Hijab Row | ಹಿಜಾಬ್‌ ನಿಷೇಧ ಪ್ರಶ್ನಿಸಿದ ಅರ್ಜಿ ವಿಚಾರಣೆ ಆರಂಭ, ಸೆ.7ಕ್ಕೆ ಮುಂದೂಡಿದ ಸುಪ್ರೀಂ - Vistara News

ದೇಶ

Hijab Row | ಹಿಜಾಬ್‌ ನಿಷೇಧ ಪ್ರಶ್ನಿಸಿದ ಅರ್ಜಿ ವಿಚಾರಣೆ ಆರಂಭ, ಸೆ.7ಕ್ಕೆ ಮುಂದೂಡಿದ ಸುಪ್ರೀಂ

ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್‌ ವಿವಾದದ (Hijab Row) ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದೆ.

VISTARANEWS.COM


on

Hijab
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್‌ ವಿವಾದದ (Hijab Row) ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದನ್ನು ನಿಷೇಧಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಪೀಠವು, ಬುಧವಾರಕ್ಕೆ ವಿಚಾರಣೆ ಮುಂದೂಡಿದೆ.

ಹಿಜಾಬ್‌ಗೆ ಅನುಮತಿ ನೀಡಬೇಕು ಎಂದು ಸಲ್ಲಿಸಿದ ಅರ್ಜಿದಾರರ ಪರ ದೇವದತ್‌ ಕಾಮತ್‌ ವಾದ ಮಂಡಿಸಿದರೆ, ರಾಜ್ಯ ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ಕರ್ನಾಟಕದ ಅಡ್ವೊಕೇಟ್‌ ಜನರಲ್‌ ಸಹ ವಾದ ಮಂಡಿಸಿದರು. ಇಡೀ ದಿನ ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರು ಮಂಡಿಸಿದ ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆ ಮುಂದೂಡಲಾಯಿತು.

ವರ್ಷದ ಆರಂಭದಲ್ಲಿ ಉಂಟಾದ ಹಿಜಾಬ್‌ ವಿವಾದವು ದೇಶಾದ್ಯಂತ ಸುದ್ದಿ ಮಾಡಿತ್ತು. ಉಡುಪಿಯ ಸರ್ಕಾರಿ ಪಿಯು ಕಾಲೇಜ್‌ಗೆ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಆಗಮಿಸಿದ್ದು ಹಾಗೂ ಹಿಜಾಬ್‌ ಧರಿಸಿಯೇ ಬರುವುದಾಗಿ ಪಟ್ಟು ಹಿಡಿದ ಕಾರಣ ವಿವಾದವು ಭುಗಿಲೆದ್ದಿತ್ತು. ಬಳಿಕ ಮಾರ್ಚ್‌ 15ರಂದು ಕರ್ನಾಟಕ ಹೈಕೋರ್ಟ್‌, ರಾಜ್ಯ ಸರ್ಕಾರದ ತೀರ್ಪನ್ನು ಎತ್ತಿಹಿಡಿದ ಬಳಿಕ ವಿವಾದ ಸ್ವಲ್ಪ ತಣ್ಣಗಾಗಿತ್ತು.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಆಗಸ್ಟ್‌ 29ರಂದು ಮೊದಲ ಬಾರಿಗೆ ವಿಚಾರಣೆ ಆರಂಭಿಸಿದ್ದ ಸುಪ್ರೀಂ ಕೋರ್ಟ್‌, ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ನೀಡಿ, ಸೆಪ್ಟೆಂಬರ್‌ 5ಕ್ಕೆ ವಿಚಾರಣೆ ಮುಂದೂಡಿತ್ತು.

ಇದನ್ನೂ ಓದಿ | ಹಿಜಾಬ್‌ ವಿವಾದ: ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಸುಪ್ರೀಂ, ಅರ್ಜಿದಾರರಿಗೆ ತೀವ್ರ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ದೇಶದ ಜನ ನಮ್ಮನ್ನು ಮೂರನೇ ಬಾರಿ ಗೆಲ್ಲಿಸಿದ್ದಾರೆ, ಕಾಂಗ್ರೆಸ್‌ಗೆ ನೂರು ಸ್ಥಾನ ಗೆಲ್ಲುವ ಯೋಗ್ಯತೆಯೂ ಇಲ್ಲ; ರಾಹುಲ್‌ಗೆ ಮೋದಿ ಗೇಲಿ

Narendra Modi: ದೇಶದ ಜನರು ಕಾಂಗ್ರೆಸ್‌ಗೆ ಒಂದು ಜನಾದೇಶ ನೀಡಿದ್ದಾರೆ. ನೀವು ಪ್ರತಿಪಕ್ಷದಲ್ಲಿಯೇ ಕುಳಿತುಕೊಳ್ಳಿ, ಹೀಗೆಯೇ ಗಲಾಟೆ ಮಾಡಿ, ಕಿರುಚುತ್ತಲೇ ಇರಿ ಎಂಬುದು ಜನರ ಆದೇಶವಾಗಿದೆ. ಕಾಂಗ್ರೆಸ್‌ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸತತ ಮೂರನೇ ಅವಧಿಗೆ ಕಾಂಗ್ರೆಸ್‌ 100 ಸೀಟುಗಳನ್ನು ಕೂಡ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ನ ಇತಿಹಾಸದಲ್ಲಿಯೇ ಇದು ಮೂರನೇ ಅತಿ ದೊಡ್ಡ ಸೋಲಾಗಿದೆ. ಮೂರನೇ ಕಳಪೆ ಪ್ರದರ್ಶನವಾಗಿದೆ ಎಂದು ಕಾಂಗ್ರೆಸ್‌ಗೆ ಮೋದಿ ಚಾಟಿ ಬೀಸಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆಯಲ್ಲಿ (Lok Sabha) ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರದ (Central Government) ಆಡಳಿತ, ಕೈಗೊಂಡ ಅಭಿವೃದ್ಧಿ ಕೆಲಸಗಳು, ವಿಕಸಿತ ಭಾರತದತ್ತ ಹೆಜ್ಜೆ ಹಾಕುವ ರೀತಿ, ಮುಂಬರುವ ಐದು ವರ್ಷಗಳಲ್ಲಿ ಕೈಗೊಳ್ಳುವ ಅಭಿವೃದ್ಧಿಯ ಕುರಿತು ಪ್ರಸ್ತಾಪಿಸುವ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. “ಕಾಂಗ್ರೆಸ್‌ ಈ ಬಾರಿ 100 ಕ್ಷೇತ್ರಗಳನ್ನೂ ಗೆದ್ದಿಲ್ಲ. ನಾವು ಮೂರನೇ ಬಾರಿಗೆ ಸರ್ಕಾರ ರಚಿಸಿದ್ದೇವೆ” ಎಂದು ಕುಟುಕಿದರು.

“ದೇಶದಲ್ಲಿ ಮೂರನೇ ಬಾರಿಗೆ ಆಡಳಿತಕ್ಕೆ ಬರುವುದು ಸುಲಭವಲ್ಲ. ಜನರ ಪರವಾದ ಆಡಳಿತವನ್ನೇ ತಪಸ್ಸಿನ ರೀತಿ ಮಾಡಿದ ಕಾರಣದಿಂದಾಗಿ ನಮಗೆ ದೇಶದ ಜನ ಮೂರನೇ ಬಾರಿಗೆ ಅವಕಾಶ ನೀಡಿದ್ದಾರೆ. ಕಳೆದ 60 ವರ್ಷಗಳಲ್ಲಿಯೇ ದೇಶದ ಜನರು ಯಾರನ್ನೂ ಮೂರನೇ ಬಾರಿಗೆ ಆಯ್ಕೆ ಮಾಡಿಲ್ಲ. ನಮ್ಮ ಮೇಲಿನ ಭರವಸೆ, ನಂಬಿಕೆಯಿಂದಲೇ ಮೂರನೇ ಬಾರಿಗೆ ಗೆಲ್ಲಿಸಿದ್ದಾರೆ” ಎಂದು ಹೇಳಿದರು.

ದೇಶದ ಜನರು ಕಾಂಗ್ರೆಸ್‌ಗೆ ಒಂದು ಜನಾದೇಶ ನೀಡಿದ್ದಾರೆ. ನೀವು ಪ್ರತಿಪಕ್ಷದಲ್ಲಿಯೇ ಕುಳಿತುಕೊಳ್ಳಿ, ಹೀಗೆಯೇ ಗಲಾಟೆ ಮಾಡಿ, ಕಿರುಚುತ್ತಲೇ ಇರಿ ಎಂಬುದು ಜನರ ಆದೇಶವಾಗಿದೆ. ಕಾಂಗ್ರೆಸ್‌ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸತತ ಮೂರನೇ ಅವಧಿಗೆ ಕಾಂಗ್ರೆಸ್‌ 100 ಸೀಟುಗಳನ್ನು ಕೂಡ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ನ ಇತಿಹಾಸದಲ್ಲಿಯೇ ಇದು ಮೂರನೇ ಅತಿ ದೊಡ್ಡ ಸೋಲಾಗಿದೆ. ಮೂರನೇ ಕಳಪೆ ಪ್ರದರ್ಶನವಾಗಿದೆ.

“ಮುಂದಿನ 5 ವರ್ಷಗಳಲ್ಲಿ ನಾವು ನಮ್ಮ ಹಿಂದಿನ ಎಲ್ಲ ರೆಕಾರ್ಡ್‌ಗಳನ್ನು ಮುರಿಯುತ್ತೇವೆ. ಇನ್ನೂ ಮೂರು ಕೋಟಿ ಬಡವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ದೇಶದ ಬಡವರು, ರೈತರು, ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತೇವೆ. ವಿಕಸಿತ ಭಾರತಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡುತ್ತೇವೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್ ತತ್ವದಲ್ಲಿ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

ನೂತನ ಸಂಸದರಿಗೆ ಅಭಿನಂದನೆ

ನೂತನ ಸಂಸದರಿಗೆ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು. ಸಂಸತ್‌ಗೆ ಮೊದಲ ಬಾರಿ ಆಯ್ಕೆಯಾಗಿರುವ ನೂತನ ಸಂಸದರಿಗೆ ಅಭಿನಂದನೆಗಳು. ನೂತನ ಸಂಸದರು ಸದನದ ನಿಯಮಗಳನ್ನು, ಶಿಷ್ಟಾಚಾರಗಳನ್ನು ಅಚ್ಚುಕಟ್ಟಾಗಿ ಪಾಲಿಸುವ ಮೂಲಕ ಅನುಭವಿ ಸಂಸದರಂತೆ ವರ್ತಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ನೂತನ ಸಂಸದರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಂಡಿರುವುದು ಕೂಡ ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ: Narendra Modi: ಪ್ರಜಾಪ್ರಭುತ್ವ, ಜಾತ್ಯತೀತತೆ, ಏಳಿಗೆಯೇ ನಮ್ಮ ಆದ್ಯತೆ; ಸಂಸತ್ತಿನಲ್ಲಿ ಮೋದಿ ಹೇಳಿಕೆ

Continue Reading

ದೇಶ

Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Uttar Pradesh stampede : ಮೃತಪಟ್ಟವರಲ್ಲಿ 25 ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವನ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅವರೆಲ್ಲರನ್ನೂ ಕೊಂಡೊಯ್ಯಲಾಗಿದೆ. ಅದೇ ರೀತಿ ಹಲವಾರು ಮಂದಿ ಗಾಯಗೊಂಡಿದ್ದು ನಾನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

VISTARANEWS.COM


on

Uttar Pradesh stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದ ದುರ್ಘಟನೆಗೆ (Uttar Pradesh stampede) ಕನಿಷ್ಠ 27 ಜನರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ ಹತ್ರಾಸ್​​ ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್​ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಮೃತಪಟ್ಟವರಲ್ಲಿ 25 ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವನ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ ಕೇಂದ್ರಗಳಿಗೆ ಅವರೆಲ್ಲರನ್ನೂ ಕೊಂಡೊಯ್ಯಲಾಗಿದೆ. ಅದೇ ರೀತಿ ಹಲವಾರು ಮಂದಿ ಗಾಯಗೊಂಡಿದ್ದು ನಾನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಕ್ಕಳೂ ಇದ್ದಾರೆ ಎನ್ನಲಾಗಿದೆ.

ಸಾವು ನೋವುಗಳನ್ನು ದೃಢಪಡಿಸಿದ ಮುಖ್ಯ ವೈದ್ಯಕೀಯ ಅಧಿಕಾರಿ ರಾಜ್​​ಕುಮಾರ್ ಅಗರ್ವಾಲ್, “ನಾವು ಇಲ್ಲಿಯವರೆಗೆ 27 ಶವಗಳನ್ನು ದಾಖಲಿಸಿಕೊಂಡಿದ್ದೇವೆ ಅದರಲ್ಲಿ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಎಂದು ಹೇಳಿದ್ದಾರೆ. ಧಾರ್ಮಿಕ ಸಭೆಯ ಕೊನೆಯಲ್ಲಿ ಈ ಘಟನೆ ನಡೆದಿದ್ದು, ಗೊಂದಲ ಮತ್ತು ನೂಕುನುಗ್ಗಲು ಹಲವಾರು ಭಕ್ತರ ಸಾವಿಗೆ ಕಾರಣವಾಯಿತು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಮುಂದಿನ ಕ್ರಮಗಳಿಗಾಗಿ ಇಟಾ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ.

ಇದನ್ನೂ ಓದಿ: Narendra Modi: ಪ್ರಜಾಪ್ರಭುತ್ವ, ಜಾತ್ಯತೀತತೆ, ಏಳಿಗೆಯೇ ನಮ್ಮ ಆದ್ಯತೆ; ಸಂಸತ್ತಿನಲ್ಲಿ ಮೋದಿ ಹೇಳಿಕೆ

ರತಿಭಾನ್​ಪುರದಲ್ಲಿ ಶಿವನ ಆರಾಧನೆಯ ಧಾರ್ಮಿಕ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕಾಲ್ತುಳಿತ ಸಂಭವಿಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ. ಒಟ್ಟು 15 ಮಹಿಳೆಯರು ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ, ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮುಖ್ಯಮಂತ್ರಿಗಳು, ಗಾಯಾಳುಗಳು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Continue Reading

ದೇಶ

Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

Drowned In water ; ಮೊನ್ನೆ ಮೊನ್ನೆಯಷ್ಟೇ ಲೊನಾವನಾದಲ್ಲಿ ಐದು ಮಂದಿ ಕೊಚ್ಚಿ ಹೋಗಿದ್ದರು. ಈ ಘಟನೆ ಮಾಸುವ ಮುನ್ನವೇ ತಮ್ಹಿನಿ ಘಾಟ್‌ನಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಮಾಜಿ ಸೈನಿಕ ಕೊಚ್ಚಿ ಹೋಗಿದ್ದಾರೆ.

VISTARANEWS.COM


on

By

Drowned in water
Koo

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಪದೆಪದೇ ಅವಘಡಗಳು ಮರುಕಳಿಸುತ್ತಿವೆ. ತುಂಬಿ ಹರಿಯುವ ಹಳ್ಳಕ್ಕೆ ಹಾರಿದ ವ್ಯಕ್ತಿ ಶವವಾಗಿದ್ದಾರೆ. ಮಹಾರಾಷ್ಟ್ರದ ತಮ್ಹಿನಿ ಘಾಟ್‌ನಲ್ಲಿ ಈ ದುರ್ಘಟನೆ (Drowned In water ) ನಡೆದಿದೆ.

ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಮಾಜಿ ಸೈನಿಕರೊಬ್ಬರು ಕೊಚ್ಚಿ ಹೋಗಿದ್ದಾರೆ. ಈ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ನೋಡನೋಡುತ್ತಿದ್ದಂತೆ ವ್ಯಕ್ತಿ ಜಲಸಮಾಧಿಯಾಗಿದ್ದಾರೆ. ಸುಮಾರು 20 ಜನರ ತಂಡ ಟ್ರಕ್ಕಿಂಗ್‌ ಹೋಗಿದ್ದರು. ಈ ವೇಳೆ ತುಂಬಿ ಹರಿವ ಹಳ್ಳಕ್ಕೆ ಜಿಗಿದ ಮಾಜಿ ಸೈನಿಕ ಸಾಹಸ ತೋರಿಸಲು ಹೋಗಿ ನೀರಲ್ಲಿ ಕೊಚ್ಚಿ ಹೋಗಿದ್ದಾನೆ.

ಮಹಾರಾಷ್ಟ್ರದ ಲೊನಾವನಾ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಈಜಿ ಬರುವ ವಿಶ್ವಾಸ ತೋರಿದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸದ್ಯ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ

ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಶವ ಪತ್ತೆಯಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯಕ್ಕೆ ನಿನ್ನೆ ನಿಪ್ಪಾಣಿಯಿಂದ ಪ್ರವಾಸಕ್ಕೆಂದು 13 ಜನರ ಯುವಕರ ತಂಡ ತೆರಳಿದ್ದರು. ಈ ವೇಳೆ ಕಾಳಮ್ಮವಾಡಿ ಜಲಾಶಯದಲ್ಲಿ ಇಬ್ಬರು ನೀರಿನಲ್ಲಿ ಕಣ್ಮರೆಯಾಗಿದ್ದರು. ನಿಪ್ಪಾಣಿಯ ಗಣೇಶ ಕದಮ್ ಪ್ರತೀಕ್ ಪಾಟೀಲ್ ಇಬ್ಬರು ಕಣ್ಮರೆಯಾಗಿದ್ದರು. ಪ್ರತಿಕ ಪಾಟೀಲ್ ಶವವಾಗಿ ಪತ್ತೆಯಾದರೆ, ಗಣೇಶ್ ಕದಮ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಕೊಲ್ಹಾಪುರ ಪೊಲೀಸ್ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರ ಶವ ಪತ್ತೆ

ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಸಿತ್ತ. ಅದರಲ್ಲಿ ಒಬ್ಬನ ಮೃತದೇಹವು ಮಂಗಳವಾರ ಸಿಕ್ಕಿದ್ದು, ಮತ್ತೊಬ್ಬ ಶವಕ್ಕೆ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Narendra Modi: ‘ಮನೆ’ಯೊಳಗೆ ನುಗ್ಗಿ ಹೊಡೆಯುತ್ತೇವೆ, ದೇಶದ ಸುರಕ್ಷತೆಗಾಗಿ ನಾವು ಏನು ಮಾಡಲೂ ಸಿದ್ಧ: ಸಂಸತ್ತಲ್ಲಿ ಮೋದಿ ಗುಡುಗು

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದರು. ಜೂನ್‌ 24ರಿಂದ ನಡೆದ ಸಂಸತ್‌ ವಿಶೇಷ ಅಧಿವೇಶನವು ಕೊನೆಯ ಹಂತಕ್ಕೆ ಬಂದಿದೆ. ಬುಧವಾರ (ಜುಲೈ 3) ಸಂಸತ್‌ ಅಧಿವೇಶನ ಮುಕ್ತಾಯವಾಗಲಿದೆ. ಹಾಗಾಗಿ, ಸಂಸತ್ತಿನ ಕೆಳಮನೆಯಲ್ಲಿ ಮೋದಿ ಮಾತನಾಡಿದರು. ಅವರ ಮಾತಿನ ಪ್ರಮುಖಾಂಶಗಳು, ಪ್ರಸ್ತಾಪಿಸಿದ ವಿಷಯಗಳ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Narendra Modi
Koo

ನವದೆಹಲಿ: ಸಂಸತ್ತಿನ ಕೆಳಮನೆಯಾದ ಲೋಕಸಭೆಯಲ್ಲಿ (Lok Sabha) ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನರೇಂದ್ರ ಮೋದಿ (Narendra Modi) ಮಾತನಾಡಿದರು. ಇದೇ ವೇಳೆ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ ಎಂಬುದಾಗಿ ಹೇಳಿದರು. “ಕಳೆದ 10 ವರ್ಷಗಳಲ್ಲಿ ಭಾರತದ ಸಾಮರ್ಥ್ಯವು ಬದಲಾಗಿದೆ. ನಾವು ದೇಶದ ಸುರಕ್ಷತೆಯನ್ನೇ ಧ್ಯೇಯವನ್ನಾಗಿಸಿಕೊಂಡು ಆಡಳಿತ ನಡೆಸಿದ್ದೇವೆ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ನಾವು ರೂಪಿಸಿಕೊಂಡಿದ್ದೇವೆ” ಎಂದರು.

ಪ್ರತಿಪಕ್ಷಗಳ ವಿರುದ್ಧ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದರು. “2014ರಲ್ಲಿ ದೇಶದ ಜನ ಸಂಕಷ್ಟದಲ್ಲಿದ್ದರು. ಜನರಿಗೆ ಸರಿಯಾದ ಮನೆ ಇರಲಿಲ್ಲ, ಒಂದು ಗ್ಯಾಸ್‌ ಕನೆಕ್ಷನ್‌ ಇರಲಿಲ್ಲ. ಪ್ರತಿಯೊಂದು ಸರ್ಕಾರದ ಕೆಲಸಕ್ಕೂ ಲಂಚ ನೀಡಬೇಕಿತ್ತು. ಪ್ರತಿಯೊಂದು ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ದೇಶದ ಯುವಕರು ಭರವಸೆಯನ್ನೇ ಕಳೆದುಕೊಂಡು, ನಿರಾಶೆಯ ಮಡುವಿನಲ್ಲಿ ಸಿಲುಕಿದ್ದರು. ಆದರೆ, ಈಗ ದೇಶವು ಬದಲಾಗಿದೆ. ಭ್ರಷ್ಟಾಚಾರವು ನಿರ್ಮೂಲನೆಯಾಗಿದೆ. ನಾವು ವಿಕಸಿತ ಮಾರ್ಗದಲ್ಲಿ ಸಾಗುತ್ತಿದೆ” ಎಂದು ಹೇಳಿದರು.

“2014ಕ್ಕೂ ಮೊದಲು ದೇಶದ ಸಂಪತ್ತನ್ನು ಕೇವಲ ಕುಟುಂಬಗಳು ತಮ್ಮ ಸ್ವತ್ತೇನೋ ಎಂಬಂತೆ ಕೊಳ್ಳೆ ಹೊಡೆಯುತ್ತಿದ್ದವು. ದೊಡ್ಡ ದೊಡ್ಡದವರ ಕೈಗಳು ಇದರಲ್ಲಿ ಇದ್ದವು. ಆದರೆ, ನಾವು 5ಜಿ ತಂತ್ರಜ್ಞಾನವನ್ನು ವೇಗವಾಗಿ ಅಳವಡಿಸಿಕೊಂಡು, ದೇಶಾದ್ಯಂತ ವಿಸ್ತರಣೆ ಮಾಡಿದ್ದೇವೆ. ಕಲ್ಲಿದ್ದಲು ಉತ್ಪಾದನೆ ಸೇರಿ ಹಲವು ಕ್ಷೇತ್ರಗಳಲ್ಲಿ ಪಾರದರ್ಶಕತೆ ಮೂಡಿದೆ. ದೇಶದಲ್ಲಿ ದಾಳಿಯಾದರೆ ಆಡಳಿತಾರೂಢ ಸರ್ಕಾರವು ಬಾಯಿಮುಚ್ಚಿಕೊಂಡು ಕೂರುತ್ತಿತ್ತು. ಆದರೆ, ಈಗ ದೇಶದ ಸಾಮರ್ಥ್ಯ ಬದಲಾಗಿದೆ. ಮನೆಗೆ ನುಗ್ಗಿ ಹೊಡೆಯುವ, ಸರ್ಜಿಕಲ್‌ ಸ್ಟ್ರೈಕ್‌, ವಾಯುದಾಳಿ, ಮಾವೋವಾದಿಗಳ ನಿಗ್ರಹ ಈಗ ಸಾಧ್ಯವಾಗಿದೆ. ಭಾರತದ ಸುರಕ್ಷತೆಗೆ ಸರ್ಕಾರವು ಏನು ಬೇಕಾದರೂ ಮಾಡುತ್ತದೆ ಎಂಬುದನ್ನು ಜಗತ್ತೇ ನೋಡಿದೆ” ಎಂದು ಹೇಳಿದರು.

“ಕಳೆದ 10 ವರ್ಷಗಳ ಉತ್ತಮ ಆಡಳಿತವನ್ನು ನೋಡಿ ದೇಶದ ಜನ ನಮಗೆ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ದೇಶದ ಕೋಟ್ಯಂತರ ಜನರನ್ನು ಬಡತನದಿಂದ ಹೊರಗೆ ತಂದಿದ್ದು ಸೇರಿ ಹಲವು ಉತ್ತಮ ಕೆಲಸಗಳು ನಮ್ಮ ಗೆಲುವಿಗೆ ಕಾರಣವಾಗಿವೆ. 2014ರಲ್ಲಿ ನಾವು ಒಂದು ವಿಷಯ ಹೇಳಿದ್ದೆವು. ಭ್ರಷ್ಟಾಚಾರದ ವಿರುದ್ಧ ನಾವು ಶೂನ್ಯ ಸಹಿಷ್ಣುಗಳಾಗಿರುತ್ತೇವೆ ಎಂದಿದ್ದೇವೆ. ಕಳೆದ 10 ವರ್ಷಗಳಲ್ಲಿ ನಾವು ಭ್ರಷ್ಟಾಚಾರದ ವಿರುದ್ಧ ಹೋರಾಡಿದೆವು. ಶೂನ್ಯ ಸಹಿಷ್ಣುತೆಯನ್ನು ತೋರಿಸಿದ ಕಾರಣಕ್ಕಾಗಿ ಜನ ಬೆಂಬಲ ನೀಡಿದ್ದಾರೆ” ಎಂದರು.

ಭಾಷಣದುದ್ದಕ್ಕೂ ಪ್ರತಿಪಕ್ಷಗಳ ಗಲಾಟೆ

ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಭಾಷಣ ಮಾಡುವ ವೇಳೆ ಪ್ರತಿಪಕ್ಷಗಳು ಗಲಾಟೆ ನಡೆಸಿದವು. ಭಾಷಣದುದ್ದಕ್ಕೂ ನಮಗೆ ನ್ಯಾಯ ಬೇಕು, ಮಣಿಪುರದ ಜನರಿಗೆ ನ್ಯಾಯ ದೊರಕಿಸಬೇಕು, ಗೂಂಡಾಗಿರಿ ಈಗ ನಡೆಯುವುದಿಲ್ಲ, ಶೇಮ್‌ ಶೇಮ್‌ ಎಂಬುದು ಸೇರಿ ಹಲವು ಘೋಷಣೆಗಳ ಮೂಲಕ ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

Continue Reading
Advertisement
Gold Smuggling
Latest7 mins ago

Gold Smuggling: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

Narendra Modi
ದೇಶ22 mins ago

Narendra Modi: ದೇಶದ ಜನ ನಮ್ಮನ್ನು ಮೂರನೇ ಬಾರಿ ಗೆಲ್ಲಿಸಿದ್ದಾರೆ, ಕಾಂಗ್ರೆಸ್‌ಗೆ ನೂರು ಸ್ಥಾನ ಗೆಲ್ಲುವ ಯೋಗ್ಯತೆಯೂ ಇಲ್ಲ; ರಾಹುಲ್‌ಗೆ ಮೋದಿ ಗೇಲಿ

Uttar Pradesh stampede
ದೇಶ37 mins ago

Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Drowned in water
ದೇಶ39 mins ago

Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

Rahul Dravid
ಕ್ರೀಡೆ39 mins ago

Rahul Dravid: ನಾನು ನಿರುದ್ಯೋಗಿ, ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Narendra Modi
ದೇಶ41 mins ago

Narendra Modi: ‘ಮನೆ’ಯೊಳಗೆ ನುಗ್ಗಿ ಹೊಡೆಯುತ್ತೇವೆ, ದೇಶದ ಸುರಕ್ಷತೆಗಾಗಿ ನಾವು ಏನು ಮಾಡಲೂ ಸಿದ್ಧ: ಸಂಸತ್ತಲ್ಲಿ ಮೋದಿ ಗುಡುಗು

Narendra Modi
ದೇಶ60 mins ago

Narendra Modi: ಪ್ರಜಾಪ್ರಭುತ್ವ, ಜಾತ್ಯತೀತತೆ, ಏಳಿಗೆಯೇ ನಮ್ಮ ಆದ್ಯತೆ; ಸಂಸತ್ತಿನಲ್ಲಿ ಮೋದಿ ಹೇಳಿಕೆ

MUDA site scandal
ಕರ್ನಾಟಕ1 hour ago

MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ!

Rahul Dravid
ಕ್ರಿಕೆಟ್1 hour ago

Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ – ಸಲಾಂ ಜಾಮಿ ಭಾಯ್!

SEBI
ವಾಣಿಜ್ಯ1 hour ago

SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ24 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌