ಸಿಎಂ-ಡಿಸಿಎಂ ನಡುವೆ ಮುಂದುವರೆದ ಶೀತಲ ಸಮರ: ಈ ಭಾರಿಯಾದರೂ ಫಲ ನೀಡುವುದು ಶಿವಕುಮಾರ್‌ ದೆಹಲಿ ಯಾತ್ರೆ? - Vistara News

Latest

ಸಿಎಂ-ಡಿಸಿಎಂ ನಡುವೆ ಮುಂದುವರೆದ ಶೀತಲ ಸಮರ: ಈ ಭಾರಿಯಾದರೂ ಫಲ ನೀಡುವುದು ಶಿವಕುಮಾರ್‌ ದೆಹಲಿ ಯಾತ್ರೆ?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆ ನಂತರ ಮತ್ತೆ ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಹಾವು ಏಣಿಯಾಟ ಮುಂದುವರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಶಾಸಕರೊಂದಿಗೆ ಗುಪ್ತ ಸಭೆ ನಡೆಸಿದ್ದರೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯಾಗಲು ಅವಕಾಶ ಕೊಡಲೇಬೇಕು ಎಂದು ಮತ್ತೊಮ್ಮೆ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದಾರೆ. ಆದರೆ ವರಿಷ್ಟರು ಅಂತಿಮ ನಿರ್ಧಾರ ಕೈಗೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಒಬ್ಬರು ಸೋನಿಯಾ ಗಾಂಧಿ, ಮತ್ತೊಬ್ಬರು ರಾಹುಲ್‌ ಗಾಂಧಿ ಅವರತ್ತ ಬೊಟ್ಟು ಮಾಡಿ ತಮ್ಮ ಅಸಹಾಯಕತೆಯನ್ನು ಪ್ರದರ್ಶಿಸುತ್ತಿದ್ದಾರೆ.
“ಇಷ್ಟೊಂದು ಆತುರವೇಕೆ? ಮೇ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿ. ಅದುವರೆಗೂ ತಾಳ್ಮೆಯಿಂದ ಕಾಯಿರಿ” ಎಂದು ವರಿಷ್ಠರೊಬ್ಬರು ಸಲಹೆ ನೀಡಿದ್ದಾರೆ ಎಂದು ಶಿವಕುಮಾರ್‌ ಆಪ್ತರೊಬ್ಬರು ಹೇಳುತ್ತಾರೆ. ಕಳೆದ 8-10 ತಿಂಗಳಿನಿಂದ ಒಂದಿಲ್ಲೊಂದು ಕಾರಣವನ್ನು ಮುಂದೊಡ್ಡಿ ಅವಕಾಶ ತಪ್ಪಿ ಹೋಗುತ್ತಲೇ ಇದೆ. ಬಜೆಟ್‌, ಉಪ ಚುನಾವಣೆ, ಕೇಂದ್ರ ಅಧಿವೇಶನ, ಐದು ರಾಜ್ಯಗಳ ಚುನಾವಣೆ ಹೀಗೆ ಒಂದಲ್ಲ ಒಂದು ನೆಪವೊಡ್ಡಿ ಶಿವಕುಮಾರ್‌ ಅವರನ್ನು ಸುಮ್ಮನಿರಿಸುತ್ತಾ ಬರಲಾಗಿದೆ.
ಈಗಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂಡ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ನೆಪವನ್ನು ಮುಂದೊಡ್ಡಿ ಅಧಿಕಾರ ಉಳಿಸಿಕೊಳ್ಳುವ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಅಂಶವನ್ನಿಟುಕೊಂಡು ಅವರು ನಿನ್ನೆ ರಾತ್ರಿ ತಮ್ಮ ಆಪ್ತ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.
ಪ್ರತಿಬಾರಿ ದೆಹಲಿಗೆ ತೆರಳಿದಾಗಲೂ ಶಿವಕುಮಾರ್‌ ಅವರು, ತಮ್ಮ ಶ್ರಮಕ್ಕೆ “ಪ್ರತಿಫಲ”ವನ್ನು ಕೇಳುತ್ತಲೇ ಇದ್ದಾರೆ. ಆದರೆ ಫಲ ಮಾತ್ರ ಮರೀಚಿಕೆಯಾಗಿದೆ. ತಮಿಳುನಾಡು ಚುನಾವಣೆ ಸಂದರ್ಭದಲ್ಲಿ ಅವರು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಆಗಲೂ ಸಿಕ್ಕ ಅವಕಾಶದಲ್ಲಿ ಅವರ ಕಿವಿಗೆ ಹಾಕಿದ್ದಾರೆ.
ದೆಹಲಿಯಲ್ಲಿ ಶಿವಕುಮಾರ್‌ ಅವರ ಜತೆ ಮಾಜಿ ಸಂಸದ ಡಿಕೆ ಸುರೇಶ್‌ ಅವರೂ ಜತೆಗೂಡಿದ್ದಾರೆ. ಈ ಬಾರಿ ಅಧಿಕಾರ ಹಸ್ತಾಂತರ ವಿಚಾರದಲ್ಲಿ ಸ್ಪಷ್ಟತೆ ನೀಡಲೇಬೇಕು ಎಂದು ಒತ್ತಡ ಹೇರಿದ್ದಾರೆ.
ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಯಾರನ್ನು ಭೇಟಿ ಮಾಡಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ. ಜವಬ್ದಾರಿ ಸ್ಥಾನದಲ್ಲಿರುವ ನಾನು ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡಲು ಆಗುವುದಿಲ್ಲ. ನೀವು ನನ್ನಿಂದ ಈ ಬಗ್ಗೆ ಮಾಹಿತಿ ಪಡೆಯುವ ಪ್ರಯತ್ನವನ್ನೂ ಮಾಡಬೇಡಿ ಎಂದು ಉತ್ತರಿಸಿದ್ದಾರೆ.
ಸಿಎಂ-ಡಿಸಿಎಂ ನಡುವೆ ಅಧಿಕಾರ ಹಂಚಿಕೆ ಸೂತ್ರ ಆಗಿದೆಯೇ ಎನ್ನುವುದು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ. ಆ ಸಂದರ್ಭದಲ್ಲಿ ಶಿವಕುಮಾರ್‌ ಇಡಿ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದರು. ಹಾಗಾಗಿ ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಆಗಬಹುದು ಎಂದು ಹೈಕಮಾಂಡ್‌ ಸೂತ್ರ ಹೆಣೆದಿತ್ತು ಎಂದು ಹೇಳಲಾಗುತ್ತಿದೆ. ಕಳೆದ ಹಲವು ತಿಂಗಳಿನಿಂದ ಸಿದ್ದರಾಮಯ್ಯ-ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆಯ ಶೀತಲ ಸಮರ ನಡೆಯುತ್ತಲೇ ಇದೆ.
ಕೆಲವೇ ದಿನಗಳಲ್ಲಿ ಹೈಕಮಾಂಡ್‌ ಅಂತಿಮ ನಿರ್ಧಾರಕ್ಕೆ ಬರಲಿದೆ ಎಂದು ಶಾಸಕರೊಬ್ಬರು ವಿಶ್ವಾಸ ವ್ಯಕ್ತಪಡಿಸುತ್ತಾರೆ. ಒಟ್ಟಾರೆ ಅಧಿಕಾರ ಹಂಚಿಕೆ ವಿಷಯದಲ್ಲಿ ಎಲ್ಲವೂ ಅಯೋಮಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

VISTARANEWS.COM


on

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ವಿವಿಧ ಗುಂಪುಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಮಹತ್ವದ ನಿರ್ಧಾರವನ್ನು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ದಲಿತ ಬಲಗೈ ಸಮುದಾಯಕ್ಕೆ ಶೇ. 5.25, ಇತರೆ ಸಮುದಾಯಗಳಿಗೆ (ಅಲೆಮಾರಿ, ಅರೆ ಅಲೆಮಾರಿ, ಸ್ಪೃಶ್ಯ ಜಾತಿಗಳು) ಶೇ.4.5 ಮೀಸಲಾತಿ ಹಂಚಿಕೆ ಮಾಡಲಾಗಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟದ ನಿರ್ಣಯವನ್ನು ವಿವರಿಸಿದರು. ಅಂತಿಮವಾಗಿ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರವರ್ಗ ಎ-5.25, ಬಿ-5.25, ಸಿ-4.5 ಎಂದು ನಿರ್ಧಾರ ಮಾಡಿದ್ದೇವೆ. ವಿಶೇಷ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಕೊಳ್ಳಲಾಗಿದೆ. ಯಾವುದೇ ಅಪಸ್ವರ ಇಲ್ಲದೆಯೇ ಸಂಪುಟದಲ್ಲಿ ಒಪ್ಪಿಕೊಳ್ಳಲಾಗಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೆ ಇದೇ ಅನುಪಾತ ಅನ್ವಯ ಎಂದು ಸ್ಪಷ್ಟಪಡಿಸಿದರು.
ನೇಮಕಾತಿ ವೇಳೆ ಪ್ರವರ್ಗ ಎ-5.25, ಬಿ-5.25, ಸಿ-4.5 ಮೀಸಲಾತಿ ಪಾಲಿಸಲಾಗುತ್ತದೆ. ನೇಮಕಾತಿಗಾಗಿ ಮತ್ತೊಮ್ಮೆ ಅಧಿಸೂಚನೆ ಪ್ರಕಟ ಮಾಡುತ್ತೇವೆ. ಬಜೆಟ್ ನಲ್ಲಿ 56,432 ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಿಸಿದ್ದೇವೆ. ಹುದ್ದೆಗಳ ಭರ್ತಿ ವೇಳೆ ಇದೇ ಮೀಸಲಾತಿ ಅನುಪಾತ ಅನ್ವಯ. ಮಾಡುತ್ತೇವೆ ಎಂದರು.
ಒಳಮೀಸಲಾತಿ ವಿಚಾರವಾಗಿ ಸುದೀರ್ಘವಾಗಿ ಹೋರಾಟ ನಡೆದಿದೆ. ನಂತರ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಲಾಗಿತ್ತು. ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯಗಳು ಭಾಗಿಯಾಗಿದ್ದವು. ಒಳ ಮೀಸಲಾತಿ ಜಾರಿಗೆ ಸಮಾವೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದೆವು ಎಂದು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಣಿಕೆಯಲ್ಲೂ ಭರವಸೆ ನೀಡಲಾಗಿತ್ತು. ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂಕೋರ್ಟ್ ನ 7 ನ್ಯಾಯಮೂರ್ತಿಗಳ ಪೀಠ ಆದೇಶ ನೀಡಿತ್ತು. ಆ ತೀರ್ಪು ಬಂದ ನಂತರ ಸರ್ಕಾರ ನಿವೃತ್ತ ನ್ಯಾ. ನಾಗಮೋಹನ ದಾಸ್ ನೇತೃತ್ವದ ಸಮಿತಿ ರಚಿಸಿತ್ತು. ಈ ವರದಿಯನ್ನು ಸಂಪುಟದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಎ, ಬಿ, ಸಿ, ಡಿ ಎಂದು ವರ್ಗೀಕರಿಸಿ ಒಳಮೀಸಲಾತಿ ನಿಗದಿ ಮಾಡಿದ್ದೆವು. ಒಳಮೀಸಲಾತಿ ಪ್ರಮಾಣ 6,6,5 ಎಂದು ವರ್ಗೀಕರಣ ಮಾಡಿದ್ದೆವು. ನಂತರ ರೋಸ್ಟರ್ ಬಿಂದುವಿನಲ್ಲಿ ಗೊಂದಲ ಉಂಟಾಯಿತು ಎಂದು ವಿವರಿಸಿದರು.
ಇಂದಿರಾ ಸಹಾನಿ ಕೇಸ್ ನಲ್ಲಿ ಮೀಸಲಾತಿ ಪ್ರಮಾಣ 50% ಆದೇಶವಿತ್ತು. ಎಸ್‌ ಸಿ ಮೀಸಲಾತಿ ಪ್ರಮಾಣ 17% ಅನ್ವಯ ಪ್ರವರ್ಗ ಎ-6, ಬಿ-6, ಸಿ-5 ಎಂದು ವರ್ಗೀಕರಣ ಮಾಡಿದ್ದೆವು. ಆದರೆ ಕೋರ್ಟ್ ಮೀಸಲಾತಿ ಪ್ರಮಾಣ 50% ಮೀರುವಂತಿಲ್ಲ ಎಂದು ಹೇಳಿತ್ತು ಎಂದು ವಿವರಿಸಿದರು.
ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಾರಗಳಿಂದ ಚರ್ಚೆ ನಡೆದಿತ್ತು. ರಾಷ್ಟ್ರಕ್ಕೆ ಮಾದರಿ ಆಗಬಲ್ಲ ಮಹತ್ವವಾದ ಜನರ ಬದುಕಿಗೆ ವಿಶೇಷ ತಿರುವನ್ನು ನೀಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ರೋಸ್ಟರ್ ವಿಚಾರದಲ್ಲಿ ಗೊಂದಲ ಸೃಷ್ಡಿ ಆಗಿತ್ತು. ಸೂಕ್ತವಾದ ಪರಿಪೂರ್ಣ ಪರಿಹಾರ ಕಂಡು ಮಾರ್ಗದರ್ಶನ ಮಾಡಿ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಯಶಸ್ವಿಯಾಗಿದ್ದಾರೆ ಎಂದರು.
ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಎಡ ಸಮುದಾಯದಲ್ಲಿ 18 ಪ್ರಮುಖ ಜಾತಿಗಳಿವೆ. ಬಲಗೈ ಸಮುದಾಯದಲ್ಲಿ 20 ಜಾತಿಗಳಿವೆ. ಸ್ಪೃಶ್ಯ ಸಮುದಾಯದಲ್ಲಿ 63 ಜಾತಿಗಳಿವೆ. ಶೇ.17ರ ಬದಲಿಗೆ ಶೇ.15 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಮೀಸಲಾತಿ ಶೇ.50 ಮೀರುವಂತಿಲ್ಲ. ಹಾಗಾಗಿ ಸರ್ಕಾರ ಈ ಮಿತಿಯೊಳಗೆ ಮೀಸಲಾತಿ ಹಂಚಿಕೆ ಮಾಡಿದೆ.

Continue Reading

Latest

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

VISTARANEWS.COM


on

ಬಾಲಿವುಡ್‌ನ ಹಿರಿಯ ನಟಿ ಕಾಜೋಲ್ ತಮ್ಮ ಮೂರು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಎಂದೂ ಮಾಡದ ಕೆಲಸವೊಂದನ್ನು ‘ದಿ ಟ್ರಯಲ್’ ವೆಬ್ ಸರಣಿಯಲ್ಲಿ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಸುಮಾರು 29 ವರ್ಷಗಳಿಂದ ತೆರೆಮೇಲೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸುವುದಿಲ್ಲ ಎಂಬ ಕಟ್ಟುನಿಟ್ಟಿನ ನಿಯಮವನ್ನು ಹೊಂದಿದ್ದ ಕಾಜೋಲ್, ಮೊದಲ ಬಾರಿಗೆ ಈ ಪಾಲಿಸಿಯನ್ನು ಮುರಿದಿದ್ದರು. ಸಹನಟರಾದ ಜಿಶು ಸೇನ್‌ಗುಪ್ತಾ ಮತ್ತು ಅಲಿ ಖಾನ್ ಜೊತೆಗಿನ ಅವರ ಲಿಪ್‌ಲಾಕ್ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಈಗ ಮೊದಲ ಬಾರಿಗೆ ಕಾಜೋಲ್ ಈ ಬೋಲ್ಡ್ ನಿರ್ಧಾರದ ಹಿಂದಿನ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಲಿಲ್ಲಿ ಸಿಂಗ್ ಅವರ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಕಾಜೋಲ್, ಈ ದೃಶ್ಯವು ಕೇವಲ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಆ ದೃಶ್ಯವು ಕಥೆಯ ಅವಿಭಾಜ್ಯ ಭಾಗವಾಗಿತ್ತು. ನಾನು ನಿರ್ವಹಿಸುತ್ತಿದ್ದ ಪಾತ್ರದ ಆಂತರಿಕ ಗೊಂದಲಗಳು, ಆಕೆಯ ಮನೋಸ್ಥಿತಿ ಮತ್ತು ಜೀವನದ ಸಂಘರ್ಷಗಳನ್ನು ತೋರಿಸಲು ಆ ದೃಶ್ಯ ಅನಿವಾರ್ಯವಾಗಿತ್ತು. ಒಂದು ವೇಳೆ ಅದನ್ನು ತೆಗೆದುಹಾಕಿದ್ದರೆ ಪಾತ್ರದ ಆಳವೇ ಇಲ್ಲವಾಗುತ್ತಿತ್ತು. ಕಥೆಯ ಬೇಡಿಕೆಗೆ ಬದ್ಧಳಾಗಿ ನಾನು ನನ್ನ ನಿಯಮವನ್ನು ಬದಿಗಿರಿಸಬೇಕಾಯಿತು” ಎಂದು ಅವರು ವಿವರಿಸಿದ್ದಾರೆ.

ಆದರೆ, ಈ ದೃಶ್ಯದಲ್ಲಿ ನಟಿಸುವುದು ತಮಗೆ ಅಂದುಕೊಂಡಷ್ಟು ಸುಲಭವಾಗಿರಲಿಲ್ಲ ಎಂದು ಕಾಜೋಲ್ ಒಪ್ಪಿಕೊಂಡಿದ್ದಾರೆ. “ಆ ಸಮಯದಲ್ಲಿ ನನಗೆ ತುಂಬಾ ಅನಾನುಕೂಲ (Uncomfortable) ಅನಿಸುತ್ತಿತ್ತು. ಸೆಟ್‌ನಲ್ಲಿ ನಿಲ್ಲುವವರೆಗೂ ನನಗೆ ಆ ಕಲ್ಪನೆಯೇ ಸರಿ ಅನ್ನಿಸಿರಲಿಲ್ಲ. ಆದರೆ ಒಬ್ಬ ವೃತ್ತಿಪರ ನಟಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿಯಾಗಿತ್ತು” ಎಂದು ಅವರು ಹೇಳಿದ್ದಾರೆ. 29 ವರ್ಷಗಳ ಸಂಪ್ರದಾಯವನ್ನು ಮುರಿದು ಕಾಜೋಲ್ ತೋರಿದ ಈ ವೃತ್ತಿಪರತೆ ಈಗ ಸಿನಿಮಾ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

Latest

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

VISTARANEWS.COM


on

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ವಿವಿಧ ಗುಂಪುಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಮಹತ್ವದ ನಿರ್ಧಾರವನ್ನು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ದಲಿತ ಬಲಗೈ ಸಮುದಾಯಕ್ಕೆ ಶೇ. 5.25, ಇತರೆ ಸಮುದಾಯಗಳಿಗೆ (ಅಲೆಮಾರಿ, ಅರೆ ಅಲೆಮಾರಿ, ಸ್ಪೃಶ್ಯ ಜಾತಿಗಳು) ಶೇ.4.5 ಮೀಸಲಾತಿ ಹಂಚಿಕೆ ಮಾಡಲಾಗಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟದ ನಿರ್ಣಯವನ್ನು ವಿವರಿಸಿದರು.
ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಎಡ ಸಮುದಾಯದಲ್ಲಿ 18 ಪ್ರಮುಖ ಜಾತಿಗಳಿವೆ. ಬಲಗೈ ಸಮುದಾಯದಲ್ಲಿ 20 ಜಾತಿಗಳಿವೆ. ಸ್ಪೃಶ್ಯ ಸಮುದಾಯದಲ್ಲಿ 63 ಜಾತಿಗಳಿವೆ. ಶೇ.17ರ ಬದಲಿಗೆ ಶೇ.15 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಮೀಸಲಾತಿ ಶೇ.50 ಮೀರುವಂತಿಲ್ಲ. ಹಾಗಾಗಿ ಸರ್ಕಾರ ಈ ಮಿತಿಯೊಳಗೆ ಮೀಸಲಾತಿ ಹಂಚಿಕೆ ಮಾಡಿದೆ.
ಸರ್ಕಾರದ ನಿರ್ಧಾರ ಪ್ರಕಟವಾಗುತಿದ್ದಂತೆ ಮಾಜಿ ಸಚಿವ ಎಚ್.‌ ಆಂಜನೇಯ ಸಿಹಿ ಹಂಚಿ ಸಂಭ್ರಮಿಸಿದರು. ಈ ಮೂಲಕ ಒಳ ಮೀಸಲಾತಿಗಾಗಿ ನಡೆದ ಮೂರು ದಶಕಗಳ ಹೋರಾಟಕ್ಕೆ ಜಯ ಲಭಿಸಿದೆ.
ಸಿದ್ದರಾಮಯ್ಯ ಮಾತನಾಡಿ ಒಳಮೀಸಲಾತಿ ವಿಚಾರವಾಗಿ ಸುದೀರ್ಘವಾಗಿ ಹೋರಾಟ ನಡೆದಿದೆ. ನಂತರ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಲಾಗಿತ್ತು. ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯಗಳು ಭಾಗಿಯಾಗಿದ್ದವು. ಒಳ ಮೀಸಲಾತಿ ಜಾರಿಗೆ ಸಮಾವೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದೆವು ಎಂದು ಹೇಳಿದರು.

Continue Reading

Latest

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

VISTARANEWS.COM


on

ಕೆಟ್ ಮೈದಾನದಲ್ಲಿ ಶತಕಗಳ ಸರದಾರನಾಗಿ ಮೆರೆದ ‘ಮಾಸ್ಟರ್ ಬ್ಲಾಸ್ಟರ್’ ಸಚಿನ್ ತೆಂಡೂಲ್ಕರ್, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ದಶಕದ ನಂತರವೂ ವ್ಯವಹಾರ ಲೋಕದ ಅಧಿಪತಿಯಾಗಿ ಮುಂದುವರಿದಿದ್ದಾರೆ. ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದು ಆರಾಧಿಸಲ್ಪಡುವ ಸಚಿನ್, ಈಗ ಕೇವಲ ಕ್ರೀಡಾಪಟುವಾಗಿ ಉಳಿಯದೆ ಒಬ್ಬ ಚಾಣಾಕ್ಷ ಉದ್ಯಮಿ ಮತ್ತು ಹೂಡಿಕೆದಾರನಾಗಿ ಹೊರಹೊಮ್ಮಿದ್ದಾರೆ. ಏಪ್ರಿಲ್ 2026ರ ಇತ್ತೀಚಿನ ವರದಿಗಳ ಪ್ರಕಾರ, ಸಚಿನ್ ಅವರ ಒಟ್ಟು ಆಸ್ತಿ ಮೌಲ್ಯವು ಸುಮಾರು 170 ಮಿಲಿಯನ್ ಡಾಲರ್ (₹1,400 ಕೋಟಿಗೂ ಅಧಿಕ) ಎಂದು ಅಂದಾಜಿಸಲಾಗಿದೆ. 2025ರ ಸಾಲೊಂದರಲ್ಲೇ ಅವರು ಬ್ರ್ಯಾಂಡ್ ಒಪ್ಪಂದಗಳು ಮತ್ತು ಹೂಡಿಕೆಗಳ ಮೂಲಕ ಸರಿಸುಮಾರು ₹50 ಕೋಟಿ ಸಂಪಾದಿಸುವ ಮೂಲಕ ತಮ್ಮ ಆರ್ಥಿಕ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

ಸಚಿನ್ ಅವರ ಈ ಬೃಹತ್ ಆದಾಯದ ಹಿಂದೆ ಅವರ ದೂರದೃಷ್ಟಿಯ ಹೂಡಿಕೆಗಳಿವೆ. ಬಳಸಿದ ಕಾರುಗಳ ವೇದಿಕೆ ‘Spinny’, ಗೇಮಿಂಗ್ ಸ್ಟಾರ್ಟ್-ಅಪ್ ‘JetSynthesys’ ಮತ್ತು ಸೋಲಾರ್ ಕ್ಷೇತ್ರದ ‘Truzon Solar’ ಸೇರಿದಂತೆ ‘Zepto’ ಮತ್ತು ‘Vahdam Teas’ ನಂತಹ ಪ್ರಮುಖ ಸಂಸ್ಥೆಗಳಲ್ಲಿ ಅವರು ಬಂಡವಾಳ ಹೂಡಿದ್ದಾರೆ. ಇಷ್ಟೇ ಅಲ್ಲದೆ, ತಮ್ಮದೇ ಆದ ‘Ten XU’ ಸ್ಪೋರ್ಟ್ಸ್‌ವೇರ್ ಬ್ರ್ಯಾಂಡ್ ಮತ್ತು ‘True Blue’ ಫ್ಯಾಷನ್ ಲೇಬಲ್ ಮೂಲಕ ಉದ್ಯಮ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಚಿನ್ ಎಂಬ ಹೆಸರೇ ಒಂದು ಶಕ್ತಿಯುತ ಬ್ರ್ಯಾಂಡ್ ಆಗಿರುವುದರಿಂದ, ಅಪೋಲೋ ಟೈರ್ಸ್‌ನಿಂದ ಹಿಡಿದು ಪ್ರಮುಖ ಬ್ಯಾಂಕ್‌ಗಳವರೆಗೆ ಹಲವು ಕಂಪನಿಗಳು ಇಂದಿಗೂ ಅವರ ವಿಶ್ವಾಸಾರ್ಹ ಇಮೇಜ್ ಅನ್ನು ಬಳಸಿಕೊಳ್ಳಲು ಕೋಟಿ ಕೋಟಿ ಸಂಭಾವನೆ ನೀಡುತ್ತಿವೆ.

ಇನ್ನು ರಿಯಲ್ ಎಸ್ಟೇಟ್ ವಿಷಯಕ್ಕೆ ಬಂದರೆ, ಸಚಿನ್ ಅವರ ಆಸ್ತಿಗಳು ಯಾರಿಗೂ ಕಡಿಮೆ ಇಲ್ಲದಂತಿವೆ. ಮುಂಬೈನ ಬಾಂದ್ರಾದಲ್ಲಿರುವ ಐಷಾರಾಮಿ ಬಂಗಲೆ, ದಕ್ಷಿಣ ಮುಂಬೈನ ಫ್ಲಾಟ್ ಮತ್ತು ಅಲಿಬಾಗ್‌ನಲ್ಲಿರುವ ಆಸ್ತಿಗಳ ಒಟ್ಟು ಮೌಲ್ಯವೇ ಸುಮಾರು ₹300 ಕೋಟಿ ಮೀರಿದೆ ಎಂದು ಅಂದಾಜಿಸಲಾಗಿದೆ. ಮೈದಾನದಲ್ಲಿ ರನ್ ಮಳೆ ಸುರಿಸಿದ ಮಾದರಿಯಲ್ಲೇ, ವ್ಯವಹಾರ ಲೋಕದಲ್ಲಿ ಸರಿಯಾದ ಕಾರ್ಯತಂತ್ರ ಮತ್ತು ಹೂಡಿಕೆಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸಚಿನ್ ಸಾವಿರಾರು ಕೋಟಿಗಳ ಸಾಮ್ರಾಜ್ಯವನ್ನು ಕಟ್ಟಿದ್ದಾರೆ. ಒಟ್ಟಾರೆಯಾಗಿ, ನಿವೃತ್ತಿಯ ನಂತರವೂ ಸಚಿನ್ ಅವರ ಈ ‘ಸೆಕೆಂಡ್ ಇನ್ನಿಂಗ್ಸ್’ ಯುವ ಉದ್ಯಮಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.

Continue Reading
Advertisement
Latest30 minutes ago

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Latest40 minutes ago

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

Latest56 minutes ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

Latest1 hour ago

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

Latest2 hours ago

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

Latest2 hours ago

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್: ಒಪ್ಪಂದಕ್ಕೆ ಸಹಿ

Latest2 hours ago

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಆರೋಗ್ಯ ಸ್ಥಿತಿ ಗಂಭೀರ?; ಕೃತಕ ಕಾಲು,ಸೀಳು ತುಟಿ, ಒಡೆದ ಮುಖ…

bigbreaking2 hours ago

ಬಿಜೆಪಿಗೆ ಸೇರಿದ ಎಎಪಿ ದಿಗ್ಗಜ ರಾಘವ್ ಚಡ್ಡಾ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್! ಪಕ್ಷಾಂತರಕ್ಕೆ ಕೊಟ್ಟ ಕಾರಣವೇನು?

Latest3 hours ago

ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸುತ್ತಿದ್ದೀರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ

Latest3 hours ago

ಬಿಜೆಪಿ ನಾಯಕನ ಮಗನಿಗೆ ಹೈಕೋರ್ಟ್ ಬಿಸಿ: ಮದುವೆಯಾಗದೆ ಮಗು ನೀಡಿದ ಲವರ್‌ಗೆ ಮಾಸಿಕ 75 ಸಾವಿರ ರೂ. ಜೀವನಾಂಶ ದಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌