Rajakaluve Encroachment | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಜೆಸಿಬಿ, ಸರ್ವೇಯರ್ ಕೊರತೆ - Vistara News

ಪ್ರಮುಖ ಸುದ್ದಿ

Rajakaluve Encroachment | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಜೆಸಿಬಿ, ಸರ್ವೇಯರ್ ಕೊರತೆ

ಸೆಪ್ಟೆಂಬರ್‌ 12ರಂದು ಆರಂಭಗೊಂಡ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮೂರೇ ದಿನಕ್ಕೆ ಕಾಲಿಟ್ಟಿದೆ. ಆದರೆ, ಅಧಿಕಾರಿಗಳಿಗೆ ಸರ್ವೇಯರ್‌ ಮತ್ತು ಜೆಸಿಬಿ ಕೊರತೆ ಎದುರಾಗಿದೆ. ಮೂರನೇ ದಿನ ಆಪರೇಷನ್‌ ಬುಲ್ಡೋಜರ್‌ ಎಲ್ಲಿಲ್ಲ ಕಾರ್ಯಾಚರಣೆ (Rajakaluve Encroachment) ಆಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

enforcement
ಮೂರನೇ ದಿನದ ಒತ್ತುವರಿ ತೆರವು ಕಾರ್ಯಾಚರಣೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ (Rajakaluve Encroachment) ಮೂರನೇ ದಿನಕ್ಕೆ ಕಾಲಿಟ್ಟಿದೆ. ಬುಲ್ಡೋಜರ್ ಆಪರೇಷನ್‌ನ 3ನೇ ಹಂತಕ್ಕೆ ಕಂದಾಯ ಇಲಾಖೆಗೆ ಜೆಸಿಬಿ ಮತ್ತು ಸರ್ವೇಯರ್ ಕೊರತೆ ಎದುರಾಗಿದ್ದು ತೆರವು ಕಾರ್ಯಾಚರಣೆಗೆ ಭಾರಿ ಹಿನ್ನಡೆ ಆಗಿದೆ.

ಸರ್ವೇಯರ್ಸ್ ಕಡಿಮೆ ಇರುವುದರಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಕೆಲಸ ಕುಂಟುತ್ತಾ ಸಾಗಿದೆ. ಈಗಾಗಲೇ 100ಕ್ಕೂ ಹೆಚ್ಚು‌ ಮನೆಗಳಿಗೆ ನೋಟಿಸ್ ಜಾರಿ ಮಾಡಿರುವ ಕಂದಾಯ ಇಲಾಖೆ, ಮನೆ ಖಾಲಿ ಮಾಡುವಂತೆ ಮೌಖಿಕ ಸೂಚನೆ ನೀಡಿದ್ದಾರೆ.

ಮಾರ್ಕಿಂಗ್‌ ಜಾಗದಲ್ಲಿ ಜೆಸಿಬಿ ಗರ್ಜನೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯ ಶಾಂತಿನಿಕೇತನ ಲೇಔಟ್, ಸ್ಪೈಸಿ ಗಾರ್ಡನ್, ಪಾಪಯ್ಯ ರೆಡ್ಡಿ ಲೇಔಟ್ ಹಾಗೂ ಚೆಲ್ಲಘಟ್ಟದ ಬಳಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದೆಂದು ಮಹದೇವಪುರ ವಲಯದ ಮುಖ್ಯ ಅಭಿಯಂತರರಾದ ಬಸವರಾಜ ಕಬಾಡೆ ರವರು ತಿಳಿಸಿದ್ದಾರೆ. ಮಂಗಳವಾರ ಮಹದೇವಪುರ ವಲಯ ಹಾಗೂ ಯಲಹಂಕ ವಲಯ ಸೇರಿದಂತೆ ಒಟ್ಟು 18 ಒತ್ತುವರಿಗಳನ್ನು ತೆರವುಗೊಳಿಸಲಾಗಿತ್ತು.

ಒತ್ತುವರಿ ಜಾಗದಲ್ಲಿ ಪ್ರತಿಷ್ಠಿತರ ಬಿಲ್ಡಿಂಗ್ ಇದ್ದರೆ ಡೋಂಟ್ ಟಚ್ !

ಪ್ರಭಾವಿಗಳ ಜಾಗದಲ್ಲಿ ಒತ್ತುವರಿ ಆಗಿದ್ದರೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಇಲ್ಲದ ಸಬೂಬುಗಳನ್ನು ಹೇಳಿ ಕಾಲಹರಣ ಮಾಡುತ್ತಿರುವುದಾಗಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜತೆಗೆ ಡೆಮಾಲಿಷನ್‌ಗೆ ಜೆಸಿಬಿ ಕೊರತೆ ಇರುವುದಾಗಿ ಬಿಬಿಎಂಪಿ ಅಧಿಕಾರಿಗಳು ಹೇಳುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಡಬಲ್ ಸ್ಟಾಂಡ್ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ.

ಮಂಗಳವಾರ ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಒಡೆತನದ ನಲಪಾಡ್‌ ಅಕಾಡೆಮಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡದೇ ಹೈಡ್ರಾಮಾ ನಡೆದಿತ್ತು. ಸಂಜೆವರೆಗೂ ಅಕಾಡೆಮಿ ಒಳಗೆ ಹೋಗಲು ಹಿಂದೇಟು ಹಾಕಿದ್ದ ಅಧಿಕಾರಿಗಳು, ಬುಧವಾರ ಬೆಳಗ್ಗೆಯೇ ಕೆಲಸ ಶುರು ಮಾಡುವುದಾಗಿ ಹೇಳಿದ್ದರು.

ಮೃದುಧೋರಣೆ ಯಾಕೆ?

ತೆರವು ಕಾರ್ಯಾಚರಣೆ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಪ್ರಶ್ನಿಸಿದರೆ ಸಮರ್ಪಕ ಮಾಹಿತಿ ನೀಡದೇ ಜಾರಿಕೊಂಡಿದ್ದಾರೆ. ಬಾಗ್‌ಮನೆ ಟೆಕ್‌ಪಾರ್ಕ್ ಹಿಂದೆ ಪೂರ್ವಂಕರ ಇದ್ದು, ಅವರು ನಾಲೆಗೆ ಗೋಡೆ ಕಟ್ಟಿದ್ದಾರೆ. ಗೋಡೆ ಒಡೆದರೆ ಆ ಪ್ರದೇಶ ಸಂಪೂರ್ಣ ಪ್ರವಾಹ ಎದುರಾಗುತ್ತೆ. ಹಾಗಾಗಿ ಸಮಯ ಕೊಡಿ ನಾವೇ ತೆರವು ಮಾಡುತ್ತೇವೆ ಎಂದಿದ್ದಾರೆ. ಹಾಗಾಗಿ ಬಾಗ್‌ಮನೆ ತೆರವು ನೋಡಿಕೊಂಡು ಮಾಡಿ ಎಂದು ಹೇಳಿದ್ದೇವೆ ಎಂದು ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಮಹಾದೇವಪುರ ಅಥವಾ ಬೊಮ್ಮನಹಳ್ಳಿ ವಲಯ ಮಾತ್ರವಲ್ಲದೇ ಬೇರೆ ವಲಯದಲ್ಲೂ ಕಾರ್ಯಾಚರಣೆ ಆರಂಭ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಸರ್ವೆಯರ್‌ಗಳು ಎಲ್ಲಾ ಮಾರ್ಕಿಂಗ್ ಪ್ಲ್ಯಾನ್ ಮಾಡುತ್ತಿದ್ದು, ಶೀಘ್ರದಲ್ಲೆ ಬೇರೆ ವಲಯದಲ್ಲಿ ತೆರವು ಕಾರ್ಯಾಚರಣೆ ಮಾಡುವುದಾಗಿ ಮಾಹಿತಿ ನೀಡಿದ್ದಾರೆ.

ಒತ್ತಡಕ್ಕೆ ಮಣಿಯುವುದಿಲ್ಲ

ನಲಪಾಡ್ ಅಕಾಡೆಮಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ನಾವು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ತೆರವು ಕಾರ್ಯಾಚರಣೆ ಮಾಡುತ್ತೇವೆ ಎಂದರು. ಐಟಿ ಕಂಪನಿಗಳಿಂದ ಮುಖ್ಯಮಂತ್ರಿಗಳಿಗೆ ಪತ್ರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಬಿಎಂಪಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಸುಳ್ಳು. ಯಾವುದೇ ರೀತಿಯ ಬೇಧಭಾವ ಮಾಡಿಲ್ಲ, ನಾನು ಸರ್ಕಾರ ಕೈ ಕೆಳಗಡೆ ಕೆಲಸ ಮಾಡುವ ಅಧಿಕಾರಿ. ಸರ್ಕಾರಕ್ಕೆ ಮನವಿ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ಓದಿ | Rajakaluve Encroachment | ಬಡವರ ಮನೆ ಮೇಲೆ ಬಿಬಿಎಂಪಿ ಸಿಂಹ ಗರ್ಜನೆ; ಪ್ರಭಾವಿಗಳಿಗೆ ಮೃದು ಧೋರಣೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

HD Revanna Case: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

VISTARANEWS.COM


on

Holenarasipura sexual assault case lot of confusion in the victim statement against HD Revanna Case
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ನೀಡಲಾಗಿದೆ. ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ರಿಲೀಫ್‌ ಸಿಕ್ಕಿದೆಯಾದರೂ ಜೈಲಾ? ಬೇಲಾ? ಎಂಬುದು ಸೋಮವಾರ ಪ್ರಕಟವಾಗುವ ತೀರ್ಪಿನ ಮೇಲೆ ನಿಂತಿದೆ. ಇದೇ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ವಾದ ಆರಂಭಿಸಿ ಜಯ್ನಾ ಕೊಠಾರಿ

ಇದಕ್ಕೂ ಮೊದಲು 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭವಾಯಿತು. ಈ ವೇಳೆ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಅವರು ಬರಿಗಾಲಿನಲ್ಲಿಯೇ ಕೋರ್ಟ್‌ಗೆ ಹಾಜರಾದರು. ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಮುಂಚೆ ಇನ್ ಕ್ಯಾಮೆರಾ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಮೊದಲು ಅರ್ಜಿ ವಿಚಾರಣೆಯ ಅರ್ಹತೆ ಬಗ್ಗೆ ವಾದ ಮಂಡಿಸಿ. ನಂತರ ಇನ್ ಕ್ಯಾಮೆರಾ ವಿಚಾರಣೆ ನಡೆಸೋಣ ಎಂದು ಹೇಳಿದರು.

ವಾದ ಶುರು ಮಾಡಿದ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, ಹೊಳೆನರಸೀಪುರ ಪ್ರಕರಣದಲ್ಲಿ ಐಪಿಸಿ 376 ಸೆಕ್ಷನ್ ಹಾಕಲಾಗಿದ್ದು, ಇದು ಅತ್ಯಾಚಾರ ಆರೋಪವಾಗಿದೆ. ಸಂತ್ರಸ್ತೆಯ ವಿಚಾರಣೆ ಬಳಿಕ ಅತ್ಯಾಚಾರ ಆರೋಪ ದಾಖಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಅವರು ಕೋರ್ಟ್‌ನಲ್ಲಿ ಓದಿ ಹೇಳಿದರು. ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್ 354 ಮಾತ್ರ ಇತ್ತು. ವಿಚಾರಣೆ ಬಳಿಕ 376 ಸೇರ್ಪಡೆಯಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿರುವ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್‌ ಗಮನಕ್ಕೆ ತಂದರು.

ಆಶ್ರಯ ಮನೆಯೂ ವಾಪಸ್‌

ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಂಶಗಳ ಕೋರ್ಟ್‌ ಮುಂದೆ ಓದಿದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಕಿರುಕುಳ ತಾಳಲಾರದೆ ಮನೆ ಬಿಟ್ಟು ಬಂದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಕೆಲಸ ಬಿಟ್ಟು ಬಂದಿದಕ್ಕೆ ಮೊದಲು‌ ನೀಡಿದ್ದ ಆಶ್ರಯ ಮನೆಯನ್ನು ಬಲವಂತವಾಗಿ ವಾಪಸ್‌ ಪಡೆದಿದ್ದಾರೆ. ಆ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆಯ ಆರೋಪಗಳನ್ನು ಕೋರ್ಟ್‌ ಮುಂದೆ ಹೇಳಿದರು.

ಹೀಗಾಗಿ ಸಂತ್ರಸ್ತೆ ಹೇಳಿಕೆ ಮೇಲೆ ಸೆಕ್ಷನ್ 376 ಅನ್ನು ಸೇರಿಸಲಾಗಿದೆ ಎಂದು ವಾದಿಸಿದ ಜಯ್ನಾ ಕೊಠಾರಿ, ನಾನ್ ಬೇಲಬಲ್ ಸೆಕ್ಷನ್ ಸೇರಿಸಿರುವುದರಿಂದ ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಬೇಕು. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ತನಿಖಾಧಿಕಾರಿಯ ಮನವಿ ನಂತರ ಸೆಕ್ಷನ್‌ 376 ಸೇರ್ಪಡೆಗೊಂಡಿದೆ. ಈ ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್‌ 354 A, D ಮಾತ್ರವಿತ್ತು. ಪ್ರಜ್ಬಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ಇರುವ ಪ್ರಕರಣವನ್ನು ವಿಭಜಿಸಬಾರದು. ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಇಂತಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದಿಸಿದರು.

ದೂರುದಾರೆಗೆ ಇಬ್ಬರಿಂದಲೂ ಕಿರುಕುಳ

ಎಸ್ಐಟಿ ತಂಡದಿಂದ ತನಿಖೆ ಪ್ರಗತಿಯಲ್ಲಿದೆ. ಈ‌ ಸಂದರ್ಭದಲ್ಲಿ ಆರೋಪಿಗೆ ಜಾಮೀನು ನೀಡುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ. ಬೇಲಬಲ್ ಸೆಕ್ಷನ್ ಇದ್ದಾಗ ಮಾತ್ರ ಸೆಕ್ಷನ್‌ 436 ಪ್ರಕಾರ ಜಾಮೀನು ನೀಡಬಹುದು. ಆದರೆ, ಈ ಪ್ರಕರಣದಲ್ಲಿ ನಾನ್ ಬೇಲಬಲ್ ಸೆಕ್ಷನ್ 436 ಅಡಿಯಲ್ಲಿ ಜಾಮೀನು ನೀಡುವಂತಿಲ್ಲ. ಅಲ್ಲದೆ, ನಾನ್ ಬೇಲಬಲ್ ಸೆಕ್ಷನ್ ಇರುವುದಿರಿಂದ ಇದರ ವಿಚಾರಣೆಯು ಸೆಷನ್ಸ್‌ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ವಿಚಾರಣೆ ನಡೆಯಬೇಕು. ದೂರುದಾರರಿಗೆ ಮನೆಯಲ್ಲಿ ಇಬ್ಬರಿಂದಲೂ (ರೇವಣ್ಣ, ಪ್ರಜ್ವಲ್) ಕಿರುಕುಳ ನಡೆದಿದೆ. ಇದನ್ನೆಲ್ಲ ಮುಕ್ತ ನ್ಯಾಯಾಲಯದಲ್ಲಿ ವಿವರಿಸಲು ಆಗದು. ಇದು ಇನ್ ಕ್ಯಾಮೆರಾ ವಿಚಾರಣೆ ನಡೆಯಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಜಾಮೀನು ಅರ್ಜಿ ವಿಚಾರಣೆ ವ್ಯಾಪ್ತಿ ಈ ಕೋರ್ಟ್‌ಗಿಲ್ಲ: ಜಯ್ನಾ ಕೊಠಾರಿ

ಇಲ್ಲಿ ತಂದೆ – ಮಗ ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ರೇವಣ್ಣ ಅವರಿಂದ ಇಷ್ಟೇ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯ ನಂತರವಷ್ಟೇ ಗೊತ್ತಾಗಬೇಕಿದೆ. ಈಗಲೇ ಶಾಸಕ ರೇವಣ್ಣ ಮೇಲೆ ಅತ್ಯಾಚಾರ ಆರೋಪ ಇಲ್ಲವೆಂದು ಹೇಳಲು ಸಾಧ್ಯವಾಗುವುದಿಲ್ಲ. ಒಮ್ಮೆ ಅತ್ಯಾಚಾರ ಆರೋಪ ದಾಖಲಾದರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆ ನಡೆಸಲು ಈ ಕೋರ್ಟ್‌ಗೆ ವ್ಯಾಪ್ತಿ ಇಲ್ಲ. ಸೆಕ್ಷನ್‌ 376 ಅಪರಾಧಕ್ಕೆ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದಾಗ ಜಾಮೀನು ಅರ್ಜಿ ಊರ್ಜಿತವಲ್ಲ. ಇಬ್ಬರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿದೆ. ಆರೋಪ ಪಟ್ಟಿ ದಾಖಲಾದ ನಂತರವಷ್ಟೇ ಯಾರ ಮೇಲೆ ಏನು ಆರೋಪ‌ ಎಂದು ತಿಳಿಯಲಿದೆ. ಸೆಕ್ಷನ್‌ 41ಎ ಅಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಬಂದಿಲ್ಲ. ಇದನ್ನು ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೇಳುತ್ತೇನೆ. ಈಗ ಜಾಮೀನು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬಾರದೆಂಬ ವಿಚಾರಕ್ಕಷ್ಟೇ ವಾದಿಸುತ್ತಿದ್ದೇನೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಬಳಿಕ ಮತ್ತೊಬ್ಬ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ, ಜನಪ್ರತಿನಿಧಿಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಇಲ್ಲಿಗೆ ಬರುತ್ತವೆ. ಜಾಮೀನು ಅಂದರೆ ಸೆಷನ್ ನ್ಯಾಯಾಲಯದ ಕೋರ್ಟ್ 82ಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ಪೋಕ್ಸೋ ಕೇಸ್‌ ಆಗಿದ್ದರೆ ನೀವು ಸೆಷನ್ ಕೋರ್ಟ್‌ಗೆ ಹೋಗಿ. ಇದು ಇಲ್ಲಿ ನಿರ್ವಹಿಸಲಾಗದಿದ್ದರೆ ಅಲ್ಲಿಗೆ ಕಳಿಸಲಾಗುತ್ತದೆ ಎಂದು ಹೇಳಿದರು.

ಮತ್ತೆ ವಾದ ಮುಂದುವರಿಸಿದ ಅಶೋಕ್‌ ನಾಯಕ್‌, ಸಂತ್ರಸ್ತೆ ಮೇಲೆ ತಂದೆ ಮತ್ತು ಪುತ್ರ ಇಬ್ಬರೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಒಬ್ಬಳ ಮೇಲೆ ಪದೇ ಪದೆ ದೌರ್ಜನ್ಯವೆಸಗಿದ್ದಾರೆ. ಕೊಲೆ ಪ್ರಕರಣದಲ್ಲಿ 302 ಸೆಕ್ಷನ್ ಜತೆಗೆ ಇತರೆ ಬೇಲಬಲ್ ಸೆಕ್ಷನ್‌ಗಳನ್ನ ಹಾಕಿರುತ್ತಾರೆ. ಹಾಗಂತ ಆರೋಪಿಗಳನ್ನು ಹಾಗೂ ಕೇಸ್‌ ಅನ್ನು ವಿಭಜನೆ ಮಾಡಲು ಆಗುತ್ತದೆಯೇ? ಅದೇ ರೀತಿ ಈ ಪ್ರಕರಣದಲ್ಲಿ ತಂದೆ, ಮಗ ಇಬ್ಬರೂ ಒಂದೇ ಅಪರಾಧ ಎಸಗಿದ್ದಾರೆ. ಒಂದೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಎರಡನೇ ಆರೋಪಿಯನ್ನು ಮೊದಲನೇ ಆರೋಪಿಯೇ ರಕ್ಷಣೆ ಮಾಡುತ್ತಿದ್ದಾರೆ. ದೇಶ ಬಿಟ್ಟು ಹೋಗಲು ಮೊದಲ ಆರೋಪಿಯೇ ಸಹಾಯ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿ ವಾದ ಮಂಡಿಸಿದ ಸಿ.ವಿ. ನಾಗೇಶ್‌

ಈ ವೇಳೆ ರೇವಣ್ಣ ಪರ ವಕೀಲ‌ ಸಿ.ವಿ. ನಾಗೇಶ್ ಪ್ರತಿವಾದ ಆರಂಭಿಸಿ, ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವು ಬೇಲಬಲ್ ಸೆಕ್ಷನ್‌ಗಳಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಜಾಮೀನು ನೀಡಬೇಕಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಎಫ್ಐಆರ್ ದಾಖಲಾದ ದಿನಾಂಕ, ಅದರಲ್ಲಿರುವ ಸೆಕ್ಷನ್‌ಗಳು ಏನು ಎಂಬುದನ್ನು ಇದೇ ವೇಳೆ ಕೋರ್ಟ್‌ ಗಮನಕ್ಕೆ ತಂದರು. ಯಾವುದೇ ವ್ಯಕ್ತಿಯ ವಿರುದ್ಧ ದೂರು ದಾಖಲಾದರೆ, ಆತ ಬಂಧನಕ್ಕೊಳಗಾಗುವ ಮುನ್ನ ಶರಣಾದರೆ ಜಾಮೀನು ನೀಡಬಹುದು. ಇದರ ಗ್ರಾವಿಟಿಯೇ 436 ಸಿಆರ್‌ಪಿಸಿ ಆಗಿದೆ. ಇಲ್ಲಿ ಸಿಆರ್‌ಪಿಸಿ 439 ಅಲ್ಲ. ರೇವಣ್ಣ ವಿರುದ್ಧ ಈಗ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವು ದೂರು ದಾಖಲಾದ ದಿನ ಅಥವಾ ವಾರದ ಹಿಂದೆ ಇಲ್ಲವೇ ವರ್ಷದ ಹಿಂದೆ ನಡೆದಿಲ್ಲ. ಕೃತ್ಯ ನಡೆದು ಹಲವು ವರ್ಷಗಳೇ ಕಳೆದು ಹೋಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗರ್ಭಗುಡಿಯಲ್ಲಿ ದೇವರು ಕುಳಿತಂತೆ ಕುಳಿತಿದ್ದೆ!

ಈ ವೇಳೆ ಮಧ್ಯ ಪ್ರವೇಶ ಮಾಡಿದ ಎಸ್‌ಪಿಪಿ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಅದಕ್ಕೆ ಸಿಟ್ಟಾದ ಸಿ.ವಿ. ನಾಗೇಶ್, “ನೀವು ವಾದ ಮಾಡಬೇಕಾದರೆ ನಾನು ಗರ್ಭಗುಡಿಯಲ್ಲಿ‌ ದೇವರು ಕುಳಿತ ಹಾಗೆ ಕುಳಿತುಕೊಂಡಿದ್ದೆ. ಏನಾದರೂ ತೊಂದರೆ ಮಾಡಿದ್ದೇನಾ? ಎಂದು ಪ್ರಶ್ನಿಸಿ ತಮ್ಮ ವಾದವನ್ನು ಮುಂದುವರಿಸಿದರು.

ಇದು ಅತ್ಯಾಚಾರ ಪ್ರಕರಣ ಅಲ್ಲ

ಸೆಷನ್ಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ 376 ಸೆಕ್ಷನ್ ಇರಲಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಬಂದಾಗ ಈ ಸೆಕ್ಷನ್‌ ಸೇರ್ಪಡೆಯಾಗಿದೆ. ಅವತ್ತು ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಇವರು ಮೊದಲೇ 376 ಇದೆ ಎಂದು ಹೇಳಿದ್ದರೆ, ನಾವು ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ವಾಪಸ್‌ ಪಡೆಯುತ್ತಿರಲಿಲ್ಲ. ರೇವಣ್ಣ ವಿರುದ್ಧ 376 ಇದೆ ಅಂತ ಹೇಳಲಿ. ಆಗ ನಾವು ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರೋದು ಕೇವಲ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದೆ. ಅತ್ಯಾಚಾರ ಪ್ರಕರಣ ಅಲ್ಲ. ಇದೊಂದು‌ ಸುಳ್ಳು ಕೇಸ್ ಆಗಿದೆ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಇದುವರೆಗೂ ರೇವಣ್ಣ ಅವರಿಗೆ ನೀಡಿದ ಯಾವ ನೋಟಿಸ್‌ನಲ್ಲೂ ಸೆಕ್ಷನ್‌ 376 ಇದೆ ಅಂತ ಉಲ್ಲೇಖಿಸಿಲ್ಲ. ಈಗ 376 ಇದೆ ಎಂದು ಹೇಳುತ್ತಿದ್ದಾರೆ. ಇದರಿಂದ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬಹುದು. ರೇವಣ್ಣ ವಿರುದ್ಧ ದಾಖಲಾಗಿರುವ ಕೇಸ್‌ನಲ್ಲಿ ಎಲ್ಲವೂ ಬೇಲಬಲ್ ಸೆಕ್ಷನ್‌ಗಳಿವೆ. ಹೀಗಾಗಿ ಜಾಮೀನು‌ ನೀಡಬೇಕೆಂದು ಮನವಿ ಮಾಡಿದ ಸಿ.ವಿ. ನಾಗೇಶ್ ತಮ್ಮ ವಾದವನ್ನು ಮುಕ್ತಾಯ ಮಾಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಎಫ್‌ಐಆರ್‌ ಬಳಿಕವೂ ಸೆಕ್ಷನ್‌ ಸೇರಿಸಬಹುದು

ಬಳಿಕ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ರೇವಣ್ಣ ಪರ ವಕೀಲರು ಕೇವಲ ಬೇಲಬಲ್ ಸೆಕ್ಷನ್‌ಗಳ ಬಗ್ಗೆ ಮಾತ್ರ ಹೇಳಿದ್ದಾರೆ. ಪ್ರಾರಂಭದಲ್ಲೇ ಜಾಮೀನು ರಹಿತ ಸೆಕ್ಷನ್‌ಗಳನ್ನು ದಾಖಲಿಸದೆ ಇರಬಹುದು. ತನಿಖೆ ನಡೆದಾಗ ಯಾವಾಗ ಬೇಕಿದ್ದರೂ ಅಪರಾಧ ನಡೆದಿರುವ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಬಹುದು. ಈ ಬಗ್ಗೆ ಅವಕಾಶವೂ ಇದೆ. ನಂತರವು ಜಾಮೀನು ರಹಿತದ ಸೆಕ್ಷನ್‌ಗಳನ್ನು ಕೂಡಾ ಸೇರಿಸುವ ಅವಕಾಶ ಇದೆ. ಅದಕ್ಕೆ‌ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದರು.

ಭಯದಿಂದ ಗಂಡನ ಬಳಿ ಸತ್ಯ ಮುಚ್ಚಿಟ್ಟಿರುವ ಸಂತ್ರಸ್ತೆ

ರೇವಣ್ಣ ಪರ ವಕೀಲರು‌ ಹೇಳುವಂತೆ ಮಹಿಳಾ ಪೊಲೀಸ್ ಇಲ್ಲದೆ ನಮ್ಮ ಪೊಲೀಸರು ಹೋಗಿಲ್ಲ. ಮಹಿಳಾ ಸಿಬ್ಬಂದಿಯ ಜತೆಯಲ್ಲೆ ಹೋಗಿ ದೂರು ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಸಂತ್ರಸ್ತೆ ತನ್ನ ಗಂಡನ ಬಳಿ ಕೆಲವೊಂದನ್ನು ಮುಚ್ಚಿಟ್ಟಿದ್ದಾಳೆ. ಸತ್ಯ ಹೇಳಿದರೆ ಮನೆಯಿಂದ ಹೊರ ಹಾಕುತ್ತಾರೆ ಎಂಬ ಭಯದಲ್ಲಿ ಆಕೆ ಗಂಡನಿಗೆ ಆ ರೀತಿಯಾಗಿ ಹೇಳಿದ್ದಾಳೆ. ಆಕೆಯ ಸುರಕ್ಷತೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ರಹಸ್ಯ ಸ್ಥಳದಲ್ಲಿ ದೂರು ಪಡೆಯಲಾಗಿದೆ. ಇದು ಸಂಪೂರ್ಣವಾಗಿ ಮಹಿಳೆಯ ರಕ್ಷಣೆಗೆ ಸಂಬಂಧಿಸಿದ ವಿಚಾರವಾಗಿದೆ. ನಾವು ಮೆಮೋ ಹಾಕಿದ್ದೆವು, ರಿಮಾಂಡ್ ಅಪ್ಲಿಕೇಶನ್‌ನಲ್ಲೂ ಲೈಂಗಿಕ ದೌರ್ಜನ್ಯ ಅಂತ ಹೇಳಿದ್ದೆವು. ಆದರೆ, ಈಗ ಸೆಕ್ಷನ್‌ 376 ಹಾಕಿರುವುದಕ್ಕೆ ದಾಖಲೆ ಇದೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

Continue Reading

ಕ್ರಿಕೆಟ್

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Dubbing Premier League: ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

VISTARANEWS.COM


on

Dubbing Premier League
Koo

ಬೆಂಗಳೂರು: ಕನ್ನಡ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಖ್ಯಾತ ಡಬ್ಬಿಂಗ್ ಕಲಾವಿದರು ಹಾಗೂ ಕಲಾವಿದರ ಸಮಾಗಮದೊಂದಿಗೆ ಆಯೋಜಿಸಲಾಗುತ್ತಿರುವ ಡಬ್ಬಿಂಗ್​ ಪ್ರೀಮಿಯರ್ ಲೀಗ್ (Dubbing Premier League)​ ಕ್ರಿಕೆಟ್​ ಟೂರ್ನಿಯ ಮೂರನೇ ಆವೃತ್ತಿ ಶನಿವಾರ (ಮೇ 18) ಹಾಗೂ ಭಾನುವಾರ (ಮೇ 19)ರಂದು ನಡೆಯಲಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಗ್ಲೋಬಲ್​ ಅಕಾಡೆಮಿ ಆಫ್​ ಟೆಕ್ನಾಲಜಿಯ ಮೈದಾನದಲ್ಲಿ ಈ ಟೂರ್ನಿಯು ಪಂದ್ಯಗಳು ಅಯೋಜನೆಗೊಂಡಿದೆ. ಈ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಸಿನಿ ಹಾಗೂ ಕಿರುತೆರೆ ಕ್ಷೇತ್ರದ ಹೆಸರಾಂತ ಕಲಾವಿದರು ಹಾಗೂ ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರೂ ಒಂದೆಡೆ ಸೇರಿ “ಜಂಟಲ್​ಮ್ಯಾನ್ಸ್​ ಸ್ಪೋರ್ಟ್”​​ ಎಂದೇ ಕರೆಯವ ಕ್ರಿಕೆಟ್​ ಆಡಿ ಸಂಭ್ರಮಿಸಲಿದ್ದಾರೆ.

ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

ಶನಿವಾರ ಬೆಳಗ್ಗೆ 7.30ಕ್ಕೆ ಮೊದಲ ಪಂದ್ಯ ನಡೆಯಲಿದೆ. ಅದಕ್ಕಿಂತ ಮೊದಲು ಟೂರ್ನಿಯ ಉದ್ಘಾಟನಾ ಕಾರ್ಯಕ್ರಮ ಅಯೋಜನೆಗೊಂಡಿದೆ. ಟೂರ್ನಿಯಲ್ಲಿ 9 ತಂಡಗಳು ಪ್ರಶಸ್ತಿಗಾಗಿ ಹೋರಾಡಲಿವೆ. ನಿರಂಜನ್ ಸ್ಟುಡಿಯೋಸ್, ಧ್ವನಿ ಸಂಗಮ ಸ್ಟುಡಿಯೋಸ್, ಆರ್​ಸಿಬಿ, ಹರಿವು ಹುಡುಗರು, ಸೌಂಡ್ ಮ್ಯಾಪ್ ರಾಯಲ್ಸ್ ರಾಯಲ್ ಎಡಿಟರ್ಸ್, ಲಗಾನಾ ಬಾಯ್ಸ್, ಕನ್ನಡ ಕಂಠಗಳು, ಭಜರಂಗಿ ಬಾಯ್ಸ್ ಕ್ರಿಕೆಟರ್ಸ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳಾಗಿವೆ. ಎರಡು ದಿನಗಳ ಅವಧಿಯಲ್ಲಿ 10 ಲೀಗ್ ಪಂದ್ಯಗಳು ಹಾಗೂ ಎರಡು ಸೆಮಿ ಫೈನಲ್ ಹಾಗೂ ಫೈನಲ್ ಸೇರಿ ಒಟ್ಟು 13 ಪಂದ್ಯಗಳು ನಡೆಯಲಿವೆ.

ವಸತಿ ಸಚಿವರ ಆಗಮನ ನಿರೀಕ್ಷೆ

ಕರ್ನಾಟಕ ಸರ್ಕಾರದ ವಸತಿ ಸಚಿವರಾದ ಬಿ. ಝಡ್​ ಜಮೀರ್​ ಅಹಮದ್ ಅವರು ಆಗಮಿಸಿ ಪಂದ್ಯವನ್ನು ವೀಕ್ಷಿಸುವುದಾಗಿ ಹೇಳಿದ್ದಾರೆ ಎಂಬುದಾಗಿ ಆಯೋಜಕರು ತಿಳಿಸಿದ್ದಾರೆ. ಅದೇ ರೀತಿ ಕಲಾವಿದರ ಈ ಸಂಗಮಕ್ಕೆ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದ ಹಲವಾರು ಕಲಾವಿದರು ಆಗಮಿಸುವ ನಿರೀಕ್ಷೆಯಿದೆ. ಚಲನಚಿತ್ರ ಕಲಾವಿದ ಮತ್ತು ನಿರ್ದೇಶಕ, ನಾಗೇಂದ್ರ ಅರಸ್, ಸಿನಿಮಾ ಕಲಾವಿದ ರಮೇಶ್ ಪಂಡಿತ್, ಜೀ ಟಿವಿ ಮಹಾನಟಿ ಸೀರಿಯಲ್​ ನ ಆಶಿಕಾ ಶರ್ಮಾ, ಟಿವಿ ಕಲಾವಿದರಾದ ಪುನೀತ್ ಬಾಬು, ಧನಂಜಯ. ಸುಹಾಸ್ ಆತ್ರೇಯಸ್, ಕಾರ್ತಿಕ್ ವೈಭವ್,ಆಯುಷ್ ಜೆ ಶೆಟ್ಟಿ, ವಲ್ಲಭ ಸೂರಿ, ಮಧುಸೂದನ್, ಸಿನಿ ಕಲಾವಿದರಾದ ಹರ್ಷಿಲ್ ಕೌಶಿಕ್, ಶಕ್ತಿ ರಾಜ್, ವಿಕಾಸ್ ವಸಿಷ್ಠ, ರಿಚಾ ಶಾಸ್ತ್ರಿ, ಸಿಲ್ಲಿ ಲಲ್ಲಿ ಆನಂದ್, ಚೇತನ್ ಗಂಧರ್ವ, ಯಶವಂತ್ ಬಿಜೂರ್, ನರೇಶ್ ಗಾಂಧಿ, ಗೀತರಚನೆಕಾರ ಪ್ರಮೋದ್ ಮರವಂತೆ, ಟಿವಿ ಕಲಾವಿದೆ ಪುಷ್ಪಾ ಅನಿಲ್, ಗಾಯಕರಾದ ಕರಿಬಸವ ಅವರು ಟೂರ್ನಿಯಲ್ಲಿ ಪಾಲ್ಗಳ್ಳಲಿದ್ದಾರೆ.

ಇದನ್ನೂ ಓದಿ: IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

ಎರಡು ಆವೃತ್ತಿಗಳ ಯಶಸ್ಸು

ಸಿನಿಮಾ ಹಾಗೂ ಕಿರುತೆರೆಯಲ್ಲಿ ಹಲವಾರು ಡಬ್ಬಿಂಗ್ ಕಲಾವಿದರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿ ಬದುಕಿನ ಜಂಜಾಟ ಹಾಗೂ ಇನ್ನೂ ಅನೇಕ ಕಾರಣಗಳಿಂದಾಗಿ ಅವರೆಲ್ಲರೂ ಪರಸ್ಪರ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎರಡು ವರ್ಷಗಳ ಹಿಂದೆ ಡಬ್ಬಿಂಗ್​ ಆರ್ಟಿಸ್ಟ್​​ಗಳು ಹಾಗೂ ಇನ್ನಿತರ ಕಲಾವಿರ ಸಮಾಗಮದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆರಂಭಿಸಲಾಗಿತ್ತು. ಕಳೆದ ಎರಡು ವರ್ಷದ ಟೂರ್ನಿ ಅತ್ಯಂತ ಯಶಸ್ಸು ಕಂಡಿತ್ತು. ಕಲಾವಿದರು ಎರಡು ದಿನಗಳ ಕಾಲ ಜತೆಯಾಗಿ ಸೇರಿಕೊಂಡು ಕ್ರಿಕೆಟ್ ಆಡಿ ಸಂಭ್ರಮಿಸಿದ್ದರು. ಟ್ರೋಫಿ ಗೆದ್ದಿದ್ದರು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮೂರನೇ ಆವೃತ್ತಿಯನ್ನು ಆಯೋಜಿಸಲಾಗಿದೆ. ಶನಿವಾರ ಹಾಗೂ ಭಾನುವಾರ ಕ್ರಿಕೆಟ್​ ಪ್ರೇಮಿ ಕಲಾವಿದರು ಈ ಟೂರ್ನಿಯಲ್ಲಿ ಆಡಿ ಸಂಭ್ರಮಿಸಲಿದ್ದಾರೆ ಎಂಬುದಾಗಿ ಅಯೋಜಕರು ಮಾಹಿತಿ ನೀಡಿದ್ದಾರೆ.

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ರಾಜಕೀಯ

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

CM Siddaramaiah: ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ.

VISTARANEWS.COM


on

Pension and NAREGA money credited to farmers loans CM Siddaramaiah slams bank
Koo

ಬೆಂಗಳೂರು: ಬರ ಪರಿಹಾರ (Drought Relief), ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸೌಧದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರೈತರ ಖಾತೆಗಳಿಗೆ ಜಮೆಯಾಗುತ್ತಿರುವ ಬಗ್ಗೆ ಕೆಂಡವಾಗಿದ್ದಾರೆ. ಇದು ತಕ್ಷಣವೇ ನಿಲ್ಲಬೇಕು. ಕೂಡಲೇ ಎಲ್ಲ ಬ್ಯಾಂಕ್‌ಗಳಿಗೂ ಪತ್ರ ಬರೆದು ತಾಕೀತು ಮಾಡಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಪಿಂಚಣಿ, ನರೇಗಾ ಕೂಲಿಗೆ ಸಂಬಂಧಪಟ್ಟ ಹಣವು ರೈತರ ಬ್ಯಾಂಕ್‌ಗಳಿಗೆ ಜಮೆಯಾಗುತ್ತಿದ್ದರೆ ಅದನ್ನು ಬ್ಯಾಂಕ್‌ನವರು ರೈತರ ಸಾಲಗಳಿಗೆ ವಜಾ ಮಾಡಿಕೊಳ್ಳುವುದು ಸರಿಯಲ್ಲ. ಹೀಗಾಗಿ ಬ್ಯಾಂಕ್‌ಗಳಿಗೆ ಖಡಕ್‌ ಸೂಚನೆಯನ್ನು ರವಾನೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದರು.

ರಾಜ್ಯದಲ್ಲಿ ಬರ ಹಾಗೂ ಮಳೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ಕೊಂಚ ಸಡಿಲ ಮಾಡಲಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಆಯೋಗದಿಂದ ಅವಕಾಶ ಸಿಕ್ಕಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖಾವಾರು ಟೆಂಡರ್ ಕರೆಯಲು ಚುನಾವಣಾ ಆಯೋಗದಿಂದ ಅವಕಾಶ ಸಿಕ್ಕಿದೆ. ಅಲ್ಲದೆ, ಸಿಎಂ ಹಾಗೂ ಸಚಿವರು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲು ಅನುಮತಿಯನ್ನು ನೀಡಲಾಗಿದೆ. ಆದರೆ, ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲು ನಿರ್ಬಂಧ ಮುಂದುವರಿದಿದೆ. ಆದರೆ, ಜೂನ್ ಒಳಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಸರ್ಕಾರದ ವಿರುದ್ಧ ಕಿಡಿಕಾರಿದ್ದ ಎಚ್‌ಡಿಕೆ

ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್‌ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿದ್ದ ಅವರು, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ.‌ ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದರು. ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದರು.

ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ಗ್ರೇಸ್‌ ಮಾರ್ಕ್ಸ್‌ ಹೆಚ್ಚಳದ ತೀರ್ಮಾನವನ್ನು ಮಾಡಿತ್ತು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಕೆ ಮಾಡಿದ್ದಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿತ್ತು. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿತ್ತು. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿತ್ತು. ಆದರೆ, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Continue Reading
Advertisement
Holenarasipura sexual assault case lot of confusion in the victim statement against HD Revanna Case
ಕ್ರೈಂ18 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

Bhatkal News
ಕರ್ನಾಟಕ22 mins ago

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Dubbing Premier League
ಕ್ರಿಕೆಟ್29 mins ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ32 mins ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ47 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

theft Case
ಕ್ರೈಂ1 hour ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು1 hour ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ1 hour ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ1 hour ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ2 hours ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌