Site icon Vistara News

ಕವಿ ಬಿ.ಆರ್. ಲಕ್ಷ್ಮಣರಾವ್‌ಗೆ ಸಾಹಿತ್ಯ ಕಲ್ಪತರು ಪ್ರಶಸ್ತಿ

B R Laxmana Rao

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರಿನ ಬಯಲುಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ ನೀಡುವ 2022ನೇ ಸಾಲಿನ ʼಸಾಹಿತ್ಯ ಕಲ್ಪತರುʼ ಪ್ರಶಸ್ತಿ ಕವಿ ಬಿ.ಆರ್.ಲಕ್ಷ್ಮಣರಾವ್‌ ಅವರಿಗೆ ಸಂದಿದೆ.

ಹಿರಿಯ ಲೇಖಕರ ಸಾಹಿತ್ಯ ಸಾಧನೆಗಾಗಿ ನೀಡಲಾಗುವ ಈ ಪ್ರಶಸ್ತಿಯ ಮೊದಲ ವರ್ಷದ ಗೌರವ ಬಿಆರ್‌ಎಲ್‌ ಪಾಲಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿ ಫಲಕ ಹಾಗೂ ಸನ್ಮಾನವನ್ನು ಒಳಗೊಂಡಿದೆ. ತಿಪಟೂರು ನಗರದ ಶ್ರೀ ಸತ್ಯ ಗಣಪತಿ ಅಮೃತ ಮಹೋತ್ಸವ ಭವನದಲ್ಲಿ ಜೂ.4ರಂದು ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಮಾಜಿ ಶಾಸಕ ಕೆ. ಷಡಕ್ಷರಿ, ಹಿರಿಯ ಪತ್ರಕರ್ತ ವೆಂಕಟನಾರಾಯಣ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಬಾನು ಪ್ರಶಾಂತ್ ತಿಳಿಸಿದ್ದಾರೆ.

ಗೋಪಿ ಮತ್ತು ಗಾಂಡಲೀನ, ಟುವಟಾರ ಸೇರಿದಂತೆ ಹತ್ತು ಹಲವು ಕವನ ಸಂಕಲನಗಳನ್ನು, ಕತಾ ಸಂಕಲನ ಹಾಗೂ ವಿಮರ್ಶಾ ಕೃತಿಗಳನ್ನು ಕನ್ನಡಕ್ಕೆ ನೀಡಿರುವ ಬಿಆರ್‌ಎಲ್‌ ಅವರು ತಾರುಣ್ಯ ಸೂಸುವ ತಮ್ಮ ಲಯಬದ್ಧ ಪದ್ಯಗಳಿಂದಾಗಿ ಪ್ರಖ್ಯಾತರು.

ಇದನ್ನೂ ಓದಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ?

Exit mobile version