T20 World Cup | ಪಾಕ್​ ಆಟಗಾರ ಶಾನ್​ ಮಸೂದ್​ ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲು; ವಿಶ್ವ ಕಪ್​ಗೆ ಅನುಮಾನ - Vistara News

T20 ವಿಶ್ವಕಪ್

T20 World Cup | ಪಾಕ್​ ಆಟಗಾರ ಶಾನ್​ ಮಸೂದ್​ ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲು; ವಿಶ್ವ ಕಪ್​ಗೆ ಅನುಮಾನ

ಪಾಕಿಸ್ತಾನ ತಂಡದ ಬ್ಯಾಟರ್​ ಶಾನ್‌ ಮಸೂದ್‌(Shan Masood) ಅಭ್ಯಾಸದ ವೇಳೆ ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್​: ಭಾರತ ವಿರುದ್ಧದ ಪಂದ್ಯಕ್ಕೆ ಇನ್ನು ಎರಡು ದಿನ ಬಾಕಿ ಇರುವಾಗಲೇ ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ನೆಟ್ಸ್​ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಪಾಕಿಸ್ತಾನ ತಂಡದ ಬ್ಯಾಟರ್​ ಶಾನ್‌ ಮಸೂದ್‌(Shan Masood) ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಾಕಿಸ್ತಾನ ತಂಡದ ಆಲ್‌ರೌಂಡರ್‌ ಮೊಹಮ್ಮದ್‌ ನವಾಜ್​ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದರು. ಈ ವೇಳೆ ನೆಟ್ಸ್‌ ಹೊರಗಡೆ ನಿಂತಿದ್ದ ಶಾನ್‌ ಮಸೂದ್‌ ತಲೆಗೆ ಚೆಂಡು ಬಡಿದಿದೆ. ನವಾಜ್​ ಅವರ ತಲೆಗೆ ಚೆಂಡು ಬಡಿದ ತಕ್ಷಣ ಅವರು ಮೈದಾನದಲ್ಲೇ ಕುಸಿದು ಬಿದ್ದರು. ಬಳಿಕ ಪಾಕ್​ ತಂಡದ ಆಟಗಾರರು ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಾಜ್ ಅವರ ಸ್ಕ್ಯಾನ್ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈ ಗೊಳ್ಳಲಾಗುವುದು. ಒಂದು ವೇಳೆ ಶಾನ್‌ ಮಸೂದ್‌ ಅವರ ಗಾಯ ಗಂಭೀರ ಸ್ವರೂಪವಾಗಿದ್ದರೆ, ಟಿ20 ವಿಶ್ವಕಪ್‌ ಟೂರ್ನಿಯಿಂದ ಅವರನ್ನು ಕೈ ಬಿಡಲಾಗುವುದು ಎಂದು ಪಾಕ್​ ತಂಡದ ಕೋಚ್​ ಸಕ್ಲೆನ್​ ಮುಷ್ತಾಕ್​ ತಿಳಿಸಿದ್ದಾರೆ.

ಇದನ್ನೂ ಓದಿ | T20 World Cup | ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಸಾಧನೆ, ಸವಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Team India victory parade: ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ.

VISTARANEWS.COM


on

Team India victory parade
Koo

ಮುಂಬಯಿ: ಟಿ20 ವಿಶ್ವಕಪ್​ ಟ್ರೋಫಿ ಗೆದ್ದು 13 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದ ಟೀಮ್​ ಇಂಡಿಯಾ(Team India) ಆಟಗಾರರು ಇಂದು(ಗುರುವಾರ) ತವರಿಗೆ ಆಗಮಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಭರ್ಜರಿ ಸ್ವಾಗತ ಮತ್ತು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿರುವ ರೋಹಿತ್​ ಪಡೆ ಇದೀಗ ದೇಶದ ವಾಣಿಜ್ಯ ರಾಜಧಾನಿ ಮುಂಬೈನತ್ತ ಪ್ರಯಾಣ ಬೆಳೆಸಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ. ಈ ಸನ್ಮಾನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.

ಸಾರ್ವಜನಿಕ ಸಾರಿಗೆ ಬಳಸುವಂತೆ ಒತ್ತಾಯ


ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?


ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ನೆಟ್​ವರ್ಕ್​ 18ನ ಸ್ಪೋರ್ಟ್ಸ್ 18ನಲ್ಲೂ ಈ ವಿಜಯೋತ್ಸವದ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆಯಪ್​ನಲ್ಲೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಮೋದಿ ಭೇಟಿ ಮಾಡಿದ ತಂಡ


ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಸದ್ಯ ತವರಿಗೆ ಆಗಮಿಸಿದ್ದಾರೆ. ಸಂಜೆ ಮುಂಬೈಯಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದ ಬಳಿಕ ಟೀಮ್​ ಇಂಡಿಯಾ ಆಟಗಾರರು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಲಿದ್ದಾರೆ.

Continue Reading

ಕ್ರೀಡೆ

Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

Team India: ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

VISTARANEWS.COM


on

Team India
Koo

ನವದೆಹಲಿ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಚುಟುಕು ಕ್ರಿಕೆಟ್‌ನಲ್ಲಿ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಭಾರತ(Team India) ಕ್ರಿಕೆಟ್‌ ತಂಡ ಇಂದು (ಗುರುವಾರ) ಬೆಳಗ್ಗೆ ತವರಿಗೆ ಮರಳಲಿದೆ. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರ, ಡೊಳ್ಳು, ತಮಟೆ ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು. ತಮಟೆ ಮತ್ತು ಡೊಳ್ಳಿನ ಸದ್ದಿಗೆ ರೋಹಿತ್​ ಶರ್ಮ(Rohit Sharma), ಹಾರ್ದಿಕ್​ ಪಾಂಡ್ಯ(Hardik Pandya), ರಿಷಭ್​ ಪಂತ್(Rishabh Pant)​ ವಿಶ್ವಕಪ್​ ಟ್ರೋಫಿಯನ್ನು ಕೈಯಲ್ಲಿ ಹಿಡಿದ ಮಸ್ತ್​ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ತಮಟೆ ಬಡಿಯುತ್ತಾ ಸ್ವಾಗತ ಕೋರುತ್ತಿದ್ದವ ಜತೆ ಒಂದೆಡರು ಹೆಜ್ಜೆ ಹಾಕಿ ಸಂಭ್ರಮಿಸಿದರು. ತಮಡೆ ಬಡಿಯುತ್ತಿರುವವರು ಕೂಡ ರೋಹಿತ್​ಗೆ ಸಾಥ್​ ನೀಡಿದರು. ನಾಯಕ ನೃತ್ಯ ಮಾಡುವುದನ್ನು ಕಂಡ ಉಪನಾಯಕ ಹಾರ್ದಿಕ್​ ಪಾಂಡ್ಯ, ವಿಕೆಟ್​ ಕೀಪರ್​ ರಿಷಭ್ ಪಂತ್​ ಕೂಡ ತಾವೇನು ಕಮ್ಮಿ ಇಲ್ಲ ಎನ್ನುವಂತೆ ಕುಣಿದು ಕುಪ್ಪಳಿಸಿದರು.

ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಭಾರತಕ್ಕೆ ಬಂದಿಳಿದೆ. ವಿಮಾನ ನಿಲ್ದಾಣಕ್ಕೆ ತಂಡ ಆಗಮಿಸುತ್ತಿದ್ದಂತೆ ವಿಶ್ವಕಪ್​ ಟ್ರೋಫಿಯ ಆಕೃತಿಯ ಕೇಕ್​ ಕತ್ತರಿಸಲಾಯಿತು. ಇದೇ ವೇಳೆ ಕೊಹ್ಲಿಯ ಕುಟುಂಬಸ್ಥರು ಕೂಡ ಹಾಜರಾಗಿದ್ದರು.

ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ಮೋದಿ ಭೇಟಿಯ ಬಳಿಕ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಆಟಗಾರರು ಮುಂಬೈಗೆ ಆಗಮಿಸಿ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

ಇದನ್ನೂ ಓದಿ Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು.

ಜೂನ್‌ 29ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ 2024ರ ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

Continue Reading

ಕ್ರೀಡೆ

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Suryakumar Yadav: ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

VISTARANEWS.COM


on

Suryakumar Yadav
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತೀಥ್ಯದಲ್ಲಿ ನಡೆದ ಟಿ-20 ವಿಶ್ವಕಪ್‌(T20 World Cup 2024) ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಗಳಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಚುಟುಕು ಕ್ರಿಕೆಟ್‌ನಲ್ಲಿ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್‌ ತಂಡ ಇಂದು (ಗುರುವಾರ) ಬೆಳಗ್ಗೆ ತವರಿಗೆ ಮರಳಲಿದೆ. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ಸೂರ್ಯಕುಮಾರ್​(Suryakumar Yadav) ಅವರು ತಮಟೆ ಸದ್ದಿಗೆ ಮಸ್ತ್​ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಭಾರತಕ್ಕೆ ಬಂದಿಳಿದೆ. ಈ ವೇಳೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರಗಳ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ತಮಟೆ ಬಡಿಯುತ್ತಾ ಸ್ವಾಗತ ಕೋರುತ್ತಿದ್ದವ ಜತೆ ಸೂರ್ಯಕುಮಾರ್​ ಮಸ್ತ್​ ಆಗಿ ಒಂದೆಡರು ಸ್ಟೆಪ್ಸ್​ ಹಾಕಿ ಸಂಭ್ರಮಿಸಿದ್ದಾರೆ. ತಮಡೆ ಬಡಿಯುತ್ತಿರುವವರು ಕೂಡ ಸೂರ್ಯಕುಮಾರ್​ ಜತೆ ಕುಣಿದಿದ್ದಾರೆ.

ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ಮೋದಿ ಭೇಟಿಯ ಬಳಿಕ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಆಟಗಾರರು ಮುಂಬೈಗೆ ಆಗಮಿಸಿ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

ಇದನ್ನೂ ಓದಿ Team India: ಭಾರತಕ್ಕೆ ಬಂದಿಳಿದ ಟೀಮ್‌ ಇಂಡಿಯಾ; ವಿಶ್ವಕಪ್‌ ಹೀರೋಗಳಿಗೆ ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು.

ಜೂನ್‌ 29ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ 2024ರ ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

Continue Reading

ಕ್ರಿಕೆಟ್

T20 World Cup 2024: ವಿವಾದಾತ್ಮಕ ಕ್ಯಾಚ್​ನ ಮತ್ತೊಂದು ವಿಡಿಯೊ ವೈರಲ್​

T20 World Cup 2024: ರೋಹಿತ್‌ ಶರ್ಮಾ (Rohit Sharma) ನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ಇಂದು(ಗುರುವಾರ) ದೆಹಲಿಗೆ ಆಗಮಿಸಿದರು.

VISTARANEWS.COM


on

T20 World Cup 2024
Koo

ಬಾರ್ಬಡೋಸ್​​: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್(T20 World Cup 2024)​ ಫೈನಲ್​ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್ (Suryakumar Yadav Catch)​ ಅವರು ಹಿಡಿದ ಕ್ಯಾಚ್​ ಬಗೆಗಿನ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಐಸಿಸಿ(ICC) ಈ ಕ್ಯಾಚ್​ನ ಮತ್ತೊಂದು ವಿಡಿಯೊವನ್ನು ಹಂಚಿಕೊಂಡಿದೆ.

ಹೌದು, ಸೂರ್ಯಕುಮಾರ್​ ಅವರು ಕ್ಯಾಚ್​ ಹಿಡಿದ ವಿಡಿಯೊದಲ್ಲಿ ಬೌಂಡರಿ ಲೈನ್​ಗೆ ಬಳಸುವ ಕುಶನ್ ಹಿಂದಕ್ಕೆ ಜಾರಿದ ಮಾರ್ಕ್​ ಕಂಡುಬಂದಿತ್ತು. ಹೀಗಾಗಿ ಇದು ಚರ್ಚೆಗೆ ಗ್ರಾಸವಾಗಲು ಕಾರಣ. ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು, ಸೂರ್ಯಕುಮಾರ್(Suryakumar Yadav) ಅವರು ಬೌಂಡರಿ ಗೆರೆಯನ್ನು ತುಳಿದಿದ್ದರೂ ಕೂಡ ಔಟ್​ ನೀಡಲಾಗಿದೆ ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಸ್ಪಷ್ಟನೇ ನೀಡಿದ್ದ ಸಂಖ್ಯಾಶಾಸ್ತ್ರಜ್ಞ


ವಿವಾದಾತ್ಮಕ ಕ್ಯಾಚ್​ ಬಗೆಗಿನ ಎಲ್ಲ ಅನುಮಾನಗಳಿಗೆ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸ್ಪಷ್ಟನೆ ನೀಡಿದ್ದರು. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದರು. ಆದರೂ ಕೂಡ ಚರ್ಚೆಗಳು ನಡೆಯಲುತ್ತಲೇ ಇದೆ. ಇದೇ ಕಾರಣದಿಂದ ಐಸಿಸಿ ಈ ಕ್ಯಾಚ್ನ ಮತ್ತೊಂದು ವಿಡಿಯೊ ಹಂಚಿಕೊಂಡಿದೆ.

ಇದನ್ನೂ ಓದಿ Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಅತ್ಯಂತ ರೋಚಕ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಟೀಮ್​ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದ ಗೆಲುವು ಸಾಧಿಸಿ 13 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರವನ್ನು ನೀಗಿಸಿತ್ತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತು.

ತವರಿಗೆ ಬಂದಿಳಿದ ಟೀಮ್‌ ಇಂಡಿಯಾ

ರೋಹಿತ್‌ ಶರ್ಮಾ (Rohit Sharmaನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ಇಂದು(ಗುರುವಾರ) ದೆಹಲಿಗೆ ಆಗಮಿಸಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

Continue Reading
Advertisement
Team India
ಕ್ರೀಡೆ2 mins ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Bhole Baba
Latest7 mins ago

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Team India victory parade
ಪ್ರಮುಖ ಸುದ್ದಿ10 mins ago

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

karnataka Rain
ಮಳೆ21 mins ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Yuva Rajkumar Shreedevi Divorce Application case
ಸ್ಯಾಂಡಲ್ ವುಡ್26 mins ago

Yuva Rajkumar: ಶ್ರೀದೇವಿ-ಯುವರಾಜ್ ವಿಚ್ಛೇದನ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

Job Alert
ಉದ್ಯೋಗ27 mins ago

Job Alert: 6,128 ಬ್ಯಾಂಕ್ ಕ್ಲರ್ಕ್‌ ಹುದ್ದೆಯ ಅವಕಾಶ; ಬೇಗ ಅರ್ಜಿ ಸಲ್ಲಿಸಿ

heart attack death
ಪ್ರಮುಖ ಸುದ್ದಿ34 mins ago

Heart Attack: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಎಳೇ ಜೀವ ಬಲಿ; ಈ ಸಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

Job Alert
ಉದ್ಯೋಗ38 mins ago

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Electric shock
ಬೆಂಗಳೂರು ಗ್ರಾಮಾಂತರ58 mins ago

Electric shock : ಕತ್ತಲಲ್ಲಿ ಕೆಲಸಕ್ಕೆ ಹೋದವನಿಗೆ ಕರೆಂಟ್‌ ಶಾಕ್‌

Paris Olympics
ಕ್ರೀಡೆ1 hour ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 9 ಅಥ್ಲೀಟ್​ಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 mins ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ2 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ3 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

ಟ್ರೆಂಡಿಂಗ್‌