Asia Cup- 2022 | ಶ್ರೀಲಂಕಾ, ಅಫಘಾನಿಸ್ತಾನ ನಡುವೆ ಇಂದು ಮೊದಲ ಹಣಾಹಣಿ - Vistara News

ಕ್ರಿಕೆಟ್

Asia Cup- 2022 | ಶ್ರೀಲಂಕಾ, ಅಫಘಾನಿಸ್ತಾನ ನಡುವೆ ಇಂದು ಮೊದಲ ಹಣಾಹಣಿ

ಏಷ್ಯಾ ಕಪ್‌ (Asia Cup- 2022) ಟೂರ್ನಿಯ ಮೊದಲ ಪಂದ್ಯ ಆಗಸ್ಟ್‌ 27ರಂದು ರಾತ್ರಿ ಅಫಘಾನಿಸ್ತಾನ ಹಾಗೂ ಆತಿಥೇಯ ಶ್ರೀಲಂಕಾ ನಡುವೆ ನಡೆಯಲಿದೆ.

VISTARANEWS.COM


on

Asia cup-2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ : ಏಷ್ಯಾ ಕಪ್‌ ಟೂರ್ನಿಯ (Asia Cup- 2022) ಉದ್ಘಾಟನಾ ಪಂದ್ಯದಲ್ಲಿ ಇಂದು ಅಫಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಬಿ ಗುಂಪಿನಲ್ಲಿರುವ ಈ ತಂಡಗಳು ಗೆಲುವಿನ ಮೂಲಕ ಅಭಿಯಾನ ಆರಂಭಿಸುವ ಇರಾದೆ ಹೊಂದಿದೆ. ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. 

ಟೂರ್ನಿಯಲ್ಲಿ ಐದು ಬಾರಿ ಟ್ರೋಫಿ ಗೆದ್ದು ಎರಡನೇ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಶ್ರೀಲಂಕಾ ಹಿಂದಿನಷ್ಟು ಬಲಿಷ್ಠವಾಗಿಲ್ಲ. ಆಲ್‌ರೌಂಡರ್‌ ದಸುನ್‌ ಶನಕ ಅವರು ತಂಡದ ನಾಯಕರಾಗಿದ್ದಾರೆ. ತಂಡದ ಪ್ರಮುಖ ವೇಗದ ಬೌಲರ್‌ ಎನಿಸಿಕೊಂಡಿರುವ ದುಷ್ಮಾಂತ ಚಾಮೀರ ಟೂರ್ನಿಯಿಂದ ಔಟಾಗಿರುವುದು ದೊಡ್ಡ ಹಿನ್ನಡೆ. ಪಾತುಮ್‌ ನಿಸಂಕ, ಭಾನುಕಾ ರಾಜಪಕ್ಷ, ವಾನಿಂದು ಹಸರಂಗ ಹಾಗೂ ಮಹೀಶ್‌ ತೀಕ್ಷಣ ತಂಡದಲ್ಲಿರುವ ಪ್ರಭಾವಿ ಆಟಗಾರರಿದ್ದಾರೆ.

ಇತ್ತ ಟಿ20 ಲೀಗ್‌ಗಳಲ್ಲಿ ಕರಾಮತ್ತು ತೋರುವ ಅಫಘಾನಿಸ್ತಾನ ತಂಡವನ್ನು ಕಡೆಗಣಿಸುವಂತಿಲ್ಲ. ಮೊಹಮ್ಮದ್‌ ನಬಿ, ರಶೀದ್‌ ಖಾನ್‌ ಮತ್ತು ಹಝರತ್‌ ಉಲ್ಲಾ ಜಜೈ ಅವರಂತಹ ದಾಂಡಿಗರು ಈ ತಂಡದಲ್ಲಿದ್ದಾರೆ. ಹೀಗಾಗಿ ಮೊದಲ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರಲಿದೆ.

ಪಂದ್ಯದ ತಾಣ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್‌

ಸಮಯ: ಭಾರತೀಯ ಕಾಲಮಾಣ ಪ್ರಕಾರ ರಾತ್ರಿ ೭.೩೦ಕ್ಕೆ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಹಾಟ್‌ ಸ್ಟಾರ್‌ನಲ್ಲಿ ಲೈವ್‌ ವೀಕ್ಷಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Hardik Pandya: ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಅವರು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿದ ಬಳಿಕ ಇದೀಗ ಜಾಲಿ ಮೂಡ್​ನಲ್ಲಿದ್ದಾರೆ. ನತಾಶಗೆ ವಿಚ್ಛೇದನ ನೀಡಿ ಒಂದು ವಾರ ಕಳೆಯುವಷ್ಟರಲ್ಲಿ ಪಾಂಡ್ಯ ಬಾಲಿವುಡ್​ನ ಖ್ಯಾತ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿತ್ತು. ಆದರೆ, ಪಾಂಡ್ಯ ಬ್ರಿಟಿಷ್​ ಗಾಯಕಿ ಮತ್ತು ನಟಿ ಜಾಸ್ಮಿನ್​ ವಾಲಿಯಾ(Jasmin Walia) ಜತೆ ಡೇಟಿಂಗ್​(Hardik Pandya And Jasmin Walia Dating) ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ನಟಿ ಜಾಸ್ಮಿನ್​ ವಾಲಿಯಾ(Hardik Pandya And Jasmin Walia) ಮತ್ತು ಹಾರ್ದಿಕ್​ ಪಾಂಡ್ಯ ಗ್ರೀಸ್​ನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸುತ್ತಾಡಿದ ಫೋಟೊವನ್ನು ತಮ್ಮ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಳ್ಳದಿದ್ದರೂ, ಒಂದೇ ಸಮಯದಲ್ಲಿ ಒಂದೇ ಸ್ಥಳದಲ್ಲಿರುವ ಫೋಟೋಗಳನ್ನು ಹಂಚಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ. ಹಾರ್ದಿಕ್ ಮತ್ತು ಜಾಸ್ಮಿನ್ ಪರಸ್ಪರ ಇನ್​ಸ್ಟಾಗ್ರಾಮ್​ನಲ್ಲಿ ಫೋಟೊಗಳಿಗೂ ಲೈಕ್​ ಮಾಡಿಕೊಂಡಿದ್ದಾರೆ. ಹೀಗಾಗಿ ಡೇಟಿಂಗ್​ ವದಂತಿ ಬಲವಾಗಿದೆ.

ಬ್ರಿಟಿಷ್ ಸಿಂಗರ್ ಹಾಗೂ ಟಿವಿ ನಟಿಯಾಗಿರುವ ಜಾಸ್ಮಿನ್ ವಾಲಿಯಾ ಅವರ ಪೋಷಕರು ಭಾರತೀಯ ಮೂಲದವರಾಗಿದ್ದಾರೆ ಎನ್ನಲಾಗಿದೆ. ಬ್ರಿಟಿಷ್ ರಿಯಾಲಿಟಿ ಟಿವಿ ಸಿರೀಸ್​ನಲ್ಲಿ ಕಾಣಿಸಿಕೊಂಡ ನಂತರ ಜಾಸ್ಮಿನ್ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದರು.

ಇದನ್ನೂ ಓದಿ Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್​​ಡೇ ವಿಶ್ ಮಾಡಿದ ಪಾಂಡ್ಯ

2014ರಲ್ಲಿ ಜಾಸ್ಮಿನ್ ಯೂಟ್ಯೂಬ್ ಚಾನೆಲ್ ಆರಂಭಿಸಿ ಕೆಲ ಪಾಪ್ಯುಲರ್ ಹಾಡುಗಳನ್ನು ಹಾಡುವ ಮೂಲಕ ಗಮನಸೆಳೆದಿದ್ದರು. 2017ರಲ್ಲಿ ಬಾಂ ಡಿಗ್ಗಿ ಡಿಗ್ಗಿ ಹಾಡು ಇವರಿಗೆ ಖ್ಯಾತಿ ತಂದುಕೊಟ್ಟಿತ್ತು. ಇದಾದ ಬಳಿಕ ಜಾಸ್ಮಿನ್ ಬಿಗ್​ಬಾಸ್ 13ರ ಫೈನಲಿಸ್ಟ್ ಅಸಿಮ್ ರಿಯಾಸ್ ಜತೆ 2022ರ ಮ್ಯೂಸಿಕ್ ವಿಡಿಯೋ ನೈಟ್ಸ್ & ಫೈಟ್ಸ್​ನಲ್ಲಿಯೂ ಕೆಲಸ ಮಾಡಿದ್ದರು. ಸದ್ಯ ಪಾಂಡ್ಯ ಜತೆ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನಲಾಗಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ಮನವಿ ಮಾಡಿತ್ತು.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ಕ್ರೀಡೆ

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Dodda Ganesh: 50 ವರ್ಷದ ದೊಡ್ಡ ಗಣೇಶ್ ನೇರ ನುಡಿಗಳಿಂದಲೇ ಹೆಸರುವಾಸಿ. 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಿಂದ 365 ವಿಕೆಟ್​ ಪಡೆದಿದ್ದಾರೆ.

VISTARANEWS.COM


on

Dodda Ganesh
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್(Dodda Ganesh) ಅವರು ಕೀನ್ಯಾ ತಂಡದ(Dodda Ganesh Kenya Head Coach) ಮುಖ್ಯ ಕೋಚ್​ ಆಗಿ ನೇಕಮಗೊಂಡಿದ್ದಾರೆ. 90ರ ದಶಕದಲ್ಲಿ ಭಾರತ ಮತ್ತು ಕರ್ನಾಟಕ ರಣಜಿ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ ಹೆಗ್ಗಳಿಕೆ ಇವರದ್ದು. ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್​​ನಲ್ಲಿ ಕಣಕ್ಕಿಳಿಯಲಿದೆ.

50 ವರ್ಷದ ದೊಡ್ಡ ಗಣೇಶ್ ನೇರ ನುಡಿಗಳಿಂದಲೇ ಹೆಸರುವಾಸಿ. 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಿಂದ 365 ವಿಕೆಟ್​ ಪಡೆದಿದ್ದಾರೆ. ಭಾರತ ತಂಡದ ಪರ 6 ವಿಕೆಟ್​ ಕಿತ್ತಿದ್ದಾರೆ. ಲಿಸ್ಟ್​ ‘ಎ’ ಕ್ರಿಕೆಟ್​ನಲ್ಲಿ 89 ಪಂದ್ಯಗಳನ್ನಾಡಿ 128 ವಿಕೆಟ್​ ಪಡೆದಿದ್ದಾರೆ. ಬ್ಯಾಟಿಂಗ್​ನಲ್ಲಿಯೂ ಉತ್ತಮ ದಾಖಲೆ ಹೊಂದಿರುವ ಇವರು ಲಿಸ್ಟ್​ ‘ಎ’ ಮತ್ತು ಪ್ರಥಮ ದರ್ಜೆ ಕ್ರಿಕೆಟ್​ ಸೇರಿ ಒಟ್ಟು 2,548 ರನ್​ ಬಾರಿಸಿದ್ದಾರೆ. 6 ಬಾರಿ 10 ಕ್ಕೂ ಅಧಿಕ ವಿಕೆಟ್ ಕಬಳಿಸಿದ್ದಾರೆ.

ಇದನ್ನೂ ಓದಿ Dodda Ganesh: ಬಿಜೆಪಿ ಸೇರಿದ ನೇರ ನುಡಿಯ ಕ್ರಿಕೆಟಿಗ ದೊಡ್ಡ ಗಣೇಶ್

4 ತಿಂಗಳ ಹಿಂದಷ್ಟೇ ದೊಡ್ಡ ಗಣೇಶ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B. S. Yediyurappa) ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ದೊಡ್ಡ ಗಣೇಶ್ ಮೊದಲು ವಿಕೆಟ್ ಕೀಪರ್ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಆಗಿ ವೃತ್ತಿಜೀವನ ಪ್ರಾರಂಭಿಸಿದರು. ಭಾರತದ 1983ರ ವಿಶ್ವಕಪ್ ವಿಜೇತ ವಿಕೆಟ್-ಕೀಪರ್ ಸೈಯದ್ ಕಿರ್ಮಾನಿ ಅವರನ್ನು ಆರಾಧ್ಯ ಕ್ರಿಕೆಟಿಗನಾಗಿ ಕಂಡುಕೊಂಡಿದ್ದರು. ಗುಂಡಪ್ಪ ವಿಶ್ವನಾಥ್ ಅವರು ದೊಡ್ಡ ಗಣೇಶ್ ಬೌಲಿಂಗ್ ಪ್ರತಿಭೆಯನ್ನು ಗುರುತಿಸಿ ಅವರಿಗೆ ಹಲವು ಕ್ಲಬ್​ಗಳ ಪರ ಆಡುವ ಅವಕಾಶ ಕಲ್ಪಿಸಿದ್ದರು ಎನ್ನಲಾಗಿದೆ.

ಕೀನ್ಯಾ ತಂಡದ ಕೋಚ್​ ಆಗಿ ನೇಮಕಗೊಂಡ ವಿಚಾರವನ್ನು ದೊಡ್ಡ ಗಣೇಶ್ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ತನ್ನ ಎಲ್ಲ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ತಂಡದ ಏಳಿಗೆಗೆ ಶ್ರಮಿಸಲಿದ್ದೇನೆ” ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Buchi Babu Tournament:ಶ್ರೇಯಸ್‌ ಅಯ್ಯರ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಆಗಸ್ಟ್​ 27ರಂದು ನಡೆಯುವ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ದೀಪಕ್‌ ಪಾಟೀಲ್‌ ಹೇಳಿದ್ದಾರೆ.

VISTARANEWS.COM


on

Buchi Babu Tournament
Koo

ಬೆಂಗಳೂರು: ಇಶನ್​ ಕಿಶನ್​ ಬಳಿಕ ಇದೀಗ ಟೀಮ್​ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್​ ಯಾದವ್(Suryakumar Yadav)​ ಮತ್ತು ಶ್ರೇಯಸ್​​ ಅಯ್ಯರ್(Shreyas Iyer)​ ದೇಶೀಯ ಕ್ರಿಕೆಟ್​ ಟೂರ್ನಿಯ ಪಂದ್ಯವೊಂದನ್ನು ಆಡಲು ಮುಂದಾಗಿದ್ದಾರೆ. ಇದೇ ಗುರುವಾರದಿಂದ ಆರಂಭವಾಗಲಿರುವ “ಬುಚ್ಚಿಬಾಬು ಟ್ರೋಫಿ’ ಆಹ್ವಾನಿತ(Buchi Babu Tournament) ಪಂದ್ಯಾವಳಿಯಲ್ಲಿ ಆಡುವ ನಿರ್ಧಾರಕ್ಕೆ ಬಂದಿದ್ದಾರೆ. ಉಭಯ ಆಟಗಾರರು ಮುಂಬಯಿ ತಂಡದ ಪರ ಆಡಲಿದ್ದಾರೆ ಎಂದು ಮುಂಬೈ ಕ್ರಿಕೆಟ್​ ಅಸೋಸಿಯೇಶನ್​ ಅಧಿಕೃತ ಹೇಳಿಕೆ ನೀಡಿದೆ.

ಶ್ರೇಯಸ್‌ ಅಯ್ಯರ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಆಗಸ್ಟ್​ 27ರಂದು ನಡೆಯುವ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ದೀಪಕ್‌ ಪಾಟೀಲ್‌ ಹೇಳಿದ್ದಾರೆ. ದುಲೀಪ್​ ಟ್ರೋಫಿಯಲ್ಲಿಯೂ ಅಯ್ಯರ್​ ಆಡಲಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಬಿಸಿಸಿಐ ಹೊಸ ನಿಲುವಿಗೆ ಹೆದರಿ ಸೀನಿಯರ್​ ತಂಡದ ಆಟಗಾರರೆಲ್ಲ ದೇಶೀಯ ಟೂರ್ನಿಯಲ್ಲಿ ಆಡಲು ಸಾಲುಗಟ್ಟಿದಂತಿದೆ.

12 ತಂಡಗಳ ಪಂದ್ಯಾವಳಿ


ತಮಿಳುನಾಡಿನ 4 ಕೇಂದ್ರಗಳಲ್ಲಿ ನಡೆಯುವ ಪಂದ್ಯಾವಳಿಯಲ್ಲಿ 12 ತಂಡಗಳು ಪಾಲ್ಗೊಳ್ಳಲಿವೆ. ಇವುಗಳೆಂದರೆ ಮಧ್ಯಪ್ರದೇಶ, ದಿಲ್ಲಿ, ಹರಿಯಾಣ, ಹೈದರಾಬಾದ್‌, ಬಂಗಾಲ, ಮುಂಬಯಿ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್‌, ಛತ್ತೀಸ್‌ಗಢ, ಗುಜರಾತ್‌, ತಮಿಳುನಾಡು ಕ್ರಿಕೆಟ್‌ ಮಂಡಳಿ ಇಲೆವೆನ್‌ ಮತ್ತು ತಮಿಳುನಾಡು ಕ್ರಿಕೆಟ್‌ ಮಂಡಳಿ ಅಧ್ಯಕ್ಷರ ಬಳಗ.

ಇದನ್ನೂ ಓದಿ Duleep Trophy 2024: ದುಲೀಪ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಕೊಹ್ಲಿ, ರೋಹಿತ್​ ಭಾಗವಹಿಸುವ ನಿರೀಕ್ಷೆ

ಭಾರತದ ಮಾಜಿ ಕ್ರಿಕೆಟಿಗ ಮೊತವರಪು ವೆಂಕಟ ಮಹಿಪತಿ ನಾಯ್ಡು ಅವರ ಸ್ಮರಣಾರ್ಥವಾಗಿ ನಡೆಸುವ ಕ್ರಿಕೆಟ್​ ಟೂರ್ನಿ ಇದಾಗಿದೆ. ಭಾರತ ಪರ ಆಡುವ ವೇಳೆ ಇವರು ಬುಚ್ಚಿ ಬಾಬು ನಾಯ್ಡು ಎಂದೇ ಖ್ಯಾತಿ ಗಳಿಸಿದ್ದರು. ಹೀಗಾಗಿ ಈ ಟೂರ್ನಿಗೆ ಇದೇ ಹೆಸರನ್ನು ಇರಿಸಲಾಗಿದೆ. ರಣಜಿ ಮಾದರಿಯಂತೆ 4 ದಿನಗಳ ಕಾಲ ನಡೆಯುವ ಟೂರ್ನಿ ಇದಾಗಿದೆ. 12 ತಂಡಗಳನ್ನು ತಲಾ ಮೂರರಂತೆ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.

ರಣಜಿ ಆಡಲು ನಿರಾಕರಿಸಿದ್ದ ಕಾರಣದಿಂದಾಗಿ ಟೀಮ್​ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಇಶಾನ್ ಕಿಶನ್(Ishan Kishan)​ ಬುಚ್ಚಿ ಬಾಬು(Buchi Babu) ಕ್ರಿಕೆಟ್ ಟೂರ್ನಿಯಲ್ಲಿ ಜಾರ್ಖಂಡ್ ಪರ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಮತ್ತೆ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ಪ್ರಯತ್ನ ಮಾಡಲಿದ್ದಾರೆ.

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

Continue Reading

ಕ್ರೀಡೆ

Sachin Tendulkar: ‘ಕ್ರಿಕೆಟ್​ ದೇವರ’ ಮೊದಲ ಅಂತಾರಾಷ್ಟ್ರೀಯ ಶತಕಕ್ಕೆ ತುಂಬಿತು 34 ವರ್ಷ

Sachin Tendulkar: ಓಲ್ಡ್ ಟ್ರಾಫರ್ಡ್ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಸಚಿನ್​ ಈ ಶತಕದ ಆಟವಾಡಿದ್ದರು. ಇದರ ಸಹಾಯದಿಂದ ಭಾರತ ತಂಡ ಈ ಪಂದ್ಯವನ್ನು ಡ್ರಾ ಮಾಡಲು ಸಾಧ್ಯವಾಯಿತು.

VISTARANEWS.COM


on

Sachin Tendulkar
Koo

ಮುಂಬಯಿ: ಕ್ರಿಕೆಟ್ ದೇವರು ಎಂದೇ ಖ್ಯಾತಿ ಗಳಿಸಿರುವ ಭಾರತ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್(Sachin Tendulkar) ಅವರು ಹಲವು ದಾಖಲೆಗಳ ಸರದಾರ ಎನಿಸಿಕೊಂಡಿರುವುದು ನಮಗೆಲ್ಲ ತಿಳಿದೇ ಇದೆ. ಇಂದಿಗೂ ಅವರು ಯುವ ಆಟಗಾರರಿಗೆ ಸ್ಫೂತಿಯಾಗಿದ್ದಾರೆ. ಶತಕಕಗಳ ಶತಕ ಬಾರಿಸಿರುವ ಸಚಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೊದಲ ಶತಕ(Sachin Tendulkar maiden century) ಬಾರಿಸಿದಾಗ ಅವರಿಗಿನ್ನೂ 17 ವರ್ಷ. ಆ ಮೊದಲ ಶತಕಕ್ಕೆ ಇಂದಿಗೆ 34 ವರ್ಷಗಳ ಸಂಭ್ರಮ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಸಚಿನ್​ ಅವರ ಅಂದಿನ ಶತಕ ಫೊಟೊ ಹಂಚಿಕೊಂಡು ಶತಕದ ದಿನವನ್ನು ನೆನಪಿಸಿಕೊಂಡಿದೆ.

ಹೌದು, 1990 ಆಗಸ್ಟ್ 14ರಂದು ಸಚಿನ್ ತೆಂಡೂಲ್ಕರ್ ಮೊದಲ ಅಂತಾರಾಷ್ಟ್ರೀಯ ಶತಕ ಬಾರಿಸಿದ್ದರು. ಇಂಗ್ಲೆಂಡ್ ವಿರುದ್ಧ ಓಲ್ಡ್ ಟ್ರಾಫರ್ಡ್(Old Trafford) ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸಚಿನ್​ ಈ ಸಾಧನೆ ಮಾಡಿದ್ದರು. ಇದೇ ವೇಳೆ ಟೆಸ್ಟ್ ಮಾದರಿಯಲ್ಲಿ ಶತಕ ದಾಖಲಿಸಿದ ಮೂರನೇ-ಕಿರಿಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆಗ ಅವರಿಗೆ ಕೇವಲ 17 ವರ್ಷ ಪ್ರಾಯ.

ಅಂದು 189 ಎಸೆತ ಎದುರಿಸಿದ್ದ ಸಚಿನ್ ಅಜೇಯ 119 ರನ್ ಗಳಿಸಿದ್ದರು. 1989ರ ನವೆಂಬರ್​ನಲ್ಲಿ ಟೆಸ್ಟ್ ಪದಾರ್ಪಣೆ ಮಾಡಿದ್ದ ಸಚಿನ್ ಎಂಟು ಟೆಸ್ಟ್ ಪಂದ್ಯಗಳ ಬಳಿಕ ಶತಕ ಬಾರಿಸಿದ್ದರು. ಓಲ್ಡ್ ಟ್ರಾಫರ್ಡ್ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಸಚಿನ್​ ಈ ಶತಕದ ಆಟವಾಡಿದ್ದರು. ಇದರ ಸಹಾಯದಿಂದ ಭಾರತ ತಂಡ ಈ ಪಂದ್ಯವನ್ನು ಡ್ರಾ ಮಾಡಲು ಸಾಧ್ಯವಾಯಿತು. ಟೆಸ್ಟ್ ಕ್ರಿಕೆಟ್​ನಲ್ಲಿ 51 ಶತಕ ಬಾರಿಸಿದ್ದ ವಿಶ್ವ ದಾಖಲೆ ಈಗಲೂ ಸಚಿನ್​ ಹೆಸರಿನಲ್ಲಿದೆ. ಸಚಿನ್ ಟೆಸ್ಟ್​ನಲ್ಲಿ 15,921 ರನ್ ಗಳಿಸಿದ್ದಾರೆ.

ಇದನ್ನೂ ಓದಿ Vinesh Phogat : ವಿನೇಶ್​ ಪೋಗಟ್​ಗೆ ಬೆಳ್ಳಿ ಪದಕ ಕೊಡಿ; ಕುಸ್ತಿಪಟುವಿನ ಬೆಂಬಲಕ್ಕೆ ನಿಂತ ಸಚಿನ್ ತೆಂಡೂಲ್ಕರ್​

ಸಚಿನ್​ ಅವರು 24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

Continue Reading
Advertisement
PR Sreejesh
ಕ್ರೀಡೆ3 mins ago

PR Sreejesh: ಶ್ರೀಜೇಶ್​ ಜೆರ್ಸಿ ಸಂಖ್ಯೆ 16ಕ್ಕೆ ವಿದಾಯ ಹೇಳಿದ ಹಾಕಿ ಇಂಡಿಯಾ

Terror Attacks
ದೇಶ8 mins ago

Terror Attacks: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಕ್ಯಾಪ್ಟನ್ ಹುತಾತ್ಮ

Bank Irregularities
ಕರ್ನಾಟಕ16 mins ago

Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

Hardik Pandya
ಕ್ರೀಡೆ1 hour ago

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Bigg Boss Telugu 8 Confirmed Contestants nagarjuna akkineni host
ಬಿಗ್ ಬಾಸ್2 hours ago

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Arvind Kejriwal
ದೇಶ2 hours ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

Viral News
Latest2 hours ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest2 hours ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ2 hours ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ2 hours ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌