ಮೈಸೂರಿನ ಸೆಸ್ಕಾಂನಲ್ಲಿ ಅಪ್ರೆಂಟಿಸ್‌ಷಿಪ್‌ ಮಾಡಿ - Vistara News

ಉದ್ಯೋಗ

ಮೈಸೂರಿನ ಸೆಸ್ಕಾಂನಲ್ಲಿ ಅಪ್ರೆಂಟಿಸ್‌ಷಿಪ್‌ ಮಾಡಿ

ಎಂಜಿನಿಯರಿಂಗ್‌ ಪದವೀಧರರಿಗೆ ಮತ್ತು ಡಿಪ್ಲೊಮಾ ಮಾಡಿದವರಿಗೆ ಉದ್ಯೋಗ. 135 ಅಭ್ಯರ್ಥಿಗಳಿಗೆ ಅವಕಾಶ.

VISTARANEWS.COM


on

HESCOM recruitment 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕಾಂ) ಪದವೀಧರರಿಂದ ಮತ್ತು ಡಿಪ್ಲೊಮಾ ಮಾಡಿದವರಿಂದ ಅಪ್ರೆಂಟಿಸ್‌ಷಿಪ್‌ಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 135 ಅಭ್ಯರ್ಥಿಗಳಿಗೆ ಅವಕಾಶ ದೊರೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜೂನ್‌ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದು ಒಂದು ವರ್ಷಗಳ ಅವಧಿಯ ಅಪ್ರೆಂಟಿಸ್‌ಷಿಪ್‌ ಆಗಿದ್ದು, ಆಯ್ಕೆಯಾದ ಎಂಜಿನಿಯರಿಂಗ್‌ ಪದವೀಧರ ಅಭ್ಯರ್ಥಿಗಳಿಗೆ ಮಾಸಿಕ 9 ಸಾವಿರ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ 8 ಸಾವಿರ ಸ್ಟೈಫಂಡ್‌ ನೀಡಲಾಗುತ್ತದೆ.

ಎಷ್ಟು ಮಂದಿಗೆ ಅವಕಾಶ?
ಒಟ್ಟು 80 ಮಂದಿ ಪದವೀಧರರು ಅಪ್ರೆಂಟಿಸ್‌ಷಿಪ್‌ ಮಾಡಬಹುದಾಗಿದೆ. ಇವರಲ್ಲಿ 70 ಹುದ್ದೆಗಳನ್ನು ಎಲೆಕ್ಟ್ರಿಕಲ್‌ &ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ ಪದವೀಧರರಿಗೆ ಮೀಸಲಾಗಿದ್ದರೆ, 10 ಹುದ್ದೆಗಳನ್ನು ಸಿವಿಲ್‌ ಎಂಜಿನಿಯರಿಂಗ್‌ ಮಾಡಿದವರಿಗೆ ಮೀಸಲಾಗಿಡಲಾಗಿದೆ.

ಡಿಪ್ಲೊಮಾ ಮಾಡಿದ 55 ಅಭ್ಯರ್ಥಿಗಳು ಅಪ್ರೆಂಟಿಸ್‌ಷಿಪ್‌ ಮಾಡುಬಹುದಾಗಿದ್ದು, ಇದರಲ್ಲಿ 45 ಹುದ್ದೆಗಳನ್ನು ಎಲೆಕ್ಟ್ರಿಕಲ್‌& ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ ಮಾಡಿದ ಅಭ್ಯರ್ಥಿಗಳಿಗೆ ಮತ್ತು 10 ಹುದ್ದೆಗಳನ್ನು ಸಿವಿಲ್‌ ಎಂಜಿನಿಯರಿಂಗ್‌ ಮಾಡಿದವರಿಗೆ ನಿಗದಿಪಡಿಸಲಾಗಿದೆ.

ಆಯ್ಕೆ ಹೇಗೆ?

ಅಭ್ಯರ್ಥಿಗಳು ಪದವಿ ಮತ್ತು ಡಿಪ್ಲೊಮಾದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ. ಬಂದ ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಇ-ಮೇಲ್‌ ಮೂಲಕ ಮಾಹಿತಿ ನೀಡಲಾಗುತ್ತದೆ. ನಂತರ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆ ನಡೆಸಿ, ಅಪ್ರೆಂಟಿಸ್‌ಷಿಪ್‌ಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಮೈಸೂರಿನಲ್ಲಿಯೇ ದಾಖಲೆ ಪರಿಶೀಲನೆ ನಡೆಯಲಿದೆ. ದಾಖಲೆ ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಟಿಎ/ಡಿಎ ನೀಡಲಾಗುತ್ತದೆ.

ಅಧಿಸೂಚನೆಯಲ್ಲಿರುವುದೇನು?

ಇತ್ತ ಗಮನಿಸಿ

  • ಪದವೀಧರ ಅಪ್ರೆಂಟಿಸ್‌ಷಿಪ್‌ಗೆ ಬಿಟೆಕ್‌ ಮಾಡಿದವರೂ ಅರ್ಜಿ ಸಲ್ಲಿಸಬಹುದು.
  • ಅರ್ಜಿಯಲ್ಲಿ ಇ-ಮೇಲ್‌ ವಿಳಾಸ, ಮೊಬೈಲ್‌ ನಂಬರ್‌ ಮತ್ತು ಸಂಪರ್ಕ ವಿಳಾಸ ನೀಡುವುದು ಅವಶ್ಯಕ.
  • ಜೂನ್‌ 14 ರಂದು ದಾಖಲೆ ಪರಿಶೀಲನೆಯು ನಡೆಯಲಿದೆ.
  • ಮೀಸಲಾತಿಯನ್ವಯ ಅವಕಾಶವನ್ನು ಹಂಚಿಕೆ ಮಾಡಲಾಗಿರುತ್ತದೆ.
  • ಹೆಚ್ಚಿನ ಮಾಹಿತಿಗೆ ವೆಬ್‌: http://www.cescmysore.karnataka.gov.in

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ನ್ಯಾಷನಲ್‌ ವೆಬ್‌ ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕಿರುತ್ತದೆ. ಈಗಾಗಲೇ ಅಪ್ರೆಂಟಿಸ್‌ಷಿಪ್‌ಗಾಗಿನ ಈ ಪೋರ್ಟಲ್‌ನಲ್ಲಿ ಹೆಸರು ನೊಂದಾಯಿಸಿಕೊಂಡಿರುವವರು ಸೆಸ್ಕಾಂ ಅನ್ನು ಆಯ್ಕೆಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಎನ್‌ಎಟಿಎಸ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್‌ 2 ಕೊನೆಯ ದಿನವಾದರೆ, ಸೆಸ್ಕಾಂಗೆ ಅರ್ಜಿ ಸಲ್ಲಿಸಲು ಜೂನ್‌ 7 ಕೊನೆಯ ದಿನವಾಗಿರುತ್ತದೆ.

ಇದನ್ನೂ ಓದಿ | ಕರ್ಣಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಗಮನಿಸಿ ಮೇ 2ರ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಇದನ್ನೂ ಓದಿ: Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರೆಕ್ಟ್‌ ಲಿಂಕ್‌

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ಉದ್ಯೋಗ

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 10 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Job News: ಇತ್ತೀಚೆಗೆ ಮಾಹಿತಿ ತಂತ್ರಜ್ಞಾನದ ಸೇವೆಗಳ ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾ 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಈ ಮಧ್ಯೆ ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ.

VISTARANEWS.COM


on

Job News
Koo

ನವದೆಹಲಿ: ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ (HCLTech) ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ (Job News).

“24ರ ಹಣಕಾಸು ವರ್ಷದಲ್ಲಿ ನಾವು ಸುಮಾರು 15,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಈಗಾಗಲೇ 12,000ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆʼʼ ಎಂದು ಎಚ್‌ಸಿಎಲ್‌ ಟೆಕ್‌ನ ಮುಖ್ಯ ಪೀಪಲ್ ಆಫೀಸರ್ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈ ಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್‌ 3,096 ಪ್ರೆಶರ್‌ಗಳನ್ನು ನೇಮಿಸಿದೆ. ಜತೆಗೆ ಕಂಪನಿಯು 2024ರ ಸಂಪೂರ್ಣ ಹಣಕಾಸು ವರ್ಷದಲ್ಲಿ 12,141 ಪ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ನಾಲ್ಕನೇ ತ್ರೈಮಾಸಿಕದ ವೇಳೆಗೆ ಅದರ ಒಟ್ಟು ಉದ್ಯೋಗಿಗಳ ಸಂಖ್ಯೆ 2,27,481ಕ್ಕೆ ತಲುಪಿದೆ.

”ಮುಂಬರುವ ವರ್ಷದಲ್ಲಿ ನೇಮಕಾತಿಯು ಇದೇ ರೀತಿಯಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ 10,000ಕ್ಕೂ ಹೆಚ್ಚು ಮಂದಿಯನ್ನು ನಿಯೋಜಿಸಲು ಯೋಜನೆ ಹಾಕಿಕೊಂಡಿದ್ದೇವೆ. ಅಂದರೆ ನಾವು ಕ್ಯಾಂಪಸ್ ಮೂಲಕ ನೇಮಕಾತಿ ಮುಂದುವರಿಸುತ್ತೇವೆ” ಎಂದು ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.

6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. 

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ಮೋಹಿತ್‌ ಜೋಶಿ ತಿಳಿಸಿದ್ದಾರೆ.

Continue Reading

ದೇಶ

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Tech Mahindra: ಐಟಿ ಸೇವೆಗಳಿಗೆ ಹೆಸರುವಾಸಿಯಾಗಿರುವ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದದಲ್ಲಿ 661 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೇ, 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಟೆಕ್‌ ಮಹೀಂದ್ರಾ ತೀರ್ಮಾನಿಸಿದೆ. ಇದು ಫ್ರೆಶರ್‌ಗಳಿಗೆ ಭಾರಿ ಅನುಕೂಲವಾಗಲಿದೆ.

VISTARANEWS.COM


on

Tech Mahindra
Koo

ನವದೆಹಲಿ: ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ, ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

“ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. ನಾಲ್ಕನೇ ತ್ರೈಮಾಸಿಕದಲ್ಲಿ ಟೆಕ್‌ ಮಹೀಂದ್ರಾ ನಿವ್ವಳ ಲಾಭದ ಪ್ರಮಾಣವು 709.47 ಕೋಟಿ ರೂ. ಇರಲಿದೆ ಎಂಬುದಾಗಿ ಮನಿಕಂಟ್ರೋಲ್‌ (Moneycontrol) ಅಂದಾಜಿಸಿತ್ತು.

6 ಸಾವಿರ ಫ್ರೆಶರ್‌ಗಳ ನೇಮಕ

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

50 ಸಾವಿರ ನೌಕರರಿಗೆ ಎಐ ತರಬೇತಿ

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಇನ್ನು, ಟೆಕ್‌ ಟೆಕ್‌ ಮಹೀಂದ್ರಾ ಕಂಪನಿಯ ವಾರ್ಷಿಕ ಲಾಭವೂ ಶೇ.6.2ರಷ್ಟು ಅಂದರೆ, 12,871 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೂ ಉದ್ಯೋಗ ಸೃಷ್ಟಿ ಸೇರಿ ಹಲವು ಯೋಜನೆಗಳಿಗೆ ಟೆಕ್‌ ಮಹೀಂದ್ರಾ ಚಾಲನೆ ನೀಡುತ್ತಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Continue Reading
Advertisement
Sex Scandals
Latest3 mins ago

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

MS Dhoni
ಕ್ರೀಡೆ3 mins ago

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

Hassan Pen drive case
ಕರ್ನಾಟಕ18 mins ago

Hassan Pen Drive Case: ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ19 mins ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Cleric
ದೇಶ31 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ32 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ41 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ50 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ53 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ1 hour ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20244 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202424 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌