Twin Tower Demolition | 100 ಮೀಟರ್‌ ಅವಳಿ ಕಟ್ಟಡ ನೆಲಸಮ ಕಾರ್ಯಾಚರಣೆ ಇಂದು ಮಧ್ಯಾಹ್ನ 2.30ಕ್ಕೆ - Vistara News

ದೇಶ

Twin Tower Demolition | 100 ಮೀಟರ್‌ ಅವಳಿ ಕಟ್ಟಡ ನೆಲಸಮ ಕಾರ್ಯಾಚರಣೆ ಇಂದು ಮಧ್ಯಾಹ್ನ 2.30ಕ್ಕೆ

ನೋಯ್ಡಾದಲ್ಲಿ ಸೂಪರ್‌ಟೆಕ್‌ ನಿರ್ಮಿಸಿರುವ ಅವಳಿ ಬೃಹತ್‌ ಕಟ್ಟಡಗಳ ನೆಲಸಮ ಕಾರ್ಯಾಚರಣೆ ಇಂದು ಮಧ್ಯಾಹ್ನ 2,30ಕ್ಕೆ ನಡೆಯಲಿದ್ದು, (Twin Tower Demolition) ದೇಶದ ಗಮನ ಸೆಳೆದಿದೆ.

VISTARANEWS.COM


on

twin tower
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೋಯ್ಡಾ: ನೋಯ್ಡಾದ ಸೆಕ್ಟರ್‌ ೯೩ ಎ ಪ್ರದೇಶದಲ್ಲಿರುವ ಸೂಪರ್‌ಟೆಕ್‌ನ ಅವಳಿ ಗಗನಚುಂಬಿ ಕಟ್ಟಡಗಳನ್ನು (Twin Tower Demolition) ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಇಂದು ಧರೆಗುರುಳಿಸಲು ಎಲ್ಲ ಸಿದ್ಧತೆ ನಡೆದಿದೆ. ೧೦೦ ಮೀಟರ್‌ ಎತ್ತರದ ಈ ಅವಳಿ ಕಟ್ಟಡಗಳಲ್ಲಿ ೮೫೦ ಅಪೂರ್ಣ ಫ್ಲ್ಯಾಟ್‌ಗಳು ಇವೆ. ಮಧ್ಯಾಹ್ನ ೨.೩೦ಕ್ಕೆ ಕಾರ್ಯಾಚರಣೆ ನಡೆಯಲಿದೆ.

ಅವಳಿ ಗೋಪುರಗಳ ಪೈಕಿ ಅಪೆಕ್ಸ್‌ ಹೆಸರಿನ ಕಟ್ಟಡ ೩೨ ಅಂತಸ್ತುಗಳನ್ನು ಹೊಂದಿದೆ. ಸಿಯೇನ್‌ ಕಟ್ಟಡವು ೨೯ ಮಹಡಿಗಳನ್ನು ಹೊಂದಿದೆ. ಐತಿಹಾಸಿಕ ಕುತುಬ್‌ ಮಿನಾರ್‌ಗಿಂತಲೂ ಇವು ಹೆಚ್ಚು ಎತ್ತರವನ್ನು ಹೊಂದಿವೆ. ಭಾರಿ ಸ್ಫೋಟಕಗಳ ಸಿಡಿತದಿಂದ ಕೇವಲ 15 ಸೆಕೆಂಡ್‌ಗಳಲ್ಲಿ ಈ ಕಟ್ಟಡಗಳು ನೆಲಸಮವಾಗಲಿವೆ. ಈ ಕಟ್ಟಡವನ್ನು ಕೆಡವಲು ೨೦ ಕೋಟಿ ರೂ. ಖರ್ಚಾಗುತ್ತಿದೆ.

ಎರಡೂ ಕಟ್ಟಡಗಳನ್ನು ಭಾರತದ ೧೦ ಹಾಗೂ ವಿದೇಶದ ೭ ಬ್ಲಾಸ್ಟರ್‌ಗಳ ಯೋಜನೆ ಅನ್ವಯ ನೆಲಸಮ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ೨.೧೫ರಿಂದ ೨.೪೫ರ ತನಕ ನೋಯ್ಡಾ-ಗ್ರೇಟರ್‌ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚಾರವನ್ನು ಬಂದ್‌ ಮಾಡಲಾಗುತ್ತದೆ.

ಸುಮಾರು ೭೦ ಕೋಟಿ ರೂ. ವೆಚ್ಚದಲ್ಲಿ ೨೦೦೫ರಲ್ಲಿ ನಿರ್ಮಾಣವಾದ ಈ ಕಟ್ಟಡವನ್ನು ನೋಯ್ಡಾದ ಸೆಕ್ಟರ್‌ ೯೩ ಎಯಲ್ಲಿ ಈ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸುಪ್ರೀಂಕೋರ್ಟ್‌ ಆದೇಶಿಸಿತ್ತು.

ಇದನ್ನೂ ಓದಿ:Twin Towers | ಅವಳಿ ಕಟ್ಟಡಗಳ ನೆಲಸಮದ ತ್ಯಾಜ್ಯವೇ ಕುತುಬ್‌ ಮಿನಾರ್‌ಗಿಂತ ಎತ್ತರ ಇರಲಿದೆ!

ಕಟ್ಟಡ ನೆಲಸಮವಾದ ಬಳಿಕ ಉಂಟಾಗುವ ಭಾರಿ ತ್ಯಾಜ್ಯವನ್ನು ಬಳಿಕ ತೆರವುಗೊಳಿಸಲಾಗುವುದು. ನೆಲಸಮ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಪ್ರಾಜೆಕ್ಟ್‌ ಮ್ಯಾನೇಜರ್, ಸ್ಥಳೀಯ ನಿವಾಸಿಗಳಿಗೆ ಸುರಕ್ಷತೆಯ ಭರವಸೆ ನೀಡಿದ್ದಾರೆ. ಯಾವುದೇ ಆತಂಕ ಪಡುವುದು ಬೇಡ ಎಂದು ತಿಳಿಸಿದ್ದಾರೆ. ಕಟ್ಟಡ ಸ್ಫೋಟದ ಪ್ರದೇಶವನ್ನು ನಾಲ್ಕು ಸುತ್ತುಗಳ ಕಬ್ಬಿಣದ ಮೆಶ್‌ಗಳಿಂದ ಬಂದೋಬಸ್ತ್‌ ಮಾಡಲಾಗಿದ್ದು, ಇತರ ಕಡೆಗಳಿಗೆ ಯಾವುದೇ ತೊಂದರೆಯಾಗದು ಎಂದಿದ್ದಾರೆ. ಆದರೆ ಈ ಕಟ್ಟಡದ ತ್ಯಾಜ್ಯಗಳನ್ನು ಹೊರ ತೆಗೆದು ಸಾಗಿಸಲು ೩ ತಿಂಗಳು ಬೇಕಾಗಬಹುದು.

ಇದನ್ನೂ ಓದಿ:Twin Tower Demolition | ಅವಳಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ; ಸ್ಥಳ ಪರಿಶೀಲನೆ ಮಾಡಿದ ಸಿಎಂ ಯೋಗಿ

ಗೋಪುರದ ಜತೆ ಸೆಲ್ಫಿ, ವಿಡಿಯೊ: ಸೂಪರ್‌ಟೆಕ್‌ ಅವಳಿ ಗೋಪುರ ಭಾನುವಾರ ನೆಲಸಮವಾಗುವ ಹಿನ್ನೆಲೆಯಲ್ಲಿ ಸ್ಥಳೀಯರು ಶನಿವಾರ ತಡ ರಾತ್ರಿಯ ತನಕ ಕಟ್ಟಡದ ಜತೆ ಸೆಲ್ಫಿ, ವಿಡಿಯೊಗಳನ್ನು ತೆಗೆದುಕೊಂಡರು. ಸುರಕ್ಷತೆಯ ದೃಷ್ಟಿಯಿಂದ ಸ್ಥಳೀಯ ನಿವಾಸಿಗಳನ್ನು ತೆರವುಗೊಳಿಸಲಾಗಿದೆ. ಎನ್‌ಜಿಒಗಳ ಕಾರ್ಯಕರ್ತರು ಕಟ್ಟಡದ ಸುತ್ತುಮುತ್ತಲಿನ ನಾಯಿಗಳನ್ನು ಸ್ಥಳದಿಂದ ತೆರವುಗೊಳಿಸುತ್ತಿದ್ದಾರೆ.

೫೬೦ ಪೊಲೀಸ್‌ ಸಿಬ್ಬಂದಿ ಭದ್ರತೆಗೆ: ಕಟ್ಟಡದ ಸುತ್ತಮುತ್ತ ೭ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ೫೬೦ ಪೊಲೀಸ್‌ ಸಿಬ್ಬಂದಿ, ಮೀಸಲು ಪಡೆಯಿಂದ ೧೦೦ ಸಿಬ್ಬಂದಿಯನ್ನು ಮತ್ತು ಎನ್‌ಡಿಆರ್‌ಎಫ್‌ ತಂಡವನ್ನು ಭದ್ರತೆಗೆ ನಿಯೋಜಿಸಲಾಗಿದೆ. ಹೊಗೆ-ಧೂಳು ನಿರೋಧಕ ಗನ್‌ಗಳನ್ನು ಸ್ಥಳದಲ್ಲಿ ಅಳವಡಿಸಲಾಗಿದೆ.

ಇದನ್ನೂ ಓದಿ :Twin Tower Demolition | 70 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಅವಳಿ ಕಟ್ಟಡ ಕೆಡವಲು ಆಗುವ ಖರ್ಚೆಷ್ಟು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Maldives: ವಿಶ್ವಕಪ್​ ಗೆಲುವಿನ ಸಂಭ್ರಮಾಚರಣೆಗೆ ಭಾರತ ತಂಡವನ್ನು ಆಹ್ವಾನಿಸಿದ ಮಾಲ್ಡೀವ್ಸ್‌

Maldives: ‘ಮಾಲ್ಡೀವ್ಸ್‌ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಶನ್(ಎಂಎಂಪಿಆರ್‌ಸಿ), ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟೂರಿಸಂ ಇಂಡಸ್ಟ್ರೀ(ಎಂಎಟಿಐ) ಜಂಟಿಯಾಗಿ ಟೀಮ್​ ಇಂಡಿಯಾಕ್ಕೆ ಮುಕ್ತ ಆಹ್ವಾನವನ್ನು ನೀಡುತ್ತಿದ್ದೇವೆ’ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇದೀಗ ಮತ್ತೆ ಭಾರತದ ಜತೆ ಉತ್ತಮ ಸ್ನೇಹ ಬಾಂಧವ್ಯ ಸಂಪಾದಿಸಲು ಹರಸಾಹಸ ಪಡುತ್ತಿದೆ. ಇದೀಗ ಟಿ20 ವಿಶ್ವಕಪ್(T20 World Cup)​ ವಿಜೇತ ಭಾರತ ತಂಡದ ಸಂಭ್ರಮಾಚರಣೆಯನ್ನು ಮಾಲ್ಡೀವ್ಸ್‌ನಲ್ಲಿ ಆಚರಿಸುವಂತೆ(Maldives Tourism Invites Team India) ಅಲ್ಲಿನ ಪ್ರವಾಸೋದ್ಯಮ ಸಂಘ ಮತ್ತು ಮಾರ್ಕೆಟಿಂಗ್ ಹಾಗೂ ಸಾರ್ವಜನಿಕ ಸಂಪರ್ಕ ನಿಗಮ ಆಹ್ವಾನಿಸಿದೆ.

ಜೂನ್ 29ರಂದು ಬಾರ್ಬಡೋಸ್‌ನಲ್ಲಿ ನಡೆದ ಟಿ-ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು. ಬಳಿಕ ತವರಿಗೆ ಆಗಮಿಸಿದ ಭಾರತ ತಂಡಕ್ಕೆ ಮುಂಬೈನಲ್ಲಿ ಭರ್ಜರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಮಾರಂಭದಲ್ಲಿ ಸಾಗರೋಪಾದಿಯಲ್ಲಿ ಸೇರಿದ ಜನರನ್ನು ಕಂಡು ಎಲ್ಲರು ಅಚ್ಚರಿಗೊಂಡಿದ್ದರು. ಇದೀಗ ಟಿ20 ವಿಶ್ವಕಪ್​ ವಿಜೇತ ಭಾರತ ತಂಡವನ್ನು ಮಾಲ್ಡೀವ್ಸ್‌ಗೆ ಆಹ್ವಾನಿಸಿ ಮತ್ತೆ ಭಾರತೀಯರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದೆ.

‘ಮಾಲ್ಡೀವ್ಸ್‌ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಶನ್(ಎಂಎಂಪಿಆರ್‌ಸಿ), ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟೂರಿಸಂ ಇಂಡಸ್ಟ್ರೀ(ಎಂಎಟಿಐ) ಜಂಟಿಯಾಗಿ ಟೀಮ್​ ಇಂಡಿಯಾಕ್ಕೆ ಮುಕ್ತ ಆಹ್ವಾನವನ್ನು ನೀಡುತ್ತಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ವಿಶ್ವ ವಿಜೇತ ತಂಡಕ್ಕೆ ಆತಿಥ್ಯ ನೀಡಲು ನಾವು ಸಿದ್ಧರಾಗಿದ್ದೇವೆ. ವಿಶ್ರಾಂತಿಯ ಅನುಭವಗಳಿಂದ ತುಂಬಿರುವುದನ್ನು ಖಚಿತಪಡಿಸಲು ನಾವು ಇಚ್ಛಿಸುತ್ತೇವೆ’ಎಂದು ಎಂಎಂ‍ಪಿಆರ್‌ಸಿ ಸಿಇಒ ಇಬ್ರಾಹಿಂ ಶಿಯುರಿ ಮತ್ತು ಎಂಎಟಿಐ ಕಾರ್ಯದರ್ಶಿ ಅಹ್ಮದ್ ನಜೀರ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತ ಹಾಗೂ ಮೋದಿ ಕುರಿತು ಮಾಲ್ಡೀವ್ಸ್‌ ಅಸಮಾಧಾನದ ಹೇಳಿಕೆ ನೀಡಿದ ಬಳಿಕ ದೇಶದಲ್ಲಿ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ಶುರುವಾದ ಕಾರಣ ಆ ದೇಶಕ್ಕೆ ತೆರಳುವವರ ಸಂಖ್ಯೆ ಭಾರಿ ಕುಸಿದಿದೆ.

ಇದನ್ನೂ ಓದಿ Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

Continue Reading

ದೇಶ

PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

PM Modi Russia Visit: ರಷ್ಯಾ ನಾಗರಿಕರು, ಕಲಾವಿದರಂತೂ ಮಾಸ್ಕೋದಲ್ಲಿರುವ, ಮೋದಿ ತಂಗಲಿರುವ ಹೋಟೆಲ್‌ ಎದುರು, ಭಾರತೀಯ ಶೈಲಿಯ ದಿರಸುಗಳನ್ನು ಧರಿಸಿ ಭಜನೆ, ಹಾಡು, ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Modi Russia Visit
Koo

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ (PM Modi Russia Visit ) ಮೂರು ದಿನಗಳ ರಷ್ಯಾ (Russia) ಮತ್ತು ಆಸ್ಟ್ರೀಯಾ ಪ್ರವಾಸ (Austria) ಕೈಗೊಂಡಿದ್ದು, ಸೋಮವಾರ (ಜುಲೈ 8) ಸಂಜೆ ರಷ್ಯಾ ರಾಜಧಾನಿ ಮಾಸ್ಕೋ ತಲುಪಿದ್ದಾರೆ. ನರೇಂದ್ರ ಮೋದಿ (Narendra Modi) ಅವರು ರಷ್ಯಾ ತಲುಪುತ್ತಲೇ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ. ಅನಿವಾಸಿ ಭಾರತೀಯರು, ರಷ್ಯಾ ನಾಗರಿಕರು ಭಜನೆ, ಹಾಡು, ಜೈಕಾರದ ಮೂಲಕ ಭಾರತದ ಪ್ರಧಾನಿಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದಾರೆ.

ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಬಳಿಕ ಬುಧವಾರ ಆಸ್ಟ್ರಿಯಾಗೆ ತೆರಳಿ ಗುರುವಾರದವರೆಗೂ ಅಲ್ಲೆ ಇರಲಿದ್ದಾರೆ. ರಷ್ಯಾ ನಾಗರಿಕರಂತೂ ಮಾಸ್ಕೋದಲ್ಲಿರುವ, ಮೋದಿ ತಂಗಲಿರುವ ಹೋಟೆಲ್‌ ಎದುರು, ಭಾರತೀಯ ಶೈಲಿಯ ದಿರಸುಗಳನ್ನು ಧರಿಸಿ ಭಜನೆ, ಹಾಡು, ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಇನ್ನು ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ನರೇಂದ್ರ ಮೋದಿ ಅವರಿಗೆ ಔತಣ ಕೂಡ ಏರ್ಪಡಿಸಿದ್ದಾರೆ. ಮಂಗಳವಾರ ಶೃಂಗಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಜುಲೈ 8 ಹಾಗೂ 9ರಂದು ನರೇಂದ್ರ ಮೋದಿ ಅವರು ಮಾಸ್ಕೋದಲ್ಲಿ ಇರಲಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿ ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲಿದೆ. ಈ ಭೇಟಿ ವೇಳೆ ಉಭಯ ರಾಷ್ಟಗಳು ರಕ್ಷಣೆ, ಅನಿಲ ಮತ್ತು ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Narendra Modi: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಮೋದಿ ಕರೆ; ಭಾರತಕ್ಕೆ ಆಗಮಿಸುವಂತೆ ಮನವಿ!

Continue Reading

ದೇಶ

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Terrorists Attack: ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಶಂಕೆ ಇರುವ ಕಾರಣ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದು ಕಳೆದ ಒಂದು ವಾರದಲ್ಲಿ ಸೇನೆಯ ವಾಹನವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಎರಡನೇ ದಾಳಿಯಾಗಿದೆ.

VISTARANEWS.COM


on

Terrorists Attack
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದ್ದು, ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ (Terrorists Attack) ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇದರೊಂದಿಗೆ ಕಳೆದ ಒಂದು ವಾರದಲ್ಲಿಯೇ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಎರಡು ಬಾರಿ ದಾಳಿ ನಡೆಸಿದಂತಾಗಿದೆ.

ಉಗ್ರರಿಗಾಗಿ ಶೋಧ ಆರಂಭ

ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಶಂಕೆ ಇರುವ ಕಾರಣ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹಲವು ಯೋಧರು ಇಡೀ ಅರಣ್ಯವನ್ನು ಸುತ್ತುವರಿದಿದ್ದು, ತೀವ್ರತರವಾದ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಇಲ್ಲಿದೆ ದಾಳಿಯ ವಿಡಿಯೊ

ಸೇನಾ ವಾಹನ ಬರುವುದನ್ನೇ ಕಾದು ಕುಳಿತಿದ್ದ ಹಲವು ಉಗ್ರರು, ವಾಹನದ ಮೇಲೆ ಗ್ರೆನೇಡ್‌ಗಳ ಮೂಲಕ ದಾಳಿ ನಡೆಸಿದ್ದಾರೆ. ಗಾಯಾಳು ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರೂ ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಎರಡು ದಿನಗಳ ಹಿಂದಷ್ಟೇ ಭದ್ರತಾ ಸಿಬ್ಬಂದಿಯು ಆರು ಉಗ್ರರನ್ನು (Kashmir Encounter) ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಲ್ಗಾಮ್‌ ಜಿಲ್ಲೆಯ ಫ್ರೈಸಲ್‌ ಚಿನ್ನಿಗಮ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಆರು ಉಗ್ರರು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯವರು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Continue Reading

ದೇಶ

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Tamil Nadu Violence:ಪಿಎಂಕೆ ನಾಯಕ ಶಿವಶಂಕರ್‌ ಮೇಲೆ ಈ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀಕರವಾಗಿ ಗಾಯಗೊಂಡಿರುವ ಅವರು ಜೋವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಮೂಲತಃ ಕೇಬಲ್‌ ಟಿವಿ ಆಪರೇಟರ್‌ ಆಗಿರುವ ಶಿವಶಂಕರ್‌, ತಿರುಪಾಪುಲಿಯೂರ್‌ನಲ್ಲಿರುವ ತಮ್ಮ ಮನೆಯ ಮುಂದೆ ನಿಂತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಕತ್ತಿಯಿಂದ ಹಲ್ಲೆಗೆ ಶುರು ಮಾಡಿದ್ದಾರೆ. ಶಿವಶಂಕರ್‌ ಓಡಲು ಶುರು ಮಾಡಿದಾಗ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

Tamil Nadu violence
Koo

ಚೆನ್ನೈ: ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೊರ್ವ ರಾಜಕೀಯ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ(Tamil nadu Violence) ನಡೆದಿದೆ. ಕಡಲೂರಿನಲ್ಲಿ ಈ ಘಟನೆ ನಡೆದಿದ್ದು, ಎನ್‌ಡಿಎ ಮಿತ್ರಪಕ್ಷ, ಅನ್ಬುಮಣಿ ರಾಮದಾಸ್‌ ನೇತೃತ್ವದ ಪಟ್ಟಲ್ಲಿ ಮಕ್ಕಳ ಕಚ್ಚಿ(PMK) ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿದ್ದಾರೆ.

ಪಿಎಂಕೆ ನಾಯಕ ಶಿವಶಂಕರ್‌ ಮೇಲೆ ಈ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀಕರವಾಗಿ ಗಾಯಗೊಂಡಿರುವ ಅವರು ಜೋವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಮೂಲತಃ ಕೇಬಲ್‌ ಟಿವಿ ಆಪರೇಟರ್‌ ಆಗಿರುವ ಶಿವಶಂಕರ್‌, ತಿರುಪಾಪುಲಿಯೂರ್‌ನಲ್ಲಿರುವ ತಮ್ಮ ಮನೆಯ ಮುಂದೆ ನಿಂತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಕತ್ತಿಯಿಂದ ಹಲ್ಲೆಗೆ ಶುರು ಮಾಡಿದ್ದಾರೆ. ಶಿವಶಂಕರ್‌ ಓಡಲು ಶುರು ಮಾಡಿದಾಗ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಾರಣಾಂತಿಕ ಹಲ್ಲೆಯಲ್ಲಿ ಶಿವಶಂಕರ್‌ ಕುತ್ತಿಗೆ ಬಾಯಿ ಮತ್ತು ಭುಜಕ್ಕೆ ಭಾರೀ ಗಾಯಗಳಾಗಿವೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಘಟನೆಗೆ ಅನ್ಬುಮಣಿ ರಾಮದಾಸ್‌ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಪೊಲೀಸರ ನಿರ್ಲಕ್ಷ್ಯವೇ ಇಂತಹ ದುರ್ಘಟನೆಗೆ ಕಾರಣ. ಶಂಕರನ ಸಹೋದರ ಪ್ರಭು ಮೂರು ವರ್ಷಗಳ ಹಿಂದೆ ಬರ್ಬರವಾಗಿ ಕೊಲೆಯಾಗಿದ್ದ. ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಶಂಕರ್‌ಗೆ ತಂಡವೊಂದು ನ್ಯಾಯಾಲಯಕ್ಕೆ ಹಾಜರಾಗದಂತೆ ಬೆದರಿಕೆ ಹಾಕಿತ್ತು. ಆದರೆ ಆ ನಂತರವೂ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಂಡಿಲ್ಲ, ಶಂಕರ್‌ಗೆ ರಕ್ಷಣೆಯನ್ನೂ ನೀಡಿಲ್ಲ. ಇದು ಕ್ರೂರ ಕೊಲೆ ಯತ್ನಕ್ಕೆ ಕಾರಣವಾಯಿತು. ಇದು ಪೊಲೀಸರ ಆಲಸ್ಯ ಮತ್ತು ಅಸಮರ್ಥತೆಯನ್ನು ತೋರಿಸುತ್ತದೆ ಎಂದು ದೂರಿದ್ದಾರೆ. ಘಟನೆಗೆ ಬಿಜೆಪಿ ನಾಯಕರು ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಕೆಲವು ದಿನಗಳ ಹಿಂದೆಯಷ್ಟೇ ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಮಾಡಲಾಗಿತ್ತು. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Continue Reading
Advertisement
Maldives
ಕ್ರೀಡೆ14 mins ago

Maldives: ವಿಶ್ವಕಪ್​ ಗೆಲುವಿನ ಸಂಭ್ರಮಾಚರಣೆಗೆ ಭಾರತ ತಂಡವನ್ನು ಆಹ್ವಾನಿಸಿದ ಮಾಲ್ಡೀವ್ಸ್‌

Sequins Lehenga Trend
ಫ್ಯಾಷನ್25 mins ago

Sequins Lehenga Trend: ಅಂಬಾನಿ ಮಗನ ಮದುವೆ ಎಫೆಕ್ಟ್‌; ಸಿಕ್ವಿನ್ಸ್ ಲೆಹೆಂಗಾಗಳಿಗೆ ಡಿಮ್ಯಾಂಡ್‌!

Viral News
Latest45 mins ago

Viral News: ಎಮ್ಮೆಗಾಗಿ ಮಾಲೀಕರ ಕಿತ್ತಾಟ; ಮಾಲೀಕನ ಹುಡುಕಲು ಎಮ್ಮೆಯ ಮೊರೆ ಹೋದ ಪೊಲೀಸರು!

Ambedkar's portrait
ಪ್ರಮುಖ ಸುದ್ದಿ1 hour ago

Ambedkar’s Portrait: ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

PM Modi Russia Visit
ದೇಶ1 hour ago

PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

Viral Video
ಕ್ರಿಕೆಟ್1 hour ago

Viral Video: ಲಂಡನ್​ನ ಇಸ್ಕಾನ್​ ಮಂದಿರದ ಸಂಕೀರ್ತನೆಯಲ್ಲಿ ಪಾಲ್ಗೊಂಡ ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ

Ambani Family's Jewels
ಫ್ಯಾಷನ್1 hour ago

Ambani Family’s Jewels: ನೀತಾ ಅಂಬಾನಿಯ ನೆಕ್‌ಲೆಸ್‌ ಬೆಲೆ 500 ಕೋಟಿ ರೂ! ಅಂಬಾನಿ ಮಹಿಳೆಯರ ಬಳಿ ಎಂಥೆಂಥ ಆಭರಣಗಳಿವೆ ನೋಡಿ!

Self Harming
ಪ್ರಮುಖ ಸುದ್ದಿ2 hours ago

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Terrorists Attack
ದೇಶ2 hours ago

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Tamil Nadu violence
ದೇಶ2 hours ago

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ2 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ7 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು8 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ23 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌