ಮುರುಘಾಶ್ರೀ ಪ್ರಕರಣ | ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ, ಇನ್ನೂ 14 ದಿನ ಜೈಲೇ ಗತಿ - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ, ಇನ್ನೂ 14 ದಿನ ಜೈಲೇ ಗತಿ

ಚಿತ್ರದುರ್ಗ ಮುರುಘಾಮಠದ ಮುರುಘಾಶರಣರ ನ್ಯಾಯಾಂಗ ಬಂಧನವನ್ನು ಇನ್ನೂ 14 ದಿನಗಳ ಕಾಲ ವಿಸ್ತರಿಸಲಾಗಿದೆ. ಅವರಿಗೆ ಅಲ್ಲಿವರೆಗೆ ಜೈಲೇ ಗತಿಯಾಗಲಿದೆ.

VISTARANEWS.COM


on

murugha seer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಮಠದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ೧೪ ದಿನಗಳ ಕಾಲ ವಿಸ್ತರಿಸಲಾಗಿದೆ. ಹೀಗಾಗಿ ಅವರು ಸೆಪ್ಟೆಂಬರ್‌ ೨೭ರವರೆಗೆ ಜೈಲಿನಲ್ಲೇ ಇರಬೇಕಾಗಿದೆ.

ಕಳೆದ ಸೆಪ್ಟೆಂಬರ್‌ ೧ರಂದು ಬಂಧಿತರಾಗಿದ್ದ ಶ್ರೀಗಳಿಗೆ ಅಂದೇ ರಾತ್ರಿ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಅದರ ನಡುವೆಯೇ ಅವರನ್ನು ಸೆಪ್ಟೆಂಬರ್‌ ೫ರವರೆಗೆ ಪೊಲೀಸ್‌ ಕಸ್ಟಡಿಗೆ ಒಪಿಸಲಾಗಿತ್ತು. ಇದಾದ ಬಳಿಕ ಸ್ವಾಮೀಜಿ ಪರವಾಗಿ ಕೆಲವು ಸಲ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಅದನ್ನು ಪುರಸ್ಕರಿಸದ ಕೋರ್ಟ್‌ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿತ್ತು. ಸೆಪ್ಟೆಂಬರ್‌ ೧೪ಕ್ಕೆ (ಇಂದು) ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು. ಹೀಗಾಗಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಅವರಿಗೆ ಜಾಮೀನು ನೀಡದೆ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ೧೪ ದಿನ ವಿಸ್ತರಿಸಿ ಆದೇಶ ನೀಡಿತು.

ಸ್ವಾಮೀಜಿಗಳಿಗೆ ಜಾಮೀನು ನೀಡುವುದನ್ನು ಸಂತ್ರಸ್ತೆಯರ ಪರ ವಕೀಲರು ತೀವ್ರವಾಗಿ ವಿರೋಧಿಸಿದ್ದರು. ಈ ನಿಟ್ಟಿನಲ್ಲಿ ಮತ್ತು ಪೋಕ್ಸೊ ಪ್ರಕರಣದಲ್ಲಿ ಅಷ್ಟು ಸುಲಭದಲ್ಲಿ ಜಾಮೀನು ನೀಡಲಾಗುವುದಿಲ್ಲ ಎಂಬ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಟ್‌ ಈ ತೀರ್ಪು ನೀಡಿದೆ.

ಏನಿದು ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮಠದ ಮೂಲಕ ನಡೆಸಲಾಗುವ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಾ, ವಸತಿ ಶಾಲೆಯಲ್ಲಿ ವಾಸ ಮಾಡುತ್ತಿರುವ ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದು, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಡನಾಡಿ ಸಂಸ್ಥೆಯ ಮೂಲಕ ಅವರು ಪೊಲೀಸರ ಮೊರೆ ಹೊಕ್ಕಿದ್ದರು. ಒಬ್ಬ ವಿದ್ಯಾರ್ಥಿನಿ ಮೇಲೆ ಮೂರು ವರ್ಷದಿಂದ ಇನ್ನೊಬ್ಬ ವಿದ್ಯಾರ್ಥಿನಿ ಮೇಲೆ ಒಂದೂವರೆ ವರ್ಷದಿಂದ ದೌರ್ಜನ್ಯ ನಡೆಯುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಹೇಗೆ ದೌರ್ಜನ್ಯ, ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರಲ್ಲದೆ, ಅವರಿಗೆ ಸಹಕಾರ ನೀಡಿದ ಆರೋಪದಲ್ಲಿ ವಸತಿ ಶಾಲೆಯ ವಾರ್ಡನ್‌ ಆಗಿರುವ ರಶ್ಮಿ ಅವರನ್ನು ಎರಡನೇ ಆರೋಪಿಯಾಗಿ, ಮಠದ ಮರಿಸ್ವಾಮಿ ಆಗಿರುವ ಬಸವಾದಿತ್ಯ ಅವರನ್ನು ಮೂರನೇ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ನಾಲ್ಕು ಹಾಗೂ ಐದನೇ ಆರೋಪಿಗಳೆಂದು ಗುರುತಿಸಲಾಗಿತ್ತು.

ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿಗಳ ಬಳಿಗೆ ಕಳುಹಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು, ಸಿಹಿಯಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದೂ ದೂರಿನಲ್ಲಿ ತಿಳಿಸಲಾಗಿತ್ತು.

ಸ್ವಾಮೀಜಿಗಳ ಬಂಧನ ಮತ್ತು ನಂತರ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತು. ಆದರೆ, ಮುಂದಿನ ನಾಲ್ಕು ದಿನಗಳ ಕಾಲ ಯಾವುದೇ ಕಾನೂನು ಪ್ರಕ್ರಿಯೆಗಳು ನಡೆದಿರಲಿಲ್ಲ. ಕೊನೆಗೆ ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿ ಅವರನ್ನು ಬಂಧಿಸಲಾಯಿತು. ಮುಂದೆ ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ. ಈ ನಡುವೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ಅವರು ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಇದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟಿದ್ದಾರೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಜೈಲಿನಲ್ಲಿ ಸೊಳ್ಳೆ ಕಾಟಕ್ಕೆ ಸ್ವಾಮೀಜಿ ಕಂಗಾಲು, ಇಂದು ಜಾಮೀನು ಅರ್ಜಿ ವಿಚಾರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Zakir Naik: ಹಿಂದೂ ದೇವಸ್ಥಾನದ ಬಗ್ಗೆ ಜಾತಿದ್ವೇಷ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ನ ಡಾ. ಜಾಕೀರ್ ನಾಯಕ್‌ನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಂಗಳೂರಿನ ಅಪರ ಜಿಲ್ಲಾಧಿಕಾರಿ ಟಿ. ಎನ್. ಕೃಷ್ಣಮೂರ್ತಿ ಹಾಗೂ ಮುಂಬಯಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

VISTARANEWS.COM


on

Hindu Janajagruthi Samithi demands declaration of Zakir Naik as international terrorist
Koo

ಬೆಂಗಳೂರು: ಹಿಂದೂ ದೇವಸ್ಥಾನದ ಬಗ್ಗೆ ಜಾತಿದ್ವೇಷ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ನ ಡಾ. ಜಾಕೀರ್ ನಾಯಕ್‌ನನ್ನು (Zakir Naik) ಅಂತಾರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಂಗಳೂರಿನ ಅಪರ ಜಿಲ್ಲಾಧಿಕಾರಿ ಟಿ. ಎನ್. ಕೃಷ್ಣಮೂರ್ತಿ ಹಾಗೂ ಮುಂಬಯಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ನ ಡಾ. ಜಾಕೀರ್ ನಾಯಕ್ ‘ಹುಡಾ ಟಿ.ವಿ’ ಹೆಸರಿನ ಯುಟ್ಯೂಬ್ ಚಾನೆಲ್‌ನವೊಂದರ ಸಂದರ್ಶನದಲ್ಲಿ ಅನೇಕ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾನೆ, ಇದರಿಂದ ಕೋಟ್ಯಾಂತರ ಹಿಂದೂಗಳ ಶ್ರದ್ಧಾಸ್ಥಾನವಾಗಿರುವ ಹಿಂದೂ ದೇವಸ್ಥಾನಗಳ ಬಗ್ಗೆ ಸಮಾಜದಲ್ಲಿ ಜಾತೀಯ ದ್ವೇಷ, ತಿರಸ್ಕಾರ ಮತ್ತು ಶತ್ರುತ್ವದ ಭಾವನೆ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ದುಷ್ಕೃತ್ಯ ಮಾಡಿದ್ದಾನೆ ಎಂದು ಆರೋಪಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ಜಾಕೀರ್ ನಾಯಕ್‌ ನನ್ನು ಅಂತರರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕು ಹಾಗೂ ಅವನನ್ನು ಭಾರತಕ್ಕೆ ಒಪ್ಪಿಸುವುದಕ್ಕಾಗಿ ಮಲೇಶಿಯಾ ಸರ್ಕಾರದ ಮೇಲೆ ಭಾರತ ಸರ್ಕಾರ ಒತ್ತಡ ಹೇರಬೇಕು ಎಂದು ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

ಕೇಂದ್ರ ಸರ್ಕಾರದಿಂದ ಭಯೋತ್ಪಾದಕ ಸಂಘಟನೆ ಎಂದು ನಿಷೇಧ ಹೇರಿದ ನಂತರವೂ ಜಾಕೀರ್ ನಾಯಕ್ ಮತ್ತು ಇಸ್ಲಾಮಿಕ ರಿಸರ್ಚ್ ಫೌಂಡೇಶನ್‌ನ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ ಸೇರಿದಂತೆ ಇತರೆ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿನ ಅಕೌಂಟ್ ಮುಂದುವರೆದಿವೆ. ಅವುಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಸಮಿಯ ವತಿಯಿಂದ ಮನವಿ ಪತ್ರದಲ್ಲಿ ಆಗ್ರಹಿಸಿದೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ, ನೀಲೇಶ್, ಸತೀಶ ಸೋನಾರ, ದೇವೇಗೌಡ, ವೆಂಕಟೇಶ ಮೂರ್ತಿ ಹಾಗೂ ರವೀಂದ್ರ ದಾಸಾರಿ, ಸಂದೀಪ್ ತುಳಸಿಕರ, ಸುಶೀಲ ಭುಜಬಳ, ವಿಲಾಸ ನಿಕಮ ಮತ್ತು ಮನೀಷ ಸೈನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ವಿಜಯನಗರ

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

MLC Election: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನವು ಜೂನ್ 3ರಂದು ವಿಜಯನಗರ ಜಿಲ್ಲೆಯ 6 ತಾಲೂಕಿನ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ತಿಳಿಸಿದ್ದಾರೆ.

VISTARANEWS.COM


on

Necessary Preparation for North East Graduate Constituency Election Voting says DC M S Diwakar
Koo

ಹೊಸಪೇಟೆ: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ (MLC Election) ಮತದಾನವು ಜೂನ್ 3ರಂದು ವಿಜಯನಗರ ಜಿಲ್ಲೆಯ 6 ತಾಲೂಕಿನ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಪರಿಷತ್‌ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 15 ಮತಗಟ್ಟೆಗಳು ಮತ್ತು 5880 ಮತದಾರರು ಇದ್ದರು. ಈ ಬಾರಿ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಬಗ್ಗೆ ಉತ್ತಮವಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೊಸಪೇಟೆ, ಹರಪನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳ ವ್ಯಾಪ್ತಿಯಲ್ಲಿನ ಒಟ್ಟು ಪುರುಷ ಮತದಾರರು 11,895 ಹಾಗೂ ಮಹಿಳಾ ಮತದಾರರು 6336 ಮತ್ತು ಇತರೆ ಇಬ್ಬರು ಸೇರಿ ಒಟ್ಟು 18,233 ಮತದಾರರು ಮತದಾನ ಮಾಡಲು ಅರ್ಹರಿದ್ದಾರೆ ಎಂದು ಅವರು ತಿಳಿಸಿದರು.

ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ 6 ತಾಲೂಕುಗಳ ಕಚೇರಿಯಲ್ಲಿ ಮತದಾರ ಸಹಾಯವಾಣಿ ಕೇಂದ್ರ ಇದ್ದು ಹರಪನಹಳ್ಳಿ – 08398-280262, ಹಡಗಲಿ- 08399-240238, ಹೊಸಪೇಟೆ- 08394-224208, ಕೂಡ್ಲಿಗಿ- 08391297121., ಕೊಟ್ಟೂರು- 08391-225400 ಮತ್ತು ಎಚ್.ಬಿ. ಹಳ್ಳಿ- 914662854 ಇದ್ದು ಈ ಸಹಾಯವಾಣಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮತಗಟ್ಟೆ ಸಂಖ್ಯೆ, ಕ್ರಮ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಜಯನಗರ ಜಿಲ್ಲೆಯ 21 ಮತಗಟ್ಟೆ ಕೇಂದ್ರಗಳ ಮಾಹಿತಿಯನ್ನು ಮತದಾರದಾರರಿಗೆ ನೀಡಲಾಗಿದೆ. ಜತೆಗೆ ಮತದಾರ ಚೀಟಿಯನ್ನು ಸಹ ವಿತರಣೆ ಮಾಡಲಾಗಿದೆ. ಮತದಾರರ ಚೀಟಿಯಲ್ಲಿ ಮತಗಟ್ಟೆ ಮಾಹಿತಿಯ ಸಂಪೂರ್ಣ ವಿವರಣೆ ಮತ್ತು ಮತಗಟ್ಟೆ ಕೇಂದ್ರಗಳ ಕ್ಯೂಆರ್ ಕೋಡ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

ಮತದಾನ ಆದ್ಯಾತಾನುಸಾರ ಚಲಾವಣೆ ಮಾಡಬೇಕಾಗಿರುತ್ತದೆ. ಅದಕ್ಕೆ ಮತದಾನ ಚಲಾವಣೆ ಕುರಿತು ಜಿಲ್ಲಾಮಟ್ಟದ ಸ್ವೀಪ್ ಸಮಿತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಭಾರತ ಚುನಾವಣೆ ಆಯೋಗವು ಮತ ಚಲಾವಣೆಗಾಗಿ ನೀಡಿರುವ ನೇರಳೆ ಬಣ್ಣದ ಸ್ಕೇಚ್‌ಪೆನ್‌ಗಳ ಮೂಲಕ ಮಾತ್ರ ಮತ ಚಲಾವಣೆ ಮಾಡಬೇಕಾಗಿರುತ್ತದೆ ಎಂದರು.

ಮತದಾನ ದಿನದಂದು ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಹಾಗೂ ಸಹಾಯವಾಣಿ ಕೇಂದ್ರಕ್ಕೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮತಗಟ್ಟೆ ಇರುವ ಪ್ರದೇಶದ ವ್ಯಾಪ್ತಿಯಲ್ಲಿ ಚುನಾವಣೆಯು ಶಾಂತಿ ಹಾಗೂ ಮುಕ್ತ ನ್ಯಾಯಸಮ್ಮತವಾಗಿ ನಡೆಯುವ ಸಂಬಂಧ ಜೂನ್ 1ರ ಸಂಜೆ 6 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿವರೆಗೆ ಸಿಆರ್‌ಪಿಸಿ ಕಲಂ 144 ರಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯೋಗಿಕ ಸಂಸ್ಥೆಗಳಲ್ಲಿ ಮತ್ತು ಇತರ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂನ್ 03ರ ಸೋಮವಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಮೇ 29ರಂದು ಹೊರಡಿಸಿದ ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ಆದೇಶಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ: Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಚುನಾವಣಾ ಶಾಖೆಯ ಮನೋಜ್ ಲಾಡೆ ಇದ್ದರು.

Continue Reading

ಕರ್ನಾಟಕ

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

ಪೆನ್‌ಡ್ರೈವ್‌ ತಲೆಬಿಸಿಯ ಮಧ್ಯೆಯೇ ಎಚ್‌.ಡಿ.ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್‌ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗ ಅವ್ಯಾನ್‌ ಜತೆಗೂಡಿ ಕಬಿನಿಯ ಜಂಗಲ್‌ ಲಾಡ್ಜ್‌ಗೆ ತೆರಳಿದ್ದಾರೆ. ಕುಟುಂಬಸ್ಥರ ಜತೆಗೂಡಿ ಕುಮಾರಸ್ವಾಮಿ ಅವರು ಬೋಟಿಂಗ್‌ ಹೋಗಿರುವ ವಿಡಿಯೊ ಲಭ್ಯವಾಗಿದೆ. ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಆಗಮಿಸುತ್ತಿದ್ದು, ಮುಜುಗರದಿಂದ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರು ರೆಸಾರ್ಟ್‌ಗೆ ತೆರಳಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case
Koo

ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ (Prajwal Revanna Case) ಸಿಲುಕಿರುವ ಪ್ರಜ್ವಲ್‌ ರೇವಣ್ಣ 33 ದಿನಗಳ ಬಳಿಕ ಭಾರತಕ್ಕೆ ಬರುತ್ತಿದ್ದಾರೆ. ಜರ್ಮನಿಯ ಮ್ಯೂನಿಕ್‌ನಿಂದ ಪ್ರಜ್ವಲ್‌ ಬೆಂಗಳೂರಿಗೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಇದರ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬಸ್ಥರ ಜತೆ ಅವರು ಕಬಿನಿಯಲ್ಲಿ ಬೋಟಿಂಗ್‌ ತೆರಳಿರುವ ವಿಡಿಯೊ ಈಗ ಲಭ್ಯವಾಗಿದೆ.

ಹೌದು, ಪೆನ್‌ಡ್ರೈವ್‌ ತಲೆಬಿಸಿಯ ಮಧ್ಯೆಯೇ ಎಚ್‌.ಡಿ.ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್‌ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗ ಅವ್ಯಾನ್‌ ಜತೆಗೂಡಿ ಕಬಿನಿಯ ಜಂಗಲ್‌ ಲಾಡ್ಜ್‌ಗೆ ತೆರಳಿದ್ದಾರೆ. ಕುಟುಂಬಸ್ಥರ ಜತೆಗೂಡಿ ಕುಮಾರಸ್ವಾಮಿ ಅವರು ಬೋಟಿಂಗ್‌ ಹೋಗಿರುವ ವಿಡಿಯೊ ಲಭ್ಯವಾಗಿದೆ. ಇನ್ನು, ಗುರುವಾರ ರಾತ್ರಿ ಕಬಿನಿಯ ರೆಸಾರ್ಟ್‌ನಲ್ಲಿಯೇ ಕುಮಾರಸ್ವಾಮಿ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಗುರುವಾರ ತಡರಾತ್ರಿ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಆಗಮಿಸುತ್ತಿದ್ದು, ಮುಜುಗರದಿಂದ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರು ರೆಸಾರ್ಟ್‌ಗೆ ತೆರಳಿದ್ದಾರೆ ಎನ್ನಲಾಗಿದೆ.

ಏರ್‌ಪೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳ ಲಗ್ಗೆ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಈಗಾಗಲೇ ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಇಮಿಗ್ರೇಷನ್‌ ಡೆಸ್ಕ್‌ ಬಳಿ ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ವಿಮಾನ ಲ್ಯಾಂಡಿಂಗ್‌ ಕುರಿತು, ವಿಮಾನದಲ್ಲಿ ಯಾರಿದ್ದಾರೆ ಎಂಬುದು ಸೇರಿ ವಿವಿಧ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಪಡೆಯುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಅವರ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಇಮಿಗ್ರೇಷನ್‌ ಅಧಿಕಾರಿಗಳು ಸ್ಟ್ಯಾಂಪ್‌ ಹಾಕುತ್ತಾರೆ. ಸ್ಟ್ಯಾಂಪ್‌ ಹಾಕಿ, ಪರಿಶೀಲನೆ ಮುಗಿದ ಬಳಿಕವೇ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ಕರೆದೊಯ್ಯಲು ಎಸ್‌ಐಟಿ 4 ಪ್ಲಾನ್‌

ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಲೇ ಮಹಿಳೆಯರ ಪ್ರತಿಭಟನೆ, ಬೆಂಬಲಿಗರ ಘೋಷಣೆ, ಪತ್ರಕರ್ತರು ಹಾಗೂ ವಕೀಲರ ಕಣ್ತಪ್ಪಿಸಿ ಕರೆದುಕೊಂಡು ಹೋಗಲು ಎಸ್‌ಐಟಿ 4 ಪ್ಲಾನ್‌ ಮಾಡಿದೆ ಎಂದು ತಿಳಿದುಬಂದಿದೆ. ಟರ್ಮಿನಲ್‌ 2 ಆಗಮನದ ಗೇಟ್‌, ಟರ್ಮಿನಲ್‌ 2 ವಿಐಪಿ ಎಕ್ಸಿಟ್‌ ಗೇಟ್‌, ಟರ್ಮಿನಲ್‌ 2 ಒಳಭಾಗದಿಂದ ಟರ್ಮಿನಲ್‌ 1ರ ಮೂಲಕ ಹೊರತರುವುದು ಇಲ್ಲವೇ ಟರ್ಮಿನಲ್‌ 1 ಬಳಿಯ ಆಲ್ಫಾ ಗೇಟ್‌ನಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಯೋಜನೆ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

Continue Reading

ಪ್ರಮುಖ ಸುದ್ದಿ

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Cow Smugling: ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ವಾಹನ ತಡೆದು ಗೋವುಗಳ ರಕ್ಷಣೆ ಮಾಡಲಾಗಿದೆ. ಮಸ್ಕನಳ್ಳಿ ಗ್ರಾಮದಿಂದ ಕಲಬುರಗಿಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

VISTARANEWS.COM


on

Cow Smugling
Koo

ಯಾದಗಿರಿ: ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ (Cow Smugling) ವಾಹನವನ್ನು ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿದಿದ್ದಾರೆ. ಆ ವಾಹನದಲ್ಲಿ ನಿರ್ದಯವಾಗಿ ಹಾಕಲಾಗಿದ್ದ 7 ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುವವರರ ಬಗ್ಗೆ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ವಾಹನ ತಡೆದು ಗೋವುಗಳ ರಕ್ಷಣೆ ಮಾಡಲಾಗಿದೆ. ಮಸ್ಕನಳ್ಳಿ ಗ್ರಾಮದಿಂದ ಕಲಬುರಗಿಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೇ ಹಾಗೂ ನಿರ್ದಾಕ್ಷಿಣ್ಯ ರೀತಿಯಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಮಾಹಿತಿಯನ್ನು ಸ್ಥಳೀಯರು ಬಜರಂಗದಳ ಕಾರ್ಯಕರ್ತರಿಗೆ ನೀಡಿದ್ದರು. ತಕ್ಷಣ ಗೋ ಸಾಗಾಟದ ವಾಹನವನ್ನು ಬೆನ್ನಟ್ಟಿ ತಡೆದು ಬಜರಂಗದಳ ಕಾರ್ಯಕರ್ತರು ಅವುಗಳನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ನೀಡಿದ್ದಾರೆ.

ಸಾಧಾರಣಾ ಟಾಟಾ ಸುಮೋ ವಾಹನದಲ್ಲಿ 7 ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರಣ ಅವರುಗಳೆಲ್ಲೂ ಗಂಭೀರ ಸ್ಥಿತಿಯಲ್ಲಿದ್ದವು. ಗೋವುಗಳನ್ನು ರಕ್ಷಿಸಿ ವಾಹನ ಸಹಿತ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಇದೇ ವೇಳೆ ಕಾರ್ಯಕರ್ತರು ಆರೋಪಿಸಿದ್ದಾರೆ. ಬಕ್ರಿದ್ ಹಬ್ಬಕ್ಕೆ ಅತೀ ಹೆಚ್ಚು ಗೋವು ಸಾಗಾಣಿಕೆ ಆಗ್ತಿವೆ. ಇದರಿಂದ ಸ್ಥಳೀಯವಾಗಿ ಸಮಸ್ಯೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನಿರುಪದ್ರವಿ ಗೋವುಗಳನ್ನು ತೆಗೆದುಕೊಂಡು ಹೋಗಿ ಮಾಂಸಕ್ಕಾಗಿ ಕಡಿಯಲಾಗಿತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಗೋವಿನ ರಕ್ಷಣೆ ಮಾಡಬೇಕೆಂದು ಬಜರಂಗದಳ ಮುಖಂಡ ಶಿವಕುಮಾರ ಅಗ್ರಹಿಸಿದ್ದಾರೆ.

Continue Reading
Advertisement
Reserve Bank of India
ದೇಶ28 mins ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ36 mins ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್1 hour ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು2 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ2 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್2 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ2 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ2 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Viral Video
ವೈರಲ್ ನ್ಯೂಸ್2 hours ago

Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

Cow Smugling
ಪ್ರಮುಖ ಸುದ್ದಿ2 hours ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ9 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌