T20 World Cup | ಅಘಫಾನಿಸ್ತಾನ ಬಳಗದ ವಿರುದ್ಧ ಇಂಗ್ಲೆಂಡ್‌ ತಂಡಕ್ಕೆ 5 ವಿಕೆಟ್‌ ಭರ್ಜರಿ ಜಯ - Vistara News

T20 ವಿಶ್ವಕಪ್

T20 World Cup | ಅಘಫಾನಿಸ್ತಾನ ಬಳಗದ ವಿರುದ್ಧ ಇಂಗ್ಲೆಂಡ್‌ ತಂಡಕ್ಕೆ 5 ವಿಕೆಟ್‌ ಭರ್ಜರಿ ಜಯ

ಟಿ20 ವಿಶ್ವ ಕಪ್‌ನ ಸೂಪರ್‌-12 ಹಂತದ ತನ್ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಅಫಘಾನಿಸ್ತಾನ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ.

VISTARANEWS.COM


on

T20 world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌ : ಸ್ಯಾಮ್‌ ಕರ್ರನ್‌ (೧೦ ರನ್‌ಗಳಿಗೆ ೫ ವಿಕೆಟ್‌) ಅವರ ಮಾರಕ ಬೌಲಿಂಗ್‌ ದಾಳಿಯ ನೆರವಿನೊಂದಿಗೆ ಮಿಂಚಿದ ಇಂಗ್ಲೆಂಡ್‌ ತಂಡ ಟಿ೨೦ ವಿಶ್ವ ಕಪ್‌ನ (T20 World Cup) ಗುಂಪು ೧ರ ತನ್ನ ಮೊದಲ ಪಂದ್ಯದಲ್ಲಿ ಅಫಘಾನಿಸ್ತಾನ ವಿರುದ್ಧ ೫ ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಇಂಗ್ಲೆಂಡ್ ಪರ ಬ್ಯಾಟಿಂಗ್‌ನಲ್ಲಿ ಲಿಯಾಮ್‌ ಲಿವಿಂಗ್‌ಸ್ಟನ್‌ ಅಜೇಯ ೨೯ ರನ್‌ ಬಾರಿಸಿದರು.

ಪರ್ತ್‌ ಸ್ಟೇಡಿಯಮ್‌ನಲ್ಲಿ ನಡೆದ ದಿನದ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ತಂಡ ಫೀಲ್ಡಿಂಗ್ ಅಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್‌ ಮಾಡಿದ ಅಫಘಾನಿಸ್ತಾನ ತಂಡ ೧೯.೪ ಓವರ್‌ಗಳಲ್ಲಿ ೧೧೨ ರನ್‌ಗಳಿಗೆ ಆಲ್‌ಔಟ್‌ ಆಯಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡ ೧೮.೧ ಓವರ್‌ಗಳಲ್ಲಿ ೫ ವಿಕೆಟ್‌ ನಷ್ಟಕ್ಕೆ ೧೧೩ ರನ್‌ ಬಾರಿಸಿ ವಿಜಯೋತ್ಸವ ಆಚರಿಸಿತು.

ಮೊದಲು ಬ್ಯಾಟ್‌ ಮಾಡಿದ ಆಫ್ಘನ್‌ ತಂಡ ಇಂಗ್ಲೆಂಡ್‌ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆದಾಗ್ಯೂ ಇಬ್ರಾಹಿಮ್‌ ಜದ್ರಾನ್ (೩೨) ಹಾಗೂ ಉಸ್ಮಾನ್‌ ಘನಿ (೩೦) ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾದರು. ಆದರೆ, ಉಳಿದ ಬ್ಯಾಟರ್‌ಗಳಿಂದ ಹೆಚ್ಚಿನ ನೆರವು ಲಭಿಸಲಿಲ್ಲ.

ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡಕ್ಕೂ ಇಂಗ್ಲೆಂಡ್‌ ಬೌಲರ್‌ಗಳು ಬೆದರಿಕೆಯೊಡ್ಡಿದರು. ಆದರೆ, ಲಿವಿಂಗ್‌ಸ್ಟನ್‌ ತಂಡಕ್ಕೆ ಗೆಲುವು ತಂದುಕೊಟ್ಟರು.

ಸ್ಕೋರ್‌ ವಿವರ

ಅಫಘಾನಿಸ್ತಾನ : ೧೯.೪ ಓವರ್‌ಗಳಲ್ಲಿ ೧೧೨ (ಇಬ್ರಾಹಿಮ್‌ ಜದ್ರಾನ್‌ ೩೨, ಉಸ್ಮಾನ್‌ ಘನಿ ೩೦, ಸ್ಯಾಮ್‌ ಕರ್ರನ್‌ ೧೦ಕ್ಕೆ೫).

ಇಂಗ್ಲೆಂಡ್‌: ೧೮.೧ ಓವರ್‌ಗಳಲ್ಲಿ ೫ ವಿಕೆಟ್‌ಗೆ ೧೧೩ (ಲಿಯಾಮ್‌ ಲಿವಿಂಗ್‌ಸ್ಟನ್‌ ೨೯, ಅಲೆಕ್ಸ್‌ ಹೇಲ್ಸ್ ೧೯; ಮೊಹಮ್ಮದ್‌ ನಬಿ ೧೬ಕ್ಕೆ೧).

ಇದನ್ನೂ ಓದಿ | T20 World Cup | ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ 89 ರನ್‌ ಹೀನಾಯ ಸೋಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

India’s T20 World Cup Jersey: ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ

VISTARANEWS.COM


on

India's T20 World Cup Jersey
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಇದೀಗ ಜೆರ್ಸಿಯ(India’s T20 World Cup Jersey) ಫೋಟೊ ವೈರಲ್​ ಆಗಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್​ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್​ ಆಡಲಿದೆ ಎಂದು ಬರೆದುಕೊಂಡಿದೆ.

ವೈರಲ್​ ಆಗಿರುವ ಟೀಮ್​ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ ಬಣ್ಣದ ಎರಡು ಗೆರೆಗಳಿವೆ. ಈ ಜೆರ್ಸಿಗಳನ್ನು ಶಾಫ್​ ಒಂದರಲ್ಲಿ ಮಾರಾಟಕ್ಕಿಟ್ಟಂತೆ ಕಾಣುತ್ತದೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಸ್ವರೂಪ ಬದಲು

ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಸೂಪರ್ 12 ತಂಡಗಳು ಸೇರಿ 20 ತಂಡಗಳನ್ನು ತಲಾ 5 ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ತಂಡಗನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿವೆ. ಬಳಿಕ ಫೈನಲ್ ನಡೆಯಲಿದೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ
Continue Reading

ಕ್ರೀಡೆ

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Pakistan Cricket: ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

VISTARANEWS.COM


on

Pakistan Cricket
Koo

ಕರಾಚಿ: ಬಹುನಿರೀಕ್ಷಿತ ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಟೂರ್ನಿಗಾಗಿ ಬಹುತೇಕ ತಂಡಗಳು ಕಠಿಣ ತಯಾರಿ ನಡೆಸುತ್ತಿವೆ. ಜತೆಗೆ 15 ಸದಸ್ಯರ ಬಲಿಷ್ಠ ಸಂಭಾವ್ಯ ತಂಡಗಳನ್ನು ಕೂಡ ಪ್ರಕಟಿಸಿವೆ. ಆದರೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಅಧಕಾರಿಗಳೊಂದಿಗೆ 2 ಗಂಟೆಗಳ ಕಾಲ ಸಭೆ ನಡೆಸಿದ ನಖ್ವಿ, ಈ ಬಹುಮಾನ ಮೊತ್ತವನ್ನು ಘೋಷಣೆ ಮಾಡಿದೆ. ಈ ಘೋಷಣೆಯನ್ನು ಕಂಡು ಅನೇಕ ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಹೈರಾಣವಾಗಿರುವ ಮಧ್ಯೆ ಇದೆಲ್ಲ ಬೇಕಿತ್ತಾ ಎಂದು ಕಾಲೆಳೆದಿದ್ದಾರೆ. ಪಾಕಿಸ್ತಾನ ತಂಡ ಐರ್ಲೆಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿ ಆಡಿದ ಬಳಿಕ ತನ್ನ ವಿಶ್ವಕಪ್​ ತಂಡವನ್ನು ಪ್ರಕಟಿಸಲಿದೆ.

“ಎದುರಾಳಿ ಯಾರೇ ಆಗಿರಲಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ಒಂದು ತಂಡವಾಗಿ ಆಟವಾಡಿ” ಎಂದು ನಖ್ವಿ ಪಾಕಿಸ್ತಾನ ತಂಡದ ಆಟಗಾರರನ್ನು ಹುರಿದುಂಬಿಸಿದ್ದಾರೆ. ಇವರ ನೇತೃತ್ವದಲ್ಲೇ ಇತ್ತೀಚೆಗೆ ಪಾಕಿಸ್ತಾನ ಆಟಗಾರರಿಗೆ ಫಿಟ್​ನೆಸ್​ ಕಾಯ್ದುಕೊಳ್ಳುವ ಸಲುವಾಗಿ ಸೈನ್ಯದಲ್ಲಿ ಕಠಿಣ ತರಬೇತಿ ನೀಡಲಾಗಿತ್ತು.

ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮಾರ್ಗದರ್ಶನದಲ್ಲಿ ಪಾಕಿಸ್ತಾನ ಈ ಬಾರಿ ಟಿ20 ವಿಶ್ವಕಪ್​ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ.

ಇದನ್ನೂ ಓದಿ Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

ನ್ಯೂಯಾರ್ಕ್‌ನಲ್ಲಿ ಪಂದ್ಯ

ಇತ್ತಂಡಗಳ ನಡುವಣ ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಅಣಿಯಾಗಲಿದೆ. ಈ ಪಂದ್ಯಕ್ಕಾಗಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಪಂದ್ಯವನ್ನು ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ನಡೆಸಲಾಗುತ್ತಿದೆ. ಅಲ್ಲದೆ ಭಾರತದ ಬಹುತೇಕ ಲೀಗ್​ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದೆ.

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

ICC Women’s T20 World Cup 2024: ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗೆ(ICC Women’s T20 World Cup 2024) ಶ್ರೀಲಂಕಾ(Sri Lanka Women’s T20) ಎರಡನೇ ಕ್ವಾಲಿಫೈಯರ್ ತಂಡವಾಗಿ ಅರ್ಹತೆ ಪಡೆದಿದೆ. ಎರಡನೇ ಸೆಮಿಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ 15 ರನ್​ ಅಂತರದಿಂದ ಗೆಲುವು ಸಾಧಿಸಿ ಅರ್ಹತೆ ಪಡೆದುಕೊಂಡಿತು.

VISTARANEWS.COM


on

ICC Women’s T20 World Cup 2024
Koo

ದುಬೈ: ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿರುವ ಈ ವರ್ಷದ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗೆ(ICC Women’s T20 World Cup 2024) ಶ್ರೀಲಂಕಾ(Sri Lanka Women’s T20) ಎರಡನೇ ಕ್ವಾಲಿಫೈಯರ್ ತಂಡವಾಗಿ ಅರ್ಹತೆ ಪಡೆದಿದೆ. ಸ್ಕಾಟ್ಲೆಂಡ್‌ ಮೊದಲ ಕ್ವಾಲಿಫೈಯರ್ ತಂಡವಾಗಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಜತೆ ಶ್ರೀಲಂಕಾ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಎರಡನೇ ಸೆಮಿಫೈನಲ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಕಣಕ್ಕಿಳಿದ್ದ ಲಂಕಾ ತಂಡ ಗೆಲುವು ಸಾಧಿಸುವ ಮೂಲಕ ಪ್ರಧಾನ ಸುತ್ತಿಗೆ ಅರ್ಹತೆ ಪಡೆದುಕೊಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಲಂಕಾ 6 ವಿಕೆಟ್​ಗೆ 149 ರನ್​ ಬಾರಿಸಿತು. ಈ ಮೊತ್ತವನ್ನು ದಿಟ್ಟವಾಗಿ ಒಂದು ಹಂತದ ವರೆಗೆ ಬೆನ್ನಟ್ಟಿಕೊಂಡು ಹೋದ ಯುಎಇ 7 ವಿಕೆಟ್​ಗೆ 134 ರನ್​ ಗಳಿಸಿ 15 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು.

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. ಭಾನುವಾರ ಐಸಿಸಿ ಈ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ. ಸೆಮಿಫೈನಲ್​ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್​ ಪಂದ್ಯ ಅಕ್ಟೋಬರ್​ 20 ರಂದು ಢಾಕಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್​ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿದೆ. ಮತ್ತೊಂದು ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಈ ಪಂದ್ಯ ಅಕ್ಟೋಬರ್​ 3 ರಂದು ನಡೆಯಲಿದೆ. ಎಲ್ಲಾ ಗುಂಪು ಪಂದ್ಯಗಳು ಸಿಲ್ಹೆಟ್‌ನಲ್ಲಿ ನಡೆಯಲಿದೆ. ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

T20 World Cup 2024: ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿದ್ದು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯಗಳಿಗೆ ಭಯೋತ್ಪಾದಕ ದಾಳಿಯ ಎಚ್ಚರಿಕೆ ಬಂದಿರುವುದಾಗಿ ವರದಿಯಾಗಿದೆ.

VISTARANEWS.COM


on

T20 World Cup 2024
Koo

ಬಾರ್ಬಡಾಸ್​: ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ ಪಂದ್ಯಾವಳಿಗೆ(T20 World Cup 2024) ಪಾಕಿಸ್ತಾನದ ಉಗ್ರರಿಂದ ದಾಳಿಯ ಬೆದರಿಕೆಯೊಂದು(Terror Threat to T20 World Cup) ಬಂದಿರುವುದಾಗಿ ವರದಿಯಾಗಿದೆ. ಕೆರಿಬಿಯನ್ ದ್ವೀಪಗಳ ಮಾಧ್ಯಮ ವರದಿಗಳ ಪ್ರಕಾರ ಟೂರ್ನಿಯ ಮೊದಲ ಪಂದ್ಯ ನಡೆಯುವ ಪ್ರದೇಶದಲ್ಲಿ ಭಯೋತ್ಪಾದಕ ಎಚ್ಚರಿಕೆಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದೆ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಈ ಬೆದರಿಕೆ ಉತ್ತರ ಪಾಕಿಸ್ತಾನದಿಂದ ಬಂದಿದೆ ಎಂದು ತಿಳಿಸಿದೆ.

ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿವೆ, ಇದರಲ್ಲಿ ಅಫ್ಘಾನಿಸ್ತಾನ-ಪಾಕಿಸ್ತಾನ ಉಗ್ರರ ಅಡಗು ತಾಣಗಳಿಂದ ವೀಡಿಯೊ ಸಂದೇಶಗಳ ಮೂಲಕ ಹಲವಾರು ದೇಶಗಳಲ್ಲಿ ದಾಳಿ ನಡೆಸುವ ಮತ್ತು ಈ ಉಗ್ರ ಸಂಚಿನಲ್ಲಿ ಬೆಂಬಲ ನೀಡಲು ಒತ್ತಾಯಿಸಿರುವುದಾಗಿ ಕ್ರಿಕ್‌ಬಜ್‌ ತನ್ನ​ ವರದಿಯಲ್ಲಿ ತಿಳಿಸಿದೆ.

“ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ ಮತ್ತು ನಾವು ಸಮಗ್ರ ಮತ್ತು ದೃಢವಾದ ಭದ್ರತಾ ಯೋಜನೆಯನ್ನು ಹೊಂದಿದ್ದೇವೆ ಎಂದು ನಾವು ಎಲ್ಲ ಪಾಲುದಾರರಿಗೆ ಭರವಸೆ ನೀಡಲು ಬಯಸುತ್ತೇವೆ” ಎಂದು ವೆಸ್ಟ್​ ಇಂಡೀಸ್​ ಕ್ರಿಕೆಟ್​ ಬೋರ್ಡ್​ ಅಧ್ಯಕ್ಷ ಜಾನಿ ಗ್ರೇವ್ಸ್ ಹೇಳಿದರು.

“ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ ಮತ್ತು ನಮ್ಮ ದೇಶದಲ್ಲಿ ನಿಗದಿಯಾದ ಪಂದ್ಯಾವಳಿಗೆ ಯಾವುದೇ ಅಪಾಯವಾಗದಂತೆ ಸೂಕ್ತವಾದ ಯೋಜನೆಗಳು ಜಾರಿಯಲ್ಲಿವೆ” ಎಂದು ಗ್ರೇವ್ಸ್ ಹೇಳಿರುವುದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ. ವೆಸ್ಟ್ ಇಂಡೀಸ್‌ನಲ್ಲಿ ಆಂಟಿಗುವಾ ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಮತ್ತು ಟೊಬಾಗೊ ಸೇರಿದಂತೆ ಆರು ಸ್ಥಳಗಳಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading
Advertisement
lok sabha electon 2024 voting navadurge
ಪ್ರಮುಖ ಸುದ್ದಿ2 mins ago

Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

Road rage
ಕ್ರೈಂ17 mins ago

Road rage: BMW ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಪುಂಡರ ಅಟ್ಟಹಾಸ, ಇಲ್ಲಿದೆ ವಿಡಿಯೋ

Lok Sabha Election 2024
Lok Sabha Election 202436 mins ago

Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

rajamarga column voting 1
ಪ್ರಮುಖ ಸುದ್ದಿ49 mins ago

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Summer Food Tips
ಆಹಾರ/ಅಡುಗೆ1 hour ago

Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

lok sabha election 2025 voting
Lok Sabha Election 20241 hour ago

Lok Sabha Election 2024 Live news: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಆರಂಭ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

karnataka weather Forecast
ಮಳೆ2 hours ago

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election 2024: ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ; ಅದೃಷ್ಟ ಪರೀಕ್ಷೆಗಿಳಿದ 227 ಅಭ್ಯರ್ಥಿಗಳು

Lok Sabha Election-2024
ಕರ್ನಾಟಕ2 hours ago

ಇಂದು 2ನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ13 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ14 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ14 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌