Vikram Trailer: ಯಶ್‌ ಕೈಲಿದ್ದ ʼದೊಡ್ಡಮ್ಮʼ ಇದೀಗ ಕಮಲ್‌ ಹಾಸನ್‌ ಕೈಯಲ್ಲಿ! - Vistara News

ಸಿನಿಮಾ

Vikram Trailer: ಯಶ್‌ ಕೈಲಿದ್ದ ʼದೊಡ್ಡಮ್ಮʼ ಇದೀಗ ಕಮಲ್‌ ಹಾಸನ್‌ ಕೈಯಲ್ಲಿ!

“ವಿಕ್ರಮ್‌ʼ ಚಿತ್ರದ ಟ್ರೈಲರ್‌ ಬೆಚ್ಚಿ ಬೀಳಿಸುವಂತಿದೆ. ಕಮಲ್‌ ಹಾಸನ್‌ ನಟನೆಯ ಈ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಹಿನ್ನೆಲೆ ಸಂಗೀತವೂ ಅದ್ಭುತವಾಗಿದೆ. ಈ ಚಿತ್ರ ಕೂಡ ಧೂಳೆಬ್ಬಿಸಲಿದೆಯೇ ಎಂಬ ಕುತೂಹಲ ಮೂಡಿದೆ.

VISTARANEWS.COM


on

Vikram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕಮಲ್‌ ಹಾಸನ್‌ ಅಭಿನಯದ “ವಿಕ್ರಮ್‌ʼ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿದೆ. ಟ್ರೈಲರ್‌ ರಿಲೀಸ್‌ ಆಗಿದ್ದೇ ತಡ ಲಕ್ಷಾಂತರ ಅಭಿಮಾನಿಗಳು ಇದನ್ನು ನೋಡಿ ಖುಷಿಪಟ್ಟಿದ್ದಾರೆ. ಸ್ವಲ್ಪ ದಿನ ಸಿನಿಮಾದಿಂದ ದೂರ ಇದ್ದ ಕಮಲ್‌ ಹಾಸನ್‌ ಇದೀಗ ಮತ್ತೆ ಎಂಟ್ರಿ ನೀಡಿದ್ದಾರೆ. ಸಾಹಸಗಳು ಟ್ರೈಲರ್‌ನಲ್ಲಿ ಬೆಚ್ಚಿ ಬೀಳಿಸುವಂತಿದೆ. ಬ್ಯಾಕ್‌ ರೌಂಡ್‌ ಮ್ಯೂಸಿಕ್‌  ಮೈ ರೋಮಾಂಚನಗೊಳಿಸುವಂತಿದೆ.

ಇದನ್ನೂ ಓದಿ |ತಮಿಳುನಾಡಿನ ಇಡ್ಲಿ ಅಮ್ಮನಿಗೆ ಹೊಸ ಮನೆ ನೀಡಿದ ಆನಂದ್‌ ಮಹೀಂದ್ರಾ

ಕಮಲ್‌ ಹಾಸನ್‌ ಜೊತೆ ವಿಜಯ್‌ ಸೇತುಪತಿ, ಫಹಾದ್‌ ಫಾಸಿಲ್‌ ಅವರಂತಹ ಮೇರು ಕಲಾವಿದರ ದಂಡಿರುವುದನ್ನು ನೋಡಿ ವಾವ್‌ ಅನ್ನುತ್ತಿದ್ದಾರೆ ಪ್ರೇಕ್ಷಕರು.

ಯಶ್‌ ಅವರ ಕೆಜಿಎಫ್‌-2  ಸಿನಿಮಾದಲ್ಲಿ “ದೊಡ್ಡಮ್ಮʼ ಬಹಳ ಫೇಮಸ್ ಆಗಿತ್ತು. ದೊಡ್ಡಮ್ಮ ಮೂಲಕ ಒಂದರ ಮೇಲೊಂದು ಗುಂಡು ಹಾರಿಸಿ, ಬ್ಯಾರೆಲ್‌ ಕೆಂಪಾಗಿ ಅದರಲ್ಲೆ ಸಿಗರೇಟ್‌ ಸೇದುವ ದೃಶ್ಯಕ್ಕೆ ಫ್ಯಾನ್‌ಗಳು ಫಿದಾ ಆಗಿದ್ದರು. ಇದೀಗ ಅದೇ ರೀತಿಯ “ದೊಡ್ಡಮ್ಮʼನನ್ನು ಹಿಡಿದುಕೊಂಡು ಕಮಲ್‌ ಹಾಸನ್‌ ಪೋಸ್‌ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ವಿಕ್ರಮ್‌ ತಂಡ ಕೆಜಿಎಫ್‌ 2ನಿಂದ ಪ್ರಭಾವಿತವಾಯಿತೇ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಮಲ್‌ ಹಾಸನ್‌ ಮತ್ತು ಆರ್‌ ಮಹೇಂದ್ರನ್‌ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್‌ ರವಿಚಂದರ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ಗಿರೀಶ್‌ ಗಂಗಾಧರನ್‌ ಛಾಯಾಗ್ರಹಣ ಮಾಡಿದ್ದಾರೆ. ಜೂನ್‌ 3ರಂದು ಸಿನಿಮಾ ರಿಲೀಸ್‌ ಆಗಲಿದ್ದು, ಇದೂ ಕೂಡ ಹೊಸ ದಾಖಲೆ ಬರೆಯುವ ಸಾದ್ಯತೆ ಇದೆ.

ಇದನ್ನೂ ಓದಿ |Trivikrama: ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ಸಿನಿಮಾ ಡೇಟ್‌ ಅನೌನ್ಸ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

VISTARANEWS.COM


on

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್‌ನಲ್ಲಿನ ಕೆಲವು ಬೋಲ್ಡ್ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ಹಾಗೂ ಆಕ್ಷೇಪಗಳಿಗೆ ಕಾರಣವಾಗಿದ್ದವು. ಈ ವಿವಾದದ ಕುರಿತು ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನೆಮಾಕಾನ್ 2026’ ಮೇಳದಲ್ಲಿ ಮಾತನಾಡಿದ ಯಶ್, ಟೀಕಾಕಾರರಿಗೆ ತಮ್ಮದೇ ಶೈಲಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಚಿತ್ರದ ಪಾತ್ರವಾದ ‘ರಾಯಾ’ನ ಡಾರ್ಕ್ ಶೇಡ್ ಮತ್ತು ಸ್ಮಶಾನದ ಎದುರಿನ ದೃಶ್ಯಗಳ ಬಗ್ಗೆ ಎದ್ದಿದ್ದ ಪರ-ವಿರೋಧದ ಮಾತುಗಳಿಗೆ ಅವರು ಈಗ ಫುಲ್ ಸ್ಟಾಪ್ ಇಟ್ಟಿದ್ದಾರೆ.

ವಿವಾದಾತ್ಮಕ ದೃಶ್ಯಗಳನ್ನು ಸಮರ್ಥಿಸಿಕೊಂಡ ಯಶ್, ಆಕ್ಷನ್ ಸಿನಿಮಾಗಳನ್ನು ಕೇವಲ ಪುರುಷ ನಿರ್ದೇಶಕರ ದೃಷ್ಟಿಕೋನದಿಂದ ನೋಡಿ ನಮಗೆ ಅಭ್ಯಾಸವಾಗಿದೆ, ಆದರೆ ಒಬ್ಬ ಮಹಿಳಾ ನಿರ್ದೇಶಕಿ (ಗೀತು ಮೋಹನ್‌ದಾಸ್) ಆಕ್ಷನ್ ಚಿತ್ರವನ್ನು ಕಟ್ಟಿಕೊಡುತ್ತಿರುವ ರೀತಿ ತುಂಬಾ ಹೊಸತನದಿಂದ ಕೂಡಿದೆ ಎಂದಿದ್ದಾರೆ. ಕಥೆಯಲ್ಲಿ ಹೆಣ್ಣಿನ ದೃಷ್ಟಿಕೋನದಿಂದ ಭಾವನೆಗಳನ್ನು ಮತ್ತು ಬಯಕೆಗಳನ್ನು ಹೇಗೆ ಆಳವಾಗಿ ತೋರಿಸಬಹುದು ಎಂಬ ಹೊಸ ಪ್ರಯತ್ನವನ್ನು ಈ ಸಿನಿಮಾ ಮಾಡಿದೆ ಎಂದು ಅವರು ವಿವರಿಸಿದ್ದಾರೆ.

ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ರಾಕಿಂಗ್ ಸ್ಟಾರ್, ಈ ಚಿತ್ರವು ಈವರೆಗಿನ ಆಕ್ಷನ್ ಸಿನಿಮಾಗಳಿಗಿಂತ ಬಹಳ ವಿಭಿನ್ನವಾಗಿರಲಿದೆ ಎಂದು ಭರವಸೆ ನೀಡಿದ್ದಾರೆ. ಕಥೆಯ ಬೇಡಿಕೆಗೆ ತಕ್ಕಂತೆ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆಯೇ ಹೊರತು ಅನಗತ್ಯವಾಗಿ ಅಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಜೂನ್ 4 ರಂದು ವಿಶ್ವಾದ್ಯಂತ ತೆರೆಕಾಣಲು ಸಜ್ಜಾಗಿದೆ.

Continue Reading

Latest

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

VISTARANEWS.COM


on

ದಕ್ಷಿಣ ಭಾರತದ ಪ್ರತಿಭಾವಂತ ನಟಿ ನಿತ್ಯಾ ಮೆನನ್ ತಮ್ಮ ನೇರ ನುಡಿ ಹಾಗೂ ವೈಚಾರಿಕ ನಿಲುವುಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕನ್ನಡ ನಟಿ ಭಾವನಾ ರಾಮಣ್ಣ ಅವರು ಮದುವೆಯಾಗದೆ ಐವಿಎಫ್ (IVF) ಮೂಲಕ ಮಗು ಪಡೆದ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ, ಮದುವೆ ಮತ್ತು ಮಾತೃತ್ವದ ಕುರಿತು ನಿತ್ಯಾ ಮೆನನ್ ಈ ಹಿಂದೆ ನೀಡಿದ್ದ ಹೇಳಿಕೆಗಳು ಮತ್ತೆ ಮುನ್ನಲೆಗೆ ಬಂದಿದ್ದು, ಭಾರೀ ವೈರಲ್ ಆಗುತ್ತಿವೆ. ಮದುವೆಯಾಗದೆಯೇ ಮಕ್ಕಳನ್ನು ಹೊಂದುವ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳುವ ಮೂಲಕ ಅವರು ಆಧುನಿಕ ಬದುಕಿನ ಆಯ್ಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ತಮಿಳಿನ ‘ಕಾದಲಿಕ್ಕಾ ನೇರಮಿಲ್ಲೈ’ ಸಿನಿಮಾದ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. “ಮದುವೆಗಿಂತ ಮೊದಲು ಅಥವಾ ನಂತರ ಗರ್ಭಿಣಿಯಾಗುವುದು ಎನ್ನುವುದಕ್ಕಿಂತ, ಮದುವೆಯೇ ಇಲ್ಲದೆ ಗರ್ಭಿಣಿಯಾಗುವುದು ಅಥವಾ ಮಗು ಪಡೆಯುವುದರಲ್ಲಿ ತಪ್ಪೇನಿಲ್ಲ” ಎಂಬುದು ನಿತ್ಯಾ ಅವರ ಅಭಿಪ್ರಾಯ. ಒಬ್ಬ ಹೆಣ್ಣಿಗೆ ಮಗು ಬೇಕು ಎನಿಸಿದರೆ, ಆದರೆ ಮದುವೆಯ ಬಂಧನ ಇಷ್ಟವಿಲ್ಲದಿದ್ದರೆ ಅವಳು ಮಗು ಪಡೆಯುವ ನಿರ್ಧಾರ ಮಾಡಬಹುದು. ಇದಕ್ಕೆ ಈಗ ವೈದ್ಯಕೀಯವಾಗಿ ಸಾಕಷ್ಟು ಅವಕಾಶಗಳಿವೆ ಮತ್ತು ಹಲವರು ಇದನ್ನು ಯಶಸ್ವಿಯಾಗಿ ಅನುಸರಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಕೇವಲ ಮಕ್ಕಳ ಬಗ್ಗೆ ಮಾತ್ರವಲ್ಲದೆ, ಮದುವೆಯಾದ ನಂತರ ಮಕ್ಕಳಿಲ್ಲದ ದಂಪತಿಗಳ ಬಗ್ಗೆಯೂ ನಿತ್ಯಾ ಮೆನನ್ ಸಂವೇದನಾಶೀಲವಾಗಿ ಮಾತನಾಡಿದ್ದಾರೆ. “ಮದುವೆಯಾದ ಮೇಲೆ ಮಕ್ಕಳಾಗಲೇಬೇಕು ಎಂಬ ಹಠ ಬೇಡ, ಮಕ್ಕಳಿಲ್ಲದಿದ್ದರೂ ಬದುಕು ಸುಂದರವಾಗಿರಲು ಸಾಧ್ಯವಿದೆ” ಎಂಬುದು ಅವರ ನಿಲುವು. ಸಮಾಜದ ಅಲಿಖಿತ ನಿಯಮಗಳನ್ನು ಪ್ರಶ್ನಿಸಿರುವ ಅವರು, ಪ್ರತಿಯೊಬ್ಬರಿಗೂ ತಮ್ಮ ಜೀವನದ ಬಗ್ಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಹಕ್ಕಿದೆ ಎಂದು ಒತ್ತಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇವರ ಈ ‘ಬೋಲ್ಡ್’ ಹೇಳಿಕೆಗಳು ಈಗ ಯುವಜನತೆಯ ಮೆಚ್ಚುಗೆಗೆ ಪಾತ್ರವಾಗುತ್ತಿವೆ.

Continue Reading

Latest

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

VISTARANEWS.COM


on

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 2.5 ಎಕರೆ ಭೂಮಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ರಾಜ್ಯಾದ್ಯಂತ ರಾಜ್‌ಕುಮಾರ್‌ ಅಭಿಮಾನಿಗಳು ಚೇತನ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಅವರ ವಿರುದ್ಧ ದೂರು ದಾಖಲಿಸಿವೆ.
ರಾಜ್‌ಕುಮಾರ್ ಅಭಿಮಾನಿಗಳ ಸಂಘಟನೆ ರಾಜ್‌ಕುಮಾರ್ ಸೇನೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಪಡಿಸಿದೆ. ರಾಜ್‌ಕುಮಾರ್ ಅಭಿಮಾನಿಗಳಾದ ನಮಗೆ ಅವಮಾನ ಉಂಟಾಗಿದ್ದು, ಚೇತನ್‌ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ‌.
ಡಾ. ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಭೂಮಿಯನ್ನು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಅಣ್ಣಾವ್ರ ಜನ್ಮದಿನದಂದೇ ಸಾಮಾಜಿಕ ಜಾಲತಾಣಗಳಲ್ಲಿ ಚೇತನ್ ಪೋಸ್ಟ್ ಮಾಡಿದ್ದರು
ತಮ್ಮ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, ನಾನು ಆಕ್ಷೇಪ ಎತ್ತಿದ್ದು ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ. ನಾನು ಅಮೆರಿಕಾದಲ್ಲಿ ಇದ್ದಾಗಲೂ ಅವರ ಸಿನೆಮಾ ನೋಡಿಕೊಂಡು ಬೆಳೆದಿದ್ದೇನೆ. ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಆದರೆ ಅವರ ಕಾಲಾನಂತರ ಅವರ ಹೆಸರಲ್ಲಿ ಸರ್ಕಾರ ಭೂಮಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಮತ ಗಳಿಕೆಯ ಉದ್ದೇಶದಿಂದಲೇ ಸರ್ಕಾರ ಭೂಮಿ ಕೊಟ್ಟಿದೆ. ಅದರ ಬಗ್ಗೆ ಪ್ರಶ್ನೆ ಎತ್ತಿದ್ದೇನೆ. ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಕೊಡುಗೆ ಕೊಟ್ಟಿದ್ದಾರೆ ಎಂದಿದ್ದಾರೆ.
ಚೇತನ್‌ ಹೇಳಿಕೆಯಲ್ಲಿ ಏನಿದೆ?
ಸರ್ಕಾರಗಳು ಭೂಮಿಯನ್ನು ಮಂಜೂರು ಮಾಡುವಾಗ ಕೇವಲ ಮತ ಬ್ಯಾಂಕ್ ಮೇಲೆ ಕಣ್ಣಿಡಬಾರದು. ಅದರ ಬದಲು ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಪುಟ್ಟಣ್ಣ ಕಣಗಾಲ್, ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕ ಮಂದಿ ಕೊಡುಗೆ ನೀಡಿದ್ದಾರೆ. ಆದರೆ ಅವರ ಸಮಾಧಿಗಳಿಗೆ ಜಾಗ ಕೊಟ್ಟಿಲ್ಲ. ಕುವೆಂಪು ಅವರ ಸಮಾಧಿಯನ್ನೇ ಕುಪ್ಪಳ್ಳಿಯಲ್ಲಿ ಮಾಡಲಾಗಿದೆ. ರಾಜ್‌ಕುಮಾರ್‌ ಅವರ ಸಮಾಧಿಯನ್ನು ಗಾಜನೂರಿನಲ್ಲಿ ಮಾಡಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮಗೆ ರಾಜ್‌ಕುಮಾರ್ ಅವರ ಮೇಲೆ ಒಬ್ಬ ಶ್ರೇಷ್ಠ ಕಲಾವಿದ ಎಂಬ ಗೌರವವಿದೆ. ಆದರೆ, ಸ್ಮಾರಕ ಸಂಕೀರ್ಣಕ್ಕಾಗಿ ಬೆಂಗಳೂರಿನ ಪ್ರಮುಖ ಜಾಗದಲ್ಲಿ 2.5 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿದ್ದಾರೆ.
ಅಣ್ಣಾವ್ರ ಕನ್ನಡ ಭಾಷೆ, ಕಲೆ ಮತ್ತು ನಾಡಿಗೆ ನೀಡಿದ ಕೊಡುಗೆಯನ್ನು ಅರಿಯದೆ ಚೇತನ್ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳಗಳಿಗೆ ಎಕರೆಗಟ್ಟಲೆ ಜಾಗ ನೀಡಿದಾಗ ಚೇತನ್ ಅವರಿಗೆ ಸಾರ್ವಜನಿಕ ಉಪಯುಕ್ತತೆ ನೆನಪಾಗಲಿಲ್ಲವೇ? ಕೋಟ್ಯಂತರ ಕನ್ನಡಿಗರ ಆರಾಧ್ಯ ದೈವದ ಸ್ಮಾರಕದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ ಚೇತನ್‌ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕಾನೂನು ಸಂಕಷ್ಟ ಎದುರಿಸಿದ್ದರು. ಅನೇಕ ರಾಜಕೀಯ ಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದರು.

Continue Reading

Latest

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

VISTARANEWS.COM


on

ಬಾಲಿವುಡ್‌ನ ಹಿರಿಯ ನಟಿ ಕಾಜೋಲ್ ತಮ್ಮ ಮೂರು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಎಂದೂ ಮಾಡದ ಕೆಲಸವೊಂದನ್ನು ‘ದಿ ಟ್ರಯಲ್’ ವೆಬ್ ಸರಣಿಯಲ್ಲಿ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಸುಮಾರು 29 ವರ್ಷಗಳಿಂದ ತೆರೆಮೇಲೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸುವುದಿಲ್ಲ ಎಂಬ ಕಟ್ಟುನಿಟ್ಟಿನ ನಿಯಮವನ್ನು ಹೊಂದಿದ್ದ ಕಾಜೋಲ್, ಮೊದಲ ಬಾರಿಗೆ ಈ ಪಾಲಿಸಿಯನ್ನು ಮುರಿದಿದ್ದರು. ಸಹನಟರಾದ ಜಿಶು ಸೇನ್‌ಗುಪ್ತಾ ಮತ್ತು ಅಲಿ ಖಾನ್ ಜೊತೆಗಿನ ಅವರ ಲಿಪ್‌ಲಾಕ್ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಈಗ ಮೊದಲ ಬಾರಿಗೆ ಕಾಜೋಲ್ ಈ ಬೋಲ್ಡ್ ನಿರ್ಧಾರದ ಹಿಂದಿನ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಖ್ಯಾತ ಯೂಟ್ಯೂಬರ್ ಲಿಲ್ಲಿ ಸಿಂಗ್ ಅವರ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಕಾಜೋಲ್, ಈ ದೃಶ್ಯವು ಕೇವಲ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಮಾಡಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಆ ದೃಶ್ಯವು ಕಥೆಯ ಅವಿಭಾಜ್ಯ ಭಾಗವಾಗಿತ್ತು. ನಾನು ನಿರ್ವಹಿಸುತ್ತಿದ್ದ ಪಾತ್ರದ ಆಂತರಿಕ ಗೊಂದಲಗಳು, ಆಕೆಯ ಮನೋಸ್ಥಿತಿ ಮತ್ತು ಜೀವನದ ಸಂಘರ್ಷಗಳನ್ನು ತೋರಿಸಲು ಆ ದೃಶ್ಯ ಅನಿವಾರ್ಯವಾಗಿತ್ತು. ಒಂದು ವೇಳೆ ಅದನ್ನು ತೆಗೆದುಹಾಕಿದ್ದರೆ ಪಾತ್ರದ ಆಳವೇ ಇಲ್ಲವಾಗುತ್ತಿತ್ತು. ಕಥೆಯ ಬೇಡಿಕೆಗೆ ಬದ್ಧಳಾಗಿ ನಾನು ನನ್ನ ನಿಯಮವನ್ನು ಬದಿಗಿರಿಸಬೇಕಾಯಿತು” ಎಂದು ಅವರು ವಿವರಿಸಿದ್ದಾರೆ.

ಆದರೆ, ಈ ದೃಶ್ಯದಲ್ಲಿ ನಟಿಸುವುದು ತಮಗೆ ಅಂದುಕೊಂಡಷ್ಟು ಸುಲಭವಾಗಿರಲಿಲ್ಲ ಎಂದು ಕಾಜೋಲ್ ಒಪ್ಪಿಕೊಂಡಿದ್ದಾರೆ. “ಆ ಸಮಯದಲ್ಲಿ ನನಗೆ ತುಂಬಾ ಅನಾನುಕೂಲ (Uncomfortable) ಅನಿಸುತ್ತಿತ್ತು. ಸೆಟ್‌ನಲ್ಲಿ ನಿಲ್ಲುವವರೆಗೂ ನನಗೆ ಆ ಕಲ್ಪನೆಯೇ ಸರಿ ಅನ್ನಿಸಿರಲಿಲ್ಲ. ಆದರೆ ಒಬ್ಬ ವೃತ್ತಿಪರ ನಟಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿಯಾಗಿತ್ತು” ಎಂದು ಅವರು ಹೇಳಿದ್ದಾರೆ. 29 ವರ್ಷಗಳ ಸಂಪ್ರದಾಯವನ್ನು ಮುರಿದು ಕಾಜೋಲ್ ತೋರಿದ ಈ ವೃತ್ತಿಪರತೆ ಈಗ ಸಿನಿಮಾ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading
Advertisement
Latest5 minutes ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ1 hour ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest1 hour ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

Latest2 hours ago

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ RCB! ಹೇಗಿರಲಿದೆ ಹೈವೋಲ್ಟೇಜ್‌ ಮ್ಯಾಚ್‌?

Latest18 hours ago

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

Latest19 hours ago

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

Latest19 hours ago

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

Latest20 hours ago

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

Latest21 hours ago

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹೊಸ ಬಲ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

Latest21 hours ago

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌