Horoscope Today | ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today | ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶುಭಕೃತ ನಾಮ ಸಂವತ್ಸರ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಏಕಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

rashi bhavishya today in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (06-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಭಾದ್ರಪದ
ಮಾಸ, ಶುಕ್ಲ ಪಕ್ಷ
ತಿಥಿ: ಏಕಾದಶಿ 27:04 ವಾರ: ಮಂಗಳವಾರ
ನಕ್ಷತ್ರ: ಪೂರ್ವಾಷಾಢ 18:08 ಯೋಗ: ಆಯುಷ್ಮಾನ್ 08:13
ಕರಣ: ವಣಿಜ16:30 ದಿನ ವಿಶೇಷ: ಸರ್ವತ್ರ ಏಕಾದಶಿ
ಅಮೃತಕಾಲ: ಮಧ್ಯಾಹ್ನ 01 ಗಂಟೆ 42 ನಿಮಿಷದಿಂದ 03 ಗಂಟೆ 10 ನಿಮಿಷದವರೆಗೆ.

ಸೂರ್ಯೋದಯ: 06: 02     ಸೂರ್ಯಾಸ್ತ: 06:26

ರಾಹು ಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕುಟಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತವೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ಕೋಪವನ್ನು ನಿಯಂತ್ರಿಸಿಕೊಂಡರೆ ಒಳ್ಳೆಯದು. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ. ಇಂದಿನ ದಿನ ನಿಮಗೆ ಮಂಗಳಕರವಾಗಿರುತ್ತದೆ. ಆದರೆ ಕಾರ್ಯದಲ್ಲಿ ನಿಧಾನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕು ತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ. ಅನಗತ್ಯ ವೆಚ್ಚಗಳು ಉಂಟಾಗಬಹುದು. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ,ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

Pushpa 2: Pushpa 2: 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.

VISTARANEWS.COM


on

Pushpa 2
Koo

ಹೈದರಾಬಾದ್:‌ ಟಾಲಿವುಡ್‌ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ (Allu Arjun) ನಟನೆಯ ಬಹುನಿರೀಕ್ಷಿತ ಪುಷ್ಪ 2 (Pushpa 2) ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ತುಸು ಬೇಸರ ಉಂಟಾದಂತಾಗಿದೆ.

ಸಿನಿಮಾ ಮುಂದೂಡಿಕೆ ಏಕೆ?

ಅಲ್ಲು ಅರ್ಜುನ್‌ ವಿಧಾನಸಭೆ ಚುನಾವಣೆ ವೇಳೆ ನಂದಿಯಾಲ ವಿಧಾನಸಭೆ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಇದರಿಂದಾಗಿ ಮೆಗಾ ಸ್ಟಾರ್‌ ಕುಟುಂಬದ ಪವನ್‌ ಕಲ್ಯಾಣ್‌ ಅವರ ಅಭಿಮಾನಿಗಳ ಆಕ್ರೋಶಕ್ಕೆ ಅಲ್ಲು ಅರ್ಜುನ್‌ ಗುರಿಯಾಗಿದ್ದಾರೆ. ಅಲ್ಲದೆ, ಪುಷ್ಟ 2 ಸಿನಿಮಾವನ್ನು ನಾವು ವೀಕ್ಷಿಸುವುದಿಲ್ಲ, ಬಾಯ್ಕಾಟ್‌ ಮಾಡುತ್ತೇವೆ ಎಂಬುದಾಗಿ ಪವರ್‌ ಸ್ಟಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿಯೇ, ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದಿಷ್ಟು ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Continue Reading

ದೇಶ

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Narendra Modi: ನರೇಂದ್ರ ಮೋದಿ ಅವರು ಕೆಲ ದಿನಗಳ ಹಿಂದಷ್ಟೇ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿಯಾಗಿದ್ದರು. ಇದೇ ಫೋಟೊವನ್ನು ಇಟ್ಟುಕೊಂಡು ಮೋದಿ ಅವರನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ ಈಗ ಸೆಲ್ಫ್‌ಗೋಲ್‌ ಹೊಡೆದುಕೊಂಡಿದೆ. ಮೋದಿ ಕುರಿತ ಲೇವಡಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟ್‌ಅನ್ನು ಕೇರಳ ಕಾಂಗ್ರೆಸ್‌ ಡಿಲೀಟ್‌ ಮಾಡಿದೆ.

VISTARANEWS.COM


on

Narendra Modi
Koo

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡುವ ಭರದಲ್ಲಿ ಕೇರಳ ಕಾಂಗ್ರೆಸ್‌ (Kerala Congress) ಘಟಕವು ಪ್ರಮಾಣದ ಎಸಗಿದ್ದು, ತಪ್ಪಿನ ಅರಿವಾಗಿ ಬಳಿಕ ಕ್ಷಮೆಯಾಚಿಸಿದೆ. ಇತ್ತೀಚೆಗೆ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯ ವೇಳೆ ನರೇಂದ್ರ ಮೋದಿ (Narendra Modi) ಅವರು ಪೋಪ್‌ ಫ್ರಾನ್ಸಿಸ್‌ (Pope Francis) ಅವರನ್ನು ಭೇಟಿಯಾಗಿದ್ದರು. ಇದರ ಕುರಿತು ಲೇವಡಿ ಮಾಡಿದ ಕೇರಳ ಕಾಂಗ್ರೆಸ್‌, “ಕೊನೆಗೂ ಪೋಪ್‌ ಫ್ರಾನ್ಸಿಸ್‌ ಅವರಿಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು” ಎಂಬುದಾಗಿ ಪೋಸ್ಟ್‌ ಮಾಡಿದೆ. ಇದಾದ ನಂತರ ಜನಾಕ್ರೋಶ ವ್ಯಕ್ತವಾಗಿದ್ದು, ಬಳಿಕ ಪೋಸ್ಟ್‌ಅನ್ನು ಡಿಲೀಟ್‌ ಮಾಡಿದೆ.

ಇಟಲಿಯಲ್ಲಿ ನರೇಂದ್ರ ಮೋದಿ ಹಾಗೂ ಪೋಪ್‌ ಫ್ರಾನ್ಸಿಸ್‌ ಅವರು ಭೇಟಿಯಾಗಿರುವ ಫೋಟೊವನ್ನು ಕೇರಳ ಕಾಂಗ್ರೆಸ್‌ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿತ್ತು. ಆ ಮೂಲಕ ನರೇಂದ್ರ ಮೋದಿ ಅವರೇ ದೇವರಾಗಿದ್ದು, ಅವರನ್ನು ಭೇಟಿಯಾಗುವ ಅವಕಾಶವು ಪೋಪ್‌ ಅವರದ್ದಾಗಿದೆ ಎಂಬಂತೆ ಕಾಂಗ್ರೆಸ್‌ ಲೇವಡಿ ಮಾಡಿತ್ತು. ಚುನಾವಣೆ ಪ್ರಚಾರದ ವೇಳೆ, “ನಿಮ್ಮ ಸೇವೆ ಮಾಡಲಿ ಎಂಬುದಾಗಿ ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂಬುದಾಗಿ ಮೋದಿ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್‌ ಲೇವಡಿ ಮಾಡಿತ್ತು.

ಕೇರಳ ಕಾಂಗ್ರೆಸ್‌ ಪೋಸ್ಟ್‌ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. “ಇಸ್ಲಾಮಿಕ್‌ ಮೂಲಭೂತವಾದಿಗಳು ಹಾಗೂ ನಗರ ನಕ್ಸಲರು ಕೇರಳ ಕಾಂಗ್ರೆಸ್‌ನ ಎಕ್ಸ್‌ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ದೇಶದ ನಾಯಕರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದು ಇವರ ಕೆಲಸವೇ ಆಗಿದೆ. ಈಗ ಗೌರವಾನ್ವಿತ ಪೋಪ್‌ ಹಾಗೂ ಕ್ರೈಸ್ತ ಸಮುದಾಯದ ಕುರಿತು ಕೂಡ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದನ್ನು ಇವರು ಬಿಟ್ಟಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ರೈಸ್ತರಿಗೆ ಕಾಂಗ್ರೆಸ್‌ ಅವಮಾನ ಮಾಡಲಾಗಿದೆ ಎಂದೇ ಬಿಜೆಪಿ ನಾಯಕರು ಚಾಟಿ ಬೀಸಿದರು.

ಕೇರಳ ಕಾಂಗ್ರೆಸ್‌ನ ಪೋಸ್ಟ್‌ ವೈರಲ್‌ ಆಗಿ, ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಲೇ ಪೋಸ್ಟ್‌ಅನ್ನು ಡಿಲೀಟ್‌ ಮಾಡಲಾಗಿದೆ. ಅಷ್ಟೇ ಅಲ್ಲ, “ಯಾರ ಭಾವನೆಗಳಿಗೂ ಧಕ್ಕೆ ತರುವುದು ನಮ್ಮ ಉದ್ದೇಶವಾಗಿರಲಿಲ್ಲ. ಪೋಸ್ಟ್‌ನಿಂದ ಬೇಸರ ಆಗಿದ್ದರೆ ಕ್ಷಮೆಯಾಚಿಸುತ್ತೇವೆ” ಎಂಬುದಾಗಿ ಕೇರಳ ಕಾಂಗ್ರೆಸ್‌ ಪ್ರಕಟಣೆ ಹೊರಡಿಸಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ಜನಸಂಖ್ಯೆಯಲ್ಲಿ ಮೂರನೇ ಅತಿದೊಡ್ಡ ಸಮುದಾಯ ಎನಿಸಿದೆ. ಕೆಲವು ಕ್ರೈಸ್ತ ಸಮುದಾಯದ ಮುಖಂಡರು ಕೂಡ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Continue Reading

ದೇಶ

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhiರಾಹುಲ್‌ ಗಾಂಧಿ ಅವರು 2019ರಲ್ಲಿ ಉತ್ತರ ಪ್ರದೇಶ ಅಮೇಥಿ ಹಾಗೂ ವಯನಾಡಿನಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸೋಲನುಭವಿಸಿದ ಕಾರಣ ಅವರು ವಯನಾಡು ಸಂಸದರಾಗಿ ಮುಂದುವರಿದಿದ್ದರು. ಆದರೆ, 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು 2004ರಿಂದಲೂ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈಗ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿ ಸಂಸದರಾಗಿ ಮುಂದುವರಿಯಲು ತೀರ್ಮಾನಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಗೆಲುವು ಸಾಧಿಸಿದ ರಾಹುಲ್‌ ಗಾಂಧಿ ಅವರು ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಕುತೂಹಲ, ಪ್ರಶ್ನೆಗೆ ತೆರೆಬಿದ್ದಿದೆ. ತಾಯಿ ಸೋನಿಯಾ ಗಾಂಧಿ (Sonia Gandhi) ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿಯನ್ನೇ ರಾಹುಲ್‌ ಗಾಂಧಿ (Rahul Gandhi) ಉಳಿಸಿಕೊಂಡಿದ್ದಾರೆ. ಇನ್ನು, ರಾಹುಲ್‌ ಗಾಂಧಿಯಿಂದ ತೆರವಾಗುವ ವಯನಾಡು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಪ್ರಿಯಾಂಕಾ ವಾದ್ರಾ (Priyanka Vadra) ಅವರು ವಯನಾಡಿನಿಂದ ಸ್ಪರ್ಧಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಯಾವ ಕ್ಷೇತ್ರದ ಸಂಸದರಾಗಿ ಮುಂದುವರಿಯಬೇಕು ಎಂಬ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದರು. “ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿ ಸಂಸದರಾಗಿ ಮುಂದುವರಿಯಲಿದ್ದಾರೆ. ವಯನಾಡು ಲೋಕಸಭೆ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಅವರು ಸ್ಪರ್ಧಿಸಲಿದ್ದಾರೆ. ಈ ಕುರಿತು ಪಕ್ಷವು ತೀರ್ಮಾನ ತೆಗೆದುಕೊಂಡಿದೆ” ಎಂಬುದಾಗಿ ಖರ್ಗೆ ಮಾಹಿತಿ ನೀಡಿದರು.

ಸಭೆಯ ಬಳಿಕ ಮಾತನಾಡಿದ ರಾಹುಲ್‌ ಗಾಂಧಿ, “ನಾನು ವಯನಾಡಿನ ಜನತೆ ಜತೆ ಕಳೆದ ಐದು ವರ್ಷಗಳಿಂದ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ. ಕಳೆದ ಐದು ವರ್ಷಗಳಿಂದ ವಯನಾಡು ಸಂಸದನಾಗಿದ್ದ ನನಗೆ ಅಲ್ಲಿನ ಜನ ತೋರಿಸಿದ ಪ್ರೀತಿ, ಬೆಂಬಲ ಅಪಾರವಾದುದು. ಈಗ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಅವರು ಸ್ಪರ್ಧಿಸಲಿದ್ದಾರೆ. ನಾನು ಕೂಡ ವಯನಾಡಿಗೆ ಆಗಾಗ ಭೇಟಿ ನೀಡುತ್ತಿರುತ್ತೇನೆ” ಎಂದು ಹೇಳಿದರು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭಾಗವಹಿಸಿದರು. ಇನ್ನು, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕನನ್ನಾಗಿ ರಾಹುಲ್‌ ಗಾಂಧಿ ಅವರನ್ನೇ ಆಯ್ಕೆ ಮಾಡುವ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ.

ರಾಹುಲ್‌ ಗಾಂಧಿ ಅವರು 2019ರಲ್ಲಿ ಉತ್ತರ ಪ್ರದೇಶ ಅಮೇಥಿ ಹಾಗೂ ವಯನಾಡಿನಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸೋಲನುಭವಿಸಿದ ಕಾರಣ ಅವರು ವಯನಾಡು ಸಂಸದರಾಗಿ ಮುಂದುವರಿದಿದ್ದರು. ಆದರೆ, 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು 2004ರಿಂದಲೂ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ವಯನಾಡು ಹಾಗೂ ರಾಯ್‌ಬರೇಲಿಯಲ್ಲಿ ಗೆಲುವು ಸಾಧಿಸಿದ ಕಾರಣ, ಅವರು ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕಾಡುತ್ತಿತ್ತು.

ಈಗ ರಾಹುಲ್‌ ಗಾಂಧಿ ಅವರು ತಾಯಿಯ ಕ್ಷೇತ್ರವಾದ ರಾಯ್‌ಬರೇಲಿಯನ್ನೇ ಉಳಿಸಿಕೊಂಡಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶ ಪಡೆದಿರುವ ಕಾರಣ ರಾಯ್‌ಬರೇಲಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ಸ್ಪರ್ಧಿಸುವಂತಾಗಿತ್ತು. ಈಗ ಪ್ರಿಯಾಂಕಾ ವಾದ್ರಾ ಅವರು ವಯನಾಡು ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಇವರಿಗೆ ಇದೇ ಮೊದಲ ಚುನಾವಣೆ ಆಗಿದೆ. ಚುನಾವಣೆಗೂ ಮೊದಲು, ಪ್ರಿಯಾಂಕಾ ವಾದ್ರಾ ಅವರು ರಾಯ್‌ಬರೇಲಿಯಿಂದ, ರಾಹುಲ್‌ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

Continue Reading

ಕರ್ನಾಟಕ

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Rahul Gandhi: ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Rahul Gandhi
Koo

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾದ್ಮಕ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ (Rahul Gandhi) ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ, ವಕೀಲ ಬಿ.ಕೆ.ಬೋಪಣ್ಣ ನೀಡಿದ ದೂರಿನ ಮೇರೆಗೆ ಯುಟ್ಯೂಬರ್‌ ಅಜಿತ್ ಭಾರತಿ (YouTuber Ajeet Bharti) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಮಮಂದಿರ ಜಾಗದಲ್ಲಿ ಬಾಬರಿ ಮಸೀದಿ ಮರು ನಿರ್ಮಾಣ ಮಾಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಯುಟ್ಯೂಬರ್‌ ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ಆ ರೀತಿ ಯಾವುದೇ ಭಾಷಣದಲ್ಲಿ ಹೇಳಿಲ್ಲ. ಜನರಲ್ಲಿ ವಿಭಜನೆಯ ಭಾವ ಉಂಟು ಮಾಡಲು ಹಾಗೂ ಕೋಮು ದ್ವೇಷ ಹರಡಲು ಸ್ವಯಂ ಘೋಷಿತ ಪತ್ರಕರ್ತ, ಲೇಖಕ ಅಜಿತ್ ಭಾರತಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಯುಟ್ಯೂಬರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಜಿತ್ ಭಾರತಿ ಅವರ ಯೂಟ್ಯೂಬ್ ಚಾನೆಲ್‌ಗೆ 5.56 ಲಕ್ಷ ಚಂದಾದಾರರು ಇದ್ದಾರೆ. ಅವರ ಇತ್ತೀಚಿನ ಹೆಚ್ಚಿನ ವಿಡಿಯೊಗಳು ಎರಡು ಲಕ್ಷಕ್ಕೂ ಹೆಚ್ಚು ವೀವ್ಸ್‌ ಕಂಡಿವೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ನಲ್ಲಿ ಅವರು ಪತ್ರಕರ್ತ ಮತ್ತು ಲೇಖಕ ಎಂದು ಬರೆದುಕೊಂಡಿದ್ದಾರೆ. ರಾಹುಲ್‌ ಗಾಂಧಿ ಅವರ ಬಗ್ಗೆ ಮಾಡಿರುವ ವಿಡಿಯೊ ಸಂಬಂಧ‌ ಇದೀಗ ಇವರ ವಿರುದ್ಧ ಕೇಸ್‌ ದಾಖಲಾಗಿದೆ.

ಇದನ್ನೂ ಓದಿ | Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ!; ಇವಿಎಂ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

DK Shivakumar

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading
Advertisement
Kalki 2898 AD Movie Bhairava Anthem Released
ಕರ್ನಾಟಕ22 mins ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು24 mins ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ25 mins ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ29 mins ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ33 mins ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ53 mins ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ1 hour ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest1 hour ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

International Yoga Day 2024
Latest2 hours ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು9 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು9 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌