Site icon Vistara News

ಪುನೀತ್ ರಾಜಕುಮಾರ್‌ಗೂ ಮುನ್ನ ಕರ್ನಾಟಕ ರತ್ನ ಪ್ರಶಸ್ತಿ ಪಡೆದವರಾರು? ಇಲ್ಲಿದೆ ವಿವರ

Puneeth rajkumar karnataka ratna

ಬೆಂಗಳೂರು: ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ವಿಧಾನಸೌಧದಲ್ಲಿ ಪ್ರದಾನ ಮಾಡಲಾಗುವುದು ಎಂದು ಎಂದು ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಕುರಿತು ರಾಜಕುಮಾರ್‌ ಕುಟುಂಬಸ್ಥರ ಜತೆಗೆ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಇಲ್ಲಿಯವರೆಗೆ ಎಂಟು ಸಾಧಕರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

1. ರಾಷ್ಟ್ರಕವಿ ಕುವೆಂಪು ಅವರಿಗೆ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ೧೯೯೨ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

2. ಡಾ. ರಾಜಕುಮಾರ್‌ ಅವರಿಗೆ, ಚಲನಚಿತ್ರ ಕ್ಷೇತ್ರದ ಸಾಧನೆಗಾಗಿ 1992ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

3. ಎಸ್‌. ನಿಜಲಿಂಗಪ್ಪ ಅವರಿಗೆ, ರಾಜಕೀಯ ಕ್ಷೇತ್ರದ ಸಾಧನೆಗಾಗಿ 1999ರಲ್ಲಿ ಗೌರವಿಸಲಾಗಿದೆ.

4. ಪ್ರೊ. ಸಿ.ಎನ್‌. ಆರ್‌. ರಾವ್‌ ಅವರಿಗೆ ವಿಜ್ಞಾನ ಕ್ಷೇತ್ರದ ಸಾಧನೆಗಾಗಿ 2000ನೇ ಇಸವಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾವ್‌ ಅವರಿಗೆ ನಂತರದಲ್ಲಿ ಭಾರತರತ್ನ ಗೌರವವನ್ನು ಕೇಂದ್ರ ಸರ್ಕಾರ ನೀಡಿದೆ.

5. ಪಂಡಿತ್‌ ಭೀಮಸೇನ ಜೋಶಿ ಅವರಿಗೆ ಸಂಗೀತ ಕ್ಷೇತ್ರದ ಸಾಧನೆಗಾಗಿ 2004ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

6. ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ 2006ರಲ್ಲಿ ಪ್ರಶಸ್ತಿ ನೀಡಲಾಗಿದೆ.

7. ಡಾ. ದೇ. ಜವರೇ ಗೌಡರಿಗೆ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ 2008ರಲ್ಲಿ ಪ್ರಶಸ್ತಿ ನೀಡಲಾಗಿದೆ.

8. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಸಮಾಜಸೇವೆ, ಗ್ರಾಮೀಣಾಭಿವೃದ್ಧಿ ಕ್ಷೇತ್ರದ ಕೊಡುಗೆಗಾಗಿ 200೯ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ನವೆಂಬರ್‌ 1ರಂದು ಪುನೀತ್‌ ರಾಜಕುಮಾರ್‌ ಈ ಗೌರವಕ್ಕೆ ಪಾತ್ರರಾಗುತ್ತಿದ್ದಾರೆ. ಮರಣೋತ್ತರವಾಗಿ ಪ್ರಶಸ್ತಿ ಪಡೆಯುತ್ತಿರುವವರು ಇದೇ ಮೊದಲು. ತಮ್ಮ ತಂದೆ ಡಾ. ರಾಜಕುಮಾರ್‌ ಅವರು ಕರ್ನಾಟಕ ರತ್ನ ಪಡೆದ 20 ವರ್ಷದ ನಂತರ ಪುನೀತ್‌ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

ಇದನ್ನೂ ಓದಿ | ನ.1ರಂದು ಪುನೀತ್‌ ರಾಜಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ, ಇದಕ್ಕಾಗಿ ಸಕಲ ಸಿದ್ಧತೆ ಎಂದ ಬೊಮ್ಮಾಯಿ

Exit mobile version