Mysuru Rave Party: ಮೈಸೂರಿನ ಮೀನಾಕ್ಷಿಪುರದ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸುತ್ತಿದ್ದ 50 ಮಂದಿ ಅರೆಸ್ಟ್‌ - Vistara News

ಮೈಸೂರು

Mysuru Rave Party: ಮೈಸೂರಿನ ಮೀನಾಕ್ಷಿಪುರದ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸುತ್ತಿದ್ದ 50 ಮಂದಿ ಅರೆಸ್ಟ್‌

Mysuru Rave Party: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂದರ್ಭದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

VISTARANEWS.COM


on

Mysuru Rave Party 50 arrested for organising rave party at Meenakshipura farm
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಮೈಸೂರು ತಾಲೂಕಿನ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿರುವ ಮೀನಾಕ್ಷಿಪುರದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ (Mysuru Rave Party) ಪೊಲೀಸರು ದಾಳಿ ನಡೆಸಿದ್ದಾರೆ. ಇಲವಾಲ ಪಿಎಸ್ಐ ಮಂಜುನಾಥ ನಾಯಕ್ ಅವರ ನೇತೃತ್ವದಲ್ಲಿ ನಡೆದ ಪೊಲೀಸರ ದಾಳಿಯಲ್ಲಿ ಐವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಮಾದಕ ವಸ್ತುಗಳನ್ನು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ 15ಕ್ಕೂ ಹೆಚ್ಚು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ.

ರೇವ್ ಪಾರ್ಟಿ ನಡೆದಿರುವುದು ನಿಜವೆಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ. ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ಮಾಡಿ, ಸುಮಾರು 50 ಜನರನ್ನು ಅರೆಸ್ಟ್ ಮಾಡಿದ್ದೇವೆ. ಪಾರ್ಟಿ ಜಾಗದಲ್ಲಿ ಹಾಗೂ ವಶಕ್ಕೆ ಪಡೆದವರ ಬಳಿ ಮಾದಕ ವಸ್ತುಗಳು ಕಂಡುಬಂದಿಲ್ಲ. ಈಗಲೂ ಶೋಧ ಕಾರ್ಯ ಮುಂದುವರಿಸಿದ್ದೇವೆ. ಬಂಧಿತರ ರಕ್ತ ಪರೀಕ್ಷೆ ಮಾಡಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದೇವೆ. ವಿದೇಶಿಯರು ಪಾಲ್ಗೊಂಡ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ. ಯಾರು ಪಾರ್ಟಿ ಆಯೋಜಿಸಿದ್ದರು, ಹೇಗೆ ಆಯೋಜಿಸಿದ್ದರು, ಮಾದಕ ವಸ್ತು ಬಳಸಿದ್ದರೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಮೈಸೂರು ಎಸ್‌ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

CM Siddaramaiah : ಸಿದ್ದರಾಮಯ್ಯರಿಗೆ ಟೆನ್ಶನ್ ಶುರು; ಸ್ವಪಕ್ಷ- ವಿಪಕ್ಷ ನಾಯಕರ ನಡೆ- ನುಡಿಗಳ ಮೇಲೆ ಕಣ್ಣಿಡುವ ಸ್ಥಿತಿ

CM Siddaramaiah : ಸಿಎಂ ಸಿದ್ದರಾಮಯ್ಯರಿಗೆ ಟೆನ್ಶನ್ ಶುರುವಾಗಿದ್ದು, ಸ್ವಪಕ್ಷ- ವಿಪಕ್ಷ ನಾಯಕರ ನಡೆ- ನುಡಿಗಳ ಮೇಲೆ ಕಣ್ಣಿಡುವ ಸ್ಥಿತಿ ಎದುರಾಗಿದೆ.

VISTARANEWS.COM


on

By

CM Siddaramaiah eye on the actions leaders of the opposition
Koo

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿಎಂ ವಿರುದ್ಧದ ಪ್ರಾಥಮಿಕ ಹಂತದ ತ‌ನಿಖೆಗೆ ಹೈಕೋರ್ಟ್‌ ಅಸ್ತು ಎಂದಿತ್ತು. ಮುಡಾದ ಭೂಕಬಳಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ A1 ಆರೋಪಿ (CM Siddaramaiah) ಆಗಿದ್ದು, ಐಪಿಸಿ ಸೆಕ್ಷನ್ 420, 120B, 166, 403,126, 465,468, 340, 351 ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಇತ್ತ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಟೆನ್ಶನ್ ಹೆಚ್ಚಾಗಿದೆ. ಸ್ವಪಕ್ಷ- ವಿಪಕ್ಷ ನಾಯಕರ ನಡೆ- ನುಡಿಗಳ ಮೇಲೆ ಕಣ್ಣಿಡುವ ಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ಹಾಕಿಸುವಲ್ಲಿ ವಿಪಕ್ಷಗಳು ಒಂದು ಹಂತದ ಸಕ್ಸಸ್ ಆಗಿವೆ. ಇತ್ತ ರಾಜಕೀಯವಾಗಿ ಸಿಎಂ ಬೆನ್ನಿಗೆ ನಾವಿದ್ದೇವೆ ಎಂದು ಶಾಸಕರು, ಸಚಿವರು ಹೈಕಮಾಂಡ್ ನಾಯಕರಿಂದ ಸಂದೇಶ ರವಾನೆ ಆಗಿದೆ. ಆದರೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ನಡೆಯುತ್ತಿರುವ ಚರ್ಚೆಯೇ ಬೇರೆ. ರಾಜಕೀಯದಲ್ಲಿ ಯಾರು ಸಹ ಸನ್ಯಾಸಿಗಳಲ್ಲ ಎನ್ನುವ ಪರಿಸ್ಥಿತಿ ಇದೆ.

ನಾಯಕರು ದಿನಕ್ಕೊಂದು ಹೇಳಿಕೆಗಳ ಮೂಲಕ ಪರೋಕ್ಷವಾಗಿ ಮುನ್ಸೂಚನೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಎನ್ನುವ ಚರ್ಚೆ ಇದೆ. ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ತನಿಖೆ ಬಳಿಕ ಮತ್ತೆ ಸಿಎಂ ಆಗಲಿ ಎಂದು ಕೆಬಿ ಕೋಳಿವಾಡ ಹೇಳಿದ್ದರು.

ಮತ್ತೊಂದು ಕಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಇಂದು ಇರಬಹುದು, ನಾಳೆ ಇಲ್ಲದೆಯೂ ಇರಬಹುದು. ಪಕ್ಷ ಶಾಶ್ವತವಾಗಿ ಮುಂದುವರೆಯುತ್ತದೆ ಎಂದಿದ್ದರು. ಇತ್ತ ಡಿಸಿಎಂ ಡಿಕೆ ಶಿವಕುಮಾರ್‌ ಪರೋಕ್ಷವಾಗಿ ಸಿಎಂ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ. ನಾನು ರಾಜ್ಯದ ಸೇವೆ ಮಾಡಬೇಕೆಂದು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ರಾಜ್ಯದ ಸೇವೆ ಮಾಡಲು ನನ್ನ ಹೋರಾಟ ನಡೆಯುತ್ತಿದೆ. ಹೀಗೆ ಹೇಳಿದರೆ ಮಾಧ್ಯಮದವರು ಬೇರೆ ರೀತಿ ಬಿಂಬಿಸುತ್ತಾರೆ. ಯಾರು ಏನು ಬೇಕಾದರೂ ಬಿಂಬಿಸಲಿ ಸೇವೆ ಮಾಡ್ತೇನೆ ಎಂದಿದ್ದರು.

ಮುಡಾ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ

ಮುಡಾ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ನಾನು ಕಾನೂನು, ರಾಜಕೀಯ ಹೋರಾಟ ಮಾಡ್ತೇನೆ. ಪ್ರತಿಪಕ್ಷಗಳಿಗೆ ಪ್ರತ್ಯುತ್ತರ ನೀವು ಕೊಡಿ ಎಂದು ಆಪ್ತ ಶಾಸಕರು, ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ, ಜೆಡಿಎಸ್- ವಿರುದ್ಧ ಮುಗಿಬಿದ್ದಿದ್ದರುವ ನಾಯಕರು ಮೋದಿ, ಅಮಿತ್ ಶಾ , ಎಚ್‌ಡಿ ಕುಮಾರಸ್ವಾಮಿ ಆರೋಪಗಳು ಕೇಳಿ ಬಂದಾಗ ರಾಜೀನಾಮೆ ಕೊಟ್ರಾ ಎಂದು ಕೈ ನಾಯಕರು ಪ್ರಶ್ನೆ ಮಾಡುತ್ತಿದ್ದಾರೆ.

ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಲೋಕಾಯುಕ್ತ ಪೊಲೀಸರು

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಇಂದು ಭಾನುವಾರ ರಜೆ, ನಾಳೆ ಸೋಮವಾರ ಸಿಎಂ ಕಾನೂನು ನಡೆ ಬಹಿರಂಗವಾಗಲಿದೆ. ಹೀಗಾಗಿ ಎಚ್ಚರಿಕೆಯಿಂದ ಮುಂದಿನ ಹೆಜ್ಜೆ ಇಡಲು ಚಿಂತನೆ ನಡೆದಿದೆ. ಭಾನುವಾರದ ರಜೆ ದಿನವಾದ ಕಾರಣ ಕಚೇರಿಗೆ ಬೀಗ ಹಾಕಲಾಗಿದೆ. ಇಂದು ಅಧಿಕಾರಿಗಳು ಕಚೇರಿಗೆ ಬರೋದು ಅನುಮಾನವಾಗಿದೆ.

ಒಂದೆಡೆ ಲೋಕಾಯುಕ್ತ ತನಿಖೆ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಲಿದ್ದು, ತನಿಖೆಯನ್ನು ಸಿಬಿಐ ವಹಿಸುವಂತೆ ಕೋರ್ಟ್‌ಗೆ ಮನವಿ ಮಾಡಲಿದ್ದಾರೆ. ಮತ್ತೊಂದೆಡೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

Continue Reading

ಪ್ರಮುಖ ಸುದ್ದಿ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ (Rain News) ಜೋರಾಗಿ ಇರಲಿದೆ.. ದಕ್ಷಿಣ ಒಳನಾಡಿನಲ್ಲಿ ಲಘುವಾಗಿ ಸಾಧಾರಣ ಮಳೆಯೊಂದಿಗೆ ವ್ಯಾಪಕವಾಗಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast ) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸುಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗಾಳಿ ಸಹಿತ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಲ್ಲಿ ಎತ್ತಿನ ಬಂಡಿ ಸಮೇತ ನದಿಯಲ್ಲಿ ಕೊಚ್ಚಿಕೊಂಡು ಹೋದ ರೈತ

ಕಲಬುರಗಿ‌ ಜಿಲ್ಲೆಯಾದ್ಯಂತ ವರುಣನ‌ ಆರ್ಭಟ ಜೋರಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಇರಗಪಳ್ಳಿ ಬಳಿಯ ಭೋಗಾವತಿ ನದಿಯಲ್ಲಿ ಎತ್ತಿನ ಬಂಡಿ ಸಮೇತ ರೈತ ಕೊಚ್ಚಿಕೊಂಡು ಹೋಗಿದ್ದಾರೆ. ನದಿಯಿಂದ ನೀರು ತರಲು ಹೋಗಿದ್ದ ರೈತ ಅಮೃತ್ ನೀರಿನ‌ ರಭಸಕ್ಕೆ ಕೊಚ್ಚಿ‌ಹೋಗುತ್ತಿದ್ದ ವೇಳೆ ಡ್ರಮ್ ಮೂಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ರೈತ ಅಮೃತ್ ಬಚಾವ್ ಆದರೆ, ಎರಡು ಎತ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋಲಾರ

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

Self Harming : ಹೆಂಡತಿ ಮನೆಯವರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣಾಗಿದ್ದಾರೆ.

VISTARANEWS.COM


on

By

Self Harming
Koo

ಕೋಲಾರ : ಪತ್ನಿ ಮನೆಯವರ ಕಿರುಕುಳಕ್ಕೆ ಬೇಸತ್ತು (Family Dispute) ವ್ಯಕ್ತಿಯೊಬ್ಬ ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ತನ್ನ ಪತ್ನಿ ಮನೆಯವರ ವಿರುದ್ಧ ವಿಡಿಯೊ ಮಾಡಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಮುದುವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ರೀಕಾಂತ್ (31) ಮೃತ ದುರ್ದೈವಿ.

ತನ್ನ ಪತ್ನಿ ಪಾವನ ಹಾಗೂ ಅವರ ತಂದೆ ತರಕಾರಿ ಯಲ್ಲಪ್ಪ ಕುಟುಂಬಸ್ಥರಿಂದ ಕಿರುಕುಳ ಹಾಗೂ ಜೀವ ಬೆದರಿಕೆ‌ ಇದೆ ಎಂದು ಆರೋಪಿಸಲಾಗಿದೆ. ಶ್ರೀಕಾಂತ್ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Self Harming
Self Harming

ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಮಹದೇವಸ್ವಾಮಿ (25) ಮೃತ ದುರ್ದೈವಿ. ನರಸೀಪುರ ಪಟ್ಟಣದ ಹೆಳವರಹುಂಡಿ ಗ್ರಾಮದ ನಿವಾಸಿ ಮಹದೇವಸ್ವಾಮಿ ಕಳೆದ 21ರಂದು ಮನೆಯಿಂದ ಹೊರ ಹೋದವರು ವಾಪಾಸ್ ಮನೆಗೆ ಬಂದಿರಲಿಲ್ಲ.

ಈ ಸಂಬಂಧ ನರಸೀಪುರ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದರು. ಇದೀಗ ಮಹದೇವಸ್ವಾಮಿ ಶವ ಪತ್ತೆಯಾಗಿದ್ದಾರೆ. ಮಹದೇವಸ್ವಾಮಿಗೆ ಐದು ತಿಂಗಳ ಹಿಂದೆ ಹೃದಯಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ಬಳಿಕ ತೀವ್ರ ಎದೆ ನೋವು ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಹದೇವಸ್ವಾಮಿ ತಂದೆ ನಾಗಣ್ಣ ಹೇಳಿಕೆ ನೀಡಿದ್ದಾರೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Accident case
ರಾಯಚೂರು49 ಸೆಕೆಂಡುಗಳು ago

Accident Case : ಪಂಪ್‌ ಸೆಟ್‌ ದುರಸ್ತಿ ವೇಳೆ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಕೆಲಸ ಮಾಡುತ್ತಿದ್ದಾಗಲೇ ನೌಕರನ ಹೃದಯ ಸ್ತಬ್ಧ

Mysuru Rave Party 50 arrested for organising rave party at Meenakshipura farm
ಮೈಸೂರು1 ಗಂಟೆ ago

Mysuru Rave Party: ಮೈಸೂರಿನ ಮೀನಾಕ್ಷಿಪುರದ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸುತ್ತಿದ್ದ 50 ಮಂದಿ ಅರೆಸ್ಟ್‌

Road Accident
ತುಮಕೂರು2 ಗಂಟೆಗಳು ago

Road Accident : ಕಳ್ಳನನ್ನ ಹಿಡಿಯಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಪೊಲೀಸರು; ಸ್ಟೇರಿಂಗ್ ಲಾಕ್ ಆಗಿ ಪಲ್ಟಿ ಹೊಡೆದ ಕಾರು

theft case
ತುಮಕೂರು3 ಗಂಟೆಗಳು ago

Theft Case : ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 1 ಕೋಟಿ ರೂ. ಜತೆಗೆ ಚಿನ್ನಾಭರಣ ದೋಚಿದ ಕಳ್ಳರು!

CM Siddaramaiah eye on the actions leaders of the opposition
ರಾಜಕೀಯ3 ಗಂಟೆಗಳು ago

CM Siddaramaiah : ಸಿದ್ದರಾಮಯ್ಯರಿಗೆ ಟೆನ್ಶನ್ ಶುರು; ಸ್ವಪಕ್ಷ- ವಿಪಕ್ಷ ನಾಯಕರ ನಡೆ- ನುಡಿಗಳ ಮೇಲೆ ಕಣ್ಣಿಡುವ ಸ್ಥಿತಿ

karnataka weather Forecast
ಪ್ರಮುಖ ಸುದ್ದಿ9 ಗಂಟೆಗಳು ago

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Dina Bhavishya
ಭವಿಷ್ಯ9 ಗಂಟೆಗಳು ago

Dina Bhavishya : ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಉದ್ಯೋಗಿಗಳಿಗೆ ಕೆಲಸದಲ್ಲಿ ನಿರಾಳತೆ

Actor darshan
ಪ್ರಮುಖ ಸುದ್ದಿ20 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು20 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ21 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌