ಸೆ.17ರಂದು ಮಲ್ಲೇಶ್ವರದಲ್ಲಿ ಸಿಯುಪಿಎಚ್‌ಸಿ ಉದ್ಘಾಟನೆ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ - Vistara News

ಆರೋಗ್ಯ

ಸೆ.17ರಂದು ಮಲ್ಲೇಶ್ವರದಲ್ಲಿ ಸಿಯುಪಿಎಚ್‌ಸಿ ಉದ್ಘಾಟನೆ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಸೆ.17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

VISTARANEWS.COM


on

ಸಿಇಟಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೂಕ್ತ ತಪಾಸಣೆ, ಪ್ರಯೋಗಾಲಯ, ಚಿಕಿತ್ಸೆ ಮತ್ತು ಔಷಧಗಳು ಉಚಿತವಾಗಿ ಇಲ್ಲವೇ ಕೈಗೆಟುಕುವ ದರದಲ್ಲಿ ಒಂದೇ ಕಡೆ ಲಭ್ಯವಾಗುವಂತಹ ‘ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ’ವು (ಸಿಯುಪಿಎಚ್‌ಸಿ) ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಅಸ್ತಿತ್ವಕ್ಕೆ ಬರುತ್ತಿದೆ. ಸುಸಜ್ಜಿತ ಸಾರ್ವಜನಿಕ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ದಿನವಾದ ಸೆ.17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಬಿಎಂಪಿ ಮತ್ತು ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸ್ ಸಹಯೋಗದಲ್ಲಿ ಈ ವಿನೂತನ ಮತ್ತು ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ಹಲವು ಸಾರ್ವಜನಿಕರು ಕೂಡ ದೇಣಿಗೆ ನೀಡಿದ್ದಾರೆ. ಇಲ್ಲಿ ಪ್ರಯೋಗಾಲಯ, ಡಿಜಿಟಲ್ ಎಕ್ಸ್‌ರೇ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಪಿಎಫ್‌ಟಿ ಮತ್ತು ಇಸಿಜಿ ಸೌಲಭ್ಯಗಳು ಸಿಗುತ್ತವೆ. ಇದಲ್ಲದೆ, ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆ ಇಲ್ಲದಂತಹ ಕಣ್ಣಿನ ಪರೀಕ್ಷೆ, ದಂತ ಪರೀಕ್ಷೆ, ತುರ್ತು ಚಿಕಿತ್ಸಾ ಘಟಕ, ಫಿಸಿಯೋಥೆರಪಿ, ಪ್ರಧಾನಮಂತ್ರಿಗಳ ಜನೌಷಧ ಕೇಂದ್ರ ಎಲ್ಲವೂ ಇಲ್ಲಿ ಲಭ್ಯವಿರಲಿದ್ದು, ಒಳರೋಗಿಗಳ ವಿಭಾಗವೂ ಇದೆ. ಅಲ್ಲದೆ, ಆಸ್ಪತ್ರೆಯಲ್ಲಿ ಇಎಂಆರ್ (ಎಲೆಕ್ಟ್ರಾನಿಕ್ ಮೆಡಿಕಲ್ ರೆಕಾರ್ಡ್) ವ್ಯವಸ್ಥೆಯೂ ಇದೆ ಎಂದು ನುಡಿದರು.

ಇದನ್ನೂ ಓದಿ | ಬಿಬಿಎಂಪಿ ಚುನಾವಣೆಗೆ ಹಾದಿ ಸುಗಮ: ವಾರ್ಡ್‌ ವಿಂಗಡಣೆ ಕುರಿತು ಹೈಕೋರ್ಟ್‌ ಮಹತ್ವದ ಆದೇಶ

ಇಂತಹ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಲ್ಲೇಶ್ವರಂ ಕ್ಷೇತ್ರದ ನಾಗಪ್ಪ ಬ್ಲಾಕ್, ಗಾಂಧಿ ಗ್ರಾಮ, ಯಶವಂತಪುರ ಮತ್ತು ಮತ್ತೀಕೆರೆಗಳಲ್ಲಿ ಕೂಡ ಆಸ್ಪತ್ರೆಗಳನ್ನು ಹೀಗೆಯೇ ನವೀಕರಿಸಲಾಗಿದ್ದು, ಇವು ಒಂದು ತಿಂಗಳಲ್ಲಿ ಕಾರ್ಯಾರಂಭ ಮಾಡಲಿವೆ. ಈ ಆಸ್ಪತ್ರೆಗಳಿಗೆ ನಗರೋತ್ಥಾನ ಯೋಜನೆಯಡಿ ತಲಾ 1.50 ಕೋಟಿ ರೂ. ಕೊಡಲಾಗುತ್ತಿದೆ. ಉಳಿದ ಎರಡು ವಾರ್ಡುಗಳಲ್ಲೂ ಇಂತಹ ಸಿಯುಪಿಎಚ್‌ಸಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಈ ಆಸ್ಪತ್ರೆಗೆ ಬರುವವರಿಗೆ ಹೆಚ್ಚಿನ ಚಿಕಿತ್ಸೆ ಬೇಕಿದ್ದಲ್ಲಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯ ಒದಗಿಸಲಾಗುವುದು. ಇಲ್ಲಿ ವೈದ್ಯಕೀಯ ಗ್ಯಾಸ್‌ ಪೈಪ್‌ಲೈನ್‌ ಸಹಿತ ಆಕ್ಸಿಜನ್ ಜನರೇಟರ್ ಸೌಲಭ್ಯವನ್ನೂ ಅಳವಡಿಸಿಕೊಳ್ಳಲಾಗಿದೆ. ಹಾಗೆಯೇ, ಪರಿಣತ ವೈದ್ಯರು ಹೊರರೋಗಿಗಳ ವಿಭಾಗದಲ್ಲಿ ನೆರವು ನೀಡಲಿದ್ದಾರೆ. ಬಿಬಿಎಂಪಿ ಮತ್ತು ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಗಳಡಿ ಈ ಆಸ್ಪತ್ರೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಬ್ಬ ವೈದ್ಯರು ರಜೆಯ ಮೇಲಿದ್ದಾಗ ಮತ್ತೊಬ್ಬ ವೈದ್ಯರು ಕರ್ತವ್ಯದ ಮೇಲಿರುತ್ತಾರೆ. ಯುನೈಟೆಡ್ ವೇ ಎನ್ನುವ ಕಂಪನಿ ಈ ಆಸ್ಪತ್ರೆಗೆ ಬೇಕಾದ ಉಪಕರಣಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳೆಂದರೆ ಜನರಲ್ಲಿ ಒಳ್ಳೆಯ ಭಾವನೆ ಇಲ್ಲ. ಇನ್ನೊಂದೆಡೆಯಲ್ಲಿ, ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ. ಇದನ್ನು ಮನಗಂಡು, ಸಾರ್ವಜನಿಕ ಆಸ್ಪತ್ರೆಗಳ ಮೇಲೆ ಪುನಃ ವಿಶ್ವಾಸ ಮೂಡಿಸುವಂತಹ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಆಸ್ಪತ್ರೆಯಲ್ಲಿ ಒಂದು ದಿನಕ್ಕೆ ಗರಿಷ್ಠ 150 ಜನರಿಗೆ ಚಿಕಿತ್ಸೆ ಕೊಡಬಹುದು. ಇಲ್ಲಿ ಲಭ್ಯವಿಲ್ಲದ ಚಿಕಿತ್ಸೆಗಳನ್ನು ಮಣಿಪಾಲ್ ಸಮೂಹದ ಆಸ್ಪತ್ರೆಗಳ ಮೂಲಕ ಸರಕಾರಿ ದರದಲ್ಲಿ ಕೊಡಲಾಗುವುದು. ಈ ಸಂಬಂಧ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ | ನೀತಿ ಕತೆಗಳು ಮಕ್ಕಳ ಭವಿಷ್ಯಕ್ಕೆ ಪೂರಕ: ಕಥಾ ಲೋಕ ಕೃತಿಗೆ ರಾಜ್ಯಪಾಲರ ಶ್ಲಾಘನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

By

Doctors at Fortis Hospital remove fish bone from man's stomach for 5 years
Koo

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years
Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

By

Breast Cancer Awareness Month celebrated through bikethon
Koo

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

By

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia
African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Pink Strong walkathon to raise awareness among people about breast cancer
Koo

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading
Advertisement
Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ1 ದಿನ ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು2 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು2 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು2 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ3 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ3 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

assault case
ಬೆಂಗಳೂರು3 ದಿನಗಳು ago

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌