Karnataka Weather : ಮಲೆನಾಡಿನಲ್ಲಿ ಅಬ್ಬರಿಸುವ ಮಳೆ; ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌ - Vistara News

ಪ್ರಮುಖ ಸುದ್ದಿ

Karnataka Weather : ಮಲೆನಾಡಿನಲ್ಲಿ ಅಬ್ಬರಿಸುವ ಮಳೆ; ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಮಳೆ ಅಬ್ಬರಿಸಲಿದ್ದು, ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

VISTARANEWS.COM


on

Karnataka weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

ಆರೆಂಜ್‌ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವು ಕನ್ಯಾರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 19:05 ವಾರ: ಸೋಮವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 33:15 ಯೋಗ: ಶುಭ 25:16
ಕರಣ: ವಾಣಿಜ 19:05 ಅಮೃತಕಾಲ: ಮಧ್ಯರಾತ್ರಿ 02:05 ರಿಂದ 03:52
ದಿನದ ವಿಶೇಷ: ಸೋಮ ಪ್ರದೋಷ

ಸೂರ್ಯೋದಯ : 06:09   ಸೂರ್ಯಾಸ್ತ : 06:10

ರಾಹುಕಾಲ: ಬೆಳಗ್ಗೆ 07:39 ರಿಂದ 09:09
ಗುಳಿಕಕಾಲ: ಮಧ್ಯಾಹ್ನ 01:40ರಿಂದ
03:10
ಯಮಗಂಡಕಾಲ: ಬೆಳಗ್ಗೆ
10:39 ರಿಂದ 12:09

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತತರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ, ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ರಾಜಕೀಯ

Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

Mallikarjun Kharge: ಚುನಾವಣಾ ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

By

Mallikarjun Kharge falls ill on stage while delivering his speech
Koo

ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ್‌ ಖರ್ಗೆ (Mallikarjun Kharge) ವೇದಿಕೆ ಮೇಲೆಯೇ ತೀವ್ರ ಅಸ್ವಸ್ಥಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಕಥುವಾನಲ್ಲಿ ಚುನಾವಣೆ ಪ್ರಚಾರದ ಭಾಗವಾಗಿ ಭಾಷಣ ಮಾಡುತ್ತಿದ್ದ ವೇಳೆ 83 ವರ್ಷದ ಮಲ್ಲಿಕಾರ್ಜುನ್‌ ಖರ್ಗೆ ಅಸ್ವಸ್ಥಗೊಂಡಿದ್ದರು. ಭಾಷಣ ಮಾಡಲಾಗದೆ ಕುಸಿಯುತ್ತಿರುವುದನ್ನು ಗಮನಿಸಿದ ಕಾಂಗ್ರೆಸ್‌ ನಾಯಕರು ಖರ್ಗೆ ನೆರವಿಗೆ ಧಾವಿಸಿದ್ರು. ನೀರು ಕುಡಿದು ಸುಧಾರಿಸಿಕೊಂಡ ಮಲ್ಲಿಕಾರ್ಜುನ್‌ ಖರ್ಗೆ ತಮ್ಮ ಭಾಷಣವನ್ನು ಮುಂದುವರಿಸಿದರು. ವಿಶ್ರಾಂತಿ ಇಲ್ಲದೇ ನಿರಂತರವಾಗಿ ಪಕ್ಷದ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಆಯಾಸಗೊಂಡಿದ್ದರು ಎನ್ನಲಾಗಿದೆ. ಚುನಾವಣೆ ನಿಮಿತ್ತ ರ‍್ಯಾಲಿಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಅಸ್ವಸ್ಥಗೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಕೊನೆಯ ಹಂತದ ಚುನಾವಣೆಯ ಕಸರತ್ತು ನಡೆದಿದೆ. ಅಕ್ಟೋಬರ್‌ 1ರಂದು ಮೂರನೇ ಹಂತದ ಮತದಾನವು ನಡೆಯಲಿದೆ. ಈ ಕೊನೆ ಹಂತದ ಚುನಾವಣೆಯಲ್ಲಿ 40 ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಭಾರಿ ಪೈಪೋಟಿ ಇದ್ದು, ಮೂರನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದೆ. ನಾಳೆಯಿಂದ ಪಕ್ಷಗಳು ಮನೆ ಮನೆ ಪ್ರಚಾರ ನಡೆಸಲಿವೆ. ಮೊದಲೆರಡು ಹಂತದ ಚುನವಾಣೆಗಳು ಶಾಂತಿಯುತವಾಗಿ ನಡೆದಿದೆ. ಹೀಗಾಗಿ ಕೊನೆಯ ಹಂತದ ಚುನಾವಣೆ ಕೂಡ ಶಾಂತಿಯುತವಾಗಿ ನಡೆಸಲು ಪೊಲೀಸರು, ಚುನಾವಣಾ ಆಯೋಗದಿಂದ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Continue Reading

ಬೆಂಗಳೂರು

Actor Darshan :‌ ಜೈಲಿನಲ್ಲಿ ನೂರು ದಿನ ಕಳೆದ ನಟ ದರ್ಶನ್‌ಗೆ ನಾಳೆ‌ ಸಿಗುತ್ತಾ ಜಾಮೀನು

Actor Darshan :‌ ಜೈಲಿನಲ್ಲಿ ನೂರು ದಿನ ಕಳೆದಿರುವ ನಟ ದರ್ಶನ್‌ಗೆ ನಾಳೆ‌ ಸೋಮವಾರ ಜಾಮೀನು ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

VISTARANEWS.COM


on

By

Actor Darshan who spent 100 days in jail will get bail tomorrow
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder case) ನಟ ದರ್ಶನ್ (Actor Darshan) ಜೈಲು ಸೇರಿ ಇಂದಿಗೆ (ಸೆ.29ಕ್ಕೆ) 100 ದಿನಗಳಾಗಿವೆ. ಪರಪ್ಪನ ಅಗ್ರಹಾರದಿಂದ ಸ್ಥಳಾಂತರಗೊಂಡು ಬಳ್ಳಾರಿ ಜೈಲಿನಲ್ಲಿ ಸೆರೆಮನೆ ವಾಸ ಅನುಭವಿಸಿದ ದರ್ಶನ್, ನೂರು ದಿನ ಎರಡು ಜೈಲಿನಲ್ಲಿ ಕಳೆದಿದ್ದು, ಈಗ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಹಾಗಾದರೆ ದರ್ಶನ್ ಪಾಲಿಗೆ ಕಳೆದ ನೂರು ದಿನ ಹೇಗಿತ್ತು?

ಗೆಳತಿ ಪವಿತ್ರಾಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ಸಿಟ್ಟಾದ ನಟ ದರ್ಶನ್‌ ಮತ್ತು‌ ಗ್ಯಾಂಗ್‌ ಪಟ್ಟಣಗೆರೆ ಶೆಡ್‌ಗೆ ಕಿಡ್ನ್ಯಾಪ್‌ ಮಾಡಿಕೊಂಡು ಬಂದು ಹತ್ಯೆ ನಡೆಸಿದ್ದರು. ಬಳಿಕ ಮೃತದೇಹವನ್ನು ಸುಮನಹಳ್ಳಿ ಬ್ರಿಡ್ಜ್‌ ಸಮೀಪದ ರಾಜಕಾಲುವೆಯಲ್ಲಿ ಬಿಸಾಡಿ ಹೋಗಿದ್ದರು. ಈ ಸಂಬಂಧ ತನಿಖೆಗಿಳಿದಾಗ ನಟ ದರ್ಶನ್‌ ಕೈವಾಡ ಇರುವುದು ತಿಳಿದುಬಂದಿತ್ತು. ಹೀಗಾಗಿ ಕಳೆದ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ಬಂಧಿಸಿ ವಿಚಾರಣೆ ನಡೆಸಿದ್ದರು. ಸುಮಾರು 12 ದಿನ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ, ತನಿಖೆ ಎದುರಿಸಿದ್ದ ದರ್ಶನ್‌ನನ್ನು ಜೂನ್ 22 ರಂದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.

ಜೂನ್ 22ರಂದು ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್‌ನ ಪರಪ್ಪನ ಅಗ್ರಹಾರ ಜೈಲಿಗೆ ಬಿಟ್ಟು ಬಂದಿದ್ದರು. ಅಂದಿನಿಂದ ನಟ ದರ್ಶನ್ ಜೈಲಿನಲ್ಲಿದ್ದು, ಸೆಂಚುರಿ ದಾಟಿದೆ. ಇನ್ನು ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಬಳಿಕ ರಾಜಾತಿಥ್ಯ ಪಡೆದ ವಿವಾದ ಕೂಡ ಎದುರಾಗಿತ್ತು. ರೌಡಿಶೀಟರ್‌ಗಳ ಜತೆಗೂಡಿ ರಾಜಾತಿಥ್ಯ ಪಡೆದ ಆರೋಪ ಎದುರಿಸಿದ ದರ್ಶನ್ ಮೇಲೆ ಎರಡು ಪ್ರತ್ಯೇಕ ಎಫ್ಐಆರ್‌ಗಳು ಕೂಡ ದಾಖಲಾಗಿತ್ತು.‌

ಇದನ್ನೂ ಓದಿ: Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

ಜೈಲಿನ ಲಾನ್‌ನಲ್ಲಿ‌ ಕುಳಿತು ಸಿಗರೇಟ್ ಸೇವನೆ ಹಾಗೂ ಆರೋಪಿ ಮೊಬೈಲ್‌ನಲ್ಲಿ ವಿಡಿಯೋ ಕರೆಯಲ್ಲಿ ಮಾತಾನಾಡಿದ್ದಕ್ಕೆ ದರ್ಶನ್ ವಿರುದ್ಧ ಎರಡು ಪ್ರತ್ಯೇಕ ಕೇಸ್ ದಾಖಲಿಸಿ ತನಿಖೆ ಕೂಡ ನಡೆಸಲಾಗಿತ್ತು. ಈ ಬೆನ್ನಲ್ಲೆ ಪೊಲೀಸರು ದರ್ಶನ್ ಮತ್ತು ಗ್ಯಾಂಗ್‌ನನ್ನು ಬೇರೆಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಆದೇಶಿಸಿತ್ತು.‌

ರಾಜಾತಿಥ್ಯ ಆರೋಪ ಎದುರಿಸಿದ್ದ ದರ್ಶನ್ ಗ್ಯಾಂಗ್ ಆಗಸ್ಟ್ 29 ರಂದು ಬಳ್ಳಾರಿ ಜೈಲುಗೆ ಶಿಫ್ಟ್ ಮಾಡಲಾಗಿತ್ತು. ಕಳೆದ 32 ದಿನಗಳಿಂದ ದರ್ಶನ್ ಬಳ್ಳಾರಿ ಜೈಲಿನಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ನಡುವೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಇದೇ ಸೋಮವಾರ ಅಂದರೆ ಸೆ.30ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ನೂರು ದಿನಗಳ ನಂತರ ನಟ ದರ್ಶನ್‌ಗೆ ಜಾಮೀನು ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Mysuru Rave Party: ಮೈಸೂರಿನ ಮೀನಾಕ್ಷಿಪುರದ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸುತ್ತಿದ್ದ 50 ಮಂದಿ ಅರೆಸ್ಟ್‌

Mysuru Rave Party: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂದರ್ಭದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

VISTARANEWS.COM


on

By

Mysuru Rave Party 50 arrested for organising rave party at Meenakshipura farm
Koo

ಮೈಸೂರು: ಮೈಸೂರು ತಾಲೂಕಿನ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿರುವ ಮೀನಾಕ್ಷಿಪುರದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ (Mysuru Rave Party) ಪೊಲೀಸರು ದಾಳಿ ನಡೆಸಿದ್ದಾರೆ. ಇಲವಾಲ ಪಿಎಸ್ಐ ಮಂಜುನಾಥ ನಾಯಕ್ ಅವರ ನೇತೃತ್ವದಲ್ಲಿ ನಡೆದ ಪೊಲೀಸರ ದಾಳಿಯಲ್ಲಿ ಐವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಮಾದಕ ವಸ್ತುಗಳನ್ನು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ 15ಕ್ಕೂ ಹೆಚ್ಚು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ.

ರೇವ್ ಪಾರ್ಟಿ ನಡೆದಿರುವುದು ನಿಜವೆಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ. ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ಮಾಡಿ, ಸುಮಾರು 50 ಜನರನ್ನು ಅರೆಸ್ಟ್ ಮಾಡಿದ್ದೇವೆ. ಪಾರ್ಟಿ ಜಾಗದಲ್ಲಿ ಹಾಗೂ ವಶಕ್ಕೆ ಪಡೆದವರ ಬಳಿ ಮಾದಕ ವಸ್ತುಗಳು ಕಂಡುಬಂದಿಲ್ಲ. ಈಗಲೂ ಶೋಧ ಕಾರ್ಯ ಮುಂದುವರಿಸಿದ್ದೇವೆ. ಬಂಧಿತರ ರಕ್ತ ಪರೀಕ್ಷೆ ಮಾಡಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದೇವೆ. ವಿದೇಶಿಯರು ಪಾಲ್ಗೊಂಡ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ. ಯಾರು ಪಾರ್ಟಿ ಆಯೋಜಿಸಿದ್ದರು, ಹೇಗೆ ಆಯೋಜಿಸಿದ್ದರು, ಮಾದಕ ವಸ್ತು ಬಳಸಿದ್ದರೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಮೈಸೂರು ಎಸ್‌ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

Continue Reading
Advertisement
Karnataka weather Forecast
ಪ್ರಮುಖ ಸುದ್ದಿ24 ಸೆಕೆಂಡುಗಳು ago

Karnataka Weather : ಮಲೆನಾಡಿನಲ್ಲಿ ಅಬ್ಬರಿಸುವ ಮಳೆ; ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌

Dina Bhavishya
ಭವಿಷ್ಯ15 ನಿಮಿಷಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ

Mallikarjun Kharge falls ill on stage while delivering his speech
ರಾಜಕೀಯ12 ಗಂಟೆಗಳು ago

Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

Actor Darshan who spent 100 days in jail will get bail tomorrow
ಬೆಂಗಳೂರು13 ಗಂಟೆಗಳು ago

Actor Darshan :‌ ಜೈಲಿನಲ್ಲಿ ನೂರು ದಿನ ಕಳೆದ ನಟ ದರ್ಶನ್‌ಗೆ ನಾಳೆ‌ ಸಿಗುತ್ತಾ ಜಾಮೀನು

Union Minister Pralhad Joshi slams Lokayukta ADGP for using pig word against HD Kumaraswamy
ಕರ್ನಾಟಕ14 ಗಂಟೆಗಳು ago

Pralhad Joshi : ಎಚ್‌ಡಿಕೆ ಬಗ್ಗೆ ಹಂದಿ ಪದ ಬಳಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗರಂ

Accident case
ರಾಯಚೂರು15 ಗಂಟೆಗಳು ago

Accident Case : ಪಂಪ್‌ ಸೆಟ್‌ ದುರಸ್ತಿ ವೇಳೆ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಕೆಲಸ ಮಾಡುತ್ತಿದ್ದಾಗಲೇ ನೌಕರನ ಹೃದಯ ಸ್ತಬ್ಧ

Mysuru Rave Party 50 arrested for organising rave party at Meenakshipura farm
ಮೈಸೂರು17 ಗಂಟೆಗಳು ago

Mysuru Rave Party: ಮೈಸೂರಿನ ಮೀನಾಕ್ಷಿಪುರದ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸುತ್ತಿದ್ದ 50 ಮಂದಿ ಅರೆಸ್ಟ್‌

Road Accident
ತುಮಕೂರು17 ಗಂಟೆಗಳು ago

Road Accident : ಕಳ್ಳನನ್ನ ಹಿಡಿಯಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಪೊಲೀಸರು; ಸ್ಟೇರಿಂಗ್ ಲಾಕ್ ಆಗಿ ಪಲ್ಟಿ ಹೊಡೆದ ಕಾರು

theft case
ತುಮಕೂರು18 ಗಂಟೆಗಳು ago

Theft Case : ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 1 ಕೋಟಿ ರೂ. ಜತೆಗೆ ಚಿನ್ನಾಭರಣ ದೋಚಿದ ಕಳ್ಳರು!

CM Siddaramaiah eye on the actions leaders of the opposition
ರಾಜಕೀಯ19 ಗಂಟೆಗಳು ago

CM Siddaramaiah : ಸಿದ್ದರಾಮಯ್ಯರಿಗೆ ಟೆನ್ಶನ್ ಶುರು; ಸ್ವಪಕ್ಷ- ವಿಪಕ್ಷ ನಾಯಕರ ನಡೆ- ನುಡಿಗಳ ಮೇಲೆ ಕಣ್ಣಿಡುವ ಸ್ಥಿತಿ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌