Zomato | ಹೃತಿಕ್ ನಟನೆಯ ವಿವಾದಾತ್ಮಕ ಜಾಹೀರಾತಿಗೆ ಜೊಮ್ಯಾಟೊ ಕ್ಷಮೆಯಾಚನೆ - Vistara News

ಪ್ರಮುಖ ಸುದ್ದಿ

Zomato | ಹೃತಿಕ್ ನಟನೆಯ ವಿವಾದಾತ್ಮಕ ಜಾಹೀರಾತಿಗೆ ಜೊಮ್ಯಾಟೊ ಕ್ಷಮೆಯಾಚನೆ

ಬಾಲಿವುಡ್‌ ನಟ ಹೃತಿಕ್ ರೋಷನ್‌ ಅಭಿನಯದ ಜೊಮ್ಯಾಟೊ (Zomato) ಜಾಹೀರಾತು ವಿವಾದ ಸೃಷ್ಟಿಸಿದ್ದು, ಕೊನೆಗೆ ಜೊಮ್ಯಾಟೊ ಕ್ಷಮೆ ಯಾಚಿಸಿದೆ. ಜಾಹೀರಾತಿನ ವಿರುದ್ಧ ಟ್ವಿಟರ್‌ನಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

VISTARANEWS.COM


on

zomato
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಾಲಿವುಡ್‌ ನಟ ಹೃತಿಕ್ ರೋಷನ್‌ ಅಭಿನಯಿಸಿರುವ, ಜೊಮ್ಯಾಟೊ (Zomato) ಫುಡ್‌ ಡೆಲಿವರಿ ಕಂಪನಿಯ ಜಾಹೀರಾತು ವಿವಾದಕ್ಕೀಡಾಗಿದ್ದು, ಕಂಪನಿ ಕ್ಷಮೆ ಯಾಚಿಸಿದೆ.

ಮಧ್ಯಪ್ರದೇಶದ ಉಜ್ಜಯಿನಿಯ ಇತಿಹಾಸ ಪ್ರಸಿದ್ಧ ಮಹಾಕಾಲ ದೇವಾಲಯದ ಇಬ್ಬರು ಅರ್ಚಕರು, ಜೊಮ್ಯಾಟೊದ ವಿವಾದಾತ್ಮಕ ಜಾಹೀರಾತನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ ಬಳಿಕ ಅನೇಕ ಮಂದಿ ಜೊಮ್ಯಾಟೊ ವಿರುದ್ಧ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಟ್ವಿಟರ್‌ನಲ್ಲಿ ಜೊಮ್ಯಾಟೊ ಬಹಿಷ್ಕರಿಸಿ ಅಭಿಯಾನ ನಡೆದಿತ್ತು.

ಜೊಮ್ಯಾಟೊದ ವಿವಾದಾತ್ಮಕ ಜಾಹೀರಾತಿನಲ್ಲಿ ಹೃತಿಕ್ ರೋಷನ್‌, ” ಉಜ್ಜಯಿನಿಯಲ್ಲಿ ಊಟ (ಥಾಲಿ) ಬೇಕೆನಿಸಿದಾಗ ಆರ್ಡರ್‌ ಕೊಟ್ಟು ಮಹಾಕಾಲನಿಂದ ಊಟವನ್ನು ತರಿಸಿದೆʼʼ ಎಂದು ಹೇಳುತ್ತಾರೆ. ( ಥಾಲಿ ಖಾನೆ ಕಾ ಮನ್‌ ಥಾ, ಮಹಾಕಾಲ್‌ ಸೇ ಮಾಂಗಾ ಲಿಯಾ) ಆದರೆ ಇದರಿಂದ ದೇವಾಲಯದ ಭಕ್ತಾದಿಗಳ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಾಲಯದಲ್ಲಿ ಭಕ್ತರಿಗೆ ಉಚಿತವಾಗಿ ಊಟವನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ. ಅದನ್ನು ಫುಡ್‌ ಡೆಲಿವರಿ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಆರ್ಡರ್‌ ಕೊಟ್ಟು ತರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅರ್ಚಕರಾದ ಮಹೇಶ್‌ ಮತ್ತು ಅಶೀಷ್ ಹೇಳಿದ್ದು, ವಿವಾದಾತ್ಮಕ ಜಾಹೀರಾತನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.‌ ಮಹಾಕಾಲ ದೇವಾಲಯದ ಟ್ರಸ್ಟ್‌ ಅಧ್ಯಕ್ಷರೂ ಆಗಿರುವ ಉಜ್ಜಯಿನಿ ಜಿಲ್ಲಾಧಿಕಾರಿ ಆಶಿಷ್‌ ಸಿಂಗ್‌ ಅವರಿಗೆ ದೂರು ಸಲ್ಲಿಸಿದ್ದರು. ಉಜ್ಜಯಿನಿಯ ಮಹಾ ಕಾಲೇಶ್ವರ ಅಥವಾ ಮಹಾಕಾಲ ದೇವಾಲಯ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ.

ಜೊಮ್ಯಾಟೊ ಕ್ಷಮೆ ಯಾಚನೆ: ವಿವಾದಾಸ್ಪದ ಜಾಹೀರಾತಿಗೆ ಕ್ಷಮೆ ಯಾಚಿಸಿರುವ ಜೊಮ್ಯಾಟೊ, ಜಾಹೀರಾತಿನಲ್ಲಿ ಹೇಳಿರುವ ಥಾಲಿ (ಊಟ) ಮಹಾಕಾಲ್‌ ರೆಸ್ಟೊರೆಂಟ್‌ನದ್ದಾಗಿದ್ದು, ಶ್ರೀ ಮಹಾಕಾಲೇಶ್ವರ ದೇವಾಲಯವನ್ನು ಉದ್ದೇಶಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ. ಮಹಾಕಾಲ್‌ ರೆಸ್ಟೊರೆಂಟ್‌ ಉಜ್ಜಯಿನಿಯಲ್ಲಿ ಆನ್‌ಲೈನ್‌ ಫುಡ್‌ ಡೆಲಿವರಿಗೆ ಸಂಬಂಧಿಸಿ ಜೊಮ್ಯಾಟೊ ಜತೆ ಪಾಲುದಾರಿಕೆ ಮಾಡಿಕೊಂಡಿದ್ದು, ಹೆಚ್ಚು ಆರ್ಡರ್‌ಗಳನ್ನು ಗಳಿಸುತ್ತಿದೆ ಎಂದು ಜೊಮ್ಯಾಟೊ ತಿಳಿಸಿದೆ. ಜಾಹೀರಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿ ಕಂಪನಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Nitin Gadkari: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Nitin Gadkari
Koo

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼಪರಿಸರ ಮಾಲಿನ್ಯ ಎನ್ನುವುದು ಸದ್ಯ ದೇಶ, ಜಗತ್ತು ಎದುರಿಸುವ ಬಹುದೊಡ್ಡ ಸಮಸ್ಯೆ. ಹೀಗಾಗಿ ಸರ್ಕಾರ ಪರಿಸರಕ್ಕೆ ಹಾನಿ ಉಂಟು ಮಾಡದ ಪರ್ಯಾಯ ವ್ಯವಸ್ಥೆಗಳಿಗೆ ಒತ್ತು ನೀಡಲಿದೆ. ಅದರ ಭಾಗವಾಗಿ ಸಾರ್ವಜನಿಕ ಸಾರಿಗೆ ವಿಭಾಗದಲ್ಲಿಯೂ ಅಮೂಲಾಗ್ರ ಬದಲಾವಣೆ ಜಾರಿಗೆ ತರಲಾಗುವುದುʼʼ ಎಂದು ಹೇಳಿದ್ದಾರೆ.

ಕನಸಿನ ಯೋಜನೆ

ಈ ವೇಳೆ ಅವರು ತಮ್ಮ ಕನಸಿನ 132 ಸೀಟುಗಳ ಬಸ್‌ನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼ132 ಆಸನಗಳ ಬಸ್ ಅನ್ನು‌ ಪಚಯಿಸಲು ಮುಂದಾಗಿದ್ದೇವೆ. ಇದರ ಪ್ರಾಯೋಗಿಕ ಸಂಚಾರ ನಾಗ್ಪುರದಲ್ಲಿ ನಡೆಯಲಿದೆ. ಈ ಬಸ್‌ ವಿಮಾನದಂತಹ ಆಸನ ಮತ್ತು ಬಸ್ ಹೋಸ್ಟೆಸ್ ಅನ್ನು ಒಳಗೊಂಡಿದೆ. ಸಾಮಾನ್ಯ ಡೀಸೆಲ್ ಬಸ್‌ಗಳಿಗಿಂತ ಅಗ್ಗವಾಗಿರಲಿದೆ. ಮಾಲಿನ್ಯರಹಿತ ಶಕ್ತಿಯ ಮೂಲಗಳಲ್ಲಿ ಚಲಿಸಲಿದೆʼʼ ಎಂದು ವಿವರಿಸಿದ್ದಾರೆ. ʼʼಭಾರತವನ್ನು ಇಂಧನದ ಆಮದುದಾರ ದೇಶವನ್ನಾಗಿಸುವ ಬದಲು ಬದಲು ರಫ್ತುದಾರ ದೇಶವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿʼʼ ಎಂದು ಅವರು ತಿಳಿಸಿದ್ದಾರೆ.

ಪರಿಸರ ಮಾಲಿನ್ಯ ಪ್ರಮುಖ ಸಮಸ್ಯೆ

ʼʼನಾವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಪರಿಸರ ಮಾಲಿನ್ಯ ಮುಖ್ಯವಾದುದು. ದೇಶದಲ್ಲಿ ಅದರಲ್ಲಿಯೂ ರಾಜಧಾನಿ ದೆಹಲಿಯಲ್ಲಿ ವಾಯು, ಜಲ, ಶಬ್ದ ಮಾಲಿನ್ಯ ಮಿತಿ ಮೀರಿದೆ. ಹೀಗಾಗಿ ನಾವು ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಕಡಿಮೆ ವೆಚ್ಚದ, ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆ ಪರಿಚಯಿಸಲು ಚಿಂತನೆ ನಡೆಸಿದ್ದೇವೆ. ಅದರ ಭಾಗವಾಗಿ ಇಂಡಿಯನ್ ಆಯಿಲ್ 300 ಎಥೆನಾಲ್ ಪಂಪ್‌ಗಳನ್ನು ಸ್ಥಾಪಿಸಲಿದೆ. ಹೊಸ ಮಾದರಿಯ ವಾಹನ ನಿರ್ಮಾಣಕ್ಕೆ ತಯಾರಕರೂ ಮುಂದಾಗಿದ್ದಾರೆ. ಆದ್ದರಿಂದ 100 ರೂ. ಕೊಟ್ಟು ಒಂದು ಲೀಟರ್‌ ಪೆಟ್ರೋಲ್ ಖರೀದಿಸುವ ಬದಲು, 60 ರೂ. ಪಾವತಿಸಿ ಎಥೆನಾಲ್ ಖರೀದಿಸಬಹುದು. ಈ ಹೊಸ ಮಾದರಿಯ ವಾಹನವು ಶೇ. 60 ವಿದ್ಯುತ್ ಮತ್ತು ಶೇ. 40ರಷ್ಟು ಎಥೆನಾಲ್‌ನಲ್ಲಿ ಚಲಿಸಲಿದೆ. ಇದು ಮಾಲಿನ್ಯವನ್ನು ಸಹ ಕಡಿಮೆ ಮಾಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

“ನಾವು ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ನಾಗ್ಪುರದಲ್ಲಿ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಜೆಕ್ ಗಣರಾಜ್ಯದಲ್ಲಿ ಮೂರು ಬಸ್ಸುಗಳನ್ನು ಸೇರಿಸಿ ಓಡಿಸುತ್ತಾರೆ. ಅದರಂತೆ ನಮ್ಮ ಈ ಯೋಜನೆ 132 ಸೀಟುಗಳ ಬಸ್‌ ಅನ್ನು ಹೊಂದಿದೆ. ಈ ಬಸ್‌ ರಿಂಗ್ ರಸ್ತೆಯಲ್ಲಿ 49 ಕಿ.ಮೀ. ಪ್ರಯಾಣಿಸುತ್ತದೆ. ಕೇವಲ 40 ಸೆಕೆಂಡು ಚಾರ್ಜ್ ಮಾಡಿದರೆ 40 ಕಿ.ಮೀ. ದೂರ ಸಂಚರಿಸಲಿದೆʼʼ ಎಂದು ಗಡ್ಕರಿ ತಿಳಿಸಿದ್ದಾರೆ.

ಬಸ್‌ನ ವೈಶಿಷ್ಟ್ಯ

“ಬಸ್‌ನಲ್ಲಿ ಎಲ್ಲ ಸೌಲಭ್ಯಗಳನ್ನು ಅಳವಡಿಸುವಂತೆ ಸೂಚಿಸಿದ್ದೇನೆ. ಸೀಟಿನ ಮುಂದೆ ಲ್ಯಾಪ್‌ಟಾಪ್‌ ಇಡಲು ಸ್ಥಳಾವಕಾಶ, ಹವಾನಿಯಂತ್ರಣ ವ್ಯವಸ್ಥೆ, ಆರಾಮದಾಯಕ ಕುರ್ಚಿಗಾಗಿ ಬೇಡಿಕೆ ಇಟ್ಟಿದ್ದೇನೆ. ಏರ್ ಹೋಸ್ಟೆಸ್‌ಗಳಂತೆ ಪ್ರಯಾಣಿಕರಿಗೆ ಹಣ್ಣು, ಪ್ಯಾಕ್ ಮಾಡಿದ ಆಹಾರ ಮತ್ತು ಪಾನೀಯಗಳನ್ನು ನೀಡಲು ಬಸ್ ಹೋಸ್ಟೆಸ್‌ಗಳು ಇರಲಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಈ ಬಸ್‌ನ ವೆಚ್ಚ ಡೀಸೆಲ್ ಬಸ್‌ಗಿಂತ ಶೇ. 30ರಷ್ಟು ಕಡಿಮೆ ಇರಲಿದೆ. ಸೌರಶಕ್ತಿಯನ್ನು ಬಳಸಿದರೆ, ವೆಚ್ಚ ಇನ್ನೂ ಕಡಿಮೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಲಹೆಯನ್ನು ಸ್ವೀಕರಿಸಿದ್ದಕ್ಕಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಅವರಿಗೆ ಧನ್ಯವಾದ ಅರ್ಪಿಸಿದ ಗಡ್ಕರಿ, ʼʼಇಂಡಿಯನ್ ಆಯಿಲ್ ಕಸದಿಂದ 1 ಲಕ್ಷ ಲೀಟರ್ ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸುವ ಯೋಜನೆಯನ್ನು ಪ್ರಾರಂಭಿಸಿದೆ. 76,000 ಟನ್ ಜೈವಿಕ ವಾಯುಯಾನ ಇಂಧನವನ್ನು ಸಹ ಉತ್ಪಾದಿಸುತ್ತದೆʼʼ ಎಂದಿದ್ದಾರೆ.

ಇದನ್ನೂ ಓದಿ: Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

Continue Reading

Latest

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Amarnath Tragedy: ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್‌ ಬ್ರೇಕ್ ಫೇಲ್ ಆದ ಕಾರಣ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ.

VISTARANEWS.COM


on

Amarnath Tragedy
Koo

ಶ್ರೀನಗರ : ಪ್ರತಿವರ್ಷ ಅಮರನಾಥ ಯಾತ್ರೆಗೆ (Amarnath Tragedy) ಹಲವಾರು ಮಂದಿ ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇತ್ತೀಚೆಗೆ ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ವಿಡಿಯೊ ನೋಡಿ ಶಾಕ್ ಆಗಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಂಜಾಬ್‌ನ ಹೋಶಿಯಾರ್ಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹದಿನೇಳು ಮಂದಿ ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆದರೆ ರಸ್ತೆ ಮಧ್ಯದಲ್ಲಿ ಬಸ್‌ನ ಬ್ರೇಕ್ ಫೇಲ್ ಆಗಿದೆ. ಇದರ ಪರಿಣಾಮ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಹಲವಾರು ಪ್ರಯಾಣಿಕರು ಬಸ್ಸಿನಿಂದ ಜಿಗಿದ ಗಾಯಗೊಂಡಿದ್ದಾರೆ.

ವಿಡಿಯೊದಲ್ಲೊ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಪ್ರಯಾಣಿಕರು ಒಬ್ಬರಾಗಿಯೇ ಜಿಗಿದು ಕೆಳಗೆ ಬೀಳುತ್ತಿದ್ದಾರೆ. ಹಾಗೇ ಬಿದ್ದ ಪ್ರಯಾಣಿಕರಲ್ಲಿ ಕೆಲವರು ತಮ್ಮವರನ್ನು ಕಾಪಾಡಲು ಬಸ್ಸಿನ ಹಿಂದೆ ಓಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸೇನೆಯ ಜೊತೆಗೆ ಬಸ್ ಇದ್ದ ಕಡೆ ಬಂದು ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ. ಸೈನಿಕರು ಬಸ್ ಅನ್ನು ನಿಲ್ಲಿಸಲು ಮತ್ತು ಹತ್ತಿರದ ಹೊಳೆಗೆ ಹೋಗದಂತೆ ತಡೆಯಲು ಕಲ್ಲುಗಳನ್ನು ಬಸ್‌ ನ ಚಕ್ರದ ಕೆಳಗೆ ಇಟ್ಟಿದ್ದಾರೆ. ಇದರಿಂದ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸೇನೆಯ ತಂಡಗಳು, ಆಂಬ್ಯುಲೆನ್ಸ್ ನೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ.

Amarnath Tragedy

ಇದನ್ನೂ ಓದಿ: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

ಈ ಹಿಂದೆ ಈ ವರ್ಷದ ಜೂನ್ ತಿಂಗಳಿನಲ್ಲಿ ಭಯೋತ್ಪಾದಕರು ಶಿವಖೋರಿ ದೇವಸ್ಥಾನದಿಂದ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹಿಂದಿರುಗುತ್ತಿದ್ದ ಪ್ರಯಾಣಿಕರಿದ್ದ ಬಸ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದರು.

Continue Reading

ಪ್ರಮುಖ ಸುದ್ದಿ

Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

Dengue Fever: ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ.

VISTARANEWS.COM


on

dengue fever Dinesh Gundu Rao
Koo

ಬೆಂಗಳೂರು: ಇದುವರೆಗೆ ರಾಜ್ಯದಲ್ಲಿ ಡೆಂಗ್ಯು ಜ್ವರದಿಂದಾಗಿ (Dengue Fever) 6 ಜನ ಸತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಡೆಂಗ್ಯು ಜ್ವರ ಪ್ರಕರಣಗಳು (Dengue Positive) ಇನ್ನೂ ಏರಬಹುದು ಎಂದು ಆರೋಗ್ಯ ಸಚಿವ (Health Minister) ದಿನೇಶ್‌ ಗುಂಡೂರಾವ್‌ (dinesh Gundu Rao) ಎಚ್ಚರಿಸಿದ್ದಾರೆ.

ಡೆಂಗ್ಯು ಹರಡುವಿಕೆ ನಿಯಂತ್ರಣದ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ಡೆಂಗ್ಯು ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. 6 ಜನ ಸತ್ತಿದ್ದಾರೆ. ಇದರಲ್ಲಿ ಕೋಮಾರ್ಬಿಡಿಟೀಸ್‌ (ಬಿಪಿ, ಮಧುಮೇಹ, ಹೃದಯ ಕಾಯಿಲೆ) ಇದ್ದ ಮೂವರೂ ಸೇರಿದ್ದಾರೆ ಎಂದು ಸಚಿವರು ತಿಳಿಸಿದರು.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ. ಸದಾ ಮಳೆ ಬರುತ್ತಿದ್ದರೆ ಡೆಂಗ್ಯು ಸೊಳ್ಳೆ ಬರುವುದಿಲ್ಲ. ಮಳೆ ಬಿಟ್ಟು ಬಿಟ್ಟು ಬರುವ ಹಿನ್ನೆಲೆಯಲ್ಲಿ ಡೆಂಗ್ಯುವಿಗೆ ಅನುಕೂಲ ವಾತಾವರಣ ಇದೆ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ. ಇದು ಅನುಕೂಲ ಮಾಡಿಕೊಡುತ್ತದೆ. ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 6187 ಪ್ರಕರಣಗಳು ಇವೆ. 3463 ಪ್ರಕರಣ ನಗರ ಪ್ರದೇಶಗಳಲ್ಲಿ ಕಂಡು ಬಂದಿವೆ. 56% ನಗರ ಪ್ರದೇಶದಲ್ಲಿ, 44% ಗ್ರಾಮೀಣ ಪ್ರದೇಶದಲ್ಲಿ ಪೊಸಿಟಿವ್‌ ಬಂದಿವೆ. ಒಂದು ವರ್ಷದ ಒಳಗಿನ 123 ಮಕ್ಕಳಿಗೆ, 1-18 ವರ್ಷದ 2301 ಮಂದಿಗೆ, 19- 60 ವರ್ಷದ 3313 ಮಂದಿಗೆ, 61 ವರ್ಷ ಮೇಲಿನ 450 ಮಂದಿಗೆ ಪಾಸಿಟಿವ್‌ ಬಂದಿದೆ ಎಂದು ಮಾಹಿತಿ ನೀಡಿದರು.

ಡೆಂಗ್ಯು ಜ್ವರ ಇನ್ನಷ್ಟು ಹೆಚ್ಚಾಗಬಹುದು. ಸೆಪ್ಟಂಬರ್‌ನಲ್ಲಿ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ. ಟೆಸ್ಟಿಂಗ್ ಕಿಟ್ ಹೆಚ್ಚುವರಿ ಇರಿಸಲಾಗಿದೆ. ಪ್ಲೇಟ್‌ಲೆಟ್ಸ್‌ ಕೊಡುವುದಕ್ಕೆ ತಿಳಿಸಿದ್ದೇವೆ. ಡೆಂಗ್ಯುವಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಬ್ಲಡ್ ಯೂನಿಟ್‌ಗಳ ಜತೆ ಮಾತುಕತೆ ಮಾಡಲಾಗಿದೆ. ಐವಿ ಫ್ಲೂವಿಡ್‌ಗಳನ್ನು ಕೊಡಲಾಗುತ್ತದೆ. ಇದು ನಮ್ಮ ಬಳಿ ಸಾಕಷ್ಟು ಇದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯು ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯು ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯು ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯು ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಎಲ್ಲೆಲ್ಲಿ ಪಾಸಿಟಿವ್ ಕೇಸ್ ಬರುತ್ತದೆಯೋ ಅಲ್ಲಿ ತೀವ್ರ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಲಾರ್ವ ನಾಶ, ಫಾಗಿಂಗ್ ಸೇರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. RWA, ಕ್ರೆಡೈ ಸೇರಿ ಕಟ್ಟಡ ಮಾಲೀಕರು ಸೇರಿ ಅವರನ್ನು ಒಳಗೊಂಡು ಸಭೆ ನಡೆಸಲು ತೀರ್ಮಾನಿಸಿದ್ದೇವೆ. ಮೆಡಿಕಲ್ ಆಫೀಸರ್, MOH, ಸೈನ್ಸ್ ಟೀಚರ್ಸ್‌ಗೆ ಡೆಂಗ್ಯು ವಿಚಾರದಲ್ಲಿ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಡೆಂಗ್ಯು ಕುರಿತು ತಿಳಿವಳಿಕೆ ನೀಡಲಾಗಿದೆ. ಡಿಪೋಗಳಲ್ಲಿ ಟಯರ್‌ಗಳಲ್ಲಿ ಸೊಳ್ಳೆ ಉತ್ಪತ್ತಿ ಆಗುತ್ತಿರುವುದು ಕಂಡು ಬಂದಿದೆ. ಡಿಪೋಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿದೆ. ಹೆಚ್ಚು ಸಕ್ರಿಯ ಪ್ರಕರಣಗಳು ಕಂಡು ಬರ್ತಿದೆ. ಹೀಗಾಗಿ ಎಚ್ಚರಿಕೆ ವಹಿಸಲು ಸಾರಿಗೆ ಇಲಾಖೆಗೆ ಸೂಚಿಸಿದ್ದೇವೆ. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಜನರಿಗೆ ಅರಿವು ಮೂಡಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Continue Reading

ದೇಶ

Parliament Session: ರಾಜ್ಯಸಭೆಯಲ್ಲಿ ಇಂದು ಮೋದಿ ಭಾಷಣ; Live ಇಲ್ಲಿ ವೀಕ್ಷಿಸಿ

Parliament Session: ಲೋಕಸಭಾ ಚುನಾವಣೆ ನಡೆದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದ ಮೊದಲ ಅಧಿವೇಶನ ದ ಕೊನೆಯ ದಿನವಾದ ಇಂದು (ಜುಲೈ 3) ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಕುರಿತು ಮಾತನಾಡಲಿದ್ದಾರೆ.

VISTARANEWS.COM


on

Parliament Session
Koo

ನವದೆಹಲಿ: ಲೋಕಸಭಾ ಚುನಾವಣೆ ನಡೆದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರದ ಮೊದಲ ಅಧಿವೇಶನ (Parliament Session)ದ ಕೊನೆಯ ದಿನವಾದ ಇಂದು (ಜುಲೈ 3) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಕುರಿತು ಮಾತನಾಡಲಿದ್ದಾರೆ. ಮಂಗಳವಾರ ಅವರು ಲೋಕಸಭೆಯಲ್ಲಿ ಮಾತನಾಡಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಅಂಗೀಕರಿಸಿದ ನಂತರ ಹೊಸದಾಗಿ ರಚನೆಯಾದ 18ನೇ ಲೋಕಸಭೆಯ ಮೊದಲ ಅಧಿವೇಶನವನ್ನು ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಅನಿರ್ದಿಷ್ಟಾವಧಿಗೆ ಮುಂದೂಡಿದರು. ಜೂನ್ 24ರಂದು ಪ್ರಾರಂಭವಾದ ಅಧಿವೇಶನವು ಮೊದಲ ಎರಡು ದಿನಗಳಲ್ಲಿ 539 ಲೋಕಸಭಾ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ಮೋದಿ ಅವರ ಭಾಷಣದ ವೇಳೆ ರಾಜ್ಯಸಭೆಯಲ್ಲಿ ಆಡಳಿತರೂಢ ಪಕ್ಷದ ಸದಸ್ಯರು ಮತ್ತು ಪ್ರತಿಪಕ್ಷಗಳ ವಾಗ್ವಾದ ನಡೆಯುವ ಸಾಧ್ಯತೆ ಇದೆ.

ಲೋಕಸಭೆಯಲ್ಲಿ ಮೋದಿ ಹೇಳಿದ್ದೇನು?

ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ನೀಟ್‌ ವಿವಾದ, ಅಗ್ನಿಪಥ್‌ ಯೋಜನೆ, ಮಣಿಪುರ ಸಂಘರ್ಷ ಮುಂತಾದ ವಿಚಾರಗಳ ಕುರಿತು ಟೀಕಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಹರಿಹಾಯ್ದರು. “ನಾನು ಕಾಂಗ್ರೆಸ್‌ನವರಿಗೆ ಜಾಣತನ ಕೊಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಬಾಲಬುದ್ಧಿಯ ನಾಯಕನಿಗೂ ಬುದ್ಧಿ ಕೊಡಲಿ. ರಾಷ್ಟ್ರಪತಿಯವರ ಭಾಷಣಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಹಾಗೆಯೇ, ಇಷ್ಟು ಹೊತ್ತು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿಯೂ ಧನ್ಯವಾದ ತಿಳಿಸುತ್ತೇನೆ. ಯಾರು ಎಷ್ಟೇ ಗಲಾಟೆ ಮಾಡಿದರೂ ನನ್ನ ಧ್ವನಿಯನ್ನು, ಸತ್ಯದ ಧ್ವನಿಯನ್ನು ಅಡಗಿಸಲು ಆಗುವುದಿಲ್ಲ. ನಾನು ಇದುವರೆಗೆ ಸತ್ಯದ ಅನುಭವವನ್ನು ಅನುಭವಿಸಿದ್ದೇನೆ” ಎಂದು ಮೋದಿ ಹೇಳಿದರು.

ಪ್ರತಿಪಕ್ಷಗಳ ಆಗ್ರಹದ ಮಧ್ಯೆಯೇ ನರೇಂದ್ರ ಮೋದಿ ಅವರು ನೀಟ್‌ ಅಕ್ರಮದ ಕುರಿತು ಮಾತನಾಡಿದರು. “ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯವಾಗಿದೆ. ಇದು ನಮಗೂ ಆತಂಕ ತಂದಿದೆ. ಆದರೆ, ದೇಶದ ಯುವಕ-ಯುವತಿಯರಿಗೆ ನಮ್ಮ ಸರ್ಕಾರ ಒಂದು ಭರವಸೆ ನೀಡುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗಲು ನಾವು ಬಿಡುವುದಿಲ್ಲ. ನೀಟ್‌ ವಿಷಯದಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಹಲವು ಕ್ರಮ ತೆಗೆದುಕೊಳ್ಳಲಾಗಿದೆ. ಹಾಗಾಗಿ, ದೇಶದ ಯುವಕ-ಯುವತಿಯರು ಯೋಚಿಸಬೇಕಾದ ಅವಶ್ಯಕತೆ ಇಲ್ಲ” ಎಂದರು.

ಇದಕ್ಕೂ ಮೊದಲು ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ (NDA) ಸಂಸದರಿಗೆ ಜನಪ್ರತಿನಿಧಿಯಾಗಿ ಹೇಗಿರಬೇಕು ಎಂದು ಸಲಹೆ ನೀಡಿದ್ದರು. ಸಂಸದೀಯ ನಿಯಮಗಳು ಮತ್ತು ನಡವಳಿಕೆಯನ್ನು ಅನುಸರಿಸುವಂತೆ ಮತ್ತು ಉತ್ತಮ ಅಭ್ಯಾಸಗಳನ್ನು ಹಿರಿಯ ಸದಸ್ಯರಿಂದ ಕಲಿಯುವಂತೆ ಸೂಚಿಸಿದ್ದರು.

ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸುವ ಮೊದಲು ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕು. ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು, ಸಂಸದರು ಕ್ಷೇತ್ರಗಳೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಮೋದಿ ಕಿವಿ ಮಾತು ಹೇಳಿದ್ದರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

Continue Reading
Advertisement
Stock Market
ವಾಣಿಜ್ಯ17 mins ago

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

bangalore murder case
ಕ್ರೈಂ29 mins ago

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Team India
ಕ್ರೀಡೆ31 mins ago

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Actor Darshan V Manohar About Darshan
ಸ್ಯಾಂಡಲ್ ವುಡ್37 mins ago

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Nitin Gadkari
ದೇಶ1 hour ago

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Amarnath Tragedy
Latest1 hour ago

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Kalki 2898 AD Box Office Collection Day Deepika Padukone's Film
ಟಾಲಿವುಡ್1 hour ago

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

dengue fever Dinesh Gundu Rao
ಪ್ರಮುಖ ಸುದ್ದಿ1 hour ago

Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

Suryakumar Yadav Catch
ಕ್ರೀಡೆ1 hour ago

Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

Encounter in UP
ದೇಶ2 hours ago

Encounter in UP: ಯೋಗಿನಾಡಲ್ಲಿ ಮತ್ತೋರ್ವ ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ನ ಎನ್‌ಕೌಂಟರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌