ಸತ್ಯನಾರಾಯಣ ಪೂಜೆಯೆಂದು ಒಂದು ಗಂಟೆ ಪೊಲೀಸರನ್ನು ಕಾಯಿಸಿದ ಪುನೀತ್‌ ಕೆರೆಹಳ್ಳಿ - Vistara News

ಪ್ರಮುಖ ಸುದ್ದಿ

ಸತ್ಯನಾರಾಯಣ ಪೂಜೆಯೆಂದು ಒಂದು ಗಂಟೆ ಪೊಲೀಸರನ್ನು ಕಾಯಿಸಿದ ಪುನೀತ್‌ ಕೆರೆಹಳ್ಳಿ

ಶಿವಮೊಗ್ಗದಲ್ಲಿ ಸಾವರ್ಕರ್‌ ಭಾವಚಿತ್ರವನ್ನು ವಿರೋಧಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಅನ್ನು ಹರಿಯಲಾಗಿತ್ತು.

VISTARANEWS.COM


on

puneeth kerehalli
ಪುನೀತ್‌ ಕೆರೆಹಳ್ಳಿಯನ್ನು ವಶಕ್ಕೆ ಪಡೆದ ಪೊಲೀಸರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ವತಿಯಿಂದ ಸೋಮವಾರ ಆಯೋಜನೆ ಮಾಡಲಾಗಿರುವ ಫ್ರೀಡಂ ಮಾರ್ಚ್‌ ಕಾರ್ಯಕ್ರಮಕ್ಕೆ ಸಂಬಂಧಿಸಿ ಅಳವಡಿಸಿದ್ದ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದ ಆರೋಪದಲ್ಲಿ ಹಿಂದೂ ಪರ ಸಂಘಟನೆಯ ಪುನೀತ್‌ ಕೆರೆಹಳ್ಳಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಶಿವಪ್ಪನಾಯಕ ಮಾಲ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೊಟೊಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಭಾವಚಿತ್ರವನ್ನು ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸ್‌ಡಿಪಿಐ ಸಂಘಟನೆ ಕಾರ್ಯಕರ್ತರು ಅದನ್ನು ತೆರವುಗೊಳಿಸುವಂತೆ ಹೇಳಿದ್ದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕ ಮನೆಮಾಡಿತ್ತು. ಸಾವರ್ಕರ್‌ ಭಾವಚಿತ್ರ ಬೇಡ ಎಂದರೆ ಟಿಪ್ಪು ಸುಲ್ತಾನ್‌ ಭಾವಚಿತ್ರ ಬೇಡ ಎಂದು ಬೆಂಗಳೂರಿನ ಹಡ್ಸನ್‌ ವೃತ್ತದಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಅನ್ನು ಪುನೀತ್‌ ಕೆರೆಹಳ್ಳಿ ಹಾಗೂ ಸಂಗಡಿಗರು ಹರಿದಿದ್ದರು ಎಂದು ಆರೋಪಿಸಲಾಗಿದೆ.

ಈ ಕುರಿತು ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಹಲಸೂರು ಗೇಟ್‌ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಗರದ ಹೊರವಲಯದ ನೆಲಗದರನಹಳ್ಳಿಯಲ್ಲಿರುವ ಚಿಕ್ಕಪ್ಪನ ಮನೆಯಿಂದ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಲಾಗಿದೆ. ಫ್ಲೆಕ್ಸ್‌ ಹರಿದ ನಂತರ ಫೋನ್‌ ಆನ್‌ ಮಾಡಿಟ್ಟುಕೊಂಡಿದ್ದ ಪುನೀತ್‌, ತುಮಕೂರಿನವರೆಗೆ ತೆರಳಿ ಅಲ್ಲಿ ಫೋನ್‌ ಸ್ವಿಚ್ಡ್‌ ಆಫ್‌ ಮಾಡಿದ್ದ. ಆನಂತರ ಬೆಂಗಳೂರು ಕಡೆಗೆ ವಾಪಸಾಗಿ, ನೆಲಗದರನಹಳ್ಳಿಗೆ ತೆರಳಿದ್ದಾನೆ.

ಫೋನ್‌ ಟವರ್‌ ಹಿಂಬಾಲಿಸಿದ ಪೊಲೀಸರು, ಸಾವರ್ಕರ್‌ ಫೋಟೊ ವಿವಾದವಾಗಿದ್ದ ಶಿವಮೊಗ್ಗಕ್ಕೆ ಹೋಗಿರಬಹುದು ಎಂದು ಭಾವಿಸಿದ್ದರು. ಆದರೆ ಮೂಲಗಳಿಂದ ಮಾಹಿತಿ ಪಡೆದು ನೆಲಗದರನಹಳ್ಳಿಗೆ ಧಾವಿಸಿದ್ದಾರೆ. ಪೊಲೀಸರನ್ನು ದಾರಿ ತಪ್ಪಿಸಲು ಪುನೀತ್‌ ಹೀಗೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯನಾರಾಯಣ ಪೂಜೆಯಲ್ಲಿ ಭಾಗಿ

ನೆಲಗದರನಹಳ್ಳಿಗೆ ಪೊಲೀಸರು ತೆರಳಿದಾಗ, ತಾನು ಸತ್ಯನಾರಾಯಣ ಪೂಜೆಯಲ್ಲಿರುವುದಾಗಿ ಪುನೀತ್‌ ಹೇಳಿದ್ದಾನೆ. ಪೂಜೆ ಮುಗಿಸಿ ಬರುವುದಾಗಿ ತಿಳಿಸಿದ್ದು, ಸುಮಾರು ಒಂದು ಗಂಟೆ ಪೊಲೀಸರು ಕಾದಿದ್ದಾರೆ. ಪೂಜೆ ಮುಗಿದ ನಂತರ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ. ಪುನೀತ್‌ ಕೆರೆಹಳ್ಳಿ ಜತೆಗೆ ಅನಂತ ರಾವ್‌, ಕುಮಾರ್‌ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಇಬ್ಬರ ಬಂಧನಕ್ಕೆ ಶೋಧ ನಡೆಯುತ್ತಿದೆ. ವಶಕ್ಕೆ ಪಡೆದ ಮೂವರನ್ನೂ ಬೌರಿಂಗ್‌ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದೆ.

ಸಾವಿರ ಬಾರಿ ಜೈಲಿಗೆ ಹೋಗಲು ಸಿದ್ಧ

ಪೊಲೀಸರು ಬಂಧಿಸಿ ಕರೆದೊಯ್ಯುವ ವೇಳೆ ಪ್ರತಿಕ್ರಿಯಿಸಿರುವ ಪುನೀತ್‌ ಕೆರೆಹಳ್ಳಿ, ವೀರ ಸಾವರ್ಕರ್‌ಗಾಗಿ ಇನ್ನೂ ಸಾವಿರ ಬಾರಿ ಜೈಲಿಗೆ ಹೋಗಲು ಸಿದ್ಧವಾಗಿದ್ದೇವೆ. ನಾವು ಟಿಪ್ಪು ಸುಲ್ತಾನ್‌ ಫೋಟೊ ಕಿತ್ತ ಕಡೆಗಳಲ್ಲಿ ಕಾಂಗ್ರೆಸ್‌ನವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಫೋಟೊ ಹಾಕಿದ್ದಾರೆ, ಇದು ಸಂತೋಷದ ವಿಚಾರ ಎಂದು ಪ್ರತಿಕ್ರಿಯಿಸಿದ್ದಾನೆ.

ಇದನ್ನೂ ಓದಿ | ಶಿವಮೊಗ್ಗ ಸಾವರ್ಕರ್‌ ಫೋಟೊ ವಿವಾದ: ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಎಂ.ಡಿ ಷರೀಫ್‌ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೋಲಾರ

Lovers Death : ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಅಪ್ರಾಪ್ತೆ ಸಾವು, ಹುಡುಗ ಗಂಭೀರ

Lovers Death : ಮನೆಯಲ್ಲಿ ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯಲ್ಲಿ ಅಪ್ರಾಪ್ತೆ ಮೃತಪಟ್ಟರೆ, ಹುಡುಗನ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

By

Lovers Death
Koo

ಕೋಲಾರ: ತಮಿಳುನಾಡಿನ ಗಡಿ ಅರಣ್ಯದಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ (Lovers Death) ಮಾಡಿಕೊಂಡಿದ್ದಾರೆ. ಹುಡುಗಿ ಸ್ಥಳದಲ್ಲಿಯೇ ಮೃತಪಟ್ಟರೆ, ಹುಡುಗ ಸಾವು ಬದುಕಿನ ಹೋರಾಟ ನಡೆಸುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪ್ರಾಪ್ತೆ ರಶ್ಮಿ (16) ಮೃತ ದುರ್ದೈವಿ. ಅಭಿಷೇಕ್ (20) ಅಸ್ವಸ್ಥಗೊಂಡವನು.

ತಮಿಳುನಾಡಿನ ಗಡಿ ಅಂಚಿನ ಮಾಲೂರು ತಾಲೂಕಿನ ನಿಡುಮಾಕನಹಳ್ಳಿ ಗ್ರಾಮದ ರಶ್ಮಿ, ಹಾಲೇರಿ ಗ್ರಾಮದ ಅಭಿಷೇಕ್ ಇಬ್ಬರು ಪ್ರೀತಿಸುತ್ತಿದ್ದರು. ಈ ಪ್ರೇಮಿಗಳು ಸಂಬಂಧಿಕರಾಗಿದ್ದು, ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದು ದುಡುಕು ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಸ್ತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

Karnataka Rain : ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ನಿನ್ನೆ (ಅ.5) ಸುರಿದ ಭಾರಿ ಮಳೆಗೆ (Bengaluru Rain) ಬೆಂಗಳೂರಿನ ಮಲ್ಲೇಶ್ವರದ 13ನೇ ಕ್ರಾಸ್‌ನಲ್ಲಿ ರಸ್ತೆ ಕುಸಿದಿದೆ. ಎರಡು ವಾರದ ಹಿಂದೆ ಗುಂಡಿ ಮುಚ್ಚಲು ಹಾಕಿದ್ದ ಟಾರು ಮಳೆಯಿಂದಾಗಿ (Karnataka Rain) ಕುಸಿದು ಬಿದ್ದಿದೆ. ಕಳಪೆ ಕಾಮಗಾರಿ ಹಿನ್ನೆಲೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ರಸ್ತೆಗಳಲ್ಲೇ ನೀರು ನಿಂತಿದ್ದರಿಂದ ಹಲವು ಕಡೆಗಳಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಕೋಗಿಲು ಕ್ರಾಸ್ ಬಳಿ ತಡೆಗೋಡೆ ಕುಸಿದು ಅಪಾರ್ಟ್‌ಮೆಂಟ್‌ ಒಳಗೆ ನೀರು ನುಗ್ಗಿದೆ. ಬಿನ್ನಿಪೇಟೆ ಬಳಿ ಚೇಂಬರ್ ಕಾಂಪೌಂಡ್ ಕುಸಿದು ಇಪ್ಪತ್ತಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದೆ. ಹಲವು ಮನೆಗಳಿಗೆ ನೀರು ನುಗ್ಗಿದೆ. ಬಸವೇಶ್ವರ ನಗರ, ಪುಟ್ಟೇನಹಳ್ಳಿ ಯಲಹಂಕಾ ಸೇರಿದಂತೆ ಹಲವೆಡೆ ಮನೆಗಳಿಗೆ ಜಲಕಂಟಕ ಎದುರಾಗಿದೆ. ನಗರದಲ್ಲಿ ಸರಾಸರಿ 36 ಮಿ.ಮೀ ಮಳೆ ದಾಖಲಾಗಿದೆ. ಕೊಟ್ಟಿಗೆ ಪಾಳ್ಯದಲ್ಲಿ 113 ಮಿ.ಮೀ ದಾಖಲೆಯ ಮಳೆಯಾದರೆ, ಹಂಪಿನಗರ, ನಾಗಪುರಗಳಲ್ಲಿ 10 ಸೆಂ.ಮೀಗಿಂತಲೂ ಮಳೆಯಾಗಿದೆ.

Karnataka Rain
Karnataka Rain

ಯಾವ್ಯಾವ ಭಾಗದಲ್ಲಿ ಎಷ್ಟು ಮಳೆ?

ಕೊಟ್ಟಿಗೆಪಾಳ್ಯ : 113 ಮಿ.ಮೀ
ಹಂಪಿನಗರ : 108 ಮಿ.ಮೀ
ನಾಗಪುರ : 107.5 ಮಿ.ಮೀ
ಚೌಡೇಶ್ವರಿ : 79.5 ಮಿ.ಮೀ
ಮಾರುತಿಮಂದಿರ : 75.5 ಮಿ.ಮೀ
ನಂದಿನಿ ಲೇಔಟ್ : 71.5 ಮಿ.ಮೀ
ರಾಜಾಜಿನಗರ : 59 ಮಿ.ಮೀ
ನಾಯಂಡಹಳ್ಳಿ : 46 ಮಿ.ಮೀ
HAL ಏರ್ಪೋರ್ಟ್ : 45 ಮಿ.ಮೀ
ವಿದ್ಯಾರಣ್ಯಪುರ : 45 ಮಿ.ಮೀ
ಪುಟ್ಟೇನಹಳ್ಳಿ : 42.5 ಮಿ.ಮೀ
RR ನಗರ : 42.5 ಮಿ.ಮೀ
ರಾಜಮಹಲ್ ಗುಟ್ಟಹಳ್ಳಿ : 42.5 ಮಿ.ಮೀ

ಸೇರಿದಂತೆ ಸರಾಸರಿ 36 ಮಿ.ಮೀ ಮಳೆ ದಾಖಲು

Karnataka Rain

ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತ

ಬೆಂಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿದೆ. ಅಪಾರ್ಟ್‌ಮೆಂಟ್‌ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ಅಪಾರ್ಟ್‌ಮೆಂಟ್‌ ಆವರಣಕ್ಕೆ ನೀರು ನುಗ್ಗಿದೆ. ಸುಮಾರು 20 ವರ್ಷಕ್ಕೂ ಹಿಂದಿನ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದಿದೆ. ಒಂಭತ್ತು ಎಕರೆ ವಿಸ್ತೀರ್ಣವುಳ್ಳ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಆವರಣದಲ್ಲಿ 603 ಫ್ಲಾಟ್‌ನಲ್ಲಿ ಎರಡು ಸಾವಿರ ಮಂದಿ ವಾಸವಿದ್ದಾರೆ. ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ನಿವಾಸಿಗಳು ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದ್ದಾರೆ. ಟ್ರ್ಯಾಕ್ಟರ್ ಮೂಲಕ ಅಪಾರ್ಟ್‌ಮೆಂಟ್‌ ನಿವಾಸಿಗಳನ್ನು ಕರೆದೊಯ್ದಬೇಕಾಯಿತು.

Karnataka Rain
Karnataka Rain

ಅಗ್ನಿಶಾಮಕದಳ ಸಿಬ್ಬಂದಿಯಿಂದ ನಿರಂತರವಾಗಿ ನೀರನ್ನು ಹೊರಹಾಕುವ ಕಾರ್ಯ ನಡೆಯಿತು. 80ಕ್ಕೂ ಹೆಚ್ಚು ಕಾರು ನೂರಕ್ಕೂ ಹೆಚ್ಚು ಬೈಕ್ ಭಾಗಶ: ನೀರಿನಲ್ಲಿ ಮುಳುಗಡೆಯಾಗಿದೆ. ಟ್ರ್ಯಾಕ್ಟರ್ ಹಾಗೂ ಬೋಟ್ ಮೂಲಕ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ಹಿರಿಯ ನಾಗರೀಕರು ಮತ್ತು ಮಕ್ಕಳನ್ನು ಕರೆದೊಯ್ಯಲು ನಿವಾಸಿಗಳು ಪರದಾಡಿದರು.

ಕೆರೆಯಂತಾದ ಕ್ರೀಡಾಂಗಣ

ರಾತ್ರಿ ಸುರಿದ ಮಳೆಗೆ ಕ್ರೀಡಾಂಗಣ ಜಲಾವೃತವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿನ ತಾಲೂಕು ಮಟ್ಟದ ಕ್ರೀಡಾಂಗಣವು ಕೆರೆಯಂತೆ ಭಾಸವಾಗುತ್ತಿದೆ. ಪ್ರತಿಬಾರಿ ಮಳೆ ಬಂದಾಗ ಕ್ರೀಡಾಂಗಣ ಜಲಾವೃತಗೊಳ್ಳುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣವು ಕ್ರೀಡಾ ಇಲಾಖೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆ ಆಗಿದೆ. ಸರಿಯಾದ ನಿರ್ವಹಣೆ ಇಲ್ಲದೆ ಕ್ರೀಡಾಂಗಣ ಹಾಳಾಗಿದೆ.

ಕೆಸರು ಗದ್ದೆಯಾದ ರಸ್ತೆ

ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಯು ಕೆಸರು ಗದ್ದೆಯಾಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ ನಿವಾಸಿಗಳು ಪರದಾಡುತ್ತಿದ್ದಾರೆ. ಆನೇಕಲ್‌ನ ಚಂದಾಪುರ ಪುರಸಭೆ ವಾರ್ಡ್ ನಂಬರ್ 20ರಲ್ಲಿ ಘಟನೆ ನಡೆದಿದೆ. ಹೆಡ್ ಮಾಸ್ಟರ್ ಲೇಔಟ್‌ಗೆ ಸಂಪರ್ಕ್ ಕಲ್ಪಿಸುವ ರಸ್ತೆ ಇದಾಗಿದೆ. ಮಳೆ ಬಂದಾಗ ರಸ್ತೆ ಜಲಾವೃತಗೊಂಡು ಸಂಪೂರ್ಣ ಕೆಸರುಮಯವಾಗಿದೆ. ನಿತ್ಯ ಓಡಾಡುವ ಜನರಿಗೆ ಈ ರಸ್ತೆಯಲ್ಲಿ ಸಂಚರಿಸುವುದೆ ನರಕಯಾತನೆ ಆಗಿದೆ. ಮಳೆ ಬಂದಾಗ ಕೆಸರು ಗದ್ದೆ, ಬಿಸಿಲಿನ ಸಮಯದಲ್ಲಿ ಧೂಳಿನ ಸಮಸ್ಯೆ ಎದುರಾಗಿದೆ. ರಸ್ತೆಯಲ್ಲಿ ಹಳ್ಳಗುಂಡಿಗಳು ಕಾಣದೆ ಬಿದ್ದು ನಿವಾಸಿಗಳು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಚಂದಾಪುರ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಭವಿಷ್ಯ

Dina Bhavishya : ಅತಿರೇಕದಲ್ಲಿ ಮಾತನಾಡುವ ಮುನ್ನ ಈ ರಾಶಿಯವರು ಯೋಚಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhvishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಭಾನುವಾರ ರಾತ್ರಿ 07:34ಕ್ಕೆ ಧನಸ್ಸು ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ,ಕನ್ಯಾ,ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕನ್ಯಾ ರಾಶಿಯವರು ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ 07:48 ವಾರ: ಭಾನುವಾರ
ನಕ್ಷತ್ರ: ವಿಶಾಖಾ 24:10 ಯೋಗ: ಪ್ರೀತಿ 30:38
ಕರಣ: ಗರಜ 07:48 ಅಮೃತಕಾಲ: ಮಧ್ಯಾಹ್ನ 02:25 ರಿಂದ 04:12
ದಿನದ ವಿಶೇಷ: ಶರನ್ನವರಾತ್ರಿ ಚತುರ್ಥಿ ದಿವಸ ಕೂಷ್ಮಾಂಡ ಅವತಾರ

ಸೂರ್ಯೋದಯ : 06:09   ಸೂರ್ಯಾಸ್ತ : 06:06

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ
3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ
12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ, ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಕಾರ್ಯದಲ್ಲಿ ನಿಧಾನಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕು ತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ.ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ.ಉತ್ತಮ ಆಲೋಚನೆಗಳು ಇರಲಿ.ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ.ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ, ಕಾಳಜಿ ಇರಲಿ.ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Karnataka Weather Forecast : ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Heavy Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕ ಕಡೆ ಭಾರೀ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿ.ಸೆ ಇರಲಿದೆ.

ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ 14 ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ ಸೇರಿದಂತೆ ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಯಚೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಗುಡುಗು ಸಹಿತ ಮಳೆ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ. ಮಲ್ಲಪ್ಪ ಬಡಿಗೇರ್ (50) ಮೃತ ದುರ್ದೈವಿ. ರಾಯಚೂರಿನ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಶುಕ್ರವಾರ ಸಂಜೆ 4.30 ಗಂಟೆಗೆ ಬಳಗಾನೂರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಳಗಾನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವರುಣನ ಅರ್ಭಟ ಜೋರಾಗಿತ್ತು. ಭಾರಿ ಮಳೆಗೆ ರಸ್ತೆ ಜಲಾವೃತಗೊಂಡು ವಡಗೇರಾ ಪಟ್ಟಣದ ನಿವಾಸಿಗಳ ಸಂಕಷ್ಟ ಅನುಭವಿಸಿದರು. ಕಲಬುರಗಿಯಲ್ಲೂ ಬಿಸಿಲ‌ ಬೇಗೆಗೆ ತತ್ತರಿಸಿದ ಜನತೆಗೆ ವರುಣ ತಂಪೆರಿದ್ದ. ನಗರದ ಹಲವೆಡೆ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇತ್ತ ಶುಕ್ರವಾರ ಬೆಂಗಳೂರು ಗ್ರಾಮಾಂತರದ ಆನೇಕಲ್, ಅತ್ತಿಬೆಲೆ, ಜಿಗಣಿ, ಚಂದಾಪುರ ಸೇರಿದಂತೆ ಹಲವೆಡೆ ಮಳೆಯಾಗಿತ್ತು. ರಸ್ತೆಯಲ್ಲಿಯೇ ಮಳೆ ನೀರು ನಿಂತು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರ ಪರದಾಡಿದರು.

Continue Reading
Advertisement
Lovers Death
ಕೋಲಾರ38 ನಿಮಿಷಗಳು ago

Lovers Death : ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಅಪ್ರಾಪ್ತೆ ಸಾವು, ಹುಡುಗ ಗಂಭೀರ

Karnataka Rain
ಮಳೆ1 ಗಂಟೆ ago

karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

Dina Bhvishya
ಭವಿಷ್ಯ2 ಗಂಟೆಗಳು ago

Dina Bhavishya : ಅತಿರೇಕದಲ್ಲಿ ಮಾತನಾಡುವ ಮುನ್ನ ಈ ರಾಶಿಯವರು ಯೋಚಿಸಿ

karnataka Weather Forecast
ಮಳೆ1 ದಿನ ago

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಮಿಂಚು ಸಾಥ್‌

Dina Bhavishya
ಭವಿಷ್ಯ1 ದಿನ ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

navaratri
ಬೆಂಗಳೂರು2 ದಿನಗಳು ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು2 ದಿನಗಳು ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು2 ದಿನಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು2 ದಿನಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು2 ದಿನಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌