ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು - Vistara News

Latest

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಸುಸ್ಥಿರ ನಗರ ಜಲ ನಿರ್ವಹಣೆ ಮತ್ತು ಸರ್ಕ್ಯುಲರ್ ಎಕಾನಮಿ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿರುವ ಬೆಂಗಳೂರು ಜಲಮಂಡಳಿ ಕೊಳಚೆ ನೀರಿನ ತ್ಯಾಜ್ಯವನ್ನು (𝗦𝗲𝘄𝗮𝗴𝗲 𝗦𝗹𝘂𝗱𝗴𝗲) ಆದಾಯದ ಬೃಹತ್ ಮೂಲವಾಗಿ ಪರಿವರ್ತಿಸಲು ಸಜ್ಜಾಗಿದೆ.
ತನ್ನ ಐದು ಪ್ರಮುಖ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (𝗦𝗧𝗣𝘀) ಉತ್ಪತ್ತಿಯಾಗುವ ಕಚ್ಚಾ ಜೈವಿಕ ಅನಿಲವನ್ನು ಹೆಚ್ಚಿನ ಮೌಲ್ಯದ ಕಂಪ್ರೆಸ್ಡ್ ಬಯೋ-ಗ್ಯಾಸ್ (𝗖𝗼𝗺𝗽𝗿𝗲𝘀𝘀𝗲𝗱 𝗕𝗶𝗼-𝗚𝗮𝘀 – 𝗖𝗕𝗚) ಆಗಿ ಮೇಲ್ದರ್ಜೆಗೇರಿಸುವ ಮೂಲಕ, ಮಂಡಳಿಯು ಮುಂದಿನ ಎರಡು ದಶಕಗಳಲ್ಲಿ ಅಂದಾಜು 𝟭𝟮𝟬 ಕೋಟಿ ರೂ. (𝗜𝗡𝗥 𝟭𝟮𝟬 𝗖𝗿𝗼𝗿𝗲) ಹೆಚ್ಚುವರಿ ಆದಾಯವನ್ನು ಗಳಿಸಲಿದೆ. ಇದು ದೇಶದಲ್ಲೇ ತನ್ನದೇ ಮಾದರಿಯ ಮೊದಲ ಮತ್ತು ಅತಿದೊಡ್ಡ ಯೋಜನೆ ಆಗಿರುವುದರಿಂದ ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ ಎಂದು ಬೆಂಗಳೂರು ಜಲಮಂಡಲಿ ತಿಳಿಸಿದೆ.
ದೇಶದಲ್ಲಿ ಸೂರತ್‌ನಂತಹ ನಗರದಲ್ಲಿ ಕೇವಲ 𝟭𝟮𝟬 𝗠𝗟𝗗 ಸಾಮರ್ಥ್ಯದ ನೀರಿನ ಬಳಕೆಯೊಂದಿಗೆ ಇಂತಹ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದರೆ, 𝗕𝗪𝗦𝗦𝗕 ಬರೋಬ್ಬರಿ 𝟱𝟱𝟬 𝗠𝗟𝗗 ಸಾಮರ್ಥ್ಯದ ತ್ಯಾಜ್ಯ ನೀರಿನ ಬಳಕೆಯೊಂದಿಗೆ ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಇದಲ್ಲದೆ, ಈ ಸಾಮರ್ಥ್ಯವನ್ನು ಗರಿಷ್ಠಗೊಳಿಸಲು, ನಗರದಾದ್ಯಂತ ಎಲ್ಲಿ 𝗦𝗧𝗣 ಗಳಲ್ಲಿ ಬಯೋ-ಡೈಜೆಸ್ಟರ್‌ಗಳಿವೆಯೋ (𝗕𝗶𝗼-𝗱𝗶𝗴𝗲𝘀𝘁𝗲𝗿𝘀) ಅಲ್ಲೆಲ್ಲಾ ಈ ಅತ್ಯಾಧುನಿಕ ಯೋಜನೆಯನ್ನು ವಿಸ್ತರಿಸಲು ಮತ್ತು ಸ್ಥಾಪಿಸಲು ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ.
ಪ್ರಸ್ತುತ, ಈ 𝗦𝗧𝗣 ಗಳಲ್ಲಿ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ಸ್ಥಳೀಯ ವಿದ್ಯುತ್ ಉತ್ಪಾದನೆಗೆ ಬಳಸಲಾಗುತ್ತಿದೆ, ಹಾಗೂ ಒಂದು ಘಟಕದಲ್ಲಿ ಮಾತ್ರ ಸುಟ್ಟುಹಾಕಲಾಗುತ್ತಿದೆ. ಈ ಯೋಜನೆಯು ಕಚ್ಚಾ ಜೈವಿಕ ಅನಿಲವನ್ನು ನಗರ ಅನಿಲ ವಿತರಣಾ ಜಾಲ (𝗖𝗶𝘁𝘆 𝗚𝗮𝘀 𝗗𝗶𝘀𝘁𝗿𝗶𝗯𝘂𝘁𝗶𝗼𝗻 𝗡𝗲𝘁𝘄𝗼𝗿𝗸) ಗೆ ಪೂರೈಸಲು ಅಥವಾ ಶುದ್ಧ ಸಾರಿಗೆ ಇಂಧನವಾಗಿ ಬಳಸಲು ರಾಷ್ಟ್ರೀಯ ಮಾನದಂಡಗಳನ್ನು ಪೂರೈಸುವ 𝗖𝗕𝗚 ಆಗಿ ಉನ್ನತೀಕರಿಸಲು ಉದ್ದೇಶಿಸಿದೆ. ಕೇವಲ ವಿದ್ಯುತ್ ವೆಚ್ಚವನ್ನು ಸರಿದೂಗಿಸುವ ಬದಲು ಆದಾಯ-ಉತ್ಪಾದಿಸುವ ಜೈವಿಕ ಅನಿಲ ಪರಿವರ್ತನೆಗೆ ಬದಲಾಗುವ ಮೂಲಕ, 𝗕𝗪𝗦𝗦𝗕 ಗೆ ಒಟ್ಟಾರೆ ಅಂದಾಜು 𝟭𝟮𝟬 ಕೋಟಿ ರೂ. ಹೆಚ್ಚುವರಿ ಆದಾಯ ಬರುವ ನಿರೀಕ್ಷೆಯಿದೆ.
ಸಾರ್ವಜನಿಕ-ಖಾಸಗಿ ಸಹಭಾಗಿತ್ವ (𝗣𝘂𝗯𝗹𝗶𝗰-𝗣𝗿𝗶𝘃𝗮𝘁𝗲 𝗣𝗮𝗿𝘁𝗻𝗲𝗿𝘀𝗵𝗶𝗽 – 𝗣𝗣𝗣) ಮಾದರಿಯಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದ್ದು, ಖಾಸಗಿ ಪಾಲುದಾರರು ಸಂಪೂರ್ಣ 𝟴𝟱 ಕೋಟಿ ರೂ. ಬಂಡವಾಳ ವೆಚ್ಚದ ಜೊತೆಗೆ ಎಲ್ಲಾ ಕಾರ್ಯಾಚರಣೆ ಮತ್ತು ನಿರ್ವಹಣಾ ವೆಚ್ಚಗಳನ್ನು ಭರಿಸಲಿದ್ದಾರೆ. ಮಂಡಳಿಯು ಯೋಜನಾ ಕಾರ್ಯಾಚರಣೆಗಳಿಗಾಗಿ 𝗦𝗧𝗣 ಆವರಣದಲ್ಲಿ ಸರಿಸುಮಾರು 𝟭𝟯,𝟬𝟬𝟬 𝘀𝗾. 𝗺 ಜಾಗವನ್ನು ಒದಗಿಸಲಿದ್ದು, ಜಮೀನಿನ ಮಾಲೀಕತ್ವ ಜಲಮಂಡಳಿಯದ್ದೇ ಆಗಿರಲಿದೆ.
ಆರ್ಥಿಕ ಲಾಭಗಳ ಆಚೆಗೆ, ಈ ಯೋಜನೆಯಿಂದಾಗಿ ಬೆಂಗಳೂರಿನ ಇಂಧನ ಭದ್ರತೆಗೆ ದೊಡ್ಡ ಉತ್ತೇಜನ ಸಿಗಲಿದೆ. ಪ್ರಸ್ತುತ ಭಾರತ ದೇಶದಲ್ಲಿ ಬಹುಪಾಲು ಬಳಸಲಾಗುವ ಎಲ್‌ಪಿಜಿಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಸರ್ಕಾರದಿಂದ ಯಾವುದೇ ವೆಚ್ಚವಿಲ್ಲದೆ ಪೋಲಾಗುತ್ತಿರುವ ಅನಿಲವನ್ನು ಪರಿವರ್ತಿಸುವ ಮೂಲಕ ಉತ್ತಮ ಅದಾಯು ನೀರಿಕ್ಷಿಸುವ ಜೊತೆಯಲ್ಲಿಯೇ ದೇಶವನ್ನು ಸ್ವಾವಲಂಬಿಯನ್ನಾಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಈ ಯೋಜನೆಯು ಇತರ ಭಾರತೀಯ ನಗರಗಳು ಅನುಸರಿಸಲು ಒಂದು ರಾಷ್ಟ್ರೀಯ ಮಾದರಿ ಯೋಜನೆಯಾಗಿದೆ.
ಡಾ. ರಾಮ್ ಪ್ರಸಾತ್ ಮನೋಹರ್, ಅವರು ಪ್ರತಿಕ್ರಿಯಿಸಿ, “ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರಂತರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ, ನಾವು ಅಕ್ಷರಶಃ ತ್ಯಾಜ್ಯವನ್ನು ಸಂಪತ್ತಿನ ಬೃಹತ್ ಮೂಲವಾಗಿ ಪರಿವರ್ತಿಸುತ್ತಿದ್ದೇವೆ. 𝟱𝟱𝟬 𝗠𝗟𝗗 ತ್ಯಾಜ್ಯ ನೀರನ್ನು ಬಳಸಿ ಮೌಲ್ಯದ ಕಂಪ್ರೆಸ್ಡ್ ಬಯೋ-ಗ್ಯಾಸ್ (𝗖𝗼𝗺𝗽𝗿𝗲𝘀𝘀𝗲𝗱 𝗕𝗶𝗼-𝗚𝗮𝘀 – 𝗖𝗕𝗚) ಆಗಿ ಮೇಲ್ದರ್ಜೆಗೇರಿಸುವ ಯೋಜನೆ ಇದು ಭಾರತದಲ್ಲೇ ಈ ರೀತಿಯ ಅತಿದೊಡ್ಡ ಮತ್ತು ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ 𝗣𝗣𝗣 ಮಾದರಿಯು ಬಂಡವಾಳ ಅಥವಾ ಕಾರ್ಯಾಚರಣೆಗಳಲ್ಲಿ ಒಂದೇ ಒಂದು ರೂಪಾಯಿಯನ್ನು ಹೂಡಿಕೆ ಮಾಡದೆ 𝟭𝟮𝟬 ಕೋಟಿಗೂ ಅಧಿಕ ಹೊಸ ಆದಾಯವನ್ನು ಗಳಿಸಲು ಬೆಂಗಳೂರು ಜಲಮಂಡಳಿಗೆ ಅನುವು ಮಾಡಿಕೊಡುತ್ತದೆ. ಇದು ನಮ್ಮ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುವ, ನಮ್ಮ ನಗರದ ಇಂಧನ ಭದ್ರತೆಯನ್ನು ಬಲಪಡಿಸುವ ಮತ್ತು ದೇಶಕ್ಕೆ ಮಾದರಿಯಾದ ಯೋಜನೆಯಾಗಿದೆ,” ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

VISTARANEWS.COM


on

ಬೆಂಗಳೂರು: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ ಅವರು 61ನೇ ಸಾಲಿನ ‘ಫೆಮಿನಾ ಮಿಸ್ ಇಂಡಿಯಾ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮ್ಮದೇ ಪಕ್ಷದ ಶಾಸಕರ ಪುತ್ರಿಯೊಬ್ಬರು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.
ತಮ್ಮ ‘ಎಕ್ಸ್’ ಸಂದೇಶದಲ್ಲಿ ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರಿಗೆ ಅಭಿನಂದನೆಗಳು.
ತಮ್ಮ ಮಗಳ ಈ ಸಾಧನೆಯನ್ನು ಖುದ್ದು ಸತೀಶ್ ಸೈಲ್ ಅವರೇ ನನ್ನೊಂದಿಗೆ ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದರು. ಮಗಳ ಕನಸುಗಳಿಗೆ ಬೆಂಬಲವಾಗಿ ನಿಂತಿರುವ ಅವರನ್ನು ಕೂಡ ಇದೇ ವೇಳೆ ಅಭಿನಂದಿಸಿದೆ. 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಸಾಧ್ವಿ ಪ್ರತಿನಿಧಿಸಲಿದ್ದು, ಅಲ್ಲಿಯೂ ಗೆಲುವು ಸಾಧಿಸಿ ಜಾಗತಿಕ ಮಟ್ಟದಲ್ಲಿ ರಾಜ್ಯದ ಕೀರ್ತಿ ರಾರಾಜಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಏಪ್ರಿಲ್ 18ರಂದು ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ‘ಫೆಮಿನಾ ಮಿಸ್ ಇಂಡಿಯಾ ಫಿನಾಲೆ ಸ್ಪರ್ಧೆ ಜರುಗಿತ್ತು. ಗೆಲುವು ಸಾಧಿಸಿದ ನಂತರ ಸಾಧ್ವಿ ಸೈಲ್ ತಮ್ಮ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿದ್ದ ಸುದ್ದಿ ವೈರಲ್‌ ಆಗಿ ಗಮನ ಸೆಳೆದಿತ್ತು.

Continue Reading

Latest

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

VISTARANEWS.COM


on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದಾಗ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದು ಸರಿಯಷ್ಟೇ. ಈ ಸಂದರ್ಭದಲ್ಲಿ ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟಿದ ಫೋಟೋ ಭಾರಿ ವೈರಲ್‌ ಆಗಿದ್ದು, ತೀವ್ರ ಕುತೂಹಲ ಮೂಡಿಸಿತ್ತು. ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನು ಹೇಳಿರಬಹುದು ಎಂದು ಕುತೂಹಲ ಮೂಡಿದ್ದು ಮಾತ್ರವಲ್ಲದೆ, ಊಹಾಪೋಹಗಳಿಗೂ ಕಾರಣವಾಗಿತ್ತು.
ಇದೀಗ ಮೋದಿ-ಸಿದ್ದರಾಮಯ್ಯ ಅವರ ಮಾತಿನ ರಹಸ್ಯ ಬಹಿರಂಗವಾಗಿದೆ. ಸ್ವತಃ ಸಿದ್ದರಾಮಯ್ಯ ಅವರೇ ಗುಟ್ಟನ್ನು ಬಹಿರಂಗಗೊಳಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೋದಿ ಇಬ್ಬರು ಗುಟ್ಟಾಗಿ ಏನನ್ನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳೀದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಉತ್ತರಿಸಿದೆ. ಇಷ್ಟು ವಿಚಾರ ಬಿಟ್ಟು ಬೇರೆ ಏನೂ ಇಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

Continue Reading

Latest

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

VISTARANEWS.COM


on

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದರು.
ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ:
ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.
ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.
ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ:
ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು. ಬಹುಮತ ವಿಲ್ಲ ಎಂದು ಗೊತ್ತಿದ್ದು ಮಸೂದೆಯನ್ನು ಮಂಡಿಸಬಾರದಿತ್ತು
ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲ ಎಂದು ಹೇಳಿದರು.
ಶಾಸಕ ಎನ್.ಎ ಹ್ಯಾರೀಸ್ ಅವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳು ಗೆಲ್ಲಲಿದ್ದು ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Continue Reading

Latest

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

VISTARANEWS.COM


on

ಬೆಳಗಾವಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಅವರ 893ನೇ ಜಯಂತಿ ಸಮಾರಂಭ ಭಕ್ತಿಪೂರ್ವಕವಾಗಿ ಮತ್ತು ಗೌರವಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಬಸವಣ್ಣನವರ ಭವ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ವಿಶ್ವಗುರು ಬಸವಣ್ಣನವರನ್ನು ಚಿತ್ರಪಟಗಳಿಗೆ ಸೀಮಿತಗೊಳಿಸುವುದರಿಂದ ಅವರ ಮಹತ್ತರ ತತ್ತ್ವಗಳಿಗೆ ನ್ಯಾಯ ದೊರೆಯುವುದಿಲ್ಲ. ಸಮಾಜದ ಪರಿವರ್ತನೆಗಾಗಿ ಅವರು ಪಟ್ಟ ಪರಿಶ್ರಮ, ಎದುರಿಸಿದ ಸವಾಲುಗಳು ಮತ್ತು ಸಮಾನತೆಯ ಹಾದಿಯ ಮಹತ್ವವನ್ನು ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಪ್ರಮುಖ ಜವಾಬ್ದಾರಿಯಾಗಿದೆ. ಈ ಅರಿವು ಮೂಡಿದಾಗ ಮಾತ್ರ ಬಸವ ಜಯಂತಿ ಆಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವುದು ಐತಿಹಾಸಿಕ ಹಾಗೂ ಶ್ಲಾಘನೀಯ ನಿರ್ಧಾರವಾಗಿದೆ. ಇದು ಬಸವಣ್ಣನವರ ವಚನ ಸಾಹಿತ್ಯ, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ವಿಶ್ವದ ಮಟ್ಟಿಗೆ ಪರಿಚಯಿಸುವ ಮಹತ್ವದ ಹೆಜ್ಜೆಯಾಗಿದೆ. ಬಸವಣ್ಣನವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ, ಇಡೀ ನಾಡಿನ ಗೌರವದ ಸಂಕೇತವಾಗಿ ಗುರುತಿಸಿರುವುದು ಜನಮನ ಗೆದ್ದಿದೆ.
ಬಸವಣ್ಣನವರನ್ನು ಕೇವಲ ಹಬ್ಬದ ದಿನಗಳಲ್ಲಿ ನೆನಪಿಸಿಕೊಳ್ಳುವುದಲ್ಲ, ಅವರ ಸಿದ್ಧಾಂತಗಳನ್ನು ಪ್ರತಿದಿನದ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಮಾನವತಾವಾದಿ ಚಿಂತನೆಗಳನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಸಂಕಷ್ಟದ ಸಂದರ್ಭಗಳಲ್ಲಿ ಮಾತ್ರವಲ್ಲ, ಸುಖದ ಕ್ಷಣಗಳಲ್ಲಿಯೂ ಈ ಮಹಾನ್ ಚೇತನಗಳ ಆದರ್ಶಗಳನ್ನು ಅನುಸರಿಸಿದಾಗ ಮಾತ್ರ ಶಾಶ್ವತವಾದ ಸಕಾರಾತ್ಮಕ ಬದಲಾವಣೆ ಸಾಧ್ಯ.
ಬಸವ ತತ್ವಗಳು ನಮ್ಮ ಬದುಕಿನ ದಾರಿದೀಪವಾಗಲಿ — ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ಸಮಾಜ ನಿರ್ಮಾಣವೇ ನಮ್ಮ ಗುರಿಯಾಗಲಿ ಎಂದು ಆಶಿಸಿದರು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್‌, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ, ಪೊಲೀಸ್ ಆಯುಕ್ತ ಬೊರಸೆ ಭೂಷಣ ಗುಲಾಬರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್‌, ಬಸವ ಜಯಂತಿ ಉತ್ಸವ ಸಮಿತಿಯ ಸಂಚಾಲಕ ಬಸವರಾಜ ರೊಟ್ಟಿ ಸೇರಿದಂತೆ ಸುನಂದಾ ಎಮ್ಮಿ, ಡಾ. ರಾಜಶೇಖರ ಪಾಟೀಲ್, ಬೆಳಗಾವಿ ಪಾಲಿಕೆಯ ಉಪಮೇಯರ್ ಹನುಮಂತ ಕೊಂಗಾಲಿ, ಡಾ. ಗೀತಾ ದಯನವರ ಮತ್ತು ಇತರ ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

Continue Reading
Advertisement
Latest6 ನಿಮಿಷಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest17 ನಿಮಿಷಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest1 ಗಂಟೆ ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest2 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

Latest2 ಗಂಟೆಗಳು ago

ಇಡಿ ದಾಳಿ; ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಸಚಿವೆ ಶೋಭಾ ಕರಂದ್ಲಾಜೆ

ರಾಜಕೀಯ2 ಗಂಟೆಗಳು ago

ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ವಾಗ್ದಾಳಿ

Latest2 ಗಂಟೆಗಳು ago

ಪಿಎನ್‌ಎಸ್‌ ವಿಸ್ತಾರ ಮುಂಚೂಣಿ ಸುದ್ದಿವಾಹಿನಿಯಾಗಲಿ: ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ವಿಶ್ವಾಸ

ಫ್ಯಾಷನ್3 ಗಂಟೆಗಳು ago

ದೇಶದ ಗಮನ ಸೆಳೆದ ಕಾರವಾರದ ಪ್ರತಿಭೆ: ಶಾಸಕ ಸತೀಶ್ ಸೈಲ್ ಪುತ್ರಿಗೆ ‘ಮಿಸ್ ಇಂಡಿಯಾ’ ಕಿರೀಟದ ಗರಿ.

Latest3 ಗಂಟೆಗಳು ago

ಹುಬ್ಬಳ್ಳಿ ರನ್-ವೇ ಬದಲಿಗೆ ಬೆಂಗಳೂರಲ್ಲಿ ಲ್ಯಾಂಡ್ ಆದ ಫ್ಲೈಟ್: ಆಗಸದಲ್ಲಿ ವಿಮಾನ ಸುತ್ತಾಡಿದ್ದೇಕೆ?

ಕರ್ನಾಟಕ3 ಗಂಟೆಗಳು ago

SSLC ಫಲಿತಾಂಶ ಪ್ರಕಟ ಯಾವಾಗ? ತಡ ಆಗುತ್ತಿರುವುದು ಏಕೆ?; ಇಲ್ಲಿದೆ ಮಾಹಿತಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌