ಹಾಲಗೇರಾ ಗ್ರಾಮದ ರಸ್ತೆ ದುರಸ್ತಿ ಮಾಡಿ; ಯಾದಗಿರಿ ಡಿಸಿ ಕಚೇರಿ ಎದುರು ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ - Vistara News

ಯಾದಗಿರಿ

ಹಾಲಗೇರಾ ಗ್ರಾಮದ ರಸ್ತೆ ದುರಸ್ತಿ ಮಾಡಿ; ಯಾದಗಿರಿ ಡಿಸಿ ಕಚೇರಿ ಎದುರು ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ

ಮಳೆ ಬಂದರೆ ಸಾಕು ಶಾಲೆಗೆ ತೆರಳುವ ರಸ್ತೆ ಕೆಸರುಗದ್ದೆಯಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ, ರಸ್ತೆ ದುರಸ್ತಿಗಾಗಿ ಒತ್ತಾಯಿಸಿದರು.

VISTARANEWS.COM


on

ರಸ್ತೆ ದುರಸ್ತಿ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಹಾಲಗೇರಾ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಶಾಲೆಗೆ ಚಕ್ಕರ್‌ ಹಾಕಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದ ರಸ್ತೆ ದುರಸ್ತಿ ಮಾಡಿಸಿ ಎಂದು ಮೊರೆ ಇಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಳಾಗಿದ್ದು, ಕೂಡಲೇ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು, ಗ್ರಾಮಸ್ಥರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸತತ ಮಳೆಯಿಂದ ಹಾಲಗೇರಾ ಗ್ರಾಮದ ಅಂಬೇಡ್ಕರ್ ನಗರದಲ್ಲಿನ ಸರ್ಕಾರಿ ಶಾಲೆಗೆ ತೆರಳುವ ರಸ್ತೆ ಗುಂಡಿಮಯವಾಗಿ, ಕೆಸರು ಗದ್ದೆಯಂತಾಗಿದೆ. ಇಂತಹ ರಸ್ತೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ವಾಹನಗಳು ಓಡಾಡಲು ಪರದಾಡುವಂತಾಗಿದೆ. ಹೀಗಾಗಿ ಅಧಿಕಾರಿಗಳು ಈ ಕೂಡಲೇ ರಸ್ತೆ ದುರಸ್ತಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಗಳು ವ್ಯಕ್ತವಾಗಿವೆ.

ಜಲಾವೃತವಾದ ರಸ್ತೆಯಲ್ಲಿ ಮಕ್ಕಳು ಶಾಲೆಗೆ ಹೋಗುತ್ತಿರುವುದು.

ರಸ್ತೆ ಸರಿಪಡಿಸುವಂತೆ ಹಲವು ದಿನಗಳಿಂದ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | ರಾಗಿ ಕಳವು ವಿವಾದ | ಆಣೆ ಪ್ರಮಾಣ ಇಲ್ಲ, ಧರ್ಮಸ್ಥಳದಲ್ಲಿ ಸತ್ಯ ನಿವೇದನೆ ಮಾಡಿದ ಶಾಸಕ ಶಿವಲಿಂಗೇಗೌಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Moral Policing: ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ

Moral Policing: ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಅಕ್ಷೇಪಿಸಿ ಯುವಕರ ಗುಂಪು ಥಳಿಸಿದೆ. ಹಲ್ಲೆಯಲ್ಲಿ ನಂದನ್‌ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

VISTARANEWS.COM


on

moral policing shivamogga
Koo

ಶಿವಮೊಗ್ಗ: ಮುಸ್ಲಿಂ ಸಹೋದ್ಯೋಗಿಯನ್ನು (Muslim colleague) ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ (Hindu youth) ಮೇಲೆ ಹಲ್ಲೆ (Assault Case) ಮಾಡಿದ ಘಟನೆ ಶಿವಮೊಗ್ಗ (Shivamogga news) ನಗರದ ಆರ್‌ಎಂಎಲ್ ನಗರದ ಸಮೀಪ ನಡೆದಿದೆ. ಪ್ರಕರಣ (moral policing) ತುಸು ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿದೆ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್, ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ 20ಕ್ಕೂ ಹೆಚ್ಚು ಅನ್ಯ ಕೋಮಿನ ಯುವಕರು ನಂದನ್‌ನನ್ನು ತಡೆದು ಥಳಿಸಿದ್ದರು.

ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಅಕ್ಷೇಪಿಸಿ ಯುವಕರ ಗುಂಪು ಥಳಿಸಿದೆ. ಹಲ್ಲೆಯಲ್ಲಿ ನಂದನ್‌ ಕಣ್ಣು, ಕಿವಿ ಮತ್ತು ಬಾಯಿಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಶಾಸಕ ಎಸ್.ಎನ್ ಚನ್ನಬಸಪ್ಪ ಆಸ್ಪತ್ರೆಗೆ ಭೇಟಿ ನೀಡಿ ನಂದನ್ ಆರೋಗ್ಯ ವಿಚಾರಿಸಿದರು. ನಂದನ್‌ಗೆ ಧೈರ್ಯ ಹೇಳಿ, ಸೂಕ್ತ ಕಾನೂನು ಕ್ರಮದ ಭರವಸೆ ನೀಡಿದರು.

ಘಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕಾಂಗ್ರೆಸ್‌ ಆಡಳಿತವನ್ನು ಆಕ್ಷೇಪಿಸಿದ್ದಾರೆ. “ಕಾನೂನು ಸುವ್ಯವಸ್ಥೆಯನ್ನು ಮತೀಯ ಆಧಾರದ ಮೇಲೆ ನಿರ್ವಹಿಸುವ ಮೂಲಕ ಬಹುಸಂಖ್ಯಾತರನ್ನು ಕಾಂಗ್ರೆಸ್‌ ಅಭದ್ರತೆಯ ಸ್ಥಿತಿಗೆ ತಳ್ಳುತ್ತಿದೆ. ಸರ್ಕಾರದ ಆಡಳಿತ ತುಘಲಕ್ ನೀತಿಯನ್ನು ನೆನಪಿಸುತ್ತಿದೆ. ಅಮಾಯಕ ಹಿಂದೂ ಯುವಕನ ಮೇಲಿನ ಹಲ್ಲೆ ಘಟನೆಯು ಶಾಂತಿ ಸುವ್ಯವಸ್ಥೆ ಕದಡುವ ಸ್ಥಿತಿಗೆ ಕಾರಣವಾಗದಂತೆ ಪೋಲಿಸರು ಕಾರ್ಯೋನ್ಮುಖರಾಗಿ ನಂದನ್ ಮೇಲೆ ಹಲ್ಲೆ ನಡೆಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸುವೆ” ಎಂದು ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ

ಯಾದಗಿರಿ/ವಿಜಯಪುರ: ಭಾರಿ ಮಳೆಗೆ ವಿದ್ಯುತ್‌ ಕಂಬ ಮುರಿದು (Accident Case) ಬಿದ್ದಿತ್ತು. ಕಂಬ ಜೋಡಣೆ ಮಾಡುವಾಗ ಎಡವಟ್ಟಾಗಿದ್ದು, ಕಂಬ ಏರಿ ರಿಪೇರಿ ಕೆಲಸ ಮಾಡುವಾಗ ಕಾರ್ಮಿಕನಿಗೆ ದಿಢೀರ್‌ ವಿದ್ಯುತ್ ಪ್ರವಹಿಸಿ ಒದ್ದಾಡಿದ್ದಾನೆ. ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕ ರಾಯಪ್ಪ ಎಂಬಾತನನ್ನು ಸ್ಥಳೀಯರು ರಕ್ಷಿಸಿ ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಲೈನ್ ಬಂದ್ ಮಾಡಿ ಕೆಲಸ ಮಾಡುತ್ತಿದ್ದಾಗ ಏಕಾಎಕಿ ವಿದ್ಯುತ್‌ ಹರಿದಿದೆ. ಕಾರ್ಮಿಕ ರಾಯಪ್ಪ ನಿಯಂತ್ರಣ ತಪ್ಪಿದ್ದು ಕಂಬದಲ್ಲಿ ನೇತಾಡಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ನಂತರ ವಿದ್ಯುತ್ ಬಂದ್ ಮಾಡಿಸಿ ಸ್ಥಳೀಯರೇ ವಿದ್ಯುತ್‌ ಕಂಬ ಏರಿ ಕಾರ್ಮಿಕನ‌ನ್ನು ರಕ್ಷಣೆ ಮಾಡಿದ್ದಾರೆ. ಕೆಂಭಾವಿ ವಿಭಾಗದ ಜೆಸ್ಕಾಂ ‌ಸಿಬ್ಬಂದಿ ಬೇಜವಾಬ್ದಾರಿತನ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Continue Reading

ಕ್ರೈಂ

Road Accident: ವಿಆರ್‌ಎಲ್ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಹಲವರಿಗೆ ಗಾಯ

Road Accident: ವಿಜಯಾನಂದ ರೋಡ್‌ಲೈನ್ಸ್‌ (VRL) ಸಂಸ್ಥೆಗೆ ಸೇರಿದ ಬಸ್‌ ಅಪಘಾತಕ್ಕೀಡಾಯಿತು. ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಹತ್ತುಗೂಡೂರು ಬಳಿ ಪಲ್ಟಿಯಾಯಿತು. ಕಲಬುರಗಿ ಮೂಲದ ಇಬ್ಬರು ಪ್ರಯಾಣಿಕರು ಸಾವಿಗೀಡಾದರು.

VISTARANEWS.COM


on

vrl bus road accident
Koo

ಯಾದಗಿರಿ: ಖಾಸಗಿ ಬಸ್‌ ಪಲ್ಟಿಯಾಗಿ (bus accident) ಇಬ್ಬರು ಮೃತಪಟ್ಟು (death news) ಹತ್ತಾರು ಮಂದಿಗೆ ಗಾಯಗಳಾಗಿವೆ. ಈ ಅಪಘಾತ (Road Accident) ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡೂರು ಗ್ರಾಮದ ಬಳಿ ನಡೆದಿದೆ.

ವಿಜಯಾನಂದ ರೋಡ್‌ಲೈನ್ಸ್‌ (VRL) ಸಂಸ್ಥೆಗೆ ಸೇರಿದ ಬಸ್‌ ಅಪಘಾತಕ್ಕೀಡಾಯಿತು. ಕಲಬುರಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಹತ್ತುಗೂಡೂರು ಬಳಿ ಪಲ್ಟಿಯಾಯಿತು. ಕಲಬುರಗಿ ಮೂಲದ ಇಬ್ಬರು ಪ್ರಯಾಣಿಕರು ಸಾವಿಗೀಡಾದರು. ಬಸ್‌ನಲ್ಲಿ 37 ಜನ ಪ್ರಯಾಣ ಮಾಡುತ್ತಿದ್ದರು. ಬಸ್‌ನಲ್ಲಿ ಸಿಲುಕಿಕೊಂಡ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಚಾಲಕ ಸೇರಿ 6 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

ಹೊಸದಿಲ್ಲಿ: ಭಾನುವಾರ ರಾತ್ರಿ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಪಿಪ್ಲೋಡಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ (Tractor Accident) ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 13 ಪ್ರಯಾಣಿಕರು (Road Accident) ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಮೃತರು, ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಪ್ರಯಾಣಿಸುತ್ತಿದ್ದ (wedding procession) ಮದುವೆ ದಿಬ್ಬಣದಲ್ಲಿದ್ದರು.

ರಾಜ್‌ಗಢ್ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ತಿಳಿಸಿದ್ದಾರೆ. “ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ” ಎಂದು ಅವರು ತಿಳಿಸಿದರು.

ಮದುವೆ ದಿಬ್ಬಣದ ಟ್ರಾಕ್ಟರ್‌ನಲ್ಲಿ 40ರಿಂದ 50 ಜನರು ಹತ್ತಿದ್ದು, ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. “40ರಿಂದ 50 ಜನರೊಂದಿಗೆ ಮದುವೆ ಮೆರವಣಿಗೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಮೋತಿಪುರದಿಂದ ರಾಜ್‌ಗಢದ ಕುಮಾಲ್‌ಪುರಕ್ಕೆ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಬರುತ್ತಿತ್ತು. ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ” ಎಂದು ದೀಕ್ಷಿತ್ ತಿಳಿಸಿದ್ದಾರೆ.

ಚಾಲಕ ಪಾನಮತ್ತನಾಗಿದ್ದ ಮತ್ತು ಟ್ರಾಲಿ ಓವರ್‌ಲೋಡ್ ಆಗಿತ್ತು ಎಂದು ಗಾಯಗೊಂಡ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ನಂತರ, ಜನರು ಅದರ ಅಡಿಯಲ್ಲಿ ಸಿಲುಕಿಕೊಂಡರು. ತಡರಾತ್ರಿಯವರೆಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಹೊರತೆಗೆಯಲಾಯಿತು.

ರಾಷ್ಟ್ರಪತಿ ಮುರ್ಮು, ಸಿಎಂ ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಮೃತರ ಕುಟುಂಬಗಳಿಗೆ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ. “ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಹಾಗೂ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ (MP CM Mohan Yadav) ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್‌ಗಢ್ ಜಿಲ್ಲೆಯ ಪಿಪ್ಲೋಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ರಾಜಸ್ಥಾನದ ಝಲಾವರ್ ಜಿಲ್ಲೆಯ 13 ಜನರ ಅಕಾಲಿಕ ಮರಣದ ಸುದ್ದಿ ಅತ್ಯಂತ ದುಃಖಕರವಾಗಿದೆ. ಸ್ಥಳದಲ್ಲಿ ಜನಪ್ರತಿನಿಧಿ ನಾರಾಯಣ ಸಿಂಗ್ ಪನ್ವಾರ್‌, ರಾಜಗಢ ಜಿಲ್ಲಾಧಿಕಾರಿ ಮತ್ತು ಎಸ್ಪಿ ಉಪಸ್ಥಿತರಿದ್ದರು. ನಾವು ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ರಾಜ್‌ಗಡ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳ ಚಿಕಿತ್ಸೆ ನಡೆಯುತ್ತಿದೆ. ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್‌ಗೆ ಕಳಿಸಲಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಯಾದವ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Continue Reading

ಮಳೆ

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು (Bengaluru rains) ಸೇರಿದಂತೆ ದಕ್ಷಿಣ ಕರ್ನಾಟಕಕ್ಕೆ ಅಧಿಕೃತವಾಗಿ ಮುಂಗಾರು (monsoon rain) ಆವರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಸೋಮವಾರದಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ (Bengaluru rains) ಶನಿವಾರ- ಭಾನುವಾರ ಅಬ್ಬರಿಸಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದು ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

karnataka Weather Forecast

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಇದರ ಪ್ರಭಾವದಿಂದಾಗಿ ಜೂನ್‌ 7ರ ವರೆಗೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಉಳಿದಂತೆ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲೂ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗುಡುಗು, ಮಿಂಚು ಸಂಭವವಿದೆ. ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

ಈ ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಗಾಳಿ ವೇಗವು ಗಂಟೆಗೆ 30-40ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೋಲಾರದಲ್ಲಿ ಅಬ್ಬರಿಸಿದ ವರುಣ; ಒಳನಾಡಿನಲ್ಲಿ ತಾಪಮಾನ ಇಳಿಕೆ

Karnataka Weather Forecast : ರಾಜ್ಯದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕೋಲಾರದಲ್ಲಿ ಮಳೆಗೆ ಬೆಳೆ ಹಾನಿಯಾದರೆ, ಬೆಂಗಳೂರಲ್ಲಿ ದಿಢೀರ್‌ ವರ್ಷಾಧಾರೆಗೆ ವಾಹನ ಸವಾರರು ಪರದಾಡಬೇಕಾಯಿತು. ಮುಂದಿನ 48 ಗಂಟೆಯಲ್ಲಿ ಮಳೆಯು ಅಬ್ಬರಿಸಿದರೆ, ತಾಪಮಾನ ಇಳಿಕೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಕೋಲಾರ/ಬೆಂಗಳೂರು: ಭಾನುವಾರ ಕೋಲಾರ ಜಿಲ್ಲೆಯ ಹಲವು ಕಡೆ ಗುಡುಗು ಸಹಿತ (rain News) ಮಳೆಯಾಗಿದೆ. ಮಧ್ಯಾಹ್ನ 3 ಗಂಟೆಗೆ ಶುರುವಾದ ಮಳೆಗೆ (Karnataka Weather Forecast) ಜನಜೀವನ ಅಸ್ತವ್ಯಸ್ತಗೊಂಡಿತ್ತು. ಬಿಟ್ಟುಬಿಡದೆ ಸುರಿದ ಮಳೆಗೆ ಕೃಷಿ ಚಟುವಟಿಕೆಗಳು ಸ್ಥಗಿತವಾಗಿದ್ದವು. ಮುಳಬಾಗಲು, ಕೋಲಾರದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ತೋಟದ ಬೆಳೆಗಳಿಗೆ ಹಾನಿಯಾಗಿತ್ತು. ಮಳೆಯಿಂದ ಮಾವು, ಟೊಮೊಟೊ ಬೆಳೆಗಾರರಿಗೆ ಸಂಕಷ್ಟ ಎದುರಾಯಿತು.

ಇತ್ತ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗಿದೆ. ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭ ನಗರ ಸುತ್ತಮುತ್ತ ಮಳೆಯಾಗಿದ್ದರಿಂದ ವಾಹನ ಸವಾರರಿಗೆ ಅನಾನುಕೂಲ ಉಂಟಾಯಿತು. ದಿಢೀರ್‌ ಮಳೆಗೆ ಜನರು ಬಸ್‌ ನಿಲ್ದಾಣ, ಅಂಗಡಿಗಳನ್ನು ಆಶ್ರಯಿಸಿದರು.

ಇನ್ನೂ ಶನಿವಾರ ದಕ್ಷಿಣ ಒಳನಾಡು ಹಾಗೂ ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿರುವ ವರದಿ ಆಗಿದೆ. ಮಂಡ್ಯದ ಹೊನಕೆರೆಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 40.3 ಡಿ.ಸೆ ದಾಖಲಾಗಿದೆ.

ಇದನ್ನೂ ಓದಿ: Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಬೆಂಗಳೂರು ಸೇರಿ ದಕ್ಷಿಣ ಒಳನಾಡು ಆವರಿಸಿದ ಮುಂಗಾರು

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗದಗ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ದಾವಣಗೆರೆ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ , ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rupert Murdoch
ವಿದೇಶ8 mins ago

Rupert Murdoch: ಮಾಧ್ಯಮ ಲೋಕದ ದೊರೆಗೆ ಐದನೇ ಮದುವೆ; 93ನೇ ವಯಸ್ಸಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರೂಪರ್ಟ್ ಮುರ್ಡೋಕ್

pratap simha mlc election
ಕರ್ನಾಟಕ9 mins ago

MLC Election: “ಬುರ್ಖಾ ಸ್ಟೂಡೆಂಟ್‌ ಗೇಲಿ…” ರೊಚ್ಚಿಗೆದ್ದ ಪ್ರತಾಪ್‌ ಸಿಂಹರಿಂದ ರಘುಪತಿ ಭಟ್‌ ಪರ ಪೋಸ್ಟ್‌, ಡಿಲೀಟ್!

T20 World Cup 2024
ಕ್ರೀಡೆ19 mins ago

T20 World Cup 2024 : ಉಗ್ರರ ಬೆದರಿಕೆ ನಡುವೆಯೂ ನ್ಯೂಯಾರ್ಕ್​ನಲ್ಲಿ ಭಾರತ ತಂಡದ ಆಟಗಾರರ ಬಿಂದಾಸ್​ ತಿರುಗಾಟ!

Sanjeeda Shaikh Says a Woman Groped Her
ಬಾಲಿವುಡ್28 mins ago

Sanjeeda Shaikh: ಯುವತಿಯೊಬ್ಬಳು ನನ್ನ ಸ್ತನಗಳನ್ನು ಜೋರಾಗಿ ಮುಟ್ಟಿ ಓಡಿದಳು ಎಂದ ಖ್ಯಾತ ನಟಿ!

ದೇಶ37 mins ago

Lok Sabha Election 2024: ಬಿಜೆಪಿ ಫೈರ್‌ ಬ್ರ್ಯಾಂಡ್‌ಗಳ ಸೋಲು ಗೆಲುವಿನ ಲೆಕ್ಕಾಚಾರ ಹೇಗಿದೆ? ಎಕ್ಸಿಟ್‌ ಪೋಲ್‌ ಹೇಳೋದೇನು?

Dakshina Kannada Lok Sabha Constituency
ಪ್ರಮುಖ ಸುದ್ದಿ47 mins ago

Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

2nd Puc Exam 3
ಶಿಕ್ಷಣ53 mins ago

2nd PUC Exam 3: ದ್ವಿತೀಯ ಪಿಯುಸಿ ಪರೀಕ್ಷೆ-3ರ ದಂಡಸಹಿತ ಶುಲ್ಕ ಪಾವತಿಗೆ ಇಂದೇ ಕೊನೇ ದಿನ

stock market news narendra modi
ಪ್ರಮುಖ ಸುದ್ದಿ1 hour ago

Stock Market News: ಮೋದಿ ಸರಕಾರ ಪುನರಾಗಮನಕ್ಕೆ ಷೇರು ಮಾರುಕಟ್ಟೆ ಹರ್ಷ, ಸೆನ್ಸೆಕ್ಸ್‌- ನಿಫ್ಟಿ ದಾಖಲೆ ಏರಿಕೆ

Shah Rukh Khan looks Like Johnny Depp
ಬಾಲಿವುಡ್1 hour ago

Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

1993 Mumbai Serial Blast
ದೇಶ1 hour ago

1993 Mumbai Serial Blast: ಜೈಲಿನಲ್ಲೇ ಹತ್ಯೆಯಾದ ಸರಣಿ ಬಾಂಬ್‌ ಬ್ಲಾಸ್ಟ್‌ ಅಪರಾಧಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌