೊಟ್ಟಿದ್ದಾರೆ. ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಭುವನಂ ಗಗನಂ” ಸಿನಿಮಾ ತನ್ನ ಟೀಸರ್ ನಿಂದಲೇ ಪ್ರೇಕ್ಷಕರಲ್ಲಿ ಕುತೂಹಲ ಕೇಂದ್ರ ಬಿಂದುವಾಗಿದೆ. ಕ್ಲಾಸ್ ಕಥೆಗಳ ಮೂಲಕ ಗಮನ ಸೆಳೆದ ಪೃಥ್ವಿ ಅಂಬಾರ್ ಹಾಗೂ ಮಾಸ್ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡ ಪ್ರಮೋದ್, ಮೊದಲ ಬಾರಿ ಒಟ್ಟಿಗೆ ತೆರೆ ಹಂಚಿಕೊಂಡಿರುವ ಈ ಚಿತ್ರದ (Kannada New Movie) ಟೈಟಲ್ ಟ್ರ್ಯಾಕ್ ಅನಾವರಣಗೊಂಡಿದೆ.

ಹೊಸ ಪ್ರತಿಭೆಗಳಿಗೆ ಸದಾ ಬೆನ್ನುತಟ್ಟುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಚಿತ್ರರಂಗದ ಭರವಸೆ ನಾಯಕರಾಗಿರುವ ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ, ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಭುವನಂ ಗಗನಂ ಎಂದು ಶುರುವಾಗುವ ಹಾಡಿಗೆ ಅನಿರುದ್ಧ ಶಾಸ್ತ್ರೀ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದು, ಅರ್ಮಾನ್ ಮಲ್ಲಿಕ್ ಹಾಗೂ ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದಾರೆ. ಗುಮ್ಮಿನೇನಿ ವಿಜಯ್ ಈ ಮಧುರ ಗೀತೆಗೆ ಟ್ಯೂನ್ ಹಾಕಿದ್ದಾರೆ. ಭುವನಂ ಗಗನಂ ಟೈಟಲ್ ಟ್ರ್ಯಾಕ್‌ನಲ್ಲಿ ಪ್ರಮೋದ್ ಹಾಗೂ ರೆಚೆಲ್ ಡೇವಿಡ್ ಜೋಡಿಯ ಕೆಮಿಸ್ಟ್ರಿ ನೋಡುಗರಿಗೆ ಇಷ್ಟವಾಗುತ್ತದೆ.

ಇದನ್ನೂ ಓದಿ: Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

ಗಿರೀಶ್ ಮೂಲಿಮನಿ ಭುವನಂ ಗಗನಂ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದು, ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ. ಮುನೇಗೌಡ ತಮ್ಮದೇ ಎಸ್‌ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಪ್ರಚಾರ ಅಖಾಡಕ್ಕೆ ಇಳಿದಿರುವ ಚಿತ್ರತಂಡ ಆದಷ್ಟು ಬೇಗ ಭುವನಂ ಗಗನಂ ಸಿನಿಮಾ ತೆರೆಗೆ ತರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ (Bomb Threat) ಇಮೇಲ್ ಬಂದಿದೆ. ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ.

VISTARANEWS.COM


on

By

Bomb Threat
Koo

ಬೆಂಗಳೂರು: ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದ (bengaluru city) ಕೆಲವು ಖಾಸಗಿ ಶಾಲೆಗಳಿಗೆ (Private schools) ಬಾಂಬ್ ಬೆದರಿಕೆ (Bomb Threat) ಬಂದಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಇಮೇಲ್ ಮೂಲಕ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ಗೋವಿಂದಪುರ ಠಾಣೆಯಲ್ಲಿ (govindapura station) ಪ್ರಕರಣ ದಾಖಲಿಸಲಾಗಿದೆ.

ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ.

Father Kodachi ಹೆಸರಿನ coldghost456@gmail.com askbirnorth@tipsglobal.net ಎಂಬ ಐಡಿಯಿಂದ ಇಮೇಲ್ ಬೆದರಿಕೆ ಬಂದಿದ್ದು, ಮಧ್ಯಾಹ್ನ 1.30ಕ್ಕೆ ಬ್ಲಾಸ್ಟ್ ಆಗ ಆಗಲಿದೆ ಎಂದು ಮೇಲ್ ನಲ್ಲಿ ತಿಳಿಸಲಾಗಿದೆ.

ಮಾಹಿತಿ ಬಂದ ಕೂಡಲೇ ಶಾಲೆಗೆ ಹೋಗಿ ಗೋವಿಂದಪುರ ಪೊಲೀಸರು, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಆತಂಕಕಾರಿ ವಿಚಾರ ಪತ್ತೆಯಾಗಿಲ್ಲ.
ಸದ್ಯ ಘಟನೆ ಸಂಬಂಧ ಶಾಲೆಯ ಆಡಳಿತಾಧಿಕಾರಿ ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Bomb Threat
Bomb Threat


ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ಇತ್ತೀಚೆಗಷ್ಟೇ ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿತ್ತು. ಇಂಗ್ಲಿಷ್ ಬಳಸಿ‌ ಉರ್ದು ಭಾಷೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು.

ವಂಡರ್‌ ಲಾ ಅಮ್ಯೂಸ್ಮೆಂಟ್ ಪಾರ್ಕ್ ಆಡಳಿತ ಹಾಗೂ ಸಿಬ್ಬಂದಿಗೆ ಇ-ಮೇಲ್ ಬಂದಿದೆ. ಸಂಡೇ ನಿನ್ನ ಹಾಗೂ ವಂಡರ್‌ ಲಾ ಪಾರ್ಕ್‌ಗೆ ಮೂರು ಬಾಂಬ್ ಸಿಡಿಸುತ್ತೇವೆ ಇನ್ಶಾಅಲ್ಲಾ..! ಕನ್ನಡದ ಕಾಫೀರರು ಮುಸ್ಲಿಂರ ಮೇಲೆ ಮಾಡುತ್ತಿರುವ ದಬ್ಬಾಳಿಕೆಯ ಶಿಕ್ಷೆ ಸಿಗಲಿದೆ ಎಂದು ಸಂದೇಶ ಕಳಿಸಿದ್ದರು.

ಕಳೆದ ಆಗಸ್ಟ್ ‌3ರಂದು ಹುಸಿ ಬಾಂಬ್ ಬೆದರಿಕೆ ಬಂದಿದ್ದು, ‌ತಡವಾಗಿ ಬೆಳಕಿಗೆ ಬಂದಿದೆ. ಮೊಹಮ್ಮದ್ ಇರ್ಫಾನ್ ಜಿಹಾದಿ ಎಂಬ ಹೆಸರಿನ‌ ಇ -ಮೇಲ್‌ನಿಂದ ಬಂದಿದೆ. ಬಿಡದಿ ಪೊಲೀಸರು ಇ ಮೇಲ್ ಮಾಡಿದ ಆರೋಪಿಯನ್ನು ಹುಡುಕುತ್ತಿದ್ದಾರೆ. ಬಾಂಬ್ ಬೆದರಿಕೆ ಬಳಿಕ‌ ಇಡೀ ಪಾರ್ಕ್ ಪರಿಶೀಲನೆ ಮಾಡಲಾಗಿದೆ.

Continue Reading

ಬೆಂಗಳೂರು

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್‌ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ.

ಇದನ್ನೂ ಓದಿ: Viral News: 10 ವರ್ಷಗಳ ಬೋಧನೆಯ ಅನಂತರವೂ ಸಂಬಳ ಹೆಚ್ಚಿಸಿಲ್ಲ; ಹತಾಶೆಯಿಂದ ರಾಜೀನಾಮೆ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಬಳ್ಳಾರಿ ಜೈಲಿನ ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಆದರೆ ಯಾವುದೇ ಕಾರಣಕ್ಕೂ ಜೈಲಿನಲ್ಲಿ ಕೂಲಿಂಗ್ ಗ್ಲಾಸ್‌ನಂಥ ವಸ್ತುಗಳನ್ನು ಒಯ್ಯುವ ಹಾಗಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ, ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

Continue Reading

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Karnataka Weather Forecast : ಗುರುವಾರ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ (Rain News) ಜನರು ಪರದಾಡಿದರು. ಉಡುಪಿ ಜಿಲ್ಲೆಯ ಮೀನುಗಾರರಿಗೂ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಉಡುಪಿ: ಪೂರ್ವ ಅರಬ್ಬೀ ಸಮುದ್ರದಲ್ಲಿ ಟ್ರಫ್ ಎದ್ದಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಇದರ ಪ್ರಭಾವದಿಂದಾಗಿ ಗುರುವಾರ ರಾಜ್ಯದ ಹಲವೆಡೆ ಮಳೆ (Rain News) ಅಬ್ಬರಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆಯು ಗುರುವಾರ (Karnataka Weather Forecast) ಗರ್ಜಿಸಿತ್ತು.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೋಡ ಕವಿದು ಗುಡುಗು ಸಹಿತ ಭರ್ಜರಿ ಮಳೆಯಾಗಿತ್ತು. ದಿಢೀರ್‌ ಮಳೆಗೆ ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ, ಮೆಜೆಸ್ಟಿಕ್‌, ಶಿವಾಜಿನಗರ, ವಿಧಾನಸೌಧ ಸೇರಿದಂತೆ ಹಲವೆಡೆ ಮಳೆಯಾಗಿದೆ.

ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿ, ಬಸ್ ನಿಲ್ದಾಣವನ್ನು ಆಶ್ರಯ ಪಡೆದರು. ಕೆಲವೆಡೆ ರಸ್ತೆ ಮೇಲೆ ನೀರು ನಿಂತ ಕಾರಣ ಸವಾರರು ಸಂಕಷ್ಟ ಎದುರಿಸಿದರು. ಫ್ರೀಡಂ ಪಾರ್ಕ್‌ನಿಂದ ಆನಂದ್‌ ರಾವ್ ಸರ್ಕಲ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಲೋಕಾಯುಕ್ತ ಕಚೇರಿಯ ಮುಂಭಾಗ ಸಂಪೂರ್ಣ ಕೆರೆಯಂತಾಗಿತ್ತು. ಮಳೆ ನೀರಲ್ಲಿ ರಸ್ತೆ ದಾಟಲು ಜನರು ಪರದಾಡಿದರು.

ಇನ್ನು ಬೆಂಗಳೂರಿನಲ್ಲಿ ಭಾರಿ ಮಳೆಗೆ ಚಿಕ್ಕಪೇಟೆಯಲ್ಲಿರುವ ಸುಲ್ತಾನ್ ಪೇಟೆ ಜಲಾವೃತಗೊಂಡಿತ್ತು. ಜವಳಿ ಅಂಗಡಿಗಳ ಪ್ರಮುಖ ಕೇಂದ್ರವಾಗಿರುವ ಸುಲ್ತಾನ್ ಪೇಟೆಯ ಬಹುತೇಕ ಗಲ್ಲಿಗಳಿಗೆ, ಅಂಗಡಿಗಳಿಗೂ ಮೋರಿ ನೀರು ನುಗ್ಗಿತ್ತು. ನೀರು ತೆರವು ಮಾಡಲು ಅಂಗಡಿ ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಮುಂದಿನ ಐದು ದಿನಗಳಿಗೆ ಮಳೆ ಅಲರ್ಟ್

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆಗಸ್ಟ್ 29 ರಿಂದ ಆಗಸ್ಟ್ 31ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 29 ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ ಆಗಸ್ಟ್ 29ರಿಂದ ಸೆಪ್ಟೆಂಬರ್1ರ ವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ

ಕರಾವಳಿಯ ಉಡುಪಿಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ನೀಡಲಾಗಿದೆ. ಗಾಳಿ ಜತೆಗೆ ಮಳೆಯಾಗಲಿದ್ದು, ಕಡಲಿಗಿಳಿಯುವ ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ ನೀಡಿದೆ. ಹವಾಮಾನ ಇಲಾಖೆ ಮನ್ಸೂಚನೆ ಮೇರೆಗೆ ಕೆಲ ಬೋಟ್‌ಗಳು ವಾಪಸ್ ಆಗಿವೆ. ಐಎಂಡಿ ಆಗಸ್ಟ್ 30 ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಆಗಸ್ಟ್ 31 ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

DK Shivakumar
Koo

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮತಿ ನೀಡಲಾಗಿತ್ತು. ಆದರೆ ಹಾಲಿ ಕಾಂಗ್ರೆಸ್ ಸರ್ಕಾರವು ಇದನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಸಿಬಿಐ ರಿಟ್‌ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಗುರುವಾರ (ಆ.29) ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠವು ಎರಡು ಕಡೆಯ ವಕೀಲರಿಂದ ವಾದ-ಪ್ರತಿವಾದ ಆಲಿಸಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಲಾಗಿತ್ತು. ಇದು ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್‌ ಸಿಕ್ಕಿದೆ.

ಇನ್ನು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಾವು ಶ್ರಮ ಪಟ್ಟು ರಾಜಕಾರಣ ಮಾಡುತ್ತಿದ್ದೇವೆ. ಬಿಜೆಪಿ ನಾಯಕರ ಮೇಲೆ ಸಾವಿರಾರು ಕೇಸ್ ಇವೆ. ಯಾವುದನ್ನು ಕೂಡ ತನಿಖೆ ಮಾಡುತ್ತಿಲ್ಲ. ಲೋಕಾಯುಕ್ತ ಕೋರ್ಟ್‌ನಲ್ಲೂ ಕೂಡ ಇವೆ. ಈ ಹಿಂದೆ ಕೇಸ್ ಹಾಕಿ ನನ್ನ ಜೈಲಿಗೆ ಕಳುಹಿಸಿದ್ದರು. ನಾನು ಏನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತೆ ಎಂದು ಅವತ್ತೆ ಹೇಳಿದ್ದೆ, ಇವತ್ತು ಹೇಳುತ್ತೇನೆ. ಸಿಬಿಐಗೆ ಕೊಟ್ಟಿದ್ದು ಸರಿಯಲ್ಲ, ಸಿಬಿಐ ಅರ್ಧ ತನಿಖೆ ಮಾಡಿದ್ದೇವೆ ಎಂದು ಹೇಳಿದರು. ಆದರೆ ಯಾವುದೇ ತನಿಖೆ ಮಾಡಿರಲಿಲ್ಲ. ನಾವು ನ್ಯಾಯುತವಾಗಿ ಆಸ್ತಿ ಮಾಡಿದ್ದೇವೆ. ಯಾರಿಗೂ ತೊಂದರೆ ಕೊಟ್ಟಿಲ್ಲ ಎಂದರು.

Continue Reading
Advertisement
Bomb Threat
ಕ್ರೈಂ12 mins ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು32 mins ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ40 mins ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್45 mins ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ49 mins ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ1 hour ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

DK Shivakumar
ರಾಜಕೀಯ2 hours ago

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Viral News
ವೈರಲ್ ನ್ಯೂಸ್2 hours ago

Viral News: ಯುಪಿ ಸರ್ಕಾರದ ಆಫರ್‌; ಇದು ಕಾನೂನುಬದ್ಧ ಲಂಚ ಎಂದು ಪರ-ವಿರೋಧದ ಜಗಳಕ್ಕಿಳಿದ ಯೂಟ್ಯೂಬರ್ಸ್‌

Finance Commission Meeting
ಬೆಂಗಳೂರು3 hours ago

Finance Commission Meeting: 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770 ಕೋಟಿ ನಷ್ಟ: ಸಿದ್ದರಾಮಯ್ಯ

Muda scam CM gets temporary relief Hearing adjourned to August 31
ಬೆಂಗಳೂರು3 hours ago

CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್9 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌