Fact Check | ಪಾಕಿಸ್ತಾನ ಜಿಂದಾಬಾದ್‌ ಎಂದ ಅಮೂಲ್ಯ ಜತೆ ಫೋಟೊಗೆ ಪೋಸ್‌ ಕೊಟ್ಟರೇ ರಾಹುಲ್‌ ಗಾಂಧಿ? - Vistara News

ಪ್ರಮುಖ ಸುದ್ದಿ

Fact Check | ಪಾಕಿಸ್ತಾನ ಜಿಂದಾಬಾದ್‌ ಎಂದ ಅಮೂಲ್ಯ ಜತೆ ಫೋಟೊಗೆ ಪೋಸ್‌ ಕೊಟ್ಟರೇ ರಾಹುಲ್‌ ಗಾಂಧಿ?

ಭಾರತ್‌ ಜೋಡೊ ಯಾತ್ರೆಯ ಭಾಗವಾಗಿ ಕೇರಳದಲ್ಲಿ ಪಾದಯಾತ್ರೆ ಮಾಡುತ್ತಿರುವ ರಾಹುಲ್‌ ಗಾಂಧಿಯವರು ಅಮೂಲ್ಯ ಲಿಯೋನಾ ಜತೆ ಫೋಟೊ ತೆಗೆಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಪದ Fact Check ಇಲ್ಲಿದೆ.

VISTARANEWS.COM


on

Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೊ ಯಾತ್ರೆ (Bharat Jodo Yatra) ಭಾಗವಾಗಿ ಕೇರಳದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ಮಾರ್ಗ ಮಧ್ಯೆ ಗ್ರಾಮಸ್ಥರು, ಮಕ್ಕಳು, ಮಹಿಳೆಯರು, ಯುವಕ-ಯುವತಿಯರು ರಾಹುಲ್‌ ಗಾಂಧಿ ಯಾತ್ರೆಗೆ ಸಾಥ್‌ ನೀಡುತ್ತಿದ್ದಾರೆ. ಇದರ ಮಧ್ಯೆಯೇ ರಾಹುಲ್‌ ಗಾಂಧಿ ವಿರುದ್ಧ ‘ಪಾಕಿಸ್ತಾನ ಜಿಂದಾಬಾದ್‌’ ಎಂದು ಘೋಷಣೆ ಕೂಗಿದ್ದ ಕರ್ನಾಟಕದ ಅಮೂಲ್ಯ ಲಿಯೋನಾ ಜತೆ ಫೋಟೊ ತೆಗೆಸಿಕೊಂಡ ಆರೋಪ (Fact Check) ಕೇಳಿಬಂದಿದೆ.

ಅಮೂಲ್ಯ ಲಿಯೋನಾ.

2020ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ (CAA) ವಿರೋಧಿಸಿ ನಡೆದ ಕಾರ್ಯಕ್ರಮದ ವೇಳೆ ವೇದಿಕೆ ಮೇಲೆಯೇ ಅಮೂಲ್ಯ ಲಿಯೋನಾ ‘ಪಾಕಿಸ್ತಾನ ಜಿಂದಾಬಾದ್’‌ ಎಂದು ಘೋಷಿಸಿದ್ದರು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಅವರಿದ್ದ ವೇದಿಕೆ ಮೇಲೆಯೇ ಹೀಗೆ ಪಾಕ್‌ ಪರ ಘೋಷಣೆ ಕೂಗಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಮೂಲ್ಯ ಲಿಯೋನಾರನ್ನು ಬಂಧಿಸಲಾಗಿತ್ತು. ಈಗ ರಾಹುಲ್‌ ಗಾಂಧಿ ಅವರು ಅಮೂಲ್ಯ ಜತೆ ಫೋಟೊ ತೆಗೆಸಿಕೊಂಡಿದ್ದಾರೆ ಎಂದು ಆರೋಪಿಸಿ ಟೀಕಿಸಲಾಗಿದೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರೇ ಈ ಕುರಿತು ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಫೋಟೊವನ್ನೂ ವೈರಲ್‌ ಮಾಡಲಾಗಿದೆ.

ನಿಜಾಂಶ ಏನು?

ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೊ ಯಾತ್ರೆ ಮಧ್ಯೆ ಯುವತಿಯೊಬ್ಬರ ಜತೆ ಫೋಟೊ ತೆಗೆಸಿಕೊಂಡಿದ್ದು ನಿಜ. ಆದರೆ, ಅದು ಅಮೂಲ್ಯ ಲಿಯೋನಾ ಜತೆ ಅಲ್ಲ ಎಂಬುದು ಸಾಬೀತಾಗಿದೆ. ಕೇರಳ ಕಾಂಗ್ರೆಸ್‌ ವಿದ್ಯಾರ್ಥಿಗಳ ಘಟಕದ ಸದಸ್ಯೆಯಾಗಿರುವ ಮಿವೆ ಜಾಲಿ (Mive Jolly) ಜತೆ ರಾಹುಲ್‌ ಗಾಂಧಿ ಫೋಟೊ ತೆಗೆಸಿಕೊಂಡಿದ್ದಾರೆ. ಆದರೆ, ಜಾಲತಾಣದಲ್ಲಿ ಇದರ ಕುರಿತು ತಪ್ಪಾಗಿ ಮಾಹಿತಿ ಹರಿಬಿಡಲಾಗಿದೆ. ಸುಳ್ಳು ಮಾಹಿತಿ ಹರಡಿಸಿದ ಕಾರಣ ಕಾಂಗ್ರೆಸ್‌, ಪ್ರೀತಿ ಗಾಂಧಿ ವಿರುದ್ಧ ಕೇಸ್‌ ದಾಖಲಿಸಿದೆ.

ಇದನ್ನೂ ಓದಿ | Fact Check | ಮದ್ಯ ಸೇವಿಸುತ್ತ ರಾಹುಲ್‌ ಗಾಂಧಿ ವಿಡಿಯೊ ವೀಕ್ಷಿಸಿದರೇ ಸ್ಮೃತಿ ಇರಾನಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Prajwal Revanna Case: ಫ್ಲೈಟ್ ಟಿಕೆಟ್ ಬುಕ್‌ ಮಾಡಿರುವ ಆಧಾರದಂತೆ ಇಂದು ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯರಾತ್ರಿ 12.35ಕ್ಕೆ ಟರ್ಮಿನಲ್ 2ಗೆ ಆಗಮಿಸಲಿರುವ ಪ್ರಜ್ವಲ್ ಅನ್ನು ʼಸ್ವಾಗತಿಸಲುʼ ಟರ್ಮಿನಲ್ 2ನಲ್ಲಿ ಎಸ್ಐಟಿ ತಂಡ ಬೀಡು ಬಿಟ್ಟಿದೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ವಿಮಾನ ಹತ್ತಿದ್ದಾರೆಯೇ ಇಲ್ಲವೇ ಎಂಬುದು ಖಚಿತವಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ನಾಳೆ ಎಸ್ಐಟಿ (SIT) ಎದುರು ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ (Prajwal Revanna Case) ಬಿಡುಗಡೆ ಮಾಡಿದ ವಿಡಿಯೋದಲ್ಲಿ (pen drive case) ಹೇಳಿರುವ ಹಾಗೂ ಇಂದು ಮಧ್ಯಾಹ್ನ ಜರ್ಮನಿಯ ಮ್ಯೂನಿಚ್‌ನಿಂದ ಪ್ರಜ್ವಲ್ ರೇವಣ್ಣ ಹೆಸರಲ್ಲಿ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಹಿನ್ನೆಲೆಯಲ್ಲಿ, ಹಾಸನ ಸಂಸದರ (Hassan MP) ಬಂಧನಕ್ಕೆ ಪೊಲೀಸರು ಕ್ಷಣಗಣನೆ ಆರಂಭಿಸಿದ್ದಾರೆ.

ಫ್ಲೈಟ್ ಟಿಕೆಟ್ ಬುಕ್‌ ಮಾಡಿರುವ ಆಧಾರದಂತೆ ಇಂದು ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯರಾತ್ರಿ 12.35ಕ್ಕೆ ಟರ್ಮಿನಲ್ 2ಗೆ ಆಗಮಿಸಲಿರುವ ಪ್ರಜ್ವಲ್ ಅನ್ನು ʼಸ್ವಾಗತಿಸಲುʼ ಟರ್ಮಿನಲ್ 2ನಲ್ಲಿ ಎಸ್ಐಟಿ ತಂಡ ಬೀಡು ಬಿಟ್ಟಿದೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ವಿಮಾನ ಹತ್ತಿದ್ದಾರೆಯೇ ಇಲ್ಲವೇ ಎಂಬುದು ಖಚಿತವಾಗಲಿದೆ.

ಪ್ರಜ್ವಲ್ ವಿಡಿಯೋ ಮಾಡಿ ಕಳಿಸಿರುವುದು ಎಲ್ಲಿಂದ ಎಂಬುದನ್ನು ನಿನ್ನೆಯೇ ಎಸ್‌ಐಟಿ ಪತ್ತೆ ಹಚ್ಚಿದೆ. ಯುರೋಪ್‌ನ ಹಂಗೇರಿನಿಂದ ಈ ವಿಡಿಐೋ ಬಿಡುಗಡೆಯಾಗಿದೆ. ಅಲ್ಲಿಂದ ಮ್ಯೂನಿಚ್‌ಗೆ ಬಂದು ಪ್ರಜ್ವಲ್‌ ವಿಮಾನ ಹಿಡಿಯಬೇಕಿದೆ. ಹಂಗೇರಿ, ಬುಡಾಪೆಸ್ಟ್‌, ಜರ್ಮನಿ ಎಂದು ಕಳೆದ ಒಂದು ತಿಂಗಳಿನಿಂದ ಪ್ರಜ್ವಲ್‌ ಓಡಾಡುತ್ತಿದ್ದಾರೆ. ಅವರು ಇಲ್ಲೆಲ್ಲಾ ತಮ್ಮ ಗೆಳೆಯರ ಆಶ್ರಯ ಪಡೆದಿದ್ದರೇ, ಎಲ್ಲಿ ತಂಗಿದ್ದರು ಎಂಬ ಮಾಹಿತಿ ದೊರೆಯಬೇಕಿದೆ.

ಇನ್ನೊಂದೆಡೆ, ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ರೊಚ್ಚಿಗೆದ್ದಿರುವ ಮಹಿಳಾ ಸಂಘಟನೆಗಳು, ಕೆಂಪೇಗೌಡ ವಿಮಾನ ನಿಲ್ದಾಣದ ಮುಂದೆ ಪ್ರತಿಭಟನೆಗೆ ಇಳಿಯಲು ಸಿದ್ಧತೆ ನಡೆಸಿವೆ. ಹಾಸನದಲ್ಲಿ ಇಂದು ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳಿಂದ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 10 ಸಾವಿರಕ್ಕೂ ಹೆಚ್ಚು ಹೋರಾಟಗಾರರು ಆಗಮಿಸುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಸನದಲ್ಲಿ ಪೊಲೀಸ್ ಬಿಗಿ ಭದ್ರತೆ ಹಾಕಲಾಗಿದೆ.

ನಿಜಕ್ಕೂ ವಾಪಸಾಗ್ತಾರಾ ಪ್ರಜ್ವಲ್?‌

ಪ್ರಜ್ವಲ್ ರೇವಣ್ಣ ಕುಟುಂಬ ಸಲ್ಲಿಸಿದ ಜಾಮೀನು ಅರ್ಜಿಗಳೆಲ್ಲವೂ ಕೂಡ ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಮುಂದೂಡಿಕೆ ಆಗುತ್ತಲೇ ಇವೆ. ಹೀಗಾಗಿ ಪ್ರತಿ ದಿನ ರೇವಣ್ಣ ಕುಟುಂಬ ಟೆನ್ಷನ್‌ನಲ್ಲಿರಬೇಕಾಗಿದೆ. ನಿನ್ನೆ ನಡೆದ ಭವಾನಿ ರೇವಣ್ಣ ಅವರ ಸುದೀರ್ಘ ವಿಚಾರಣೆ ಬಳಿಕವೂ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಬೆಳವಣಿಗಯಿಂದ ಪ್ರಜ್ವಲ್ ವಾಪಾಸಾಗ್ತಾರಾ ಎಂಬುದೇ ಅನುಮಾನಕ್ಕೀಡು ಮಾಡಿದೆ.‌

ಪ್ರಜ್ವಲ್ ಬರುತ್ತಿದ್ದಂತೆ SIT ಅಧಿಕಾರಿಗಳು ಪ್ರಜ್ವಲ್‌ರನ್ನು ಬಂಧಿಸಲು ಸಿದ್ಧರಾಗಿದ್ದಾರೆ. ಅದಕ್ಕೂ ಮುನ್ನ ಹೈ ಅಲಟ್೯ ಆದ ಪ್ರಜ್ವಲ್ ರೇವಣ್ಣ, ಇದೇ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಅವಕಾಶ ನೀಡದ ನ್ಯಾಯಾಲಯ, ಮೊದಲು ಅವರು ಬರಲಿ ಆಮೇಲೆ ನೋಡೋಣ, ಮೇ 31ಕ್ಕೆ ಅರ್ಜಿ ವಿಚಾರಣೆ ಮಾಡೋಣ ಅಂತ ಹೇಳಿ SIT ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಸದ್ಯ 3 ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್‌ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಪೊಲೀಸ್ ಠಾಣೆ, ಸೈಬರ್ ಕ್ರೈಂ ಠಾಣೆ, ಹೊಳೆನರಸೀಪುರ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ.

ಮೈಸೂರಿನ ಕೆ.ಆರ್. ನಗರ ಠಾಣೆಯ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ವಿಚಾರದಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿದೆ. ಇದೇ ವಿಚಾರಕ್ಕೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, SIT ಕೂಡಾ ಆಕ್ಷೇಪಣಾ ಅರ್ಜಿ ಸಲ್ಲಿಸಿ ಯಾವುದೇ ಕಾರಣಕ್ಕೂ ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ವಿಚಾರದ ಆದೇಶವನ್ನು ಮೇ 31ಕ್ಕೆ ಮುಂದೂಡಿದ್ದಾರೆ.

ತನಿಖೆಗೆ ಸಹಕರಿಸುವುದಾಗಿ ಪ್ರಜ್ವಲ್‌ ಹೇಳಿದ್ದಾರೆ. ಆದರೆ ನಿರೀಕ್ಷಣಾ ಜಾಮೀನು ಸಿಗದ ಹಿನ್ನೆಲೆಯಲ್ಲಿ, ಬಂಧನ ತಪ್ಪಿಸಿಕೊಳ್ಳಲು ಅಲ್ಲೇ ಉಳಿಯುವ ಚಿಂತನೆ ಮಾಡುವ ಸಾಧ್ಯತೆಯೂ ಇದೆ. ಕಳೆದ ಬಾರಿಯೂ SIT ವಿಚಾರಣೆಗೆ ಬರಲು ಪ್ರಜ್ವಲ್‌ ಒಂದು ವಾರ ಕಾಲಾವಕಾಶ ಕೇಳಿದ್ದರು. ಆದರೆ ಒಂದು ತಿಂಗಳ ನಂತರವೂ SIT ವಿಚಾರಣೆಗೆ ಬಂದಿಲ್ಲ.

ಇದನ್ನೂ ಓದಿ: Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Continue Reading

ಕ್ರೀಡೆ

Norway Chess: ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್​ಗೆ ಸೋಲುಣಿಸಿದ ಪ್ರಜ್ಞಾನಂದ

Norway Chess: ಗೆಲುವಿನ ಕುರಿತು ಮಾತನಾಡಿರುವ ಪ್ರಜ್ಞಾನಂದ, ಅತ್ಯಂತ ಪ್ರಬಲ ಆಟಗಾರನನ್ನು ಸೋಲಿಸಿದರೆ, ಅದು ಯಾವಾಗಲೂ ವಿಶೇಷವಾಗಿರುತ್ತದೆ. ಏಕೆಂದರೆ ಅವರನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಚೆಸ್​ನಲ್ಲಿ ವಿಶ್ವ ಚಾಂಪಿಯನ್ ವಿರುದ್ಧ ಮೊದಲ ಬಾರಿಗೆ ಗೆದ್ದಿರುವುದು ಖುಷಿ ಕೊಟ್ಟಿದೆ. ಇದೇ ಪ್ರದರ್ಶನವನ್ನು ಮುಂದುವರಿಸುವ ನಂಬಿಕೆ ಇದೆ ಎಂದು ಅವರು ಹೇಳಿದರು.

VISTARANEWS.COM


on

Norway Chess
Koo

ಬೆಂಗಳೂರು: ಭಾರತದ ಉದಯೋನ್ಮುಖ ಚೆಸ್ ತಾರೆ ಆರ್. ಪ್ರಜ್ಞಾನಂದ(R Praggnanandhaa) ಅವರು ವಿಶ್ವ ನಂ.1, ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್‌(Magnus Carlsen)ಗೆ ಸೋಲುಣಿಸಿದ್ದಾರೆ. ಮೇ 29 ಬುಧವಾರ ತಡರಾತ್ರಿ ನಡೆದ ನಾರ್ವೆ ಚೆಸ್(Norway Chess) ಪಂದ್ಯಾವಳಿಯ ಮೂರನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದರು. ಇದು ಮ್ಯಾಗ್ನಸ್ ವಿರುದ್ಧ ಪ್ರಜ್ಞಾನಂದಗೆ ಒಲಿದ ಮೊದಲ ಗೆಲುವು. 3 ಸುತ್ತುಗಳ ಬಳಿಕ ಅಂಕಪಟ್ಟಿಯಲ್ಲಿ ಪ್ರಜ್ಞಾನಂದ(5.5) ಮೊದಲ ಸ್ಥಾನ ಪಡೆದಿದ್ದರೆ, ಕಾರ್ಲ್‌ಸನ್‌(3) 5ನೇ ಸ್ಥಾನಿಯಾಗಿದ್ದಾರೆ.

ಮಹಿಳಾ ವಿಭಾಗದಲ್ಲಿ ಭಾರತದ ಯುವ ಆಟಗಾರ್ತಿ, ಪ್ರಜ್ಞಾನಂದ ಅವರ ಸಹೋದರಿ, ಗ್ರ್ಯಾಂಡ್‌ಮಾಸ್ಟರ್‌ ಆರ್‌.ವೈಶಾಲಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಸ್ವದೇಶದ ಅನುಭವಿ ಆಟಗಾರ್ತಿ ಕೋನೇರು ಹಂಪಿ ಅವರನ್ನು ಸೋಲಿಸಿ ನಾರ್ವೆ ಚೆಸ್‌ ಟೂರ್ನಿಯ ನಂತರ ಮಹಿಳಾ ವಿಭಾಗದಲ್ಲಿ ಮಂಗಳವಾರ ಅಗ್ರಸ್ಥಾನಕ್ಕೇರಿದ್ದರು. ಆ ಬಳಿಕದ ಪಂದ್ಯದಲ್ಲಿ ಮುಜಿಚುಕ್ ಅವರೊಂದಿಗೆ ಡ್ರಾ ಸಾಧಿಸುವಲ್ಲಿ ಯಶಸ್ವಿಯಾದರು. ಸದ್ಯ ಮಹಿಳಾ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ Candidates Chess: ಪ್ರಜ್ಞಾನಂದ, ವಿದಿತ್​ಗೆ ಗೆಲುವು; ವೈಶಾಲಿ, ಹಂಪಿಗೆ ಸೋಲು

ಗೆಲುವಿನ ಕುರಿತು ಮಾತನಾಡಿರುವ ಪ್ರಜ್ಞಾನಂದ, ಅತ್ಯಂತ ಪ್ರಬಲ ಆಟಗಾರನನ್ನು ಸೋಲಿಸಿದರೆ, ಅದು ಯಾವಾಗಲೂ ವಿಶೇಷವಾಗಿರುತ್ತದೆ. ಏಕೆಂದರೆ ಅವರನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಚೆಸ್​ನಲ್ಲಿ ವಿಶ್ವ ಚಾಂಪಿಯನ್ ವಿರುದ್ಧ ಮೊದಲ ಬಾರಿಗೆ ಗೆದ್ದಿರುವುದು ಖುಷಿ ಕೊಟ್ಟಿದೆ. ಇದೇ ಪ್ರದರ್ಶನವನ್ನು ಮುಂದುವರಿಸುವ ನಂಬಿಕೆ ಇದೆ ಎಂದು ಅವರು ಹೇಳಿದರು.

ಕಳೆದ ವರ್ಷ ನಡೆದಿದ್ದ ವಿಶ್ವಕಪ್​ ಚೆಸ್​ ಟೂರ್ನಿಯ(Chess World Cup) ಫೈನಲ್​ ಪಂದ್ಯದಲ್ಲಿ ಪ್ರಜ್ಞಾನಂದ ತೀವ್ರ ಪೈಪೋಟಿ ನೀಡಿ ಸಣ್ಣ ಅಂತರದಿಂದ ಸೋಲು ಕಂಡಿದ್ದರು. ಫೈನಲ್​ ಪಂದ್ಯದ ಟೈ ಬ್ರೇಕರ್​ನ ಮೊದಲ ಸೆಟ್​ನಲ್ಲಿ ಪ್ರಜ್ಞಾನಂದ ಹಿನ್ನಡೆ ಅನುಭವಿಸಿ, ಆ ಬಳಿಕದ ಸುತ್ತಿನಲ್ಲಿ ಡ್ರಾ ಸಾಧಿಸಿದ್ದರೂ 1-0 ಮುನ್ನಡೆ ಕಾಯ್ದುಕೊಂಡ ಮ್ಯಾಗ್ನಸ್‌ ಕಾರ್ಲ್‌ಸನ್‌ ಗೆದ್ದು ವಿಶ್ವ ಕಿರೀಟ ತಮ್ಮದಾಗಿಸಿಕೊಂಡಿದ್ದರು. ಪ್ರಜ್ಞಾನಂದ ಅವರು ವಿಶ್ವನಾಥನ್‌ ಆನಂದ್‌ ಬಳಿಕ ಚೆಸ್‌ ವಿಶ್ವಕಪ್‌ನಲ್ಲಿ ಫೈನಲ್​ ಪ್ರವೇಶಿಸಿದ ಕೇವಲ 2ನೇ ಭಾರತೀಯ ಎನಿಸಿಕೊಂಡಿದ್ದರು.

18 ವರ್ಷದ ಚೆಸ್​ ಆಟಗಾರ ಯಾವಾಗಲೂ ತನ್ನ ತಾಯಿ ನಾಗಲಕ್ಷ್ಮಿ ಅವರ ಜತೆಗೆ ಇರುವ ಪ್ರತಿಭೆ. ತಾಯಿಯೂ ಪ್ರತಿ ಕ್ಷಣವೂ ಮಗನ ಜತೆಗೆ ಇರುತ್ತಾರೆ. ಈ ಮೂಲಕ ಅವರು ಪುತ್ರನ ಯಶಸ್ಸಿನ ಬಲವಾದ ಆಧಾರಸ್ತಂಭ ಎನಿಸಿಕೊಂಡಿದ್ದಾರೆ.

3 ಸುತ್ತುಗಳ ಬಳಿಕ ಪಾಯಿಂಟ್ಸ್​

ಪುರುಷರ ವಿಭಾಗ

ಆರ್ ಪ್ರಜ್ಞಾನಂದ – 5.5

ಫ್ಯಾಬಿಯೊ ಕರುವಾನಾ – 5

ಹಿಕಾರು ನಕಮುರಾ – 4

ಅಲಿರೆಜಾ ಫಿರೋಜ್ಜಾ – 3.5

ಮ್ಯಾಗ್ನಸ್ ಕಾರ್ಲ್​ಸೆನ್ – 3

ಡಿಂಗ್ ಲಿರೆನ್ – 2.5

ಮಹಿಳಾ ವಿಭಾಗ


ಆರ್ ವೈಶಾಲಿ – 5.5

ಜು ವೆಂಜುನ್- 4.5

ಲೀ ಟಿಂಗ್ಜಿ- 4

ಪಿಯಾ ಕ್ರಾಮ್ಲಿಂಗ್ – 3

ಕೊನೇರು ಹಂಪಿ – 3

ಅನ್ನಾ ಮುಜಿಚುಕ್ – 3

Continue Reading

ಕ್ರೀಡೆ

Paris Olympics 2024: ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಸಿಗಲಿದೆ ಭಾರೀ ನಗದು ಬಹುಮಾನ; ಮಹತ್ವದ ನಿರ್ಧಾರ ಕೈಗೊಂಡ ಐಬಿಎ

Paris Olympics 2024: ಹಣಕಾಸು ವಿಷಯದಲ್ಲಿ ಪಾರದರ್ಶಕತೆ ಕಾಪಾಡದ ಕಾರಣಕ್ಕೆ ಐಒಸಿ, ಬಾಕ್ಸಿಂಗ್ ಸಂಸ್ಥೆಯನ್ನು ನಿರ್ಬಂಧಿಸಿದೆ. 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

VISTARANEWS.COM


on

Paris Olympics 2024
Koo

ನವದೆಹಲಿ: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ. ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ.

ಇಲ್ಲಿ ಗಮನಿಸಬೇಕದ ವಿಚಾರವೆಂದರೆ ಹಣಕಾಸು ವಿಷಯದಲ್ಲಿ ಪಾರದರ್ಶಕತೆ ಕಾಪಾಡದ ಕಾರಣಕ್ಕೆ ಐಒಸಿ, ಬಾಕ್ಸಿಂಗ್ ಸಂಸ್ಥೆಯನ್ನು ನಿರ್ಬಂಧಿಸಿದೆ. 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಬೋಟ್‌ಗಳಲ್ಲೇ ಪರೇಡ್

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

ಟೋಕಿಯೊ ಒಲಿಂಪಿಕ್ ಕೂಟದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಜಯಿಸಿದ್ದದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಪ್ಯಾರಿಸ್‌ನಲ್ಲಿಯೂ ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿದೆ.

“ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ)ಯಿಂದ ಬರುವ ಹಣವು ಒಲಿಂಪಿಕ್ ಕ್ರೀಡೆಗಳಿಗೆ ಮರಳಿ ಹೋಗುವಂತೆ ಮಾಡಿರುವುದು ಸಂತಸ ತಂದಿದೆ. ಡೈಮಂಡ್ ಲೀಗ್, ಕಾಂಟಿನೆಂಟಲ್ ಕಪ್‌ಗಳಲ್ಲಿ ಪದಕ ಗೆದ್ದಾಗ ನಗದು ಬಹುಮಾನ ಇರುತ್ತಿತ್ತು. ಆದರೆ ಒಲಿಂಪಿಕ್ಸ್ ಬಹುಮಾನದಲ್ಲಿ ಈ ಸೌಕರ್ಯ ಇರಲಿಲ್ಲ. ಇದೀಗ ಒಲಿಂಪಿಕ್ಸ್​ನಲ್ಲಿಯೂ ಈ ನಿಯಮ ಬರಲಿದೆ” ಎಂದು ಡಬ್ಲ್ಯುಎ ಅಧ್ಯಕ್ಷ ಸೆಬಾಸ್ಟಿಯನ್ ಕೊ ಹೇಳಿದ್ದರು.

Continue Reading

ದೇಶ

Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Firecracker Explosion: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಬುಧವಾರ ರಾತ್ರಿ ಅಗ್ನಿ ದುರಂತವೊಂದು ಸಂಭವಿಸಿದ್ದು, ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿಗಳ ರಾಶಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತರ ಗುಂಪು ಪಟಾಕಿ ಹಚ್ಚುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಹಾರಿದ ಬೆಂಕಿಯ ಕಿಡಿ ಪಟಾಕಿಗಳ ರಾಶಿಗೆ ಅಪ್ಪಳಿಸಿತು. ಇದು ಸ್ಫೋಟಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

VISTARANEWS.COM


on

Firecracker Explosion
Koo

ಭುವನೇಶ್ವರ: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇಗುಲ (Puri Jagannath temple)ದಲ್ಲಿ ಬುಧವಾರ ರಾತ್ರಿ ಅಗ್ನಿ ದುರಂತವೊಂದು ಸಂಭವಿಸಿದ್ದು, ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿಗಳ ರಾಶಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ (Firecracker Explosion).

ಉತ್ಸವ ವೀಕ್ಷಣೆಗಾಗಿ ನೂರಾರು ಮಂದಿ ನರೇಂದ್ರ ಪುಷ್ಕರಿಣಿ ದಂಡೆ ಮೇಲೆ ಜಮಾಯಿಸಿದ್ದ ವೇಳೆ ಪಟಾಕಿ ಸ್ಫೋಟಗೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಕ್ತರ ಗುಂಪು ಪಟಾಕಿ ಹಚ್ಚುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಹಾರಿದ ಬೆಂಕಿಯ ಕಿಡಿ ಪಟಾಕಿಗಳ ರಾಶಿಗೆ ಅಪ್ಪಳಿಸಿತು. ಇದು ಸ್ಫೋಟಕ್ಕೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಪಟಾಕಿ ಸಿಡಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಕೆಲವರು ತಮ್ಮನ್ನು ರಕ್ಷಿಸಿಕೊಳ್ಳಲು ಪುಷ್ಕರಿಣಿಗೆ ಜಿಗಿದಿದ್ದಾರೆ. ಇನ್ನು ಹಲವರು ಕೂಡಲೇ ಸ್ಥಳದಿಂದ ತೆರಳಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಚಿಕಿತ್ಸೆಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ʼʼಪುರಿ ಜಗನ್ನಾಥ ಉತ್ಸವದ ವೇಳೆ ನಡೆದ ಬೆಂಕಿ ದುರಂತದಿಂದ ತೀವ್ರ ದುಃಖವಾಗಿದೆ. ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯ ಆಡಳಿತ ಕಾರ್ಯದರ್ಶಿ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶಿಸಲಾಗಿದೆ. ಗಾಯಾಳುಗಳ ಎಲ್ಲ ವೈದ್ಯಕೀಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ” ಎಂದು ನವೀನ್ ಪಟ್ನಾಯಕ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. “ಪುರಿ ಚಂದನ ಯಾತ್ರೆಯ ಸಂದರ್ಭದಲ್ಲಿ ನರೇಂದ್ರ ಪುಷ್ಕರಿಣಿ ದೇವಿಘಾಟ್‌ನಲ್ಲಿ ನಡೆದ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗಿದೆ. ಭಗವಂತನ ಆಶೀರ್ವಾದದಿಂದ, ಚಿಕಿತ್ಸೆಯಲ್ಲಿರುವವರು ಶೀಘ್ರದಲ್ಲೇ ಗುಣಮುಖರಾಗಿ ಮನೆಗೆ ಮರಳಲಿ” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Fire Accident: ದೇಗುಲದಲ್ಲಿ ಅಗ್ನಿ ದುರಂತ; 13 ಜನಕ್ಕೆ ಗಾಯ, ಸಿಎಂ ಸ್ವಲ್ಪದರಲ್ಲೇ ಪಾರು!

Continue Reading
Advertisement
Lok Sabha Election 2024
ದೇಶ2 mins ago

Lok Sabha Election 2024: ಎಕ್ಸಿಟ್‌ ಪೋಲ್‌ ಬಗ್ಗೆ ನಿಮಗೆಷ್ಟು ಗೊತ್ತು? ಅದನ್ನು ನಡೆಸುವವರು ಯಾರು? ಹೇಗಿರುತ್ತೆ ಪ್ರಕ್ರಿಯೆ?

All We Imagine As Light actor rejected audition call by The Kerala Story
ಮಾಲಿವುಡ್10 mins ago

All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

IND vs PAK
ಕ್ರೀಡೆ10 mins ago

IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

Prajwal Revanna Case
ಪ್ರಮುಖ ಸುದ್ದಿ33 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Viral Video
ಕ್ರೀಡೆ44 mins ago

Viral Video: ಜಡಿ ಮಳೆಗೆ ಒದ್ದೆಯಾಗುತ್ತಲೇ ಓಡೋಡಿ ಬಂದು ಕಾರು ಹತ್ತಿದ ರೋಹಿತ್​, ದ್ರಾವಿಡ್​

Lok Sabha Election
Lok Sabha Election 20241 hour ago

Lok Sabha Election: ಫಲೋಡಿ ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಒಕ್ಕೂಟಕ್ಕೆ ಬರುವ ಸೀಟೆಷ್ಟು?

Ravichandran Birthday will give surprise To Fans
ಸ್ಯಾಂಡಲ್ ವುಡ್1 hour ago

Ravichandran Birthday: ಇಂದು ಕನಸುಗಾರನ ಜನುಮದಿನ: ಫ್ಯಾನ್ಸ್‌ಗೆ ಸರ್‌ಪ್ರೈಸ್‌ ಕೊಡ್ತಾರಾ ‘ಕ್ರೇಜಿ ಸ್ಟಾರ್’?

Norway Chess
ಕ್ರೀಡೆ1 hour ago

Norway Chess: ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್​ಗೆ ಸೋಲುಣಿಸಿದ ಪ್ರಜ್ಞಾನಂದ

Viral Video
ವೈರಲ್ ನ್ಯೂಸ್1 hour ago

Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

Viral Video
ವೈರಲ್ ನ್ಯೂಸ್2 hours ago

Viral Video: ಮುಂಬೈನ ಚಕಾಚಕ್‌ ʻರಜನೀಕಾಂತ್‌ʼ ಶೈಲಿಯ ದೋಸೆ ಈಗ ವೈರಲ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌