CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌ - Vistara News

ಪ್ರಮುಖ ಸುದ್ದಿ

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವಾದ-ವಿವಾದ ಆಲಿಸಿದ ಹೈಕೋರ್ಟ್‌ ಸೆ.12ಕ್ಕೆ ಮುಂದೂಡಿದ್ದಾರೆ.

ಸೆ.9ರಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 17A ಅಡಿ ಪ್ರಾಸಿಕ್ಯೂಷನ್‌ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದ್ದರು. ಎಫ್‌ಐಆರ್ ದಾಖಲಿಸುವ ಮೊದಲು ಪ್ರಾಥಮಿಕ ತನಿಖೆ ಅಗತ್ಯವೆಂದಿದೆ. ಆದರೆ 17ಎ ಅಡಿ ಅನುಮತಿಗೆ ಪ್ರಾಥಮಿಕ ತನಿಖೆ ಆಗಿರಬೇಕಿಂದಿಲ್ಲ. ವಿಚಾರಣೆ, ತನಿಖೆಗೂ ಮುನ್ನ 17 ಎ ಅನುಮತಿ ಬೇಕಲ್ಲವೇ ? ಎಂದು ಅಡ್ವೊಕೆಟ್ ಜನರಲ್‌ಗೆ ನ್ಯಾ.ಎಂ.ನಾಗಪ್ರಸನ್ನ ಪ್ರಶ್ನೆ ಮಾಡಿದರು. ಯಾವ ಕೇಸ್‌ನಲ್ಲಿ ಪ್ರಾಥಮಿಕ ತನಿಖೆ ಬೇಕೆಂಬುದನ್ನು ಸುಪ್ರೀಂಕೋರ್ಟ್ ಹೇಳಿದೆ. ಇದು 22 ವರ್ಷಕ್ಕಿಂತ ಹಳೆಯ ಕೇಸ್ ಆಗಿರುವುದರಿಂದ ಪ್ರಾಥಮಿಕ ತನಿಖೆ ಬೇಕು ಎಂದು ಎಜಿ ವಾದಿಸಿದರು.

ಪೊಲೀಸರಿಗೆ ದೂರು ನೀಡಿದ ನಂತರ 15 ದಿನಗಳಿಂದ 6 ವಾರ ಕಾಲಾವಕಾಶ ಇದೆ. ಆದರೆ ಅದಕ್ಕೆ ಕಾಯದೇ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಎಲ್ಲ ನಾಗರಿಕರು ಎಲ್ಲರ ವಿರುದ್ಧ ದೂರು ನೀಡಿದರೆ ಸಮಸ್ಯೆ ಆಗಲಿದೆ ಎಂದಾಗ, ಮಧ್ಯಪ್ರವೇಶಿಸಿ ನ್ಯಾಯಾಧೀಶರು, ಹೀಗಾಗಿಯೇ ಡಾ.ಅಶೋಕ್ ಕೇಸ್‌ನಲ್ಲಿ ಮಾರ್ಗಸೂಚಿ ರೂಪಿಸಲಾಗಿದೆ ಎಂದರು. ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೇ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎ ಮಾರ್ಗಸೂಚಿ ಆಧರಿಸಿ ಎಜಿ ವಾದ ಮಂಡಿಸಿದ್ದರು. ಸಿಎಂ ಕರ್ತವ್ಯದ ಭಾಗವಾಗಿ ಈ ಕೃತ್ಯ ನಡೆದಿಲ್ಲ. ಇದಕ್ಕೆ ಅವಕಾಶ ಕೊಟ್ಟರೆ ದಿನನಿತ್ಯ ಹಲವು ಖಾಸಗಿ ದೂರು ದಾಖಲಾಗಬಹುದು. ಸಕ್ಷಮ ಪ್ರಾಧಿಕಾರಿಯೇ ಇದನ್ನೆಲ್ಲಾ ವಿಚಾರಣೆ ನಡೆಸಿದರೆ ಸಮಸ್ಯೆ ಆಗಲಿದೆ. ಪೊಲೀಸ್ ಅಧಿಕಾರಿಯ ಮೂಲಕವೇ 17ಎ ಅಡಿ ಅನುಮತಿ ಪಡೆಯಬೇಕು ಎಂದರು.

ರಾಜ್ಯಪಾಲರು ಅನುಸರಿಸಿದ ಪ್ರಕ್ರಿಯೆಗೆ ಕಾನೂನಿನಡಿ ಅವಕಾಶವಿಲ್ಲ-ಎಜಿ

3 ವಾಲ್ಯೂಮ್‌ಗಳ ದಾಖಲೆಗಳನ್ನು ರಾಜ್ಯಪಾಲರ ಪರ ವಕೀಲರು ನೀಡಿದ್ದಾರೆ. ಆದರೆ ಶೋಕಾಸ್ ನೋಟಿಸ್ ನೀಡುವ ಮುನ್ನ ಪ್ರಾಥಮಿಕ ವರದಿ ಇಲ್ಲ. 17ಎ ಅಡಿ ರಾಜ್ಯಪಾಲರೇ ಪ್ರಾಥಮಿಕ ತನಿಖೆ ನಡೆಸುವಂತಿಲ್ಲ. ತನಿಖಾಧಿಕಾರಿಯಂತೆ ರಾಜ್ಯಪಾಲರು ವರ್ತಿಸುವಂತಿಲ್ಲ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಾಧೀಶರು ಎಫ್‌ಐಆರ್ ದಾಖಲಿಸುವ ಮುನ್ನ 17ಎ ಅನುಮತಿ ಪಡೆಯಬೇಕು. ಕೋರ್ಟ್ ಸೂಚಿಸಿದ್ದರೆ ಎಫ್‌ಐಆರ್ ದಾಖಲಾಗುತ್ತಿತ್ತು. ಇದನ್ನು ತಡೆಯಲು ಖಾಸಗಿ ದೂರುದಾರರಿಗೆ ಅನುಮತಿ ಪಡೆಯುವ ಅವಕಾಶ ನೀಡಲಾಗಿದೆ ಎಂದರು.

ಈ ವೇಳೆ ವಾದ ಮುಂದುವರಿಸಿದ ಎಜಿ ಶಶಿಕಿರಣ್‌, ತನಿಖಾಧಿಕಾರಿಯು ಪ್ರಾಥಮಿಕ ತನಿಖೆ ನಡೆಸಬೇಕು, ರಾಜ್ಯಪಾಲರಲ್ಲ. ರಾಜ್ಯಪಾಲರು ಅನುಸರಿಸಿದ ಪ್ರಕ್ರಿಯೆಗೆ ಕಾನೂನಿನಡಿ ಅವಕಾಶವಿಲ್ಲ. ರಾಜ್ಯಪಾಲರು ಖಾಸಗಿ ದೂರುದಾರರಿಗೆ ಅವಕಾಶವನ್ನೇ ನೀಡಬಾರದಿತ್ತು. ದೂರುದಾರ ಪ್ರದೀಪ್ ಕುಮಾರ್ ಪೊಲೀಸರಿಗೆ ದೂರನ್ನೇ ನೀಡಿರಲಿಲ್ಲ. ಖಾಸಗಿ ದೂರುದಾರರ ಮನವಿಯನ್ನು ರಾಜ್ಯಪಾಲರು ಹಿಂತಿರುಗಿಸಬೇಕಿತ್ತು. ಸಚಿವ ಸಂಪುಟದ ನಿರ್ಧಾರವನ್ನು ತಿರಸ್ಕರಿಸುವ ಅನಿಯಂತ್ರಿತ ಅಧಿಕಾರವಿಲ್ಲ. ರಾಜ್ಯಪಾಲರ ಆದೇಶದಲ್ಲಿ ಇದಕ್ಕೆ ಕಾರಣಗಳಿರಬೇಕು. ರಾಜ್ಯಪಾಲರು ಪರಿಶೀಲಿಸಿದ ಕಡತದಲ್ಲಲ್ಲ ಎಂದು ವಾದ ಅಂತ್ಯಗೊಳಿಸಿದರು.

ಪತ್ನಿ ಆಸ್ತಿಯನ್ನು ಪತಿಯ ಆಸ್ತಿ ಎಂದು ಪರಿಗಣಿಸಿ- ಸ್ನೇಹಮಯಿ ಕೃಷ್ಣ ಪರ ವಕೀಲೆ ವಾದ

ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಶುರು ಮಾಡಿದರು. 1996 – 1999 ಅವಧಿಯಲ್ಲಿ ಡಿಸಿಎಂ ಆಗಿದ್ದಾಗ ಡಿನೋಟಿಫಿಕೇಷನ್ ಮಾಡಲಾಗಿದೆ. 2004-2007 ರಲ್ಲಿ ಡಿಸಿಎಂ ಆಗಿದ್ದಾಗ ಭೂಪರಿವರ್ತನೆ ಮಾಡಲಾಗಿದೆ. 2013 – 2018 ವರೆಗೆ ಸಿಎಂ ಆಗಿದ್ದಾಗ ಪರಿಹಾರದ ಸೈಟ್‌ಗೆ ಅರ್ಜಿ ಸಲ್ಲಿಸಲಾಗಿದೆ. 2018-2022 ವರೆಗೆ ಸಿದ್ದರಾಮಯ್ಯ ಶಾಸಕರಾಗಿದ್ದರು. ಸರ್ಕಾರಿ ಗೆಸ್ಟ್ ಹೌಸ್‌ನಲ್ಲಿ ಮುಡಾದಿಂದ ಸೇಲ್ ಡೀಡ್ ಮಾಡಿಕೊಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗದೇ ಸೇಲ್ ಡೀಡ್ ಮಾಡಲಾಗಿದೆ.

ಅಧಿಕಾರ ದುರುಪಯೋಗ ಪಡಿಸಿಕೊಂಡು ಹೀಗೆ ಮಾಡಲಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಈ ಎಲ್ಲಾ ಚಟುವಟಿಕೆ ನಡೆದಿವೆ. ಪತ್ನಿಗೆ ಬೇರೆ ಆದಾಯದ ಮೂಲಗಳಿರಲಿಲ್ಲ. ಆದಾಯ ತೆರಿಗೆ ರಿಟರ್ನ್ ಅನ್ನು ಸಿದ್ದರಾಮಯ್ಯ ಪತ್ನಿ ಫೈಲ್ ಮಾಡಿಲ್ಲ. ಹೀಗಾಗಿ ಪತ್ನಿಯ ಆಸ್ತಿಯನ್ನು ಪತಿಯ ಆಸ್ತಿ ಎಂದೇ ಪರಿಗಣಿಸಬೇಕು. ಸಿದ್ದರಾಮಯ್ಯ ಮೇಲಿನ ಆರೋಪಗಳಿಗೆ ಪುರಾವೆಗಳಿವೆ ಎಂದು ಸ್ನೇಹಮಯಿ ಕೃಷ್ಣ ಪರ ಲಕ್ಷ್ಮಿ ಅಯ್ಯಂಗಾರ್ ವಾದಮಂಡನೆ ಪೂರ್ಣಗೊಳಿಸಿದರು. ಇದಾದ ಬಳಿಕ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Kodi Mutt Swamiji: ಮತ್ತೆ ಪ್ರಕೃತಿ ವಿಕೋಪಗಳು ಸಂಭವಿಸುತ್ತೆ;ಸರ್ಕಾರಕ್ಕೆ ಕಂಟಕನಾ! ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

Kodi Mutt Swamiji : ಪ್ರಾಕೃತಿಕ ದೋಷ ಇದ್ದು, ಭೂಮಿ, ಅಗ್ನಿ, ವಾಯು, ಆಕಾಶ ಐದು ಕಡೆಯೂ ತೊಂದರೆ ಇದೆ.ಇನ್ನೊಂದು ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ. ಜನ ಇದ್ದಂಗೆ ಸಾಯುತ್ತಾರೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

By

kodi swamiji bhavishya
Koo

ಹಾಸನ: ಕೋಡಿಮಠದ ಶ್ರೀಗಳು (Kodi Mutt Swamiji) ಮತ್ತೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮಳೆಯಿಂದ ಜಾಸ್ತಿ ತೊಂದರೆ ಇದೆ ಎಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪ್ರಾಕೃತಿಕ ದೋಷ ಇದ್ದು, ಐದು ಕಡೆಯೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಹೀಗೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇನ್ನೂ ಒಂದು ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ.

ಈ ಹಿಂದೆ ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ, ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಮುಳುಗುತ್ತವೆ ಅಂತಲೂ ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಇವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್‌ ಮಾಡಿಸಿದ್ದರು. ಮಹಾಭಾರತದಲ್ಲಿ ಕೃಷ್ಣ ಗೆದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಅದರ ಅರ್ಥ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಇದೆ ಆಗುವುದು.

Continue Reading

ಬೆಂಗಳೂರು ಗ್ರಾಮಾಂತರ

Murder Case : ಚಾಕುವಿನಿಂದ ಹೆತ್ತವಳ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಪಿ ಮಗ

Murder Case : ಕ್ಷುಲ್ಲಕ ಕಾರಣಕ್ಕೆ ಪಾಪಿ ಮಗನೊಬ್ಬ ಚಾಕುವಿನಿಂದ ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೃತ್ಯದ ಬಳಿಕ ಕಾಲ್ಕಿತ್ತಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

By

murder case
Koo

ದೊಡ್ಡಬಳ್ಳಾಪುರ: ಮಗನೇ ತಾಯಿಯ ಕತ್ತು ಕೊಯ್ದು ಕೊಲೆ (Murder Case) ಮಾಡಿದ್ದಾನೆ. ಚಾಕುವಿನಿಂದ ಕತ್ತು ಸೀಳಿ ತಾಯಿಯ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹೊರವಲಯದ ರಾಗರಾಳ್ಳಗುಟ್ಟೆ ಬಳಿ ನಡೆದಿದೆ. ಗ್ರಾಮದ ರತ್ನಮ್ಮ (56) ಕೊಲೆಯಾದವರು. ಮಗ ಗಂಗರಾಜು ಕೊಲೆ ಆರೋಪಿ ಆಗಿದ್ದಾನೆ.

ಕ್ಷುಲ್ಲಕ ಕಾರಣಕ್ಕೆ ತಾಯಿ-ಮಗನ ನಡುವೆ ಜಗಳ ಶುರುವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಗಂಗರಾಜು ತಾಯಿಯನ್ನು ಕೊಂದಿದ್ದಾನೆ. ಕೊಲೆ ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ರಾಗರಾಳ್ಳಗುಟ್ಟೆಯಲ್ಲಿ ಪ್ರಕರಣ ದಾಖಲಾಗಿದೆ.

ನಡುರಸ್ತೆಯಲ್ಲಿ ಅಡ್ಡಗಟ್ಟಿ ವ್ಯಕ್ತಿಯ ಹೊಟ್ಟೆ ಬಗೆದು ಕೊಂದ ದುಷ್ಕರ್ಮಿಗಳು

ಕಲಬುರಗಿ: ಕಲಬುರಗಿ ನಗರ ಹೊರವಲಯದ ಕೆಸರಟಗಿ ಬಳಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ವ್ಯಕ್ತಿಯನ್ನು ಹೊಡೆದು ಭೀಕರ ಹತ್ಯೆ (Murder Case) ಮಾಡಲಾಗಿದೆ. ಕಪಿಲ್ ಗಾಯಕ್ವಾಡ್ (38) ಕೊಲೆಯಾದವನು.

ಪತ್ನಿಯ ಸಮ್ಮುಖದಲ್ಲೆ ಪತಿ ಕಪಿಲ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರಿಡ್ಜ್‌ ಬಳಿ ಹತ್ಯೆ ನಡೆಸಿದ್ದಾರೆ. ಕುಟುಂಬಸ್ಥರಿಂದ ಕಪಿಲ್ ಪತ್ನಿ ಭಾಗ್ಯ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.

ಮೃತದೇಹವನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Actor Darshan: ನಟ ದರ್ಶನ್‌ ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ; ಕೋರ್ಟ್‌ಗೆ ಡಿಜಿಟಲ್‌ ಎವಿಡೆನ್ಸ್‌ ಸಲ್ಲಿಸಿದ ತನಿಖಾಧಿಕಾರಿಗಳು

Actor darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧಿಯಾಗಿರುವ ನಟ ದರ್ಶನ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಸೆ.9ರಂದು ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

VISTARANEWS.COM


on

By

actor darshan and gang
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan)ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿನಿಂದ, ಪವಿತ್ರಾಗೌಡ ಮತ್ತಿತರನ್ನು ಪರಪ್ಪನ ಅಗ್ರಹಾರದಿಂದ ಹಾಗೂ ಮೈಸೂರು, ಬಳ್ಳಾರಿ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರುಗಿ, ವಿಜಯಪುರದ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೀಗ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧಿಯಾಗಿರುವ ನಟ ದರ್ಶನ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಸೆ.9ರಂದು ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಎಲ್ಲ ಆರೋಪಿಗಳ ಹಾಜರಾತಿ ಪಡೆದುಕೊಂಡರು. ಈ ವೇಳೆ ಚಾರ್ಜ್ ಶೀಟ್ ನೀಡಲು ಸರ್ಕಾರಿ ವಕೀಲರು ಕಾಲಾವಕಾಶ ಕೋರಿದರು.

ಆರೋಪಿಗಳ ಪರ ವಕೀಲರಿಗೆ ವೈಯಕ್ತಿಕವಾಗಿ ಚಾರ್ಜ್ ಶೀಟ್‌ ನೀಡಿ ಎಂದು ನ್ಯಾಯಾಧೀಶರು ಸೂಚನೆ ನೀಡಿದರು. ಆರೋಪಿಗಳು ಒಂದೊಂದು ಜೈಲಿನಲ್ಲಿದ್ದಾರೆ, ಹೀಗಾಗಿ ಆರೋಪಿಗಳ ಕೈಗೆ ಚಾರ್ಜ್ ಶೀಟ್ ಸಲ್ಲಿಸಿದರೆ ಜಾಮೀನು ಪ್ರಕ್ರಿಯೆಗೆ ತಡವಾಗುತ್ತದೆ. ಆರೋಪಿಗಳು ವಿಡಿಯೋ ಕಾನ್ಪರೆನ್ಸ್‌ನಲ್ಲಿದ್ದಾರೆ. ಅವರನ್ನು ಕೇಳಿ ಅವರ ಸೂಚನೆ ಮೇರೆಗೆ ಚಾರ್ಜ್ ಶೀಟ್ ನೀಡುವಂತೆ ವಕೀಲರು ಮನವಿ ಮಾಡಿದರು.

ಪುಟ್ಟಸ್ವಾಮಿ ,ನಂದೀಶ್, ರಾಘವೆಂದ್ರ, ಜಗದೀಶ್, ಪವನ್, ಅನುಕುಮಾರ್, ಧನರಾಜ್ ,ರವಿಶಂಕರ್, ವಿನಯ್, ಪ್ರದೂಷ್, ನಾಗರಾಜು ಹಾಗೂ ಲಕ್ಷ್ಮಣ್, ದೀಪಕ್ ಕುಮಾರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಪರ ವಕೀಲರು ಯಾರೆಂದು ನ್ಯಾಯಾಧೀಶರು ಕೇಳಿದರು. ಈ ವೇಳೆ ನಟ ದರ್ಶನ್‌ ಸಿ.ವಿ. ನಾಗೇಶ್‌ ವಕೀಲರು ಎಂದು ಉತ್ತರಿಸಿದರು. ಇದಕ್ಕೂ ಮೊದಲು ರಿಮ್ಯಾಂಡ್ ಕಾಪಿಯೊಂದಿಗೆ ತನಿಖಾಧಿಕಾರಿ ಎಸಿಪಿ‌ ಚಂದನ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದನ್ನೂ ಓದಿ; Actor Darshan : ರೇಣುಕಾಸ್ವಾಮಿಯ ಎದೆ ಮೇಲೆ ಕಾಲಿಟ್ಟು, ಕಿವಿ ಹೊಸಕಿ, ಮರ್ಮಾಂಗ ತುಳಿದ್ರಾ! ನಟ ದರ್ಶನ್‌ ತಪ್ಪೊಪ್ಪಿಗೆ!

ಕೋರ್ಟ್‌ಗೆ ಡಿಜಿಟಲ್‌ ಎವಿಡೆನ್ಸ್‌ ಸಲ್ಲಿಕೆ

ನ್ಯಾಯಾಲಯಕ್ಕೆ ಹಾಜರಾದ ಎಸ್‌ಪಿಪಿ ಪ್ರಸನ್ನ ಕುಮಾರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್ ಎವಿಡೆನ್ಸ್ ಹಾರ್ಡ್ ಡಿಸ್ಕ್ , ಪೆನ್ ಡ್ರೈವ್‌ ಅನ್ನು ಸಲ್ಲಿಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ತನಿಖಾಧಿಕಾರಿ ಎಸಿಪಿ‌ ಚಂದನ್ ಪೆನ್ ಡ್ರೈವ್, ಸಿಡಿ, ಡಿವಿಡಿ, ಹಾರ್ಡ್ ಡಿಸ್ಕ್ ಕಂ ಪೆನ್ ಡ್ರೈವ್ ಸೇರಿ ಒಟ್ಟು 60 ಡಿಜಿಟಲ್ ಎವಿಡೆನ್ಸ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿದರು.

ಈ ವೇಳೆ ಚಾರ್ಜ್ ಶೀಟ್‌ನ ಆರೋಪಿಗಳ ಪ್ರತಿ ತೆಗೆದುಕೊಂಡು ಬಂದಿದ್ದಾರಾ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದಾಗ, ಎಸ್‌ಪಿಪಿ ಪ್ರಸನ್ನ ಕುಮಾರ್ ಎರಡು ದಿನಗಳಲ್ಲಿ ನೀಡುತ್ತೇವೆ ಎಂದರು. ಆಗ ಆರೋಪಿಗಳ ಪರ ವಕೀಲರು ‌ ಡಿಜಿಟಲ್ ಎವಿಡೆನ್ಸ್ ತಡವಾಗಿ ಬೇಕಾದರೂ ನೀಡಲಿ, ಆದರೆ ಚಾರ್ಜ್ ಶೀಟ್ ಇವತ್ತು ನೀಡಲಿ ಎಂದು ಮನವಿ ಮಾಡಿದರು. ಹೀಗಾಗಿ ಪೇಪರ್ ಚಾರ್ಜ್ ಶೀಟ್ ಅನ್ನು ಇವತ್ತು ನೀಡಿ, ಡಿಜಿಟಲ್ ಎವಿಡೆನ್ಸ್‌ ಅನ್ನು ಎರಡು ವಾರಗಳಲ್ಲಿ ಆರೋಪಿಗಳ ಕಾಪಿ ನೀಡುವಂತೆ ಎಸ್‌ಪಿಪಿ ಪ್ರಸನ್ನ ಕುಮಾರ್‌ಗೆ ನ್ಯಾಯಾಧೀಶರು ಸೂಚನೆ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿಯ ಎದೆ ಮೇಲೆ ಕಾಲಿಟ್ಟು, ಕಿವಿ ಹೊಸಕಿ, ಮರ್ಮಾಂಗ ತುಳಿದ್ರಾ! ನಟ ದರ್ಶನ್‌ ತಪ್ಪೊಪ್ಪಿಗೆ!

Actor Darshan : ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪೊಪ್ಪಿಗೆ ಮಾಡಿದ್ದಾರೆ. ಜತೆಗೆ ದರ್ಶನ್‌ ಗ್ಯಾಂಗ್‌ ವಿರುದ್ಧ ಸುಮಾರು 11ಸೆಕ್ಷನ್‌ ಅಡಿ ಕೇಸ್‌ ದಾಖಲಿಸಿದ್ದಾರೆ. ಕೊಲೆ ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿಯುವ ಸಾಧ್ಯತೆ ಇದೆ.

VISTARANEWS.COM


on

By

Actor Darshan
Koo

ಬೆಂಗಳೂರು: ದರ್ಶನ್‌ ಆ್ಯಂಡ್‌ ಗ್ಯಾಂಗ್‌ನಿಂದ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ನಾನೇನು‌ ಮಾಡಿಲ್ಲ ಸರ್,.. ನಮ್ಮ ಹುಡುಗರು ಏನೋ ಮಾಡಿದ್ದಾರೆ ಸರ್ ನನಗೆ ಏನು ಗೊತ್ತಿಲ್ಲ ಎಂದಿದ್ದನಂತೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತು ದರ್ಶನ್ ತಪ್ಪೊಪ್ಪಿಗೆ ಕುರಿತು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ನಟ ದರ್ಶನ್ ಪ್ರಾರಂಭದ ತನಿಖಾ ಹಂತದಲ್ಲಿ ತಾನೇನು ಮಾಡಿಲ್ಲ ಎನ್ನುತ್ತಿದ್ದರು. ಆದರೆ ಸಾಕ್ಷಿ ಸಮೇತ ಪೊಲೀಸರು ದರ್ಶನ್‌ನ ವಿಚಾರಣೆ ಮಾಡಿದಾಗ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾರೆ. ಶೂ ಕಾಲಿನಲ್ಲಿ ರೇಣುಕಾ ಸ್ವಾಮಿ ಎದೆ ಮೇಲೆ ಕಾಲಿಟ್ಟಿದ್ದಾಗಿ, ಎಡಗಿವಿಯನ್ನು ಹೊಸಕಿದ್ದು ಹಾಗೂ ಮರ್ಮಾಂಗದ ಮೇಲೆ ಕಾಲಿಟ್ಟು ತುಳಿದ ಬಗ್ಗೆ ತಪ್ಪೊಪ್ಪಿಗೆ ಮಾಡಿದ್ದಾರೆ.

ದರ್ಶನ್ ಹೇಳಿಕೆಗೆ ಪೂರಕವಾಗಿ ರೇಣುಕಾಸ್ವಾಮಿ ಪಕ್ಕೆಲಬು ಮುರಿದಿತ್ತು. ವೃಷಣಕ್ಕು ಹಾನಿಯಾಗಿರೋದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಜತೆಗೆ ರೇಣುಕಾಸ್ವಾಮಿಗೆ ಒಂಟಿ ವೃಷಣವಿರುವ ಇರುವ ಸಂಗತಿಯು ಬೆಳಕಿಗೆ ಬಂದಿದೆ. ಅದನ್ನು ರೇಣುಕಾಸ್ವಾಮಿಯ ತಾಯಿಯೂ ದೃಢಪಡಿಸಿದ್ದಾರೆ. ಹುಟ್ಟಿನಿಂದಲೇ ಒಂಟಿ‌ ವೃಷಣ ವೈಫಲ್ಯದಿಂದ ರೇಣುಕಾಸ್ವಾಮಿ ಜನಿಸಿದ್ದ. ತನಿಖಾಧಿಕಾರಿಗಳು ಎಲ್ಲವನ್ನೂ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ದರ್ಶನ್‌ ಆ್ಯಂಡ್‌ ಗ್ಯಾಂಗ್‌ ವಿರುದ್ಧ 11ಸೆಕ್ಷನ್‌ ಅಡಿ ಕೇಸ್‌

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳ ವಿರುದ್ಧ 11 ಸೆಕ್ಷನ್ ಅಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 120B, 364, 384,355,302, 201,143,147,148,149,34 ಸೆಕ್ಷನ್ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 120B ಒಳ ಸಂಚು, 364 ಕಿಡ್ನ್ಯಾಪ್ , 384 ಸುಲಿಗೆ, 355 ಒತ್ತಡ ಹಾಕಿ ಹತ್ಯೆ, 302 ಕೊಲೆ, 201 ಸಾಕ್ಷ್ಯನಾಶ, 143 ಕಾನೂನು ಬಾಹಿರ ಸಭೆ, 147 ಗಲಭೆ, 148, ಮಾರಕಾಸ್ತ್ರ ಬಳಕೆ, 149 ಗುಂಪಿನಲ್ಲಿ ಹಲ್ಲೆ ಮಾಡಿರುವುದು, 34 ಗ್ಯಾಂಗ್‌ನ ಉದ್ದೇಶ ಒಂದೆ ಆಗಿತ್ತು. ಕೋರ್ಟ್‌ನ ಅಧಿಕೃತ ವೆಬ್ ಸೈಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ: Renuka swamy murder : ಟೀ ಕುಡಿಯಲು ಹೋದವನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌

ನ್ಯಾಯಾಂಗ ಬಂಧನ ಮುಂದುವರಿಯುವ ಸಾಧ್ಯತೆ

ನಟ ದರ್ಶನ್ ಪಾಲಿಗೆ ಸೋಮವಾರ ಬಿಗ್ ಡೇ ಆಗುತ್ತಾ. ಯಾಕೆಂದರೆ ಇಂದು ದರ್ಶನ್‌ಗೆ ಸಂಬಂಧಿಸಿದ ಎರಡು ಕೇಸ್‌ಗಳು ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಸೆ.9ರಂದು ದರ್ಶನ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದೆ. ಜತೆಗೆ ಹೈಕೋರ್ಟ್‌ನಲ್ಲಿ ದರ್ಶನ್ ಊಟದ ಅರ್ಜಿ ವಿಚಾರಣೆಯೂ ನಡೆಯಲಿದೆ. ಇದರೊಟ್ಟಿಗೆ ಜಾಮೀನು ಕೋರಿ ದರ್ಶನ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಈ ಮೂರು ವಿಚಾರಗಳಿಂದ ನಟ ದರ್ಶನ್‌ಗೆ ಬಿಗ್ ಡೇ ಆಗಿರಲಿದೆ.

ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಲಿದೆ. ಎಲ್ಲ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ. ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರು ಮನವಿ ಮಾಡಲಿದ್ದಾರೆ.

ಬಳ್ಳಾರಿ ಜೈಲಿನಿಂದ ನಟ ದರ್ಶನ್, ಮೈಸೂರು ಜೈಲಿನಿಂದ ಪವನ್, ರಾಘವೇಂದ್ರ, ನಂದೀಶ್ ಹಾಗೂ ಶಿವಮೊಗ್ಗ ಜೈಲಿನಿಂದ ಜಗದೀಶ್- ಲಕ್ಷ್ಮಣ್, ಧಾರವಾಡ ಜೈಲಿನಿಂದ ಧನರಾಜ್, ವಿಜಯಪುರ ಜೈಲಿನಿಂದ ವಿನಯ್ ಸೇರಿದಂತೆ ಕಲಬುರಗಿ ಜೈಲಿನಿಂದ ನಾಗರಾಜ್, ಬೆಳಗಾವಿ ಜೈಲಿನಿಂದ ಪ್ರದೂಷ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ಅನುಕುಮಾರ್, ದೀಪಕ್ ಹಾಜರಾಗಲಿದ್ದಾರೆ.

ಊಟದ ಅರ್ಜಿ ವಿಚಾರಣೆ

ಇನ್ನು ಮನೆ ಊಟ ಕೋರಿ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯಲಿದೆ. ಈಗಾಗಲೇ ದರ್ಶನ್ ಮನೆ ಊಟದ ಮನವಿಗೆ ಅಧಿಕಾರಿಗಳು ಕೊಕ್ಕೆ‌ ಹಾಕಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಕೋರ್ಟ್ ಗೆ ವರದಿ ಸಲ್ಲಿಕೆ ಮಾಡಲಿದ್ದಾರೆ.

ಜಾಮೀನು ಅರ್ಜಿ ಸಾಧ್ಯತೆ

ಇಂದು ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಜಾಮೀನು ಕೋರಿ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
kodi swamiji bhavishya
ಹಾಸನ22 seconds ago

Kodi Mutt Swamiji: ಮತ್ತೆ ಪ್ರಕೃತಿ ವಿಕೋಪಗಳು ಸಂಭವಿಸುತ್ತೆ;ಸರ್ಕಾರಕ್ಕೆ ಕಂಟಕನಾ! ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

Ibbani thabbida ileyali Film Review by Shivaraj DNS
ಸ್ಯಾಂಡಲ್ ವುಡ್1 hour ago

Ibbani thabbida ileyali :ಇಬ್ಬನಿ ತಬ್ಬಿದ ಇಳೆಯಲಿ; ಪ್ರೇಮಕಾವ್ಯವನ್ನು ತಬ್ಬಿದ ನಿರ್ದೇಶಕ-ತಬ್ಬಿಬ್ಬಾದ ಪ್ರೇಕ್ಷಕ

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ವಿವಾದ ಆಲಿಸಿ ಸೆ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

murder case
ಬೆಂಗಳೂರು ಗ್ರಾಮಾಂತರ4 hours ago

Murder Case : ಚಾಕುವಿನಿಂದ ಹೆತ್ತವಳ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಪಿ ಮಗ

actor darshan and gang
ಬೆಂಗಳೂರು5 hours ago

Actor Darshan: ನಟ ದರ್ಶನ್‌ ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ; ಕೋರ್ಟ್‌ಗೆ ಡಿಜಿಟಲ್‌ ಎವಿಡೆನ್ಸ್‌ ಸಲ್ಲಿಸಿದ ತನಿಖಾಧಿಕಾರಿಗಳು

Actor Darshan
ಸಿನಿಮಾ6 hours ago

Actor Darshan : ರೇಣುಕಾಸ್ವಾಮಿಯ ಎದೆ ಮೇಲೆ ಕಾಲಿಟ್ಟು, ಕಿವಿ ಹೊಸಕಿ, ಮರ್ಮಾಂಗ ತುಳಿದ್ರಾ! ನಟ ದರ್ಶನ್‌ ತಪ್ಪೊಪ್ಪಿಗೆ!

Road Accident
ತುಮಕೂರು7 hours ago

Road Accident : ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

karnataka weather Forecast
ಮಳೆ13 hours ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ತಲೆದೋರಲಿದೆ; ಹೂಡಿಕೆ ವ್ಯವಹಾರಗಳನ್ನು ಮಾಡ್ಬೇಡಿ

Actress Ramya
ಸ್ಯಾಂಡಲ್ ವುಡ್22 hours ago

Actress Ramya : ಮೋಹಕ ತಾರೆ ನಟಿ ರಮ್ಯಾಗೆ ಕೂಡಿ ಬಂತಾ ಕಂಕಣ ಭಾಗ್ಯ? ನವೆಂಬರ್‌ನಲ್ಲಿ ಮದುವೆ ಫಿಕ್ಸಾ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 week ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌