ಅಸ್ಸಾಂನಲ್ಲಿ ಮಳೆ ಅಬ್ಬರ; ಪ್ರವಾಹ, ಭೂಕುಸಿತಕ್ಕೆ 8 ಮಂದಿ ಸಾವು

ದೇಶ

ಅಸ್ಸಾಂನಲ್ಲಿ ಮಳೆ ಅಬ್ಬರ; ಪ್ರವಾಹ, ಭೂಕುಸಿತಕ್ಕೆ 8 ಮಂದಿ ಸಾವು

Assam Rain: ಅಸ್ಸಾಂನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭೀಕರ ಪ್ರವಾಹ ಸ್ಥಿತಿ ಎದುರಾಗಿದೆ. ಲಕ್ಷಾಂತರ ಜನರು ತೊಂದರೆಗೀಡಾಗಿದ್ದಾರೆ. ಆಶ್ರಯ ಕೇಂದ್ರಗಳನ್ನು ನಿರ್ಮಿಸಲಾಗಿದೆ.

VISTARANEWS.COM


on

Assam Rain
ಅಸ್ಸಾಂ ಮಳೆಯ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಿಸ್ಪುರ: ಅಸ್ಸಾಂನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ (Assam Rain) ಸುರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಅರುಣಾಚಲ ಪ್ರದೇಶ, ಮೇಘಾಲಯ ರಾಜ್ಯಗಳಲ್ಲೂ ಮಳೆಯಿಂದ ಹಲವು ರೀತಿಯ ಸಮಸ್ಯೆಗಳಾಗಿದ್ದು ಭೂಕುಸಿತ ಉಂಟಾಗಿದೆ. ಇದರಿಂದಾಗ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ ಕಳೆದ 24 ಗಂಟೆಯಲ್ಲಿ ಸುಮಾರು 26 ಜಿಲ್ಲೆಗಳ 4.03 ಲಕ್ಷ ಜನರಿಗೆ ತೊಂದರೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಏಜೆನ್ಸಿ ತಿಳಿಸಿದೆ. ಅಸ್ಸಾಂನಲ್ಲಿ ಮಳೆ ಬೀಳಲು ಶುರುವಾಗಿ ವಾರ ಕಳೆದಿದ್ದು, ಇಲ್ಲಿಯವರೆಗೆ ಮಳೆಯಿಂದಾದ ಅನಾಹುತದಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಅದರಲ್ಲೂ ಉದಲ್ಗುರಿ ಜಿಲ್ಲೆಯಲ್ಲೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಕರೆ ಮಾಡಿ, ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಹಿಮಂತ ಬಿಸ್ವಾ ಶರ್ಮಾ, ಅಸ್ಸಾಂನಲ್ಲಿ ಮಳೆ-ಪ್ರವಾಹದಿಂದ ಅಪಾರ ಹಾನಿಯಾಗುತ್ತಿದೆ. ಪ್ರಕೃತಿ ವಿಕೋಪದಿಂದ ಉಂಟಾಗಿರುವ ಈ ಸವಾಲಿನ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಮಾಡಲು ಸಿದ್ಧ ಇರುವುದಾಗಿ ಅಮಿತ್‌ ಶಾ ಹೇಳಿದ್ದಾರೆ.

ಅಸ್ಸಾಂನ ಕ್ಯಾಚಾರ್‌ನಲ್ಲಿ ಪ್ರವಾಹದಿಂದ 96,697 ಮಂದಿಗೆ ತೊಂದರೆಯಾಗಿದ್ದರೆ, ಹೋಜೈ ಜಿಲ್ಲೆಯಲ್ಲಿ 88,420 ಜನರು ಹಾಗೂ ಡರಾಂಗ್‌ ಮತ್ತು ನಾಗಾಂವ್‌ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಸಮಸ್ಯೆಯಾಗಿದೆ. ಒಟ್ಟಾರೆ 1100 ಹಳ್ಳಿಗಳಿಗೆ ನೀರು ನುಗ್ಗಿದೆ. 33 ಸಾವಿರ ಹೆಕ್ಟೇರ್‌ಗಳಷ್ಟು ಬೆಳೆ ಜಲಾವೃತಗೊಂಡಿದೆ ಎಂದೂ ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಏಜೆನ್ಸಿ ಮಾಹಿತಿ ನೀಡಿದೆ. ರಾಜ್ಯದಲ್ಲಿ ಪ್ರವಾಹ ಸ್ಥಿತಿ ಅತ್ಯಂತ ಹೆಚ್ಚಾಗಿರುವ ಪ್ರದೇಶದಲ್ಲಿ ಒಟ್ಟೂ 89 ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸದ್ಯ 40 ಸಾವಿರ ಮಂದಿ ಈ ಕೇಂದ್ರಗಳಲ್ಲಿದ್ದಾರೆ. ಪ್ರವಾಹದ ನೀರಿನಿಂದ ಜಲಾವೃತಗೊಂಡ ಹಳ್ಳಿಗಳಿಂದ 3,427 ಮಂದಿಯನ್ನು ಬೋಟ್‌ಗಳ ಮೂಲಕ ರಕ್ಷಿಸಲಾಗಿದೆ. ಸದ್ಯದ ಮಟ್ಟಿಗೆ ಅಸ್ಸಾಂನ ಕ್ಯಾಚರ್‌ (Cachar) ಜಿಲ್ಲೆಯ ಕಟಿಗೋರಾ ಮತ್ತು ಬೋರ್ಖೋಲಾ ಪ್ರದೇಶಗಳಲ್ಲಿ ಪರಿಸ್ಥಿತಿ ದಯನೀಯವಾಗಿದೆ. ಜಿಲ್ಲೆಯ ಪರಿಸ್ಥಿತಿ ಬಗ್ಗೆ ಅಲ್ಲಿನ ಉಪ ಆಯುಕ್ತ ಕೀರ್ತಿ ಜಲ್ಲಿ ಮಾಹಿತಿ ನೀಡಿದ್ದಾರೆ. ಯಾರೂ ಹೆದರುವ ಅಗತ್ಯವಿಲ್ಲ. ಅಗತ್ಯವಿರುವಷ್ಟು ಆಹಾರ ಸಂಗ್ರಹ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮೇಘಾಲಯದಲ್ಲಿ ಭೂಕುಸಿತ
ಮೇಘಾಲಯದಲ್ಲೂ ವಿಪರೀತ ಮಳೆ ಸುರಿಯುತ್ತಿದ್ದು ಇಲ್ಲಿ ಭೂಕುಸಿತ ಉಂಟಾಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 6 ಮತ್ತು ಲುಮ್ಡಿಂಗ್‌-ಬಾದಾರ್‌ಪುರ್‌ ಗುಡ್ಡಗಾಡು ಪ್ರದೇಶದಲ್ಲಿ ಭೂಮಿ ಕುಸಿತಗೊಂಡಿದ್ದರಿಂದ ರೈಲು ಸಂಚಾರಕ್ಕೂ ಅಡಚಣೆಯಾಗಿದೆ. ಕೆಲವು ರಸ್ತೆಗಳನ್ನು ತೆರವುಗೊಳಿಸಲಾಗಿದೆ ಮತ್ತೂ ಕೆಲವು ಹಾಗೇ ಬಾಕಿ ಇದೆ. ರಸ್ತೆ ಸಂಪರ್ಕ ಇಲ್ಲದೆ ಅನೇಕ ಪ್ರಯಾಣಿಕರು ಮಾರ್ಗ ಮಧ್ಯೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯವೂ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರುಣಾಚಲ ಪ್ರದೇಶದಲ್ಲೂ ಇದೇ ಸಮಸ್ಯೆ. ಲೋವರ್‌ ಸುಬಾನ್ಸಿರಿ ಜಿಲ್ಲೆಯಲ್ಲಿ ಇಟಾನಗರ ಮತ್ತು ಜಿರೋ ನಡುವೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿಯೂ ಭೂಕುಸಿತವಾಗಿದ್ದರಿಂದ ನೂರಾರು ವಾಹನಗಳು ಅರುಣಾಚಲ ಪ್ರದೇಶದಲ್ಲಿಯೇ ಸಿಲುಕಿವೆ. ಕರ್ಸಿಂಗ್ಸಾದಲ್ಲಿ ಭೂಮಿ ಕುಸಿದಿದ್ದರಿಂದ ಇಟಾನಗರದಿಂದ ಹೋಲೊಂಗಿ ಮತ್ತು ಗೋಹ್‌ಪುರ್‌ಗೆ ಹೋಗುವ ರಸ್ತೆಯೂ ಕಡಿತವಾಗಿತ್ತು.

ಇದನ್ನೂ ಓದಿ | ನೈಋತ್ಯ ಮುಂಗಾರು ಅಂಡಮಾನ್‌ ಪ್ರವೇಶ, ರಾಜ್ಯದಲ್ಲಿ ಇನ್ನೂ 4 ದಿನ ಭರ್ಜರಿ ಮಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶಿಕ್ಷಣ

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

NEET PG 2024: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

VISTARANEWS.COM


on

NEET PG 2024
Koo

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET PG 2024) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations) ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ natboard.edu.in ಇಲ್ಲಿಗೆ ಭೇಟಿ ನೀಡಿ.

ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಯುಜಿ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ವಿವಿಧ ವಿವಾದ ಭುಗಿಲೆದ್ದ ಹಿನ್ನಲೆಯಲ್ಲಿ ಜೂನ್‌ 22ರಂದು ಪರೀಕ್ಷೆ ಮುಂದೂಡಿ ಪ್ರಕಟಣೆ ಹೊರಡಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಹಲವು ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಸಮರ್ಥನೆ ನೀಡಿತ್ತು.

ಸಚಿವಾಲಯ ಹೇಳಿದ್ದೇನು?

ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲ ಪ್ರಕಟಣೆ ಹೊರಡಿಸಿ ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿತ್ತು.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ. ಜೂನ್‌ 21ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿತ್ತು.

ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಸಿಬಿಐ ಒಪ್ಪಿಸಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ. ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದಿದ್ದವು.

ಇದನ್ನೂ ಓದಿ: NEET UG Row : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಖ್ಯಸ್ಥರನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

Continue Reading

ದೇಶ

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Ayodhya Ram Mandir
Koo

ಲಕ್ನೋ: ಅಯೋಧ್ಯೆ ರಾಮ ಮಂದಿರ (Ayodhya Ram Mandir)ದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಗರ್ಭಗುಡಿಯ ಪುರೋಹಿತರು ಕೇಸರಿ ಬಟ್ಟೆಗಳನ್ನು ಅಂದರೆ ಕೇಸರಿ ಪೇಟ, ಕೇಸರಿ ಕುರ್ತಾ ಮತ್ತು ಧೋತಿ ಧರಿಸುತ್ತಿದ್ದರು. ಇದೀಗ ಪುರೋಹಿತರು ಹಳದಿ (ಪಿತಾಂಬರಿ) ಬಣ್ಣದ ಧೋತಿ, ಅದೇ ಬಣ್ಣದ ಕುರ್ತಾ ಮತ್ತು ಪೇಟ ಧರಿಸುತ್ತಿದ್ದಾರೆ.

ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪುರೋಹಿತರಿಗೆ ಹಳದಿ ಪೇಟ ಕಟ್ಟಲು ತರಬೇತಿ ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.

ಹೇಗಿದೆ ಹೊಸ ಸಮವಸ್ತ್ರ?

‘ಚೌಬಂದಿ’ ಎಂದು ಕರೆಯಲ್ಪಡುವ ಹೊಸ ಕುರ್ತಾದಲ್ಲಿ ಯಾವುದೇ ಬಟನ್‌ ಇರುವುದಿಲ್ಲ ಮತ್ತು ಅದನ್ನು ಕಟ್ಟಲು ದಾರವನ್ನು ಬಳಸಲಾಗುತ್ತದೆ. ಹಳದಿ ಬಣ್ಣದ ‘ಧೋತಿ’ಯನ್ನು ಹತ್ತಿ ಬಟ್ಟೆಯಿಂದ ತಯಾರಿಸಲಾಗುತ್ತದೆ. ಇದು ಪಾದವನ್ನೂ ಮುಚ್ಚಲಿದೆ. ದೇವಾಲಯದಲ್ಲಿ ಮುಖ್ಯ ಅರ್ಚಕರು ಮತ್ತು ನಾಲ್ವರು ಸಹಾಯಕ ಅರ್ಚಕರು ಇದ್ದಾರೆ. ಈಗ ಪ್ರತಿ ಸಹಾಯಕ ಪುರೋಹಿತರೊಂದಿಗೆ ಐವರು ಪುರೋಹಿತರು ತರಬೇತಿ ಪಡೆಯುತ್ತಿದ್ದಾರೆ.

ಪುರೋಹಿತರ ಪ್ರತಿ ತಂಡವು ಮುಂಜಾನೆ 3.30ರಿಂದ ರಾತ್ರಿ 11ರವರೆಗೆ ಪಾಳಿಯಲ್ಲಿ ಐದು ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಿದೆ. ʼʼರಾಮ ಮಂದಿರದಲ್ಲಿ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ ಜಾರಿಗೆ ತರಲಾಗಿದೆ. ಈಗ ಮುಖ್ಯ ಅರ್ಚಕರು, ನಾಲ್ವರು ಸಹಾಯಕ ಪುರೋಹಿತರು ಮತ್ತು 20 ತರಬೇತಿ ಪುರೋಹಿತರು ಸೇರಿದಂತೆ ಎಲ್ಲ ಪುರೋಹಿತರು ಹಳದಿ ಬಣ್ಣದ ತಲೆಯ ಸಫಾ, ಚೌಬಂದಿ ಮತ್ತು ಧೋತಿ ಧರಿಸಲಿದ್ದಾರೆ” ಎಂದು ರಾಮ ಮಂದಿರದ ಸಹಾಯಕ ಅರ್ಚಕ ಸಂತೋಷ್ ಕುಮಾರ್ ತಿವಾರಿ ತಿಳಿಸಿದ್ದಾರೆ.

ಕಾರಣವೇನು?

ಏಕರೂಪತೆಯನ್ನು ಕಾಪಾಡಿಕೊಳ್ಳಲು ಮತ್ತು ಭದ್ರತೆಯನ್ನು ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅರ್ಚಕರು ತಮ್ಮ ಫೋನ್‌ಗಳನ್ನು ದೇವಾಲಯಗಳಿಗೆ ಕೊಂಡೊಯ್ಯುವುದನ್ನು ನಿಷೇಧಿಸಿದ್ದು ಕೂಡ ಭದ್ರತಾ ಕ್ರಮದ ಒಂದು ಭಾಗ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಇತ್ತೀಚೆಗೆ ದೇವಾಲಯದ ಚಿತ್ರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿಯಮ ಜಾರಿಗೊಳಿಸಿದ್ದಾರೆ.

ಕಡಿಮೆಯಾದ ಭಕ್ತರ ದಟ್ಟಣೆ

ಅಯೋಧ್ಯೆ ರಾಮಮಂದಿರ ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾಗಿ ಹೊರಹೊಮ್ಮಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದು ಕೋಟ್ಯಂತರ ಹಿಂದೂಗಳ ಕನಸಾಗಿತ್ತು. ಹಾಗಾಗಿ ರಾಮಮಂದಿರ ಉದ್ಘಾಟನೆಯಾದ ಬೆನ್ನಿಗೇ ಲಕ್ಷಾಂತರ ಸಂಖ್ಯೆಯ ಭಕ್ತರು ರಾಮನ ದರ್ಶನಕ್ಕೆ ಬರುತ್ತಿದ್ದರು. ಆದರೆ ಮಂದಿರ ಉದ್ಘಾಟನೆಯಾಗಿ ಈಗಾಗಲೇ ಆರು ತಿಂಗಳು ಕಳೆದಿರುವುದರಿಂದ ಭಕ್ತರ ಸಂಖ್ಯೆ ಸಹಜವಾಗಿಯೇ ಕಡಿಮೆಯಾಗುತ್ತಿದೆ.

ಕಳೆದ ಆರು ವಾರಗಳಲ್ಲಿ ಅಯೋಧ್ಯೆ ನಗರಕ್ಕೆ ಬರುವ ವಿಮಾನಗಳು, ರೈಲುಗಳು ಮತ್ತು ಬಸ್ ಸೇವೆ ಗಮನಾರ್ಹವಾಗಿ ಕಡಿಮೆಯಾಗುತ್ತ ಬಂದಿದೆ. ಕೆಲವು ವಿಶೇಷ ರೈಲುಗಳ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಇತರ ರಾಜ್ಯಗಳಿಂದ ಅಯೋಧ್ಯೆಗೆ ಬರುವ ವಿಶೇಷ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದ ನಂತರ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಜನವರಿಯಿಂದ ಮಾರ್ಚ್ 2024ರವರೆಗೆ ಪ್ರತಿದಿನ ಸುಮಾರು 1.5 ಲಕ್ಷ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ ಏಪ್ರಿಲ್‌ನಿಂದ ಭಕ್ತರ ಸಂಖ್ಯೆ ಕಡಿಮೆಯಾಗುತ್ತ ಬಂತು. 

ಇದನ್ನೂ ಓದಿ: Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Continue Reading

ದೇಶ

Fire accident: ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ; ಭಾರೀ ಸಾವು-ನೋವಿನ ಶಂಕೆ

Fire accident: ಮಾಲ್‌ನಲ್ಲಿದ್ದ ಬಟ್ಟೆಯ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಏಕಾಏಕಿ ಇಡೀ ಮಾಲ್‌ಗೆ ಆವರಿಸಿತ್ತು. ದಟ್ಟ ಹೊಗೆ ತುಂಬಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಜನ ಸ್ಥಳದಿಂದ ಓಡಲು ಶುರು ಮಾಡಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ತಕ್ಷಣ ಮಾಲ್‌ನ ಒಳಗಿದ್ದ ಜನರನ್ನು ಸುರಕ್ಷಿತವಾಗಿ ಹೊರ ಕರೆ ತರುವಲ್ಲಿ ಯಶಸ್ವಿ ಆಗಿದೆ.

VISTARANEWS.COM


on

Fire accident
Koo

ನೋಯ್ಡಾ: ಉತ್ತರಪ್ರದೇಶದ ಮಾಲ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ(Fire accident) ಸಂಭವಿಸಿದೆ. ನೋಯ್ಢಾದ ಲಾಜಿಕ್ಸ್‌ ಮಾಲ್‌(Logix Mall)ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದುವರೆಗೆ ಯಾವುದೇ ಸಾವು ನೋವು ಪ್ರಕರಣಗಳು ವರದಿ ಆಗಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗುತ್ತಿದೆ.

ಮಾಲ್‌ನಲ್ಲಿದ್ದ ಬಟ್ಟೆಯ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಏಕಾಏಕಿ ಇಡೀ ಮಾಲ್‌ಗೆ ಆವರಿಸಿತ್ತು. ದಟ್ಟ ಹೊಗೆ ತುಂಬಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಜನ ಸ್ಥಳದಿಂದ ಓಡಲು ಶುರು ಮಾಡಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ತಕ್ಷಣ ಮಾಲ್‌ನ ಒಳಗಿದ್ದ ಜನರನ್ನು ಸುರಕ್ಷಿತವಾಗಿ ಹೊರ ಕರೆ ತರುವಲ್ಲಿ ಯಶಸ್ವಿ ಆಗಿದೆ.

ಇನ್ನು ಘಟನಾ ಸ್ಥಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಒಳಗೆ ಹಲವಾರು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಅಗ್ನಿ ಅವಘಡಕ್ಕೆ ನಿಜವಾದ ಕಾರಣ ಏನೆಂಬುದು ತಿಳಿದಿಲ್ಲ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೆಹಲಿಯ ವಿವೇಕ್‌ ವಿಹಾರ್‌ನಲ್ಲಿರುವ ನ್ಯೂ ಬಾರ್ನ್‌ ಬೇಬಿ ಕೇರ್‌ ಆಸ್ಪತ್ರೆ(Hospital)ಯ ಕಳೆದ ತಿಂಗಳು ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ವೆಂಟಿಲೇಟರ್‌ನಲ್ಲಿದ್ದ ಮಗು ಸೇರಿದಂತೆ ಒಟ್ಟು 7 ಮಕ್ಕಳು ಸಾವನ್ನಪ್ಪಿದ್ದರು. ಇನ್ನು ಘಟನೆಯಲ್ಲಿ 12 ಮಕ್ಕಳನ್ನು ರಕ್ಷಿಸಲಾಗಿತ್ತು. ಮೂರು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲೆ ವ್ಯಾಪಿಸುತ್ತಲೇ ಹೋಗಿತ್ತು. ತಕ್ಷಣ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆಗೆ 7 ಜನ ಮಕ್ಕಳು ಬಲಿಯಾಗಿದ್ದಾರೆ.

ಇದಕ್ಕೂ ಮುನ್ನ ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27ಜನ ಮೃತಪಟ್ಟಿದ್ದರು. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿತ್ತು.

ಇದನ್ನೂ ಓದಿ:Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

Continue Reading

ಶಿಕ್ಷಣ

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Edu Guide: ಎಂಬಿಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌. ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ. 2 ಲಕ್ಷ ರೂ. ನೀಡುವ ಸ್ಕಾಲರ್‌ಶಿಪ್‌ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31. ಅರ್ಜಿ ಸಲ್ಲಿಸುವ ವಿಧಾನ, ಯಾರೆಲ್ಲ ಅರ್ಹರು ಮುಂತಾದ ವಿವರ ಇಲ್ಲಿದೆ.

VISTARANEWS.COM


on

Edu Guide
Koo

ಬೆಂಗಳೂರು: ದೇಶದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡುತ್ತಿದೆ. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದೆ. ಅದಾಗ್ಯೂ ಉನ್ನತ ಶಿಕ್ಷಣ ಎನ್ನುವುದು ಇನ್ನೂ ಹಲವು ಕಡೆ ಗಗನ ಕುಸುಮ ಎನಿಸಿಕೊಂಡಿದೆ. ಅದರಲ್ಲಿಯೂ ಎಂಜಿನಿಯರಿಂಗ್‌, ಮೆಡಿಕಲ್‌, ಎಂಬಿಎಯಂತಹ ಉನ್ನತ ಶಿಕ್ಷಣದಲ್ಲಿದಲ್ಲಿನ ದುಬಾರಿ ಫೀಸ್‌ ಕಾರಣದಿಂದ ಹಣ ಹೊಂದಿಸಲು ಬಡ ಮತ್ತು ಮಧ್ಯಮ ವರ್ಗದ ಮಂದಿ ಇಂದಿಗೂ ಪರದಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಕೆಲವು ಖಾಸಗಿ ಸಂಸ್ಥೆಗಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ನೀಡಲು ಮುಂದು ಬಂದಿವೆ (Scholarship For Students). ಈ ಪೈಕಿ ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ ಪ್ರಮುಖವಾದುದು (IDFC FIRST Bank MBA Scholarship 2024-26). ಬ್ಯಾಂಕ್‌ ಬಡ ಎಂಬಿಎ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 2 ಲಕ್ಷ ರೂ. ಒದಗಿಸುತ್ತಿದೆ. ಇದಕ್ಕೆ ಯಾರೆಲ್ಲ ಅರ್ಹರು? ಅಪ್ಲೈ ಮಾಡುವುದು ಹೇಗೆ? ಮುಂತಾದ ವಿವರ ಇಲ್ಲಿದೆ (Edu Guide).

ಏನಿದು ಯೋಜನೆ?

ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಎಂಬಿಎ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು 2018ರಲ್ಲಿ ಪರಿಚಯಿಸಿದೆ. ಈ ಯೋಜನೆ ಮೂಲಕ ಅರ್ಹ ವಿದ್ಯಾರ್ಥಿಗಳ ಶಿಕ್ಷಣಕ್ಕೆ 2 ಲಕ್ಷ ರೂ. ನೆರವು ಒದಗಿಸಲಾಗುತ್ತದೆ. ಇದುವರೆಗೆ 152 ಕಾಲೇಜುಗಳ ಸುಮಾರು 1,154 ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ ಪಡೆದುಕೊಂಡಿದ್ದಾರೆ.

ಯಾರೆಲ್ಲ ಅರ್ಹರು?

ಈ ಬಾರಿಯ ಸ್ಕಾಲರ್‌ಶಿಪ್‌ನ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 31. ಸ್ಕಾಲರ್‌ಶಿಪ್‌ಗೆ ಈ ಕೆಳಗಿನ ಅರ್ಹತೆ ಅಗತ್ಯ.

  • ಭಾರತೀಯ ನಾಗರಿಕರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು.
  • ಪಟ್ಟಿಯಲ್ಲಿ ಇರುವ ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು (ಕಾಲೇಜಿನ ಪಟ್ಟಿ ಕೆಳಗೆ ನೀಡಲಾಗಿದೆ).
  • 2 ವರ್ಷಗಳ ಪೂರ್ಣ ಅವಧಿಯ ಎಂಬಿಎ ಕೋರ್ಸ್‌ನ ಮೊದಲ ವರ್ಷದಲ್ಲಿರಬೇಕು.
  • ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ಹೊಂದಿರಬೇಕು.

ಅಗತ್ಯ ದಾಖಲೆಗಳು

  • ಕಾಲೇಜಿಗೆ ಪ್ರವೇಶ ಪಡೆದಿರುವ ಪುರಾವೆ (ಕಾಲೇಜು ಹೆಸರು, ಅಡ್ಮಿಷನ್‌ ವರ್ಷ ಇತ್ಯಾದಿ ಮಾಹಿತಿ ಒಳಗೊಂಡಿರಬೇಕು).
  • ಶುಲ್ಕ ಪಾವತಿಯ ರಸೀದಿ.
  • ಪದವಿ ತರಗತಿಯ ಅಂಕಪಟ್ಟಿ ಮತ್ತು ಉತ್ತೀರ್ಣ ಪ್ರಮಾಣಪತ್ರದ ಪ್ರತಿ.
  • ಆದಾಯ ಪ್ರಮಾಣ ಪತ್ರ.

ಕಾಲೇಜಿನ ಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ (https://d2w7l1p59qkl0r.cloudfront.net/static/files/list-of-institutions-idfc-first-bank-mba-scholarship-2024-26.pdf)

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.buddy4study.com/page/idfc-first-bank-mba-scholarship#scholarships)
  • ಹೆಸರು ನೋಂದಾಯಿಸಿ.
  • ಈಗ IDFC FIRST Bank MBA Scholarship 2024-26 ಪುಟ ಕಾಣಿಸುತ್ತದೆ.
  • ವಿವರಗಳನ್ನು ಓದಿ ‘Apply Now’ ಬಟನ್‌ ಕ್ಲಿಕ್‌ ಮಾಡಿ.
  • ಆಧಾರ್‌ ನಂಬರ್‌ನೊಂದಿಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ನಮೂದಿಸಿ.
  • ಈಗ ಯುಆರ್‌ಎಲ್‌, ಯೂಸರ್‌ ಐಡಿ, ಮತ್ತು ಪಾಸ್‌ವರ್ಡ್‌ ಸ್ವೀಕರಿಸುತ್ತೀರಿ.
  • ಅದನ್ನು ಬಳಸಿ ಲಾಗಿನ್‌ ಆಗಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Edu Guide: ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಿಗಲಿವೆ ಇವೆಲ್ಲ ಸ್ಕಾಲರ್‌ಶಿಪ್‌

Continue Reading
Advertisement
Rohit Sharma
ಕ್ರೀಡೆ18 mins ago

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Raj Tarun Police complaint filed by live-in partner
ಟಾಲಿವುಡ್18 mins ago

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

NEET PG 2024
ಶಿಕ್ಷಣ19 mins ago

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

Electric shock
ದಾವಣಗೆರೆ23 mins ago

Electric shock : ಮೋಟಾರ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ಗೆ ಮಹಿಳೆ ಸಾವು; ಮೀನು ಹಿಡಿಯಲು ಹೋಗಿ ವ್ಯಕ್ತಿ ನೀರುಪಾಲು

Channaptna By Election CP Yogeshwar
ಪ್ರಮುಖ ಸುದ್ದಿ29 mins ago

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Viral Video
Latest29 mins ago

Viral Video: ತಲೆಕೂದಲಿನಲ್ಲಿ ಟೀಪಾಟ್ ತಯಾರಿಸಿ ಅದರಿಂದ ನೀರು ಕುಡಿದ ಕೇಶ ವಿನ್ಯಾಸಕಿ!

SC ST Scholarship
ಪ್ರಮುಖ ಸುದ್ದಿ32 mins ago

SC ST Scholarship: ದೆಹಲಿಯಲ್ಲಿ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಹಾಸ್ಟೆಲ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ 15,000 ಶಿಷ್ಯವೇತನ: ಸಿಎಂ ಘೋಷಣೆ

Retirement Panning
ಮನಿ-ಗೈಡ್46 mins ago

Retirement Panning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

electric bike taxi
ಪ್ರಮುಖ ಸುದ್ದಿ1 hour ago

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Puri Jagannath Yatra
ಧಾರ್ಮಿಕ1 hour ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ1 hour ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ3 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು4 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು5 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ9 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ22 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ24 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌