ಪಿಎಫ್​ಐ ಹಿಟ್​​ಲಿಸ್ಟ್​​: ಕೇರಳ ಆರ್‌ಎಸ್‌ಎಸ್‌​ನ ಐವರು ಪ್ರಮುಖರಿಗೆ ಕೇಂದ್ರದಿಂದ ವೈ ಶ್ರೇಣಿ ಭದ್ರತೆ - Vistara News

ದೇಶ

ಪಿಎಫ್​ಐ ಹಿಟ್​​ಲಿಸ್ಟ್​​: ಕೇರಳ ಆರ್‌ಎಸ್‌ಎಸ್‌​ನ ಐವರು ಪ್ರಮುಖರಿಗೆ ಕೇಂದ್ರದಿಂದ ವೈ ಶ್ರೇಣಿ ಭದ್ರತೆ

ಪಿಎಫ್​ಐ ಮೇಲೆ ಎನ್​ಐಎ ರೇಡ್​ ಮಾಡಿದ ಸಂದರ್ಭದಲ್ಲಿ ಹಲವು ಮಹತ್ವದ ದಾಖಲೆಗಳು ಸಿಕ್ಕಿವೆ. ಹಾಗೇ ಪಿಎಫ್​ಐನ ಹಿಟ್​ಲಿಸ್ಟ್ ಸಿಕ್ಕಿದ್ದು, ಅದರಲ್ಲಿ ಆರ್​ಎಸ್​​ಎಸ್​ ಮತ್ತು ಬಿಜೆಪಿಯ ಹಲವು ನಾಯಕರ ಹೆಸರಿದೆ ಎನ್ನಲಾಗಿದೆ.

VISTARANEWS.COM


on

BJP meeting with rss in bengaluru
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನಿಷೇಧಿತ ಪಾಪ್ಯುಲರ್​ ಫ್ರಂಟ್ ಆಫ್​ ಇಂಡಿಯಾ (ಪಿಎಫ್​ಐ) ಉಗ್ರ ಸಂಘಟನೆಯಿಂದ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕೇರಳದ ಐವರು ಆರ್​ಎಸ್​ಎಸ್​ ನಾಯಕರಿಗೆ ಕೇಂದ್ರ ಸರ್ಕಾರ ವೈ (Y)ಶ್ರೇಣಿಯ ಭದ್ರತೆಯನ್ನು ನೀಡಿದೆ. ಪಿಎಫ್​ಐ ಸಂಘಟನೆಯನ್ನು ಕಳೆದ ಮೂರು ದಿನಗಳ ಹಿಂದೆ (ಸೆ.28) ನಿಷೇಧಿಸಲಾಗಿದೆ. ಅದಕ್ಕೂ ಮೊದಲು ಸೆ.22 ಮತ್ತು 27ರಷ್ಟು ರಾಷ್ಟ್ರದ ವಿವಿಧ ರಾಜ್ಯಗಳಲ್ಲಿನ ಪಿಎಫ್​ಐ ಮುಖಂಡರ ಮನೆ, ಕಚೇರಿಗಳ ಮೇಲೆ ಎನ್​ಐಎ ದಾಳಿಯಾಗಿತ್ತು. ಪಿಎಫ್​ಐ ಉಗ್ರಕೃತ್ಯಗಳಿಗೆ ನೆರವು ನೀಡುತ್ತಿರುವುದಕ್ಕೆ ದೊಡ್ಡಮಟ್ಟದ ಸಾಕ್ಷ್ಯಗಳು ಲಭಿಸಿದ್ದವು. ಹಾಗೇ, ಪಿಎಫ್​ಐ ಸಂಘಟನೆಯ ಹಿಟ್​ಲಿಸ್ಟ್​​ನಲ್ಲಿ ದೇಶದ ಹಲವು ಪ್ರಮುಖ ನಾಯಕರ ಹೆಸರುಗಳೂ ಇರುವುದು ಬೆಳಕಿಗೆ ಬಂದಿದೆ. ಹೀಗೆ ಹಿಟ್​​ಲಿಸ್ಟ್​​ನಲ್ಲಿ ಇರುವವರಲ್ಲಿ ಆರ್​ಎಸ್​ಎಸ್​​ನ ಕೇರಳದ ಐವರು ಪ್ರಮುಖ ನಾಯಕರ ಹೆಸರುಗಳೂ ಇದ್ದು, ಅವರಿಗೆ ಭದ್ರತೆ ಹೆಚ್ಚಿಸಲಾಗಿದೆ.

ಪಿಎಫ್​ಐ ಮೇಲೆ ವಿವಿಧ ಹಂತದ ರೇಡ್ ನಡೆಸಿ​, ತನಿಖೆ ಮಾಡಿದ ನಂತರ ಎನ್​ಐಎ ಮತ್ತು ಗುಪ್ತಚರದಳಗಳು ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದ್ದವು. ಹಾಗೇ, ಆಯ್ದ ಆರ್​ಎಸ್​ಎಸ್ ನಾಯಕರಿಗೂ ಭದ್ರತೆ ನೀಡಲು ಶಿಫಾರಸ್ಸು ಮಾಡಿದ್ದವು. ಅದರ ಅನ್ವಯ ಈಗ ಕೇರಳದ ಐವರು ನಾಯಕರಿಗೆ ಕೇಂದ್ರ ಸರ್ಕಾರ ಸಿಆರ್​ಪಿಎಫ್​ (CRPF) ಭದ್ರತೆ ನೀಡಲಿದೆ. ಒಬ್ಬ ನಾಯಕನ ರಕ್ಷಣೆಗೆ ಇಬ್ಬರು ಅಥವಾ ಮೂವರು ಸಿಆರ್​ಪಿಎಫ್​ ಕಮಾಂಡೋಗಳು ನಿಯೋಜನೆಗೊಳ್ಳಲಿದ್ದಾರೆ.

ಇದನ್ನೂ ಓದಿ: PFI Banned | ರಾಜ್ಯಾದ್ಯಂತ ಪಿಎಫ್‌ಐ ಕಚೇರಿಗಳಿಗೆ ಬೀಗ, ಜಿಲ್ಲೆಗಳಲ್ಲಿ ಹಲವು ನಾಯಕರಿಗಾಗಿ ಹುಡುಕಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

Rahul Gandhi: ಪ್ರಧಾನಿ ಮೋದಿಯವರು ಒಮ್ಮೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಮತ್ತೊಮ್ಮೆ ಸಮುದ್ರ ಒಳಗೆ ಹೋಗಿ ಅಲ್ಲಿ ಡ್ರಾಮಾ ಮಾಡುತ್ತಾರೆ. ಸಮುದ್ರಕ್ಕೆ ಇಳಿಯುತ್ತಿದ್ದಂತೆ ಅವರು ದೇವರೇ ತಮಗೇನು ಆಗದೇ ಇದ್ದರೆ ಸಾಕಪ್ಪ ಅನ್ನೋ ಭೀತಿಯಲ್ಲಿದ್ದರು. ಅವರು ಇಂತಹ ಡ್ರಾಮಾಗಳನ್ನು ಮಾಡೋದಾದರೂ ಏಕೆ? ಅವರು ರಾಜಕೀಯವನ್ನು ತಮಾಷೆಯ ವಿಚಾರ ಎಂಬಂತೆ ಬಿಂಬಿಸಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿಗರು ಹರಿಹಾಯ್ದಿದ್ದಾರೆ.

VISTARANEWS.COM


on

Rahul Gandhi
Koo

ಪುಣೆ: ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ(Controversial statement)ಗಳ ಮೂಲಕ ಬಿಜೆಪಿಗೆ ಆಹಾರವಾಗುವ ರಾಹುಲ್‌ ಗಾಂಧಿ(Rahul Gandhi) ಅವರ ಮತ್ತೊಂದು ಹೇಳಿಕೆ ವಿವಾದಕ್ಕೀಡಾಗಿದೆ. ಬಿಜೆಪಿಗರು ಅವರ ವಿರುದ್ಧ ಕಿಡಿ ಕಾರಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯ(Narendra Modi)ವರ ಇತ್ತೀಚಿನ ದ್ವಾರಕಾ ಪೂಜೆ(Dwaraka Pooje) ಬಗ್ಗೆ ಟೀಕಿಸಿದ್ದು, ಸನಾತನ ಧರ್ಮದ ಆಚರಣೆ ಪದ್ದತಿಯನ್ನು ಮತ್ತೊಮ್ಮೆ ಪ್ರಶ್ನಿಸಿದ್ದಾರೆ. ಪುಣೆಯಲ್ಲಿ ಮಾತನಾಡಿದ ಅವರು ಸಮುದ್ರದ ಒಳಗೆ ಹೋಗಿ ಪ್ರಧಾನಿ ಮೋದಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮೋದಿಯವರು ಒಮ್ಮೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಮತ್ತೊಮ್ಮೆ ಸಮುದ್ರ ಒಳಗೆ ಹೋಗಿ ಅಲ್ಲಿ ಡ್ರಾಮಾ ಮಾಡುತ್ತಾರೆ. ಸಮುದ್ರಕ್ಕೆ ಇಳಿಯುತ್ತಿದ್ದಂತೆ ಅವರು ದೇವರೇ ತಮಗೇನು ಆಗದೇ ಇದ್ದರೆ ಸಾಕಪ್ಪ ಅನ್ನೋ ಭೀತಿಯಲ್ಲಿದ್ದರು. ಅವರು ಇಂತಹ ಡ್ರಾಮಾಗಳನ್ನು ಮಾಡೋದಾದರೂ ಏಕೆ? ಅವರು ರಾಜಕೀಯವನ್ನು ತಮಾಷೆಯ ವಿಚಾರ ಎಂಬಂತೆ ಬಿಂಬಿಸಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿಗರು ಹರಿಹಾಯ್ದಿದ್ದಾರೆ. ರಾಹುಲ್‌ ಗಾಂಧಿಯವರು ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಸನಾತನ ಧರ್ಮದ ಅಸ್ತಿತ್ವವನ್ನು ಮತ್ತೆ ಪ್ರಶ್ನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಫೆಬ್ರುವರಿ 25ರಂದು ಗುಜರಾತ್‌ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇನ್ನು ಶ್ರೀ ಕೃಷ್ಣನ ಮುಳುಗಿ ಹೋದ ನಗರವನ್ನು ಹುಡುಕುವ ಸಮುದ್ರದಾಳದ ತಮ್ಮ ಪಯಣದ ವೇಳೆ ಸ್ಕೂಬಾ ಸಾಧನಗಳನ್ನು ಧರಿಸಿರುವ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ. ಬೇಯ್ತ್ ದ್ವಾರಕಾ ದ್ವೀಪದ ಸಮೀಪದ ಕರಾವಳಿಯಲ್ಲಿ ಪ್ರಧಾನಿ ಮೋದಿ ಸ್ಕೂಬಾ ಡೈವಿಂಗ್ ನಡೆಸಿದ್ದರು. ಪುರತತ್ವ ಇಲಾಖೆ ಅಧಿಕಾರಿಗಳು ಈ ಭಾಗದಲ್ಲಿ ಪುರಾತನ ದ್ವಾರಕಾ ನಗರದ ಅವಶೇಷಗಳನ್ನು ಪತ್ತೆ ಮಾಡಿದ್ದು, ಜನರು ಅದನ್ನು ವೀಕ್ಷಿಸಲು ಅವಕಾಶವಿದೆ.

ಇದನ್ನೂ ಓದಿ: Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

ಕೆಲವು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಹಿಂದೂ ದೇವತೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಛತ್ತೀಸ್‌ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್‌ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್‌ ಅವರನ್ನು ಭಗವಾನ್‌ ಶಿವನಿಗೆ ಹೋಲಿಸಿ ಹೇಳಿಕೆಯೊಂದನ್ನು ನೀಡಿದ್ದರು. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ್‌ ಅವರು ಸಾಕ್ಷತ್‌ ಶಿವನಂತೆ. ಅವರು ಬಹಳ ಸುಲಭವಾಗಿ ರಾಮ(ಬಿಜೆಪಿ)ನ ಜೊತೆ ಸ್ಪರ್ಧೆಗಿಳಿಯಬಹುದು. ನನ್ನ ಹೆಸರು ಕೂಡ ಮಲ್ಲಿಕಾರ್ಜುನ. ಅಂದರೆ ಶಿವ ಎಂದರ್ಥ. ನಾನು ಕೂಡ ಶಿವನೇ ಆಂಧ‍್ರ ಪ್ರದೇಶದ ಶ್ರೀಶೈಲಂ ಮಲ್ಲಿಕಾರ್ಜುನ ಎಂಬ ಹೆಸರಿನಲ್ಲಿ ಜ್ಯೋತಿರ್ಲಿಂಗ ಇದೆ ಎಂದು ಹೇಳಿದ್ದರು.

Continue Reading

Lok Sabha Election 2024

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೇ 3ರಂದು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಬಳಿ ಎಷ್ಟು ಆಸ್ತಿ ಇದೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಅವರು 20.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ. ಈ ಪೈಕಿ 9.24 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ. ಸ್ಥಿರಾಸ್ತಿಯ ಮೌಲ್ಯ 11.15 ಕೋಟಿ ರೂ. ಅಚ್ಚರಿ ಎಂದರೆ ಅವರು ಒಂದು ಸ್ವಂತ ಮನೆ ಹೊಂದಿಲ್ಲ. ಅವರು ಕಾರು ಅಥವಾ ಇತರ ವಾಹನವನ್ನೂ ಖರೀದಿ ಮಾಡಿಲ್ಲ. 

VISTARANEWS.COM


on

Rahul Gandhi
Koo

ಲಕ್ನೋ: ಲೋಕಸಭೆ ಚುನಾವಣೆ (Lok Sabha Election)ಯಲ್ಲಿ ಈ ಹಿಂದೆ ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮೇ 3ರಂದು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಬಳಿ ಎಷ್ಟು ಆಸ್ತಿ ಇದೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಅವರು 20.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ.

ಚರಾಸ್ತಿ ಹಾಗೂ ಸ್ಥಿರಾಸ್ತಿ ಸೇರಿ ರಾಹುಲ್‌ ಗಾಂಧಿ ಒಟ್ಟು 20.04 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಈ ಪೈಕಿ 9.24 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ. ಇದರಲ್ಲಿ 3 ಕೋಟಿ 81 ಲಕ್ಷದ 33 ಸಾವಿರ ರೂ. ಮೌಲ್ಯದ ಷೇರುಗಳು ಮತ್ತು 15 ಲಕ್ಷದ 21 ಸಾವಿರ ರೂ. ಮೌಲ್ಯದ ಚಿನ್ನದ ಬಾಂಡ್‌ಗಳು ಸೇರಿವೆ. ಸ್ಥಿರಾಸ್ತಿಯ ಮೌಲ್ಯ 11.15 ಕೋಟಿ ರೂ. ಇನ್ನು ರಾಹುಲ್‌ ಗಾಂಧಿ ಅವರ ಬಳಿ 55 ಸಾವಿರ ರೂ. ನಗದು ಇದೆ. ಎಸ್‌ಬಿಐ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಉಳಿತಾಯ ಖಾತೆಗಳಲ್ಲಿ 26.25 ಲಕ್ಷ ರೂ. ಠೇವಣಿ ಇಟ್ಟಿದ್ದಾರೆ. ಸ್ಥಿರಾಸ್ತಿ ಪೈಕಿ 9 ಕೋಟಿ 4 ಲಕ್ಷ 89 ಸಾವಿರ ರೂ. ಮೌಲ್ಯದ ಸ್ವ-ಖರೀದಿ ಆಸ್ತಿ ಹಾಗೂ 2 ಕೋಟಿ 10 ಲಕ್ಷ 13 ಸಾವಿರ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಸೇರಿದೆ.

ವಾಹನವಿಲ್ಲ

ಅಚ್ಚರಿ ಎಂದರೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಒಂದು ಸ್ವಂತ ಮನೆ ಹೊಂದಿಲ್ಲ. ಅವರು ಕಾರು ಅಥವಾ ಇತರ ವಾಹನವನ್ನೂ ಖರೀದಿ ಮಾಡಿಲ್ಲ. ಆದರೆ ಗುರುಗ್ರಾಮದಲ್ಲಿ 9.04 ಕೋಟಿ ರೂ. ಮೌಲ್ಯದ ಸ್ವಂತ ಕಚೇರಿಯೊಂದನ್ನು ಹೊಂದಿದ್ದಾರೆ. ಹೊಸದಿಲ್ಲಿಯ ಮೆಹ್ರೌಲಿಯ ಸುಲ್ತಾನ್‌ಪುರ ಗ್ರಾಮದಲ್ಲಿ ಸುಮಾರು 3.778 ಎಕರೆ ಕೃಷಿ ಭೂಮಿ ಇದ್ದು, ಇದು ರಾಹುಲ್‌ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರಿನಲ್ಲಿದೆ. ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಟ್ರಿನಿಟಿ ಕಾಲೇಜಿನಲ್ಲಿ ಎಂ.ಫಿಲ್ ಪದವಿ ಪಡೆದಿದ್ದಾರೆ. ಅಲ್ಲದೆ ಫ್ಲೋರಿಡಾದ ರೋಲಿನ್ಸ್ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿಯನ್ನು ಪಡೆದಿರುವುದು ಅಫಿಡವಿಟ್‌ನ ವಿವರದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

ರಾಯ್‌ ಬರೇಲಿಯಲ್ಲಿ ನಾಮ ಪತ್ರ

ಸುಮಾರು 20 ವರ್ಷಗಳ ಕಾಲ ಸೋನಿಯಾ ಗಾಂಧಿ ಅಧಿಕಾರದಲ್ಲಿದ್ದ ಉತ್ತರ ಪ್ರದೇಶದ ರಾಯ್​ ಬರೇಲಿಯಲ್ಲಿ ಶುಕ್ರವಾರ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ರಾಹುಲ್ ಗಾಂಧಿ ತಮ್ಮ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು. ರಾಹುಲ್ ಗಾಂಧಿ ಅವರ ಎದುರಾಳಿಯಾಗಿ ಬಿಜೆಪಿಯಿಂದ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧಿಸಲಿದ್ದಾರೆ. ಇಲ್ಲಿ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ.

Continue Reading

ದೇಶ

Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

Amit Shah: ಧರ್ಮದ ಆಧಾರದಲ್ಲಿ ಮೀಸಲಾತಿ ಕಲ್ಪಿಸಲು ನಮ್ಮ ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಕಾಂಗ್ರೆಸ್‌ ಅಕ್ರಮವಾಗಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುತ್ತಿದೆ. ಈಗ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಅವರು ದೇಶದ ಜನತೆಗೆ ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಧರ್ಮದ ಆಧಾರದಲ್ಲಿ ನಾವು ಎಂದಿಗೂ ಮೀಸಲಾತಿ ನೀಡುವುದಿಲ್ಲ. ಜನ ಈ ಬಗ್ಗೆ ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ. ಜಾತಿ, ಕುಟುಂಬ, ಭ್ರಷ್ಟಾಚಾರ ಮತ್ತು ಓಲೈಕೆಗಳಿಂದ ಪ್ರಜಾಪ್ರಭುತ್ವ ಮುಕ್ತವಾಗಿರಬೇಕು. ಬಿಜೆಪಿ ಜಾತಿ ,ಧರ್ಮ ಓಲೈಕೆಯನ್ನು ವಿರೋಧಿಸುತ್ತದೆ ಎಂದು ಅಮಿತ್‌ ಶಾ ಹ ಹೇಳಿದ್ದಾರೆ.

VISTARANEWS.COM


on

Amith Shah
Koo

ನವದೆಹಲಿ: ಕಾಂಗ್ರೆಸ್‌(Congress) ಹಿಂದುಳಿದ ಮತ್ತು ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ (Reservation)ಯನ್ನು ಕಿತ್ತು ಅಕ್ರಮವಾಗಿ ಮುಸ್ಲಿಮರಿಗೆ ನೀಡಿದೆ. ಬಿಜೆಪಿ(BJP) ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಧರ್ಮದ ಆಧಾರದಲ್ಲಿ ನೀಡಲಾಗಿರುವ ಮೀಸಲಾತಿಯನ್ನು ತೆಗೆದು ಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಧರ್ಮದ ಆಧಾರದಲ್ಲಿ ಮೀಸಲಾತಿಯನ್ನು ನಮ್ಮ ಸಂವಿಧಾನ ಎಂದಗೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಧರ್ಮದ ಆಧಾರದಲ್ಲಿ ಮೀಸಲಾತಿ ಕಲ್ಪಿಸಲು ನಮ್ಮ ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಕಾಂಗ್ರೆಸ್‌ ಅಕ್ರಮವಾಗಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುತ್ತಿದೆ. ಈಗ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಅವರು ದೇಶದ ಜನತೆಗೆ ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಧರ್ಮದ ಆಧಾರದಲ್ಲಿ ನಾವು ಎಂದಿಗೂ ಮೀಸಲಾತಿ ನೀಡುವುದಿಲ್ಲ. ಜನ ಈ ಬಗ್ಗೆ ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ. ಜಾತಿ, ಕುಟುಂಬ, ಭ್ರಷ್ಟಾಚಾರ ಮತ್ತು ಓಲೈಕೆಗಳಿಂದ ಪ್ರಜಾಪ್ರಭುತ್ವ ಮುಕ್ತವಾಗಿರಬೇಕು. ಬಿಜೆಪಿ ಜಾತಿ ,ಧರ್ಮ ಓಲೈಕೆಯನ್ನು ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಎನ್‌ಡಿಎ ಪ್ರಣಾಳಿಕೆಯಲ್ಲಿ ಮೈತ್ರಿ ಪಕ್ಷ ತೆಲುಗು ದೇಶಂ ಪಾರ್ಟಿಯ ಚಂದ್ರಬಾಬು ನಾಯ್ಡು ಮುಸ್ಲಿಂ ಓಲೈಕೆಗೆಂದು ಸೇರ್ಪಡೆಗೊಳಿಸಿರುವ ಕೆಲವೊಂದು ಭರವಸೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕೇವಲ ಒಂದು ಧರ್ಮದ ಓಲೈಕೆಯನ್ನು ಸಹಿಸಲ್ಲ. ಅದು ಅವರ ಪ್ರಣಾಳಿಕೆ . ನಮ್ಮ ಪ್ರಣಾಳಿಯಲ್ಲಿ ಈ ವಿಚಾರಗಳನ್ನು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದು ನಮ್ಮ ಪಕ್ಷದಿಂದ ರವಾಣೆಯಾಗಿರುವ ಸ್ಪಷ್ಟ ಸೂಚನೆ ಎಂದು ಹೇಳಿದರು.

ಇನ್ನು ಕಾಂಗ್ರೆಸ್‌ನ ಸಂಪತ್ತಿನ ಮರು ಹಂಚಿಕೆ ಭರವಸೆ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಕಾಂಗ್ರೆಸ್‌ ಇತರ ಜಾತಿಗಳ ಜನರಿಂದ ಸಂಪತ್ತನ್ನು ಕಸಿದು ಅದನ್ನು ಮುಸ್ಲಿಮರಿಗೆ ಹಂಚಚಲು ಬಯಸುತ್ತಿದೆ. ಈ ಮಾಜಿ ಪ್ರಧಾನಿ ಮನಮೋಹನ್‌ ಕೂಡ ಈ ದೇಶದ ಸಂಪತ್ತಿನ ಮೇಲೆ ಅಲ್ಪ ಸಂಖ್ಯಾತರಿಗೆ ಬಹುದೊಡ್ಡ ಅಧಿಕಾರ ಇದೆ ಎಂದು ಹೇಳಿದ್ದರು. ಇದು ಕಾಂಗ್ರೆಸ್‌ನ ಓಲೈಕೆಯ ರಾಜಕಾರಣ ಎಂದು ಅಮಿತ್‌ ಶಾ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನಲ್ಲಿ ಮೂರು ರೀತಿಯ ಬಿಕ್ಕಟ್ಟು

ಕಾಂಗ್ರೆಸ್‌ ಪ್ರಸ್ತುತ ಮೂರು ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಭ್ಯರ್ಥಿಗಳ ಬಿಕ್ಕಟ್ಟು, ನಾಯಕರ ಬಿಕ್ಕಟ್ಟು ಮತ್ತು ನೀತಿಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮೂರು ಬಿಕ್ಕಟ್ಟುಗಳ ನಡುವೆ ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ ಎಂದು ವ್ಯಂಗ್ಯವಾಡಿದರು. ಇದೇ ವೇಳೆ ಅವರು ಈ ಬಾರಿ ತಮ್ಮ ಎನ್‌ಡಿಎ 400ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

ಕೆಲವು ದಿನಗಳ ಹಿಂದೆ ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

Continue Reading

ದೇಶ

MP High Court: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

MP High Court: ಮಧ್ಯ ಪ್ರದೇಶ ಹೈಕೋರ್ಟ್‌ ನೀಡಿದ ಮಹತ್ವದ ತೀರ್ಪಿನಲ್ಲಿ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

VISTARANEWS.COM


on

MP High Court
Koo

ಭೋಪಾಲ್‌: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ (MP High Court) ತೀರ್ಪು ನೀಡಿದೆ. ವೈವಾಹಿಕ ಅತ್ಯಾಚಾರವು ಭಾರತೀಯ ದಂಡ ಸಂಹಿತೆಯಡಿ ಅಪರಾಧವಲ್ಲದ ಕಾರಣ, ಈ ಪ್ರಕರಣದಲ್ಲಿ ಹೆಂಡತಿಯ ‘ಸಮ್ಮತಿ’ ಎಂಬ ಪರಿಕಲ್ಪನೆಯು ‘ಮುಖ್ಯವಲ್ಲ’ ಎಂದು ಅದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ಹಲವು ತೀರ್ಪುಗಳು ಮತ್ತು ಐಪಿಸಿಯ ಸೆಕ್ಷನ್ 375ರ ಅಡಿಯಲ್ಲಿನ ಅತ್ಯಾಚಾರದ ವ್ಯಾಖ್ಯಾನವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಜಿ.ಎಸ್.ಅಹ್ಲುವಾಲಿಯಾ ಅವರು, ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

ದಂಪತಿಯು 2019ರ ಮೇಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಅದಾಗಿ ಒಂದು ವರ್ಷದ ಮೊದಲೇ ಅಂದರೆ 2020ರ ಫೆಬ್ರವರಿಯಿಂದ ಪತ್ನಿ ಅವರ ಪೋಷಕರ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪತಿ ಹೇಳಿದ್ದಾರೆ. ಇತ್ತ ಪತ್ನಿ ಪತಿ ಮತ್ತು ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ದಾಖಲಿಸಿದ್ದಾರೆ. ಸದ್ಯ ಇದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಮಧ್ಯೆ 2022ರ ಜುಲೈಯಲ್ಲಿ ಪತ್ನಿ ಮತ್ತೆ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊರಿಸಿ ಪತಿಯ ವಿರುದ್ಧ ಮತ್ತೊಂದು ಎಫ್‌ಆರ್‌ಐ ದಾಖಲಿಸಿದ್ದರು.

“ವೈವಾಹಿಕ ಅತ್ಯಾಚಾರವನ್ನು ಇಲ್ಲಿಯವರೆಗೆ ಗುರುತಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಅಹ್ಲುವಾಲಿಯಾ ಹೇಳಿ ಅರ್ಜಿದಾರರ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸಿದರು. ಐಪಿಸಿ ಸೆಕ್ಷನ್‌ 375ರ ಅಡಿಯಲ್ಲಿ ಅತ್ಯಾಚಾರದ ತಿದ್ದುಪಡಿ ವ್ಯಾಖ್ಯಾನವನ್ನು ಉಲ್ಲೇಖಿಸಿ, ಕೆಲವು ಸಂದರ್ಭಗಳಲ್ಲಿ ಅಸಹಜ ಕೃತ್ಯಕ್ಕೆ ಪತ್ನಿಯ ಒಪ್ಪಿಗೆ ಪಡೆಯುವುದು ಪ್ರಾಮುಖ್ಯತೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದೂ ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್‌

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ಅಥವಾ ವಿಧಿಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ.

ಇತ್ತೀಚೆಗೆ ಇಬ್ಬರು ಪೈಲಟ್‌ ಆಗಿ ಕೆಲಸ ಮಾಡುತ್ತಿದ್ದ ದಂಪತಿ ಸಲ್ಲಿಸಿದ್ದ ವಿಚ್ಛೇದನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್‌ ಇದ್ದ ಪೀಠ, ಹಿಂದೂ ವಿವಾಹವು ಸೂಕ್ತವಾದ ಆಚರಣೆಗಳು ಇಲ್ಲದೆಯೇ ಆಗಿದ್ದಲ್ಲಿ, ಅಂತಹ ವಿವಾಹವನ್ನು ‘ಹಿಂದೂ ವಿವಾಹವೆಂದು ಪರಿಗಣಿಸಲಾಗದು’ ಎಂದು ಏಪ್ರಿಲ್‌ 19ರ ಆದೇಶದಲ್ಲಿ ಹೇಳಿತ್ತು. ‘ಹಿಂದೂ ವಿವಾಹದಲ್ಲಿ ಸಪ್ತಪದಿ ಅಂದರೆ ಋಗ್ವೇದದ ಪ್ರಕಾರ, ಏಳನೆಯ ಹೆಜ್ಜೆಯನ್ನು ಪೂರ್ಣಗೊಳಿಸಿದ ನಂತರ ವರನು ವಧುವಿಗೆ ‘ಏಳು ಹೆಜ್ಜೆಗಳ ಮೂಲಕ ನಾವು ಸಖರಾಗಿದ್ದೇವೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ಚೆನ್ನಾಗಿ ಯೋಚಿಸಿ ನಿರ್ಧಾರಕ್ಕೆ ಬರಬೇಕು. ಹಿಂದೂ ವಿವಾಹ ಅಂದರೆ ಅದೊಂದು ಸಂಸ್ಕಾರ. ಭಾರತೀಯ ಸಮಾಜದಲ್ಲಿ ಮದುವೆಗೆ ಅದರದ್ದೇ ಆದ ಮೌಲ್ಯಗಳಿವೆ ಎಂದು ಹೇಳಿದೆ.

Continue Reading
Advertisement
Rahul Gandhi
ದೇಶ5 mins ago

Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

Job Alert
ಉದ್ಯೋಗ8 mins ago

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

prajwal revanna case blue corner notice
ಪ್ರಮುಖ ಸುದ್ದಿ11 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

Covishield Vaccine
ಬೆಂಗಳೂರು35 mins ago

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

A Devendra Gowda passed away in Ballari
ಬಳ್ಳಾರಿ47 mins ago

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

MI vs KKR
ಕ್ರೀಡೆ47 mins ago

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

Amrutha Ramamoorthi has been rejected fifteen times
ಕಿರುತೆರೆ49 mins ago

Amrutha Ramamoorthi: ಆಡಿಷನ್‌ನಲ್ಲಿ ಬರೋಬ್ಬರಿ 15 ಬಾರಿ ರಿಜೆಕ್ಟ್ ಆಗಿದ್ದರಂತೆ ಈ ಖ್ಯಾತ ನಟಿ!

Viral Video
ವೈರಲ್ ನ್ಯೂಸ್56 mins ago

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

IPL 2024
ಬೆಂಗಳೂರು1 hour ago

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

Rahul Gandhi
Lok Sabha Election 20241 hour ago

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ22 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌