Motivational story | ಸರಿಯಾದ ಐಡಿಯಾ ಇದ್ರೆ ಬೋಳು ತಲೆಯವರಿಗೂ ಬಾಚಣಿಗೆ ಮಾರಬಹುದು! - Vistara News

ಪ್ರಮುಖ ಸುದ್ದಿ

Motivational story | ಸರಿಯಾದ ಐಡಿಯಾ ಇದ್ರೆ ಬೋಳು ತಲೆಯವರಿಗೂ ಬಾಚಣಿಗೆ ಮಾರಬಹುದು!

Motivational story ಐಡಿಯಾ ಒಂದಿದ್ದರೆ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಉದಾಹರಣೆ ಈ ಕಥೆ. ಇಲ್ಲಿ ಒಬ್ಬ ಹುಡುಗ ಬೋಳು ತಲೆಯವರಿಗೂ ಬಾಚಣಿಗೆ ಮಾರಿದ್ದಾನೆ.

VISTARANEWS.COM


on

motivational bouddha sanyasi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- motivational story
ಬಹುಕಾಲದ ಹಿಂದೆ ಚೀನಾದಲ್ಲಿ ಒಬ್ಬ ಯಶಸ್ವೀ ಉದ್ಯಮಿ ಇದ್ದರು. ಅವರದ್ದು ಬಾಚಣಿಗೆ ಬ್ಯುಸಿನೆಸ್. ಅವರಿಗೆ ವಯಸ್ಸಾಗಿತ್ತು. ಇನ್ನೇನು ನಿವೃತ್ತಿ ಹತ್ತಿರವಾಗಿತ್ತು. ಅವರಿಗೆ ಮೂರು ಮಂದಿ ಗಂಡು ಮಕ್ಕಳಿದ್ದರು. ತನ್ನ ಉದ್ಯಮವನ್ನು ಸುರಕ್ಷಿತ ಕೈಗಳಲ್ಲಿ ಇಡಬೇಕು ಎಂಬ ಆಸೆಯಿಂದ ಅವರು ಮಕ್ಕಳಿಗೆ ಒಂದು ಸಣ್ಣ ಪರೀಕ್ಷೆಯನ್ನು ಒಡ್ಡಿದರು.

ಅದೊಂದು ಅಸೈನ್‍ಮೆಂಟ್. `ನೀವು ಒಂದು ಬೌದ್ಧ ಆಶ್ರಮಕ್ಕೆ ಹೋಗಿ ಅಲ್ಲಿನ ಸನ್ಯಾಸಿಗಳಿಗೆ ಬಾಚಣಿಗೆ ಮಾರಿ ಬರಬೇಕು’ ಎಂದರು ತಂದೆ. ಮೂರು ದಿನದ ಬಳಿಕ ವರದಿ ನೀಡಬೇಕು ಎಂದರು.

ಮಕ್ಕಳಿಗೆ ಆಘಾತ. ಸನ್ಯಾಸಿಗಳಿಗೆ ತಲೆ ಕೂದಲೇ ಇರುವುದಿಲ್ಲ. ಅವರಿಗೆ ಬಾಚಣಿಗೆ ಯಾಕೆ? ಯಾಕಾದರೂ ಅವರು ತೆಗೆದುಕೊಂಡಾರು ಎಂದು ಯೋಚಿಸಿದರು. ಅಷ್ಟಾದರೂ ಅಪ್ಪನ ಮಾತು ಮೀರಲಾರದೆ ಆಶ್ರಮಕ್ಕೆ ತೆರಳಿದರು.

ಮೂರು ದಿನಗಳ ಬಳಿಕ ಒಬ್ಬ ಮಗ ಬಂದ. `ʻನನಗೆ ಎರಡು ಬಾಚಣಿಗೆ ಮಾರಲು ಸಾಧ್ಯವಾಯಿತು ಅಪ್ಪ’ ಅಂದ. ಅಪ್ಪ ಕುತೂಹಲದಿಂದ ಕೇಳಿದ: ಬಾಚಣಿಗೆ ತೆಗೆದುಕೊಳ್ಳುವಂತೆ ಹೇಗೆ ಅವರನ್ನು ಒಪ್ಪಿಸಿದೆ ಮಗನೇ?

ಮಗ ಹೇಳಿದ: ನಿಮಗೇನಾದರೂ ಬೆನ್ನು ತುರಿಸಿದರೆ ಆಗ ತುರಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಒಪ್ಪಿಸಿದೆ ಅಪ್ಪಾ ಅಂದ.

ಅಷ್ಟು ಹೊತ್ತಿಗೆ ಎರಡನೇಯವನು ಬಂದ. ಅವನು 10 ಬಾಚಣಿಗೆ ಮಾರಿಬಂದಿದ್ದ.

ಅವನು ಹೇಳಿದ: ನೀವು ಈ ಬಾಚಣಿಗೆಗಳನ್ನು ಖರೀದಿ ಆಶ್ರಮದಲ್ಲಿ ಇಟ್ಟರೆ ಬರುವ ಪ್ರವಾಸಿಗರಿಗೆ ಅನುಕೂಲವಾದೀತು ಅಂದೆ. ಎಲ್ಲೋ ದೂರದಿಂದ ಬಂದಿರ್ತಾರೆ, ತಲೆ ಕೂದಲು ಕೆದರಿಕೊಂಡಿದ್ದರೆ ಇದರ ಮೂಲಕ ಬಾಚಿಕೊಳ್ಳಬಹುದು ಎಂದು ಅವರಿಗೆ ಹೇಳಿದೆ. ಒಮ್ಮೆ ನಿರಾಕರಿಸಿದರೂ ಕೊನೆಗೆ 10 ತೆಗೆದುಕೊಳ್ಳಲು ಒಪ್ಪಿದರು ಅಂದ.

ಅಷ್ಟು ಹೊತ್ತಿಗೆ ಮೂರನೇ ಮಗ ಬಂದ. ಎಷ್ಟು ಬಾಚಣಿಗೆ ಮಾರಿದೆ ಮಗನೇ ಅಂತ ಅಪ್ಪ ಕೇಳಿದ. ʻಒಂದು ಸಾವಿರ ಬಾಚಣಿಗೆ ಸೇಲ್ ಆಯ್ತಪ್ಪ’ ಅಂತ ಅವನು ಹೇಳುತ್ತಿದ್ದಂತೆಯೇ ಎಲ್ಲರಿಗೂ ಭಾರಿ ಅಚ್ಚರಿ. ಇದು ಹೇಗೆ ಸಾಧ್ಯ ಎಂದು ಎಲ್ಲರೂ ಮುಖ ಮುಖ ನೋಡಿಕೊಂಡರು.

ಅಪ್ಪ ಕೇಳಿದರು: ಹೇಗಪ್ಪಾ ಇದು ಸಾಧ್ಯವಾಯಿತು, ಸ್ವಲ್ಪ ವಿವರಿಸಿ ಹೇಳು.

ಮಗ ವಿವರಿಸಿದ: ನಾನು ಆಶ್ರಮವಾಸಿ ಸನ್ಯಾಸಿಗಳ ಬಳಿಗೆ ಹೋಗಿ ಅವರಿಗೊಂದು ಐಡಿಯಾ ಕೊಟ್ಟೆ. ಅದೇನೆಂದರೆ, ಈ ಬಾಚಣಿಗೆಗಳಲ್ಲಿ ಬುದ್ಧನ ಸಂದೇಶವನ್ನು ಅಂಟಿಸಿದರೆ ಇಲ್ಲವೇ ಪ್ರಿಂಟ್ ಮಾಡಿದರೆ ಅದನ್ನು ಸಂದರ್ಶಕರು ಮತ್ತು ಭಕ್ತರಿಗೆ ಕಾಣಿಕೆಯಾಗಿ ಕೊಡಬಹುದು ಅಂದೆ. ಹಾಗೆ ಪಡೆದುಕೊಂಡವರು ಪ್ರತಿ ದಿನವೂ ತಲೆ ಬಾಚುವಾಗ ಬುದ್ಧನ ಬೋಧನೆಗಳನ್ನು ನೆನಪಿಸಿಕೊಳ್ಳಲು ಸಾಧ್ಯವಾದೀತು ಎಂದು ಹೇಳಿದೆ. ಅವರಿಗೆ ಹೌದೆನಿಸಿತು. ಕೇವಲ ಎರಡು ರೂಪಾಯಿಯ ಬಾಚಣಿಗೆ ಮೂಲಕ ಬುದ್ಧನ ಸಂದೇಶವನ್ನು ಮನೆ ಮನೆಗೆ ತಲುಪಿಸಬಹುದು ಎಂಬ ಐಡಿಯಾವೇ ರೋಚಕವಾಗಿದೆ ಅಂದರು. ಒಂದು ಸಾವಿರ ಬಾಚಣಿಗೆಗೆ ಆರ್ಡರ್ ಮಾಡಿದರು.

ಮಗ ಮುಂದುವರಿಸಿದ: ಅಷ್ಟೇ ಅಲ್ಲ ಅಪ್ಪ. ಬುದ್ಧನ ಸಂದೇಶಗಳನ್ನು ನಾವೇ ಮುದ್ರಿಸಿ ಕೊಡುವುದಾದರೆ ಬೇರೆ ಆಶ್ರಮಗಳ ಆರ್ಡರ್ ಕೂಡಾ ಪಡೆಯಲು ಸಹಾಯ ಮಾಡುವುದಾಗಿ ಅಲ್ಲಿನ ಸನ್ಯಾಸಿಗಳು ಹೇಳಿದರು. ಅದನ್ನೂ ಪ್ರಯತ್ನ ಮಾಡಬಹುದು ಅನಿಸುತ್ತದೆ ನನಗೆ.

ಮೂರನೇ ಮಗನ ಐಡಿಯಾ ಕೇಳಿ ಸ್ವತಃ ಅಪ್ಪನೇ ದಂಗಾದರು. ನನಗೆ ಇಷ್ಟು ವರ್ಷವಾದರೂ ಹೊಳೆಯದ ಐಡಿಯಾ ಇವನಿಗೆ ಹೊಳೆಯಿತಲ್ಲ ಅಂತ ಖುಷಿ ಪಟ್ಟರು. ಮೊದಲಿಬ್ಬರು ಮಕ್ಕಳನ್ನು ಬಾಚಣಿಗೆ ತಯಾರಿ ವಿಭಾಗದ ಮೇಲ್ವಿಚಾರಣೆಗೆ ಮತ್ತು ಮೂರನೇ ಮಗನನ್ನು ಮಾರ್ಕೆಟಿಂಗ್‍ಗೆ ನೇಮಿಸಿ ಅವನನ್ನೇ ಕಂಪನಿಯ ಮುಖ್ಯಸ್ಥನನ್ನಾಗಿ ಮಾಡಿದರು.

ಇದನ್ನೂ ಓದಿ| Motivational story | ಶ್ರೀಮಂತ ಉದ್ಯಮಿ ಮರಣ ಮಂಚದಲ್ಲಿ ಕುಳಿತು ಬರೆದ ವಿದಾಯ ಪತ್ರದಲ್ಲಿ ಏನಿತ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Sunita Williams: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆಯ ಉಡಾವಣೆಯನ್ನು ಮಂಗಳವಾರ ನಾಸಾ ರದ್ದುಗೊಳಿಸಿದೆ. ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ. ವಿಶೇಷ ಎಂದರೆ ಇಂದು ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ಮಂಗಳವಾರ (ಮೇ 7) ನಾಸಾ (NASA) ರದ್ದುಗೊಳಿಸಿದೆ. ʼʼಬಾಹ್ಯಾಕಾಶ ನೌಕೆಯಲ್ಲಿ ವಾಲ್ವ್ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಉಡಾವಣೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲಿಯೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದುʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಾಸಾ ಮಾಹಿತಿ ನೀಡಿದೆ. “ಅಟ್ಲಾಸ್ ವಿಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇಂದಿನ ಸ್ಟಾರ್‌ಲೈನರ್ ಉಡಾವಣೆಯನ್ನು ರದ್ದುಪಡಿಸಲಾಗಿದೆ. ನಮ್ಮ ಗಗನಯಾತ್ರಿಗಳು ಸ್ಟಾರ್‌ಲೈನರ್‌ನಿಂದ ನಿರ್ಗಮಿಸಿದ್ದಾರೆʼʼ ಎಂದು ಬರೆದುಕೊಂಡಿದೆ. ವಿಶೇಷ ಎಂದರೆ ಈ ಮೂಲಕ ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಇಬ್ಬರು ಗಗನಯಾತ್ರಿಗಳೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ಮೇ 10ರಂದು ಉಡಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ನಾಸಾ ತಿಳಿಸಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

Continue Reading

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Prajwal Revanna Case: ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಸುಖಾಸುಮ್ಮನೆ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ಇದಕ್ಕೆ ಮಧ್ಯಪ್ರವೇಶದ ಮಾಡಿದ ನ್ಯಾಯಾಧೀಶರು, ಆರೋಪಿ ಪೊಲೀಸ್ ವಶದಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ? ಎಂದು ನಾಗೇಶ್‌ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಒಂದು ವೇಳೆ‌ ಬೇಲ್ ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Revanna gets bail today court asked if there was a chance Hearing adjourned till tomorrow
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರಿಗೆ ಮಂಗಳವಾರ (ಮೇ 7) ಕೋರ್ಟ್‌ನಲ್ಲಿ ಸಣ್ಣ ಮಟ್ಟದ ಹಿನ್ನಡೆಯಾಗಿದೆ. ಆರೋಪಿ ಕಸ್ಟಡಿಯಲ್ಲಿರುವಾಗ ಜಾಮೀನು ಅರ್ಜಿ ವಿಚಾರಣೆ ಮಾಡಬಹುದೇ? ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಎಚ್.ಡಿ. ರೇವಣ್ಣ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ – ಪ್ರತಿವಾದವನ್ನು ಆಲಿಸಿತು.

ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಸುಖಾಸುಮ್ಮನೆ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ಇದಕ್ಕೆ ಮಧ್ಯಪ್ರವೇಶದ ಮಾಡಿದ ನ್ಯಾಯಾಧೀಶರು, ಆರೋಪಿ ಪೊಲೀಸ್ ವಶದಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ? ಎಂದು ನಾಗೇಶ್‌ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಒಂದು ವೇಳೆ‌ ಬೇಲ್ ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು.

ಅದಕ್ಕೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಜಾಮೀನು ನೀಡಬಹುದು. ಈ ಬಗ್ಗೆ ಇರುವ ಕಾನೂನಿನ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್‌ನ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಾಲಯದ ಗಮನಕ್ಕೆ ತಂದರು. ಈ ವೇಳೆ ಎಸ್‌ಐಟಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಎಸ್ಐಟಿಯ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದು, ಪೊಲೀಸ್ ಕಸ್ಟಡಿಯಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದೇ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ಹೀಗಾಗಿ ವಿಚಾರಣೆಯನ್ನು ನಾಳೆಗೆ (ಮೇ 8) ಮುಂದೂಡಿಕೆ ಮಾಡಲಾಗಿದೆ.

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ

ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಇದನ್ನೂ ಓದಿ: Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

Continue Reading

ಉದ್ಯೋಗ

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ಮೇ 24. ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 24 (Job Alert)

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Prajwal Revanna Case: ಪೆನ್ ಡ್ರೈವ್ ವೀಡಿಯೋ (Pen Drive Case) ಲೀಕ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ಬೆನ್ನಲ್ಲೇ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಅನಾಮಿಕರು ಅಂಟಿಸಿರುವ ಪೋಸ್ಟರ್‌ಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

VISTARANEWS.COM


on

prajwal ravanna case dk shivakumar poster
Koo

ಬೆಂಗಳೂರು: ಹಾಸನ ಸಂಸದ (Hassan PM) ಪ್ರಜ್ವಲ್‌ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಅವರ ಲೈಂಗಿಕ ಹಗರಣದಲ್ಲಿ, ಇದುವರೆಗೂ ಹತಾಶವಾಗಿದ್ದ ಬಿಜೆಪಿ (BJP) ಹಾಗೂ ಜೆಡಿಎಸ್‌ಗೆ (JDS) ಈಗ ಆಡಿಯೋ ಅಸ್ತ್ರ ದೊರೆತಿದೆ. ವಕೀಲ ದೇವರಾಜೇಗೌಡ ಪತ್ರಿಕಾಗೋಷ್ಠಿಯ ಬಳಿಕ ತುಸು ಚೇತರಿಕೆ ಬಂದಿದೆ. ಇದರ ನಡುವೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ವಿರುದ್ಧ ಪೋಸ್ಟರ್‌ಗಳು ನಗರದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿವೆ.

ಪೆನ್ ಡ್ರೈವ್ ವೀಡಿಯೋ (Pen Drive Case) ಲೀಕ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ಬೆನ್ನಲ್ಲೇ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಅನಾಮಿಕರು ಅಂಟಿಸಿರುವ ಪೋಸ್ಟರ್‌ಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. “ಹೆಣ್ಣು ಮಕ್ಕಳ ವೀಡಿಯೋ ಬಳಸಿಕೊಂಡು ರಾಜಕೀಯ ಮಾಡುವ ವ್ಯಕ್ತಿ” ಎಂದು ಇವುಗಳಲ್ಲಿ ಆರೋಪಿಸಲಾಗಿದೆ. ಜೊತೆಗೆ ಹಲವು ಅವಹೇಳನಕಾರಿ ಒಕ್ಕಣೆಗಳೂ ಈ ಪೋಸ್ಟರ್‌ಗಳಲ್ಲಿ ಕಂಡುಬಂದಿವೆ.

ಕೆಪಿಸಿಸಿ ಕಚೇರಿ, ಡಿಕೆ ಶಿವಕುಮಾರ್‌ ಪಾಲುದಾರಿಕೆ ಹೊಂದಿರುವ ಲುಲು ಮಾಲ್ ಸೇರಿದಂತೆ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಪೋಸ್ಟರ್ ಕಂಡುಬಂದಿವೆ. ರಾತ್ರೋರಾತ್ರಿ ಪೋಸ್ಟರ್‌ಗಳು ಪ್ರತ್ಯಕ್ಷವಾಗಿದ್ದು, ಪೊಲೀಸರು ಇದರ ಹಿಂದಿರುವವರ ಹುಡುಕಾಟದಲ್ಲಿ ತೊಡಗಿದ್ದಾರೆ.

ಡಿಕೆಶಿ ಆಡಿಯೋ ಕಾಂಗ್ರೆಸ್‌ಗೆ ತಲೆನೋವು

ಕಳೆದ ಹದಿನೈದು ದಿನಗಳಿಂದ ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಇಟ್ಟುಕೊಂಡು ಚೆನ್ನಾಗಿಯೇ ಆಟವಾಡಿದ್ದ ಕಾಂಗ್ರೆಸ್‌, ಮತದಾನದ ಮುನ್ನಾದಿನವಾದ ಭಾನುವಾರ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಚುನಾವಣೆಯ ಹಿಂದಿನ ದಿನವೇ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದೆ. ಡಿಕೆ ಶಿವಕುಮಾರ್ ಆಡಿಯೋ ಅನ್ನು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಬಿಡುಗಡೆ ಮಾಡಿದ್ದು, ಪ್ರಕರಣದ ಹಿಂದಿನ ಸತ್ಯಾಸತ್ಯತೆ ಬಗ್ಗೆ ಸಾರ್ವಜನಿಕರು ಇನ್ನೊಂದು ಕೋನದಿಂದ ಯೋಚಿಸುವಂತಾಗಿದೆ.

ದೇವರಾಜೇಗೌಡ ಜತೆ ಡಿಕೆ ಶಿವಕುಮಾರ್‌ ನಡೆಸಿರುವ ಮಾತುಕತೆಯ ಆಡಿಯೋದಲ್ಲಿ ಡಿಕೆಶಿ ಧ್ವನಿ ಸ್ಪಷ್ಟವಾಗಿದೆ ಎನ್ನಲಾಗಿದೆ. ಪೆನ್ ಡ್ರೈವ್ ಮಾಡಿಸಿದ್ದೇ ಡಿಕೆಶಿ ಎಂದು ಆರೋಪಿಸಲಾಗಿದೆ. ರಾಜಕೀಯ ಲಾಭಕ್ಕಾಗಿ ವ್ಯವಸ್ಥೆಯನ್ನು ಬಳಸಿಕೊಂಡಿದ್ದು, ಕಾಂಗ್ರೆಸ್ ಸರ್ಕಾರ ಎಸ್ಐಟಿ ಅಧಿಕಾರಿಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಈ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುವ ಬಗ್ಗೆ ಹಾಗೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ವಿಸ್ತಾರ ನ್ಯೂಸ್‌ಗೆ ಬಿಜೆಪಿ ವಕ್ತಾರ ವಿವೇಕರೆಡ್ಡಿ ಹೇಳಿದ್ದಾರೆ. ಎಸ್ಐಟಿ ತನಿಖೆ ಮೇಲೆ ಅನುಮಾನ ಬರುತ್ತಿದೆ. ಹೀಗಾಗಿ ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಈ ಬಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಿಎಂಗೆ ಮನವಿ ಬಳಿಕ ಹೈಕೋರ್ಟ್ ಮೊರೆ ಹೋಗಲಾಗುತ್ತದೆ. ಈ ನಡುವೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದು ವಿವೇಕರೆಡ್ಡಿ ಹೇಳಿದ್ದಾರೆ.

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Continue Reading
Advertisement
Theft Case In Bengaluru
ಬೆಂಗಳೂರು3 mins ago

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Sunita Williams
ತಂತ್ರಜ್ಞಾನ11 mins ago

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Money Guide
ಮನಿ ಗೈಡ್18 mins ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

Prajwal Revanna Case HD Revanna gets bail today court asked if there was a chance Hearing adjourned till tomorrow
ಕ್ರೈಂ20 mins ago

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Rahul Gandhi
ದೇಶ24 mins ago

Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

5 Day Work in Banks
ವಾಣಿಜ್ಯ36 mins ago

5 Days Work in Banks: ಬ್ಯಾಂಕ್‌ಗಳು ವಾರದಲ್ಲಿ ಐದೇ ದಿನ ಓಪನ್‌ ಇರಲಿವೆ; ಪರ್ಯಾಯ ವ್ಯವಸ್ಥೆಗೆ ಸಜ್ಜಾಗಿ

Theft Case In Bengaluru
ಬೆಂಗಳೂರು47 mins ago

Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

Salman Khan
ಸಿನಿಮಾ1 hour ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Dharamsala Stadium
ಕ್ರೀಡೆ1 hour ago

Dharamsala Stadium: ಧರ್ಮಶಾಲಾದಲ್ಲಿ ಅನಾವರಣಗೊಂಡ ದೇಶದ ಮೊದಲ ಹೈಬ್ರಿಡ್‌ ಕ್ರಿಕೆಟ್ ಪಿಚ್​ನ ವಿಶೇಷತೆ ಏನು?

Gold rate today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ18 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ19 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌