‘ನಾವು ಸಂಕಷ್ಟ ಹೇಳುತ್ತಿದ್ದೇವೆ, ರಾಜ ಕೇಳಬೇಕಷ್ಟೇ’; ಇಟಲಿಯಿಂದ ಬಂದ ರಾಹುಲ್​ ಗಾಂಧಿ ಟ್ವೀಟ್​ - Vistara News

ದೇಶ

‘ನಾವು ಸಂಕಷ್ಟ ಹೇಳುತ್ತಿದ್ದೇವೆ, ರಾಜ ಕೇಳಬೇಕಷ್ಟೇ’; ಇಟಲಿಯಿಂದ ಬಂದ ರಾಹುಲ್​ ಗಾಂಧಿ ಟ್ವೀಟ್​

ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್​ನಿಂದ ಬೃಹತ್​ ಮಟ್ಟದ ಪ್ರತಿಭಟನೆ ಇಂದು ನಡೆಯುತ್ತಿದ್ದು, ಮಧ್ಯಾಹ್ನ 1ಗಂಟೆಗೆ ರಾಹುಲ್​ ಗಾಂಧಿ ಭಾಷಣ ಮಾಡಲಿದ್ದಾರೆ.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್​ನಿಂದ ಮೆಹಂಗಾಯ್​ ಪರ್​ ಹಲ್ಲಾ ಬೋಲ್​ (Mehangai Par Halla Bol- ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ) ಬೃಹತ್​ ಮಟ್ಟದ ಱಲಿ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಧರಣಿ ಪ್ರಾರಂಭವಾಗಿದೆ. ಕಾಂಗ್ರೆಸ್​ ನಾಯಕರು-ಕಾರ್ಯಕರ್ತರು ರಾಮಲೀಲಾ ಮೈದಾನದಲ್ಲಿ ಸೇರಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭಾಷಣ ಕೂಡ ಮಾಡಲಿದ್ದಾರೆ. ಅದಕ್ಕೂ ಮೊದಲು ರಾಹುಲ್ ಗಾಂಧಿ ಟ್ವೀಟ್​ ಮಾಡಿದ್ದು, ‘ಜನರೆಲ್ಲ ಹಣದುಬ್ಬರ, ನಿತ್ಯವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಆದರೆ ರಾಜ ಸ್ನೇಹಿತರನ್ನು ಸಂಪಾದಿಸುವುದರಲ್ಲೇ ನಿರತನಾಗಿದ್ದಾನೆ. ಈ ಎಲ್ಲ ಅವ್ಯವಸ್ಥೆಗಳಿಗೆ ಪ್ರಧಾನಮಂತ್ರಿಯೇ ಹೊಣೆ. ನಾವು ಹಣದುಬ್ಬರದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ..ರಾಜ ಕೇಳಬೇಕು’ ಎಂದು ಹೇಳಿದ್ದಾರೆ.

ರಾಹುಲ್​ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿ ಮತ್ತು ಸೋದರಿ ಪ್ರಿಯಾಂಕಾ ಗಾಂಧಿ ಜತೆ ಆಗಸ್ಟ್​ ಕೊನೇ ವಾರದಲ್ಲಿ ಇಟಲಿಗೆ ಹೋಗಿದ್ದರು. ಆಗಸ್ಟ್​ 27ರಂದು ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ನಿಧನರಾಗಿದ್ದಾರೆ. ಇದೀಗ ರಾಹುಲ್ ಗಾಂಧಿ ಮಾತ್ರ ಭಾರತಕ್ಕೆ ವಾಪಸ್ ಆಗಿದ್ದು, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇನ್ನೂ ಇಟಲಿಯಲ್ಲೇ ಇದ್ದಾರೆ. ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್​ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕೇಂದ್ರೀಯ ಸಶಸ್ತ್ರ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಚಾರ ನಿಯಂತ್ರಣಕ್ಕೆ ದೆಹಲಿ ಪೊಲೀಸರು ಎಲ್ಲ ರೀತಿಯ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್​ ಪ್ರತಿಭಟನೆ ಇಂದು; ರಾಮಲೀಲಾ ಮೈದಾನದಲ್ಲಿ ರಾಹುಲ್ ಗಾಂಧಿ ಕಟೌಟ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

HD Deve Gowda: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು. ಮೋದಿ ಅವರು ಕೂಡ ದೇವೇಗೌಡರಿಗೆ ಶುಭಾಶಯ ತಿಳಿಸಿದರು. ಇದಕ್ಕೆ ಗೌಡರು ಧನ್ಯವಾದ ತಿಳಿಸಿದ್ದಾರೆ.

VISTARANEWS.COM


on

HD Deve Gowda
Koo

ಬೆಂಗಳೂರು: ಮಾಜಿ ಪ್ರಧಾನಿ, ಮಣ್ಣಿನ ಮಗ, ಕರ್ನಾಟಕದ ಹಿರಿಯ ರಾಜಕಾರಣಿ ಎಚ್‌.ಡಿ.ದೇವೇಗೌಡ (HD Deve Gowda) ಅವರು ಶನಿವಾರ (ಮೇ 18) 93ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಹಿಡಿದು ನೂರಾರು ನಾಯಕರು ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಇನ್ನು, ಬರ್ತ್‌ಡೇಗೆ ವಿಶ್‌ ಮಾಡಿದ ಹಿನ್ನೆಲೆಯಲ್ಲಿ ಮೋದಿ ಅವರಿಗೆ ದೇವೇಗೌಡರು ಥ್ಯಾಂಕ್ಸ್‌ ಹೇಳಿದ್ದಾರೆ. ಹಾಗೆಯೇ, “ಮೂರನೇ ಬಾರಿಗೆ ಗೆದ್ದು, ನೀವು ದೇಶವನ್ನು ಮುನ್ನಡೆಸಿ” ಎಂಬುದಾಗಿಯೂ ಗೌಡರು ಆಶೀರ್ವಾದ ಮಾಡಿದ್ದಾರೆ.

“ನನ್ನ ಜನ್ಮದಿನದಂದು ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಶುಭ ಹಾರೈಕೆಗಳು ನನ್ನ ಮನಸ್ಸನ್ನು ಮತ್ತಷ್ಟು ಉಲ್ಲಾಸಗೊಳಿಸಿವೆ. ನೀವು ಶೀಘ್ರದಲ್ಲೇ ಮೂರನೇ ಬಾರಿಗೆ ದೇಶವನ್ನು ಮುನ್ನಡೆಸುವಂತಾಗಲಿ ಎಂಬುದಾಗಿ ಶುಭ ಕೋರುತ್ತೇನೆ” ಎಂದು ದೇವೇಗೌಡರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಶನಿವಾರ ಬೆಳಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದರು.

ಹಲಸಿನ ಹಣ್ಣು ಕೊಟ್ಟ ಕಾರ್ಯಕರ್ತ

ಕಟ್ಟಾ ಅಭಿಮಾನಿಯೊಬ್ಬ ದೇವೇಗೌಡರಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ಅದನ್ನು ಅಷ್ಟೇ ಪ್ರೀತಿಪೂರ್ವಕವಾಗಿ, ಖುಷಿ ಖುಷಿಯಿಂದ ದೇವೇಗೌಡ ಅವರು ಸ್ವೀಕರಿಸಿದರು. ಅಲ್ಲದೆ, ಆ ಹಲಸಿನ ಹಣ್ಣಿನ ಬಳಿಗೆ ತಮ್ಮ ಮೂಗನ್ನು ಇಟ್ಟು ಅದರ ಪರಿಮಳವನ್ನು ಆಸ್ವಾದಿಸಿದರು. ಕಾರ್ಯಕರ್ತನ ಗಿಫ್ಟ್‌ ಬಗ್ಗೆ ಬಹಳವೇ ಖುಷಿಪಟ್ಟರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು.

ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ ಸಂಕಷ್ಟದಿಂದ ನೊಂದಿರುವ ಗೌಡರು 92 ವರ್ಷದಲ್ಲಿ ಮೊದಲ ಬಾರಿಗೆ ಗಡ್ಡಧಾರಿಯಾಗಿದ್ದರು. ಇಂದು ಮನೆಯಿಂದ ಹೊರಗೆ ಬಂದು ದೇವಾಲಯಕ್ಕೆ ಹೊರಟ ಸಂದರ್ಭದಲ್ಲಿ ಮತ್ತೆ ನೀಟ್‌ ಶೇವ್‌ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಅವರು ಬೆಂಗಳೂರಿನ ಜೆಪಿ ನಗರ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರೆಳಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಅವರು ಮತ್ತೆ ಮನೆ ಸೇರಿಕೊಂಡರು.

ಇದನ್ನೂ ಓದಿ: Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Continue Reading

ದೇಶ

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ದಕ್ಷಿಣ ಕೊರಿಯಾದ ಮಾಲ್‌ನಲ್ಲಿ ಯುವಕನೊಬ್ಬ ತನ್ನ ಗೆಳತಿಯೊಂದಿಗೆ ಮಾಡಿರುವ ವಿಡಿಯೋದಲ್ಲಿ (Viral Video) ಗೆಳತಿಗೆ ಗೊತ್ತಾಗದಂತೆ ಯುವಕ ಐಸ್ ಕ್ರೀಂ ಕೋನ್ ನಲ್ಲಿ ಚಿನ್ನದ ಉಂಗುರ ಅಡಗಿಸಿ ಇಟ್ಟು ಅದನ್ನು ಗೆಳತಿಗೆ ನೀಡಿದ್ದಾನೆ. ಆಕೆ ಪೂರ್ತಿ ಐಸ್ ಕ್ರೀಮ್ ತಿಂದಿದ್ದಾಳೆ. ಇಲ್ಲಿದೆ ಕುತೂಹಲಕಾರಿ ವಿಡಿಯೊ.

VISTARANEWS.COM


on

By

Viral Video
Koo

ಮದುವೆಯು (wedding) ಪ್ರತಿಯೊಬ್ಬರ ಜೀವನದ ಅತ್ಯಂತ ಪ್ರಮುಖ ನಿರ್ಧಾರವಾಗಿರುತ್ತದೆ. ಪ್ರತಿಯೊಬ್ಬರೂ ಇದನ್ನು ವಿಶೇಷವಾಗಿ ಹಂಚಿಕೊಳ್ಳಲು ಬಯಸುತ್ತಾರೆ. ಇಲ್ಲೊಬ್ಬ ತಾನು ಮದುವೆಯಾಗ ಬಯಸುವ ಹುಡುಗಿಗೆ ವಿಶೇಷ ರೀತಿಯಲ್ಲಿ ಪ್ರಪೋಸ್ ಮಾಡಲು ಹೋಗಿ ತಾನೇ ಆಶ್ಚರ್ಯಚಕಿತನಾದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ.

ದಕ್ಷಿಣ ಕೊರಿಯಾದ (South Korea) ಯುವಕನೊಬ್ಬ ಐಸ್ ಕ್ರೀಂನಲ್ಲಿ ಉಂಗುರವನ್ನು ಬಚ್ಚಿಟ್ಟು ತನ್ನ ಗೆಳತಿಯನ್ನು ಅಚ್ಚರಿಗೊಳಿಸಲು ಬಯಸಿದ ಘಟನೆಯ ವಿಡಿಯೋ ಇದಾಗಿದೆ. ದಕ್ಷಿಣ ಕೊರಿಯಾದ ಮಾಲ್‌ ನಲ್ಲಿ ಯುವಕನೊಬ್ಬ ತನ್ನ ಗೆಳತಿಯೊಂದಿಗೆ ಈ ವಿಡಿಯೋ ಮಾಡಿದ್ದಾನೆ. ಗೆಳತಿಗೆ ಗೊತ್ತಾಗದಂತೆ ಯುವಕ ಐಸ್ ಕ್ರೀಂ ಕೋನ್ ನಲ್ಲಿ ಚಿನ್ನದ ಉಂಗುರ ಅಡಗಿಸಿ ಇಟ್ಟು ಅದನ್ನು ಗೆಳತಿಗೆ ನೀಡಿದ್ದಾನೆ. ಅನಂತರ ವಿಡಿಯೋದಲ್ಲಿ ಹುಡುಗಿ ಐಸ್ ಕ್ರೀಮ್ ತಿನ್ನುತ್ತಾಳೆ. ಆಕೆಗೆ ಐಸ್ ಕ್ರೀಮ್ ತಿನ್ನುವಾಗ ಆಕೆಗೆ ಉಂಗುರ ಸಿಗುತ್ತದೆ ಎಂದು ಆತ ಭಾವಿಸುತ್ತಾನೆ. ಆದರೆ ಹುಡುಗಿ ಸಂಪೂರ್ಣ ಐಸ್ ಕ್ರೀಂ ಅನ್ನು ತಿನ್ನುತ್ತಾಳೆ. ಆದರೆ ಐಸ್ ಕ್ರೀಮ್ ನಲ್ಲಿ ಉಂಗುರ ಆಕೆಗೆ ಸಿಗದೇ ಇದ್ದಾಗ ಹುಡುಗ ಆಶ್ಚರ್ಯ ಚಕಿತನಾಗುತ್ತಾನೆ.


ಹುಡುಗಿ ಐಸ್ ಕ್ರೀಮ್ ತಿನ್ನುವ ಸಂತೋಷವನ್ನು ಅತ್ಯಂತ ಮುಗ್ಧತೆಯಿಂದ ಆಚರಿಸುತ್ತಿರುವುದು ಈ ವಿಡಿಯೋದಲ್ಲಿ ಕಂಡು ಬಂದಿದೆ. ಇನ್ ಸ್ಟಾ ಗ್ರಾಮ್ ಪುಟದಲ್ಲಿ k_kangs_ಹೆಸರಿನಲ್ಲಿ ಈ ವಿಡಿಯೋ ಅನ್ನು ಹಂಚಿಕೊಳ್ಳಲಾಗಿದೆ.
ಸುಮಾರು 13 ಮಿಲಿಯನ್ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. 76,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಜನರು ಈ ವಿಡಿಯೋವನ್ನು ಬಹಳಷ್ಟು ಇಷ್ಟಪಡುತ್ತಿದ್ದರೂ ಈ ಕ್ಲಿಪ್ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅಷ್ಟಕ್ಕೂ ಆ ಉಂಗುರವನ್ನೇ ನುಂಗಿದ್ದೇ ಹುಡುಗಿಗೆ ಹೇಗೆ ತಿಳಿಯಲಿಲ್ಲ? ಈ ವಿಡಿಯೋ ನಕಲಿಯೋ ಅಲ್ಲವೋ ಎಂಬ ಪ್ರಶ್ನೆಯನ್ನು ಹಲವಾರು ಮಂದಿ ಕೇಳಿದ್ದಾರೆ.

PS4 ಅನ್ನು ಒಡೆದು ಹಾಕಿದಳು

ತನ್ನ ಸಂಗಾತಿಯನ್ನು ಅಚ್ಚರಿಗೊಳಿಸಲು ಗೆಳತಿಯೊಬ್ಬಳು ಮಾಡಿದ ವಿಡಿಯೋವೊಂದು ಟ್ವಿಟ್ಟರ್ ನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಇದು ಇಲ್ಲಿಯವರೆಗೆ ನೋಡಿದ್ದಕ್ಕಿಂತ ಸ್ವಲ್ಪ ಭಿನ್ನವಾಗಿದೆ. ಗೆಳತಿ ತನ್ನ ಗೆಳೆಯನ ಪಿಎಸ್ 4 ಅನ್ನು ಒಡೆದು ಹಾಕುವುದರೊಂದಿಗೆ ವಿಡಿಯೋ ಪ್ರಾರಂಭವಾಗುತ್ತದೆ, ಅನಂತರ ಆಕೆ ಅವನನ್ನು ಆಶ್ಚರ್ಯಗೊಳಿಸುತ್ತಾಳೆ. ಕ್ಲಿಪ್‌ನಲ್ಲಿ, ಹುಡುಗಿ ತನ್ನ ಗೆಳೆಯನ ಪ್ಲೇಸ್ಟೇಷನ್ 4 ಅನ್ನು ಕ್ರೂರವಾಗಿ ಒಡೆದು ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.


ಆಕೆಯ ಅನಿರೀಕ್ಷಿತ ಕೃತ್ಯದಿಂದ ದಿಗ್ಭ್ರಮೆಗೊಂಡಂತೆ ತೋರುವ ಹುಡುಗನು ತನ್ನ ಹಾನಿಗೊಳಗಾದ ಆಟದ ವಸ್ತುಗಳತ್ತ ಕಣ್ಣು ಹಾಯಿಸಿದಾಗ ಮೂಕನಾಗುತ್ತಾನೆ. ಸಿಟ್ಟಿನಲ್ಲಿ ಗೆಳತೀ ಕೋಣೆಯಿಂದ ಹೊರನಡೆದಳು.

ಇದನ್ನೂ ಓದಿ: RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

ಏನಾಯಿತು ಎಂಬುದರ ಅರಿವಿಲ್ಲದ ಹುಡುಗ ಗೆಳತಿ ಹೊಸ ಪಿಎಸ್ 5 ನೊಂದಿಗೆ ಕೋಣೆಗೆ ಹಿಂತಿರುಗಿದಾಗ ಅವನು ಸಂಪೂರ್ಣ ಆಶ್ಚರ್ಯಚಕಿತನಾಗುತ್ತಾನೆ. ತಕ್ಷಣವೇ ತನ್ನ ಗೆಳತಿಯನ್ನು ತಬ್ಬಿಕೊಳ್ಳುತ್ತಾನೆ. ಈ ವಿಡಿಯೋವನ್ನು ಏಪ್ರಿಲ್ 29 ರಂದು ಹಂಚಿಕೊಳ್ಳಲಾಗಿದೆ ಮತ್ತು ಇಲ್ಲಿಯವರೆಗೆ, ಟ್ವಿಟರ್‌ನಲ್ಲಿ 9 ಲಕ್ಷಕ್ಕೂ ಹೆಚ್ಚು ಮಂದಿ ನೋಡಿದ್ದಾರೆ.

Continue Reading

ದೇಶ

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

VISTARANEWS.COM


on

Woman
Koo

ಮುಂಬೈ: ಗಂಡ-ಹೆಂಡತಿ, ಪ್ರಿಯತಮ-ಪ್ರಿಯತಮೆ ಸೇರಿ ಯಾವುದೇ ಸಂಬಂಧದಲ್ಲಿ ಅನುಮಾನ ಎಂಬ ಪೀಡೆ ಹೊಕ್ಕರೆ ಅಲ್ಲಿಗೆ ಮುಗಿಯಿತು ಕತೆ. ಒಂದೋ ಆ ಸಂಬಂಧದಲ್ಲಿ ಬಿರುಕು ಮೂಡುತ್ತದೆ, ಇಲ್ಲವೇ ಪರಸ್ಪರ ಹಿಂಸೆಗೆ ದಾರಿ ಮಾಡುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ವ್ಯಕ್ತಿಯೊಬ್ಬ ತನ್ನ ಪತಿಯ ಶೀಲ ಶಂಕಿಸಿ, ಆಕೆ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕುವ ಮೂಲಕ ರಕ್ಕಸ ಕೃತ್ಯ ಎಸಗಿದ್ದಾನೆ.

ಪುಣೆಯ ವಾಕಡ್‌ ಪ್ರದೇಶದಲ್ಲಿ ಮೇ 11ರಂದು ಪತಿಯು ಮೃಗದಂತೆ ವರ್ತಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ದುಷ್ಟನನ್ನು ಬಂಧಿಸಿದ್ದಾರೆ. ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

Physical Abuse

ಪ್ರಕರಣದ ಕುರಿತು ತನಿಖಾಧಿಕಾರಿ ಬಾಲಾಜಿ ಮೆತೆ ಅವರು ಮಾಹಿತಿ ನೀಡಿದ್ದಾರೆ. “ಗಂಡ ಹಾಗೂ ಹೆಂಡತಿ ನೇಪಾಳದವರು. ಉದ್ಯೋಗ ಅರಸಿ ಅವರು ಮೇ ತಿಂಗಳ ಮೊದಲ ವಾರದಲ್ಲಿ ವಾಕಡ್‌ಗೆ ಬಂದು ನೆಲೆಸಿದ್ದರು. ಮೇ 11ರಂದು ಪಾನಮತ್ತನಾಗಿ ಬಂದ ವ್ಯಕ್ತಿಯು ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಶೀಲ ಶಂಕಿಸಿದ ಆತನು ಒದ್ದು, ಆಕೆಯ ಕೈಕಾಲು ಕಟ್ಟಿ, ಗುಪ್ತಾಂಗಕ್ಕೆ ಮೊಳೆ ಜಡಿದು, ಚಾಕುವಿನಿಂದ ಹಲ್ಲೆ ನಡೆಸಿ, ಬೀಗ ಹಾಕಿದ್ದಾನೆ. ಮಹಿಳೆಯು ಅಂಗಲಾಚಿದರೂ ಆತನು ಬಿಟ್ಟಿಲ್ಲ” ಎಂದು ತಿಳಿಸಿದ್ದಾರೆ.

ಮಹಿಳೆ ಅರಚುವ ಧ್ವನಿ ಕೇಳಿ ಪಕ್ಕದ ಮನೆಯ ಲಲಿತ್‌ ಪರಿಹಾರ್‌ ಎಂಬುವರು ಮನೆಗೆ ತೆರಳಿ ನೋಡಿದಾಗ, ಮಹಿಳೆಯು ರಕ್ತದ ಮಧ್ಯೆ ಬಿದ್ದಿರುವುದು ಕಂಡಿದೆ. ಕೂಡಲೇ ಅವರು ಸುತ್ತಮುತ್ತಲಿವರನ್ನು ಕರೆದ ಅವರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದಾದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case : ಶೀಲ ಶಂಕಿಸಿ ಪತ್ನಿಯ ಕುತ್ತಿಗೆ ಹಿಸುಕಿ ಕೊಂದ ಸಂಶಯ ಪಿಶಾಚಿ ಗಂಡ

Continue Reading

Lok Sabha Election 2024

Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Mallikarjun Kharge: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಿದೆ ಎನ್ನುವ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ʼʼನಾವು ಇಲ್ಲಿಯ ತನಕ ಬುಲ್ಡೋಜರ್‌ ಬಳಸಿಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಸ್ವತಃ ಪ್ರಧಾನಿಯೇ ನಿಯಮ ಉಲ್ಲಂಘಿಸುತ್ತಿದ್ದಾರೆ. ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

VISTARANEWS.COM


on

Mallikarjun Kharge
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇನ್ನೂ ಮೂರು ಹಂತಗಳ ಮತದಾನ ಬಾಕಿ ಇದ್ದು, ನಾಯಕರ ಅಬ್ಬರದ ಪ್ರಚಾರ ಮುಂದುವರಿದಿದೆ. ಈ ಮಧ್ಯೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಿದೆ ಎನ್ನುವ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

ʼʼನಾವು ಇಲ್ಲಿಯ ತನಕ ಬುಲ್ಡೋಜರ್‌ ಬಳಸಿಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಸ್ವತಃ ಪ್ರಧಾನಿಯೇ ನಿಯಮ ಉಲ್ಲಂಘಿಸುತ್ತಿದ್ದಾರೆ. ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ಸರ್ಕಾರ ಬಂದ ನಂತರ, ನಮ್ಮ ಸಂವಿಧಾನದ ಪ್ರಕಾರ ಎಲ್ಲವನ್ನೂ ಸಂರಕ್ಷಿಸಲಾಗುವುದು, ನಾವು ಸಂವಿಧಾನವನ್ನು ಅನುಸರಿಸುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.

ಎನ್‌ಸಿಪಿ-ಎಸ್‌ಪಿ ನಾಯಕ ಶರದ್ ಪವಾರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಮುಂಬೈಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಮಹಾರಾಷ್ಟ್ರದಲ್ಲಿ ʼನಿಜವಾದ ಪಕ್ಷಗಳʼ ಬದಲು ಬಿಜೆಪಿಯನ್ನು ಬೆಂಬಲಿಸುವ ಬಣಗಳಿಗೆ ಪಕ್ಷದ ಚಿಹ್ನೆಗಳನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

“ದ್ರೋಹ ಮತ್ತು ಪಿತೂರಿಯ ಆಧಾರದ ಮೇಲೆ ಮಹಾರಾಷ್ಟ್ರದ ಅಕ್ರಮ ‘ಮಹಾಯುತಿ’ ಸರ್ಕಾರವನ್ನು ರಚಿಸಲಾಗಿದೆ ಮತ್ತು ಸ್ವತಃ ಪ್ರಧಾನಿಯೇ ಅದನ್ನು ಬೆಂಬಲಿಸುತ್ತಿದ್ದಾರೆ. ಅವರು ಹೋದಲ್ಲೆಲ್ಲ ಜನರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಾರೆ” ಎಂದು ಅವರು ಆರೋಪಿಸಿದ್ದಾರೆ. ”ನಿಜವಾದ ಪಕ್ಷಗಳಿಂದ ಚಿಹ್ನೆಯನ್ನು ಕಸಿದುಕೊಂಡು ಬಿಜೆಪಿ ಬೆಂಬಲಿತರಿಗೆ ನೀಡಲಾಗಿದೆ. ಇದು ಕೋರ್ಟ್‌ ಮತ್ತು ಚುನಾವಣಾ ಆಯೋಗದ ನಿರ್ಧಾರವಾಗಿದ್ದರೂ ಅವರಿಗೆ ಹೀಗೆ ಮಾಡಿ ಎನ್ನುವ ಸಲಹೆಯನ್ನು ಮೋದಿ ನೀಡುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ʼಇಂಡಿಯಾʼ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖರ್ಗೆ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಮಹಾರಾಷ್ಟ್ರದ 48 ಕ್ಷೇತ್ರಗಳ ಪೈಕಿ ʼಇಂಡಿಯಾʼ ಮೈತ್ರಿಕೂಟ 46ರಲ್ಲಿ ಜಯ ದಾಖಲಿಸಲಿದೆ. ಇದನ್ನು ನಾವು ಹೇಳುತ್ತಿಲ್ಲ; ಬದಲಿಗೆ ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯನ್ನು ಸೋಲಿಸಿ ನಮ್ಮ ಮೈತ್ರಿಕೂಟ ಗೆಲುವಿನ ನಗೆ ಬೀರಲಿದೆʼʼ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷ ಒಂದಾಗಿ ಹೋರಾಟ ನಡೆಸುತ್ತಿದ್ದರೆ ಪಂಜಾಬ್‌ನಲ್ಲಿ ಕಾಂಗ್ರೆಸ್‌ ಮತ್ತು ಆಪ್‌ ಪರಸ್ಪರ ವಿರುದ್ಧವಾಗಿ ಸೆಣಸುತ್ತಿದೆ. ಈ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಕಾಂಗ್ರೆಸ್‌ ಅಧ್ಯಕ್ಷರು, “ಇದು ಪ್ರಜಾಪ್ರಭುತ್ವ, ಇದು ನಿರಂಕುಶ ಪ್ರಭುತ್ವವಲ್ಲ. ಬಿಜೆಪಿಯನ್ನು ಸೋಲಿಸಲು ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

ಮಹಾರಾಷ್ಟ್ರದ ಧುಲೆ, ದಿಂಡೊರಿ, ನಾಸಿಕ್‌, ಕಲ್ಯಾಣ್‌, ಪಲ್ಘರ್‌, ಭಿವಾಂಡಿ ಮತ್ತು ಥಾಣೆ ಸೇರಿದಂತೆ ಇತರ ರಾಜ್ಯಗಳ ಹಲವು ಕ್ಷೇತ್ರಗಳಲ್ಲಿ ಮೇ 20ರಂದು 5ನೇ ಹಂತದ ಮತದಾನ ನಡೆಯಲಿದೆ.

Continue Reading
Advertisement
Girish's mother
ಕರ್ನಾಟಕ12 mins ago

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

HD Deve Gowda
ಕರ್ನಾಟಕ18 mins ago

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Viral Video
ದೇಶ20 mins ago

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

Prajwal Revanna Case obscene video goes viral Advocate Devarajegowda SIT custody extended by 2 days
ಹಾಸನ20 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

RCB vs CSK:
ಕ್ರೀಡೆ27 mins ago

RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

Karnataka Weather Forecast Rain alert
ಮಳೆ33 mins ago

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Koppal tragedy
ಕೊಪ್ಪಳ1 hour ago

Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

Prajwal Revanna case Devaraje Gowda should be given mental treatment says Congress
ರಾಜಕೀಯ1 hour ago

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Health Tips in Kannada tomato juice is good for health
ಆರೋಗ್ಯ1 hour ago

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

T20 World Cup 2024
ಕ್ರೀಡೆ1 hour ago

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ22 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌