ವಿಸ್ತಾರ TOP 10 NEWS | ರಾಜ್ಯಕ್ಕೆ ಕಾಲಿಟ್ಟ ಭಾರತ್‌ ಜೋಡೋದಿಂದ 5G ಪದಾರ್ಪಣೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ರಾಜ್ಯಕ್ಕೆ ಕಾಲಿಟ್ಟ ಭಾರತ್‌ ಜೋಡೋದಿಂದ 5G ಪದಾರ್ಪಣೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 30092022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಆಯೋಜಿಸಿರುವ ಭಾರತ್‌ ಜೋಡೊ ಯಾತ್ರೆ ಕೇರಳದ ನಂತರ ಕರ್ನಾಟಕದಲ್ಲಿ ಶುಕ್ರವಾರದಿಂದ ಆರಂಭವಾಗಿದೆ. ಸಂಭ್ರಮದಿಂದ ಮೊದಲ ದಿನದ ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಇನ್ನೂ 20 ದಿನ ಕರ್ನಾಟಕದಲ್ಲಿ ಸಾಗಲಿದೆ. ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗುವ ಸಾಧ್ಯತೆಯಿದೆ, ಬಿಬಿಎಂಪಿ ಚುನಾವಣೆಗೆ ಮುಹೂರ್ತ ಕೂಡಿಬಂದಿದೆ, ವಿಜ್ಞಾನಿಗಳು ಆರನೇ ಮಹಾಸಾಗರವನ್ನು ಪತ್ತೆ ಹಚ್ಚಿದ್ದಾರೆ, ಶನಿವಾರದಿಂದ 5G ಸೇವೆ ಆರಂಭವಾಗಲಿದೆ ಎನ್ನುವುದು ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

Bharat jodo dk shivakumar

1. ಕರ್ನಾಟಕಕ್ಕೆ ಕಾಲಿಟ್ಟ Bharat Jodo | ಸಂವಿಧಾನದ ಉಳಿವಿಗಾಗಿ, ಜನರ ನೋವು ಕೇಳಲು ಈ ಯಾತ್ರೆ ಎಂದ ರಾಹುಲ್‌ ಗಾಂಧಿ
ಈ ದೇಶದಲ್ಲಿ ಸಂವಿಧಾನದ ಉಳಿವಿಗಾಗಿ ಭಾರತ್‌ ಜೋಡೊ ಯಾತ್ರೆ ನಡೆಸುತ್ತಿದ್ದೇವೆ. ಬಿಜೆಪಿ ಮತ್ತು ಆರೆಸ್ಸೆಸ್‌ ಸಾರುತ್ತಿರುವ ದ್ವೇಷದ ಸಿದ್ದಾಂತದ ವಿರುದ್ಧ ಈ ಯಾತ್ರೆ ನಡೆಯುತ್ತಿದೆ. ಜನರ ನೋವು ಕೇಳುವುದಕ್ಕಾಗಿ ಈ ಯಾತ್ರೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಆಯೋಜಿಸಿರುವ ಭಾರತ್‌ ಜೋಡೊ ಯಾತ್ರೆ ಶುಕ್ರವಾರ ಕರ್ನಾಟಕ ಪ್ರವೇಶಿಸಿದ ಸಂದರ್ಭದಲ್ಲಿ ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗುಂಡ್ಲುಪೇಟೆಯ ಅಂಬೇಡ್ಕರ್ ಭವನದ ಎದುರು ಸಮಾವೇಶ ನಡೆದಿದ್ದು, ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಭಾಗವಹಿಸಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Bharat Jodo | ಸಿದ್ದು-ಡಿಕೆಶಿ ಜೋಡೋ ಮಾಡಲು ಮತ್ತೊಮ್ಮೆ ಪ್ರಯತ್ನಿಸಿದ ರಾಹುಲ್‌

2. Cong Prez Poll | ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಮೂವರು ನಾಯಕರಿಂದ ನಾಮಪತ್ರ; ಹೆಚ್ಚಿನವರಿಗೆ ಖರ್ಗೆ ಪರ ಒಲವು
ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಅಕ್ಟೋಬರ್​ 17ರಂದು ನಡೆಯಲಿರುವ ಚುನಾವಣೆ(Cong Prez Poll)ಗೆ ತಿರುವನಂತಪುರಂ ಸಂಸದ ಶಶಿ ತರೂರ್​, ಜಾರ್ಖಂಡ ಕಾಂಗ್ರೆಸ್​ ಹಿರಿಯ ನಾಯಕ ಕೆ.ಎನ್​.ತ್ರಿಪಾಠಿ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದರು. ಇಲ್ಲಿ ಕೆ.ಎನ್​.ತ್ರಿಪಾಠಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ನೇರ ಹಣಾಹಣಿ ಏರ್ಪಡುವುದು ಶಶಿ ತರೂರ್​ ಮತ್ತು ಮಲ್ಲಿಕಾರ್ಜುನ್​ ಖರ್ಗೆ ನಡುವೆಯೇ ಎಂದೇ ಹೇಳಲಾಗಿದೆ. ಈ ಮೂವರೂ ತಮ್ಮ ನಾಮಪತ್ರವನ್ನು ಎಐಸಿಸಿ ಪ್ರಧಾನ ಕಚೇರಿಯಲ್ಲಿರುವ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರಿಗೆ ಸಲ್ಲಿಸಿದ್ದಾರೆ. ಶಶಿ ತರೂರ್​ ಮತ್ತು ಕೆ.ಎನ್.ತ್ರಿಪಾಠಿಗಿಂತಲೂ ಮಲ್ಲಿಕಾರ್ಜುನ ಖರ್ಗೆಗೇ ಬೆಂಬಲ ಜಾಸ್ತಿ ಇರುವುದು ಈಗಲೇ ಗೋಚರಿಸುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

3. ರಾಜ್ಯದ ಹಲವೆಡೆ ಆರ್‌ಟಿಒ ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ
ರಾಜ್ಯದ ಐದು ಕಡೆ ಆರ್‌ಟಿಒ ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ತಂಡಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿವೆ. ಬಳ್ಳಾರಿ, ವಿಜಯಪುರ, ವಿಜಯನಗರ, ಚಿಕ್ಕೋಡಿ ಹಾಗೂ ಬೀದರ್‌ಗಳಲ್ಲಿ ದಾಳಿ ನಡೆದಿವೆ. NH63‌ ರಸ್ತೆಯ ಗೋಡೆಹಾಳ್‌ನಲ್ಲಿ ಹಗರಿ ನದಿಯ ಸೇತುವೆ ಬಳಿ ಇರುವ ಆರ್‌ಟಿಓ‌ ಚೆಕ್‌ಪೋಸ್ಟ್ ಮೇಲೆ ಎಸ್ಪಿ ಪುರುಷೋತ್ತಮ ನೇತೃತ್ವದ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದೆ. ಮಹಾರಾಷ್ಟ್ರ ಗಡಿಯಲ್ಲಿರುವ ಧೂಳಖೇಡ RTO ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಅನಿತಾ ನೇತೃತ್ವದಲ್ಲಿ ದಾಳಿ ನಡೆದಿದೆ. 3ರಿಂದ 4 ಲಕ್ಷ ರೂ. ಹಣ ವಶಕ್ಕೆ ಪಡೆಯಲಾಗಿದೆ. ಬೀದರ್‌ನ ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿನ ಆರ್‌ಟಿಓ ಚೆಕ್‌ಪೋಸ್ಟ್‌ಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ayodhya

4. ವಿಸ್ತಾರ Exclusive | ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಯಾವಾಗ?: ಮಂದಿರ ನಿರ್ಮಾಣ ಉಸ್ತುವಾರಿ ಗೋಪಾಲ್‌ ನಾಗರಕಟ್ಟೆ ಸಂದರ್ಶನ
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ದೇಶದ ಪರಮ ಶ್ರದ್ಧಾ ಭಕ್ತಿಯ ಕೇಂದ್ರಗಳಲ್ಲಿ ಒಂದಾಗಿ ತಲೆ ಎತ್ತುತ್ತಿರುವ ಈ ದೇಗುಲವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಅತ್ಯಂತ ಸೂಕ್ಷ್ಮ ಧಾರ್ಮಿಕ ಮತ್ತು ತಾಂತ್ರಿಕ ಅಂಶಗಳನ್ನು ಆಧರಿಸಿ ನಿರ್ಮಿಸಲಾಗುತ್ತಿದೆ. ಈ ದೇವಾಲಯ ನಿರ್ಮಾಣ ಕಾರ್ಯ ಈಗ ಯಾವ ಹಂತದಲ್ಲಿದೆ, ಯಾವಾಗ ರಾಮನ ದರ್ಶನಕ್ಕೆ ಅವಕಾಶ ಸಿಗಬಹುದು, ಭವ್ಯ ಮಂದಿರದ ನಿರ್ಮಾಣ ಯಾವಾಗ ಪೂರ್ಣವಾಗಲಿದೆ ಎಂಬೆಲ್ಲ ವಿಚಾರಗಳಿಗೆ ಸಂಬಂಧಿಸಿ ವಿಸ್ತಾರ ನ್ಯೂಸ್‌ ಜತೆ ವಿಸ್ತೃತವಾಗಿ ಮಾತನಾಡಿದ್ದಾರೆ ರಾಮ ಮಂದಿರ ನಿರ್ಮಾಣದ ಉಸ್ತುವಾರಿಯಾಗಿರುವ ಗೋಪಾಲ ನಾಗರಕಟ್ಟೆ ಅವರು. ಕರ್ನಾಟಕದವರೇ ಆಗಿರುವ ಗೋಪಾಲ ನಾಗರಕಟ್ಟೆ ಅವರು ಆರೆಸ್ಸೆಸ್‌ನ ಪ್ರಚಾರಕರಾಗಿದ್ದು ವಿಶ್ವ ಹಿಂದೂ ಪರಿಷತ್‌ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ. ಅವರೊಂದಿಗಿನ ಸಂದರ್ಶನದ ಪೂರ್ಣಪಾಠ ಇಲ್ಲಿದೆ.

ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

5G

5. India 5G launch | ಪ್ರಧಾನಿ ನರೇಂದ್ರ ಮೋದಿಯಿಂದ ನಾಳೆ 5ಜಿ ಸೇವೆಗೆ ಚಾಲನೆ
ದೇಶದಲ್ಲಿ 5ಜಿ ಸೇವೆಗೆ ಶನಿವಾರ ( India 5G launch) ಚಾಲನೆ ದೊರಕಲಿದೆ. ಇಂಡಿಯಾ ಮೊಬೈಲ್‌ ಕಾಂಗ್ರೆಸ್‌ನ (IMC-2022) ಆರನೇ ಆವೃತ್ತಿಯ ಉದ್ಘಾಟನೆಯ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು 5ಜಿ ಸೇವೆಗೆ ಚಾಲನೆ ನೀಡಲಿದ್ದಾರೆ.
ಬಳಿಕ ಟೆಲಿಕಾಂ ಕಂಪನಿಗಳು 5ಜಿ ಸೇವೆಯನ್ನು ವಾಣಿಜ್ಯೋದ್ದೇಶಕ್ಕೆ ಬಿಡುಗಡೆಗೊಳಿಸಲಿವೆ. ರಿಲಯನ್ಸ್‌ ಜಿಯೊ ಮತ್ತು ಭಾರ್ತಿ ಏರ್‌ಟೆಲ್‌, ಅಕ್ಟೋಬರ್‌ನಲ್ಲಿ 5ಜಿ ಸೇವೆಗೆ ಚಾಲನೆ ನೀಡುವುದಾಗಿ ಘೋಷಿಸಿವೆ. ದೀಪಾವಳಿ ವೇಳೆಗೆ ಪ್ರಮುಖ ಮೆಟ್ರೊ ನಗರಗಳಲ್ಲಿ ಜನತೆಗೆ 5ಜಿ ಸೇವೆ ಲಭಿಸಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

6. Ocean 6 | ಆರನೇ ಮಹಾ ಸಾಗರ ಪತ್ತೆ ಹಚ್ಚಿದ ಸಂಶೋಧನಾ ತಂಡ!
ಭೂಮಿಯ ಮೇಲೆ ಅಂಟ್ಲಾಟಿಕ್, ಪೆಸಿಫಿಕ್, ಹಿಂದೂ ಮಹಾ ಸಾಗರ, ಅರ್ಕಾಟಿಕ್, ಸದರ್ನ್ ಓಷನ್… ಹೀಗೆ ಐದು ಮಹಾಸಾಗರ(Ocean)ಗಳಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಆದರೆ, ವಿಜ್ಞಾನಿಗಳು ಆರನೇಯ ಮಹಾ ಸಾಗರ ಇರುವಿಕೆಯ ಸಾಕ್ಷ್ಯಗಳನ್ನು ಕಂಡಿದ್ದಾರೆ. ಭೂಮಿಯ ಮೇಲಿನ ಮತ್ತು ಒಳಭಾಗದ ನಡುವಿನ ಭಾಗ(ಮ್ಯಾಂಟಲ್)ದಲ್ಲಿ ಗಣನೀಯ ಪ್ರಮಾಣದಲ್ಲಿ ನೀರಿನ ಸಾಕ್ಷ್ಯಗಳು ಲಭ್ಯವಾಗಿವೆ. ಹಾಗಾಗಿ, ಇದು ಆರನೇ ಮಹಾಸಾಗರಕ್ಕೆ ಸಾಕ್ಷ್ಯ ಆಗಿದೆ ಎಂದು ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

rbi

7. RBI Interest rate hike | ಆರ್‌ಬಿಐ ರೆಪೊ ದರ ಹೆಚ್ಚಳದಿಂದ ಸಾಲಗಳ ಇಎಂಐ ಎಷ್ಟು ಹೆಚ್ಚಲಿದೆ? ಇಲ್ಲಿದೆ ವಿವರ
ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ತನ್ನ ರೆಪೊ ದರವನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲಗಳ ಬಡ್ಡಿ ದರಗಳಲ್ಲಿ ಏರಿಕೆಯಾಗಲಿದೆ. (RBI Interest rate hike) ಈ ಕುರಿತ ವಿವರ ಇಂತಿದೆ.
ಆರ್‌ಬಿಐ ರೆಪೊ ದರವನ್ನು 0.50% ಹೆಚ್ಚಿಸಿದ್ದು, 5.90%ಕ್ಕೆ ಏರಿಕೆಯಾಗಿದೆ. ಇದರ ಪರಿಣಾಮ ರೆಪೊ ದರ ಆಧಾರಿತ ಎಲ್ಲ ಸಾಲಗಳ ಮೇಲೂ ಆಗಲಿದೆ. ಸಾಮಾನ್ಯವಾಗಿ ಬ್ಯಾಂಕ್‌ಗಳು ಬಡ್ಡಿ ದರ ಹೆಚ್ಚಿಸುವ ವೇಳೆ ಇಎಂಐ ಬದಲಿಗೆ, ಇಎಂಐ ಸಂಖ್ಯೆಯನ್ನು ಹೆಚ್ಚಿಸುತ್ತವೆ. ಆರ್‌ಬಿಐ ತನ್ನ ರೆಪೊ ದರ ಹೆಚ್ಚಿಸಿರುವ ಪರಿಣಾಮ ನಾನಾ ಬಗೆಯ ಸಾಲಗಳು ದುಬಾರಿಯಾಗಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

8. ಈ ವರ್ಷಾಂತ್ಯದೊಳಗೆ ಬಿಬಿಎಂಪಿ ಚುನಾವಣೆ ಫಿಕ್ಸ್‌ ; ಡಿ. 31ರೊಳಗೆ ಚುನಾವಣೆ ಮುಗಿಸಲು ಹೈಕೋರ್ಟ್ ಸೂಚನೆ
ಹಲವು ತಿಂಗಳುಗಳಿಂದ ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಬಿಬಿಎಂಪಿ ಚುನಾವಣೆ ವಿಚಾರವು ಕೊನೆಗೂ ಇತ್ಯರ್ಥಗೊಂಡಿದೆ. ಡಿಸೆಂಬರ್‌ 31 ರೊಳಗೆ ಬಿಬಿಎಂಪಿ ಚುನಾವಣೆಯನ್ನು ಮುಗಿಸಲು ಸೂಚಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ, ಮೀಸಲಾತಿ ಪಟ್ಟಿಯನ್ನು ಸರಿಪಡಿಸಲೂ ಗಡುವು ನೀಡಿದೆ.
ಬಿಬಿಎಂಪಿ ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಶುಕ್ರವಾರ ಕೈಗೆತ್ತಿಕೊಂಡು ವಾದ-ಪ್ರತಿವಾದವನ್ನು ಆಲಿಸಿತು. ನ್ಯಾ.ಹೇಮಂತ್ ಚಂದನ್ ‌ಗೌಡರ್ ಪೀಠದಲ್ಲಿ ವಿಚಾರಣೆ ನಡೆದಿದ್ದು, ಮೀಸಲಾತಿ ಪಟ್ಟಿ ಸರಿಪಡಿಸಲು 16 ವಾರಗಳ ಸಮಯ ಬೇಕು ಎಂದು ಸರ್ಕಾರದ ‌ಪರವಾಗಿ ಎಎಜಿ ಧ್ಯಾನ್ ಚಿನ್ನಪ್ಪ ಅಫಿಡವಿಟ್ ಸಲ್ಲಿಸಿದರು. ಆದರೆ, ಈ ವಾದವನ್ನು ಒಪ್ಪದ ನ್ಯಾಯಪೀಠವು ನವೆಂಬರ್ 30ರ ಒಳಗೆ ಮೀಸಲಾತಿ ಪಟ್ಟಿ ಸರಿಪಡಿಸುವಂತೆ ಸರ್ಕಾರಕ್ಕೆ ಗಡುವು ನೀಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

Navaratri 2022

9. Navaratri 2022 | ಸರಸ್ವತಿ ಪೂಜೆ ಎಂದು? ಪೂಜೆ ಹೇಗೆ ಮಾಡಬೇಕು?
ನವರಾತ್ರಿಯಲ್ಲಿ (Navaratri 2022) ಶಕ್ತಿ ದೇವಿಯರ ಜತೆಗೆ ವಿದ್ಯಾದೇವಿ ಸರಸ್ವತಿ ಪೂಜೆಯನ್ನೂ ನೆರವೇರಿಸಲಾಗುತ್ತದೆ. ನಮ್ಮೆಲ್ಲರ ಹೃದಯಾಂತರಾಳವನ್ನು ಪರಿಶುದ್ಧಗೊಳಿಸಿ, ನೀರಿನಂತೆ ಪ್ರವಹಿಸಿದಳಾಗಿರುವ ಕಾರಣದಿಂದ ಶಾರದೆಯನ್ನು ಇಲ್ಲಿ ಸರಸ್ವತಿ ಎಂದು ಕರೆಯಲಾಗುತ್ತದೆ. ಈ ಪೂಜೆಯನ್ನು ಎಂದು, ಹೇಗೆ ಮಾಡಬೇಕೆಂಬ ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

10. ONDC | ಕೇಂದ್ರದಿಂದ ಫ್ಲಿಪ್‌ಕಾರ್ಟ್‌, ಅಮೆಜಾನ್‌ಗೆ ಪರ್ಯಾಯ ಒಎನ್‌ಡಿಸಿ ಬೆಂಗಳೂರಿನಲ್ಲೇ ಶುರು!
ಇ-ಕಾಮರ್ಸ್‌ ವಲಯದಲ್ಲಿ ಫ್ಲಿಪ್‌ಕಾರ್ಟ್‌ ಮತ್ತು ಅಮೆಜಾನ್‌ ಪ್ರಾಬಲ್ಯವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಇಂದು ಮಹತ್ತ್ವಾಕಾಂಕ್ಷೆಯ ಒಎನ್‌ಡಿಸಿ (Open Network for Digital Commerce- ONDC) ಎಂಬ ಡಿಜಿಟಲ್‌ ಪ್ಲಾಟ್‌ಫಾರ್ಮ್‌ ಅನ್ನು ಬೆಂಗಳೂರಿನಲ್ಲಿ ಇಂದು ಆರಂಭಿಸಿದೆ.
ಸರ್ಕಾರ ಸಣ್ಣ ವ್ಯಾಪಾರಸ್ಥರಿಗೆ ಇ-ಕಾಮರ್ಸ್‌ ವಹಿವಾಟಿಗೆ ಸಹಕರಿಸಲು ಹಾಗೂ ಅಮೆಜಾನ್‌ ಮತ್ತು ವಾಲ್‌ಮಾರ್ಟ್‌ನಂಥ ದಿಗ್ಗಜ ಕಂಪನಿಗಳ ಪಾರಮ್ಯವನ್ನು ನಿಯಂತ್ರಿಸಲು, ಅವುಗಳಿಗೆ ಪರ್ಯಾಯವಾಗಿ ಒಎನ್‌ಡಿಸಿಯನ್ನು ಆರಂಭಿಸಿದೆ. ಒಎನ್‌ಡಿಸಿಯಲ್ಲಿ ಸ್ಥಳೀಯ ವರ್ತಕರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದು. ಗ್ರಾಹಕರು ತಮಗೆ ಬೇಕಾದ ಮಾರಾಟಗಾರರಿಂದ ಉತ್ಪನ್ನಗಳನ್ನು ಕೊಂಡುಕೊಳ್ಳಬಹುದು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

Deepawalli 2024 : ಮಡಿಕೇರಿಯಲ್ಲಿ ದೀಪಾವಳಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ವರದಿಗಾರ ಹಾಗೂ ಕ್ಯಾಮೆರಾಮನ್‌ಗೆ ಸನ್ಮಾನಿಸಲಾಯಿತು.

VISTARANEWS.COM


on

By

Deepavali festival held in Madikeri
Koo

ಕೊಡಗು: ದೀಪಾವಳಿ ಹಬ್ಬದ (Deepawalli 2024) ಪ್ರಯುಕ್ತ ಮಡಿಕೇರಿಯ ಕಾಲನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ದೀಪಾವಳಿ ಉತ್ಸವವು ಬಹಳ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಈಶ್ವರ್ ಮಲ್ಪೆ, ಮಡಿಕೇರಿಯ ಕಲಾ ನಗರಕ್ಕೆ ಕರೆಸಿರೋದು ಬಹಳ‌ ಸಂತೋಷವಾಗಿದೆ‌. ನಾನೂ ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ ನೀರಿನಲ್ಲಿ ಮುಳುಗಿದ್ದ ಶವ ಹೊರ ತೆಗೆದಿದ್ದೇನೆ. ಕಳೆದ ವರ್ಷ ಕೂಡ ಇಲ್ಲಿಗೆ ಬಂದು ಒಂದು ಶವವನ್ನು ಹೊರ ತೆಗೆದಿದ್ದೇನೆ‌. ಈ ಒಂದು ಸಣ್ಣ ಸಮಾಜಮುಖಿ ಕಾರ್ಯವನ್ನು ಗುರುತಿಸಿ ನನ್ನ ಈ ಕಾರ್ಯಕ್ರಮಕ್ಕೆ ಕರೆಸಿರೋದು ಬಹಳ ಸಂತಸ ತಂದಿದೆ. ಕಲಾನಗರದಲ್ಲಿ ಕಲಾ ರಸಿಕರೆ ಇದ್ದು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದರು.

Deepavali festival held in Madikeri

ಇನ್ನೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ವಯನಾಡು ದುರಂತದ ಕುರಿತು ಪ್ರತ್ಯಕ್ಷ ವರದಿಗಾರಿಕೆ‌ ಮಾಡಿದ್ದ ಕೊಡಗಿನ ಪತ್ರಕರ್ತರಾದ ವಿಸ್ತಾರ ನ್ಯೂಸ್‌ನ ಜಿಲ್ಲಾ ವರದಿಗಾರ ಲೋಹಿತ್ ಎಂ.ಆರ್, ಕ್ಯಾಮೆರಾಮನ್ ಮನೋಜ್, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಪ್ರಜ್ವಲ್ ಎನ್‌.ಸಿ, ನಗರದ ಸ್ವಚ್ಚತಾ ಕಾರ್ಯದಲ್ಲಿ ಶ್ರಮಿಸುತ್ತಿರುವ ನಗರಸಭೆಯ ರಂಗಪ್ಪ , ಆರೋಗ್ಯ ಇಲಾಖೆಯ ಪ್ರತಿಮಾ ರೈ, ಅಣ್ಣಯ್ಯ, ಸೇರಿದಂತೆ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು‌‌. ಮಕ್ಕಳ ಮಂಟಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಡಿವೈಎಸ್ಪಿ ಮಹೇಶ್ ಕುಮಾರ್, ಆಕಾಶವಾಣಿಯ ಸುಬ್ರಾಯ ಸಂಪಾಜೆ ಅಧ್ಯಕ್ಷರಾದ ಮಹೇಶ್, ಆಶಾ ನಟರಾಜ್, ಸ್ಥಾಪದ ಸದಸ್ಯರು ಚಂದ್ರು, ಕೆ.ಎಸ್ ರಮೇಶ್,ಕೋಡಿ ಭರತ್, ತಿಲಖ್ ಸಿಂಗ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕೊಡಗು

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Murder Case : ತೆಲಂಗಾಣ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಸ್ಥಳ ಮಹಜರು ವೇಳೆ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

By

Murder Case
Koo

ಬೆಂಗಳೂರು: ಕೊಲೆ ಆರೋಪಿಯನ್ನು (Murder Case) ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ತೆಲಂಗಾಣ ರಾಜ್ಯದ ಉಪ್ಪಳ್‌ನಲ್ಲಿ ನಡೆದಿದೆ. ತೆಲಂಗಾಣದಲ್ಲಿ ಉದ್ಯಮಿಯನ್ನು ಹತ್ಯೆ ನಡೆಸಿ ಬಳಿಕ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಪನ್ಯದ ಎಸ್ಟೇಟ್‌ನಲ್ಲಿ ಸುಟ್ಟುಹಾಕಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದರು.

ಓರ್ವ ನ್ಯಾಯಾಂಗ ಬಂಧನವಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪೈಕಿ ಅಂಕುರ್ ರಾಣಾ ಠಾಕೂರ್‌ನನ್ನು ಎರಡು ದಿನಗಳ ಹಿಂದೆ ತೆಲಂಗಾಣಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಪರಾರಿ ಸಂಬಂಧ ತೆಲಂಗಾಣ ಉಪ್ಪಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚುವರಿಯಾಗಿ ಕೊಡಗಿನ ಎರಡು ಎಕ್ಸ್ ಪರ್ಟ್ ಟೀಮ್ ಕೂಡ ತೆಲಂಗಾಣಕ್ಕೆ ತೆರಳಿದ್ದು ಹುಟುಕಾಟ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
ಬಂಧಿತ ಆರೋಪಿಗಳು

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಗದಗ

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

HK Patil: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಿರಿಯ ರಾಜಕಾರಣಿ ಹಾಗೂ ಸಚಿವ ಎಚ್.ಕೆ.ಪಾಟೀಲ್‌ ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ ಡಿ.ಕೆ ಎಂದು ಹೇಳಿ ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡ ಘಟನೆ ನಡೆದಿದೆ.

VISTARANEWS.COM


on

By

HK patil
Koo

ಗದಗ: ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಮುಖ್ಯಮಂತ್ರಿ ಸ್ಥಾನದ‌‌ ಮೇಲೆ ಎಲ್ಲರ ಕಣ್ಣಿದೆ. ಕಾರಣ ಮುಡಾ ಹಗರಣ‌‌ ಎದುರಿಸುತ್ತಿರುವ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಮುಡಾ ಹಗರಣದಿಂದ‌ ಖಾಲಿಯಾಗುತ್ತೆ ಅನ್ನೋ ಬಿಸಿ‌ಬಿಸಿ ಚರ್ಚೆ ಪ್ರಚಲಿತದಲ್ಲಿದೆ. ಇದಕ್ಕೆ ಪುಷ್ಟಿಕರೀಸುವಂತೆ ಗದಗದಲ್ಲಿ ಸಚಿವ ಎಚ್‌ಕೆ ಪಾಟೀಲ್‌ (HK Patil) ಮುಖ್ಯಮಂತ್ರಿ ಹೆಸರನ್ನು ಹೇಳುವ ಸಂದರ್ಭದಲ್ಲಿ ಸಿದ್ದರಾಮಯ್ಯ ಬದಲಿಗೆ ಡಿ.ಕೆ ಶಿವಕುಮಾರ್‌ ಹೆಸರು ಪ್ರಸ್ತಾಪಿಸಿ, ಕ್ಷಣಮಾತ್ರದಲ್ಲೆ ಸರಿಪಡಿಸಿಕೊಂಡಿದ್ದಾರೆ.

ಮುದ್ರಣ‌ ಕಾಶಿ ಗದಗ ಜಿಲ್ಲೆಯಲ್ಲಿ‌ ಶುಕ್ರವಾರ ಅದ್ಧೂರಿ 66ನೇ ಕನ್ನಡ ರಾಜ್ಯೋತ್ಸವ ಜರುಗಿತು. ‌ಈ ವೇಳೆ ಜಿಲ್ಲಾ ಉಸ್ತುವಾರಿ‌ ಸಚಿವ ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವೇದಿಕೆ ಮೇಲೆ ಭಾಷಣದ‌ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಬದಲಾಗಿ, ಡಿಕೆ ಎಂದು ಪ್ರಸ್ತಾಪಿಸಿ, ತಕ್ಷಣ ಎಚ್ಚೆತ್ತು,‌ ಸಿದ್ಧರಾಮಯ್ಯ‌ ಎಂದು ಮುಂದುವರೆದು,‌ ಉಪಮುಖ್ಯಮಂತ್ರಿ‌ ಡಿ.ಕೆ. ಶಿವಕುಮಾರ್‌ ಅವರು ಎಂದೇಳಿ, ತಮ್ಮ ಭಾಷಣ ಮುಂದುವರೆಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ‌ ನಾಮಕರಣದ ಐವತ್ತರ‌ ಸಂಭ್ರಮಾಚರಣೆಯನ್ನು ಕಳೆದ ವರ್ಷ 2023ರ ನವಂಬರ್, 1,2,3 ರಂದು ಮೂರು‌ ದಿನಗಳ‌ ಕಾಲ ಗದಗ ನಗರದ ಸೊಸೈಟಿಯ ಆವರಣದಲ್ಲಿ ನಡೆದಿತ್ತು.‌ ಗತವೈಭವ ಮರುಕಳಿಸುವ ಹಾಗೆ, ಐತಿಹಾಸಿಕ ಕಾರ್ಯಕ್ರಮಕ್ಕೆ ನಗರದ ಎಲ್ಲ ಜನತೆ‌ ಸಾಕ್ಷಿಯಾಗಿದ್ದೀರಿ. ನಾಡಿನ ಮುಖ್ಯಮಂತ್ರಿಗಳಾದ ಡಿ.ಕೆ (ತಕ್ಷಣ ಎಚ್ಚೆತ್ತು ಭಾಷಣದ ಪ್ರತಿ ತೀಕ್ಷ್ಣವಾಗಿ ವೀಕ್ಷಿಸಿ) ಮಾನ್ಯ‌ ಸಿದ್ಧರಾಮಯ್ಯನವರು,‌ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಸೇರಿದಂತೆ, ಸಚಿವ ಸಂಪುಟದ ಎಲ್ಲ‌ ಸಹೋದ್ಯೋಗಿಗಳು ಈ‌ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ಪ್ರಸ್ತಾಪಿಸಿ, ಮುಂದೆ ತಮ್ಮ ಭಾಷಣದ ಸಂದೇಶವನ್ನು ಮುಂದುವರಿಸಿದ್ದಾರೆ.

ಸಿದ್ದರಾಮಯ್ಯನವರ ಸಂಪುಟದಲ್ಲಿ ‌ಅತ್ಯಂತ‌ ಹಿರಿಯ ಮತ್ತು ಅನುಭವಿ ರಾಜಕಾರಣಿಯಾಗಿರುವ ಎಚ್.ಕೆ.ಪಾಟೀಲ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿಯೂ ಒಬ್ಬರಾಗಿದ್ದಾರೆ.‌ ದೀಪಾವಳಿ‌ ಶುಭ‌ ಸಂದರ್ಭದಲ್ಲಿ ಸಚಿವರ ಬಾಯಲ್ಲಿ, ಡಿಕೆಶಿ ಮುಖ್ಯಮಂತ್ರಿಯಾಗಿದ್ದು ಅಚಾನಕ್ ಆಗಿ ಆದ ಅಚಾತುರ್ಯವೋ,‌ ಅಥವಾ ಸಚಿವರ ಆಂತರ್ಯದ ನುಡಿಯೋ ಎಲ್ಲವೂ ಕಾಕತಾಳಿಯ‌ ಎಂಬಂತಿದೆ.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

By

Dolly Dhananjay
Koo

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Sandalwood star Dali Dhananjay And dhanya They are getting married next year
Continue Reading
Advertisement
dina bhavishya read your daily horoscope predictions for november 4 2024
ಭವಿಷ್ಯ11 ಗಂಟೆಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

Deepavali festival held in Madikeri
ಕೊಡಗು11 ಗಂಟೆಗಳು ago

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

dina bhavishya read your daily horoscope predictions for november 3 2024
ಭವಿಷ್ಯ11 ಗಂಟೆಗಳು ago

Dina Bhavishya: ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ; ನ್ಯಾಯಾಲಯ ಪ್ರಕರಣದಲ್ಲಿ ವಿಜಯ

Murder Case
ಕೊಡಗು2 ದಿನಗಳು ago

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಒತ್ತಡದಿಂದ ವಿಮುಕ್ತಿ ಹೊಂದಿ ವಿರಾಮದ ಸಂತೋಷವನ್ನು ಅನುಭವಿಸುವಿರಿ

HK patil
ಗದಗ3 ದಿನಗಳು ago

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

Dolly Dhananjay
ಸಿನಿಮಾ3 ದಿನಗಳು ago

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dina Bhavishya
ಭವಿಷ್ಯ4 ದಿನಗಳು ago

Dina Bhavishya : ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ

Dina Bhavishya
ಭವಿಷ್ಯ5 ದಿನಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ5 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ತಿಂಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌