ಬೆಂಗಳೂರು: ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2024ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts) ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ.
ಇಪ್ಪತ್ತನೇ ವರ್ಷಕ್ಕೆ ಕಾಲಿಡುತ್ತಿರುವ ಟೊಟೊ ಪುರಸ್ಕಾರವು ಈ ಸಂದರ್ಭದಲ್ಲಿ ಪ್ರಶಸ್ತಿಯ ನಗದು ಬಹುಮಾನದ ಮೊತ್ತವನ್ನು 60,000 ರೂಪಾಯಿಗಳಿಗೆ ಹೆಚ್ಚಿಸಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು ಹಾಗೂ 18ರಿಂದ 26 ವರ್ಷ ವಯಸ್ಸಿನವರಾಗಿರಬೇಕು.
ಪ್ರವೇಶಗಳನ್ನು ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಕಳಿಸಬಹುದು. ಈ/ ಮೂರು/ ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಈ ಆಯ್ಕೆಯನ್ನು ಪ್ರತಿವರ್ಷದಂತೆ ಕನ್ನಡದ ಹಿರಿಯ ಬರಹಗಾರರ ಸಮಿತಿಯು ಮಾಡಲಿದೆ. ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: 20 ಸಪ್ಟೆಂಬರ್, 2023, ವಿವರಗಳಿಗಾಗಿ http://totofundsthearts.blogspot.com
ಟಿ.ಎಫ್.ಎ. ಸಂಸ್ಥೆಯು ಆಂಗೀರಸ ‘ಟೊಟೊ’ ವೆಲ್ಲಾನಿಯ ಸ್ಮರಣಾರ್ಥ 2004 ರಲ್ಲಿ ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ತರುಣ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳು ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳುವಲ್ಲಿ ಉತ್ತೇಜನ ಸಿಗಲೆಂಬುದು ಇದರ ಆಶಯವಾಗಿದೆ.
ಇದನ್ನೂ ಓದಿ: Salman Rushdie: ಭಾರತೀಯ ಮೂಲದ ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿಗೆ ಪ್ರತಿಷ್ಠಿತ ಜರ್ಮನ್ ಶಾಂತಿ ಪುರಸ್ಕಾರ