ಕೊಪ್ಪಳದಲ್ಲಿ ನೊಣಗಳ ಆಟ, ಗ್ರಾಮಸ್ಥರಿಗೆ ರೋಗದ ಕಾಟ - Vistara News

ಕೊಪ್ಪಳ

ಕೊಪ್ಪಳದಲ್ಲಿ ನೊಣಗಳ ಆಟ, ಗ್ರಾಮಸ್ಥರಿಗೆ ರೋಗದ ಕಾಟ

ಚಿಕ್ಕಬಗನಾಳ ಗ್ರಾಮದಲ್ಲಿ ನೊಣಗಳ ಕಾಟ ಹೆಚ್ಚಾಗಿ ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ತಾಲೂಕಿನ ಚಿಕ್ಕಬಗನಾಳ ಗ್ರಾಮದಲ್ಲಿ ನೊಣಗಳ ಕಾಟ ಮಿತಿ ಮೀರಿದ್ದು, ಗ್ರಾಮಸ್ಥರು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಗ್ರಾಮಕ್ಕೆ ಹೊಂದಿಕೊಂಡಿರುವ ಕೋಳಿ ಫಾರ್ಮ್ ನಿಂದಾಗಿ ನೊಣಗಳು ಉತ್ಪತ್ತಿಯಾಗುತ್ತಿದ್ದು, ನೆಮ್ಮದಿಯಿಂದ ಊಟ-ತಿಂಡಿ ಮಾಡಲು ಬಿಡುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಮನೆಯಲ್ಲಿರುವ ಪ್ಲಾಸ್ಟಿಕ್‌ ವಸ್ತುಗಳಿಂದ ಹಿಡಿದು ಎಲ್ಲ ವಸ್ತುಗಳ ಮೇಲೆಯೂ ಈ ನೊಣಗಳ ಹಿಂಡು ಕುಳಿತುಕೊಳ್ಳುತ್ತಿವೆ. ಇವುಗಳ ಹಾವಳಿಯಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.

house fly issue in koppal
ನೊಣಗಳ ಹಾವಳಿ

ಈ ಗ್ರಾಮಕ್ಕೆ ಹೊಂದಿಕೊಂಡಂತೆ ಭಾಸ್ಕರರಾವ್ ಎಂಬುವವರ ಕೋಳಿ ಫಾರ್ಮ್ ಇದೆ. ಇಲ್ಲಿಯ ತ್ಯಾಜ್ಯದಿಂದ ಹೊರಬರುವ ನೊಣಗಳು ಚಿಕ್ಕಬಗನಾಳ ಗ್ರಾಮಸ್ಥರಿಗೆ ಎಲ್ಲಿಲ್ಲದ ಸಮಸ್ಯೆಯನ್ನು ತಂದೊಡ್ಡಿವೆ. ಗ್ರಾಮಸ್ಥರು ನಿತ್ಯ ಊಟ ಮಾಡಬೇಕಾದರೂ ಪ್ರಯಾಸಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ʼʼಊಟ-ತಿಂಡಿಯ ತಟ್ಟೆಯ ಮೇಲೆ ಬಂದು ಕೂರುತ್ತಿವೆ. ಅಡುಗೆ ತಾಟಿನಲ್ಲಿ ನೊಣಗಳು ಬೀಳುತ್ತಿವೆʼʼ ಎಂದು ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ. ಮನೆಯಲ್ಲಿ ನೆಮ್ಮದಿಯಾಗಿ ಕೂರಲು, ಮಲಗಲೂ ಇವು ಬಿಡುತ್ತಿಲ್ಲ ಎಂದು ಅವರುಗಳು ಹೇಳಿದ್ದಾರೆ.

ನೊಣಗಳು ಸೃಷ್ಟಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಆಹಾರದ ಮೇಲೆ ಇವು ಬಂದು ಕೂರುತ್ತಿರುವುದರಿಂದ ಇದನ್ನು ಸೇವಿಸಿಸುವವರು ವಾಂತಿ, ಬೇದಿ, ಜ್ವರ ಹೀಗೆ ಒಂದಲ್ಲಾ ಒಂದು ರೀತಿಯ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಒಟ್ಟಾರೆ ನೊಣಗಳ ಕಾಟದಿಂದ ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. 

house fly issue in home

ಈ ಬಗ್ಗೆ ಅನೇಕ ಬಾರಿ ಗ್ರಾಮಸ್ಥರು ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಕೋಳಿ ಫಾರಂ ಬಂದ್ ಮಾಡುವ ಮೂಲಕ ನೊಣಗಳಿಂದ ನಮಗೆ ಮುಕ್ತಿ ನೀಡಬೇಕೆಂದು ಗ್ರಾಮಸ್ಥರು ಕೋರಿದ್ದಾರೆ. ಗ್ರಾಮದಲ್ಲಿ ನೊಣಗಳ ಕಾಟದ ಕುರಿತ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೊಪ್ಪಳ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜ, ಕೋಳಿ ಫಾರ್ಮ್ ಅನ್ನು ಸರಿಯಾಗಿ ನಿರ್ವಹಿಸುವ ಮೂಲಕ ನೊಣಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕೆಂದು ಮಾಲೀಕರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ|ಕೊಪ್ಪಳದಲ್ಲಿ ಭಾರೀ ಗಾಳಿ ಸಹಿತ ಮಳೆ

house fly issue 
Department of Animal Husbandry
ಕೊಪ್ಪಳ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜ

ಚಿಕ್ಕಬಗನಾಳಕ್ಕೆ ಭೇಟಿ ನೀಡಿ ಸ್ಥಳೀಯ ಆರೋಗ್ಯ ಅಧಿಕಾರಿಗಳು, ಗ್ರಾಮ ಪಂಚಾಯತ್‌ನವರೊಂದಿಗೆ ಮಾತನಾಡಿ, ಈ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸುವುದಾಗಿ ಹೇಳಿದ್ದಾರೆ.

ನೊಣದ ಹಾವಳಿಯಿಂದ ಬೇಸತ್ತು ಇತ್ತೀಚೆಗಷ್ಟೇ ಗ್ರಾಮಸ್ಥರು ಕೋಳಿ ಫಾರಂಗೆ ಬೀಗ ಹಾಕಲು ಹೋದಾಗ ಒಂದೆರಡು ದಿನ ನೊಣಗಳ ನಿರ್ಮೂಲನೆಗೆ ಔಷಧಿ ಸಿಂಪಡಿಸಿದ್ದು ಬಿಟ್ಟರೆ ಕೋಳಿ ಫಾರಂ ನವರು ಬೇರೇ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತು ನೊಣಗಳ ಹಾವಳಿಯಿಂದ ಬೇಸತ್ತಿರುವ ಚಿಕ್ಕಬಗನಾಳ ಗ್ರಾಮಸ್ಥರಿಗೆ ನೆಮ್ಮದಿ ನೀಡಬೇಕಿದೆ.

ಇದನ್ನೂ ಓದಿ| ಭಾರೀ ಮಳೆ-ಬಿರುಗಾಳಿಗೆ ಕೊಪ್ಪಳದಲ್ಲಿ 5,599 ಪ್ರದೇಶದ ಕೃಷಿ ಬೆಳೆ ಹಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Artificially Ripened Fruits: ಬಾಳೆ, ಮಾವು ಮತ್ತಿತರ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ರಾಸಾಯನಿಕಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಬಿಜೆಪಿ ಯುವ ಮುಖಂಡರೊಬ್ಬರು, ಗಂಗಾವತಿ ನಗರಸಭೆಗೆ ಮನವಿ ಸಲ್ಲಿಸಿದ್ದಾರೆ.

VISTARANEWS.COM


on

Artificially ripened fruits
Koo

ಗಂಗಾವತಿ: ಹಣ್ಣುಗಳನ್ನು ತ್ವರಿತಗತಿಯಲ್ಲಿ ಮಾಗಿಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ದುಡ್ಡು ಮಾಡಬೇಕೆಂಬ ಕಾರಣಕ್ಕೆ ನಗರದಲ್ಲಿ ಬಹುತೇಕ ವರ್ತಕರು ಬಾಳೆ ಮತ್ತು ಮಾವಿನ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ರಾಸಾಯನಿಕಗಳನ್ನು (Artificially Ripened Fruits) ಬಳಸುತ್ತಿದ್ದು, ಇದರಿಂದ ಜನರಲ್ಲಿ ಕ್ಯಾನ್ಸರ್‌ನಂತ ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂಬ ದೂರು ದಾಖಲಾಗಿದೆ.

ರಾಚಪ್ಪ ಸಿದ್ದಾಪುರ

ನಗರಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಯುವ ಮುಖಂಡ ರಾಚಪ್ಪ ಸಿದ್ದಾಪುರ ಅವರು ಈ ಬಗ್ಗೆ ನಗರಸಭೆಯ ಪೌರಾಯುಕ್ತರಿಗೆ ದೂರು ಸಲ್ಲಿಸಿದ್ದು, ಕೃತಕವಾಗಿ ರಾಸಾಯನಿಕಗಳನ್ನು ಬಳಸಿಕೊಂಡು ಹಣ್ಣುಗಳನ್ನು ಮಾಗಿಸುವ ಘಟಕಗಳ ಮೇಲೆ ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನಗರದಲ್ಲಿ ಬಾಳೆ ಮತ್ತು ಮಾವಿನ ಹಣ್ಣುಗಳನ್ನು ಬೇಗನೇ ಮಾಗಿಸುವ ಮತ್ತು ಆಕರ್ಷಕ ಬಣ್ಣಗಳ ಮೂಲಕ ಗ್ರಾಹಕರನ್ನು ಆಕರ್ಷಿಸಲು ವರ್ತಕರು ಕ್ಯಾಲ್ಷಿಯಂ ಕಾರ್ಬೈಡ್‌ನಂತಹ (calcium carbide) ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕ್ಯಾಲ್ಷಿಯಂ ಕಾರ್ಬೈಡ್‌ನಿಂದ ಆರ್ಸೆನಿಕ್ ಮತ್ತು ಫಾಸ್ಪರಸ್‌ನಂತಃ ಅಂಶಹೊಂದಿರುವ ಅಸಿಟಿಲಿನ್ ಎಂಬ ಅನಿಲ ಬಿಡುಗಡೆಯಾಗುತ್ತದೆ. ಇದು ಮಾನವನ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಇಂತಹ ರಾಸಾಯನಿಕಯುಕ್ತ ಹಣ್ಣುಗಳನ್ನು ದೀರ್ಘಕಾಲ ಬಳಕೆ ಮಾಡಿದರೆ ಕ್ಯಾನ್ಸರ್‌ನಂತಹ ಕಾಯಿಲೆ ಬರುತ್ತದೆ.
ಈ ಹಿಂದಿನ ಕಾಲದಲ್ಲಿ ಬಿಡಿ-ಸಿಗರೇಟ್, ಜರ್ದಾ, ಗುಟ್ಕಾದಂತ ದುಶ್ಚಟಗಳಿರುವ ವ್ಯಕ್ತಿಗಳಿಗೆ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ, ಈಗ ಯಾವುದೇ ಚಟವಿಲ್ಲದ ವ್ಯಕ್ತಿಗಳಲ್ಲೂ ಕ್ಯಾನ್ಸರ್‌ನಂತಹ ಕಾಯಿಲೆ ಕಾಣಿಸಿಕೊಳ್ಳಲು ಹಣ್ಣುಗಳಿಗೆ ಉಪಯೋಗಿಸುವ ರಾಸಾಯನಿಕಗಳು ಕಾರಣವಾಗಿದೆ.

ಇದನ್ನೂ ಓದಿ | FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಕೂಡಲೇ ನಗರಸಭೆಯ ಅಧಿಕಾರಿಗಳು ಸೂಕ್ತಗಮನ ಹರಿಸಿ ರಾಸಾಯನಿಕಗಳಿಂದ ಹಣ್ಣುಗಳನ್ನು ಕೃತಕವಾಗಿ ಮಾಗಿಸುವ ಘಟಕಗಳ ಮೇಲೆ ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಚಪ್ಪ ಸಿದ್ದಾಪುರ ಒತ್ತಾಯಿಸಿದ್ದಾರೆ.

Continue Reading

ಕರ್ನಾಟಕ

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

Koppala News: ಗಂಗಾವತಿ ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿರುವ ಹಣ ಎಣಿಕೆ ಮಾಡಿದಾಗ ಪಾಕಿಸ್ತಾನ, ಮೊರಾಕ್ಕೊ, ಶ್ರೀಲಂಕಾ, ಅಮೆರಿಕಾ ಮತ್ತು ನೇಪಾಳ ದೇಶದ ನಾಣ್ಯಗಳು ಪತ್ತೆಯಾಗಿವೆ. ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ ಒಟ್ಟು 31.21 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಂಗ್ರಹವಾಗಿದೆ.

VISTARANEWS.COM


on

5 foreign coins found in anjanadri temple hundi counting
Koo

ಗಂಗಾವತಿ: ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ (Anjaneya Temple) ಕಾಣಿಕೆ ಹುಂಡಿಯಲ್ಲಿ (Koppala News) ಸಂಗ್ರಹವಾಗಿರುವ ಹಣ ಎಣಿಕೆ ಮಾಡಿದಾಗ ಐದು ದೇಶಗಳ ನಾಣ್ಯಗಳು ಪತ್ತೆಯಾಗಿವೆ.

ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚನೆ ಮೆರೆಗೆ, ತಹಸೀಲ್ದಾರ್ ಯು. ನಾಗರಾಜ್ ನೇತೃತ್ವದಲ್ಲಿ ಕಂದಾಯ ಇಲಾಖೆ ಹಾಗೂ ದೇಗುಲ ಸಿಬ್ಬಂದಿ ಮಂಗಳವಾರ ಕಾಣಿಕೆ ಪೆಟ್ಟಿಗೆಯಲ್ಲಿ ಸಂಗ್ರಹವಾದ ಹಣ ಎಣಿಕೆ ನಡೆಸಿದರು. ಈ ಸಂದರ್ಭದಲ್ಲಿ ಪಾಕಿಸ್ತಾನ, ಮೊರಾಕ್ಕೊ, ಶ್ರೀಲಂಕಾ, ಅಮೆರಿಕಾ ಮತ್ತು ನೇಪಾಳ ದೇಶದ ನಾಣ್ಯಗಳು ಪತ್ತೆಯಾಗಿವೆ.

ಇದನ್ನೂ ಓದಿ: Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

ಪಾಕಿಸ್ತಾನದ ಐದು ರೂಪಾಯಿ ಮುಖ ಬೆಲೆಯ ನಾಣ್ಯ, ಯುನೈಟೆಡ್ ಸ್ಟೇಟ್ ಆಫ್ ಆಮೆರಿಕಾದ ಒಂದು ಸೆಂಟ್‌, ಮೊರಾಕ್ಕೊದಾ ಒಂದು ದಿರಮ್, ನೇಪಾಳದ ಒಂದು ನಾಣ್ಯ ಹಾಗೂ ಶ್ರೀಲಂಕದ ಐದು ರೂಪಾಯಿ ನಾಣ್ಯಗಳು ಹುಂಡಿಯಲ್ಲಿ ಪತ್ತೆಯಾಗಿವೆ.

30.21 ಲಕ್ಷ ರೂ. ಸಂಗ್ರಹ

ಐದು ವಿದೇಶಿ ನಾಣ್ಯ ಸೇರಿದಂತೆ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ ಒಟ್ಟು 31.21 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಂಗ್ರಹವಾಗಿದೆ. ಕಳೆದ ಮಾರ್ಚ್‌ 27 ರಿಂದ ಇಲ್ಲಿವರೆಗೂ ಅಂದರೆ ಮೇ 21ರ ವರೆಗಿನ ಒಟ್ಟು 56 ದಿನಗಳಲ್ಲಿ 31.21 ಲಕ್ಷ ಮೊತ್ತದ ಹಣ ಸಂಗ್ರಹವಾಗಿದೆ.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಹುಂಡಿ ಎಣಿಕೆಯ ವೇಳೆ ಶಿರಸ್ತೇದಾರ್‌ ರವಿಕುಮಾರ ನಾಯಕ್ವಾಡಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್, ಮಹೇಶ್ ದಲಾಲ, ಹಾಲೇಶ ಗುಂಡಿ, ದೇಗುಲದ ವ್ಯವಸ್ಥಾಪಕ ವೆಂಕಟೇಶ ಹಾಗೂ ಸಿಬ್ಬಂದಿ ಇದ್ದರು.

Continue Reading

ರಾಜಕೀಯ

Janardhan Reddy: ಮಡದಿಗಾಗಿ ಮರವೇರಿ ಮಾವು ಕಿತ್ತುಕೊಟ್ಟ ರೆಡ್ಡಿ: ವಿಡಿಯೊ ವೈರಲ್

Janardhan Reddy: ಮಡದಿಯ ಮಾವಿನ ಕಾಯಿ ತಿನ್ನಬೇಕೆಂಬ ಮನದಾಸೆಯನ್ನು ತೀರಿಸಲು ಶಾಸಕ ಜಿ. ಜನಾರ್ದನರೆಡ್ಡಿ ಅವರು, ಹರಸಾಹಸಪಟ್ಟು ಮಾವಿನ ಮರವೇರಿ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಈ ವಿಡಿಯೊ ಸದ್ಯ ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

Janardhan Reddy
Koo

ಗಂಗಾವತಿ: ಮಾವು ಎಂದರೆ ಯಾರಿಗೆ ತಾನೆ ಇಷ್ಟವಿರದು ಹೇಳಿ?… ಮಾವಿನ ತೋಟದಲ್ಲಿ ಸಂಚರಿಸುವಾಗ ಹೇಳಿ-ಕೇಳಿ ಮುದ್ದಿನ ಮಡದಿ ಮಾವು ಬೇಕೆಂದು ಪಟ್ಟು ಹಿಡಿದಾಗ ಆಕೆಯ ಆಸೆ ಪೂರೈಸಲು ಎಂಥವರಾದರೂ ಹರಸಾಹಸ ಮಾಡಲೇಬೇಕು. ಇದಕ್ಕೆ ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ (Janardhan Reddy) ಹೊರತಾಗಿಲ್ಲ. ಮಡದಿಯ ಮಾವಿನ ಕಾಯಿ (Mango) ತಿನ್ನಬೇಕೆಂಬ ಮನದಾಸೆಯನ್ನು ತೀರಿಸಲು ಶಾಸಕ ರೆಡ್ಡಿ, ಹರಸಾಹಸಪಟ್ಟು ಮಾವಿನ ಮರವೇರಿ ಕಾಯಿಯನ್ನು ಕಿತ್ತು ಕೊಡುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್ ಆಗಿದೆ.

ಶಾಸಕ ಜಿ. ಜನಾರ್ದನರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರು, ತಮ್ಮ ಮಾವಿನ ತೋಟದಲ್ಲಿ ವಿಹರಿಸುತ್ತಿರುವಾಗ ರೆಡ್ಡಿ, ಮಾವಿನ ಮರವನ್ನು ಪ್ರಯಾಸಪಟ್ಟು ಏರಿ ಕಾಯಿಯೊಂದನ್ನು ಕಿತ್ತು ಪತ್ನಿಯ ಕೈಗಿಡುತ್ತಾರೆ.
ಮರದ ಟೊಂಗೆಗಳ ಮೇಲೆ ಶಾಸಕ ರೆಡ್ಡಿ ಜಾಗ್ರತೆಯಿಂದ ಹೆಜ್ಜೆ ಇಡುತ್ತಾ, ಬ್ಯಾಲೆನ್ಸ್ ಮಾಡಿ ಕಾಯಿ ಕಿತ್ತು, ಮರಳಿ ಮರ ಇಳಿಯುವಾಗ ತಮ್ಮ ಬಾಲ್ಯವನ್ನು ನೆನೆಸಿಕೊಂಡು ಇಳಿಯಲು ಪ್ರಯಾಸ ಪಡುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

ಸದ್ಯ ಮಾವಿನ ಹಣ್ಣಿನ ಸೀಸನ್‌ ಆಗಿರುವುದರಿಂದ ತರಹೇವಾರಿ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಈ ನಡುವೆ ಜನಾರ್ದನ ರೆಡ್ಡಿ ಅವರು ಮಡದಿಗಾಗಿ ಮಾವಿನ ಕಾಯಿ ಕಿತ್ತುಕೊಟ್ಟಿರುವ ಹಳೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಇದು 2019ರಲ್ಲಿ ರೆಡ್ಡಿ ಅವರ ಮಾವಿನ ತೋಟದಲ್ಲಿ ತೆಗೆದಿರುವ ವಿಡಿಯೊ ಎನ್ನಲಾಗಿದೆ.

Continue Reading
Advertisement
Munjya teaser unveils first computer generated actor
ಬಾಲಿವುಡ್11 mins ago

Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

IndiGo Flight
ದೇಶ23 mins ago

IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

prabuddha murder case
ಕ್ರೈಂ23 mins ago

Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

Suhana Khan Birthday Big Love From Ananya Panday
ಸಿನಿಮಾ28 mins ago

Suhana Khan: ಇಂದು ಶಾರುಖ್‌ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ: ಅನನ್ಯಾ ಪಾಂಡೆ‌, ನವ್ಯಾ ಕ್ಯೂಟ್‌ ವಿಶಸ್‌!

Viral Video
ವೈರಲ್ ನ್ಯೂಸ್37 mins ago

Viral Video: ಅಬ್ಬಾ ಎಂಥಾ ಭೀಕರ ದೃಶ್ಯ! ಸ್ಕೂಟರ್‌ನಲ್ಲಿದ್ದ ದಂಪತಿ ಮೇಲೆ ಏಕಾಏಕಿ ಬಿದ್ದ ಬೃಹತ್‌ ಮರ-ವಿಡಿಯೋ ನೋಡಿ

Iqbal Ahmed Saradgi
ಶ್ರದ್ಧಾಂಜಲಿ1 hour ago

Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Bangladesh MP Missing
ದೇಶ1 hour ago

Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್‌

Drone Prathap Helping People To Get Eye Surgery on Birthday
ಸಿನಿಮಾ1 hour ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ2 hours ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ2 hours ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ16 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು21 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು22 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌