ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (Kannada Sahitya Parishat) 2021 ರಿಂದ 2023ನೇ ಸಾಲಿನ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಗೆ (Kandlur Girijamma and Narasimha Jogi Endowment Award), ರಂಗಕರ್ಮಿಗಳನ್ನು ಆಯ್ಕೆ ಮಾಡಿದೆ. ಕನ್ನಡ ನಾಟಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ನಾಡೋಜ. ಡಾ.ಮಹೇಶ ಜೋಶಿ (Dr. Mahesh Joshi) ತಿಳಿಸಿದ್ದಾರೆ.
ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಲಾಗಿದೆ. ಈ ಮೂಲಕ ಕನ್ನಡ ರಂಗಭೂಮಿಯಲ್ಲಿ ದುಡಿಯುತ್ತಿರುವ ಕಲಾವಿದರೊಬ್ಬರಿಗೆ ಪ್ರತಿ ವರ್ಷ ಗುರುತಿಸಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಈ ಪ್ರಶಸ್ತಿಯು ಐದು ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ದಾನಿಗಳ ಮೂಲ ಉದ್ದೇಶದಂತೆ ನಾಟಕ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ರಂಗ ಕಲಾವಿದರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಇದುವರೆಗೆ ಏಳು ಜನ ರಂಗ ಕಲಾವಿದರಿಗೆ ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷ ಪ್ರಶಸ್ತಿ ಪ್ರದಾನ ಮಾಡಲು ಆಗಿರಲಿಲ್ಲ. ಹೀಗಾಗಿ ಬಾಕಿ ಉಳಿದಿದ್ದ ದತ್ತಿ ಪ್ರಶಸ್ತಿಗಳನ್ನು ಈ ಬಾರಿ ಪ್ರದಾನ ಮಾಡಲಾಗುತ್ತಿದೆ ಎಂದು ಡಾ.ಮಹೇಶ ಜೋಶಿ ತಿಳಿಸಿದ್ದಾರೆ.
ಯಾರೆಲ್ಲ ಪ್ರಶಸ್ತಿಗೆ ಆಯ್ಕೆ?
2021ನೇ ಸಾಲಿಗೆ ಹಿರಿಯ ರಂಗ ಕರ್ಮಿ ಕಾಸರಗೋಡು ಚಿನ್ನ
2022ನೇ ಸಾಲಿಗೆ ರಂಗ ಕಲಾವಿದೆ ಭಾರತಿ ಬಿಜಾಪುರ
2023ನೇ ಸಾಲಿಗೆ ಹಿರಿಯ ನಾಟಕ ಕಲಾವಿದ ರಂಗಶ್ರೀ ರಂಗಸ್ವಾಮಿ
ಇದನ್ನೂ ಓದಿ: ಕಾರ್ಗಿಲ್‌ನಲ್ಲಿ ಹುತಾತ್ಮರಾದ ತಂದೆಯ ಆಸೆ ಈಡೇರಿಸಲು ಐಐಎಂ ಬಿಟ್ಟು ಭಾರತೀಯ ಸೇನಾ ಅಕಾಡೆಮಿ ಸೇರಿದ ಯುವಕ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.
ಕಲೆ ಸಾಹಿತ್ಯದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ