Kodi Mutt Swamiji: ಮತ್ತೆ ಪ್ರಕೃತಿ ವಿಕೋಪಗಳು ಸಂಭವಿಸುತ್ತೆ;ಸರ್ಕಾರಕ್ಕೆ ಕಂಟಕನಾ! ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ - Vistara News

ಹಾಸನ

Kodi Mutt Swamiji: ಮತ್ತೆ ಪ್ರಕೃತಿ ವಿಕೋಪಗಳು ಸಂಭವಿಸುತ್ತೆ;ಸರ್ಕಾರಕ್ಕೆ ಕಂಟಕನಾ! ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

Kodi Mutt Swamiji : ಪ್ರಾಕೃತಿಕ ದೋಷ ಇದ್ದು, ಭೂಮಿ, ಅಗ್ನಿ, ವಾಯು, ಆಕಾಶ ಐದು ಕಡೆಯೂ ತೊಂದರೆ ಇದೆ.ಇನ್ನೊಂದು ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ. ಜನ ಇದ್ದಂಗೆ ಸಾಯುತ್ತಾರೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

kodi swamiji bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಕೋಡಿಮಠದ ಶ್ರೀಗಳು (Kodi Mutt Swamiji) ಮತ್ತೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪ್ರಾಕೃತಿಕ ದೋಷ ಇದ್ದು, ಐದು ಕಡೆಯೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಹೀಗೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇನ್ನೂ ಒಂದು ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ.

ಈ ಹಿಂದೆ ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ, ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಮುಳುಗುತ್ತವೆ ಅಂತಲೂ ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಇವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್‌ ಮಾಡಿಸಿದ್ದರು. ಮಹಾಭಾರತದಲ್ಲಿ ಕೃಷ್ಣ ಗೆದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಅದರ ಅರ್ಥ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಇದೆ ಆಗುವುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Road Accident : ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

Road Accident : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ತಾಯಿ-ಮಗಳು ಮೃತಪಟ್ಟರೆ, ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಉರುಳಿದೆ. ಮಂಡ್ಯದಲ್ಲಿ ಫಿಡ್ಜ್‌ ಸ್ಫೋಟಗೊಂಡಿದೆ.

VISTARANEWS.COM


on

By

Road Accident
ರಸ್ತೆ ತಡೆದು ಪ್ರತಿಭಟಿಸಿದ ಸ್ಥಳೀಯರು
Koo

ತುಮಕೂರು: ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ- ಮಗಳು ಸ್ಥಳದಲ್ಲೇ ದುರ್ಮರಣ (Road Accident) ಹೊಂದಿದ್ದಾರೆ. ಕಮಲಮ್ಮ (35), ವೀಣಾ (16), ಮೃತ ದುರ್ದೈವಿಗಳು. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದೆ.

ಕಮಲಮ್ಮನವರು ಬೆಳಗ್ಗೆ 10ನೇ ತರಗತಿ ಓದುತ್ತಿದ್ದ ಮಗಳನ್ನು ಶಾಲೆಗೆ ಬಿಡಲು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗಾರ್ಮೆಂಟ್ಸ್ ಬಸ್‌ವೊಂದು ಏಕಾಏಕಿ ತಾಯಿ- ಮಗಳಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಹಾರಿ ಬಿದ್ದ ತಾಯಿ -ಮಗಳು ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದೆ. ಮುದ್ದಪ್ಪ (50), ಗಾಯಾಳನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಬೇಜವ್ದಾರಿತನಕ್ಕೆ ಈ ಸಾವು ಸಂಭವಿಸಿದೆ ಎಂದು ಕಿಡಿಕಾರಿದ ಗ್ರಾಮಸ್ಥರು ರಸ್ತೆ ತಡೆದು ಆಕ್ರೋಶ ಹೊರಹಾಕಿದರು.

ಮೃತದೇಹಗಳನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆಗೆ ಮುಂದಾದರು. ಹಲವು ಬಾರಿ ಅಂಡರ್ ಪಾಸ್ ನಿರ್ಮಿಸುವಂತೆ ಮನವಿ ಮಾಡಿದರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಶವಗಳನ್ನು ಎತ್ತಲ್ಲ ಎಂದು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ: Road Accident : ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಬಸ್‌; ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು

ಹಾಸನ ತಾಲ್ಲೂಕಿನ, ಕಟ್ಟಾಯ ಬಳಿ ವೇಗವಾಗಿ ಬಂದು ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಕಾರೊಂದು ಹಳ್ಳಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದ್ದು, ಕಾರಿನಲ್ಲಿ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಿಸಿ ಮೇಲಕ್ಕೆ ಕರೆತಂದಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಯಿತು. ಗಾಯಾಳುಗಳು ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದವರು ಎಂದು ತಿಳಿದು ಬಂದಿದೆ. ಹಳ್ಳಕ್ಕೆ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಡ್ಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ರೆಫ್ರಿಜರೇಟರ್ ಸ್ಫೋಟ

ಮಂಡ್ಯ ನಗರದ ಕೆರೆ ಅಂಗಳದಲ್ಲಿ ರೆಫ್ರಿಜರೇಟರ್‌ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ಕೆಲವು ವಸ್ತುಗಳು ಬೆಂಕಿಗೆ ಆಹುತಿ ಆಗಿವೆ. ನಗರದ ನಿವಾಸಿ ಶೈಲಜಮ್ಮ ಎಂಬುವವರಿಗೆ ಸೇರಿನ ಮನೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಫ್ರಿಡ್ಜ್‌ ಸ್ಫೋಟಗೊಂಡಿದೆ. ಅದೃಷ್ಟವತ್ ಯಾವುದೇ ಪ್ರಾಣಾ ಹಾನಿ ಸಂಭವಿಸಿಲ್ಲ.

ಮಂಡ್ಯದ ಗಿರಿಯಾಸ್ ಶೋರೂಂನಲ್ಲಿ ವರ್ಲ್ ಪೂಲ್ ಕಂಪನಿಯ ಫ್ರಿಡ್ಜ್‌ ಖರೀದಿ ಮಾಡಲಾಗಿತ್ತು. ಸ್ಫೋಟದಿಂದ ಮನೆಯಲ್ಲಿದ್ದ ಸಾವಿರಾರು ರೂ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸದ್ಯ ಕಂಪನಿಯ ವಿರುದ್ಧ ಪೊಲೀಸ್ ಠಾಣಾಗೆ ದೂರು ದಾಖಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

karnataka Weather Forecast : ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ (rain News) ಸಾಧ್ಯತೆ ಇದ್ದು, 9 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಮಲೆನಾಡು ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ.

ಗುಡುಗು ಸಹಿತ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಭಾನುವಾರದಂದು ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು ಜತೆಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇನ್ನೂ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಿರಂತರ ಗಾಳಿಯ ವೇಗ 40-50 ಕಿ.ಮೀ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್‌

ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಹಗುರ ಮಳೆ

ಮುಂದಿನ 48 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಟ

Karnataka Weather Forecast : ರಾಜ್ಯಾದ್ಯಂತ ಸೆ.6ರಿಂದ ಸೆ.12ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ (Rain News) ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಗಾಳಿಯೊಂದಿಗೆ ಮಳೆ ಅಬ್ಬರ

ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಭಾನುವಾರವೂ ಭಾರಿ ಮಳೆ ಎಚ್ಚರಿಕೆ

ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
kodi swamiji bhavishya
ಹಾಸನ13 mins ago

Kodi Mutt Swamiji: ಮತ್ತೆ ಪ್ರಕೃತಿ ವಿಕೋಪಗಳು ಸಂಭವಿಸುತ್ತೆ;ಸರ್ಕಾರಕ್ಕೆ ಕಂಟಕನಾ! ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

Ibbani thabbida ileyali Film Review by Shivaraj DNS
ಸ್ಯಾಂಡಲ್ ವುಡ್1 hour ago

Ibbani thabbida ileyali :ಇಬ್ಬನಿ ತಬ್ಬಿದ ಇಳೆಯಲಿ; ಪ್ರೇಮಕಾವ್ಯವನ್ನು ತಬ್ಬಿದ ನಿರ್ದೇಶಕ-ತಬ್ಬಿಬ್ಬಾದ ಪ್ರೇಕ್ಷಕ

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

murder case
ಬೆಂಗಳೂರು ಗ್ರಾಮಾಂತರ4 hours ago

Murder Case : ಚಾಕುವಿನಿಂದ ಹೆತ್ತವಳ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಪಿ ಮಗ

actor darshan and gang
ಬೆಂಗಳೂರು5 hours ago

Actor Darshan: ನಟ ದರ್ಶನ್‌ ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ; ಕೋರ್ಟ್‌ಗೆ ಡಿಜಿಟಲ್‌ ಎವಿಡೆನ್ಸ್‌ ಸಲ್ಲಿಸಿದ ತನಿಖಾಧಿಕಾರಿಗಳು

Actor Darshan
ಸಿನಿಮಾ6 hours ago

Actor Darshan : ರೇಣುಕಾಸ್ವಾಮಿಯ ಎದೆ ಮೇಲೆ ಕಾಲಿಟ್ಟು, ಕಿವಿ ಹೊಸಕಿ, ಮರ್ಮಾಂಗ ತುಳಿದ್ರಾ! ನಟ ದರ್ಶನ್‌ ತಪ್ಪೊಪ್ಪಿಗೆ!

Road Accident
ತುಮಕೂರು7 hours ago

Road Accident : ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

karnataka weather Forecast
ಮಳೆ13 hours ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ತಲೆದೋರಲಿದೆ; ಹೂಡಿಕೆ ವ್ಯವಹಾರಗಳನ್ನು ಮಾಡ್ಬೇಡಿ

Actress Ramya
ಸ್ಯಾಂಡಲ್ ವುಡ್22 hours ago

Actress Ramya : ಮೋಹಕ ತಾರೆ ನಟಿ ರಮ್ಯಾಗೆ ಕೂಡಿ ಬಂತಾ ಕಂಕಣ ಭಾಗ್ಯ? ನವೆಂಬರ್‌ನಲ್ಲಿ ಮದುವೆ ಫಿಕ್ಸಾ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌