ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman) ಯೋಜನೆಯ 17ನೇ ಕಂತಿಗಾಗಿ (17th installment) ಫಲಾನುಭವಿ ರೈತರು (beneficiary farmers) ಕಾಯುತ್ತಿದ್ದು ಶೀಘ್ರದಲ್ಲೇ ಇದು ಬಿಡುಗಡೆಯಾಗಲಿದೆ. ಜೂನ್ 4ರಂದು (june) ನಡೆಯುವ ಲೋಕಸಭೆ ಚುನಾವಣೆಯ (loksabha election) ಫಲಿತಾಂಶ ಪ್ರಕಟವಾದ ಅನಂತರ ಇದು ಬಿಡುಗಡೆಯಾಗುವ ನಿರೀಕ್ಷೆ ಇದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನು 2024ರ ಫೆಬ್ರವರಿ 28ರಂದು ಮಹಾರಾಷ್ಟ್ರದ ಯವತ್ಮಾಲ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿಗೂ ಹೆಚ್ಚು ರೈತರಿಗೆ 21,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದರು. 15 ನೇ ಕಂತಿನ ಹಣ ಕಳೆದ ನವೆಂಬರ್ ನಲ್ಲಿ ಬಿಡುಗಡೆಯಾಗಿತ್ತು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ಏಪ್ರಿಲ್- ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್- ಮಾರ್ಚ್ ನಲ್ಲಿ ನೀಡಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಈ ಯೋಜನೆಯನ್ನು 2019 ರ ಮಧ್ಯಂತರ ಬಜೆಟ್‌ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಿಸಿದರು. ಕಂತುಗಳನ್ನು ಸ್ವೀಕರಿಸಲು ರೈತರು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕು. ಯೋಜನೆಯ ಅಧಿಕೃತ ವೆಬ್‌ಸೈಟ್ ಪ್ರಕಾರ,ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಒಟಿಪಿ -ಆಧಾರಿತಇ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಗಾಗಿ ಹತ್ತಿರದ ಸಿಎಸ್ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು.
ಪರಿಶೀಲನೆ ಹೇಗೆ?
ನೋಂದಾಯಿಸಿರುವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲು ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ. ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ‘ಡೇಟಾ ಪಡೆಯಿರಿ’ ಎಂಬ ಆಯ್ಕೆಯನ್ನು ಆರಿಸಿ. ಬಳಿಕ ಫಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಬರುತ್ತದೆ.
ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಪರಿಶೀಲನೆ
ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ ‘ಫಲಾನುಭವಿಗಳ ಪಟ್ಟಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್‌ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ.ದ ಮೇಲೆ ‘ಗೆಟ್ ರಿಪೋರ್ಟ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಇದರ ಅನಂತರ, ಫಲಾನುಭವಿಗಳ ಪಟ್ಟಿಯ ವಿವರವನ್ನು ಪ್ರದರ್ಶಿಸಲಾಗುತ್ತದೆ.
ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು. ಸಹಾಯವಾಣಿ ಸಂಖ್ಯೆ- 155261 ಮತ್ತು 011-24300606.
ಇದನ್ನೂ ಓದಿ: PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್; ಯಾವ ದಿನಕ್ಕೆ ಯಾವ ಪರೀಕ್ಷೆ?
ಅರ್ಜಿ ಸಲ್ಲಿಸುವುದು ಹೇಗೆ?
pmkisan.gov.in ವೆಬ್ ಸೈಟ್ ಗೆ ಭೇಟಿ ನೀಡಿ, ‘ಹೊಸ ರೈತ ನೋಂದಣಿ’ ಮೇಲೆ ಕ್ಲಿಕ್ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾವನ್ನು ಭರ್ತಿ ಮಾಡಿ. ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ‘ಹೌದು’ ಎಂದು ಕ್ಲಿಕ್ ಮಾಡಿ. ಪಿಎಂ ಕಿಸಾನ್ ಅರ್ಜಿ ನಮೂನೆ 2024 ರಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ. ಅದನ್ನು ಉಳಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.