Missing Case : ಕಾಣೆಯಾಗಿದ್ದ ನವ ವಿವಾಹಿತೆ ಬಾವಿಯಲ್ಲಿ ಜೀವಂತವಾಗಿ ಪತ್ತೆ! ಎಳೆದುಕೊಂಡು ಹೋಗಿ ಹಳೆ ಬಾವಿಗೆ ತಳ್ಳಿದವರ‍್ಯಾರು? - Vistara News

ಗದಗ

Missing Case : ಕಾಣೆಯಾಗಿದ್ದ ನವ ವಿವಾಹಿತೆ ಬಾವಿಯಲ್ಲಿ ಜೀವಂತವಾಗಿ ಪತ್ತೆ! ಎಳೆದುಕೊಂಡು ಹೋಗಿ ಹಳೆ ಬಾವಿಗೆ ತಳ್ಳಿದವರ‍್ಯಾರು?

Missing Case : ನಸುಕಿನ ಜಾವ ಮನೆ ಮುಂದೆ ಕೆಲಸ ಮಾಡುತ್ತಿದ್ದ ನವವಿವಾಹಿತೆಯನ್ನು ಹಿಂದಿನಿಂದ ಲಾಕ್‌ ಮಾಡಿದ ಅಪರಿಚಿತ ಮಹಿಳೆಯೊಬ್ಬಳು ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದಾಳೆ. ಬಳಿಕ ಮನೆಯಿಂದ ಹೊಲಕ್ಕೆ ಎಳೆದೊಯ್ದು ನೀರಿಲ್ಲದೇ ಹಳೇ ಬಾವಿಗೆ ಬಿಸಾಡಿದ್ದಾಳೆ.

VISTARANEWS.COM


on

Missing Case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ (Missing Case) ಜೀವಂತವಾಗಿ ಪತ್ತೆಯಾಗಿರುವ ವಿಚಿತ್ರ ಘಟನೆ ಗದಗ ಜಿಲ್ಲೆ ತೋಟಗಂಟಿ ಗ್ರಾಮದಲ್ಲಿ ನಡೆದಿದೆ. ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡವಾಗಿದೆ. ಘಟನೆ ಬಳಿಕ ತೋಟಗಂಟಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಕಾಣೆಯಾಗಿದ್ದ ವಿವಾಹಿತೆಯೊಬ್ಬಳು ಅದೇ ಗ್ರಾಮದ ಹೊಲವೊಂದರಲ್ಲಿನ ನೀರಿಲ್ಲದ ಹಳೇ ಬಾವಿಯಲ್ಲಿ ಮೂರು ದಿನಗಳ ನಂತರ ಸಿಕ್ಕಿದ್ದಾಳೆ. ಅಸ್ವಸ್ಥಳಾಗಿದ್ದ ಮಹಿಳೆಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಇಲ್ಲಿ ವಿಚಿತ್ರ ಅಂದರೆ ಮಹಿಳೆ ಬಾವಿಗೆ‌ ಬಿದ್ದಿದ್ದು ಹೇಗೆ ಎಂಬ ಮಾಹಿತಿ ಕೇಳಿ ಗ್ರಾಮದ ಜನರೇ ಶಾಕ್‌ ಆಗಿದ್ದಾರೆ.

ಯಾಕೆಂದರೆ ಯಾರೋ ನನ್ನ ಎಳೆದುಕೊಂಡು ಹೋದರು ಅಂತ ಹೇಳಿದ್ದಾಳೆ. ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆಗಸ್ಟ್‌ 20 ರಂದು ನಸುಕಿನ ಜಾವ ಮನೆಯ ಅಂಗಳದಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ನವವಿವಾಹಿತೆಯನ್ನು ಕಿಡ್ನಾಪ್ ಮಾಡಿದ್ದರಂತೆ.

Missing Case
ಜ್ಯೂಸ್‌ ಕೊಟ್ಟು ಮಹಿಳೆಯನ್ನು ಕಾಪಾಡಿ ಧೈರ್ಯ ಹೇಳಿದ ಗ್ರಾಮಸ್ಥರು

ಇದನ್ನೂ ಓದಿ: Actor Darshan: ರಾತ್ರಿ ಕಳೆಯೊದ್ರೊಳಗೆ ಮತ್ತೆ ಟ್ರೆಂಡ್ ಆಗ್ತಿದೆ ದರ್ಶನ್ ಖೈದಿ ನಂಬರ್ !!

ನವವಿವಾಹಿತೆಯ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದ್ದಳಂತೆ. ಮಾತ್ರವಲ್ಲದೇ ನನ್ನ ಕೈಬಳೆ, ಕಾಲುಂಗರ ನೀಡುವಂತೆ ಅಪರಿಚಿತ ಮಹಿಳೆ ಒತ್ತಾಯ ಮಾಡಿದ್ದಳು. ಇನ್ನು ನನ್ನ ಕಣ್ಣಿಗೆ ಕಾಣದಂತೆ ಮರೆ ಮಾಡಿ ಕುತ್ತಿಗೆ ಹಿಡಿದು ಭಯಪಡಿಸಿದ್ದಳಂತೆ.

ಗೋವಿ‌ನ ಜೋಳ ಹೊಲದ ಮೂಲಕ ನನ್ನನ್ನು ಎಳೆದುಕೊಂಡು ಹೋಗಿ ನಂತರ ತಾಳಿ ಕೇಳಿ ನನ್ನನ್ನು ಬಾವಿಗೆ ತಳ್ಳಿದ್ದಳು. ಬಾವಿಗೆ ಬಿದ್ದ ಮಾರನೆ ದಿನ ನನಗೆ ಪ್ರಜ್ಞೆ ಬಂದಿತ್ತು. ಆಗ ಎಷ್ಟೇ ಕಿರುಚಿದರೂ ಸಹಾಯಕ್ಕೆ ಯಾರು ಬರಲಿಲ್ಲ. ಆ. 22 ರಂದು ಧ್ವನಿ ಕೇಳಿದ ಜನರು ನನ್ನ ಕಾಪಾಡಿದ್ದಾರೆ. ಆದರೆ ಯಾರು ನನಗೆ ಎಳೆದುಕೊಂಡು ಹೋದರು ಎನ್ನುವ ನಿಖರ ಮಾಹಿತಿ ಇಲ್ಲ ಎಂದಿದ್ದಾಳೆ. ಈ ವಿಚಿತ್ರ ರೀತಿಯ ಘಟನೆಗೆ ಗ್ರಾಮದ ಇತರೆ ಮಹಿಳೆಯರು ಆತಂಕಗೊಂಡಿದ್ದಾರೆ. ನಸುಕಿನ ಜಾವ ಓಡಾಡಲು ಹೆದರುವಂತಾಗಿದೆ. ಸದ್ಯ ಈ ಸಂಬಂಧ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕ ಮಾಡಿದ್ದರಾ ಇಲ್ವಾ ಎಂಬುದು ತಿಳಿದು ಬಂದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Karnataka Weather Forecast : ಕಲಬುರಗಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿದ್ದರೆ, ಇತ್ತ ರಾಯಚೂರಿನಲ್ಲಿ ಸುರಿದ ಮಳೆಗೆ ಸೇತುವೆ ಕೊಚ್ಚಿಹೋಗಿದೆ. ಬಾಗಲಕೋಟೆಯಲ್ಲಿ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ.

VISTARANEWS.COM


on

By

karnataka weather Forecast
Koo

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ವರುಣನ (Rain News) ಅಬ್ಬರ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿತ್ತು. ನಾಳೆ ಭಾನುವಾರ ಕಲಬುರಗಿಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಜಾಲಹಳ್ಳಿ ಮೊರಾರ್ಜಿ ಸ್ಕೂಲ್ ಪಕ್ಕದಲ್ಲಿ ಘಟನೆ ನಡೆದಿದೆ. ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಚಾರಕ್ಕೆ ಜನರು ಪರದಾಡಿದರು. ಶಾಲಾ ಮಕ್ಕಳು, ಶಿಕ್ಷಕರಿಗೆ ರಸ್ತೆ ಸಂಪರ್ಕ ಕಡಿತದಿಂದಾಗಿ ಅನಾನುಕೂಲ ಉಂಟಾಯಿತು.

ಮಕ್ಕಳಿಗೆ ಪಡಿತರ ಧಾನ್ಯ, ತರಕಾರಿ ಸಾಗಿಸಲು ಶಾಲಾ ಸಿಬ್ಬಂದಿ ಹೈರಾಣಾರಾದರು. ಸೇತುವೆ ಕುಸಿತದ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಅನ್ನುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ತಕ್ಷಣ ತಾತ್ಕಾಲಿಕ ಸೇತುವೆ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳಗಾವಿ, ಮಹಾರಾಷ್ಟ್ರದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ. ಬ್ರಿಡ್ಜ್ ಮೇಲೆ ಒಂದು ಅಡಿಯಷ್ಟು ನೀರು ಹರಿವು ಹೆಚ್ಚಿದೆ. ಘಟಪ್ರಭಾ ನದಿಗೆ ಢವಳೇಶ್ವರ ಸೇತುವೆ ನದಿ ನಿರ್ಮಿಸಲಾಗಿದೆ. ಇತ್ತ ನೀರಲ್ಲೇ ಮಹಾಲಿಂಗಪುರ ಪಟ್ಟಣಕ್ಕೆ ಜನರು ಸಂಚಾರಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಒಂದೊಂದೆ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಳ್ಳುತ್ತಿದೆ.

ಇದನ್ನೂ ಓದಿ: Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

ತಗ್ಗಿದ ಮಳೆ ಅಬ್ಬರ

ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳು ಭಾರೀ ಮಳೆಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗಾಳಿ ವೇಗ 40ಕಿ.ಮೀ

ಇನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಗಾಳಿ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (Rain News) ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಮತ್ತು ರಾಮನಗರ ಸುತ್ತಮುತ್ತ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಉತ್ತರ ಒಳನಾಡಿನಲ್ಲಿ ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಕಷ್ಟು ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಉಳಿದಂತೆ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಭಾರಿ ಮಳೆಯೊಂದಿಗೆ ಗುಡುಗು ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ವಿಜಯಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ಸೆಪ್ಟೆಂಬರ್‌ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಗದಗ

Murder Case: ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ! ಪತಿಯನ್ನು ಕೊಂದು ಅಪಘಾತ ಕಥೆ ಸೃಷ್ಟಿಸಿದಳಾ ಪತ್ನಿ?

ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ಬಳಿ ಜರುಗಿದೆ. ಆದರೆ ಪತ್ನಿಯೇ ಕೊಲೆ ಮಾಡಿ (Murder Case) ಅಪಘಾತ ಕಥೆ ಸೃಷ್ಟಿಸಿದಳಾ ಎಂಬ ಅನುಮಾನ ಕುಟುಂಬಸ್ಥರಿಂದ ವ್ಯಕ್ತವಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

murder case
ಸಾಂದರ್ಭಿಕ ಚಿತ್ರ.
Koo

ಗದಗ: ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ಬಳಿ ಜರುಗಿದೆ. ಆದರೆ ಪತ್ನಿಯೇ ಕೊಲೆ ಮಾಡಿ (Murder Case) ಅಪಘಾತ ಕಥೆ ಸೃಷ್ಟಿಸಿದಳಾ ಎಂಬ ಅನುಮಾನ ಕುಟುಂಬಸ್ಥರಿಂದ ವ್ಯಕ್ತವಾಗಿದೆ.

ಕೋಟುಮಚಗಿ ಗ್ರಾಮದ ಮಂಜುನಾಥ್ ಮೀಸಿ (30) ಮೃತವ್ಯಕ್ತಿ. ಈತನ ಪತ್ನಿಯೇ ಮನೆಯಲ್ಲಿ ಪತಿಯನ್ನು ಕೊಲೆ ಮಾಡಿ ಬಳಿಕ ಶವ ರಸ್ತೆಗೆ ಎಸೆದು ಹೋಗಿರುವ ಶಂಕೆ ಕುಟುಂಬಸ್ಥರಿಂದ ವ್ಯಕ್ತವಾಗಿದೆ.

ಇದನ್ನೂ ಓದಿ: Karnataka Weather : ಸಂಜೆ ಸುರಿದ ಭಾರಿ ಮಳೆಗೆ ನೆಲಕ್ಕುರುಳಿದ ಬೃಹತ್‌ ಮರ; ಕಾರು, ಶೆಡ್‌ ಜಖಂ

ಮೊದಲು ರಸ್ತೆಯಲ್ಲಿ ಅಪಘಾತವಾಗಿ ಮೃತಪಟ್ಟಿರಬಹುದು ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ಆದರೆ ಮನೆಯೊಳಗೆ ಹಾಗೂ ಮನೆಯ ಅಂಗಳದಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು, ನೋಡಿ ಕೊಲೆಯಾಗಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಗದಗ ಗ್ರಾಮೀಣ ಠಾಣಾ ಪೊಲೀಸರು, ಮೃತನ ಪತ್ನಿ ಶಿವಮ್ಮಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ; ಮಗ ಸಾವು, ತಂದೆಗೆ ಗಂಭೀರ ಗಾಯ

ಮನೆಯಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಮೃತಪಟ್ಟಿದ್ದು, ತಂದೆಗೆ ಗಂಭೀರ ಗಾಯಗಳಾಗಿರುವ ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ಜರುಗಿದೆ.

ದೊಡ್ಡನಲ್ಲಾಳ ಗ್ರಾಮದ ಪವನ್ ( 19 ) ಮೃತ ಯುವಕ. ಮನೆಯಲ್ಲಿ ನಾಡಬಾಂಬ್ ಸುತ್ತುವಾಗ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಟೋಟದ ರಬಸಕ್ಕೆ ಮನೆಯ ಮೇಲ್ಚಾವಣಿ ಛಿದ್ರ ಛಿದ್ರವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Passport Seva Portal: ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವಾ ಕಾರ್ಯ ಸ್ಥಗಿತ

ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Continue Reading

ಮಳೆ

Karnataka Weather : ಸಂಜೆ ಸುರಿದ ಭಾರಿ ಮಳೆಗೆ ನೆಲಕ್ಕುರುಳಿದ ಬೃಹತ್‌ ಮರ; ಕಾರು, ಶೆಡ್‌ ಜಖಂ

Karnataka Weather Forecast : ವಿಜಯನಗರ ಹಾಗು ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಳೆಗೆ (Rain News) ಮರ ಬಿದ್ದು ಕಾರು ಸಹಿತ ಶೆಡ್‌ವೊಂದು ಜಖಂಗೊಂಡಿದೆ.

VISTARANEWS.COM


on

By

Karnataka Weather Forecast
Koo

ವಿಜಯನಗರ: ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ವೇಳೆಗೆ ಭಾರಿ (Rain News) ಮಳೆಯಾಗಿದೆ. ವಿಜಯನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್‌ ಮರವೊಂದು (Karnataka Weather Forecast) ನೆಲಕ್ಕುರುಳಿದೆ. ಪರಿಣಾಮ ಕಾರು ಹಾಗೂ ತಾತ್ಕಾಲಿಕ ಶೆಡ್‌ವೊಂದು ಜಖಂಗೊಂಡಿದೆ. ಜತೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಿಜಯನಗರದ ಹೊಸಪೇಟೆಯ ಪಟೇಲ್ ನಗರದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದೆ.

ಇನ್ನು ಬೆಂಗಳೂರಿನಲ್ಲೂ ಮತ್ತೆ ವರುಣನ ಸಿಂಚನವಾಗಿದೆ. ಸಂಜೆ ಆಗುತ್ತಿದ್ದಂತೆ ನಗರದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಜಯಮಹಲ್, ಶಿವಾಜಿ ನಗರ, ಮೆಕ್ರಿ ಸರ್ಕಲ್ ಸುತ್ತಮುತ್ತ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅನಾನುಕೂಲ ಉಂಟಾಯಿತು.

ಮತ್ತೆ ಪ್ರವಾಹ ಭೀತಿ

ಮಹಾರಾಷ್ಟ್ರದ ಮಹಾಮಳೆಗೆ ಭೀಮಾನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಭೀಮಾನದಿ ಹರಿಯುತ್ತಿದ್ದು, 1 ಲಕ್ಷ ಕ್ಯೂಸೆಕ್ ನೀರು ಗುರುಸಣಗಿ ಬ್ಯಾರೇಜ್‌ನಿಂದ ಬಿಡುಗಡೆ ಮಾಡಲಾಗಿದೆ. ಭೀಮಾನದಿ ಅಬ್ಬರಕ್ಕೆ ದೇಗುಲಗಳು ಜಲಾವೃತಗೊಂಡಿದೆ. ಭೀಮಾನದಿ ತೀರದ ವಿರಾಂಜನೇಯ ಹಾಗೂ ಕಂಗಳೇಶ್ವರ ಎರಡು ದೇಗುಲುಗಳು ಮುಳುಗಡೆಯಾಗಿದೆ. ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದ್ದರೂ ಜಿಲ್ಲಾಡಳಿತದ ಆದೇಶಕ್ಕೆ ಡೋಂಟ್ ಕೇರ್ ಎಂದು ಬ್ಯಾರೇಜ್ ಮುಂಭಾಗದ ನದಿ ತೀರದಲ್ಲಿ ಮೀನು ಹಿಡಿಯುವ ಹುಚ್ಚು ಸಾಹಸ ಮಾಡುತ್ತಿದ್ದಾರೆ.

ಬೆಳಗಾವಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 22 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಹೊಳೆ ಬಸವೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಮಾಚಕನೂರು ಗ್ರಾಮದ ಮನೆಗಳ ಸಮೀಪ ನೀರು ಹರಿದಿದೆ. ಮಾಚಕನೂರು-ಚಿಕ್ಕೂರು ಸಂಪರ್ಕ ಸೇತುವೆ ಮುಳುಗಡೆಯಾಗಿದೆ.

ಇದನ್ನೂ ಓದಿ: KJ George: ಬಿಜೆಪಿಯವರು ಸುಳ್ಳನ್ನು‌ ನೂರು ಬಾರಿ ಹೇಳಿ ನಿಜ ಮಾಡುತ್ತಾರೆ ಎಂದ ಸಚಿವ ಕೆ.ಜೆ. ಜಾರ್ಜ್

ವಿಕೆಂಡ್‌ನಲ್ಲಿ ಭಾರಿ ಮಳೆ ಅಬ್ಬರ

ಶನಿವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 35-45 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ 35-45 ಕಿ.ಮೀ ಆಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ 35-45 ಕಿ.ಮೀ ಸಹಿತ ನಿರಂತರ ಗಾಳಿಯು ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sonal Monteiro
ಸಿನಿಮಾ14 mins ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ30 mins ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್1 hour ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು2 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Monsoon Skincare
ಆರೋಗ್ಯ2 hours ago

Home Remedies for Skin: ಮುಖದ ಕಾಂತಿ ಹೆಚ್ಚಿಸಿಕೊಳ್ಳುವುದು ಹೇಗೆ?

ahoratri dharani until the guilts are punished says Opposition party Leader R Ashok
ಪ್ರಮುಖ ಸುದ್ದಿ2 hours ago

R. Ashoka: ರಾಜಭವನ ಬಿಜೆಪಿ ಕಚೇರಿಯಾದರೆ, ವಿಧಾನಸೌಧ ಕಾಂಗ್ರೆಸ್ ಕಚೇರಿ- ಆರ್ ಅಶೋಕ್ ಕಿಡಿ

Suspected terrorist arrested while escaping from Bengaluru airport
ಬೆಂಗಳೂರು ಗ್ರಾಮಾಂತರ2 hours ago

Suspected Terrorist: ಬೆಂಗಳೂರು ಏರ್‌ಪೋರ್ಟ್‌ನಿಂದ ಎಸ್ಕೇಪ್‌ ಆಗುತ್ತಿದ್ದ ಶಂಕಿತ ಉಗ್ರ ಅರೆಸ್ಟ್‌

Prosecution against CM Hc adjourns hearing to September 2
ರಾಜಕೀಯ3 hours ago

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ ಆಲಿಸಿ ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

BMTC
ಬೆಂಗಳೂರು3 hours ago

BMTC: ಕೆಇಎ ಕಟ್ಟುನಿಟ್ಟಿನ ನಿಗಾಕ್ಕೆ ಕ್ರಮ; ಬಿಎಂಟಿಸಿ ನಿರ್ವಾಹಕ ಹುದ್ದೆಗೆ ಭಾನುವಾರ ಪರೀಕ್ಷೆ

Sudeep's birthday location shift
ಸ್ಯಾಂಡಲ್ ವುಡ್5 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್5 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌