Sexually Assault | ಲೈಂಗಿಕ ದೌರ್ಜನ್ಯ ವಿರೋಧಿಸಿದ ಮಹಿಳೆಯನ್ನು ಚಲಿಸುವ ರೈಲಿನಿಂದ ತಳ್ಳಿದ! - Vistara News

ಕ್ರೈಂ

Sexually Assault | ಲೈಂಗಿಕ ದೌರ್ಜನ್ಯ ವಿರೋಧಿಸಿದ ಮಹಿಳೆಯನ್ನು ಚಲಿಸುವ ರೈಲಿನಿಂದ ತಳ್ಳಿದ!

ಚಲಿಸುವ ರೈಲಿನಲ್ಲಿ ಕಾಮದಾಸೆ ತೀರಿಸಿಕೊಳ್ಳಲು (Sexually Assault) ಮುಂದಾದವನಿಗೆ ಪ್ರತಿರೋಧ ಒಡ್ಡಿದ ಕಾರಣ ಮಹಿಳೆಯನ್ನು ರೈಲಿನಿಂದ ತಳ್ಳಿದ್ದು, ಆಕೆ ಮೃತ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಹರಿಯಾಣದ ಫೆತೇಹಾಬಾದ್‌ನಲ್ಲಿ ಕೃತ್ಯ ನಡೆದಿದೆ.

VISTARANEWS.COM


on

Assault
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ಚಲಿಸುವ ರೈಲಿನಲ್ಲಿ ಕಾಮದಾಸೆ ತೀರಿಸಿಕೊಳ್ಳಲು (Sexually Assault) ಮುಂದಾದವನಿಗೆ ಪ್ರತಿರೋಧ ಒಡ್ಡಿದ ಕಾರಣ ಮಹಿಳೆಯನ್ನು ರೈಲಿನಿಂದ ತಳ್ಳಿದ್ದು, ಆಕೆ ಮೃತ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಹರಿಯಾಣದ ಫೆತೇಹಾಬಾದ್‌ನಲ್ಲಿ ಕೃತ್ಯ ನಡೆದಿದೆ.

ತೊಹಾನದಲ್ಲಿರುವ ತಮ್ಮ ಮನೆಗೆ ೩೦ ವರ್ಷದ ಮಹಿಳೆಯು ಮಗನ ಜತೆ ಹಿಂತಿರುಗುತ್ತಿದ್ದರು. ನರ್ವಾನದಲ್ಲಿ ರೈಲು ಹತ್ತಿದ ವ್ಯಕ್ತಿಯು ಮಹಿಳೆ ಮೇಲೆ ಎರಗಿದ್ದಾನೆ. ಏಕಾಏಕಿ ವ್ಯಕ್ತಿಯು ಲೈಂಗಿಕ ದೌರ್ಜನ್ಯ ಎಸಗಲು ಮುಂದಾದಾಗ ಮಹಿಳೆಯು ಪ್ರತಿರೋಧ ಒಡ್ಡಿದ್ದಾರೆ. ಇದರಿಂದ ಕುಪಿತಗೊಂಡ ಆತ ಮಹಿಳೆಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ. ಬಳಿಕ ಆತನೂ ಜಿಗಿದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ತೊಹಾನ ರೈಲು ನಿಲ್ದಾಣದಲ್ಲಿ ಪತ್ನಿ ಹಾಗೂ ಮಗನಿಗಾಗಿ ಪತಿ ಕಾಣುತ್ತಿದ್ದರು. ಆದರೆ, ಬೋಗಿಯಲ್ಲಿ ಮಗನ ಒಬ್ಬನೇ ಇದ್ದು, ಪತ್ನಿ ಕಾಣದ ಕಾರಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರು ತನಿಖೆ ನಡೆಸಿದಾಗ ರೈಲು ಹಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಕೃತ್ಯ ಎಸಗಿದವನನ್ನು ಸಂದೀಪ್‌ ಕುಮಾರ್‌ ಎಂದು ಗುರುತಿಸಲಾಗಿದ್ದು, ಬಂಧಿಸಲಾಗಿದೆ.

ಇದನ್ನೂ ಓದಿ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಜೈಲು, ₹50 ಸಾವಿರ ದಂಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Drowned: ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ

VISTARANEWS.COM


on

Drowned in river
Koo

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಕೊಡಗು: ಖಾಸಗಿ ಬಸ್ ಹಾಗೂ ದ್ವಿಚಕ್ರ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ನಡೆದಿದೆ. ಸುಂಟಿಕೊಪ್ಪ‌ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ (59) ಮೃತ ದುರ್ದೈವಿ.

ಕಳೆದ ಹಲವು ವರ್ಷಗಳಿಂದ ಲೋಕೇಶ್‌ ವಾಹನ ಚಾಲಕರಾಗಿದ್ದರು. ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ತೆರಳುತ್ತಿದ್ದಾಗ ಖಾಸಗಿ ಬಸ್‌ನೊಂದಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric Shock: ಕುಷ್ಟಗಿಯಲ್ಲಿ ವಿದ್ಯುತ್ ತಂತಿ ತಗುಲಿ ರೈತ, 2 ಎತ್ತುಗಳ ಸಾವು

Continue Reading

ಕ್ರೈಂ

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

Actor Darshan: ಜೂನ್‌ 8ರಂದು ಆರೋಪಿ ರಾಘವೇಂದ್ರ ಮತ್ತು ಸಹಚರರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು. ಜೂನ್ 8ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

VISTARANEWS.COM


on

Actor Darshan Renukaswamy Send His Photos To Pavitra Gowda
Koo

ಬೆಂಗಳೂರು: ನಟ ದರ್ಶನ್‌ (Actor Darshan) ಟೀಮ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್‌ಗಾಗಿ (mobile phone) ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾಗಿ ಹತ್ತು ದಿನ ಕಳೆಯುತ್ತಿದ್ದರೂ ಮೊಬೈಲ್ ಪತ್ತೆಯಾಗಿಲ್ಲ. ಕೊಲೆಗೆ ಸಂಬಂಧಿಸಿದ ಮಹತ್ವದ ಸಾಕ್ಷಿಗಳು (Evidence) ಇದರಲ್ಲಿವೆ.

ದರ್ಶನ್ ಮತ್ತು ಗ್ಯಾಂಗ್‌ನಿಂದ ಜೂನ್ 8ರ ಸಂಜೆ ರೇಣುಕಾಸ್ವಾಮಿ ಭೀಕರವಾಗಿ ಹತ್ಯೆಯಾಗಿದ್ದ. ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 17ಕ್ಕೂ ಹೆಚ್ಚು ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡ (Pavithra Gowda) ಸಹ ಬಂಧನದಲ್ಲಿದ್ದಾಳೆ.

ಜೂನ್‌ 8ರಂದು ಆರೋಪಿ ರಾಘವೇಂದ್ರ ಮತ್ತು ಸಹಚರರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು. ಜೂನ್ 8ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮಧ್ಯಾಹ್ನದ ವೇಳೆ ಆರ್‌ಆರ್ ನಗರದಲ್ಲಿ ಸ್ವಿಚ್ ಆನ್ ಆಗಿತ್ತು. ಜೂನ್ 8ರ ಸಂಜೆ ವೇಳೆ ಆರ್‌ಆರ್ ನಗರದ ಪಟ್ಟಣಗೆರೆಯಲ್ಲಿ ಮತ್ತೆ ಸ್ವಿಚ್ ಆಫ್ ಆಗಿತ್ತು.

ಅದೇ ದಿನ ತಡರಾತ್ರಿ ರೇಣುಕಾಸ್ವಾಮಿ‌ ಮೃತದೇಹವನ್ನು ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಬಿಸಾಡಿದ್ದರು. ಸುಮ್ಮನಹಳ್ಳಿಯ ಸತ್ವ ಅಪಾರ್ಟ್ಮೆಂಟ್ ಮುಂಭಾಗದ ರಾಜಕಾಲುವೆಯಲ್ಲಿ ಮೃತದೇಹ ಬಿಸಾಡಲಾಗಿತ್ತು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಮತ್ತು ರಾಘವೇಂದ್ರ ಶರಣಾಗಿದ್ದರು. ಪೊಲೀಸ್ ವಿಚಾರಣೆ ವೇಳೆ, ರೇಣುಕಾಸ್ವಾಮಿ ಮೊಬೈಲ್ ಅನ್ನು ಸುಮ್ಮನಹಳ್ಳಿ ರಾಜಕಾಲುವೆಗೆ ಬಿಸಾಡಿದ್ದಾಗಿ ಬಾಯ್ಬಿಟ್ಟಿದ್ದರು.

ಕಳೆದ ಹತ್ತು ದಿನಗಳಿಂದ ಹುಡುಕಾಡಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ. ರೇಣುಕಾಸ್ವಾಮಿ ಮೊಬೈಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದೆ. ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ಇದರಿಂದ ಸಾಕ್ಷಿಗಳನ್ನು ರಿಟ್ರೀವ್‌ ಮಾಡಬೇಕಾಗಿದೆ. ಆರೋಪಿಗಳು ರೇಣುಕಾಸ್ವಾಮಿ ಮೊಬೈಲ್‌ನಲ್ಲೇ ಕ್ಷಮಾಪಣಾ ವಿಡಿಯೋ ಮಾಡಿಸಿದ್ದರು. ಆರ್‌ಆರ್ ನಗರ ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.

ಗ್ಯಾಂಗ್‌ನಿಂದ 10 ಮೊಬೈಲ್‌ ವಶ; ಪಾಸ್‌ವರ್ಡ್ ನೀಡಲು ನಖರಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Actor Darshan

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

Continue Reading

ಕರ್ನಾಟಕ

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

Cholera outbreak: ಚಿನ್ನೇನಹಳ್ಳಿಯಲ್ಲಿ ಕಳೆದ ಭಾನುವಾರದಿಂದ ಹಲವು ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದರಿಂದ 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬರಿಗೆ ಕಾಲರಾ ಇರುವುದು ದೃಢಪಟ್ಟಿದೆ.

VISTARANEWS.COM


on

Cholera outbreak
Koo

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕು ಚಿನ್ನೇನಹಳ್ಳಿಯಲ್ಲಿ ಕಾಲರಾ ಪ್ರಕರಣ (Cholera outbreak) ಪತ್ತೆಯಾಗಿದೆ. ಕಲುಷಿತ ನೀರು ಸೇವನೆಯಿಂದ ಊರಿನ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಇದೇ ಕಾರಣಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಕೃಷ್ಣಪ್ಪ (32) ಎಂಬುವವರಿಗೆ ಕಾಲರಾ ದೃಢಪಟ್ಟಿದ್ದು, ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಚಿನ್ನೇನಹಳ್ಳಿಯಲ್ಲಿ ಕಳೆದ ಭಾನುವಾರದಿಂದ ಹಲವು ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದರಿಂದ 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದರು. ಅಸ್ವಸ್ಥಗೊಂಡ 100ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವರು ಗುಣಮುಖರಾಗಿದ್ದರೆ, ಇನ್ನು ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಚಿನ್ನೇನಹಳ್ಳಿ ಗ್ರಾಮಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶನಿವಾರ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಈ ವೇಳೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇೊ ಪ್ರಭು, ಡಿಎಚ್‌ಒ ಡಾ.ಮಂಜುನಾಥ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವು

ತುಮಕೂರು: ಕೆರೆಯಲು ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ. ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೆ ಏಳಲಾಗದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Drowns in lake: ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ಘಟನೆ ನಡೆದಿದೆ. ಸ್ನೇಹಿತರ ಜತೆ ಕೆರೆಗೆ ಈಜಲು ಹೋಗಿದ್ದ ಬಾಲಕ ಮೃತಪಟ್ಟಿದ್ದಾನೆ.

VISTARANEWS.COM


on

Drowns in Lake
Koo

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Electric Shock: ಕುಷ್ಟಗಿಯಲ್ಲಿ ವಿದ್ಯುತ್ ತಂತಿ ತಗುಲಿ ರೈತ, 2 ಎತ್ತುಗಳ ಸಾವು

ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಕೊಡಗು: ಖಾಸಗಿ ಬಸ್ ಹಾಗೂ ದ್ವಿಚಕ್ರ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ನಡೆದಿದೆ. ಸುಂಟಿಕೊಪ್ಪ‌ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ (59) ಮೃತ ದುರ್ದೈವಿ.

ಕಳೆದ ಹಲವು ವರ್ಷಗಳಿಂದ ಲೋಕೇಶ್‌ ವಾಹನ ಚಾಲಕರಾಗಿದ್ದರು. ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ತೆರಳುತ್ತಿದ್ದಾಗ ಖಾಸಗಿ ಬಸ್‌ನೊಂದಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading
Advertisement
Irregular Periods problem Here are some simple home remedies
ಆರೋಗ್ಯ12 mins ago

Irregular Periods: ಏರುಪೇರಾದ ಋತುಚಕ್ರದ ಸಮಸ್ಯೆಯೇ? ಇಲ್ಲಿವೆ ಸರಳ ಮನೆಮದ್ದುಗಳು!

Drowned in river
ಕ್ರೈಂ29 mins ago

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Himanta Biswa Sarma
ದೇಶ43 mins ago

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Actor Darshan Renukaswamy Send His Photos To Pavitra Gowda
ಕ್ರೈಂ1 hour ago

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

bakrid 2024
ಧಾರ್ಮಿಕ1 hour ago

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Karnataka weather Forecast
ಮಳೆ2 hours ago

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Dina Bhavishya
ಭವಿಷ್ಯ4 hours ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ9 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ12 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ12 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ14 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ15 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ20 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌