Manoranjan Ravichandran Marriage | ಮನೋರಂಜನ್‌ ಮದುವೆಯ ಮನಮೋಹಕ ಕ್ಷಣಗಳು - Vistara News

ಫೋಟೊ

Manoranjan Ravichandran Marriage | ಮನೋರಂಜನ್‌ ಮದುವೆಯ ಮನಮೋಹಕ ಕ್ಷಣಗಳು

ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಅವರ ಪುತ್ರ ರವಿಚಂದ್ರನ್‌ ಅವರ ಪುತ್ರ ಮನೋರಂಜನ್ ಅವರ ಮದುವೆ ಭಾನುವಾರ ಬೆಂಗಳೂರಿನಲ್ಲಿ ನಡೆಯಿತು. ಈ ಸಂಭ್ರಮದ ಕೆಲವು ಚಿತ್ರಗಳು ಇಲ್ಲಿವೆ.

VISTARANEWS.COM


on

manorajan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇದನ್ನೂ ಓದಿ|Manoranjan Ravichandran | ಮನೋರಂಜನ್‌ ವಿವಾಹೋತ್ಸವ: ಹೇಗಿದೆ ಕ್ರೇಜಿ ಸ್ಟಾರ್‌ ಡ್ಯಾನ್ಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Sunil Chhetri: ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಚೆಟ್ರಿ 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ

VISTARANEWS.COM


on

Sunil Chhetri
Koo

ಬೆಂಗಳೂರು: ಭಾರತದಲ್ಲಿ ಆಳವಾಗಿ ಬೇರೂರಿರುವ ಕ್ರಿಕೆಟ್, ಕ್ರಿಕೆಟಿಗರೆಂದರೆ ದೇವರು ಎಂದು ಪೂಜಿಸಲ್ಪಡುವ ಜಾಯಮಾನದಲ್ಲಿ ಒಬ್ಬ ಫುಟ್ಬಾಲ್ ಆಟಗಾರ (Indian Football player) 20 ವರ್ಷಗಳಿಂದ ದೇಶಕ್ಕಾಗಿ ಆಡುತ್ತಾನೆ ಅಂದರೆ ನಂಬಲು ಕಷ್ಟ ಆಗಬಹುದು. ಫುಟ್ಬಾಲಿಗೆ ಕೆಲವು ಶ್ರೀಮಂತ ಕ್ಲಬ್ ಬಿಟ್ಟರೆ ಬೇರೆ ಯಾವ ಸಪೋರ್ಟ್ ಕೂಡ ಇಲ್ಲದ ಸನ್ನಿವೇಶದಲ್ಲಿ ಕೂಡ ಈ ದೈತ್ಯ ಪ್ರತಿಭೆಯ ಆಟಗಾರ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಾನೆ ಅಂದರೆ ಅದು ನಿಜವಾಗಿಯೂ ಅದ್ಭುತ! ಭಾರತೀಯ ಫುಟ್ಬಾಲ್ ತಂಡದ (Indian Football team) ಕ್ಯಾಪ್ಟನ್ ಆಗಿ ಭಾರತದಲ್ಲಿ ಫುಟ್ಬಾಲ್ ಕ್ರೇಜನ್ನು ಜೀವಂತವಾಗಿ ಉಳಿಸಿದ ಲೆಜೆಂಡ್ ಮಿಂಚು ಹರಿಸುವ ಫಾರ್ವರ್ಡ್ ಆಟಗಾರ ಸುನೀಲ್ ಚೆಟ್ರಿ (Sunil Chhetri) ಕೊನೆಗೂ ತನ್ನ ನೆಚ್ಚಿನ ಫುಟ್ಬಾಲ್​ ಆಟಕ್ಕೆ ವಿದಾಯ(Sunil Chhetri Announces Retirement) ಹೇಳಲು ನಿರ್ಧರಿಸಿದ್ದಾರೆ.


ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಅವರ ನಿವೃತ್ತಿಯ ನಿರ್ಧಾರ ಕೇಳಿ ಅನೇಕರು ಬೇಸರಗೊಂಡರೂ ಕೂಡ ಅವರ ಸಾಧನೆಗೆ ಸಲಾಂ ಎಂದಿದ್ದಾರೆ. ಚೆಟ್ರಿ ಕುರಿತ ಸಾರಸ್ಯರ ಸಂಗತಿ ಇಂತಿದೆ.


2021 ರಲ್ಲಿ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಸುನೀಲ್​ ಚೆಟ್ರಿ ಅವರಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವ – ಖೇಲ್ ರತ್ನ ಪ್ರಶಸ್ತಿಯನ್ನು ನೀಡಿತು. ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಮತ್ತು ಏಕೈಕ ಫುಟ್ಬಾಲ್ ಆಟಗಾರ. ನೀರಜ್ ಚೋಪ್ರಾ ಮತ್ತು ಮಿಥಾಲಿ ರಾಜ್ ಸೇರಿದಂತೆ ಇತರ ಪ್ರಸಿದ್ಧ ಕ್ರೀಡಾಪಟುಗಳೊಂದಿಗೆ ಅವರು ಈ ಗೌರವವನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ Sunil Chhetri: ಕ್ಲಬ್​ ತೊರೆದು ದೇಶದ ಪರ ಆಡಲು ನಿರ್ಧರಿಸಿದ ಸುನೀಲ್​ ಚೆಟ್ರಿಗೆ ಮೆಚ್ಚುಗೆ

sunil chhetri khel ratna award


2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

sunil chhetri 2005


ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ


ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಶುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ!


18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್​ಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ.

ಇದನ್ನೂ ಓದಿ Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ


ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್. ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ.


1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಈ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು.

Continue Reading

ಆರೋಗ್ಯ

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

Overweight man suffering from chest pain, high blood pressure, cholesterol level
Koo
Obese male suffering from chest pain high blood pressure cholesterol level Sesame Benefits
ಕೊಲೆಸ್ಟ್ರಾಲ್‌ ಅಪಾಯಕಾರಿ
ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ಅತಿಯಾದ ಕೊಬ್ಬಿನ ಆಹಾರ ಸೇವನೆ, ಸಂಸ್ಕರಿತ ಸಕ್ಕರೆ ಸೇವನೆಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಎದುರಾಗುತ್ತವೆ.
Skin Care Foods
ಆಹಾರದ ಪಾತ್ರ ಮುಖ್ಯ
ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ.
reen Tea Benefits Of Drinking Green Tea
ಗ್ರೀನ್‌ ಟೀ
ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.
Chia seeds and soy milk
ಚಿಯಾ ಬೀಜ ಮತ್ತು ಸೋಯ್‌ ಹಾಲು
ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.
Beetroot and carrot juice
ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ
ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.
Ginger, lemon juice
ಶುಂಠಿ, ನಿಂಬೆ ರಸ
ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.
Tomato juice
ಟೊಮೇಟೊ ರಸ
ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.
Turmeric and soy milk
ಅರಿಶಿನ ಮತ್ತು ಸೋಯ್‌ ಹಾಲು
ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.
Continue Reading

ಆರೋಗ್ಯ

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

ಕಣ್ಣಿನ ಕೆಳಗಿನ ಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುತ್ತದೆ. ಇದು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ ಪ್ರಶ್ನೆ ಮೂಡುವುದಂತೂ ಹೌದು. ಇದನ್ನು ನಿವಾರಿಸುವುದು ಹೇಗೆ? ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

Health Tips Kannada
Koo
Cold compress
ತಣ್ಣನೆಯ ಕಂಪ್ರೆಸ್‌
ತಂಪಾದ ನೀರಲ್ಲಿ ಅದ್ದಿದ ಬಟ್ಟೆ, ಫ್ರಿಜ್‌ನಲ್ಲಿ ಕೆಲಕಾಲ ಇರಿಸಿದ ತೇವದ ಟೀ ಬ್ಯಾಗ್‌ ಮುಂತಾದವುಗಳನ್ನು ಕಣ್ಣಿನ ಮೇಲೆ 10-15 ನಿಮಿಷ ಇರಿಸಿಕೊಳ್ಳಿ. ಅದರಲ್ಲೂ ಗ್ರೀ ಟೀ ಅಥವಾ ಕ್ಯಾಮೊಮೈಲ್‌ ಟೀ ಹೆಚ್ಚು ಉಪಯುಕ್ತ. ಇದರಿಂದ ಈ ಭಾಗದಲ್ಲಿ ಉಬ್ಬಿದಂತೆ ಕಾಣುವ ರಕ್ತನಾಳಗಳು ಸಂಕೋಚಗೊಳ್ಳುತ್ತವೆ. ಇದರಿಂದ ಕಣ್ಣಿನ ಕೆಳಗಿನ ಭಾಗ ಉಬ್ಬಿದಂತಾಗಿ ಕಪ್ಪಾಗಿದ್ದರೆ ಕಡಿಮೆಯಾಗುತ್ತದೆ.
Cucumber
ಸೌತೇಕಾಯಿ
ತಂಪಾದ ಸೌತೇಕಾಯಿಯ ಗಾಲಿಯಂಥ ತುಂಡನ್ನು ಕಣ್ಣುಗಳ ಮೇಲಿರಿಸಿ 20 ನಿಮಿಷ ಬಿಡಿ. ಇದನ್ನು ದಿನವೂ ಮಾಡಬಹುದು. ಇದರಿಂದ ಕಣ್ಣಿನ ಕೆಳಗೆ ಉಬ್ಬಿದ್ದರೆ ಕಡಿಮೆಯಾಗಿ, ಗಾಢಬಣ್ಣವೂ ತಿಳಿಯಾಗುತ್ತದೆ. ಜೊತೆಗೆ ಕಣ್ಣನ್ನು ತಂಪಾಗಿಸಿ, ದೃಷ್ಟಿಗೂ ಅನುಕೂಲ ಒದಗಿಸುತ್ತದೆ.
potato
ಆಲೂಗಡ್ಡೆ
ಸೌತೇಕಾಯಿಯಂತೆ, ಆಲೂಗಡ್ಡೆಗೂ ನೈಸರ್ಗಿಕವಾದ ಬ್ಲೀಚಿಂಗ್‌ ಗುಣವಿದೆ. ಹಾಗಾಗಿ ಕಪ್ಪಾದ ಚರ್ಮವನ್ನು ನಿಧಾನಕ್ಕೆ ತಿಳಿಯಾಗಿಸುತ್ತದೆ. ಫ್ರಿಜ್‌ನಲ್ಲಿಟ್ಟ ಆಲೂಗಡ್ಡೆಯನ್ನು ತುರಿದು ರಸ ತೆಗೆಯಿರಿ, ಈ ತಂಪಾದ ರಸದಲ್ಲಿ ಸ್ವಚ್ಛ ಹತ್ತಿಯ ಬಟ್ಟೆಯನ್ನು ಅದ್ದಿ ಕಣ್ಣುಗಳ ಕೆಳಗಿರಿಸಿಕೊಳ್ಳಿ. ೧೫ ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.
Tomato juice
ಟೊಮಾಟೊ ರಸ
ಇದೂ ಸಹ ಗಾಢ ಬಣ್ಣವನ್ನು ತಿಳಿಯಾಗಿಸಬಲ್ಲ ಗುಣವನ್ನು ಹೊಂದಿದೆ. ಟೊಮಾಟೊ ರಸ ತೆಗೆದು, ಕೆಲವು ಹನಿ ನಿಂಬೆರಸ ಸೇರಿಸಿ. ಇದರಲ್ಲಿ ಸ್ವಚ್ಛ ವಸ್ತ್ರವನ್ನು ಅದ್ದಿ, ಕಣ್ಣುಗಳ ಕೆಳಗಿರಿಸಿಕೊಳ್ಳಿ. 10 ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ತೊಳೆಯಿರಿ.
Almond oil
ಬಾದಾಮಿ ಎಣ್ಣೆ
ವಿಟಮಿನ್‌ ಇ ಹೇರಳವಾಗಿದೆ ಬಾದಾಮಿ ತೈಲದಲ್ಲಿ. ರಾತ್ರಿ ಮಲಗುವ ಮುನ್ನ, ಇದರ ಕೆಲವು ಹನಿಗಳನ್ನು ಕಣ್ಣ ಕೆಳಭಾಗದಲ್ಲಿ ಲಘುವಾಗಿ ಹಚ್ಚಿ ಮಸಾಜ್‌ ಮಾಡಿ. ರಾತ್ರಿಡೀ ಇದನ್ನು ಹಾಗೆಯೇ ಬಿಡಿ. ಹಚ್ಚಿದ ಎಣ್ಣೆ ಅತಿಯಾದರೆ ಕಣ್ಣುರಿ ಬಂದೀತು. ಹಾಗಾಗಿ ಸ್ವಲ್ಪವೇ ಹಚ್ಚಿ.
rose water
ಗುಲಾಬಿ ಜಲ
ಹತ್ತಿಯ ಪ್ಯಾಡ್‌ಗಳಲ್ಲಿ ತಂಪಾದ ಗುಲಾಬಿ ಜಲದಲ್ಲಿ ಅದ್ದಿ, ಮುಚ್ಚಿದ ಕಣ್ಣುಗಳ ಮೇಲೆ ಇರಿಸಿಕೊಳ್ಳಿ. ಸೌತೇಕಾಯಿಯಂಥದ್ದೇ ಪರಿಣಾಮಗಳನ್ನು ಗುಲಾಬಿ ಜಲವೂ ನೀಡಬಲ್ಲದು. 15 ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.
aloe vera
ಲೋಳೆಸರ
ಇದರ ತಂಪಾದ ತಾಜಾ ಜೆಲ್‌ ತೆಗೆಯಿರಿ. ಅದನ್ನು ಕಣ್ಣಿನ ಕೆಳಭಾಗದಲ್ಲಿ ಇರಿಸಿಕೊಂಡು 20 ನಿಮಿಷ ಬಿಡಿ. ನಂತರ ತಂಪಾದ ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಬಿಗಿಯಾಗಿಸಿ, ತೇವವನ್ನು ಹಿಡಿದಿಡುತ್ತದೆ. ಜೊತೆಗೆ ಕಣ್ಣಿನ ಕೆಳಭಾಗದ ಕಪ್ಪು ಚರ್ಮವನ್ನು ತಿಳಿಯಾಗಿಸುತ್ತದೆ. ಇವೆಲ್ಲವುಗಳ ಜೊತೆಗೆ, ದೇಹಕ್ಕೆ ಚೆನ್ನಾಗಿ ನೀರು ಬೇಕು. ಋತುಮಾನದ ಸೊಪ್ಪು-ತರಕಾರಿ-ಹಣ್ಣುಗಳು ಬೇಕು. ಕಣ್ತುಂಬಾ ನಿದ್ದೆಯಂತೂ ಕಡ್ಡಾಯ.
Continue Reading

ಫೋಟೊ

Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

ನಾನಾ ಬಗೆಯ ಹೇರ್ ಕಲರ್‌ಗಳು ಫ್ಯಾಷನ್ (Hair Color Fashion) ಪ್ರಪಂಚದಲ್ಲಿ ರಂಗೇರಿಸುತ್ತಿವೆ. ಈ ಹೇರ್ ಕಲರ್ ಟ್ರೆಂಡ್ ಗಳು ಆಗಾಗ ಬದಲಾಗುತ್ತಲೇ ಇರುತ್ತವೆ.

VISTARANEWS.COM


on

Hair Color Fashion
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಅಕ್ವಾ, ಪರ್ಪಲ್‌, ಶೈನಿಂಗ್‌ ಕ್ರೀಮ್‌, ಬ್ಲೀಚ್‌ ಬ್ಲ್ಯೂ …ಇವೆಲ್ಲಾ ಇದೀಗ ಆನ್‌ಲೈನ್‌ನಲ್ಲಿ ಟ್ರೆಂಡಿಯಾಗಿ ಹರಿದಾಡುತ್ತಿರುವ ಹೇರ್‌ ಕಲರ್‌ಗಳ (Hair Color Fashion) ಸ್ಯಾಂಪಲ್‌. ಹೌದು, ಊಹೆಗೂ ಮೀರಿದ ವೆರೈಟಿ ಹೇರ್‌ ಕಲರ್‌ನ್ನೊಳಗೊಂಡ (Hair Color) ಫೋಟೋಗಳು ಈ ಬಾರಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಬ್ಯೂಟಿ ಬ್ಲಾಗರ್ಸ್‌ಗಳ ಪ್ರಕಾರ ತಿಂಗಳಿಗೊಮ್ಮೆ ಹೇರ್‌ ಕಲರ್ಸ್‌ನ ಟ್ರೆಂಡ್‌ನಲ್ಲಿ ಬದಲಾವಣೆಯಾಗುತ್ತಿರುತ್ತದೆ. ಇದು ಆಯಾ ರಾಷ್ಟ್ರಗಳಿಗೆ ಸೂಟ್‌ ಆಗುವಂತೆ ನಂತರ ಬದಲಾಗಿ ಕಲರ್ಸ್‌ ಹಾಗೂ ಶೇಡ್‌ಗಳು ಸಲೂನ್‌ಗಳಲ್ಲಿ ಬಿಡುಗಡೆಗೊಳ್ಳುತ್ತವೆ. ಒಂದಕ್ಕಿಂತ ಒಂದು ವಿಭಿನ್ನ ಶೇಡ್‌ಗಳ ಊಹೆಗೂ ಮೀರಿದ ಹೇರ್‌ ಶೇಡ್‌ಗಳು, ಹೇರ್‌ ಸ್ಟ್ರೀಕ್ಸ್‌ನ ಝಲಕ್‌ ಇರುವಂತಹ ಮಾಡೆಲ್‌ಗಳ ಊಹೆಗೂ ಮೀರಿದ ಕಲರ್‌ ಕಾಂಬಿನೇಷನ್‌ಗಳು ಬ್ಯೂಟಿ ಪ್ರಿಯರ ಹುಬ್ಬೇರಿಸಿವೆ.

Blue Haired Woman Facing Metal Fence

ಕಲ್ಪನೆಗೂ ಮೀರಿದ ಶೇಡ್ಸ್‌

ಪಾಶ್ವಿಮಾತ್ಯ ಶೈಲಿಯ ಅಕ್ವಾ ಶೇಡ್‌ಗಳು ಇಂಟರ್‌ನ್ಯಾಷನಲ್‌ ಬ್ಯೂಟಿ ಬ್ಲಾಗ್‌ಗಳಲ್ಲಿ ಬಿಡುಗಡೆಗೊಂಡಿದ್ದು, ಸದ್ಯಕ್ಕೆ ಅಂತರಾಷ್ಟ್ರೀಯ ರ‍್ಯಾಂಪ್‌ಗಳಿಗೆ ಮಾತ್ರ ಸೀಮಿತವಾಗಿವೆ. ಇನ್ನು ಆರ್ಟಿಫಿಶಿಯಲ್‌ ಹೇರ್‌ ಕಲರ್‌ಗಳು ಊಹೆಗೂ ಮೀರಿದ ಮಿಕ್ಸ್‌ ಮ್ಯಾಚ್‌ ಶೇಡ್ಸ್‌ನಲ್ಲಿ ಕಂಡು ಬರುತ್ತಿವೆ.

Beautiful Hair. Beauty Woman with Long Red Hair as Background

“ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇರ್‌ ಕಲರ್‌ನ ಟ್ರೆಂಡಿ ಫೋಟೋಗಳು ಹರಿದಾಡಿದಾಗಲೇ ಇವುಗಳಿಗೆ ಮಾರುಕಟ್ಟೆ ಕಲ್ಪಿಸಲು ಸಾಧ್ಯವಾಗುವುದು. ಹಾಗಾಗಿ ಬ್ರಾಂಡೆಡ್‌ ಹೇರ್ ಕಲರಿಂಗ್‌ ಕಂಪನಿಗಳು ತಮ್ಮದೇ ಆದ ಮಾಡೆಲ್‌ಗಳನ್ನು ಈ ಶೇಡ್ಸ್‌ನಲ್ಲಿ ಕಾಣಿಸುವ ಮಾಡೆಲ್‌ಗಳನ್ನು ಬಳಸಿಕೊಂಡು ಚಿತ್ರ-ವಿಚಿತ್ರ ಹೇರ್‌ ಕಲರ್‌ಗಳ ಅನಾವರಣ ಮಾಡುತ್ತಾರೆ. ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಸೃಷ್ಟಿಸುತ್ತಾರೆ. ಇದು ಸಾಮಾನ್ಯ ಎನ್ನುತ್ತಾರೆ’ ಹೇರ್‌ಸ್ಟೈಲಿಸ್ಟ್‌ ರೋಸಿ. ಅವರ ಪ್ರಕಾರ ಇಂತಹ ಟ್ರೆಂಡ್‌ಗಳು(Beauty Trend) ನಮ್ಮತನಕ್ಕೆ ಸೂಟ್‌ ಆಗುವುದು ಕಡಿಮೆ. ಇವು ನೋಡಲು ಮಾತ್ರ ಆಕರ್ಷಣೀಯ ಎನಿಸುತ್ತವೆ. ಎಲ್ಲವನ್ನೂ ಅಳವಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೊಂದುವಂತದ್ದನ್ನು ಮಾತ್ರ ಸ್ವಾಗತಿಸಲು ಸಾಧ್ಯವಾಗುತ್ತದೆ.

(ಲೇಖಕಿ ಫ್ಯಾಷನ್ ಪತ್ರಕರ್ತೆ)

ಇದನ್ನೂ ಓದಿ: Mango Facepack: ಆಕರ್ಷಕ ತ್ವಚೆಗಾಗಿ ಸೀಸನ್‌ ಮ್ಯಾಂಗೋ ಫೇಸ್‌ಪ್ಯಾಕ್‌

Continue Reading
Advertisement
Road Accident
ಬೆಂಗಳೂರು ಗ್ರಾಮಾಂತರ20 mins ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ34 mins ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ38 mins ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sangeetha Sringeri Wore Lioness Logo On Her Belt
ಬಿಗ್ ಬಾಸ್41 mins ago

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

swati maliwal bibhav kumar
ಪ್ರಮುಖ ಸುದ್ದಿ55 mins ago

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

PM Modi wishes HD Deve Gowda on his 93rd birthday Jackfruit gift to former PM
ರಾಜಕೀಯ55 mins ago

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

Virat kohli
ಕ್ರೀಡೆ1 hour ago

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Robbery case
ವಿಜಯಪುರ1 hour ago

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Nitin Gadkari
Lok Sabha Election 20241 hour ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ2 hours ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ18 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌