ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌ - Vistara News

Latest

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ. 20ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದು, ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ವಾರ್ಷಿಕ ಶೇ.10ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ನಮ್ಮ ಸರ್ಕಾರ ಅದನ್ನು ರದ್ದುಗೊಳಿಸಿ ಪ್ರತಿ ವರ್ಷ ಪ್ರತ್ಯೇಕವಾಗಿ ನಿರ್ಧಾರ ಮಾಡುತ್ತಿದೆ. ಈ ವರ್ಷ ಶೇ 7.5ರಷ್ಟು ಹೆಚ್ಚಳ ಮಾಡುವ ಬಗ್ಗೆ ಇನ್ನೂ ಅಧಿಕೃತ ನಿರ್ಧಾರವಾಗಿಲ್ಲ ಎಂದು ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ ಮೆಚ್ಚುಗೆ ವ್ಯಕ್ತವಾಗಿದೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಈ ವರ್ಷ ನೀಟ್‌ ಫಲಿತಾಂಶಕ್ಕೂ ಮುನ್ನವೇ ಇಂಜಿನಿಯರಿಂಗ್ ಸೀಟು ಭರ್ತಿ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಕೆಲವು ಕಾಲೇಜುಗಳು ನಿಗದಿತ ‘ಸಿಲೆಬಸ್ ಶುಲ್ಕ’ಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿವೆ ಎಂದು ದೂರುಗಳು ಸಲ್ಲಿಕೆಯಾಗಿವೆ. ಈ ದೂರುಗಳನ್ನು ಆಧರಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸಿಲೆಬಸ್ ಶುಲ್ಕವನ್ನು ಕೆಇಎ ಮೂಲಕವೇ ಸಂಗ್ರಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ, ಸ್ಪಶ್ಯ ಜಾತಿಗಳಿಗೆ ತಲಾ ಶೇ. 5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

VISTARANEWS.COM


on

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ವಿವಿಧ ಗುಂಪುಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ಮಹತ್ವದ ನಿರ್ಧಾರವನ್ನು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5, ದಲಿತ ಬಲಗೈ ಸಮುದಾಯಕ್ಕೆ ಶೇ. 5, ಇತರೆ ಸಮುದಾಯಗಳಿಗೆ (ಅಲೆಮಾರಿ, ಅರೆ ಅಲೆಮಾರಿ, ಸ್ಪೃಶ್ಯ ಜಾತಿಗಳು) ಶೇ.5 ಮೀಸಲಾತಿ ಹಂಚಿಕೆ ಮಾಡಲಾಗಿದೆ. ಈ ಮೂಲಕ ಸಮಾನ ಹಂಚಿಕೆ ಮಾಡಲಾಗಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟದ ನಿರ್ಣಯವನ್ನು ವಿವರಿಸಿದರು.
ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಎಡ ಸಮುದಾಯದಲ್ಲಿ 18 ಪ್ರಮುಖ ಜಾತಿಗಳಿವೆ. ಬಲಗೈ ಸಮುದಾಯದಲ್ಲಿ 20 ಜಾತಿಗಳಿವೆ. ಸ್ಪೃಶ್ಯ ಸಮುದಾಯದಲ್ಲಿ 63 ಜಾತಿಗಳಿವೆ. ಶೇ.17ರ ಬದಲಿಗೆ ಶೇ.15 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಮೀಸಲಾತಿ ಶೇ.50 ಮೀರುವಂತಿಲ್ಲ. ಹಾಗಾಗಿ ಸರ್ಕಾರ ಈ ಮಿತಿಯೊಳಗೆ ಮೀಸಲಾತಿ ಹಂಚಿಕೆ ಮಾಡಿದೆ.
ಸರ್ಕಾರದ ನಿರ್ಧಾರ ಪ್ರಕಟವಾಗುತಿದ್ದಂತೆ ಮಾಜಿ ಸಚಿವ ಎಚ್.‌ ಆಂಜನೇಯ ಸಿಹಿ ಹಂಚಿ ಸಂಭ್ರಮಿಸಿದರು. ಈ ಮೂಲಕ ಒಳ ಮೀಸಲಾತಿಗಾಗಿ ನಡೆದ ಮೂರು ದಶಕಗಳ ಹೋರಾಟಕ್ಕೆ ಜಯ ಲಭಿಸಿದೆ.
ಸಿದ್ದರಾಮಯ್ಯ ಮಾತನಾಡಿ ಒಳಮೀಸಲಾತಿ ವಿಚಾರವಾಗಿ ಸುದೀರ್ಘವಾಗಿ ಹೋರಾಟ ನಡೆದಿದೆ. ನಂತರ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಲಾಗಿತ್ತು. ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲ ಸಮುದಾಯಗಳು ಭಾಗಿಯಾಗಿದ್ದವು. ಒಳ ಮೀಸಲಾತಿ ಜಾರಿಗೆ ಸಮಾವೇಶದಲ್ಲಿ ಎಲ್ಲರೂ ಒಪ್ಪಿಕೊಂಡಿದ್ದೆವು ಎಂದು ಹೇಳಿದರು.

Continue Reading

Latest

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

VISTARANEWS.COM


on

ಕೆಟ್ ಮೈದಾನದಲ್ಲಿ ಶತಕಗಳ ಸರದಾರನಾಗಿ ಮೆರೆದ ‘ಮಾಸ್ಟರ್ ಬ್ಲಾಸ್ಟರ್’ ಸಚಿನ್ ತೆಂಡೂಲ್ಕರ್, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ದಶಕದ ನಂತರವೂ ವ್ಯವಹಾರ ಲೋಕದ ಅಧಿಪತಿಯಾಗಿ ಮುಂದುವರಿದಿದ್ದಾರೆ. ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದು ಆರಾಧಿಸಲ್ಪಡುವ ಸಚಿನ್, ಈಗ ಕೇವಲ ಕ್ರೀಡಾಪಟುವಾಗಿ ಉಳಿಯದೆ ಒಬ್ಬ ಚಾಣಾಕ್ಷ ಉದ್ಯಮಿ ಮತ್ತು ಹೂಡಿಕೆದಾರನಾಗಿ ಹೊರಹೊಮ್ಮಿದ್ದಾರೆ. ಏಪ್ರಿಲ್ 2026ರ ಇತ್ತೀಚಿನ ವರದಿಗಳ ಪ್ರಕಾರ, ಸಚಿನ್ ಅವರ ಒಟ್ಟು ಆಸ್ತಿ ಮೌಲ್ಯವು ಸುಮಾರು 170 ಮಿಲಿಯನ್ ಡಾಲರ್ (₹1,400 ಕೋಟಿಗೂ ಅಧಿಕ) ಎಂದು ಅಂದಾಜಿಸಲಾಗಿದೆ. 2025ರ ಸಾಲೊಂದರಲ್ಲೇ ಅವರು ಬ್ರ್ಯಾಂಡ್ ಒಪ್ಪಂದಗಳು ಮತ್ತು ಹೂಡಿಕೆಗಳ ಮೂಲಕ ಸರಿಸುಮಾರು ₹50 ಕೋಟಿ ಸಂಪಾದಿಸುವ ಮೂಲಕ ತಮ್ಮ ಆರ್ಥಿಕ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

ಸಚಿನ್ ಅವರ ಈ ಬೃಹತ್ ಆದಾಯದ ಹಿಂದೆ ಅವರ ದೂರದೃಷ್ಟಿಯ ಹೂಡಿಕೆಗಳಿವೆ. ಬಳಸಿದ ಕಾರುಗಳ ವೇದಿಕೆ ‘Spinny’, ಗೇಮಿಂಗ್ ಸ್ಟಾರ್ಟ್-ಅಪ್ ‘JetSynthesys’ ಮತ್ತು ಸೋಲಾರ್ ಕ್ಷೇತ್ರದ ‘Truzon Solar’ ಸೇರಿದಂತೆ ‘Zepto’ ಮತ್ತು ‘Vahdam Teas’ ನಂತಹ ಪ್ರಮುಖ ಸಂಸ್ಥೆಗಳಲ್ಲಿ ಅವರು ಬಂಡವಾಳ ಹೂಡಿದ್ದಾರೆ. ಇಷ್ಟೇ ಅಲ್ಲದೆ, ತಮ್ಮದೇ ಆದ ‘Ten XU’ ಸ್ಪೋರ್ಟ್ಸ್‌ವೇರ್ ಬ್ರ್ಯಾಂಡ್ ಮತ್ತು ‘True Blue’ ಫ್ಯಾಷನ್ ಲೇಬಲ್ ಮೂಲಕ ಉದ್ಯಮ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಚಿನ್ ಎಂಬ ಹೆಸರೇ ಒಂದು ಶಕ್ತಿಯುತ ಬ್ರ್ಯಾಂಡ್ ಆಗಿರುವುದರಿಂದ, ಅಪೋಲೋ ಟೈರ್ಸ್‌ನಿಂದ ಹಿಡಿದು ಪ್ರಮುಖ ಬ್ಯಾಂಕ್‌ಗಳವರೆಗೆ ಹಲವು ಕಂಪನಿಗಳು ಇಂದಿಗೂ ಅವರ ವಿಶ್ವಾಸಾರ್ಹ ಇಮೇಜ್ ಅನ್ನು ಬಳಸಿಕೊಳ್ಳಲು ಕೋಟಿ ಕೋಟಿ ಸಂಭಾವನೆ ನೀಡುತ್ತಿವೆ.

ಇನ್ನು ರಿಯಲ್ ಎಸ್ಟೇಟ್ ವಿಷಯಕ್ಕೆ ಬಂದರೆ, ಸಚಿನ್ ಅವರ ಆಸ್ತಿಗಳು ಯಾರಿಗೂ ಕಡಿಮೆ ಇಲ್ಲದಂತಿವೆ. ಮುಂಬೈನ ಬಾಂದ್ರಾದಲ್ಲಿರುವ ಐಷಾರಾಮಿ ಬಂಗಲೆ, ದಕ್ಷಿಣ ಮುಂಬೈನ ಫ್ಲಾಟ್ ಮತ್ತು ಅಲಿಬಾಗ್‌ನಲ್ಲಿರುವ ಆಸ್ತಿಗಳ ಒಟ್ಟು ಮೌಲ್ಯವೇ ಸುಮಾರು ₹300 ಕೋಟಿ ಮೀರಿದೆ ಎಂದು ಅಂದಾಜಿಸಲಾಗಿದೆ. ಮೈದಾನದಲ್ಲಿ ರನ್ ಮಳೆ ಸುರಿಸಿದ ಮಾದರಿಯಲ್ಲೇ, ವ್ಯವಹಾರ ಲೋಕದಲ್ಲಿ ಸರಿಯಾದ ಕಾರ್ಯತಂತ್ರ ಮತ್ತು ಹೂಡಿಕೆಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸಚಿನ್ ಸಾವಿರಾರು ಕೋಟಿಗಳ ಸಾಮ್ರಾಜ್ಯವನ್ನು ಕಟ್ಟಿದ್ದಾರೆ. ಒಟ್ಟಾರೆಯಾಗಿ, ನಿವೃತ್ತಿಯ ನಂತರವೂ ಸಚಿನ್ ಅವರ ಈ ‘ಸೆಕೆಂಡ್ ಇನ್ನಿಂಗ್ಸ್’ ಯುವ ಉದ್ಯಮಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.

Continue Reading

Latest

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್: ಒಪ್ಪಂದಕ್ಕೆ ಸಹಿ

VISTARANEWS.COM


on

ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸೀನ್‌, ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ಸಮ್ಮುಖದಲ್ಲಿ ವಿಕಾಸ ಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
“ಹೃದಯ ಆರೈಕೆ ಸೇವೆಯನ್ನು ಬೆಂಗಳೂರಿನ ಪಶ್ಚಿಮ ಭಾಗದ ಜನರಿಗೂ ಒದಗಿಸಲು ಇದು ಒಂದು ಉತ್ತಮ ಹೆಜ್ಜೆಯಾಗಿದೆ. ಗೋವಿಂದರಾಜನಗರದಲ್ಲಿರುವ ಜಿಬಿಎಯ ಅಸ್ತಿತ್ವದಲ್ಲಿರುವ ಮಲ್ಟಿಸ್ಪೆಷಾಲಿಟಿ ಕಟ್ಟಡದಲ್ಲಿ ಸ್ಥಾಪಿಸಲಾಗುವ ಹೊಸ ಘಟಕವು ವಿಜಯನಗರ, ರಾಜಾಜಿನಗರ, ಯಶವಂತಪುರ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಪೀಣ್ಯ ಮತ್ತು ಬೆಂಗಳೂರು ಗ್ರಾಮಾಂತರ ನಿವಾಸಿಗಳಿಗೆ ಹಾಗೂ ರಾಮನಗರ, ಮಂಡ್ಯ, ತುಮಕೂರು ಮತ್ತು ಹಾಸನ ಜಿಲ್ಲೆಗಳ ರೋಗಿಗಳಿಗೆ ಅನುಕೂಲವಾಗಲಿದೆ” ಎಂದು ಸಚಿವ ಡಾ. ಪಾಟೀಲ್ ಹೇಳಿದರು.
100 ಹಾಸಿಗೆಗಳ ಘಟಕವನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ₹15 ಕೋಟಿ ಮೀಸಲಿರಿಸಲಿದೆ. ಪಶ್ಚಿಮ ಮಹಾನಗರ ಪಾಲಿಕೆ ಮೂಲಕ ಹಣಕಾಸು ಒದಗಿಸಲು ಮತ್ತು ಸಿಎಸ್ಆರ್ ನಿಧಿಯ ಅಡಿಯಲ್ಲಿ ಕ್ಯಾಥ್‌ಲ್ಯಾಬ್ ಸೌಲಭ್ಯವನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದೇವೆ ಎಂದು ಶಾಸಕ ಪ್ರಿಯಕೃಷ್ಣ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಾದ್ಯಂತ ಜಯದೇವ ಜಾಲವನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ದಿನೇಶ್ ಘೋಷಿಸಿದರು. ಬೆಂಗಳೂರಿನ ಮಧ್ಯ, ಉತ್ತರ ಮತ್ತು ಪೂರ್ವ ಭಾಗದಲ್ಲಿ ಜಯದೇವ ಘಟಕಗಳನ್ನು ಸ್ಥಾಪಿಸುವ ಯೋಜನೆ ಇದೆ. ಉತ್ತರ ಬೆಂಗಳೂರಿನ ಘಟಕಕ್ಕೆ ಈಗಾಗಲೇ ಸ್ಥಳವನ್ನು ಗುರುತಿಸಲಾಗಿದ್ದು, ಬ್ಯಾಟರಾಯನಪುರ ಶಾಸಕ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಸಮಾಲೋಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿ&ಆರ್‌ಐ) ಹೊಸ ಕ್ಯಾಂಪಸ್ ಅನ್ನು ಬೆಂಗಳೂರು ಪಶ್ಚಿಮ ಸ್ಥಾಪಿಸಲು ಕನಿಷ್ಠ ಐದು ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸುವಂತೆ ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಗಿದೆ. ಕಲಬುರಗಿ ಮತ್ತು ಮೈಸೂರಿನಲ್ಲಿ ಈಗಾಗಲೇ ಪ್ರತ್ಯೇಕ ಘಟಕಗಳನ್ನು ಆರಂಭಿಸಲಾಗಿದೆ. ಜಯದೇವ ಮುಖ್ಯ ಆಸ್ಪತ್ರೆಯಲ್ಲಿ ರೋಗಿಗಳ ಕಡಿಮೆ ಮಾಡಲು ಈ ಘಟಕಗಳು ನೆರವಾಗಲಿವೆ.

Continue Reading

Latest

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಆರೋಗ್ಯ ಸ್ಥಿತಿ ಗಂಭೀರ?; ಕೃತಕ ಕಾಲು,ಸೀಳು ತುಟಿ, ಒಡೆದ ಮುಖ…

VISTARANEWS.COM


on

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಭೂಗತರಾಗಿದ್ದಾರೆ. ಅಧಿಕಾರ ವಹಿಸಿಕೊಂಡ ದಿನದಿಂದ ಅವರು ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಇರಾನ್‌ ಮೇಲೆ ನಡೆದ ದಾಳಿಯಲ್ಲಿ ಮೊಜ್ತಬಾ ಖಮೇನಿ ಅವರ ಮೇಲೂ ದಾಳಿ ನಡೆದಿದ್ದು, ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮೊಜ್ತಬಾ ಅವರಿಗೆ ಭಾರಿ ಪ್ರಮಾಣದ ಗಾಯಗಳಾಗಿದ್ದು, ಅವರು ಕಾಲು ಕಳೆದುಕೊಂಡಿದ್ದಾರೆ. ತುಟಿಗಳು ಮತ್ತು ಮುಖ ಸುಟ್ಟು ಹೋಗಿದೆ. ಪ್ಲಾಸ್ಟಿಕ್ ಸರ್ಜರಿ ಆಗುವವರೆಗೂ ಅವರು ಬಹಿರಂಗವಾಗಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಗಳು ಹೇಳುತ್ತಿವೆ. ಆದರೂ ಮೊಜ್ತಬಾ ಮಾನಸಿಕವಾಗಿ ಅತ್ಯಂತ ಸದೃಢ, ತೀಕ್ಷ್ಣಮತಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಯೊಂದು ನಿರ್ಧಾರವನ್ನು ತೆಗೆದುಕೊಳ್ಳಲು ಮೊಜ್ತಬಾ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ಸ್‌ನ ಜನರಲ್‌ಗಳನ್ನು ಅವಲಂಬಿಸಿದ್ದಾರೆ. ರೆವಲ್ಯೂಶನರಿ ಗಾರ್ಡ್ಸ್ ಕಾರ್ಪ್ ಮಂಡಳಿ ನಿರ್ದೇಶಕರಾಗಿರುವ ಮೊಜ್ತಬಾ ಅವರು ಸಲಹೆ ಮತ್ತು ಮಾರ್ಗದರ್ಶನಕ್ಕಾಗಿ ಮಂಡಳಿ ಸದಸ್ಯರನ್ನೇ ಹೆಚ್ಚು ಅವಲಂಬಿಸಿದ್ದಾರೆ. ಅವರೆಲ್ಲರೂ ಸಾಮೂಹಿಕವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ ಎಂದು ಇರಾನ್ ಮಾಜಿ ಅಧ್ಯಕ್ಷ ಮೆಹಮೂದ್ ಅಹ್ಮದಿನೆಜದ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಜಕಾರಣಿ ಅಬ್ಡೊಲ್ರೆಜಾ ದವಾರು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಅಮೆರಿಕ ನಡೆಸಿದ ದಾಳಿಯಲ್ಲಿ ಅವರು ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡಿರುವ ಮೊಜ್ತಬಾ, ಭೇಟಿಗೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಅವಕಾಶ ನೀಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮೊಜ್ತಬಾ ಅವರ ಭೇಟಿಗೆ ರಾಜಕೀಯ ನಾಯಕರು ಸೇರಿದಂತೆ ಯಾರಿಗೂ ಅವಕಾಶ ನೀಡಲಾಗುತ್ತಿಲ್ಲ. ಆರೋಗ್ಯ ಸಚಿವರು, ಸ್ವತಃ ಹೃದ್ರೋಗದ ವೈದ್ಯರೂ ಆಗಿರುವ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ವೈದ್ಯಕೀಯ ಚಿಕಿತ್ಸೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮೊಜ್ತಬಾ ಅವರ ಒಂದು ಕಾಲಿಗೆ ಮೂರು ಶಸ್ತ್ರಚಿಕಿತ್ಸೆ ಆಗಿದ್ದು, ಕೃತಕ ಕಾಲನ್ನು ಬಳಸುತ್ತಿದ್ದಾರೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ತುಟಿಗಳು ಮತ್ತು ಮುಖ ಗಂಭೀರವಾಗಿ ಸುಟ್ಟುಹೋಗಿದ್ದು, ಮಾತನಾಡಲು ಸಾಧ್ಯವಾಗುತ್ತಿಲ್ಲ. ಅವರಿಗೆ ಪ್ಲಾಸ್ಟಿಕ್ ಸರ್ಜರಿಯ ಅಗತ್ಯವಿದೆ.ಲಿಖಿತ ಹೇಳಿಕೆ ಮೂಲಕ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

Continue Reading
Advertisement
Latest1 minute ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ, ಸ್ಪಶ್ಯ ಜಾತಿಗಳಿಗೆ ತಲಾ ಶೇ. 5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

Latest23 minutes ago

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

Latest37 minutes ago

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

Latest59 minutes ago

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್: ಒಪ್ಪಂದಕ್ಕೆ ಸಹಿ

Latest1 hour ago

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಆರೋಗ್ಯ ಸ್ಥಿತಿ ಗಂಭೀರ?; ಕೃತಕ ಕಾಲು,ಸೀಳು ತುಟಿ, ಒಡೆದ ಮುಖ…

bigbreaking1 hour ago

ಬಿಜೆಪಿಗೆ ಸೇರಿದ ಎಎಪಿ ದಿಗ್ಗಜ ರಾಘವ್ ಚಡ್ಡಾ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್! ಪಕ್ಷಾಂತರಕ್ಕೆ ಕೊಟ್ಟ ಕಾರಣವೇನು?

Latest2 hours ago

ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸುತ್ತಿದ್ದೀರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ

Latest2 hours ago

ಬಿಜೆಪಿ ನಾಯಕನ ಮಗನಿಗೆ ಹೈಕೋರ್ಟ್ ಬಿಸಿ: ಮದುವೆಯಾಗದೆ ಮಗು ನೀಡಿದ ಲವರ್‌ಗೆ ಮಾಸಿಕ 75 ಸಾವಿರ ರೂ. ಜೀವನಾಂಶ ದಂಡ

Latest2 hours ago

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ

Latest3 hours ago

ಸಿಎಂ-ಡಿಸಿಎಂ ನಡುವೆ ಮುಂದುವರೆದ ಶೀತಲ ಸಮರ: ಈ ಭಾರಿಯಾದರೂ ಫಲ ನೀಡುವುದು ಶಿವಕುಮಾರ್‌ ದೆಹಲಿ ಯಾತ್ರೆ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌