ಏನೋ ಮಗ ನೀರು ಕೊಡೋ ಅಂದಿದ್ದಕ್ಕೇ ಚಾಲಕನ ಕೊಲೆ: ನನ್ನೇ ಮಗ ಅಂತೀಯಾ ಅಂತ ರೊಚ್ಚಿಗೆದ್ದು ಮರ್ಡರ್‌! - Vistara News

ಕರ್ನಾಟಕ

ಏನೋ ಮಗ ನೀರು ಕೊಡೋ ಅಂದಿದ್ದಕ್ಕೇ ಚಾಲಕನ ಕೊಲೆ: ನನ್ನೇ ಮಗ ಅಂತೀಯಾ ಅಂತ ರೊಚ್ಚಿಗೆದ್ದು ಮರ್ಡರ್‌!

ಕೆಟ್ಟಾ ಕೊಳಕು ಭಾಷೆಗಳನ್ನು ಬಳಸುತ್ತಾ ಇದು ನಮ್ಮ ಭಾಷೆ ಎಂದು ಹೇಳಿ ಸಮರ್ಥನೆ ಮಾಡಿಕೊಳ್ಳುವವರಿಗೆ ಇದು ಒಳ್ಳೆಯ ಪಾಠ.. ಏನೋ ಮಗಾ ಎಂಬ ಪದವೇ ಒಬ್ಬನ ಕೊಲೆಗೆ ಕಾರಣವಾಗಿದೆ.

VISTARANEWS.COM


on

siddique
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತುಂಬ ಕೆಟ್ಟ ಭಾಷೆಯಲ್ಲಿ ಮಾತನಾಡುವುದು, ಅಶ್ಲೀಲವಾಗಿ ಮಾತನಾಡುವುದು ಈಗೀಗ ಕಾಮನ್‌ ಆಗಿದೆ. ಅದರಲ್ಲೂ ಬೆಂಗಳೂರು ಮತ್ತು ಉತ್ತರ ಕರ್ನಾಟಕದಲ್ಲಿ ಇದು ಗ್ರಾಮ್ಯ ಎಂಬ ನೆಲೆಯಲ್ಲಿ ಸ್ವೀಕಾರಾರ್ಹವಾಗುತ್ತದೆ. ಆದರೆ, ಈ ಕೆಟ್ಟ ಮಾತುಗಳು ಯಾವಾಗ ತಿರುಗಿಬೀಳುತ್ತವೆ ಎಂದು ಹೇಳಲಾಗದು.

ಜಾಲಹಳ್ಳಿ ಕ್ರಾಸ್‌ನಲ್ಲಿ ಅಂಥಹುದೇ ಘಟನೆ ನಡೆದಿದೆ. ಸಾಮಾನ್ಯವಾಗಿ ಬಳಸುವ ʻಏನ್‌ ಮಗಾʼ ಎನ್ನುವ ಒಂದು ಮಾತೇ ಕೊಲೆಗೆ ಕಾರಣವಾಗಿದೆ.

ಸಿದ್ದಿಕ್‌ (೨೫) ವೃತ್ತಿಯಲ್ಲಿ ಚಾಲಕ. ನಿನ್ನೆ ರಾತ್ರಿ ಸುಮಾರು ೧೧.೩೦ರ ಹೊತ್ತಿಗೆ ಜಾಲಹಳ್ಳಿ ಕ್ರಾಸ್‌ ಕಡೆಗೆ ಬಂದಿದ್ದಾನೆ. ಅಲ್ಲಿ ಮತ್ತೊಬ್ಬ ಆಟೊ ಚಾಲಕ ಅಜಯ್ ಸಿಕ್ಕಿದ್ದಾನೆ. ಸಿದ್ದಿಕ್‌ಗೆ ಬಾಯಾರಿಕೆಯಾಗಿತ್ತು. ನೀರು ಬೇಕಾಗಿತ್ತು.

ʻʻಏನೋ ಮಗಾ ನೀರು ಇದ್ರೆ ಕೊಡೋʼಅಂತ ಸಿದ್ದಿಕ್‌ ಕೇಳಿದ್ದಾನೆ. ಅದರಿಂದ ಅಜಯ್‌ ಸಿಟ್ಟಿಗೆದ್ದಿದ್ದಾನೆ. ʻʻಏನೋ ಮಗಾ ಅಂತೀಯʼ ಅಂತ ಕೇಳಿ ಚಾಕುವಿನಿಂದ ಸಿದ್ದಿಕ್ ಗೆ ಇರಿದೇ ಬಿಟ್ಟಿದ್ದಾನೆ ಅಜಯ್. ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಯಲಿಲ್ಲ.

ನಿಜವಾಗಿ ಅಜಯ್‌ಗೆ ಮಗಾ ಅನ್ನುವ ಪದವೇ ಸಿಟ್ಟು ತರಿಸಿತೋ? ಅಥವಾ ಅವರಿಬ್ಬರ ಮಧ್ಯೆ ಬೇರೆ ಏನಾದರೂ ಜಗಳಗಳು ಇದ್ದುವಾ ಗೊತ್ತಿಲ್ಲ. ಅಂತೂ ಮಗಾ ಎನ್ನುವ ಪದವೇ ಕಾರಣವಾಗಿ ಕೊಲೆ ನಡೆದಿರುವುದಂತೂ ನಿಜ. ನಾವು ಸಹಜ ಎಂಬಂತೆ ಬಳಸುವ ಪದಗಳು ಯಾವಾಗ ಯಾರನ್ನು ಕೆರಳಿಸಿ ಬಿಡುತ್ತವೆ ಎಂದು ಹೇಳಲಾಗದು. ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಜಯ್‌ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ | ಹಳೇ ವೈಷಮ್ಯ, ರೌಡಿಸಂನಲ್ಲಿ ಹವಾ ಮೇಂಟೇನ್ ಮಾಡ್ಬೇಕು ಅಂತ ಕೊಲೆ ಮಾಡಿದ ಪಾಪಿಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Abbi Falls: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ದುರಂತ ನಡೆದಿದೆ.

VISTARANEWS.COM


on

Abbi Falls
Koo

ಶಿವಮೊಗ್ಗ: ಸೆಲ್ಫಿ ಕ್ರೇಜ್‌ಗೆ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ. ಫಾಲ್ಸ್‌ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದು ಪ್ರವಾಸಿಗ ಮೃತ ಪಟ್ಟಿದ್ದಾನೆ.

ಬಳ್ಳಾರಿ ಮೂಲದ ವಿನೋದ್ (26) ಮೃತ ಯುವಕ. ಬೆಂಗಳೂರಿನಿಂದ ಪ್ರವಾಸಕ್ಕೆಂದು 12 ಯುವಕರ ತಂಡ ಅಬ್ಬಿ ಫಾಲ್ಸ್‌ಗೆ ಬಂಇತ್ತು. ಈ ವೇಳೆ ಜಲಪಾತ ಬಳಿ ನಿಂತು ಯುವಕ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕೋಟೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ

ಕೊಡಗು: ಜಿಲ್ಲೆಯಲ್ಲಿ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣ ಮತ್ತೆ ಮರುಕಳಿಸಿದೆ. ಮಾದಪುರ ಸಮೀಪದ ಕೋಟೆ ಬೆಟ್ಟದಲ್ಲಿ ನಡೆದ ಘಟನೆ ನಡೆದಿದ್ದು, ಪ್ರವಾಸಿಗರ ಮೇಲೆ ಹಲ್ಲೆ, ದೌರ್ಜನ್ಯದಿಂದ ಮಕ್ಕಳು, ಮಹಿಳೆಯರು ಭಯಭೀತರಾಗಿದ್ದಾರೆ.

ಸೋಮವಾರಪೇಟೆ ತಾಲೂಕಿನ ಕೋಟೆ (Kote Betta) ಬೆಟ್ಟ ವೀಕ್ಷಣೆಗೆ ಪುತ್ತೂರು ಮೂಲದ ಕುಟುಂಬ ಬಂದಿತ್ತು. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದು, ಚಿನ್ನದ ಸರವನ್ನೂ ಎಗರಿಸಿ ಪರಾರಿಯಾಗಿದ್ದಾರೆ. ಪ್ರವಾಸಿಗರು ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Bomb Threat: ದಿಲ್ಲಿ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ; ಬಾಲಕ ಅರೆಸ್ಟ್‌

ವೇಗವಾಗಿ ಬಂದು ಬೈಕ್‌ಗೆ ರಭಸವಾಗಿ ಗುದ್ದಿದ ಬಸ್‌; ನಜ್ಜುಗುಜ್ಜಾದ ಸವಾರ

ಶಿವಮೊಗ್ಗ: ಭೀಕರ ರಸ್ತೆ ಅಪಘಾತದಲ್ಲಿ (Road Accident) ಯುವಕನೊಬ್ಬ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಬಸ್‌ವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಸ್‌ನಡಿ ಸಿಲುಕಿದ ಸವಾರನ ಕರುಳು ಹೊರಬಂದಿತ್ತು. ಶಿವಮೊಗ್ಗ (Shivamogga News) ನಗರದ ಊರುಗಡೂರು ಸರ್ಕಲ್ ಬಳಿ ಈ ಘಟನೆ ನಡೆದಿದೆ.

ಸಂತೋಷ್ (23) ಮೃತ ದುರ್ದೈವಿ. ರಾಜಹಂಸ ಬಸ್‌ ಬೆಂಗಳೂರಿನಿಂದ ಬರುತ್ತಿತ್ತು. ಬೈಕ್‌ನಲ್ಲಿದ್ದ ಸಂತೋಷ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಸಮೇತ ಬಸ್‌ನಡಿ ಸಿಲುಕಿದ ಸಂತೋಷ್‌ ಸ್ಥಳದಲ್ಲೇ ಮೃತಪಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಶ್ಚಿಮ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್ಸಿನಡಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪಶ್ಚಿಮ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಾಹನಗಳನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

Continue Reading

ಬೆಂಗಳೂರು

Music Academy Bangalore : ಮ್ಯೂಜಿಗಲ್​ನಿಂದ ಅಮೃತಹಳ್ಳಿಯಲ್ಲಿ ಮ್ಯೂಸಿಕ್ ಅಕಾಡೆಮಿ ಪ್ರಾರಂಭ

Music Academy Bangalore : ಮ್ಯೂಜಿಗಲ್ ಸಂಗೀತ ಶಿಕ್ಷಣದಲ್ಲಿ 360-ಡಿಗ್ರಿ ಫ್ರೇಮ್ ವರ್ಕ್ ಅನ್ನು ಪೂರೈಸುತ್ತಿದ್ದು ಸಂಗೀತ ಕಲಿಕೆ ಮತ್ತು ಬೋಧನೆಯ ವ್ಯವಸ್ಥೆಯನ್ನು ಆನ್ಲೈನ್, ಆಫ್ಲೈನ್ ಮತ್ತು ಸಂಗೀತ ಸಾಧನಗಳ ಮಳಿಗೆಯನ್ನು ಒಂದೇ ಪ್ಲಾಟ್ ಫಾರಂಗೆ ಅಳವಡಿಸುವ ಮೂಲಕ ಸುವರ್ಣ ಮಾನದಂಡ ರೂಪಿಸುತ್ತಿದೆ.

VISTARANEWS.COM


on

Music Academy Bangalore
Koo

ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಸಂಗೀತ ಶಿಕ್ಷಣದ ಪ್ಲಾಟ್ ಫಾರಂ ಮ್ಯೂಜಿಗಲ್, ಬೆಂಗಳೂರಿನ ಜಕ್ಕೂರು ಲೇಔಟಿನ ಅಮೃತಹಳ್ಳಿಯಲ್ಲಿ ತನ್ನ 11ನೇ ಅತ್ಯಾಧುನಿಕ ಮ್ಯೂಸಿಕ್ ಅಕಾಡೆಮಿ ಪ್ರಾರಂಭಿಸಿದೆ (Music Academy Bangalore). ಈ ಅಕಾಡೆಮಿಯು 2200 ಚದರ ಅಡಿ ವಿಸ್ತೀರ್ಣ ಹೊಂದಿದೆ ಮತ್ತು ಗಾಯನ ಮತ್ತು ಇನ್ಸ್ ಟ್ರುಮೆಂಟಲ್ ಸಂಗೀತ ಕಲಿಯಲು ಪೂರಕ ವಾತಾವರಣ ಹೊಂದಿದೆ. ಖ್ಯಾತ ಹಿನ್ನೆಲೆ ಗಾಯಕ ನಾಗರಂಜನಿ ರಘು ಮುಖ್ಯ ಅತಿಥಿಯಾಗಿದ್ದರು ಮತ್ತು ಮ್ಯೂಜಿಗಲ್ ಸಂಸ್ಥಾಪಕ ಡಾ.ಲಕ್ಷ್ಮೀನಾರಾಯಣ ಯೆಲೂರಿ ಗೌರವ ಅತಿಥಿಗಳಾಗಿದ್ದರು.

500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಹಲವು ಬ್ಯಾಚ್ ಗಳನ್ನು ಹೊಂದಿರುವ ಈ ಮ್ಯೂಸಿಕ್ ಅಕಾಡೆಮಿಯು ಪಿಯಾನೊ, ಕೀಬೋರ್ಡ್, ಗಿಟಾರ್, ಡ್ರಮ್ಸ್, ಕರ್ನಾಟಕ ಸಂಗೀತ, ಹಿಂದೂಸ್ಥಾನಿ, ಪಾಶ್ಚಿಮಾತ್ಯ, ವಯೊಲಿನ್ ಮತ್ತು ಉಕುಲೆಲೆಯಲ್ಲಿ ಪಾಠಗಳನ್ನು ನೀಡುತ್ತದೆ. ಉದ್ಘಾಟನಾ ತಿಂಗಳಲ್ಲಿ ಮ್ಯೂಜಿಗಲ್ ನೋಂದಾಯಿತರಾದ ಎಲ್ಲರಿಗೂ 1 ತಿಂಗಳು ಉಚಿತ ಸಂಗೀತ ಶಿಕ್ಷಣ ನೀಡುತ್ತದೆ.

ಮ್ಯೂಜಿಗಲ್ ಸಂಗೀತ ಶಿಕ್ಷಣದಲ್ಲಿ 360-ಡಿಗ್ರಿ ಫ್ರೇಮ್ ವರ್ಕ್ ಅನ್ನು ಪೂರೈಸುತ್ತಿದ್ದು ಸಂಗೀತ ಕಲಿಕೆ ಮತ್ತು ಬೋಧನೆಯ ವ್ಯವಸ್ಥೆಯನ್ನು ಆನ್ಲೈನ್, ಆಫ್ಲೈನ್ ಮತ್ತು ಸಂಗೀತ ಸಾಧನಗಳ ಮಳಿಗೆಯನ್ನು ಒಂದೇ ಪ್ಲಾಟ್ ಫಾರಂಗೆ ಅಳವಡಿಸುವ ಮೂಲಕ ಸುವರ್ಣ ಮಾನದಂಡ ರೂಪಿಸುತ್ತಿದೆ.

ಇದನ್ನೂ ಓದಿ: Olympic Day : 900 ಮಕ್ಕಳೊಂದಿಗೆ ಒಲಿಂಪಿಕ್ ದಿನ ಸಂಭ್ರಮಿಸಿದ ರಿಲಯನ್ಸ್​ಫೌಂಡೇಶನ್​

ಮ್ಯೂಜಿಗಲ್ ಅಕಾಡೆಮಿ ಪ್ರಾರಂಭ ಕುರಿತು ಅಕಾಡೆಮಿ ಸಂಸ್ಥಾಪಕ ಡಾ.ಲಕ್ಷ್ಮೀನಾರಾಯಣ ಯೆಲೂರಿ, “ಮ್ಯೂಜಿಗಲ್ ಅಕಾಡೆಮಿಯು ಸಂಗೀತ ಶಿಕ್ಷಣವನ್ನು ಅತ್ಯಾಧುನಿಕ ಕಲಿಕಾ ಕೇಂದ್ರದ ಮೂಲಕ ಪ್ರಜಾಸತ್ತೀಯಗೊಳಿಸುವ ಉದ್ದೇಶ ಹೊಂದಿದೆ. ಇದು ಸಂಗೀತದಲ್ಲಿ ಅತ್ಯುತ್ತಮ ಕಲಿಕೆ ಮತ್ತು ಬೋಧನೆಯ ಅನುಭವ ನೀಡುತ್ತದೆ. ಇದು ಪರಿಣಿತ ಶಿಕ್ಷಕರಿಂದ ಭಾರತೀಯ ಶಾಸ್ತ್ರೀಯ ಮತ್ತು ಪಾಶ್ಚಿಮಾತ್ಯ ಸಂಗೀತದಲ್ಲಿ ಕಲಿಕೆ ಮತ್ತು ಬೋಧನೆ ನೀಡುತ್ತದೆ. ಇದರೊಂದಿಗೆ ರಚನಾತ್ಮಕ ಪಠ್ಯಕ್ರಮ, ನಿಯಮಿತ ಮೌಲ್ಯಮಾಪನ, ಪ್ರಮಾಣೀಕರಣ, ಅನುಕೂಲಕರ ಶುಲ್ಕತ ಪಾವತಿ, ತರಬೇತಿ ಪಡೆದ ಶಿಕ್ಷಕರು ಮತ್ತು ಸುಲಭ ಲಭ್ಯತೆ ಇದನ್ನು ಕಲಿಯುವವರ ಕೇಂದ್ರವಾಗಿಸಿದೆ” ಎಂದರು.
ಭಾರತ, ಯು.ಎಸ್.ಎ., ಯು.ಕೆ., ಆಸ್ಟ್ರೇಲಿಯಾ ಮತ್ತು ಯು.ಎ.ಇ.ಗಳಲ್ಲಿ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ 400+ ತರಬೇತಿ ಪಡೆದ ಸಂಗೀತ ಶಿಕ್ಷಕರನ್ನು ಹೊಂದಿದ್ದು 40,000ಕ್ಕೂ ಹೆಚ್ಚು ತರಗತಿಗಳನ್ನು ಯಶಸ್ವಿಯಾಗಿ ಪೂರೈಸಿರುವ ಮ್ಯೂಜಿಗಲ್ ವಿದ್ಯಾರ್ಥಿಗಳಿಗೆ ಅವರ ಸಂಗೀತದ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ನೆರವಾಗುತ್ತದೆ.

ಭಾರತದಲ್ಲಿ ಸಾಂಪ್ರದಾಯಿಕ ಸಂಗೀತ ಶಿಕ್ಷಣವು ನರೆಹೊರೆಯ ಸಂಗೀತ ಶಿಕ್ಷಣ ಕೇಂದ್ರಗಳಿಗೆ ಸೀಮಿತವಾಗಿದೆ ಮತ್ತು ಕೆಲವೇ ಪ್ರದೇಶಗಳಿಗೆ ಮೀಸಲಾಗಿದೆ. ಮ್ಯೂಜಿಗಲ್ ಅದನ್ನು ಮೀರಿ ಎಲ್ಲರಿಗೂ ಸಂಗೀತ ಶಿಕ್ಷಣ ದೊರೆಯುವಂತೆ ಮಾಡುತ್ತಿದೆ. ಮ್ಯೂಜಿಗಲ್ ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳಿಂದ ಮತ್ತು ಪರಿಣಿತ ಶಿಕ್ಷಕರಿಂದ ಸಮಗ್ರವಾದ ಸಂಗೀತ ಶಿಕ್ಷಣ ನೀಡುತ್ತದೆ.

Continue Reading

ಕರ್ನಾಟಕ

Suraj Revanna Case: ಸಲಿಂಗ ಕಾಮ ಕೇಸ್‌; ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

Suraj Revanna Case: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲು 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರು ಸೂಚಿಸಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna Case) 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಸೂರಜ್‌ನನ್ನು ನಗರದ ಕೋರಂಮಗಲದ 42ನೇ ಎಸಿಎಂಎಂ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ಜಡ್ಜ್‌ ಸೂಚಿಸಿದ್ದಾರೆ.

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಜೂನ್‌ 22ರಂದು ರಾತ್ರಿ ಎಫ್‌ಐಆರ್‌ ದಾಖಲಾಗಿತ್ತು. ನಂತರ ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಂತ್ರಸ್ತನ ವಿರುದ್ಧ ಸಾಕ್ಷ್ಯ ನೀಡಲು ಸೂರಜ್, ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ತೆರಳಿದ್ದಾಗ ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಬಂಧಿಸಿದ್ದರು. ಇದೀಗ ಸೂರಜ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ!

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದರು. ಬಳಿಕ ಜೂನ್‌ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಹಿತ್ತು.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಸಂತ್ರಸ್ತ ಆರೋಪಿಸಿದ್ದರು.

ಪ್ರತಿ ದೂರು

ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿತ್ತು. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಜೂನ್‌ 21ರಂದು ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ | Suraj Revanna Case: ಸೂರಜ್ ಪ್ರಕರಣದ ತನಿಖೆ ಹೊಣೆಯೂ ಬಿ.ಕೆ. ಸಿಂಗ್ ಹೆಗಲಿಗೆ

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿತ್ತು. ಸದ್ಯ ಸೂರಜ್‌ ಪರ, ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್‌ ಕೂಡ ನಾಪತ್ತೆಯಾಗಿದ್ದಾನೆ. ಈತ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗುತ್ತಿದೆ.

Continue Reading

ಕರ್ನಾಟಕ

Physical Abuse: ಲೈಂಗಿಕ ದುರ್ಬಳಕೆ ಆರೋಪ; ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ

Physical Abuse: ಶಿವಮೊಗ್ಗದಲ್ಲಿ ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಬಿಜೆಪಿ ಸಕ್ರಿಯ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

BJP Worker
Koo

ಶಿವಮೊಗ್ಗ: ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ (Physical Abuse) ಮಾಡಿಕೊಂಡ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂಧನವಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಇನ್ನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಬಿಜೆಪಿ ಸಕ್ರಿಯ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಬಂಧಿತ ಆರೋಪಿ. ಮಹಿಳೆಯೊಬ್ಬರು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿರುವ ಅರುಣ್ ಕುಗ್ವೆಯನ್ನು ಪೊಲೀಸರು ಬಂಧಿಸಿದ್ದಾರೆ.

ಜೂ. 28ಕ್ಕೆ ಅರುಣ್ ಕುಗ್ವೆ ಮದುವೆ ಫಿಕ್ಸ್ ಆಗಿತ್ತು. ಮುಂದಿನ 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಅರುಣ್‌ನನ್ನು ಇದೀಗ ಪೊಲೀಸರು ಬಂಧಿಸಿ, ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ | Mayur Mohite: ಶಾಸಕನ ಸೋದರಳಿಯ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಯುವಕ ಸಾವು

ಅಂತರ್ಜಾತಿ ವಿವಾಹಕ್ಕೆ ಪ್ರಿಯಕರನ ಪೋಷಕರು ಅಡ್ಡಿ; ಕಟ್ಟಡದಿಂದ ಜಿಗಿದು ಯುವತಿ ಸೂಸೈಡ್‌

Love Failure

ರಾಯಚೂರು: ರಾಯಚೂರಿನಲ್ಲಿ ಅಂತರ್ಜಾತಿ ವಿವಾಹಕ್ಕೆ (Love Failure) ಯುವಕನ ಕಡೆಯವರ ಅಡ್ಡಿ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಸಾಂತ್ವನ ಕೇಂದ್ರದ ಹಾಸ್ಟೆಲ್‌ ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಅನುರಾಧ (18) ಆತ್ಮಹತ್ಯೆ ಮಾಡಿಕೊಂಡವಳು.

ರಾಯಚೂರು ನಗರದ ಜಲಾಲ್ ನಗರದ ನಿವಾಸಿಯಾದ ಅನುರಾಧ, ವಿನಯ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಈ ನಡುವೆ ಇವರಿಬ್ಬರು ಮದುವೆಯಾಗಲು ಸಹ ನಿಶ್ಚಯಿಸಿದ್ದರು. ಆದರೆ ಯುವತಿ ಕೆಳಜಾತಿಯವಳು ಎಂಬ ವಿಚಾರಕ್ಕೆ ವಿನಯ್‌ ಕುಟುಂಬಸ್ಥರು ಕ್ಯಾತೆ ತೆಗೆದಿದ್ದರು ಎನ್ನಲಾಗಿದೆ.

ಈ ವಿಚಾರ ತಿಳಿದು ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಯುವಕನ ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಇದರಿಂದ ಮನನೊಂದ ಅನುರಾಧ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ | Suraj Revanna Case: ಸೂರಜ್‌ʼಗೇʼ ಸಂಕಷ್ಟ; ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಆಪ್ತ ಪರಾರಿ!

ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಮೇಲಿಂದ ಬಿದ್ದ ರಭಸಕ್ಕೆ ಅನುರಾಧ ಮೃತಪಟ್ಟಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ42 mins ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ1 hour ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ3 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ4 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌