ಶಿವಮೊಗ್ಗದಲ್ಲಿ ನಿಂತ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು - Vistara News

ಶಿವಮೊಗ್ಗ

ಶಿವಮೊಗ್ಗದಲ್ಲಿ ನಿಂತ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

ಶಿವಮೊಗ್ಗದಲ್ಲಿ (Shivamogga) ನಿಂತ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಇದೀಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

VISTARANEWS.COM


on

Shivamogga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ : ನಿಂತ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಬ್ಬಲಗೆರೆಯಲ್ಲಿ (Shivamogga) ಬೆಳಗ್ಗಿನ ಜಾವ ಶುಕ್ರವಾರ (ಆ.12) ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ನ್ಯಾಮತಿಯ ರಾಮ್ ಕುಮಾರ್ (22) ಹಾಗೂ ಮಲ್ಲಿಕಾರ್ಜುನ (30) ಮೃತ ದುರ್ದೈವಿಗಳಾಗಿದ್ದಾರೆ. ಯುವಕರು ಸವಳಂಗ ರಸ್ತೆಯ ಮಾರ್ಗವಾಗಿ ಕಾರ್ಖಾನೆಗೆ ಕೆಲಸಕ್ಕೆ ಹೋಗುವಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದೀಗ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ | ಡಿವೈಡರ್‌ಗೆ ಬೈಕ್‌ ಡಿಕ್ಕಿ, ಸವಾರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Karnataka Weather Forecast : ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಿರುಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂಜಾನೆ ಮೋಡ ಕವಿದ ವಾತಾವರಣದೊಂದಿಗೆ ತಂಪು ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 32 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Karnataka Weather Forecast : ವಾರಾಂತ್ಯದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಬೆಂಗಳೂರು ಸೇರಿ ಮುಕ್ಕಾಲು ಕರ್ನಾಟಕದಲ್ಲಿ ಮಳೆ ಬೀಳಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಬೆಳಗಾವಿ: ಕಳೆದ ಮೂರು ದಿನಗಳಿಂದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದ್ದು, ಮೇ 15ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಶುಕ್ರವಾರದಂದು ಹಲವೆಡೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾಗೂ ಅವರ ಶ್ವಾನಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು

ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ಶ್ವಾನವೊಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಪ್ನ (48) ಮೃತ ದುರ್ದೈವಿ. ಸ್ವಪ್ನ ಅವರ ಮಗ ಜ್ಞಾನೇಶ್ವರಗೆ (20) ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾಕು ನಾಯಿಯು ಸಿಡಿಲಿಗೆ ಬಲಿಯಾಗಿದೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ‌ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆಯಿಂದ ವಾತಾವರಣ ತಂಪಾಗಿತ್ತು. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಿಸಿಲು ನಾಡು ಯಾದಗಿರಿಯಲ್ಲಿ ವರುಣನ ಸಿಂಚನವಾಗಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಶಹಾಪುರ ಪಟ್ಟಣ ಮಲೆನಾಡಿನಂತಾಗಿತ್ತು. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರು ಸಂತಸಗೊಂಡರು. ಶಹಾಪುರ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದೆ.

ಕೊಪ್ಪಳದಲ್ಲಿ ಭಾರಿ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ

ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ ಭಾರಿ ಬಿರುಗಾಳಿ ಮಳೆಗೆ ಬಾಳೆ ಬೆಳೆಯು ಹಾಳಾಗಿದೆ. ಡೊಂಬರಹಳ್ಳಿ ಗ್ರಾಮದ ಬಸವರಡ್ಡಿ ಕರಡ್ಡಿ ಎಂಬುವವರಿಗೆ ಸೇರಿದ ಸುಮಾರು ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆಯು ನೆಲಕ್ಕುರುಳಿದೆ. ಬಾಳೆ ಗೊನೆ ಬಿಟ್ಟು ಫಸಲು ನೀಡುವ ವೇಳೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ತೋಟಗಾರಿಕೆ ಇಲಾಖೆಯವರು ಸಮಿಕ್ಷೆ ಮಾಡಿ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮೇ 15ರವರೆಗೆ ಮಳೆ ಎಚ್ಚರಿಕೆ

ಮಲೆನಾರಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯು ಅಬ್ಬರಿಸಲಿದೆ. ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕಾರವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ (40-50 kmph) ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಜತೆಗೆ (40-50 kmph) ವ್ಯಾಪಕ ಮಳೆಯಾಗಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 21°C ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

Road Accident : ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ/ಕೋಲಾರ : ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಭೀಕರ ಅಪಘಾತ (Road Accident) ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ದುರ್ಮರಣ ಹೊಂದಿದ್ದಾರೆ. ನಿಂತಿರುವ ಟಿಪ್ಪರ್‌ ವಾಹನಕ್ಕೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಎರಡು ವಾಹನಗಳ ಮುಂಭಾಗ ಜಖಂಗೊಂಡಿದ್ದು, ಅದರಡಿ ಸಿಲುಕಿದ ಸಲ್ಮಾನ್ ಎಂಬಾತ ಮೃತಪಟ್ಟಿದ್ದಾನೆ.

ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿ ನಿವಾಸಿ ಸಲ್ಮಾನ್ ದಾರುಣವಾಗಿ ಮೃತಪಟ್ಟರೆ ಇತ್ತ ಟಿಪ್ಪರ್ ವಾಹನ ಚಾಲಕ ಗಂಭೀರಗೊಂಡಿದ್ದಾರೆ. ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಗುಂಬೆಯಿಂದ ತೀರ್ಥಹಳ್ಳಿಗೆ ಬರುವ ವೇಳೆ ದುರ್ಘಟನೆ ನಡೆದಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೋಲಾರದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಬಳಿ ನಡೆದಿದೆ. ಗುಲ್ಲಹಳ್ಳಿ ಗ್ರಾನದ (25) ಮಧು ಮೃತ ದುರ್ದೈವಿ.

ಕಾಮಸಮುದ್ರದಿಂದ ಬೂದಿಕೋಟೆ ಕಡೆ ಬರುತ್ತಿದ್ದ ಲಾರಿಯು ವೇಗವಾಗಿ ಬಂದು ಬೈಕ್‌ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದಾನೆ. ಬೂದಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಕೊಪ್ಪಳದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವು

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತಪಟ್ಟಿದ್ದಾರೆ. ಈರಪ್ಪ ಕುರಿ (55) ಮೃತ ದುರ್ದೈವಿ. ಕಟ್ಟಿಗೆ ತರಲು ಹೋದಾಗ ಅವಘಡ ನಡೆದಿದೆ. ರೆನ್ಯೂ ವಿಂಡ್ ಪವರ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುಕನೂರು ಪೊಲೀಸರು ಪರಿಶೀಲಿಸಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Rain Effect : ಭಾರಿ ಮಳೆ ಗಾಳಿಗೆ (Heavy Rain) ಅನಾಹುತಗಳು ಸಂಭವಿಸುತ್ತಿವೆ. ನೆಲಮಂಗಲದಲ್ಲಿ ರಭಸವಾಗಿ ಬೀಸಿದ ಬಿರುಗಾಳಿ ಮನೆಯ ಗೇಟ್‌ ಕಿತ್ತು ಬಂದು, ಅಲ್ಲೆ ಆಡವಾಡುತ್ತಿದ್ದ ಬಾಲಕಿ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟಿದ್ದಾಳೆ. ಸಿಡಿಲಿಗೆ ಎತ್ತುಗಳು ಬಲಿಯಾದರೆ, ಮರ ಬಿದ್ದರೂ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Rain Effect In karnataka
ಮೃತ ಬಾಲಕಿ ಯಲ್ಲಮ್ಮ ಹಾಗೂ ಸಿಡಿಲಿಗೆ ಬಲಿಯಾದ ಎತ್ತುಗಳು
Koo

ನೆಲಮಂಗಲ: ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ (Rain Effect) ಮನೆಯ ಗೇಟ್ ಕಿತ್ತು ಬಂದಿದ್ದು,ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಮೇಲೆ ಗೇಟ್‌ ಬಿದ್ದಿದೆ. ಪರಿಣಾಮ ಬಾಲಕಿ ಯಲ್ಲಮ್ಮ (7) ಎಂಬಾಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಘಟನೆ ನಡೆದಿದೆ.

ನಿನ್ನೆ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಗೇಟ್ ಕಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಮೂಲದ ಮುಕ್ಕಣ್ಣ ಹಾಗೂ ಬಾಲಮ್ಮರ ದಂಪತಿ ಕೂಲಿ ಕೆಲಸ ಮಾಡಿಕೊಂಡು ಬೆಂಗಳೂರಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಮಳೆಯು ಮುದ್ದು ಮಗಳನ್ನು ಕಸಿದುಕೊಂಡಿದೆ.

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬಳ್ಳಾರಿಯಲ್ಲಿ ಸಿಡಿಲು ಬಡಿದು ಎತ್ತುಗಳು ಸಾವು

ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಸಂಜೆ ವೇಳೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದೆ. ನಾಯಕರ ದೊಡ್ಡಬಸಪ್ಪ ಎಂಬುವವರಿಗೆ ಸೇರಿದ ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ತಲಾ ಒಂದು ಲಕ್ಷ ರೂ. ಮೌಲ್ಯದ ಎರಡು ಎತ್ತುಗಳು ಮೃತಪಟ್ಟಿದ್ದಕ್ಕೆ ರೈತ ಕಂಗಲಾಗಿದ್ದರು. ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

ಸ್ವಲ್ಪ ಯಾಮಾರಿದರೂ ಹಾರಿಹೋಗುತ್ತಿತ್ತು ನಾಲ್ವರ ಪ್ರಾಣ ಪಕ್ಷಿ

ಬೆಂಗಳೂರಿನ ನಾಗರಭಾವಿಯ ಎನ್‌ಜಿಎಫ್‌ ಲೇಔಟ್‌ನಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ವಲ್ಪ ಯಾಮಾರಿದರೂ ನಾಲ್ವರ ಪ್ರಾಣ ಪಕ್ಷಿ ಹಾರಿಹೋಗುತ್ತಿತ್ತು. ಶಿವು ಎಂಬುವವರು ರಾಯಚೂರಿನಿಂದ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು.

ಶೆಡ್‌ವೊಂದರಲ್ಲಿ ಶಿವು ದಂಪತಿ ಮತ್ತು ಇಬ್ಬರು ಮಕ್ಕಳು ವಾಸಿಸುತ್ತಿದ್ದರು. ನಿನ್ನೆ ಬುಧವಾರ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಬೃಹತ್‌ ಮರ ಹಾಗೂ ವಿದ್ಯುತ್‌ ಕಂಬ ಧರೆಗೆ ಉರುಳಿದ್ದವು. ವಿದ್ಯುತ್ ಕಂಬದ ಮೇಲೆ ಬೃಹತ್ ಮರ ಬಿದ್ದು, ಶೆಡ್‌ಗೆ ಉರುಳಿತ್ತು. ಅದೃಷ್ಟವಶಾತ್‌ ಆ ಸಮಯದಲ್ಲಿ ಶೆಡ್‌ನಲ್ಲಿ ಯಾರು ಇರಲಿಲ್ಲ. ಹೀಗಾಗಿ ಅನಾಹುತವೊಂದು ತಪ್ಪಿತ್ತು. ಮೊನ್ನೆ ಮರ ಬಿದ್ದ ಬಗ್ಗೆ ಬಿಬಿಎಂಪಿಗೆ ದೂರು ನೀಡಿದರೂ ಪಾಲಿಕೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಯಾವುದೇ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಮನೆಗಳಿಗೆ ನುಗ್ಗಿದ ಚರಂಡಿ ಮಿಶ್ರಿತ ಮಳೆ ನೀರು

ರಾತ್ರಿ ಪೂರ್ತಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನ ಉಲ್ಲಾಳದಲ್ಲಿರುವ ಮನೆಗಳಿಗೆ ನೀರು ನುಗ್ಗಿತ್ತು. ಪರಿಣಾಮ ನಿವಾಸಿಗಳು ಜಾಗರಣೆ ಇದ್ದು, ರಾತ್ರಿಯಿಡೀ ನೀರು ತೆಗೆಯುವ ಕಾರ್ಯದಲ್ಲಿ ಮಗ್ನರಾಗಿದ್ದರು. ಇತ್ತ ಚಾಮರಾಜಪೇಟೆಯ ಜೆಜೆಆರ್ ನಗರದ ಮನೆಗಳಿಗೆ ಭಾರಿ ಮಳೆಗೆ ಕೊಳಚೆ ನೀರು ನುಗ್ಗಿತ್ತು ಈ ಹಿನ್ನೆಲೆಯಲ್ಲಿ ನಿವಾಸಿಗಳ ಆಕ್ರೋಶ ಹೊರಹಾಕಿದರು. ಮಳೆಗಾಲದಲ್ಲಿ ಬಿನ್ನಿ ಮಿಲ್ ಮುಖ್ಯ ರಸ್ತೆಯಲ್ಲಿರುವ ಸಲಾರ್ಪುರಿಯ ಅಪಾರ್ಟ್ಮೆಂಟ್‌ನಿಂದ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ ಎಂದು ನಿವಾಸಿಗಳು ಆಕ್ರೋಶಿಸಿದರು. ನಿನ್ನೆ ಬುಧವಾರ ಸ್ಥಳೀಯರು ಅಪಾರ್ಟ್‌ಮೆಂಟ್ ಎದುರು ಪ್ರತಿಭಟನೆಯನ್ನೂ ನಡೆಸಿದ್ದರು.

ಏರ್‌ಪೋರ್ಟ್‌ಗೂ ನುಗ್ಗಿದ ನೀರು

ದೇವನಹಳ್ಳಿ ಸುತ್ತಮುತ್ತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿತ್ತು. ಮೇಲ್ಚಾವಣಿಯಿಂದ ಟರ್ಮಿನಲ್ ಒಳಗಡೆಗೆ ನೀರು ಸೋರುತ್ತಿದ್ದು, ಲಗೇಜ್ ಬೇ ಬಳಿ ನೀರು ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರದಾಡಬೇಕಾಯಿತು. ಇನ್ನೂ ರನ್ ವೇ ಕ್ಲಿಯರೆನ್ಸ್ ಇಲ್ಲದ ಕಾರಣ 18ಕ್ಕೂ ಅಧಿಕ ವಿಮಾನಗಳು ಬೇರೆಡೆಗೆ ಡೈವರ್ಟ್ ಮಾಡಲಾಯಿತು.

ಉದ್ಘಾಟನೆಗೂ ಮುನ್ನವೇ ಮುಳುಗಿದ ಅಂಡರ್ ಪಾಸ್

ಮೈಸೂರು ರಸ್ತೆಯ ಆರ್‌ವಿ ಕಾಲೇಜ್ ಮುಂಭಾಗದ ಅಂಡರ್ ಪಾಸ್ ಉದ್ಘಾಟನೆಗೂ ಮುನ್ನವೇ ಮುಳುಗಿತ್ತು. ರೈಲ್ವೆ ಟ್ರ್ಯಾಕ್ ಕೆಳಗೆ ನೂತನವಾಗಿ ನಿರ್ಮಾಣ ಆಗಿರುವ ಅಂಡರ್ ಪಾಸ್‌ನಲ್ಲಿ ಮಳೆ ನೀರು ನಿಲ್ಲುವಂತಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case in Bengaluru rural
ಬೆಂಗಳೂರು ಗ್ರಾಮಾಂತರ52 seconds ago

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Narendra Modi
ದೇಶ3 mins ago

Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

Prajwal Revanna Case
ಕರ್ನಾಟಕ7 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

K S Rajanna
ದೇಶ1 hour ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ1 hour ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ2 hours ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ2 hours ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ2 hours ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ3 hours ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ3 hours ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ20 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ22 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ23 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌