Contaminated water | ರಾಮದುರ್ಗ ಕಲುಷಿತ ನೀರು ಸೇವನೆ ಪ್ರಕರಣ; ಮೃತರ ಕುಟುಂಬಕ್ಕೆ ₹10 ಲಕ್ಷ ಘೋಷಣೆ - Vistara News

ಕರ್ನಾಟಕ

Contaminated water | ರಾಮದುರ್ಗ ಕಲುಷಿತ ನೀರು ಸೇವನೆ ಪ್ರಕರಣ; ಮೃತರ ಕುಟುಂಬಕ್ಕೆ ₹10 ಲಕ್ಷ ಘೋಷಣೆ

Contaminated water | ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಬಲಿಯಾಗಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

VISTARANEWS.COM


on

ramadurga case 2
ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಆರೋಗ್ಯ ತಪಾಸಣೆ ನಡೆಸುತ್ತಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ರಾಜ್ಯದ ಹಲವು ಭಾಗಗಳಲ್ಲಿ ಕಲುಷಿತ ನೀರು ಸೇವನೆ (Contaminated water) ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಇನ್ನು ಸಾವಿನಿಂದ ಎಚ್ಚೆತ್ತ ತಾಲೂಕು ಆಡಳಿತವು, ಗ್ರಾಮದ ಪ್ರತಿಯೊಬ್ಬರಿಗೂ ಆರೋಗ್ಯ ತಪಾಸಣೆಗೆ ಮುಂದಾಗಿದೆ.

ಕಲುಷಿತ ನೀರು ಸೇವನೆಗೆ ಸಂಬಂಧಪಟ್ಟಂತೆ ಮುದೇನೂರು ಗ್ರಾಮದ ಶಿವಪ್ಪ ಬೆಳ್ಳೆೇರಿ ಎಂಬುವವರು ಬುಧವಾರ ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ರಾಮದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು. ಗಂಭೀರಗೊಂಡಿದ್ದ ನೀಲಪ್ಪ ಪೂಜಾರಿ (೪೮), ಸಿದ್ದಪ್ಪ ಕುರಿ (೪೨) ಎಂಬುವವರಿಗೆ ಚಿಕಿತ್ಸೆ ಮುಂದುವರಿದಿದ್ದು, ಸದ್ಯ ಇಬ್ಬರ ಆರೋಗ್ಯ ಸ್ಥಿರವಾಗಿದೆ ಎಂದು ಬಾಗಲಕೋಟೆ ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ.ಪ್ರಕಾಶ್ ಬಿರಾದಾರ ಮಾಹಿತಿ ನೀಡಿದ್ದಾರೆ.

೧೦ ಲಕ್ಷ ರೂಪಾಯಿ ಪರಿಹಾರ
ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ೧೦ ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ಶಿವಪ್ಪ ಬೆಳ್ಳೆೇರಿ ಬುಧವಾರ (ಅ.೨೬) ಮೃತಪಟ್ಟಿದ್ದಾರೆ. ಅಕ್ಟೋಬರ್‌ 23ರಂದು ಸರಸ್ವತಿ ಹಾವಳ್ಳಿ (73) ಮೃತಪಟ್ಟಿದ್ದರು. ಆದರೆ, ಸರಸ್ವತಿ ಅವರು ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿಲ್ಲ. ಈಗ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದರಿಂದ ಈ ಸಾವನ್ನೂ ಇದೇ ಪ್ರಕರಣಕ್ಕೆ ಜೋಡಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ | Contaminated water | ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಪ್ರತಿ ಗ್ರಾಮಸ್ಥರ ಆರೋಗ್ಯ ತಪಾಸಣೆ
ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಪ್ರಕರಣವು ಗಂಭೀರ ಸ್ವರೂಪಕ್ಕೆ ತಿರುಗಿದ್ದಲ್ಲದೆ, ಈಗಾಗಲೇ ಗ್ರಾಮದ 195 ಜನರು ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಮದುರ್ಗ ತಾಲೂಕು ಆಡಳಿತ ಪ್ರತಿಯೊಬ್ಬ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡುತ್ತಿದೆ. ಸ್ಥಳದಲ್ಲೇ ಡಿಎಚ್‌ಒ ಡಾ.ಮಹೇಶ್ ಕೋಣಿ, ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ್ ಮೊಕ್ಕಾಂ ಹೂಡಿದ್ದಾರೆ. ಅಲ್ಲದೆ, ಒಬ್ಬರು ಟಿಎಚ್‌ಒ, ಮೂವರು ಸಿಎಚ್‌ಒ, ನಾಲ್ವರು ವೈದ್ಯರು ಸೇರಿ 33 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದವರನ್ನು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಗುರುವಾರ ಬೆಳಗ್ಗೆಯಿಂದ ಮತ್ತೆ 45 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ, ಭೇದಿ, ಸುಸ್ತು, ರಕ್ತದೊತ್ತಡ ಸಮಸ್ಯೆ ಕಂಡುಬಂದವರನ್ನು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಅಕ್ಟೋಬರ್ 23ರಿಂದ ಈವರೆಗೆ ಒಟ್ಟು ಇಬ್ಬರು ಮೃತಪಟ್ಟಂತಾಗಿದೆ.

ಮುದೇನೂರು ಗ್ರಾಮದಲ್ಲಿ ಅಲ್ಲಲ್ಲಿ ಕುಡಿಯುವ ನೀರಿನ ಪೈಪ್ ಒಡೆದಿತ್ತು ಎನ್ನಲಾಗಿದ್ದು, ಈ ಪೈಪ್‌ಗೆ ಚರಂಡಿ ನೀರು ಸೇರ್ಪಡೆಯಾಗಿ ಅವಘಡ ಸಂಭವಿಸಿದೆ. ರಾಮದುರ್ಗ ತಾಲೂಕು ಆಸ್ಪತ್ರೆ, ಬಟಕುರ್ಕಿ ಆರೋಗ್ಯ ಕೇಂದ್ರ ಹಾಗೂ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಇಷ್ಟೆಲ್ಲ ಅನಾಹುತವಾದರೂ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಮದುರ್ಗ ತಹಸೀಲ್ದಾರ ವಿರುದ್ಧ ಮುದೇನೂರ ಗ್ರಾಮಸ್ಥರು ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ | Contaminated water | ಇಲಿ ಸತ್ತು ಬಿದ್ದ ನೀರನ್ನೇ ಪೂರೈಕೆ ಮಾಡಿದ ಅಧಿಕಾರಿಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

SSLC 2024 Exam 2: ರಾಜ್ಯಾದ್ಯಂತ 724 ಪರೀಕ್ಷಾ ಕೇಂದ್ರಗಳಲ್ಲಿ ಜೂ. 14ರಿಂದ 22ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ (SSLC Examination 2) ನೋಂದಾಯಿಸಿಕೊಂಡಿದ್ದಾರೆ.

VISTARANEWS.COM


on

By

SSLC examination-2 to begin from tomorrow at over 700 centres
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 (SSLC Examination 2) ಜೂನ್‌ 14 ರಿಂದ ಶುರುವಾಗಲಿದೆ. ಈ ಮೊದಲು ಜೂನ್‌ 7ಕ್ಕೆ ನಡೆಸಲು ಯೋಜಿಸಲಾಗಿತ್ತು. ಬಳಿಕ ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದರು. ಅದರಂತೆ 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2 (SSLC 2024 Exam 2) ಶುಕ್ರವಾರದಿಂದ ನಡೆಯಲಿದ್ದು, ಸುಮಾರು 2,23,308 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,44,160 ಬಾಲಕರು ಹಾಗೂ 79,148 ಬಾಲಕಿಯರು ಇದ್ದಾರೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 724 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಇನ್ನೂ ಒಟ್ಟು ನೋಂದಣಿಯಲ್ಲಿ ಫಲಿತಾಂಶ ವೃದ್ಧಿಗೆ 13,085 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ಏಳು ಮಾಧ್ಯಮದಲ್ಲಿ ಪರೀಕ್ಷೆಯನ್ನು ಬರೆಯಬಹುದಾಗಿದೆ. ಪ್ರತಿ ಕೇಂದ್ರದಲ್ಲೂ ಸಿಸಿಟಿವಿಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಮೇಲೆ ನಿಗಾ ಇಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷ-2ರ ವೇಳಾಪಟ್ಟಿ ಹೀಗಿದೆ

ದಿನಾಂಕ- ವಿಷಯಗಳು

14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.

15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.

18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ

19-06-2024 ಬುಧವಾರ: ಅರ್ಥ ಶಾಸ್ತ್ರ

20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.

21-06-2024 ಶುಕ್ರವಾರ- ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ

22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Rain News : ಮಳೆಯು ಅನಾಹುತವನ್ನೇ (Rain Effect) ಸೃಷ್ಟಿಸುತ್ತಿದೆ. ನಿರಂತರ ಮಳೆಗೆ ಮಣ್ಣಿನ ಮನೆ ಕುಸಿದು ಬಿದ್ದಿದೆ. ಪರಿಣಾಮ ಮನೆಯೊಳಗಿದ್ದ ವ್ಯಕ್ತಿಯೊಬ್ಬರು ಉಸಿರು ಚೆಲ್ಲಿದ್ದಾರೆ. ಇನ್ನೊಂದು ವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬಾಗಲಕೋಟೆ/ಬೆಂಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಬಾಗಲಕೋಟೆಯ ಜಮಖಂಡಿ ನಗರದ ಮೋಮಿನ ಗಲ್ಲಿಯಲ್ಲಿ ನಿರಂತರ ಮಳೆಗೆ (Rain News) ಮಣ್ಣಿನ ಮನೆ ಕುಸಿದಿದ್ದು, ಮನೆಯೊಳಗಿದ್ದ ವ್ಯಕ್ತಿ ದಾರುಣವಾಗಿ ಮೃತಪಟ್ಟಿದ್ದಾರೆ. ಮುಸ್ತಾಕ ಮಕಬುಲ್ ಸಾಬ್ ಆವಟಿ (43)‌ ಮೃತ ದುರ್ದೈವಿ‌.

ಜೋರಾಗಿ ಸುರಿದ ಮಳೆಗೆ ಮಣ್ಣಿನ ಮನೆಯು ಏಕಾಏಕಿ ಕುಸಿದಿದೆ. ಈ ವೇಳೆ ಮುಸ್ತಾಕ ಮಕಬುಲ್‌ ಅವರು ಮನೆಯೊಳಗೆ ಮಲಗಿದ್ದು, ಇವರ ಮೈಮೇಲೆ ಮಣ್ಣು ಕುಸಿದ ಪರಿಣಾಮ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಮುಸ್ತಾಕ ಅವರ ಪತ್ನಿ- ಮಕ್ಕಳು ಪಕ್ಕದ ಇನ್ನೊಂದು ಮನೆಯಲ್ಲಿದ್ದಾಗ ಘಟನೆ ನಡೆದಿದೆ. ಇನ್ನೂ ಮಣ್ಣಿನ ಅವಶೇಷಗಳಡಿ ಸಿಲುಕಿದ‌ ಮೃತದೇಹವನ್ನು ಹೊರ ತೆಗೆಯಲಾಯಿತು.

ತಹಸೀಲ್ದಾರ್‌ ಸದಾಶಿವ ಮುಕ್ಕೋಜಿ ಹಾಗೂ ಶಹರ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರಿನಲ್ಲೂ ಮುಂದುವರಿದ ವರ್ಷಧಾರೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯು ಮುಂದುವರಿದಿದೆ. ಕೆಆರ್‌ ಸರ್ಕಲ್‌, ವಿಧಾನಸೌಧ, ಶಿವಾಜಿನಗರ, ವಸಂತ ನಗರ, ಮೆಜೆಸ್ಟಿಕ್‌, ಕೆಂಗೇರಿ, ಜ್ಞಾನಭಾರತಿ, ನಾಗರಭಾವಿ ಸುತ್ತಮುತ್ತ ಮಳೆಯಾಗಿದೆ. ಬಿಟ್ಟು ಬಿಟ್ಟು ಜೋರಾಗಿ ಮಳೆ ಸುರಿಯುತ್ತಿದ್ದು, ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಶಾಲೆ ಬಿಡುವ ಸಂದರ್ಭದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

ಇದನ್ನೂ ಓದಿ: Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

ಲಘು ಮಳೆ ಸಾಧ್ಯತೆ

ಜೂನ್‌ 14ರಂದು ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

BS Yediyurappa: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯವೀಗ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ಮಾಜಿ ಸಿಎಂಗೆ ಬಂಧನದ ಭೀತಿ ಎದುರಾಗಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೊ ಪ್ರಕರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿದುಬಂದಿದೆ. ನ್ಯಾಯಾಧೀಶ ಎನ್‌.ಎಂ.ರಮೇಶ್‌ ಅವರು ಯಡಿಯೂರಪ್ಪ ಅವರ ವಿರುದ್ಧ ಅರೆಸ್ಟ್ ವಾರಂಟ್‌ ಹೊರಡಿಸಲು ಆದೇಶಿಸಿದ್ದಾರೆ. ಮತ್ತೊಂದೆಡೆ, ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿಯನ್ನು ಕೋಣೆಯೊಳಗೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಬಾಲಕಿಯ ತಾಯಿಯು ಮಾರ್ಚ್‌ 17ರಂದು ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

BS Yediyurappa: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ. ಇದರಿಂದಾಗಿ ಮಾಜಿ ಸಿಎಂಗೆ ಬಂಧನದ ಭೀತಿ ಎದುರಾಗಿದೆ.

ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಈಗಾಗಲೇ, ಬಂಧನದಿಂದ ರಕ್ಷಣೆ ಹಾಗೂ ಪ್ರಕರಣವನ್ನು ರದ್ದುಗೊಳಿಸಬೇಕು ಎಂಬುದಾಗಿ ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಯಡಿಯೂರಪ್ಪ ಅವರು ಸಿಐಡಿ ವಿಚಾರಣೆಗೂ ಹಾಜರಾಗಿದ್ದರು.

ದೆಹಲಿಯಲ್ಲಿದ್ದಾರೆ ಮಾಜಿ ಸಿಎಂ

ಬಿ.ಎಸ್‌.ಯಡಿಯೂರಪ್ಪ ಅವರು ಸದ್ಯ ದೆಹಲಿಯಲ್ಲಿದ್ದು, ಗುರುವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಮೂರು ದಿನಗಳ ಹಿಂದೆಯೇ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಪೋಕ್ಸೊ ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಶುಕ್ರವಾರ (ಜೂನ್‌ 14) ವಿಚಾರಣೆಗೆ ಬರುವ ಸಾಧ್ಯತೆ ಇದೆ. ಒಂದು ಕಡೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾಗಿದೆ. ಮತ್ತೊಂದು ಕಡೆ, ಶುಕ್ರವಾರ ನ್ಯಾಯಾಲಯದ ತೀರ್ಪು ಯಡಿಯೂರಪ್ಪ ಅವರಿಗೆ ಮಹತ್ವದ್ದಾಗಿದೆ. ಇದು ಯಡಿಯೂರಪ್ಪ ಅವರನ್ನು ತುಸು ಚಿಂತೆಯಲ್ಲಿ ಮುಳುಗಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Continue Reading

ಬೆಂಗಳೂರು

Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

Double Decker Flyover: ಹಲವು ವಿಳಂಬಗಳ ನಂತರ ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಕೊನೆಗೂ ಸಿದ್ಧವಾಗಿದೆ. ಹಳದಿ ಮಾರ್ಗವಾದ ಆರ್‌ವಿ ರಸ್ತೆ- ಬೊಮ್ಮಸಂದ್ರದ ಮುಖ್ಯ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ (Namma Metro) ನಡೆಸಲಾಗಿದೆ.

VISTARANEWS.COM


on

By

Bengalurus first double-decker flyover ready
Koo

ಬೆಂಗಳೂರು: ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ (Double Decker Flyover) ಕೊನೆಗೂ ಸಿದ್ಧವಾಗಿದೆ. ರಾಗಿ ಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ಹಳದಿ ಮಾರ್ಗದ (ಆರ್‌ವಿ ರಸ್ತೆ- ಬೊಮ್ಮಸಂದ್ರ) 3.3 ಕಿ.ಮೀ ಉದ್ದದ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ. ಜೂನ್‌ 15ರಂದು ಅಥವಾ ನಂತರ ರಾಗಿಗುಡ್ಡದಿಂದ ಸಿಎಸ್‌ಬಿ ಒಂದು ಬದಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಇದಕ್ಕೂ ಮುನ್ನ ಅಧಿಕಾರಿಗಳು ಅಂತಿಮ ತಪಾಸಣೆ ನಡೆಸಲಿದ್ದಾರೆ. ಕೆಳ ಡೆಕ್ ಅನ್ನು ವಾಹನಗಳ ಸಂಚಾರಕ್ಕೆ ಇದ್ದರೆ, ಮೇಲಿನ ಡೆಕ್ ನಮ್ಮ ಮೆಟ್ರೋಗಾಗಿ ಬಳಕೆ ಮಾಡಲಾಗುತ್ತದೆ.

ಬಿಎಂಆರ್‌ಸಿಎಲ್‌ ಸಿಎಸ್‌ಬಿ ಜಂಕ್ಷನ್‌ನಲ್ಲಿ 5 ಲೂಪ್‌ಗಳು (A,B,C,D ಮತ್ತುE) ಮತ್ತು ರ‍್ಯಾಂಪ್‌ಗಳನ್ನು ನಿರ್ಮಿಸುತ್ತಿದೆ. ಎ,ಬಿ,ಸಿ ಲೂಪ್‌ಗಳು ರಾಗಿಗುಡ್ಡ / ಬಿಟಿಎಂ ಲೇಔಟ್ ಕಡೆಯಿಂದ ಕೆ.ಆರ್.ಪುರಂ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ. ಈಗಾಗಲೇ ಎ,ಬಿ, ಸಿ ರ‍್ಯಾಂಪ್‌ಗಳಲ್ಲಿ ಎಲ್ಲಾ ಕಾರ್ಯಗಳು ಪೂರ್ಣಗೊಂಡಿದ್ದು, ಜೂನ್‌ನಲ್ಲಿ ತೆರೆಯುವ ನಿರೀಕ್ಷೆಯಿದೆ. 2025ರ ಜೂನ್ ವೇಳೆಗೆ ಡಿ ಮತ್ತು ಇ ರ‍್ಯಾಂಪ್‌ಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಗ್ನಲ್‌ ಫ್ರೀ ಕಾರಿಡಾರ್‌

ಫ್ಲೈಓವರ್‌ ಈಗಿರುವ ರಸ್ತೆಯಿಂದ 8 ಮೀಟರ್ ಎತ್ತರದಲ್ಲಿದ್ದರೆ, ಮೆಟ್ರೋ ವಯಾಡಕ್ಟ್ 16 ಮೀಟರ್ ಎತ್ತರದಲ್ಲಿದೆ. ಈಗಾಗಲೇ ರಸ್ತೆ ಮತ್ತು ಮೆಟ್ರೋ ಸ್ಟ್ರಕ್ಚರ್ಸ್ ಜೈಪುರ, ನಾಗ್ಪುರ ಮತ್ತು ಮುಂಬೈನಂತಹ ನಗರಗಳಲ್ಲಿ ಇವೆ. ರಾಗಿಗುಡ್ಡ ಮತ್ತು ಸಿಎಸ್‌ಬಿ ನಡುವಿನ ವಿಭಾಗವು ಸಿಗ್ನಲ್ ಫ್ರೀ ಕಾರಿಡಾರ್ ಆಗಲಿದೆ. ಇದರಿಂದ ಪೀಕ್‌ ಸಮಯದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ. ರಾಗಿಗುಡ್ಡದಿಂದ ಬರುವ ವಾಹನಗಳು ಸಿಗ್ನಲ್ ಇಲ್ಲದೆ ಸಿಎಸ್‌ಬಿ ದಾಟಿ ಎಚ್ಎಸ್ಆರ್ ಲೇಔಟ್ ಮತ್ತು ಹೊಸೂರು ರಸ್ತೆ ಕಡೆಗೆ ತಲುಪಬಹುದಾಗಿದೆ. ಔಟರ್‌ ರಿಂಗ್‌ ರೋಡ್‌ ಮತ್ತು ಹೊಸೂರು ರಸ್ತೆಯನ್ನು ಸೇರುವ ಸಿಎಸ್‌ಬಿ ಜಂಕ್ಷನ್ ಬೆಂಗಳೂರಿನ ಅತ್ಯಂತ ಜನನಿಬಿಡ ಜಂಕ್ಷನ್‌ಗಳಲ್ಲಿ ಒಂದಾಗಿದೆ. ಈ ಜಂಕ್ಷನ್ ಔಟರ್‌ ರಿಂಗ್‌ ರೋಡ್‌ನಲ್ಲಿ ಬ್ಲೂ ಲೈನ್ (ಸಿಎಸ್‌ಬಿ-ಕೆಆರ್ ಪುರಂ) ಮತ್ತು ಯೆಲ್ಲೋ ಲೈನ್ (ಆರ್‌ವಿ ರಸ್ತೆ-ಬೊಮ್ಮಸಂದ್ರ) ಎರಡು ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ 5 ಕಡೆಗಳಲ್ಲಿ ಆ್ಯಕ್ಸಿಡೆಂಟ್‌; ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

ಯೆಲ್ಲೋ ಲೈನ್‌ ಕಾರಿಡಾರ್‌ ಟ್ರಯಲ್‌ ರನ್‌

ಜೂನ್‌ 13ರಂದು ಯೆಲ್ಲೋ ಮಾರ್ಗವಾದ ಆರ್‌ವಿರಸ್ತೆ – ಬೊಮ್ಮಸಂದ್ರದ ಮುಖ್ಯ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಸಲಾಗಿದೆ. ಈ ಹಿಂದೆ ಜೂನ್ 7 ರಂದು ನಿಗದಿಯಾಗಿದ್ದ ಪ್ರಾಯೋಗಿಕ ಸಂಚಾರವನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಮುಂದೂಡಲಾಯಿತು. ಇನ್ಫೋಸಿಸ್ ಮತ್ತು ಬಯೋಕಾನ್ ನಂತಹ ಪ್ರಮುಖ ಕಂಪನಿಗಳನ್ನು ಹೊಂದಿರುವ ಬೆಂಗಳೂರಿನ ಟೆಕ್ ಹಬ್ ಎಲೆಕ್ಟ್ರಾನಿಕ್ಸ್ ಸಿಟಿಯನ್ನು ಮೆಟ್ರೋ ಜಾಲಕ್ಕೆ ಸಂಪರ್ಕಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ.

ಆರ್.ವಿ.ರಸ್ತೆ ಮತ್ತು ಬೊಮ್ಮಸಂದ್ರವನ್ನು ಸಂಪರ್ಕಿಸುವ 18.8 ಕಿ.ಮೀ ಹಳದಿ ಮಾರ್ಗವು ಮೊದಲು 2021ರಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿತ್ತು, ಆದರೆ ಬೋಗಿಗಳು ಲಭ್ಯವಿಲ್ಲದ ಕಾರಣ ಬಿಎಂಆರ್‌ಸಿಎಲ್ ಗಡುವನ್ನು 2024 ರ ಡಿಸೆಂಬರ್‌ಗೆ ಮುಂದೂಡಿತು. ಸದ್ಯ ಈ ಮಾರ್ಗವನ್ನು ಸಾರ್ವಜನಿಕರಿಗೆ ತೆರೆಯುವ ಮೊದಲು ರೈಲ್ವೆ ಮಂಡಳಿಯಿಂದ ತಾಂತ್ರಿಕ ಅನುಮೋದನೆ ಮತ್ತು ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ (ಸಿಎಂಆರ್ಎಸ್) ಅನುಮೋದನೆ ಸಿಗಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Glasses or Lenses
ಆರೋಗ್ಯ43 seconds ago

Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

SSLC examination-2 to begin from tomorrow at over 700 centres
ಬೆಂಗಳೂರು2 mins ago

SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

weight lifting
ಪ್ರಮುಖ ಸುದ್ದಿ4 mins ago

Weight Lifting: ಮೊಣಕಾಲಿನ ಸಂಧಿವಾತವಿದ್ದರೂ 68ನೇ ವಯಸ್ಸಿನಲ್ಲಿ 60 ಕೆಜಿ ಭಾರ ಎತ್ತುವ ಅಜ್ಜಿ!

Online Order Tragedy
ಪ್ರಮುಖ ಸುದ್ದಿ14 mins ago

Online Order Tragedy: ಆನ್‌ಲೈನ್‌ನಿಂದ ತರಿಸಿದ ಐಸ್‌ಕ್ರೀಂನಲ್ಲಿತ್ತು ಮನುಷ್ಯರ ಬೆರಳು!

Ajit Doval
ದೇಶ30 mins ago

Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ; ಉಗ್ರರಿಗೆ ನಡುಕ

karnataka weather Forecast
ಮಳೆ37 mins ago

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Actor Darshan devil 22 crore taken by producer
ಸಿನಿಮಾ50 mins ago

Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

Shirt Fashion
ಫ್ಯಾಷನ್52 mins ago

Shirt Fashion: ಮೆನ್ಸ್ ಹೈ ಫ್ಯಾಷನ್‌ಗೆ ಲಗ್ಗೆ ಇಟ್ಟ ಪ್ರಯೋಗಾತ್ಮಕ ರ‍್ಯಾಂಪ್‌ ಶರ್ಟ್

BS Yediyurappa
ಕರ್ನಾಟಕ52 mins ago

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

Rohit Sharma
ಕ್ರೀಡೆ1 hour ago

Rohit Sharma: ನ್ಯೂಯಾರ್ಕ್‌ ಪಿಚ್‌ನಲ್ಲಿ ಆಡುವುದು ಸುಲಭವಲ್ಲ ಎಂದ ರೋಹಿತ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌