Rain Alert : ಕಲಬುರಗಿಯಲ್ಲಿ ಭಾರಿ ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು - Vistara News

ಕಲಬುರಗಿ

Rain Alert : ಕಲಬುರಗಿಯಲ್ಲಿ ಭಾರಿ ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು

Rain alert : ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Rain alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು (Rain alert) ಅಬ್ಬರಿಸುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಮನೆ ಗೋಡೆ ಕುಸಿದು ಮಹಿಳೆ ಸಾವು

ಮಳೆ ಅವಾಂತರಕ್ಕೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಸಕೀನಾಬಿ ನದಾಫ್ (70) ಮೃತ ದುರ್ದೈವಿ. ಮನೆ ಗೋಡೆ ಕುಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಕೀನಾಬಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪರಿಚಿತ ಮಲ್ಲಿಕಾರ್ಜುನ ಅವರ ಮನೆ ಮುಂಭಾಗದ ಕಟ್ಟೆ ಮೇಲೆ ಮಹಿಳೆಯರ ಜತೆ ಮಾತನಾಡುತ್ತಾ ಕುಳಿತಿದ್ದಾಗ, ಮಲ್ಲಿಕಾರ್ಜುನ ಅವರ ಮನೆ ಗೋಡೆಕುಸಿದು ಬಿದ್ದಿತ್ತು. ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯವಾಗಿದ್ದರೆ, ವೃದ್ಧೆ ಮೃತಪಟ್ಟಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿದಲ್ಲಿ ಮನೆಗಳಿಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದೆ. ಮೊಟ್ನಳ್ಳಿ ಗ್ರಾಮದಲ್ಲಿರುವ 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಗ್ರಾಮದಲ್ಲಿರುವ ರಸ್ತೆಗಳು ಜಲಾವೃತಗೊಂಡಿದೆ. ತೆಲಂಗಾಣ ಸಂಪರ್ಕ ಕಲ್ಪಿಸುವ ಗುರುಮಠಕಲ್ ತಾಲೂಕಿನ ನಂದೆಪಲ್ಲಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ನಿರಂತರ ಮಳೆ ಪರಿಣಾಮ ಚಿಂತನಹಳ್ಳಿ ಜಲಪಾತ ಉಕ್ಕಿ ಹರಿಯುತ್ತಿದೆ. ಶ್ರೀ ಗವಿಸಿದ್ದೇಶ್ವರ ಗರ್ಭ ಗುಡಿಯ ಮೇಲ್ಭಾಗದಲ್ಲಿ ಹರಿಯುವ ಜಲಪಾತ ಇದಾಗಿದೆ.

ರಾಯಚೂರಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಕೆರೆಕೋಡಿ ಕಿತ್ತು ಹೋಗಿದೆ. ಕೆರೆ ಕೋಡಿ ಕಿತ್ತು ಹೋದ ಹಿನ್ನೆಲೆಯಲ್ಲಿ ರಸ್ತೆಗೆ ನೀರು ನುಗ್ಗಿದೆ. ರಾಯಚೂರು ತಾಲ್ಲೂಕಿನ ಆತ್ಕೂರು ಗ್ರಾಮದ ಬಳಿ ಘಟನೆ ನಡೆದಿದೆ. ರಸ್ತೆಗೆ ನೀರು ನುಗ್ಗಿದ ಹಿನ್ನೆಲೆ ವಾಹನ ಸವಾರರು ಪರದಾಡಿದರು.ಇತ್ತ ಕೆರೆ ಕೋಡಿ ಒಡೆದು ಅಕ್ಕ ಪಕ್ಕದ ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ವಿಟೋಜಿ ಎಂಬುವವರ ಹತ್ತಿ ಹೊಲಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ.

ಗುಡುಗು, ಗಾಳಿ ಸಹಿತ ಅಬ್ಬರಿಸಲಿದೆ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಪ್ರತ್ಯೇಕವಾಗಿ ಭಾರಿ ಮಳೆ (Rain News) ಹಾಗೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

ಬೆಂಗಳೂರಿನಲ್ಲಿ ಹಗುರ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇಲ್ಲೆಲ್ಲ ವ್ಯಾಪಕ ಮಳೆ

ಉತ್ತರ ಕನ್ನಡ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೂ ಎಚ್ಚರಿಕೆ

ಸೆಪ್ಟೆಂಬರ್ 4ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರತೀರದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಅಬ್ಬರಿಸಲಿದೆ ಮಳೆ

Karnataka Weather Forecast : ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಳೆ ಅಬ್ಬರಿಸಲಿದೆ. 13 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಪ್ರತ್ಯೇಕವಾಗಿ ಭಾರಿ ಮಳೆ (Rain News) ಹಾಗೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

ಬೆಂಗಳೂರಿನಲ್ಲಿ ಹಗುರ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇಲ್ಲೆಲ್ಲ ವ್ಯಾಪಕ ಮಳೆ

ಉತ್ತರ ಕನ್ನಡ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೂ ಎಚ್ಚರಿಕೆ

ಸೆಪ್ಟೆಂಬರ್ 4ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರತೀರದಲ್ಲಿ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Rain News : ಪಕ್ಕದ ವಿಜಯವಾಡದಲ್ಲಿ ಮಳೆಯು ಅಬ್ಬರಿಸುತ್ತಿದೆ. ಕಲಬುರಗಿ, ಯಾದಗಿರಿಯಲ್ಲೂ ಮಳೆಯಾಗುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡು, ಮನೆಯೊಳಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

VISTARANEWS.COM


on

By

Rain News
Koo

ಕೋಲಾರ: ಆಂಧ್ರಪ್ರದೇಶದ ವಿಜಯವಾಡದಲ್ಲಿ (Rain News) ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ವ್ಯಾಪಕ ಮಳೆಯಿಂದ ರಸ್ತೆಗಳಲ್ಲಿ ರಭಸವಾಗಿ ನೀರು ತುಂಬಿ ಹರಿಯುತ್ತಿದ್ದು, ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಹಗ್ಗ ಕೊಟ್ಟು ಯುವಕನನ್ನು ಬಚವ್‌ ಮಾಡಿದ್ದಾರೆ.

ಕೆಲ ಗಂಟೆಗಳ ಕಾಲ ದ್ವಿಚಕ್ರ ವಾಹನಗಳು ರಸ್ತೆಗೆ ಬರದಂತೆ, ಜನರು ರಸ್ತೆಗಿಳಿಯದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ಎಲ್ಲಾ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸದಂತೆ ಪೊಲೀಸರು ಆದೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಿಂದ ಸರ್ವಿಸ್ ರಸ್ತೆಗಳಲ್ಲಿ ವಾಹನಗಳು ಓಡಾಡುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೊಣಕಾಲಿನಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ.

ನಗರ ಪ್ರವೇಶಿಸುವ ಎಲ್ಲ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪೂರ್ವಾನುಮತಿ ಇಲ್ಲದೆ ನಗರದೊಳಗೆ ಬೆಂಗಾವಲು ವಾಹನಗಳನ್ನು ಬಿಡದಂತೆ ಸೂಚನೆ ನೀಡಲಾಗಿದೆ. ಮೊಘಲ್ ರಾಜ್ ಪುರಂನಲ್ಲಿ ಬಂಡೆಗಳು ಮುರಿದು ಬಿದ್ದಿವೆ. ಪ್ರಮುಖ ಬೀದಿಗಳಲ್ಲಿ ಅಗ್ನಿಶಾಮಕ ವಾಹನಗಳ ಮೂಲಕ ನೀರು ತೆಗೆಯುವ ಪ್ರಯತ್ನ ಮಾಡುತ್ತಿದೆ. ಹಳೇ ಪೇಟೆಯಲ್ಲಿನ ಹೊರಹರಿವಿನ ಚರಂಡಿ ತುಂಬಿ ಹರಿಯುತ್ತಿರುವುದರಿಂದ ಮನೆಗಳಿಗೆ ನೀರು ನುಗ್ಗಿದೆ. ನಿಡಮನೂರಿನಿಂದ ಟ್ಯಾಂಕ್ಸಾಳದವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಮುಳುಗಡೆಯಾಗಿದೆ.

ಇದನ್ನೂ ಓದಿ: Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

ಕಲಬುರಗಿಯಲ್ಲಿ ಮಳೆ ಅಬ್ಬರಕ್ಕೆ ಜನರು ಕಂಗಾಲು

ಇತ್ತ ಕಲಬುರಗಿಯಲ್ಲಿ ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮ ಸಂಪರ್ಕ ಕಡಿತಗೊಂಡಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಹಲವು ಭಾಗದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪಿಡಿಎ ಕಾಲೇಜು ಬಳಿ ಇರುವ 10ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು.

ಚಿಂಚೊಳ್ಳಿ ತಾಲೂಕಿನಾದ್ಯಂತವು ವರ್ಷಧಾರೆಯಿಂದಾಗಿ ಚಂದ್ರಂಪಳ್ಳಿ ಜಲಾಶಯ ತುಂಬಿ ಹರಿಯುತ್ತಿದೆ. ಚಂದ್ರಂಪಳ್ಳಿ ಜಲಾಶಯದಿಂದ ನೀರು ಬಿಡುಗಡೆಯಿಂದಾಗಿ ಮಿರಿಯಾಣ ಹಾಗೂ ತೆಲಂಗಾಣದ ತಾಂಡೂರು ರಸ್ತೆ ಜಲಾವೃತಗೊಂಡು, ಸಂಪರ್ಕ ಕಡಿತಗೊಂಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾವ್ ಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಮಳೆಯ ಆರ್ಭಟಕ್ಕೆ ಹಲವು ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇರುವ ಚಿಕ್ಕನಿಂಗದಳ್ಳಿ ಗ್ರಾಮದ ಕೆರೆಭರ್ತಿಯಾಗಿದೆ. ಕುಂಚಾವರಂ ವನ್ಯಜೀವಿ ಧಾಮದ ಕೆರೆ ತುಂಬಿ ಹರಿಯುತ್ತಿದೆ. ಇನ್ನು ತುಂಬಿ ಹರಿಯುತ್ತಿರುವ ಕಾಗಿಣ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿ ಪ್ರಮಾಣ ಹೆಚ್ಚುತ್ತಿದೆ. ತುಂಬಿ ಹರಿಯುತ್ತಿರುವ ನದಿ ದಡದಲ್ಲೆ ಚಾಲಕರು ಲಾರಿ ತೊಳೆಯುತ್ತಿರುವ ದೃಶ್ಯ ಕಂಡು ಬಂತು. ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೋಲಿಸ್ ಭದ್ರತೆ ವಹಿಸಲಾಗಿದೆ.

ಕಲಬುರಗಿ ಸುರಿಯುತ್ತಿರುವ ಭಾರಿ ಮಳೆಗೆ ಬೋಗಾವತಿ ನದಿ ತುಂಬಿ ಹರಿದಿದೆ. ಪರಿಣಾಮ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮದ ಸೇತುವೆ ಜಲಾವೃತವಾಗಿದೆ. ಸೇತುವೆ ಜಲಾವೃತ ಪರಿಣಾಮ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ ಬೋಗಾವತಿ ನದಿ ನೀರಿನ ಅರ್ಭಟಕ್ಕೆ ಗಂಗನಪಳ್ಳಿ ಗ್ರಾಮದ ಗಂಗಾ ಮಾತೆ ದೇವಿಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಚಿಂಚೋಳಿ ತಾಲ್ಲೂಕಿನ ತಾಜಲಾಪೂರ, ಗಾರಂಪಳ್ಳಿ, ಗರಗಪಳ್ಳಿ, ಇರಕಪಳ್ಳಿ ಸೇತುವೆಗಳು ಜಲಾವೃತ. ವಿವಿಧ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಯಾದಗಿರಿಯಲ್ಲಿ ಮನೆಯೊಳಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಶನಿವಾರ ರಾತ್ರಿಯಿಂದ ಸುರಿದ ವರುಣನ ಅಬ್ಬರಕ್ಕೆ ಮನೆಯೊಳಗೆ ನೀರು ನುಗ್ಗಿದೆ. ನೀರು ಹೊರಹಾಕಲು ದೋರನಹಳ್ಳಿ ಗ್ರಾಮದ ಜನರು ಸಂಕಷ್ಟ ಎದುರಿಸಿದರು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಮಾಪಮ್ಮಳ ಮನೆಯಲ್ಲಿ ನವಜಾತ ಶಿಶುವೊಂದಿಗೆ ಬಾಣಂತಿ ಪರದಾಡಿದರು. ಅದೆ ರೀತಿ ಪಗಲಾಪುರನ ತಾತ್ಕಾಲಿಕ ಸೇತುವೆ ಜಲಾವೃತವಾಗಿದೆ. ಸೇತುವೆ ಹಾಳಾದ ಹಿನ್ನಲೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಮಳೆ ಅಬ್ಬರದಿಂದ ತಾತ್ಕಾಲಿಕ ಪಗಲಾಪುರ ಸೇತುವೆಯೂ ಜಲಾವೃತ ಸಂಪರ್ಕ ಕಡಿತಗೊಂಡಿದೆ. ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ ಅಬ್ಬರಕ್ಕೆ ವಂಕಸಂಬ್ರದ ರಸ್ತೆ ಜಲಾವೃತಗೊಂಡಿದೆ. ವಂಕಸಂಬ್ರದಿಂದ ತೋರಣತಿಪ್ಪಗೆ ಸಂಪರ್ಕದ ರಸ್ತೆಯಲ್ಲಿ ಉಕ್ಕಿ ಹರಿಯುವ ನೀರಿನಲ್ಲೇ ಜನರು ಓಡಾಡುವಂತಾಗಿದೆ. ಮತ್ತೊಂದೆಡೆ ಮನೆ ಗೋಡೆಗಳು ಕುಸಿದ ಬಿದ್ದಿದೆ. ನಿರಂತರ ಮಳೆಯಿಂದ ಬೊರಬಂಡಾ ಗ್ರಾಮದ ಎರಡು ಮನೆಗೋಡೆಗಳು ಕುಸಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

Police Firing: ಕಲಬುರಗಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ. ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರನ ಕಾಲಿಗೆ ಫೈರಿಂಗ್‌ ಮಾಡಿ ಹಿಡಿದಿದ್ದಾರೆ.

VISTARANEWS.COM


on

By

police Firing
Koo

ಕಲಬುರಗಿ: ಕಲಬುರಗಿ ನಗರದಲ್ಲಿ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ (Police Firing) ನಡೆದಿದೆ. ಕಲಬುರಗಿ ನಗರ ಹೊರವಲಯದ ಬೇಲೂರು ಕ್ರಾಸ್ ಬಳಿ ಘಟನೆ ನಡೆದಿದೆ. ಆರೋಪಿ ಅವತಾರ್‌ಸಿಂಗ್ ಮೇಲೆ ಸಬ್ ಅರ್ಬನ್ ಠಾಣೆ ಪೊಲೀಸರು ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈಯ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಸಬ್ ಅರ್ಬನ್ ಠಾಣೆ ಇನ್‌ಸ್ಪೆಕ್ಟರ್‌ ಸಂತೋಷ್ ತಟ್ಟೆಪಲ್ಲಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಾಳು ಆರೋಪಿ ಅವತಾರ್‌ಸಿಂಗ್ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅವತಾರ್ ಸಿಂಗ್‌ ಪೊಲೀಸರ ಮೇಲೆಯೇ ಚಾಕುಯಿಂದ ದಾಳಿ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ವೇಳೆ ಒಂದು ಸುತ್ತು ಗಾಳಿಯಲ್ಲಿ ಗುಂಡಿ ಹಾರಿಸಿ ಶರಣಾಗುವಂತೆ ಪೊಲೀಸರು ವಾರ್ನಿಂಗ್‌ ನೀಡಿದ್ದಾರೆ. ಆದರೆ ಇದಕ್ಕೆ ಕ್ಯಾರೆ ಎನ್ನದ ಅವತಾರ್ ಸಿಂಗ್ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.

ಈ ಅವತಾರ್‌ ಸಿಂಗ್‌ನ ಅವಾತರ ಒಂದೊಂದ್‌ ಅಲ್ಲ. ದರೋಡೆ, ರಾಬರಿ ಸೇರಿ ಅವತಾರ್ ಸಿಂಗ್ ಮೇಲೆ 13 ಕೇಸ್‌ಗಳಿವೆ. ಢಾಬಾವೊಂದರ ರಾಬರಿ ಕೇಸ್‌ನಲ್ಲಿ ಪೊಲೀಸರಿಗೆ ಬೇಕಾಗಿದ್ದ ಅವತಾರ ಸಿಂಗ್‌ಗಾಗಿ ಕಳೆದ ಮೂರು ದಿನಗಳಿಂದ ಪೊಲೀಸರು ಹುಡುಕಾಟ ನಡೆಸಿದ್ದರು. ಈ ವೇಳೆ ಉಪಳಾವ ಕ್ರಾಸ್ ಬಳಿ ಇರುವ ಖಚಿತ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಚಾಕುಯಿಂದ ದಾಳಿಗೆ ಮುಂದಾದಾಗ ಫೈರಿಂಗ್ ಮಾಡಿದ್ದಾರೆ. ಈ ಗಲಾಟೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ನಗರ ಟ್ರಾಮಾ ಕೇರ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತ ಆರೋಪಿ ಅವತಾರ್ ಸಿಂಗ್‌ಗೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎರಡು ಲಕ್ಷ ಲೂಟಿ ಮಾಡಿದ್ದ ಅವತಾರ್‌ ಸಿಂಗ್‌ ಗ್ಯಾಂಗ್‌

ಈ ಖತರ್ನಾಕ್‌ ಅವತಾರ್‌ ಸಿಂಗ್‌ ಏಪ್ರಿಲ್‌ ತಿಂಗಳಲ್ಲಿ‌ ಪಟ್ನಾ ಬಳಿಯ ಢಾಬಾದಲ್ಲಿ ದರೋಡೆ ಮಾಡಿದ್ದರು. ಸುಮಾರು 10ಕ್ಕೂ ಹೆಚ್ಚು ಮಂದಿ ಈ ಗ್ಯಾಂಗ್‌ ಢಾಬಾದಲ್ಲಿದ್ದ 2ಲಕ್ಷ ರೂ. ದರೋಡೆ ಮಾಡಿದ್ದರು. ರೌಡಿಶೀಟರ್‌ ಆಗಿರುವ ಅವತಾರ್‌ ಸಿಂಗ್‌ ದರೋಡೆ ಮಾಡುತ್ತಿದ್ದ ಸಿಸಿ‌ಟಿವಿ ದೃಶ್ಯ ಲಭ್ಯವಾಗಿದೆ. ಲಾಂಗ್, ಮಚ್ಚಿನಿಂದ ಎಂಟ್ರಿ ಕೊಟ್ಟಿದ್ದ ಈ ಗ್ಯಾಂಗ್‌ ಹಲ್ಲೆ‌ ಮಾಡಿ‌ ಬೆದರಿಸಿ‌ ದರೋಡೆ ಮಾಡಿದ್ದರು. ದರೋಡೆ ಬಳಿಕ ಬೆಂಗಳೂರಿನಲ್ಲಿ ನಾಲ್ಕೈದು ತಿಂಗಳು ತಲೆ ಮರೆಸಿಕೊಂಡಿದ್ದ ಆರೋಪಿ ಅವತಾರ್ ಸಿಂಗ್, ಕಲಬುರಗಿಗೆ ಆಗಮಿಸಿದ್ದಾಗ ಪೊಲೀಸರು ಲಾಕ್‌ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Karnataka Weather Forecast : ಭಾನುವಾರ 17 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ (Heavy Rain News) ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ (Karnataka Weather Forecast) ಅಬ್ಬರಿಸಲಿದ್ದಾನೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಮೂರು ದಿನ ಮೀನುಗಾರರಿಗೆ ಎಚ್ಚರಿಕೆಯನ್ನು ಕೊಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Physical Abuse
ಶಿವಮೊಗ್ಗ9 mins ago

Physical Abuse : ಅರ್ಥವಾಗದ ಪಾಠವನ್ನು ಹೇಳಿಕೊಡುವುದಾಗಿ ವಿದ್ಯಾರ್ಥಿನಿಯನ್ನು ಕರೆಸಿ ಅತ್ಯಾಚಾರವೆಸಗಿದ ಉಪನ್ಯಾಸಕ

Three arrested for smuggling gold in rectum
ಬೆಂಗಳೂರು ಗ್ರಾಮಾಂತರ49 mins ago

Gold Smuggling: ಗುದದ್ವಾರದಲ್ಲಿತ್ತು ಕೋಟಿ ಮೌಲ್ಯದ ಚಿನ್ನ; ಶ್ರೀಲಂಕಾದಿಂದ ಬಂದವರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಲಾಕ್‌

Several injured as tree falls on them in Bengaluru
ಬೆಂಗಳೂರು1 hour ago

Bengaluru News : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಮರ; ಆಸ್ಪತ್ರೆ ಪಾಲಾದ ಅಣ್ಣ-ತಂಗಿ

Rain alert
ಕಲಬುರಗಿ3 hours ago

Rain Alert : ಕಲಬುರಗಿಯಲ್ಲಿ ಭಾರಿ ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು

karnataka weather Forecast
ಮಳೆ6 hours ago

Karnataka Weather : ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಅಬ್ಬರಿಸಲಿದೆ ಮಳೆ

Dina bhavishya
ಭವಿಷ್ಯ7 hours ago

Dina Bhavishya : ಆಪ್ತರೊಂದಿಗೆ ಶುರು ಮಾಡುವ ವ್ಯಾಪಾರ ನಷ್ಟ ತಂದಿತು ಎಚ್ಚರ

Real Star Upendra Acting with Superstar Rajinikanth Coolie Movie
ಸ್ಯಾಂಡಲ್ ವುಡ್17 hours ago

Actor Upendra : ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್; ಕಲೀಷ ಪಾತ್ರದಲ್ಲಿ ಮಿಂಚಲಿರುವ ಉಪೇಂದ್ರ

Pot holes
ಬೆಂಗಳೂರು18 hours ago

Pot Holes: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ ಡಿಕೆಶಿ ಖಡಕ್‌ ಸೂಚನೆ; 15 ದಿನಗಳ ಗಡುವು

I will become CM if Siddaramaiah gives permission RV Deshpande
ಮೈಸೂರು20 hours ago

RV Deshpande : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ- ಆರ್‌ವಿ ದೇಶಪಾಂಡೆ ಅಚ್ಚರಿ ಹೇಳಿಕೆ

Irani gang active in Belagavi Single women are the target
ಬೆಳಗಾವಿ20 hours ago

Theft Case : ಬೆಳಗಾವಿಯಲ್ಲಿ ಇರಾನಿ ಗ್ಯಾಂಗ್ ಆ್ಯಕ್ಟಿವ್! ಒಂಟಿ ಮಹಿಳೆಯರೇ ಟಾರ್ಗೆಟ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌