ಕೃಷಿ
Strawberry Farming | ಸ್ಟ್ರಾಬೆರಿ ಕೃಷಿ 1 ಎಕರೆಗೆ 7 ಲಕ್ಷ ಲಾಭ!
ಕರ್ನಾಟಕ
Power Point with HPK : ಬರ ಘೋಷಣೆಯಲ್ಲಿ ನಾವೇ ಮುಂದು; ಬಿಜೆಪಿಗೆ ಇನ್ನೊಂದು ತಿಂಗಳಾದರೂ ಆಗದು!
Power Point with HPK : ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ನಡೆಸಿಕೊಡುವ “ಪವರ್ ಪಾಯಿಂಟ್ ವಿತ್ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಬರ ತಾಲೂಕುಗಳ ಘೋಷಣೆ ಬಗ್ಗೆ ಬಿಜೆಪಿ ಮಾಡಿರುವ ಟೀಕೆಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬರ ಘೋಷಣೆಯನ್ನು ನಾವು ವಿಳಂಬ ಮಾಡಿಯೇ ಇಲ್ಲ. ನಮ್ಮ ಸರ್ಕಾರವೇ ಬೇಗ ಘೋಷಣೆ ಮಾಡಿದೆ. ಅದೇ ಬಿಜೆಪಿಯವರಾಗಿದ್ದರೆ ಇನ್ನೂ ಒಂದು ತಿಂಗಳು ಘೋಷಣೆ ಮಾಡಲು ಆಗುತ್ತಿರಲಿಲ್ಲ. ಬರ ಘೋಷಣೆಯನ್ನು ಮಾಡುತ್ತಲೂ ಇರಲಿಲ್ಲ. 195 ಅಲ್ಲ 100 ತಾಲೂಕನ್ನೂ ಬರಪೀಡಿತ ಎಂದು ಬಿಜೆಪಿಯವರಿಂದ ಘೋಷಣೆ ಮಾಡಲು ಆಗುತ್ತಿರಲಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (Agriculture Minister N Chaluvarayaswamy) ಅವರು ಪವರ್ ಪಾಯಿಂಟ್ ವಿತ್ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಹೇಳಿದರು.
ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ (Hariprakash Konemane) ಅವರು ನಡೆಸಿಕೊಡುವ “ಪವರ್ ಪಾಯಿಂಟ್ ವಿತ್ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಬಿಜೆಪಿಯವರ ವಿರೋಧಕ್ಕೆ ಏನು ಮಾಡುವುದು? ನಮ್ಮ ಬಗ್ಗೆ ಹೇಳಲು ಅವರಿಗೆ ಏನೂ ಇಲ್ಲದೇ ಇರುವುದರಿಂದ ಇಂತಹ ಆರೋಪ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಸರ್ಕಾರ ಯಾವಾಗ ಅಧಿಕಾರಕ್ಕೆ ಬರುತ್ತದೋ ಆವಾಗೆಲ್ಲ ಬರ ಬರುತ್ತದೆ. ಎಸ್ ಎಂ ಕೃಷ್ಣ ಕಾಲದಲ್ಲೂ ಹೀಗೇ ಆಯಿತು, ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೂ ಬರ ಕಾಡಿತು ಎಂದು ಟೀಕೆ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಚಲುವರಾಯಸ್ವಾಮಿ, ಬಿಜೆಪಿಯವರಿಗೆ ಯಾವುದೇ ರೀತಿಯ ವಿಷಯ ಇಲ್ಲ. ಮುಂದೆ ಚುನಾವಣೆ ಸಹ ಇರುವುದರಿಂದ ಹೀಗೆಲ್ಲಾ ಹೇಳುತ್ತಿದ್ದಾರೆ. ಅವರಿಗೆ ವಿರೋಧ ಪಕ್ಷದ ನಾಯಕನನ್ನು ಮಾಡಲು ಆಗಿಲ್ಲ. ಪಕ್ಷದ ಅಧ್ಯಕ್ಷರ ಬದಲಾವಣೆ ಆಗಿಲ್ಲ. ಒಂದು ಕಡೆ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅವಲಂಬಿಸುತ್ತಾರೆ. ಕುಮಾರಸ್ವಾಮಿಯವರೂ ಇನ್ನೊಮ್ಮೆ ಬಿಜೆಪಿಯವರನ್ನು ಅಬಲಂಬಿಸುತ್ತಾರೆ. ಆದರೆ, ವಿರೋಧ ಪಕ್ಷಗಳು ಏನಾದರೂ ಹೇಳಬೇಕು ಎಂಬ ಕಾರಣಕ್ಕೆ ಹೀಗೆ ಆರೋಪ ಮಾಡುತ್ತಿವೆ ಎಂದು ಎನ್. ಚಲುವರಾಯಸ್ವಾಮಿ ಹೇಳಿದರು.
ರೈತರ ಪರ ಇದ್ದಿದ್ದಕ್ಕೇ ಬರ ತಾಲೂಕು ಘೋಷಣೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ನಾನು ಸೇರಿದಂತೆ ನಮ್ಮ ರಾಜ್ಯ ಸರ್ಕಾರವು ರೈತರ ಪರ ಇರುವುದರಿಂದ ಮಾತ್ರ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲು ಸಾಧ್ಯವಾಯಿತು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಸಂಕಷ್ಟವನ್ನು ಪರಿಗಣಿಸಿದ್ದೇವೆ
195 ತಾಲೂಕುಗಳು ಬರಪೀಡಿತವಾಗಿದ್ದರೂ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ 161 ತಾಲೂಕುಗಳು ಮಾತ್ರ ಬರಪೀಡಿತ ಎಂದು ಘೋಷಣೆ ಮಾಡಲು ಸಾಧ್ಯವಾಯಿತು. ಇನ್ನು 34 ತಾಲೂಕುಗಳು ಕೇಂದ್ರದ ಅನುಸಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಬರುವುದಿಲ್ಲ. ಆದರೆ, ಅಲ್ಲಿ ಸಂಕಷ್ಟ ಇರುವುದನ್ನು ಅರಿತು ನಾವು ಇವುಗಳನ್ನೂ ಸೇರಿಸಿ ಘೋಷಣೆ ಮಾಡಿದ್ದೇವೆ. ಅಲ್ಲದೆ, ಇವುಗಳ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೂ ಕೊಡುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಇದನ್ನೂ ಓದಿ: Power Point with HPK : ಪುತ್ರ ಕಾಂತೇಶ್ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಉತ್ಸುಕನಾಗಿದ್ದಾನೆ!
ವರದಿ ಕೊಡಲು ಡಿಸಿಗಳಿಗೆ ಸೂಚಿಸಿದ್ದೇವೆ
ರಾಜ್ಯದ ಹಲವು ಕಡೆ ಮೇವು ಇದೆಯೇ? ಬೀಜದ ಕೊರತೆ ಇದೆಯೇ? ಮತ್ತೇನು ಸಮಸ್ಯೆಗಳಿವೆ ಎಂಬುದರ ಬಗ್ಗೆ ವರದಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಆ ವರದಿಯನ್ವಯ ಒಂದು ಮೆಮೋರಂಡಮ್ ಅನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸುತ್ತೇವೆ. ನಾವು ಸಹ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಕರ್ನಾಟಕ
Toor dal growers : ನೆಟೆ ರೋಗದಿಂದ ನಷ್ಟ ಅನುಭವಿಸಿದ್ದ ರೈತರಿಗೆ Good News : ಸರಕಾರದಿಂದ ಬಾಕಿ ಪರಿಹಾರ ಬಿಡುಗಡೆ
Toor dal Growers : ಕಳೆದ ಅವಧಿಯಲ್ಲಿ ಮಳೆಯಿಂದ ತೊಗರಿ ಬೆಳೆ ಹಾಳಾಗಿತ್ತು. ಬಳಿಕ ನೆಟೆ ರೋಗ ಅಮರಿಕೊಂಡಿತ್ತು. ಅವಳಿ ಹೊಡೆತದಿಂದ ಕಂಗಾಲಾದ ರೈತರಿಗೆ ನೀಡಬೇಕಾಗಿದ್ದ ಪರಿಹಾರದ ಮತ್ತೊಂದು ಕಂತು ಬಿಡುಗಡೆಯಾಗಿದೆ.
ಬೆಂಗಳೂರು: ಕಳೆದ ವರ್ಷ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ (Starch disease) ತೊಗರಿ ಬೆಳೆಗೆ (Toor dal) ಭಾರಿ ಹಾನಿ ಆಗಿತ್ತು. ಆಗ ನಷ್ಟ ಅನುಭವಿಸಿದ್ದ ರೈತರಿಗೆ (Toor dal growers) ಸರ್ಕಾರ ಪರಿಹಾರ (Compensation from government) ಘೋಷಿಸಿತ್ತು. ಅದರಲ್ಲಿ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಈಗ ಬಿಡುಗಡೆ ಮಾಡುವ ಮೂಲಕ ಒಂದಿಷ್ಟು ನೆಮ್ಮದಿ ನೀಡಿದೆ.
ಕಳೆದ ಸಾಲಿನಲ್ಲಿ ತೊಗರಿ ಬೆಳೆಗಾರರಿಗೆ ಭಾರಿ ನಷ್ಟ ಉಂಟಾಗಿತ್ತು. ಒಂದು ಕಡೆ ಅತಿವೃಷ್ಟಿಯಿಂದ ಆರಂಭದಲ್ಲೇ ತೊಗರಿ ಬೆಳೆ ನಾಶವಾಗಿತ್ತು. ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಿದ್ದ ತೊಗರಿ ನೀರುಪಾಲಾಗಿತ್ತು.
ಅತಿವೃಷ್ಟಿಯಿಂದ ಆರಂಭದಲ್ಲಿಯೇ ತೊಗರಿ ಹಾಳಾಗಿದ್ದರಿಂದ ರೈತರು ಮತ್ತೆ ಭೂಮಿ ಹಸನು ಮಾಡಿ ತೊಗರಿ ಬಿತ್ತನೆ ಮಾಡಿದ್ದರು. ತೊಗರಿ ಬೆಳೆ ಕೂಡಾ ಚೆನ್ನಾಗಿ ಬಂದಿತ್ತು. ಆದರೆ ತೊಗರಿ ಕಾಳಾಗುವ ಹಂತದಲ್ಲಿ, ನಟೆ ರೋಗ ಒಕ್ಕರಿಸಿಕೊಂಡಿತ್ತು. ನಟೆ ರೋಗದಿಂದ ತೊಗರಿ ಗೊಡ್ಡಾಗಿದ್ದು, ಕಾಳಾಗುವ ಮುನ್ನವೇ ಒಣಗಲು ಶುರುವಾಗಿತ್ತು.
ನಟೆರೋಗದಿಂದ ಸಂತ್ರಸ್ತರಾದ ರೈತರು ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಿದ್ದರು. ಕಳೆದ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಬಂದಾಗಲೂ ಜನರು ಪ್ರತಿಭಟನೆಯ ಮೂಲಕ ಅವರ ಗಮನ ಸೆಳೆಯಲು ಪ್ರಯತ್ನ ಮಾಡಿದ್ದರು.
ಮೂರು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿತ್ತು. ಇದು ರೈತರಿಗೆ ಭಾರಿ ಸಂಕಷ್ಟವನ್ನು ತಂದಿತ್ತು.
ಇದನ್ನೂ ಓದಿ: Rain News : ಮೋಡ ಬಿತ್ತನೆ ಇಲ್ಲ; 100ಕ್ಕೂ ಹೆಚ್ಚು ಬರಪೀಡಿತ ತಾಲೂಕು ಘೋಷಣೆಗೆ ಕೇಂದ್ರಕ್ಕೆ ಮನವಿ: ಚಲುವರಾಯಸ್ವಾಮಿ
ಇದೀಗ ಬಾಕಿ ಪರಿಹಾರ ಬಿಡುಗಡೆ
ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿ, ಅದರಲ್ಲಿ 74 ಕೊಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಇದೀಗ 2ನೇ ಕಂತಿನಲ್ಲಿ 74 ಕೋಟಿ ರೂ ಬಿಡುಗಡೆಗೊಳಿಸಲಾಗಿದೆ.
ಬಾಕಿ ಉಳಿದ ರೂ 75 ಕೋಟಿ ಹಣವನ್ನು ಸಹ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆ ಮೂಲಕ ತಿಳಿಸಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹಣ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ.
ಕರ್ನಾಟಕ
Farmers suicide : ಲವ್ ಕೇಸಲ್ಲಿ ಸತ್ತಿದ್ದೆಲ್ಲ ರೈತರ ಆತ್ಮಹತ್ಯೆ ಆಗಲ್ಲ, 5 ಲಕ್ಷ ಪರಿಹಾರಕ್ಕೆ ಸುಸೈಡ್ ಜಾಸ್ತಿ ಆಗ್ತಿದೆ ಅಂದ ಸಚಿವ!
Farmers suicide : ಸಿಕ್ಕ ಸಿಕ್ಕ ಸಾವಿಗೆಲ್ಲ ಆತ್ಮಹತ್ಯೆ, ರೈತರ ಆತ್ಮಹತ್ಯೆ ಎನ್ನುವ ಹಣೆಪಟ್ಟಿ ಕಟ್ಟಬೇಡಿ ಎಂದು ಹೇಳಿದ್ದಾರೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್. ಪರಿಹಾರ ಸಿಗುತ್ತೆ ಅಂತ ಸುಸೈಡ್ ಜಾಸ್ತಿ ಆಗ್ತಿದೆ ಎಂಬ ಅವರ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ: ರಾಜ್ಯದಲ್ಲಿ ಬರಗಾಲದಿಂದ ರೈತರು ಕಂಗೆಟ್ಟಿದ್ದಾರೆ (Farmer suicide), ಬೆಳೆ ಹಾನಿಯಿಂದ ತತ್ತರಿಸಿದ್ದಾರೆ, ಉತ್ಪನ್ನಗಳಿಗೆ ಸರಿಯಾದ ಧಾರಣೆ ಸಿಗದೆ ಸಾಲದ ಸುಳಿಗೆ ಬಿದ್ದಿದ್ದಾರೆ. ಇಂಥ ಹೊತ್ತಿನಲ್ಲಿ ರೈತರು ಹತಾಶರಾಗಿ ಮಾಡಿಕೊಳ್ಳುವ ಆತ್ಮಹತ್ಯೆಯನ್ನು ಸಂಶಯದಿಂದ ನೋಡುವ, ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಕೃಷಿ ಮಾರುಕಟ್ಟೆ ಸಚಿವ (Agricuture Marketing Minister) ಶಿವಾನಂದ ಪಾಟೀಲ್ ಅವರು ವಿವಾದದ ಸುಳಿಗೆ ಸಿಲುಕಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಆ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಶಿವಾನಂದ ಪಾಟೀಲ್ ಅವರು ಐದು ಲಕ್ಷ ಪರಿಹಾರ ಘೋಷಣೆ ಬಳಿಕ ರೈತರ ಆತ್ಮಹತ್ಯೆ ಜಾಸ್ತಿ ಆಗುತ್ತಿದೆ, ಪ್ರೇಮ ಪ್ರಕರಣದಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡವರನ್ನು ಕೂಡಾ ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸತ್ತ ಕೂಡಲೇ ರೈತರ ಆತ್ಮಹತ್ಯೆ ಎಂದು ಹೇಳಬೇಡಿ
ಯಾರಾದರೂ ಸತ್ತ ಕೂಡಲೇ ರೈತರ ಆತ್ಮಹತ್ಯೆ ಎಂದು ಷರಾ ಬರೆಯಬೇಡಿ. ಸಾವಿಗೆ ಅವರ ಕೃಷಿ ಹಾನಿ, ಸಾಲಗಳಷ್ಟೇ ಕಾರಣವಾಗಿರುವುದಿಲ್ಲ. ವೈಯಕ್ತಿಕವಾದ ಸಂಗತಿಗಳೂ ಇರುತ್ತವೆ ಎಂದು ಮಾಧ್ಯಮಗಳಿಗೆ ಕೃಷಿ ಸಚಿವರು ಕಿವಿಮಾತು ಹೇಳಿದಾಗ ಈ ವಿವಾದ ಹುಟ್ಟಿಕೊಂಡಿದೆ.
ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಇಂದು ನಿನ್ನೆಯದೇನಲ್ಲ. 2020ರಲ್ಲಿ 500 ಜನ ಆತ್ಮಹತ್ಯೆ ಮಾಡಿಕೊಂಡಿದ್ದರು. 2021ರಲ್ಲಿ 595 ಜನ, 2022ರಲ್ಲಿ 651 ಜನ, 2023ರಲ್ಲಿ 412 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಇದು ಈ ಜಿಲ್ಲೆಯ ಸ್ವಾಭಾವಿಕ ಆತ್ಮಹತ್ಯೆಗಳು. ನೀವು ಲವ್ ಕೇಸ್ ನಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನೂ ರೈತ ಆತ್ಮಹತ್ಯೆ ಎಂದು ವರದಿ ಮಾಡಿದ್ದೀರಿ ಎಂದು ಶಿವಾನಂದ ಪಾಟೀಲ್ ಹೇಳಿದರು.
ಎಫ್‌ಐಆರ್ ಆದ ತಕ್ಷಣ ನೀವು ರೈತ ಆತ್ಮಹತ್ಯೆ ಎಂದು ವರದಿ ಮಾಡೋದು ತಪ್ಪು. ಹೃದಯಾಘಾತವಾಗಿದ್ದು, ಹಾವು ಕಡಿದು ಸತ್ತಿದ್ದು ರೈತ ಆತ್ಮಹತ್ಯೆ ಎಂದು ಪ್ರಕರಣ ದಾಖಲಾಗಿದೆ. ಎಫ್‌ಎಸ್‌ಎಲ್ ವರದಿ ಬರುವವರೆಗೂ ಕಾಯಿರಿ. ಜನರಲ್ಲಿ ಆತಂಕ ಮೂಡಿಸುವ ರೀತಿಯಲ್ಲಿ ವರದಿ ಮಾಡಿದರೆ ಕಷ್ಟ ಎಂದು ಶಿವಾನಂದ ಪಾಟೀಲ್ ಹೇಳಿದರು.
ಪರಿಹಾರ ಸಿಗುತ್ತದೆ ಎಂದು ಎಲ್ಲ ಪ್ರಕರಣ ರೈತರ ಆತ್ಮಹತ್ಯೆ ಆಗುತ್ತಿದೆ
ʻʻರಾಜ್ಯ ಸರ್ಕಾರ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಬಳಿಕ ರೈತರ ಆತ್ಮಹತ್ಯೆ ಜಾಸ್ತಿ ಆಗುತ್ತಿದೆ. ರೈತ ಆತ್ಮಹತ್ಯೆ ಎಂದು ಕಂಪ್ಲೆಂಟ್ ಕೊಟ್ಟಾಗಲೇ ಪರಿಹಾರ ಸಿಗುತ್ತೆ ಎನ್ನುವ ದುರಾಶೆ ಮನಸ್ಸಿನಲ್ಲಿ ಇರುತ್ತದೆʼʼ ಎಂದು ಹೇಳಿದ ಶಿವಾನಂದ ಪಾಟೀಲ್, ʻʻವಿರೇಶ ಕಮಿಟಿ ವರದಿ ಬರುವವರೆಗೂ ರೈತ ಆತ್ಮಹತ್ಯೆ ಕಡಿಮೆ ಇತ್ತು. ಯಾವಾಗ 2015ರಲ್ಲಿ ಐದು ಲಕ್ಷ ರೂ. ಪರಿಹಾರ ಕೊಡಲು ಪ್ರಾರಂಭ ಮಾಡಿದೆವೋ ಅಂದಿನಿಂದ ವರದಿ ಆಗೋದು ಹೆಚ್ಚಾಗುತ್ತಿದೆʼʼ ಎಂದು ಹೇಳಿದರು.
5 ಲಕ್ಷ ಪರಿಹಾರ ಘೋಷಣೆ ಬಳಿಕ ರೈತರ ಆತ್ಮಹತ್ಯೆ ಜಾಸ್ತಿ ಆಗುತ್ತಿದೆ. ಪರಿಹಾರ ಸಿಗಬಹುದು ಎನ್ನುವ ಆಸೆಯಿಂದ ರೈತ ಆತ್ಮಹತ್ಯೆ ಎಂದು ತಪ್ಪು ಪ್ರಕರಣ ದಾಖಲಿಸುತ್ತಿದ್ದಾರೆ. 2015ಕ್ಕಿಂತ ಮುಂಚೆ ರೈತರ ಆತ್ಮಹತ್ಯೆ ವರದಿ ಕಡಿಮೆ ಆಗ್ತಿತ್ತು, ಪರಿಹಾರದ ಮೊತ್ತವು ಕಡಿಮೆ ಇತ್ತು ಎಂದು ವಿವರಿಸಿದರು.
ಇದನ್ನೂ ಓದಿ : Farmer suicide : ಸಹಕಾರ ಬ್ಯಾಂಕ್‌ನಿಂದ ಸಾಲ ಪಾವತಿಗೆ ನೋಟಿಸ್; ಆತಂಕಗೊಂಡು ರೈತ ಆತ್ಮಹತ್ಯೆ
50 ಲಕ್ಷ ಕೊಡ್ತೀವಿ, ಆತ್ಮಹತ್ಯೆ ಮಾಡಿಕೊಳ್ಳಿ: ಸಚಿವರಿಗೆ ಸವಾಲು
ಈ ನಡುವೆ ಸಚಿವರ ಉದ್ಧಟತನದ ಹೇಳಿಕೆಗೆ ಆಕ್ರೋಶ ಭುಗಿಲೆದ್ದಿದೆ. ಹಾವೇರಿಯಲ್ಲಿ ಸಿಡಿದೆದ್ದ ರೈತರು ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಶಿವಾನಂದ ಪಾಟೀಲ್ ಅವರನ್ನು ಕೈ ಬಿಡಬೇಕು ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದ್ದಾರೆ.
ʻʻರೈತ ಸಂಘದಿಂದ 50 ಲಕ್ಷ ರೂ. ಪರಿಹಾರ ಕೊಡಲು ನಿರ್ಧಾರ ಮಾಡಿದ್ದೇವೆ. ಈಗ ಶಿವಾನಂದ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳಲಿʼʼ ಎಂದು ಹೇಳಿರುವ ಅವರು, ಯಾವುದೇ ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ ಎಂದರು.
ಇನ್ನು ಮುಂದೆ ಶಿವಾನಂದ ಪಾಟೀಲ್ ಹೋದಲ್ಲೆಲ್ಲ ಘೇರಾವ್ ಹಾಕಲಾಗುವುದು ಎಂದು ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಕೆ ನೀಡಿದರು.
ಕರ್ನಾಟಕ
Rain News : ಬರ ತಾಲೂಕು ಘೋಷಣೆ 1 ವಾರ ಮುಂದಕ್ಕೆ; 134 ತಾಲೂಕಲ್ಲಿ ಮತ್ತೆ ಜಂಟಿ ಸಮೀಕ್ಷೆ!
Rain News : ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗಿದೆ ಬರದ ಛಾಯೆ ಆವರಿಸಿದೆ. ಅಲ್ಲದೆ, ಕೇಂದ್ರ ಸರ್ಕಾರದ ಮಾನದಂಡದ ಅನುಸಾರ ಕೇವಲ 62 ತಾಲೂಕುಗಳು ಮಾತ್ರವೇ ಬರದ ವ್ಯಾಪ್ತಿಗೆ ಒಳಪಡುತ್ತವೆ. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಪುನಃ ಬೆಳೆ ಸಮೀಕ್ಷೆ ನಡೆಸಲು ಕ್ಯಾಬಿನೆಟ್ ಸಬ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳ ಜನ ಮಳೆ (Rain News) ಇಲ್ಲದೆ ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಬರ ತಾಲೂಕುಗಳ ಘೋಷಣೆಗೆ ರಾಜ್ಯ ಸರ್ಕಾರದಿಂದ ಸಿದ್ಧತೆಗಳು ನಡೆದಿವೆ. ಆದರೆ, ಈಗ ರಾಜ್ಯದಲ್ಲಿ ಬರ ತಾಲೂಕುಗಳ ಘೋಷಣೆಯು ಇನ್ನೂ ಒಂದು ವಾರ ಮುಂದಕ್ಕೆ ಹೋಗಿದೆ. ಈ ಮೊದಲು 113 ತಾಲೂಕುಗಳು “ಬರಪೀಡಿತ” (Drought hit taluka) ಎಂದು ಸಚಿವ ಸಂಪುಟದ ಸಬ್ ಕಮಿಟಿ ನಿರ್ಧಾರ ಮಾಡಿತ್ತು. ಆದರೆ, ಕೇಂದ್ರ ಸರ್ಕಾರದ (Central Government) ಮಾನದಂಡದ ಅನುಸಾರ ಕೇವಲ 62 ತಾಲೂಕುಗಳು ಮಾತ್ರ ಬರ ತಾಲೂಕು ಘೋಷಣೆಗೆ ಒಳಪಡುತ್ತವೆ. ಹೀಗಾಗಿ ಬಾಕಿ ಉಳಿದ 51 ಹಾಗೂ ನೂತನವಾಗಿ ಬರದ ಸಾಲಿಗೆ ಸೇರ್ಪಡೆಗೊಂಡಿರುವ 83 ತಾಲೂಕುಗಳ ಸ್ಥಿತಿಗತಿಗಳನ್ನು ಇನ್ನೊಂದು ವಾರದೊಳಗೆ ಕಂದಾಯ, ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ (Revenue Agriculture and Rural Development Department) ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ, ಅದರ ವರದಿಯನುಸಾರ ಬರ ತಾಲೂಕುಗಳ ಘೋಷಣೆಗೆ ನಿರ್ಧಾರ ಮಾಡಲಾಗಿದೆ.
ಕಂದಾಯ ಸಚಿವ ಕೃಷ್ಣಬೈರೇಗೌಡ (Revenue Minister Krishna Byre Gowda) ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಕ್ಯಾಬಿನೆಟ್ ಸಬ್ ಕಮಿಟಿ ಸಭೆಯಲ್ಲಿ ಬರ ತಾಲೂಕು ಘೋಷಣೆಗೆ ಸಂಬಂಧಪಟ್ಟಂತೆ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಕೃಷಿ ಸಚಿವ ಚೆಲುವರಾಯಸ್ವಾಮಿ (Agriculture Minister Cheluvarayaswamy), ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Rural Development Minister Priyank Kharge) ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: Anna Bhagya : 114 ಬರಪೀಡಿತ ತಾಲೂಕುಗಳಿಗೆ ಇನ್ಮುಂದೆ 10 ಕೆಜಿ ಅಕ್ಕಿ: ಕೆ.ಎಚ್. ಮುನಿಯಪ್ಪ
ಬರ ಘೋಷಣೆ ದಿನದಿಂದ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸುವ ಹಾಗೂ ಕುಡಿಯುವ ನೀರು ಕೊರತೆ ಪೂರೈಸಲು ಬಾಡಿಗೆ ಬೋರ್‌ವೆಲ್ ಮೂಲಕ ನೀರು ಪೂರೈಸಲು ತೀರ್ಮಾನವನ್ನು ಈ ಸಭೆಯಲ್ಲಿ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸದ್ಯ 529 ಕೋಟಿ ರೂಪಾಯಿ ಲಭ್ಯ ಇದೆ. ಪ್ರಕೃತಿ ವಿಕೋಪ ನಿಧಿ ಹಾಗೂ ಆರ್‌ಡಿಪಿಆರ್ ಇಲಾಖೆಯಲ್ಲೂ ಹಣ ಇದೆ. ಇನ್ನು ಬರ ಪರಿಸ್ಥಿತಿ ಹಾಗೂ ಮಾನದಂಡಗಳ ಸರಳೀಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮೇವು, ಬಿತ್ತನೆ ಬೀಜ ಕಿಟ್ ವಿತರಿಸಲು ಪಶುಸಂಗೋಪನೆ ಇಲಾಖೆಗೆ 20 ಕೋಟಿ ರೂಪಾಯಿಯನ್ನು ವಿತರಣೆ ಮಾಡಲು ತೀರ್ಮಾನಿಸಲಾಗಿದೆ.
ಮರು ಸಮೀಕ್ಷೆಗೆ ತೀರ್ಮಾನ: ಸಚಿವ ಕೃಷ್ಣ ಬೈರೇಗೌಡ
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಶೇಕಡಾ 26ರಷ್ಟು ಮಳೆ ಕೊರತೆ ಇದೆ. ಆಗಸ್ಟ್ 22ರಂದು ಸಬ್ ಕಮಿಟಿ ಮಾಡಿ 113 ತಾಲೂಕುಗಳನ್ನು ಬರಪೀಡಿತ ಎಂದು ತೀರ್ಮಾನ ಮಾಡಿದ್ದೆವು. ಆದರೆ, ಕೇಂದ್ರ ಸರ್ಕಾರದ ಮಾನದಂಡದ ಅನುಸಾರ ಈಗ 62 ತಾಲೂಕುಗಳು ಮಾತ್ರ ಬರ ಘೋಷಣೆಗೆ ಅರ್ಹವಾಗಿವೆ. ಹೀಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಸಮೀಕ್ಷೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಇದು 113 ತಾಲೂಕಿಗೆ ಸಂಬಂಧಪಟ್ಟ ತೀರ್ಮಾನವಾಗಿದೆ. ಉಳಿದ 83 ತಾಲೂಕುಗಳಲ್ಲಿ ಕಳೆದ ತಿಂಗಳು ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಎರಡು ಕಡ್ಡಾಯ ಮಾನದಂಡದಂತೆ ಬರ ತಾಲೂಕುಗಳ ಪಟ್ಟಿಯಲ್ಲಿ ಇವುಗಳು ಸಹ ಸೇರಿಕೊಂಡಿವೆ. ಹೀಗಾಗಿ 134 ತಾಲೂಕುಗಳಲ್ಲಿ ಮತ್ತೆ ಬೆಳೆ ಸಮೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ವಾರದ ಒಳಗೆ ಬೆಳೆ ಸಮೀಕ್ಷೆ ಮುಗಿಸಿ ವರದಿ ಕೊಡಲು ಸೂಚಿಸಿದ್ದೇವೆ. ಹೀಗಾಗಿ ಈ 62 ತಾಲೂಕುಗಳ ಜತೆಗೆ ಈ ವಾರದಲ್ಲಿ ಕೊಡುವ ರಿಪೋರ್ಟ್ ಆಧರಿಸಿ ಬರ ತಾಲೂಕುಗಳ ಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಘೋಷಣೆಗೆ ಅಡ್ಡಿಯಾದ ಚಲುವರಾಯಸ್ವಾಮಿ!
ಈಗಿನ ವರದಿಯಂತೆ ಕೇಂದ್ರದ ಮಾನದಂಡದ ಅನುಸಾರ 62 ತಾಲೂಕುಗಳ ಹೆಸರನ್ನು ಬರ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧತೆ ನಡೆದಿತ್ತು. ಆದರೆ, ಸಭೆಯಲ್ಲಿ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯದ ಪರಿಸ್ಥಿತಿ ಬೇರೆಯೇ ಇದೆ. ಅಲ್ಲದೆ, ನಾನು ಖುದ್ದು ಹಲವು ಕಡೆ ಭೇಟಿ ನೀಡಿದ್ದೇನೆ. ಪರಿಸ್ಥಿತಿಗಳು ಬೇರೆಯೇ ಇದೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಸಮೀಕ್ಷೆ ನಡೆಸಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಇದರ ಜತೆಗೆ ಇನ್ನು ಮುಂದೆ ಯಾವ ಪ್ರದೇಶದಲ್ಲಿ ಮಳೆಯಾದರೂ ಆ ಪ್ರದೇಶಗಳನ್ನು ಬರ ಅಲ್ಲ ಎಂದು ಪರಿಗಣಿಸಲು ಅಧಿಕಾರಿಗಳು ಮುಂದಾಗಬಾರದು. ಕಾರಣ, ಈಗಾಗಲೇ ಬೆಳೆ ಬಿತ್ತುವ ಅವಧಿ ಮುಗಿದು ಹೋಗಿದೆ. ಬಿತ್ತನೆ ಮಾಡಿಯಾದ ಮೇಲೆ ಮಳೆ ಇಲ್ಲದೆ, ಬೆಳೆಗಳು ಒಣಗಿವೆ. ಈ ಹಿನ್ನೆಲೆಯಲ್ಲಿ ಇನ್ನು ಮಳೆಯಾಯಿತು ಎಂಬ ಕಾರಣಕ್ಕೆ ಆ ವಿಷಯ ಬರ ತಾಲೂಕು ಘೋಷಣೆಗೆ ಅಡ್ಡಿಯಾಗಬಾರದು. ಈ ವಿಷಯವನ್ನು ಎಲ್ಲ ಅಧಿಕಾರಿಗಳು ನೆನಪಿನಲ್ಲಿಡಬೇಕು ಎಂಬ ಸೂಚನೆಯನ್ನು ಈ ಸಭೆಯಲ್ಲಿ ನೀಡಲಾಗಿದೆ.
ಇದನ್ನೂ ಓದಿ: Karnataka Politics : ರಾಜ್ಯದಲ್ಲಿ ಮತ್ತೆ ತೇಜಸ್ವಿನಿ ಕಂಪನ; ಡಿ.ಕೆ. ಶಿವಕುಮಾರ್ ಭೇಟಿಯಿಂದ ಸಂಚಲನ!
ಬರ ತಾಲೂಕು ಘೋಷಣೆಯಾದರೆ?
ಬರ ತಾಲೂಕು ಎಂದು ಘೋಷಣೆಯಾದ ತಕ್ಷಣ, ಆ ಇಡೀ ತಾಲೂಕನ್ನು ಬರಪೀಡಿತ ಎಂದು ಪರಿಗಣಿಸಲಾಗುವುದಿಲ್ಲ. ಆ ತಾಲೂಕಿನ ಯಾವ ಭಾಗದಲ್ಲಿ ಬರ ಇದೆಯೋ ಅವುಗಳನ್ನು ಮಾತ್ರವೇ ಪರಿಗಣಿಸಲಾಗುವುದು. ಅವು ಮಾತ್ರ ಕೇಂದ್ರ ಸರ್ಕಾರದ ಮಾನದಂಡದ ಅನುಸಾರ ಪ್ರಯೋಜನಗಳನ್ನು ಪಡೆದುಕೊಳ್ಳಲಿದೆ.
-
ವೈರಲ್ ನ್ಯೂಸ್15 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
ಸುವಚನ4 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ20 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
ಪ್ರಮುಖ ಸುದ್ದಿ13 hours ago
Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ
-
South Cinema17 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
-
ದೇಶ24 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
-
ಬಾಲಿವುಡ್20 hours ago
Rashmika Mandanna: ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್ನಲ್ಲೇ ನಾಚಿ ನೀರಾದ ರಶ್ಮಿಕಾ!
-
ಕ್ರಿಕೆಟ್20 hours ago
Varanasi Stadium: ವಾರಾಣಸಿ ಕ್ರಿಕೆಟ್ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ