Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ - Vistara News

ಬೆಂಗಳೂರು

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Bengaluru News: ಭಾರತದಾದ್ಯಂತ ಹರಡಿರುವ ಸಖಿ ಮಹಿಳಾ ಸಂಘಟನೆಯಿಂದ ರಕ್ಷಾ ಸೂತ್ರ ದಿನ ಆಚರಿಸಲಾಯಿತು.

VISTARANEWS.COM


on

Sakhi Mahila Sangathan celebrates Raksha Sutra Diwas
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಖಿ ಮಹಿಳಾ ಸಂಘಟನೆಯು ರಕ್ಷಾ ಸೂತ್ರ ದಿನವನ್ನು (Bengaluru News) ಆಚರಿಸಿದೆ. ಅಧ್ಯಕ್ಷರು ಪ್ರೀತ ಘೋಷ್ ಪ್ರಮಾಣಿಕ್, ಉಪಾಧ್ಯಕ್ಷೆ ಪಲ್ಲವಿ ರಾಘವೇಂದ್ರ ಮತ್ತು ತಬಸ್ಸುಮ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಕ್ಷಾ ಸೂತ್ರದಲ್ಲಿ ಸಹೋದರರು ಮಾತ್ರ ನಮ್ಮನ್ನು ರಕ್ಷಿಸಲಾರರು. ಇದರಲ್ಲಿ ಎಲ್ಲರೂ ನಮ್ಮನ್ನು ಆರ್ಥಿಕವಾಗಿ, ಭಾವನಾತ್ಮಕವಾಗಿ, ದೈಹಿಕವಾಗಿ ರಕ್ಷಿಸಬಲ್ಲರು. ಅದು ನಿಮ್ಮ ಸ್ನೇಹಿತರೇ ಆಗಿರಬಹುದು ಅಥವಾ ಸಹೋದರಿಯರು, ಪೋಷಕರೇ ಆಗಿರಬಹುದು ಎಂದು ಸಖಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಅಭಯಕ್ಕಾಗಿ ಪ್ರತಿಭಟಿಸುತ್ತಿರುವ ಹೊತ್ತಿನಲ್ಲಿ, ಅವಳಿಗಾಗಿ ಮೇಣದಬತ್ತಿಗಳನ್ನು ಬೆಳಗಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಸಖಿ ಮಹಿಳಾ ಗುಂಪು ಭಾರತದಾದ್ಯಂತ ಹರಡಿದೆ. ಇದು ಭಾರತ ಮಾತ್ರವಲ್ಲದೇ ಯುಎಸ್‌ಎ (USA), ಯುಕೆ( UK) ಯಲ್ಲೂ ಹರಡಿದೆ.

ಇನ್ನು ಆಸ್ಟ್ರೇಲಿಯಾ ಎಲ್ಲಾ ರೀತಿಯ ಬಿಕ್ಕಟ್ಟಿನಲ್ಲಿ ಒಟ್ಟಿಗೆ ಇರುವುದಾಗಿ ಸಖಿ ಮಹಿಳಾ ಸಂಘಟನೆ ಪ್ರಮಾಣ ಮಾಡಿದೆ. ಚರ್ಚಿಸಿ ಪರಿಹಾರವನ್ನು ಹೊರತೆಗೆಯುವ ಗುರಿಯೂ ಸಂಘಟನೆಗೆ ಇದೆ. ಹುಡುಗಿಯರನ್ನು ಮಾನಸಿಕವಾಗಿ ಸದೃಢರನ್ನಾಗಿಸಲು, ವಿವಿಧ ರೀತಿಯ ಧ್ಯಾನವನ್ನು ಹೇಳಿಕೊಡುತ್ತಿದ್ದಾರೆ. ಆದ್ದರಿಂದ ಅವರು ಕಷ್ಟಗಳನ್ನು ಎದುರಿಸಬಹುದು ಮತ್ತು ಜಯಿಸಬಹುದು ಇದು ಸಖಿ ಟ್ರ‌ಸ್ಟ್‌ನ ಮುಖ್ಯ ಉದ್ದೇಶವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆಯಾಗಿದ್ದಾರೆ. ಸರ್ಕಾರಿ ಭರವಸೆಗಳ ಸಮಿತಿಯು ಒಟ್ಟು 9 ಮಂದಿ ಸದಸ್ಯರನ್ನೊಳಗೊಂಡಿದೆ

VISTARANEWS.COM


on

By

TA Saravana elected as new chairman of government assurances committee
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಶಾಸಕ ಟಿ. ಎ. ಶರವಣ (TA Sharavana) ಅವರು ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4) ರ ಮೇರೆಗೆ ಸಭಾಪತಿ ನೇಮಕ ಮಾಡಿದ್ದಾರೆ. ವಿಧಾನ ಪರಿಷತ್ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ. ಎ. ಶರವಣ ಅವರನ್ನು ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಸರ್ಕಾರಿ ಭರವಸೆಗಳ ಸಮಿತಿಯು ಒಟ್ಟು 9 ಮಂದಿ ಸದಸ್ಯರನ್ನೊಳಗೊಂಡಿದೆ. ಪ್ರಕಾಶ್‌ ಕೆ ರಾಥೋಡ್‌, ಶರವಣ ಟಿ.ಎ, ನಿರಾಣಿ ಹಣಮಂತ್‌ ರುದ್ರಪ್ಪ, ಯು.ಬಿ. ವೆಂಕಟೇಶ್‌, ಪ್ರತಾಫ್‌ ಸಿಂಹ ನಾಯಕ್‌ ಕೆ, ಡಿ.ಎಸ್‌ ಅರುಣ್‌ ಹಾಗೂ ಕೆ.ಎಸ್‌ ನವೀನ್‌, ಮಂಜುನಾಥ್‌ ಭಂಡಾರಿ, ತಿಪ್ಪಣ್ಣಪ್ಪ ಕಮಕನೂರ ಅವರು ಸದಸ್ಯರಾಗಿದ್ದಾರೆ.

ಇದನ್ನೂ ಓದಿ: D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Continue Reading

ಮಳೆ

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Karnataka Weather Forecast : ಕಲಬುರಗಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿದ್ದರೆ, ಇತ್ತ ರಾಯಚೂರಿನಲ್ಲಿ ಸುರಿದ ಮಳೆಗೆ ಸೇತುವೆ ಕೊಚ್ಚಿಹೋಗಿದೆ. ಬಾಗಲಕೋಟೆಯಲ್ಲಿ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ.

VISTARANEWS.COM


on

By

karnataka weather Forecast
Koo

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ವರುಣನ (Rain News) ಅಬ್ಬರ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿತ್ತು. ನಾಳೆ ಭಾನುವಾರ ಕಲಬುರಗಿಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಜಾಲಹಳ್ಳಿ ಮೊರಾರ್ಜಿ ಸ್ಕೂಲ್ ಪಕ್ಕದಲ್ಲಿ ಘಟನೆ ನಡೆದಿದೆ. ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಚಾರಕ್ಕೆ ಜನರು ಪರದಾಡಿದರು. ಶಾಲಾ ಮಕ್ಕಳು, ಶಿಕ್ಷಕರಿಗೆ ರಸ್ತೆ ಸಂಪರ್ಕ ಕಡಿತದಿಂದಾಗಿ ಅನಾನುಕೂಲ ಉಂಟಾಯಿತು.

ಮಕ್ಕಳಿಗೆ ಪಡಿತರ ಧಾನ್ಯ, ತರಕಾರಿ ಸಾಗಿಸಲು ಶಾಲಾ ಸಿಬ್ಬಂದಿ ಹೈರಾಣಾರಾದರು. ಸೇತುವೆ ಕುಸಿತದ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಅನ್ನುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ತಕ್ಷಣ ತಾತ್ಕಾಲಿಕ ಸೇತುವೆ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳಗಾವಿ, ಮಹಾರಾಷ್ಟ್ರದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ. ಬ್ರಿಡ್ಜ್ ಮೇಲೆ ಒಂದು ಅಡಿಯಷ್ಟು ನೀರು ಹರಿವು ಹೆಚ್ಚಿದೆ. ಘಟಪ್ರಭಾ ನದಿಗೆ ಢವಳೇಶ್ವರ ಸೇತುವೆ ನದಿ ನಿರ್ಮಿಸಲಾಗಿದೆ. ಇತ್ತ ನೀರಲ್ಲೇ ಮಹಾಲಿಂಗಪುರ ಪಟ್ಟಣಕ್ಕೆ ಜನರು ಸಂಚಾರಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಒಂದೊಂದೆ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಳ್ಳುತ್ತಿದೆ.

ಇದನ್ನೂ ಓದಿ: Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

ತಗ್ಗಿದ ಮಳೆ ಅಬ್ಬರ

ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳು ಭಾರೀ ಮಳೆಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗಾಳಿ ವೇಗ 40ಕಿ.ಮೀ

ಇನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

Renuka swamy Murder case : ರೇಣುಕಾ ಸ್ವಾಮಿ ಕೊಲೆ ಕೇಸ್‌ ಎ1 ಆರೋಪಿ ಆಗಿರುವ ಪವಿತ್ರಾಗೌಡ (Pavitra Gowda) ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ. ಈ ಮೂಲಕ ಪವಿತ್ರಾಗೆ ಜೈಲುವಾಸ ಮುಂದುವರಿದಿದೆ.

VISTARANEWS.COM


on

By

Renuka Swamy murder case Pavithra Gowdas bail plea rejected
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಪವಿತ್ರಾಗೌಡ (Pavitra Gowda) ಪರ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಜಾಗೊಳಿಸಿ ಸಿಸಿಎಚ್‌ (CCH)57ನೇ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್‌ ಆದೇಶ ಹೊರಡಿಸಿದ್ದಾರೆ. ಎ1 ಆರೋಪಿ‌ ಪವಿತ್ರಾಗೌಡ ಪರ ಅನುಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ.

ದರ್ಶನ್- ಪವಿತ್ರಾ ದೂರದೂರವಾದರೂ ಒಂದಾಯಿತು ಇವರಿಬ್ಬರ ಮನೆಯ ಶ್ವಾನಗಳು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Jail) ಬಳ್ಳಾರಿ ಜೈಲಿಗೆ (Bellary Jail) ನಟ ದರ್ಶನ್ (Actor Darshan) ಸ್ಥಳಾಂತರಗೊಂಡಿದ್ದರೂ ಪವಿತ್ರಾ ಗೌಡ (Pavitra Gowda) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಹೀಗಾಗಿ ದರ್ಶನ್ ಮತ್ತು ಪವಿತ್ರಾ ದೂರದೂರವಾಗಿದ್ದಾರೆ. ಆದರೆ ಇವರಿಬ್ಬರ ಶ್ವಾನಗಳು ಮಾತ್ರ ಇದೀಗ ಒಂದಾಗಿವೆ.

ದರ್ಶನ್ ಮತ್ತು ಪವಿತ್ರ ಗೌಡ ಜೈಲು ಸೇರುತ್ತಿದ್ದ ಹಾಗೆ ಇವರ ಶ್ವಾನಗಳು ಒಂದಾಗಿದ್ದವು. ಪವಿತ್ರಗೌಡ ಮನೆಯಲ್ಲಿದ್ದ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಈಗ ದರ್ಶನ್ ಮತ್ತು ಪವಿತ್ರಾ ಗೌಡ ಮನೆಯ ಶ್ವಾನಗಳು ಸ್ನೇಹಿತರಾಗಿದೆ.


ಪವಿತ್ರಾ ಗೌಡ ಮನೆಯಲ್ಲಿದ್ದ ವೈಟ್ ಫ್ರೆಂಚ್ ಬುಲ್ ಡಾಗ್ ಮತ್ತು ಬೆಲ್ಜಿಯಂ ಮಲಿನಾಯ್ಸ್ ತಳಿಯ ಶ್ವಾನಗಳು ಮನೆಯೊಡತಿ ಇಲ್ಲದೆ ಸೊರಗಿದ್ದವು. ಅವುಗಳನ್ನು ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ರಕ್ಷಣೆ ಮಾಡಿತ್ತು. ಬಳಿಕ ಅಧಿಕಾರಿಗಳು ಅವುಗಳನ್ನು ದರ್ಶನ್ ಮನೆಗೆ ಬಿಟ್ಟಿದ್ದಾರೆ.

ಶ್ವಾನ ಪ್ರೇಮಿಯಾಗಿದ್ದ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಮನೆಯಲ್ಲಿ ವಿವಿಧ ತಳಿಯ 3 ಶ್ವಾನಗಳಿದ್ದವು. ಅವುಗಳಲ್ಲಿ ಒಂದನ್ನು ಕುಟುಂಬಸ್ಥರು ತೆಗೆದುಕೊಂಡು ಹೋಗಿದ್ದಾರೆ. ಒಲಿದ ಎರಡು ಶ್ವಾನಗಳನ್ನು ಪವನ್ ನೋಡಿಕೊಳ್ಳುತ್ತಿದ್ದ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದಾರೆ. ಬಳಿಕ ಶ್ವಾನಗಳನ್ನು ನೋಡಿಕೊಳ್ಳುವವರಿಲ್ಲದೆ ಅವುಗಳು ಸೊರಗಿದ್ದವು.

Actor Darshan
Actor Darshan


ದರ್ಶನ್ ಮನೆಗೆ ಎಂಟ್ರಿ

ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದರಿಂದ ಸರಿಯಾಗಿ ಆಹಾರ ಇಲ್ಲದೆ ಬಲಹೀನವಾಗಿದ್ದ ಶ್ವಾನಗಳ ದೃಶ್ಯ ಕಣ್ಣೀರು ತರಿಸುವಂತ್ತಿತ್ತು. ಇದನ್ನು ತಿಳಿದು ಅಲರ್ಟ್ ಆದ ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ಈ ವಿಚಾರವನ್ನು ಆರ್.ಆರ್. ನಗರದ ಪೊಲೀಸರ ಗಮನಕ್ಕೆ ತಂದಿದ್ದರು.

ಪೀಪಲ್ಸ್ ಫಾರ್ ಅನಿಮಲ್ಸ್ ನ‌ ಲೀನಾ ಮತ್ತು ಹರೀಶ್ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಿಬಿಎಂಪಿ ಪಶುಸಂಗೋಪನಾ‌ ಇಲಾಖೆಗೆ ಮಾಹಿತಿ ನೀಡಿರುವ ಪೊಲೀಸರು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳ ಸಹಾಯದಿಂದ ಪವಿತ್ರಾ ಮನೆಯಲ್ಲಿದ್ದ ಎರಡು ಶ್ವಾನವನ್ನು ದರ್ಶನ್ ಮನೆಗೆ ಸ್ಥಳಾಂತರಿಸಿದ್ದಾರೆ. ದರ್ಶನ್ ಮನೆಯಲ್ಲಿ ಶ್ವಾನಗಳನ್ನು ನೋಡಿಕೊಳ್ಳಲು ಕೇರ್ ಟೇಕರ್ ಗಳು ಇರುವುದರಿಂದ ಈ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

D.K. Shivakumar: ರಾಜ್ಯಪಾಲರ ಹುದ್ದೆ ಸಾಂವಿಧಾನಿಕ ಹುದ್ದೆಯಾಗಿದ್ದು ಈ ಹುದ್ದೆಯ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

VISTARANEWS.COM


on

D.K. Shivakumar
Koo

ಬೆಂಗಳೂರು, ಆ.31: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಹೇಳಿದರು.

Independence Day 2024
CM Siddaramaiah

ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಮೊದಲು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು. ನಂತರ ಕಾಲ್ನಡಿಗೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಮನವಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ರಾಜ್ಯಪಾಲರು ನಮಗೆ ಟೀ, ಕಾಫಿ ಮತ್ತು ಉಪಹಾರವನ್ನು ಕೊಟ್ಟು ಉಪಚರಿಸಿದರು. ಎಲ್ಲದಕ್ಕಿಂತ ಮುಖ್ಯವಾಗಿ ನಿಮಗೆ ನ್ಯಾಯ ನೀಡುತ್ತೇವೆ ಎಂದು ಭರವಸೆ ನೀಡಿದರು” ಎಂದು ತಿಳಿಸಿದರು.

“ಲೋಕಾಯುಕ್ತ ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ. ನೀವು ತಾರತಮ್ಯ ಎಸಗಿ ನಮ್ಮ ವಿರುದ್ಧ ಕೆಲಸ ಮಾಡಿದ್ದಾರಲ್ಲವೇ” ಎಂದು ಹೇಳಿದರು.

“ನಾಲ್ಕು ಜನರ ವಿರುದ್ಧ ಭ್ರಷ್ಟಾಚಾರ ವಿರೋಧಿ ಕಾಯ್ದೆ, 197 ಸಿಪಿಸಿ ಕಾಯ್ದೆಯಡಿ ಸೆಕ್ಷನ್ 17 ಎ ಪ್ರಕಾರ ಲೋಕಾಯುಕ್ತವು ಅನುಮತಿ ಕೇಳಿತ್ತು. ಆದರೂ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾರೋ ಅರ್ಜಿ ಕೊಟ್ಟರು ಎಂದು ಒಂದೇ ದಿನದಲ್ಲಿ ತೀರ್ಮಾನ ತೆಗೆದುಕೊಂಡರು. ಆದರೆ ಮಾಜಿ ಮುಖ್ಯಮಂತ್ರಿಗಳ, ಮಂತ್ರಿಗಳ ವಿಚಾರದಲ್ಲಿ ಲೋಕಾಯುಕ್ತ ಈ ಹಿಂದೆ ಮನವಿ ಮಾಡಿದಾಗ ಎಂಟತ್ತು ದಿನಗಳಲ್ಲಿ ತನಿಖೆಗೆ ಅನುಮತಿ ನೀಡುವ ತೀರ್ಮಾನ ಮಾಡಬಹುದಿತ್ತು. ಆದರೂ ಪಕ್ಷಪಾತ ಮಾಡಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳ ಬೇಡಿ ಎಂದು ಸಚಿವ ಸಂಪುಟ ಮನವಿ ಮಾಡಿದ್ದರು. ರಾಜ್ಯಪಾಲರು ಮಾನ್ಯ ಮಾಡಲಿಲ್ಲ” ಎಂದು ಹೇಳಿದರು.

“ಸಾರ್ವಜನಿಕ ಜೀವನದಲ್ಲಿರುವ ರಾಜ್ಯಪಾಲರು ಎಚ್ಚರಿಕೆಯನ್ನು ಇಟ್ಟುಕೊಂಡು ಕೆಲಸ ಮಾಡಬೇಕಿತ್ತು. ಅವರು ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕಿತ್ತೇ ಹೊರತು ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದಿತ್ತು. ಸಂವಿಧಾನಿಕ ಹುದ್ದೆಯನ್ನು ಸಂವಿಧಾನದ ರಕ್ಷಣೆಗೆ ಬಳಸಿಕೊಳ್ಳಬೇಕು ಎಂಬುದು ಸಾಮಾನ್ಯ ಜನರ ಅಭಿಪ್ರಾಯ” ಎಂದರು.

“ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಪೂರಕ ದಾಖಲೆಗಳಿಲ್ಲ. ಕುಮಾರಸ್ವಾಮಿ ಅವರು ಸೇರಿದಂತೆ ಮೂರು ಜನ ಮಂತ್ರಿಗಳ ವಿರುದ್ಧ ದಾಖಲೆ ಇದ್ದರೂ ರಾಜ್ಯಪಾಲರು ಪಕ್ಷಪಾತ ಏಕೆ ಮಾಡಿದರು. ರಾಜ್ಯಪಾಲರ ಕಚೇರಿ ಸಮಾನತೆ ಹೆಸರಾಗಿರಬೇಕು. ಸಾಂವಿಧಾನಿಕ ಪೀಠಕ್ಕೆ ಇರುವ ಗೌರವ ಉಳಿಯಬೇಕು. ಎಂದು ನಾವು ರಾಜಭವನ ಚಲೋ ಮಾಡಿದ್ದೇವೆ. ನ್ಯಾಯದ ಪರವಾಗಿ ಧ್ವನಿ ಎತ್ತಲು ನಾವು ಮುಂದಾಗಿದ್ದೇವೆ.” ಎಂದು ಹೇಳಿದರು.

“ನಾವ್ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯಪಾಲರ ಭವನ ರಾಜಕೀಯ ಕಚೇರಿ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ. ರಾಜ್ಯಪಾಲರ ಸ್ಥಾನ ನ್ಯಾಯಯುತವಾದ ಪೀಠ. ಸರ್ಕಾರವನ್ನು ರಚನೆ ಮಾಡುವ ಪೀಠ. ನ್ಯಾಯಾಲಯದ ಸ್ಥಾನಮಾನ ಹೊಂದಿರುವ ಪೀಠ. ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ ಮಾಡಲಾಗುತ್ತಿದೆ. ಕರ್ನಾಟಕ ತಾನು ಬೆಳೆದು ಅನೇಕ ರಾಜ್ಯಗಳ ಬೆಳವಣಿಗೆಗೂ ಸಹಾಯ ಮಾಡುತ್ತಿದೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರ ಕಚೇರಿಯಿಂದ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ” ಎಂದರು.

ಇದನ್ನೂ ಓದಿ: R. Ashoka: ರಾಜಭವನ ಬಿಜೆಪಿ ಕಚೇರಿಯಾದರೆ, ವಿಧಾನಸೌಧ ಕಾಂಗ್ರೆಸ್ ಕಚೇರಿ- ಆರ್ ಅಶೋಕ್ ಕಿಡಿ

“ನಾಲ್ಕು ಜನರ ವಿರುದ್ಧ ವಿಚಾರಣೆಗೆ ಅನುಮತಿ ನೀಡಬೇಕು. ರಾಜ್ಯಪಾಲರ ಕಚೇರಿ ಘನತೆಯನ್ನು ಉಳಿಸಿಕೊಳ್ಳಬೇಕು. ಕಾನೂನನ್ನು ಉಳಿಸಬೇಕು, ರಾಜ್ಯಪಾಲರ ಹುದ್ದೆಗೆ ಇರುವ ಘನತೆ, ಗೌರವವನ್ನು ಉಳಿಸಬೇಕು. ಪಕ್ಷಪಾತ ಧೋರಣೆ ಮಾಡದೆ ಕೆಲಸ ಮಾಡಬೇಕು ಎಂದು ಮನದಟ್ಟು ಮಾಡಿದ್ದೇವೆ. ಹಾಗೂ ನನ್ನ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಿರ್ಧಾರಗಳನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದೇವೆ” ಎಂದರು.

“ನನ್ನ ಬಳಿ ಯಾವುದೇ ಪ್ರಕರಣಗಳ ಬಾಕಿ ಇಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ರಾಜ್ಯಪಾಲರು ಏಕೆ ಹೀಗೆ ಹೇಳುತ್ತಿದ್ದಾರೆ ಎಂದು ಮತ್ತೊಮ್ಮೆ ಪರಿಶೀಲನೆ ಮಾಡಲಾಗುವುದು. ಇದು ನಿಜವೋ ಸುಳ್ಳೋ ಕಳಿಸಿರುವುದು ನಿಜವೋ, ಸುಳ್ಳು ಎಂದು ಪರಿಶೀಲಿಸಲಾಗುವುದು. ಅಥವಾ ಒಂದಷ್ಟು ವಿಚಾರದಲ್ಲಿ ಅವರು ಸ್ಪಷ್ಟನೆ ಕೇಳಿರಬಹುದು ಇದನ್ನು ಸಹ ನಾವು ಪರಿಶೀಲಿಸುತ್ತೇವೆ” ಎಂದು ತಿಳಿಸಿದರು.

CM Siddaramaiah

“ಸಿದ್ದರಾಮಯ್ಯ ಅವರ ಕೇಸಿನ ವಿಚಾರದಲ್ಲಿ ನಾವು ರಾಜಭವನ ಚಲೋ ಹಮ್ಮಿಕೊಂಡಿಲ್ಲ. ಈ ಪ್ರಕರಣ ನ್ಯಾಯಾಲಯದಲ್ಲಿ ಇದ್ದು. ಅಲ್ಲಿ ನಮ್ಮ ಹೋರಾಟವನ್ನು ಮಾಡುತ್ತಾ ಇದ್ದೀವೆ. ಅಲ್ಲಿ ತೀರ್ಮಾನವಾದ ನಂತರ ಪ್ರತಿಕ್ರಿಯೆ ನೀಡುತ್ತೇವೆ” ಎಂದರು.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದೆ ಬೇರೆ ದಾರಿ ಇಲ್ಲ

ರಾಜ್ಯಪಾಲರ ಸ್ಪಂದನೆಯಿಂದ ನ್ಯಾಯ ದೊರೆಯುತ್ತದೆ ಎನ್ನುವ ಭರವಸೆ ಮೂಡಿದೆಯೇ ಎಂದು ಕೇಳಿದಾಗ “ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಾವು ರಾಜ್ಯದ ಜನತೆಯ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಪಾಲರ ಬಳಿ ಪರ್ಯಾಯ ದಾರಿಗಳಿಲ್ಲ. ಅವರು ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲೇಬೇಕು” ಎಂದರು. ಅರ್ಜಿಗಳು ಇತ್ಯರ್ಥ ಆಗಿದ್ದಾವೆ ಎಂದು ರಾಜ್ಯಪಾಲರು ನಿಮಗೆ ತಿಳಿಸಿದ್ದಾರೆಯೇ ಎಂದಾಗ “ಒಳಗಿನ ವಿಚಾರವನ್ನು ನಾನು ನಿಮ್ಮ ಬಳಿ ಚರ್ಚೆ ಮಾಡುವುದಿಲ್ಲ. ಅವರು ನನ್ನ ಬಳಿ ಯಾವುದೇ ಅರ್ಜಿಗಳಿಲ್ಲ ಎಂದು ಹೇಳಿದ್ದಾರೆ ಅದನ್ನು ನಾವು ಪರಿಶೀಲಿಸುತ್ತೇವೆ” ಎಂದರು.

Continue Reading
Advertisement
UPSC
ಪ್ರಮುಖ ಸುದ್ದಿ7 mins ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ44 mins ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ50 mins ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು56 mins ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ1 hour ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ1 hour ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್2 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು3 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Monsoon Skincare
ಆರೋಗ್ಯ3 hours ago

Home Remedies for Skin: ಮುಖದ ಕಾಂತಿ ಹೆಚ್ಚಿಸಿಕೊಳ್ಳುವುದು ಹೇಗೆ?

ahoratri dharani until the guilts are punished says Opposition party Leader R Ashok
ಪ್ರಮುಖ ಸುದ್ದಿ3 hours ago

R. Ashoka: ರಾಜಭವನ ಬಿಜೆಪಿ ಕಚೇರಿಯಾದರೆ, ವಿಧಾನಸೌಧ ಕಾಂಗ್ರೆಸ್ ಕಚೇರಿ- ಆರ್ ಅಶೋಕ್ ಕಿಡಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್6 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌