ಪುನೀತ ಪರ್ವ ವೀಕ್ಷಿಸುತ್ತಲೇ ಅಸುನೀಗಿದ ಅಭಿಮಾನಿ; ಛೆ, ಇಂಥ ಮನುಷ್ಯ ಬೇಗ ಹೋಗಬಾರದಿತ್ತು ಎಂದವನೂ ಬಾರದ ಲೋಕಕ್ಕೆ ಹೋದ - Vistara News

ಕರ್ನಾಟಕ

ಪುನೀತ ಪರ್ವ ವೀಕ್ಷಿಸುತ್ತಲೇ ಅಸುನೀಗಿದ ಅಭಿಮಾನಿ; ಛೆ, ಇಂಥ ಮನುಷ್ಯ ಬೇಗ ಹೋಗಬಾರದಿತ್ತು ಎಂದವನೂ ಬಾರದ ಲೋಕಕ್ಕೆ ಹೋದ

ಪುನೀತ್‌ ನಮ್ಮನ್ನು ಅಗಲಿ ವರ್ಷವಾಗುತ್ತಾ ಬಂದರೂ ಆ ನೋವು, ಕಣ್ಣೀರು, ಹತಾಶೆ ಕಡಿಮೆ ಆಗಿಲ್ಲ. ಪುನೀತ್‌ ಸಾವಿನ ಸುದ್ದಿ ಕೇಳಿಯೇ ಹಲವರು ಉಸಿರು ಚೆಲ್ಲಿದ್ದರು. ಇದೇ ವೇಳೆ ಶುಕ್ರವಾರ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು ನೋಡುತ್ತಲೇ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

ಪುನೀತ ಪರ್ವ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥ ಹಾಗೂ ಅವರ ಅಭಿನಯದ ಕೊನೇ ಚಿತ್ರ ಗಂಧದ ಗುಡಿ ಸಿನಿಮಾದ ಪ್ರೀ ರಿಲೀಸ್‌ ಇವೆಂಟ್‌ನ ಭಾಗವಾಗಿ ಏರ್ಪಡಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮವನ್ನು ಟಿವಿಯಲ್ಲಿ ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿಯೇ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲ್ಲೇಶ್ವರ ನಿವಾಸಿಯಾಗಿರುವ ಗಿರಿರಾಜ್‌ ಮೃತ ದುರ್ದೈವಿ.

ದಿವಂಗತ ಡಾ. ಪುನೀತ್ ರಾಜ್‌ಕುಮಾರ್‌ ಅವರ ಅಪ್ಪಟ ಅಭಿಮಾನಿಯಾಗಿರುವ ಗಿರಿರಾಜ್‌, ಶುಕ್ರವಾರ ಸಂಜೆ ಟಿವಿಯಲ್ಲಿ ಪ್ರಸಾರವಾಗಿದ್ದ “ಪುನೀತ ಪರ್ವ” ಕಾರ್ಯಕ್ರಮವನ್ನು ವೀಕ್ಷಣೆ ಮಾಡುತ್ತಿದ್ದರು. ಹೀಗೆ ಕಾರ್ಯಕ್ರಮವನ್ನು ವೀಕ್ಷಣೆ ಮಾಡುತ್ತಿರುವಾಗಲೇ ಭಾವುಕರಾದ ಗಿರಿರಾಜ್‌, “ಎಂಥ ಮನುಷ್ಯ… ಇನ್ನೂ ಬಾಳಿ ಬದುಕಬೇಕಿತ್ತು, ಇಷ್ಟು ಅಲ್ಪಾಯುಷ್ಯಕ್ಕೆ ತೀರಿಹೋದರು” ಎಂದು ಕಣ್ಣೀರು ಹಾಕಿದರು.

ಬಾತ್‌ ರೂಮಿನಲ್ಲಿ ಕುಸಿದು ಬಿದ್ದರು
ಮಗ ಗಿರಿರಾಜನಿಗೆ ಅಪ್ಪು ಎಂದರೆ ಅಭಿಮಾನ. ದಿನ ಅಪ್ಪು ಫೋಟೊಗೆ ಪೂಜೆ ಮಾಡುತ್ತಿದ್ದ. ಶುಕ್ರವಾರ ಪುನೀತ ಪರ್ವ ಕಾರ್ಯಕ್ರಮ ‌ನೋಡಿ ಬೇಸರಗೊಂಡಿದ್ದ. “ಛೇ ಇಂತ ಮನುಷ್ಯ ತೀರಿ ಹೋದ..” ಎಂದು ಪದೇ ಪದೇ ಹೇಳುತ್ತಿದ್ದ. ರಾತ್ರಿ ಸುಮಾರು‌ ೧೦.೩೦ರ ಹೊತ್ತಿಗೆ ಬಾತ್ ರೂಂಗೆ ಹೋದವನು ಅಲ್ಲೇ ಕುಸಿದು ಬಿದ್ದ. ಕೂಡಲೇ ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಆದರೆ ಅಷ್ಟರಲ್ಲಿ ಮಗ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದರು ಎಂದು ಗಿರಿರಾಜ್‌ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ 3 ಗಂಟೆ ವೇಳೆಗೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ತಿಳಿಸಿದರು.

ತಾಯಿ ಕೈ ತುತ್ತು ಸವಿದಿದ್ದ ಗಿರಿರಾಜ್‌
ಪುನೀತ ಪರ್ವ ಕಾರ್ಯಕ್ರಮದ ಒಂದು ತುಣುಕು ನೋಡಿದ ಗಿರಿರಾಜ್‌ ಬೇಸರಗೊಂಡಿದ್ದರು. ನನಗೂ ಊಟ ಮಾಡಿಸು ಅಮ್ಮ ಎಂದಿದ್ದರಂತೆ. ಬಳಿಕ ಕಾರ್ಯಕ್ರಮವನ್ನು ನೋಡುತ್ತಲೇ ಅಮ್ಮನ ಕೈ ತುತ್ತು ತಿಂದಿದ್ದರು. ಇದನ್ನು ನೆನೆದು ಗಿರಿರಾಜ್‌ ತಾಯಿ ಜಯಮ್ಮ ಮಗನ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. “ನಿನ್ನೆ ತಾನೇ ಕೈ ತುತ್ತು ತಿನ್ನಿಸಿಕೊಂಡು ಹೋದ್ಯಲ್ಲೋ..” ಎಂದು ಕಣ್ಣೀರಿಟ್ಟರು. ತಾಯಿಯ ಆಕ್ರಂದನ ಎಂತಹವರನ್ನೂ ಕರುಳು ಹಿಂಡುವಂತೆ ಮಾಡಿತ್ತು.

ಇದನ್ನೂ ಓದಿ | Puneeth Parva | ಗಂಧದ ಗುಡಿಗೆ ಅಮಿತಾಭ್‌ ಬಚ್ಚನ್ ಹಾರೈಕೆ, ಸಂಭ್ರಮದೊಂದಿಗೆ ʼಪುನೀತ ಪರ್ವʼ ಸಮಾರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

Car Catches Fire: ಬಾಗಲಕೋಟೆ ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ಅವಘಡ ನಡೆದಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ವ್ಯಕ್ಯಿ ಸಜೀವ ದಹನವಾಗಿದ್ದಾರೆ.

VISTARANEWS.COM


on

car catches fire
Koo

ಬಾಗಲಕೋಟೆ: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಘಟನೆ (Car Catches Fire) ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ನಡೆದಿದೆ. ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಪಾಟೀಲ (ಗೌಡರ) (50) ಮೃತ ವ್ಯಕ್ತಿ. ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ರಸ್ತೆ ಪಕ್ಕ ಕಾರು ಹೊತ್ತಿ ಉರಿದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡದ ಕಣಿವಿ ಹೊನ್ನಾಪುರ ಬಳಿ ನಡೆದಿದೆ. ಕೇರಳದಿಂದ ದೆಹಲಿಗೆ ಕಡೆಗೆ ಹೊರಟಿದ್ದ ಲಾರಿ ಪಲ್ಟಿಯಾಗಿದ್ದು, ಈ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬ್ಯಾಟರಿ, ಟಿವಿ ಸಾಮಗ್ರಿ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ | Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Continue Reading

ಬೆಂಗಳೂರು

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Child Actor Master OM: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟ ಮಾಸ್ಟರ್ ಓಂ‌, ಇದೀಗ 10ನೇ ತರಗತಿಯ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್)ನಲ್ಲಿ 97% ಅಂಕ ಗಳಿಸುವ ಮೂಲಕ ಬೆಂಗಳೂರಿನ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ.

VISTARANEWS.COM


on

ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಮತ್ತು ಬಾಲ ನಟ ಓಂ
Koo

ಬೆಂಗಳೂರು: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟನಾಗಿದ್ದ (Child Actor Master OM) ಮಾಸ್ಟರ್ ಓಂ, ಇದೀಗ 10ನೇ ತರಗತಿ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್) ಪರೀಕ್ಷೆಯಲ್ಲಿ 97% ಅಂಕ ಗಳಿಸುವ ಮೂಲಕ ಪ್ರತಿಷ್ಠಿತ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ಐಸಿಎಸ್‌ಸಿ ಸಿಲಬಸ್‌ನಲ್ಲಿ ಓದುವವರು ಕನ್ನಡವೆಂದರೇ ಕಬ್ಬಿಣದ ಕಡಲೆ ಎಂದು ಭಾವಿಸುತ್ತಾರೆ. ಆದರೆ, ಓಂ ಕನ್ನಡದಲ್ಲಿ 100 ಕ್ಕೆ 97 ಅಂಕಗಳನ್ನು ಗಳಿಸುವ ಮೂಲಕ ಇದನ್ನು ಸಾಧಿಸಿ ತೋರಿಸಿದ್ದಾನೆ. ಗಣಿತ ಹಾಗೂ ಹಿಸ್ಟರಿಯಲ್ಲಿ 100ಕ್ಕೆ 99 ಮಾರ್ಕ್ಸ್‌ ಗಳಿಸಿದ್ದಾನೆ. ಇನ್ನುಳಿದ ಎಲ್ಲಾ ವಿಷಯಗಳಲ್ಲೂ ಕ್ರಮವಾಗಿ 95, 96, 97 ಹೀಗೆ ಅತ್ಯಧಿಕ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಇದಕ್ಕೆಲ್ಲಾ ಶಾಲೆಯ ಪ್ರಾಂಶುಪಾಲರು, ಟೀಚರ್ಸ್‌ ಹಾಗೂ ಪೋಷಕರ ಸಹಕಾರವೇ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾನೆ.

ಓಂ ಸಿನಿಮಾ, ಫ್ಯಾಷನ್‌ ಜರ್ನಿ

ಮದುವೆಯ ಮಮತೆಯ ಕರೆಯೊಲೆ, ಲೀ, ವೇಷಧಾರಿ, ಪ್ರೇಮಂ, ಸಂತೋಷ-ಸಂಗೀತ, ಕಾಳಿದಾಸ ಕನ್ನಡ ಮೇಷ್ಟ್ರು, ಕಾಫಿ(ತಮಿಳು) ಸೇರಿದಂತೆ 10ಕ್ಕೂ ಹೆಚ್ಚು ಸಿನಿಮಾ, 35ಕ್ಕೂ ಅಧಿಕ ಜಾಹೀರಾತು ಮತ್ತು ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್‌ ಶೋಗಳಲ್ಲಿ ಸೆಲೆಬ್ರೆಟಿ ಶೋ ಸ್ಟಾಪರ್‌ ಆಗಿ ವಾಕ್‌ ಮಾಡಿರುವ ಓಂ ಓದಿನಲ್ಲೂ ಮುಂದಿರುವುದು ಸಿನಿಮಾ ಬಾಲ ನಟ-ನಟಿಯರಿಗೆ ಮಾದರಿಯಾಗುವಂತಿದೆ. ಇವೆಲ್ಲದರ ಜೊತೆಗೆ ಶಾಲೆಯ ಕ್ಯಾಪ್ಟನ್‌ಶಿಪ್‌ ಹಾಗೂ ತೇಜಸ್ವಿ ಸೂರ್ಯರ ಸೌತ್‌ ಸ್ಕೂಲ್‌ ಲೀಡರ್ಸ್‌ ಟೀಮ್‌ನ ಸಾಮಾಜಿಕ ಕಾರ್ಯಾಗಾರಗಳಲ್ಲೂ ಶಾಲೆಯ ಪ್ರತಿನಿಧಿಯಾಗಿ ಪಾಲ್ಗೊಂಡ ಹೆಗ್ಗಳಿಕೆ ಓಂನದು.

ಇದನ್ನೂ ಓದಿ | Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ. ಹಾಗೆಯೇ, ನಟನೆ-ಮಾಡೆಲಿಂಗ್‌ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಬಯಕೆಯನ್ನೂ ವ್ಯಕ್ತಪಡಿಸಿದ್ದಾನೆ.

Continue Reading

ಬೆಂಗಳೂರು

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

LuLu Fashion Week 2024: ಬೆಂಗಳೂರಿನ ಲುಲು ಮಾಲ್‌ನಲ್ಲಿ ಮೇ 10ರಿಂದ 12ರವರೆಗೆ ಮೂರು ದಿನಗಳವರೆಗೆ ಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿ ಆಯೋಜಿಸಲಾಗಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ವಿವಿಧ ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Koo

ಬೆಂಗಳೂರು: ನಗರದ ಲುಲು ಮಾಲ್‌ನಲ್ಲಿ ʼಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿಯ (LuLu Fashion Week 2024) ಭಾಗವಾಗಿ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮವು 2ನೇ ದಿನವೂ ಅದ್ಧೂರಿಯಾಗಿ ನೆರವೇರಿತು. ಕಲರಫುಲ್ ಸಂಜೆಯಲ್ಲಿ ಮೂಡಿಬಂದ ಫ್ಯಾಷನ್ ಶೋ ನೋಡಲು ಸಾವಿರಾರು ಜನರು ಆಗಮಿಸಿದ್ದರು.

ಮೇ 10ರಂದು ಆರಂಭವಾದ ಕಾರ್ಯಕ್ರಮ ಮೇ 12 ಭಾನುವಾರದವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ನುವಾ, ಪೆಪೆ ಜೀನ್ಸ್ ಲಂಡನ್, ಪೀಟರ್ ಇಂಗ್ಲೆಂಡ್, ಅಮೆರಿಕನ್ ಟೂರಿಸ್ಟರ್, ಕ್ರೊಯ್ಡಾನ್ ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಜೊತೆಗೆ ಬಿಗ್ ಚೋಕೋ ಡೇಸ್ ಲೋಗೋ ಲಾಂಚ್ ಮಾಡಲಾಯಿತು. ನಂತರ ಫ್ಯಾಷನ್ ಫೋರಂನಲ್ಲಿ ಭವಿಷ್ಯದ ಫ್ಯಾಷನ್ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಚಂದನವನದ ನಟ ರಿಷಿ ಭಾಗಿಯಾಗಿದ್ದರು.

ಇನ್ನು ಹಲವಾರು ಕಲೆಗಳಿಗೆ ಕಾರ್ಯಕ್ರಮ ವೇದಿಕೆಯಾಯಿತು. ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಲುಲು ಮಾಲ್ ಅಂಗಳದಲ್ಲಿ ನಡೆದ ಫ್ಯಾಷನ್ ಶೋನಲ್ಲಿ ವಿಭಿನ್ನವಾದ ಬಟ್ಟೆ ತೊಟ್ಟು ನಾರಿಯರು ಕಂಗೊಳಿಸಿದರು. ವಾರಾಂತ್ಯವಾಗಿದ್ದರಿಂದ ಹೆಚ್ಚಿನ ಜನರು ಆಗಮಿಸಿದ್ದು, ಮಕ್ಕಳು ಸಹ ಖುಷಿಪಟ್ಟರು.

ಇದನ್ನೂ ಓದಿ | Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

ಒಟ್ಟಿನಲ್ಲಿ ಲುಲು ಫ್ಯಾಷನ್ ವೀಕ್ ಬಹು ಜೋರಾಗಿದ್ದು, ಪ್ಯಾಷನ್ ಶೋ ನೋಡಿ ನೆರೆದಿದ್ದ ಜನರು ಫುಲ್ ಫಿದಾ ಆಗಿದ್ದಾರೆ. ಇನ್ನು ಮೇ 12 ಭಾನುವಾರ ಫ್ಯಾಷನ್ ವೀಕ್ ಮುಕ್ತಾಯಗೊಳ್ಳಲಿದೆ.

Continue Reading
Advertisement
Karnataka Weather Forecast
ಮಳೆ26 mins ago

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Solar
ಸಂಪಾದಕೀಯ55 mins ago

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

Protein Supplements
ಆರೋಗ್ಯ1 hour ago

Protein Supplements: ಪ್ರೊಟಿನ್‌ ಸಪ್ಲಿಮೆಂಟ್‌ನ ಸೈಡ್‌ ಎಫೆಕ್ಟ್‌ ಏನೇನು? ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯ ಸೂಚನೆ ಇಲ್ಲಿದೆ

Shankara Jayanti 2024
ಧಾರ್ಮಿಕ2 hours ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ2 hours ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ2 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ7 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ8 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು8 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು16 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌