Teacher Recruitment 2022 | 15 ಸಾವಿರ ಶಿಕ್ಷಕರ ನೇಮಕ: ಪರೀಕ್ಷೆ ಫಲಿತಾಂಶ ಈಗ ವೆಬ್‌ನಲ್ಲಿ ಲಭ್ಯ - Vistara News

ಉದ್ಯೋಗ

Teacher Recruitment 2022 | 15 ಸಾವಿರ ಶಿಕ್ಷಕರ ನೇಮಕ: ಪರೀಕ್ಷೆ ಫಲಿತಾಂಶ ಈಗ ವೆಬ್‌ನಲ್ಲಿ ಲಭ್ಯ

ಶಿಕ್ಷಣ ಸಚಿವರು ಪ್ರಕಟಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ( Teacher Recruitment 2022 ) ನೇಮಕಕ್ಕೆ ಸಂಬಂಧಿಸಿದಂತೆ ನಡೆಸಿದ್ದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.

VISTARANEWS.COM


on

Teacher Recruitment 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ( 6 ರಿಂದ 8 ನೇ ತರಗತಿ) ನೇಮಕಕ್ಕೆ (Teacher Recruitment 2022) ಕಳೆದ ಮೇ 21 ಮತ್ತು 22 ರಂದು ನಡೆಸಲಾಗಿದ್ದ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಲಾಗಿನ್‌ ಆಗಿ ತಮ್ಮ ಫಲಿತಾಂಶ ನೋಡಬಹುದಾಗಿದೆ. ಅಪ್ಲಿಕೇಷನ್‌ ನಂಬರ್‌ ಮತ್ತು ಜನ್ಮದಿನಾಂಕವನ್ನು ನಮೂದಿಸಿ, ಲಾಗಿನ್‌ ಆಗಲು ಅವಕಾಶ ನೀಡಲಾಗಿದೆ.

ಫಲಿತಾಂಶ ನೋಡಲು ವೆಬ್‌ : https://sts.karnataka.gov.in/GPSTRNHK/Relogin.aspx

ಪತ್ರಿಕೆ-1, ಪತ್ರಿಕೆ-2 ಮತ್ತು ಪತ್ರಿಕೆ-3 ಪರೀಕ್ಷೆಗಳಲ್ಲಿ ಅಭ್ಯರ್ಥಿಗಳುಗಳಿಸಿದ ವೈಯುಕ್ತಿಕ ಅಂಕಗಳನ್ನು ಒದಗಿಸಲಾಗಿದೆ. ಪರೀಕ್ಷಾ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಹಾಗೂ ಇನ್ನಿತರ ಕಾರಣಗಳಿಂದ ಒಟ್ಟು 61 ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದ್ದು, ಇಬ್ಬರನ್ನು ಅನರ್ಹಗೊಳಿಸಲಾಗಿದೆ. ಈ ರೀತಿ ಫಲಿತಾಂಶ ಪ್ರಕಟವಾಗದಿರುವ 63 ಅಭ್ಯರ್ಥಿಗಳ ಹೆಸರನ್ನೂ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.

ಫಲಿತಾಂಶ ಪ್ರಕಟವಾಗದೇ ಇರುವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ: https://sts.karnataka.gov.in/GPSTRNHK/GPTRRESULTWithheldlist.pdf

15 ಸಾವಿರ ಹುದ್ದೆಗಳಿಗೆ ಕಳೆದ ಮೇ 21ಮತ್ತು 22 ರಂದು ನಡೆದ ಈ ಪರೀಕ್ಷೆ ಬರೆಯಲು 1,06,083 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಶಿಕ್ಷಕ ಹುದ್ದೆಗೆ ಪರಿಗಣನೆಯಾಗಿರುವ ಅರ್ಜಿಗಳ ಸಂಖ್ಯೆ 74,116 ಮಾತ್ರ. ಪರೀಕ್ಷೆಗೆ ಶೇ.7ರಷ್ಟು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಹೀಗಾಗಿ ಈಗ 69,159 ಅಭ್ಯರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ.

ತಿದ್ದುಪಡಿಗೆ ಅವಕಾಶ

ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಯ (ಸಿಇಟಿ) ಅಂಕಗಳನ್ನು ಮತ್ತು ಮೀಸಲಾತಿ ವಿವರಗಳನ್ನು ಹೊರತುಪಡಿಸಿ, ಆನ್‌ಲೈನ್‌ ಭರ್ತಿ ಮಾಡಿದ ವೈಯಕ್ತಿಕ ವಿವರಗಳಲ್ಲಿ (ಹೆಸರು, ತಂದೆ, ತಾಯಿಯ ಹೆಸರು, ಜನ್ಮದಿನಾಂಕ, ಪದವಿ, ಟಿಇಟಿ ಅಂಕ ಇತ್ಯಾದಿ) ತಪ್ಪುಗಳಿದ್ದರೆ ತಿದ್ದುಪಡಿ ಮಾಡಲು ಆಗಸ್ಟ್‌ 18 ರಿಂದ ಆಗಸ್ಟ್‌ 24 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅಗತ್ಯವಿರುವ ಅಭ್ಯರ್ಥಿಗಳು ತಮ್ಮ ಮನವಿ ಪತ್ರ ಮತ್ತು ದಾಖಲೆಗಳೊಂದಿಗೆ ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿಗಳನ್ನು ಖುದ್ದಾಗಿ ಭೇಟಿಯಾಗಿ ಮನವಿ ಸಲ್ಲಿಸಬಹುದಾಗಿದೆ. ಅಂಚೆ ಅಥವಾ ಇನ್ನಿತರೆ ಯಾವುದೇ ವಿಧಾನದಲ್ಲಿ ಸಲ್ಲಿಸಲಾಗುವ ಮನವಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆಗಸ್ಟ್‌ 24ರ ನಂತರ ಬರುವ ಮನವಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ|Education News | ಭಾವಿ ಶಿಕ್ಷಕರಿಗೆ ಸಿಹಿ ಸುದ್ದಿ; 5 ವರ್ಷ ವಯೋಮಿತಿ ಹೆಚ್ಚಿಸಿದ ರಾಜ್ಯ ಸರ್ಕಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Job Alert: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್‌ 15 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್‌ 29ರವರೆಗೆ ವಿಸ್ತರಿಸಲಾಗಿದೆ. ಡಿಪ್ಲೋಮಾ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ನಿಮ್ಮ ಕನಸು ನನಸಾಗಿಸುವ ಗೋಲ್ಡನ್‌ ಚಾನ್ಸ್‌ ಇಲ್ಲಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Government Tool Room & Training Centre) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ (GTTC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್‌ 15 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್‌ 29ರವರೆಗೆ ವಿಸ್ತರಿಸಲಾಗಿದೆ. ಡಿಪ್ಲೋಮಾ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ (Job Alert).

ಹುದ್ದೆಗಳ ವಿವರ

ಉಪನ್ಯಾಸಕ (ಎಂಜಿನಿಯರಿಂಗ್)- 30 ಹುದ್ದೆ, ವಿದ್ಯಾರ್ಹತೆ: ಮೆಕಾಟ್ರಾನಿಕ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ / ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ.
ಇಂಜಿನಿಯರ್- 2 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್ / ಪ್ರೊಡಕ್ಷನ್ ಎಂಜಿನಿಯರಿಂಗ್‌ನಲ್ಲಿ ಪದವಿ
ಆಫೀಸರ್ ಗ್ರೇಡ್-II- 2 ಹುದ್ದೆ, ವಿದ್ಯಾರ್ಹತೆ: ಕಲೆ / ವಿಜ್ಞಾನ / ಬಿಸಿನೆಸ್ ಅಡ್ಮಿನ್‌ನಲ್ಲಿ ಪದವಿ
ಫೋರ್‌ಮನ್‌ ಗ್ರೇಡ್-II- 4 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್/ ಟೂಲ್ & ಡೈ ಮೇಕಿಂಗ್
ಬೋಧಕ (Instructor) ಗ್ರೇಡ್-I- 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್
ಟೆಕ್ನಿಷಿಯನ್ ಗ್ರೇಡ್-II- 8 ಹುದ್ದೆ, ವಿದ್ಯಾರ್ಹತೆ: 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್
ಬೋಧಕ ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್
ಟೆಕ್ನಿಷಿಯನ್ ಗ್ರೇಡ್-III- 23 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಟೆಕ್ನಿಷಿಯನ್ ಗ್ರೇಡ್-IV- 4 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್, ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆಯಲ್ಲಿ ಐಟಿಐ
ಸಹಾಯಕ (Assistant) ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಕಲೆ / ವಾಣಿಜ್ಯ / ವಿಜ್ಞಾನದಲ್ಲಿ ಪದವಿ, ಸೆಕ್ರೆಟರಿಯಲ್ ಪ್ರಾಕ್ಟೀಸ್ / ಮಾಡರ್ನ್ ಆಫೀಸ್ ಪ್ರಾಕ್ಟೀಸ್ / ಕಮರ್ಷಿಯಲ್ ಪ್ರಾಕ್ಟೀಸ್ / ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೋಮಾ.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18-27 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ಮತ್ತು ಎಸ್‌ಸಿ / ಎಸ್‌ಟಿ / ಕ್ಯಾಟಗರಿ-I / ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ವಿಭಾಗದ ಅಭ್ಯರ್ಥಿಗಳು 750 ರೂ., ಎಸ್‌ಸಿ / ಎಸ್‌ಟಿ / ಕ್ಯಾಟಗರಿ I / ಮಾಜಿ ಯೋಧರು 500 ರೂ., ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಯ ನೋಟಿಸ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

GTTC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ 91 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ (Job Alert) ಆಹ್ವಾನಿಸಲಾಗಿದೆ. ಬಿಕಾಂ ಪದವೀಧರರು, ಕಂಪ್ಯೂಟರ್, ಅಕೌಂಟಿಂಗ್ ಜ್ಞಾನ ಹೊಂದಿರುವವ ಅನುಭವಿಗಳು ವೆಬ್ ಸೈಟ್ ನಿಂದ ಅರ್ಜಿ ನಮೂನೆಯನ್ನು ಪಡೆದು ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು.

VISTARANEWS.COM


on

By

Job Alert
Koo

ಬೆಂಗಳೂರು: ಬ್ಯಾಂಕ್ ಉದ್ಯೋಗ (bank job) ಬಯಸುತ್ತಿರುವವರಿಗೆ ಸಿಹಿ ಸುದ್ದಿ. ಸುಪ್ರಸಿದ್ದ ಕೆನರಾ ಬ್ಯಾಂಕ್ (bank) ಒಂದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (Job Alert) ಆಹ್ವಾನಿಸಲಾಗಿದೆ. ಬಿಕಾಂ ಪದವೀಧರರು, ಕಂಪ್ಯೂಟರ್, ಅಕೌಂಟಿಂಗ್ ಜ್ಞಾನ ಹೊಂದಿರುವ ಅನುಭವಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನ (canara bank) ಅಧಿಕೃತ ವೆಬ್ ಸೈಟ್ ಮೂಲಕ ಸಂಪೂರ್ಣ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆ ವಿವರ

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯ ಜವಾಬ್ದಾರಿ ನೀಡಲಾಗುತ್ತದೆ. ಆಯ್ಕೆಯ ಬಳಿಕ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತನ, ಇತರ ಸೌಲಭ್ಯಗಳು ದೊರೆಯಲಿದೆ.

ಅರ್ಹತೆ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, ಎಸ್ ಸಿ/ಎಸ್ ಟಿ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಬಿಕಾಂ ಪದವಿ ಪಡೆದಿರುವ, ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ

ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳು ಆಯ್ಕೆ ಮಾಡಿ ಮುಖಾಮುಖಿ ಸಂದರ್ಶನದ ಬಳಿಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು 12 ತಿಂಗಳ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://canarabank.com/pages/Recruitment ಗೆ ಭೇಟಿ ನೀಡಿ ನೇಮಕಾತಿ ವಿಭಾಗದಡಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ. ಕೇಳಿರುವ ಮಾಹಿತಿಯನ್ನು ತುಂಬಿಸಿ ಅರ್ಜಿಯನ್ನು ಭರ್ತಿ ಮಾಡಿ. ಫೋಟೋ, ಸಹಿ, ಶೈಕ್ಷಣಿಕ ಪ್ರಮಾಣಪತ್ರ, ಅನುಭವದ ಪುರಾವೆ ಸೇರಿದಂತೆ ಇತರ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 300 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿದೆ. ಇದನ್ನು ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಮಾಡಿ. ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು – 560004 ಈ ವಿಳಾಸಕ್ಕೆ ಅಂಚೆ ಮೂಲಕ ಜೂನ್ 30ರೊಳಗೆ ಸಲ್ಲಿಸಬೇಕಿದೆ.

Continue Reading

ಉದ್ಯೋಗ

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ 91 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30.

VISTARANEWS.COM


on

Job Alert
Koo

ನವದೆಹಲಿ: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆ (Department of Atomic Energy)ಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (Indira Gandhi Centre for Atomic Research) ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IGCAR Recruitment 2024). ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸೈಂಟಿಫಿಕ್‌ ಆಫೀಸರ್‌- 15 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಟೆಕ್ನಿಕಲ್‌ ಆಫೀಸರ್‌- 20 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಪದವಿ.
ನರ್ಸ್‌- 25 ಹುದ್ದೆ, ವಿದ್ಯಾರ್ಹತೆ: ನರ್ಸಿಂಗ್‌ನಲ್ಲಿ ಡಿಪ್ಲೋಮಾ / ಪದವಿ.
ಟೆಕ್ನೀಷಿಯನ್‌- 30 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ + ಸರ್ಟಿಫಿಕೇಷನ್.

ವಯೋಮಿತಿ

ಸೈಂಟಿಫಿಕ್‌ ಆಫೀಸರ್‌: ಗರಿಷ್ಠ ವಯಸ್ಸು 35 ವರ್ಷ, ಟೆಕ್ನಿಕಲ್‌ ಆಫೀಸರ್‌: ಗರಿಷ್ಠ ವಯಸ್ಸು 30 ವರ್ಷ, ನರ್ಸ್‌: ಗರಿಷ್ಠ ವಯಸ್ಸು 32 ವರ್ಷ ಮತ್ತು ಟೆಕ್ನೀಷಿಯನ್‌: ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ದೇಶಾದ್ಯಂತ 25 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳಿವೆ. ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ.

IGCAR Recruitment 2024ರ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. (https://igcar.onlinereg.in/veeryareg24/Home.aspx#no-back-button)
  • ಅಗತ್ಯ ವಿವರಗಳನ್ನು ನೀಡಿ ಹೆಸರು ನೋಂದಾಯಿಸಿ.
  • ಈಗ ಅಪ್ಲಿಕೇಷನ್‌ ಫಾರಂ ತೆರೆದುಕೊಳ್ಳುತ್ತದೆ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 044 – 47749014ಕ್ಕೆ ಕರೆ ಮಾಡಿ. ಇಮೇಲ್‌ ವಿಳಾಸ: email: techsupport@i-register.co.in.

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯ ದೇಶಾದ್ಯಂತ 50,000ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ (Job Alert) ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

VISTARANEWS.COM


on

By

Job Alert
Koo

ಬೆಂಗಳೂರು: ಅಂಚೆ ಇಲಾಖೆಯಲ್ಲಿ (post office) ಕೆಲಸ ಮಾಡಬಯಸುವವರಿಗೆ (Job Alert) ಒಂದು ಸಿಹಿ ಸುದ್ದಿ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್ (Grameen Doc Sevak) ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು (Indian post department) ಅರ್ಜಿಯನ್ನು ಆಹ್ವಾನಿಸಿದೆ. ಯಾವುದೇ ಲಿಖಿತ ಪರೀಕ್ಷೆ, ಸಂದರ್ಶನ ನಿಯಮವಿಲ್ಲದೆ ಕೇವಲ ಎಸ್ ಎಸ್ ಎಲ್ ಸಿ ಯಲ್ಲಿ (SSLC) ಪಡೆದ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಭಾರತೀಯ ಅಂಚೆ ಇಲಾಖೆಯು ಕಳೆದ ವರ್ಷ ಜನವರಿಯಲ್ಲಿ ಸುಮಾರು 40,000 ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲಾಗಿತ್ತು. ಈ ವರ್ಷವೂ ಸಾವಿರಾರು ಹುದ್ದೆಗಳ ಅಧಿಸೂಚನೆ ಇನ್ನೂ ಬಿಡುಗಡೆಯಾಗಬೇಕಿದೆ. ಹೊಸ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಹುದ್ದೆ ವಿವರ

ಭಾರತೀಯ ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿದ್ದು, ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂಬಳ ಆರಂಭದಲ್ಲಿ 10,000 ರೂ.ಗಳಿಂದ 12,000 ರೂ.ಗಳವರೆಗೆ ಇರುತ್ತದೆ. ಬಡ್ತಿಗಳ ಮೂಲಕ ಉನ್ನತ ಸ್ಥಾನಗಳನ್ನ ತಲುಪಬಹುದು. ಭಾರತೀಯ ಅಂಚೆ ಪಾವತಿ ಬ್ಯಾಂಕ್ ಸೇವೆಗಳ ಮೂಲಕ ಪ್ರೋತ್ಸಾಹಕಗಳನ್ನ ಪಡೆಯಬಹುದು.

ಅರ್ಹತೆ ಏನು?

ಎಸ್ ಎಸ್ ಎಲ್ ಸಿ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18ರಿಂದ 40 ವರ್ಷದೊಳಗಿನವರಿಗಿರಬೇಕು. ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಆಯ್ಕೆ ಪ್ರಕ್ರಿಯೆ ಹೇಗೆ?

10ನೇ ತರಗತಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ತಮ್ಮ ಪ್ರದೇಶದ ಸುತ್ತಮುತ್ತಲಿನ ಅಂಚೆ ಕಚೇರಿಗಳಲ್ಲಿ ಕೆಲಸ ಮಾಡುವ ಅವಕಾಶಕ್ಕೆ ಆಯ್ಕೆ ಮಾಡಬಹುದು. ಅರ್ಹತೆಯ ಆಧಾರದ ಮೇಲೆ ಹತ್ತಿರದ ಅಂಚೆ ಕಚೇರಿಗಳಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ 10ನೇ ತರಗತಿಯಲ್ಲಿ ಪಡೆದ ಅಂಕಗಳು ಮತ್ತು ಮೀಸಲಾತಿ ನಿಯಮದ ಆಧಾರದ ಮೇಲೆ ಹಂತ ಹಂತವಾಗಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಭಾರತೀಯ ಅಂಚೆ ಇಲಾಖೆಯ ವೆಬ್ ಸೈಟ್ https://indiapostgdsonline.gov.in/ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಆಯ್ಕೆಯಾಗುವ ಅಭ್ಯರ್ಥಿಗಳ ವಿವರವನ್ನೂ ಈ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.

Continue Reading
Advertisement
Divisional Level Progress Review Meeting of Revenue Department by Minister Krishna Byregowda
ಕಲಬುರಗಿ1 min ago

krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

Hardeep Singh Nijjar
ದೇಶ8 mins ago

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Sleep After Lunch
ಲೈಫ್‌ಸ್ಟೈಲ್12 mins ago

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

R Ashok demands that the Congress apologize for imposing emergency
ಕರ್ನಾಟಕ19 mins ago

R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

Viral Video
Latest26 mins ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ32 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ33 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್42 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್57 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ1 hour ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌