T20 World Cup | ಪಾಕಿಸ್ತಾನದಿಂದ ಪಿಚ್‌ ಕೂಡ ತೆಗೆದುಕೊಂಡು ಹೋಗಿ, ಬಾಬರ್‌ ಬಳಗದ ಬಗ್ಗೆ ಅಕ್ರಮ್‌ ಕ್ರೋಧ ನುಡಿ - Vistara News

T20 ವಿಶ್ವಕಪ್

T20 World Cup | ಪಾಕಿಸ್ತಾನದಿಂದ ಪಿಚ್‌ ಕೂಡ ತೆಗೆದುಕೊಂಡು ಹೋಗಿ, ಬಾಬರ್‌ ಬಳಗದ ಬಗ್ಗೆ ಅಕ್ರಮ್‌ ಕ್ರೋಧ ನುಡಿ

ಜಿಂಬಾಬ್ವೆ ವಿರುದ್ಧ ಪಾಕಿಸ್ತಾನ ತಂಡ ಸೋತಿರುವುದಕ್ಕೆ ಪಾಕ್‌ನ ದಿಗ್ಗಜ ಕ್ರಿಕೆಟಿಗ ವಾಸಿಮ್ ಅಕ್ರಮ್‌ ಕೋಪದಿಂದ ಪ್ರತಿಕ್ರಿಯೆ ಕೊಟ್ಟಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌: ಜಿಂಬಾಬ್ವೆ ವಿರುದ್ಧದ ವಿಶ್ವ ಕಪ್‌ ಪಂದ್ಯದಲ್ಲಿ ಬಾಬರ್‌ ಅಜಮ್‌ ನೇತೃತ್ವದ ಪಾಕಿಸ್ತಾನ ತಂಡ ಸೋಲು ಕಂಡಿರುವುದು, ಪಾಕಿಸ್ತಾನ ಕ್ಷೇತ್ರದ ನಿದ್ದೆಗೆಡಿಸಿದೆ. ಹೀಗಾಗಿ ಬಾಬರ್ ಅಜಮ್‌ ನೇತತ್ವದ ಪಾಕ್‌ ತಂಡದ ವಿರುದ್ಧ ಅವರದ್ದೇ ದೇಶದ ಮಾಜಿ ಕ್ರಿಕೆಟಗರು ಸಿಡಿದೆದ್ದಿದ್ದಾರೆ. ಸಂಕಷ್ಟಕ್ಕೆ ಬಿದ್ದಿರುವ ಪಾಕ್‌ ತಂಡದ ಆಟಗಾರರ ವೈಫಲ್ಯವನ್ನು ಒಂದೊಂದಾಗಿ ಎತ್ತಿ ತೋರಿಸಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅಂತೆಯೇ ಪಾಕಿಸ್ತಾನ ಕ್ರಿಕೆಟ್ ದಿಗ್ಗಜ ವಾಸಿಮ್‌ ಅಕ್ರಮ್‌ ಅವರು, ಆಸ್ಟ್ರೇಲಿಯಾದ ಪರಿಸ್ಥಿತಿಗೆ ಪೂರಕವಾಗಿ ತಂಡ ಸಿದ್ಧಗೊಳ್ಳದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

“ವಿಶ್ವ ಕಪ್‌ನಂಥ ಟೂರ್ನಿಗಳಿಗೆ ಸಜ್ಜಾಗುವಾಗ ಆತಿಥೇಯ ದೇಶದ ಪಿಚ್‌ಗಳಿಗೆ ಹೊಂದಿಕೆ ಮಾಡಿಕೊಳ್ಳುವುದು ಹಾಗೂ ತಂಡವನ್ನು ಸಿದ್ಧಗೊಳಿಸುವುದು ನಾಯಕನ ಜವಾಬ್ದಾರಿ. ಅದು ಬಿಟ್ಟು ಅಲ್ಲಿನ ಪಿಚ್‌ಗಳು ಕಠಿಣವಾಗಿತ್ತು ಎಂದು ಹೇಳುವುದು ಸರಿಯಲ್ಲ. ಆಸ್ಟ್ರೇಲಿಯಾದ ಪಿಚ್‌ಗಳು ಕಷ್ಟಕರ ಎಂದರೆ ಲಾಹೋರ್‌ನ ಗಡಾಫಿ ಪಿಚ್‌ ತೆಗೆದುಕೊಂಡು ಹೋಗಿ,” ಎಂದು ಲೇವಡಿ ಮಾಡಿದ್ದಾರೆ.

“ಹಿರಿಯ ಆಟಗಾರರು ಎಲ್ಲ ಮಾದರಿಯಲ್ಲಿ ಆಡಲು ಮುಂದಾಗುವುದರಿಂದ ಏನು ಲಾಭ. ಅವರು ವಿಶ್ರಾಂತಿ ಪಡೆದುಕೊಂಡು ಯುವ ಆಟಗಾರರಿಗೆ ಅವಕಾಶ ಮಾಡಿಕೊಡಬೇಕು. ಉತ್ತಮ ಆಟಗಾರರನ್ನು ಆಯ್ಕೆ ಮಾಡುವುದು ನಾಯಕನ ಜವಾಬ್ದಾರಿ. ಹೀಗಾಗಿ ಉತ್ತಮ ಆಟಗಾರರನ್ನು ಆಯ್ಕೆ ಮಾಡಬೇಕು. ತಂಡದಲ್ಲಿ ಐದನೇ ಬೌಲರ್‌ ಆಯ್ಕೆ ಇರಬೇಕು ಹಾಗೂ ಉತ್ತಮ ಅಲ್‌ರೌಂಡರ್‌ಗಳನ್ನೂ ಆಯ್ಕೆ ಮಾಡಬೇಕು. ಆದರೆ, ಪಾಕಿಸ್ತಾನ ತಂಡದಲ್ಲಿ ಅಂಥ ಸಮತೋಲನ ಇಲ್ಲ,” ಎಂಬುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ : ವಿಸ್ತಾರ Explainer | ಭಾರತವನ್ನು ಎದುರು ಹಾಕಿಕೊಂಡರೆ ಪಾಕಿಸ್ತಾನ ಕ್ರಿಕೆಟ್‌ ಬರ್ಬಾದ್‌; ಯಾಕೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup: ಟಿ20 ವಿಶ್ವಕಪ್​ನಲ್ಲಿ ಈ ಆಟಗಾರರಿಗೆ ಅವಕಾಶ ಸಿಗುವುದು ಡೌಟ್​

T20 World Cup: ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಮಾಯಾಂಕ್‌ ಯಾದವ್‌ ಮತ್ತು ಹರ್ಷಿತ್​ ರಾಣಾ ಟಿ20 ವಿಶ್ವಕಪ್​(T20 World Cup 20BAr24) ನಲ್ಲಿ ಮೀಸಲು ಬೌಲರ್​ಗಳಾಗಿ ತಂಡದೊಂದಿಗೆ ಪ್ರಯಾಣಿಸಬಹುದು ಎಂದು ತಿಳಿದುಬಂದಿದೆ.

VISTARANEWS.COM


on

T20 World Cup
Koo

ಮುಂಬಯಿ: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​(T20 World Cup) ಟೂರ್ನಿ ಜೂನ್ 1 ರಿಂದ 29 ರ ವರೆಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಟೂರ್ನಿಯ ಪಂದ್ಯಾವಳಿಗಾಗಿ ಟೀಮ್​ ಇಂಡಿಯಾದ 15 ಸದಸ್ಯರ ತಂಡ ಏಪ್ರಿಲ್‌ ಕೊನೆಯ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಬಿಸಿಸಿಐ ತಂಡದ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ ಎಂದು ತಿಳಿದುಬಂದಿದೆ.

ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಸೂರ್ಯಕುಮಾರ್​ ಯಾದವ್​, ರವೀಂದ್ರ ಜಡೇಜಾ, ಕುಲ್​ದೀಪ್​ ಯಾದವ್​ ಮೊಹಮ್ಮದ್​ ಸಿರಾಜ್​, ಅರ್ಶ್​ದೀಪ್​ ಸಿಂಗ್, ರಿಂಕು ಸಿಂಗ್​​ ಆಯ್ಕೆಯಾಗುವುದು ಬಹುತೇಕ ಖಚಿತ. ಸದ್ಯಕ್ಕೆ
ಆರಂಭಿಕ ಸ್ಥಾನಕ್ಕೆ ಶುಭಮನ್​ ಗಿಲ್​, ಯಶಸ್ವಿ ಜೈಸ್ವಾಲ್​, ಆಲ್​ರೌಂಡರ್​ ಕೋಟಾದಲ್ಲಿ ಶಿವಂ ದುಬೆ ಮತ್ತು ಹಾರ್ದಿಕ್​ ಪಾಂಡ್ಯ ನಡುವೆ ತೀವ್ರ ಪೈಪೋಟಿ ಇದೆ.

ರಿಷಭ್​ ಪಂತ್​ ಅವರು ಮೊದಲ ಆಯ್ಕೆಯ ವಿಕೆಟ್​ ಕೀಪರ್​ ಆಗಿದ್ದರೆ, 2ನೇ ಕೀಪರ್ ಆಯ್ಕೆಗೆ ಒಟ್ಟು 4 ಮಂದಿ ಆಟಗಾರರ ನಡುವೆ ತೀವ್ರ ಸ್ಪರ್ಧೆ ಇದೆ. ರಾಹುಲ್​, ಜಿತೇಶ್​ ಶರ್ಮ, ಇಶಾನ್​ ಕಿಶನ್​ ಮತ್ತು ಸಂಜು ಸ್ಯಾಮ್ಸನ್ ಇರಲ್ಲಿ ಒಬ್ಬರು ಆಯ್ಕೆಯಾಗಬಹುದು. ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಮಾಯಾಂಕ್‌ ಯಾದವ್‌ ಮತ್ತು ಹರ್ಷಿತ್​ ರಾಣಾ ಮೀಸಲು ಬೌಲರ್​ಗಳಾಗಿ ತಂಡದೊಂದಿಗೆ ಪ್ರಯಾಣಿಸಬಹುದು. ರವಿಚಂದ್ರನ್ ಅಶ್ವಿನ್ ಮತ್ತು ಶ್ರೇಯಸ್​ ಅಯ್ಯರ್​ಗೆ ಸ್ಥಾನ ಸಿಗುವುದು ಬಹುತೇಕ ಡೌಟ್​ ಎನ್ನಲಾಗಿದೆ.

ಇದನ್ನೂ ಓದಿ T20 World Cup: ಟಿ20 ವಿಶ್ವಕಪ್​ನಲ್ಲಿ ರೋಹಿತ್​ ಜತೆ ವಿರಾಟ್​ ಕೊಹ್ಲಿ ಆರಂಭಿಕನಾಗಿ ಕಣಕ್ಕೆ

ಹಾರ್ದಿಕ್​ ಪಾಂಡ್ಯ ಬೌಲಿಂಗ್​ ಮಾಡಿದರೆ ಮಾತ್ರ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದು ಬಿಸಿಸಿಐ ತಿಳಿಸಿರುವದಾಗಿ ದೈನಿಕ್​ ಜಾಗರಣ್​ ತನ್ನ ವರದಿಯಲ್ಲಿ ತಿಳಿಸಿತ್ತು. ಜತೆಗೆ ಈಗಾಗಲೇ ಪಾಂಡಗೆ ಈ ವಿಚಾರವಾಗಿ ಬಿಸಿಸಿಐ ಸೂಚನೆಯನ್ನು ಕೂಡ ನೀಡಿದೆ ಎಂದು ತಿಳಿಸಿತ್ತು.

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಎಪ್ರಿಲ್‌ ಕೊನೆಯ ವಾರದಲ್ಲಿ ಪ್ರಕಟಿಸಲಿದೆ ಎನ್ನಲಾಗಿದೆ. ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

Continue Reading

ಕ್ರೀಡೆ

T20 World Cup: ಟಿ20 ವಿಶ್ವಕಪ್​ನಲ್ಲಿ ರೋಹಿತ್​ ಜತೆ ವಿರಾಟ್​ ಕೊಹ್ಲಿ ಆರಂಭಿಕನಾಗಿ ಕಣಕ್ಕೆ

T20 World Cup: ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಎಪ್ರಿಲ್‌ ಕೊನೆಯ ವಾರದಲ್ಲಿ ಪ್ರಕಟಿಸಲಿದೆ ಎನ್ನಲಾಗಿದೆ.

VISTARANEWS.COM


on

T20 World Cup
Koo

ಮುಂಬಯಿ: ಕೆಲವು ತಿಂಗಳ ಹಿಂದೆ ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿಗೆ ಸ್ಥಾನ ಸಿಗುವುದು ಅನುಮಾನ ಎಂದು ಹೇಳಲಾಗಿತ್ತು. ಇದೀಗ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ(virat kohli) ಮತ್ತು ರೋಹಿತ್​ ಶರ್ಮ(rohit sharma) ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ದೈನಿಕ್​ ಜಾಗರಣ್​ ವರದಿ ಪ್ರಕಾರ ರೋಹಿತ್​ ಜತೆ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಟಿ20 ವಿಶ್ವಕಪ್​ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವ ಸಲುವಾಗಿ ನಾಯಕ ರೋಹಿತ್​ ಶರ್ಮ, ಕೋಚ್​ ರಾಹುಲ್​ ದ್ರಾವಿಡ್​ ಇಂದು(ಬುಧವಾರ) ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್​ ಅಗರ್ಕರ್​ ಜತೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಭೆಯಲ್ಲಿ ರೋಹಿತ್​ ಅವರು ಕೊಹ್ಲಿಯನ್ನು ಆರಂಭಿನಾಗಿ ಆಡಿಸುವ ಬೇಡಿಕೆ ಇರಿಸಿದ್ದಾರೆ ಎಂದು ದೈನಿಕ್​ ಜಾಗರಣ್​ ತನ್ನ ವರದಿಯಲ್ಲಿ ತಿಳಿಸಿದೆ. ಕೊಹ್ಲಿ ಐಪಿಎಲ್​ನಲ್ಲಿ ಆರಂಭಿಕಾಗಿ ಕಣಕ್ಕಿಳಿದು ಉತ್ತಮವಾಗಿ ಆಡುತ್ತಿದ್ದಾರೆ. ಹೀಗಾಗಿ ಅವರನ್ನು ಟಿ20ಯಲ್ಲಿಯೂ ಆರಂಭಿನಾಗಿ ಆಡಿಸಲು ಕೋಚ್​ ಮತ್ತು ನಾಯಕ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಬಳಿಕ ವಿರಾಟ್​ ಕೊಹ್ಲಿ ಭಾರತ ಪರ ಟಿ 20 ಆಡಿದ್ದು ಇದೇ ವರ್ಷಾರಂಭದಲ್ಲಿ ತವರಿನಲ್ಲಿ ನಡೆದ ಅಫಘಾನಿಸ್ತಾನ ವಿರುದ್ಧದ ಸರಣಿಯಲ್ಲಿ. ಆದರೆ ಈ ಸರಣಿಯಲ್ಲಿ ಕೊಹ್ಲಿ ಕೇವಲ 29 ರನ್ ಗಳಿಸಿದ್ದರು. ಹೀಗಾಗಿ ಅವರನ್ನು ಟಿ20 ವಿಶ್ವಕಪ್ ಗೆ ಪರಿಗಣಿಸುವ ಸಾಧ್ಯತೆ ಕಡಿಮೆ ಎನ್ನಲಾಗಿತ್ತು. ಮಾತ್ರವಲ್ಲದೆ ಟಿ20 ವಿಶ್ವಕಪ್ ನಡೆಯುವ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಎನ್ನುವ ಕಾರಣಕ್ಕೆ ಆಯ್ಕೆ ಸಮಿಯಿ ಅವರನ್ನು ಹೊರಗಿಡುವ ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು. ಆದರೆ, ಇದೀಗ ಅವರಿಗೆ ಅವಕಾಶ ಸಿಗಲಿದೆ ಎಂದು ತಿಳಿದುಬಂದಿದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಎಪ್ರಿಲ್‌ ಕೊನೆಯ ವಾರದಲ್ಲಿ ಪ್ರಕಟಿಸಲಿದೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಶೀಘ್ರದಲ್ಲೇ ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಮಾಯಾಂಕ್‌ ಯಾದವ್​ಗೆ ಸ್ಥಾನ ಖಚಿತ

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ
Continue Reading

ಕ್ರಿಕೆಟ್

T20 World Cup 2024: ಶೀಘ್ರದಲ್ಲೇ ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಮಾಯಾಂಕ್‌ ಯಾದವ್​ಗೆ ಸ್ಥಾನ ಖಚಿತ

ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಯುವ ವೇಗಿ ಮಾಯಾಂಕ್‌ ಯಾದವ್‌(Mayank Yadav)ಗೆ ಪುರುಷರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ ಎಂಬುದಾಗಿ ಬಿಸಿಸಿಐ ಮೂಲವೊಂದು ತಿಳಿಸಿದೆ

VISTARANEWS.COM


on

T20 World Cup 2024
Koo

ಮುಂಬಯಿ: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​(T20 World Cup 2024) ಟೂರ್ನಿ ಜೂನ್ 1 ರಿಂದ 29 ರ ವರೆಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಟೂರ್ನಿಯ ಪಂದ್ಯಾವಳಿಗಾಗಿ ಟೀಮ್​ ಇಂಡಿಯಾದ 15 ಸದಸ್ಯರ ತಂಡ ಏಪ್ರಿಲ್‌ ಕೊನೆಯ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ಇಶಾನ್​ ಕಿಶನ್(Ishan Kishan)ಗೆ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ. ಆದರೆ, ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಯುವ ವೇಗಿ ಮಾಯಾಂಕ್‌ ಯಾದವ್‌(Mayank Yadav)ಗೆ ಸ್ಥಾನ ಸಿಗಲಿದೆ ಎಂಬುದಾಗಿ ಬಿಸಿಸಿಐ ಮೂಲವೊಂದು ತಿಳಿಸಿದೆ.

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದ ಸ್ಪಿನ್ನರ್​ ಯಜುವೇಂದ್ರ ಚಹಲ್​ ಕೂಡ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರು ಪ್ರಸ್ತುತ ಐಪಿಎಲ್​ನಲ್ಲಿ ತೋರುತ್ತಿರುವ ಶ್ರೇಷ್ಠ ಬೌಲಿಂಗ್​ ಪ್ರದರ್ಶನ. ಬಿಸಿಸಿಐ ಮತ್ತು ಕೋಚ್​ ಸಲಹೆಯನ್ನು ಕಡೆಗಣಿಸಿ ದೇಶೀಯ ಕ್ರಿಕೆಟ್​ ಆಡಲು ಅಸಡ್ಡೆ ತೋರಿದ ಇಶಾನ್​ ಕಿಶನ್​ ಮತ್ತು ಶ್ರೇಯಸ್​ ಅಯ್ಯರ್ ಸ್ಥಾನವಿಲ್ಲ ಎನ್ನಲಾಗಿದೆ. ಜತೆಗೆ ಕೆ.ಎಲ್​ ರಾಹುಲ್​ಗೂ ಅವಕಾಶ​ ಸಿಗುವ ಸಾಧ್ಯತೆ ಕಡಿಮೆ. ಐಪಿಎಲ್​ನಲ್ಲಿಯೂ ಇದುವರೆಗೆ ಹೇಳುವಂತ ಪ್ರದರ್ಶನ ಕಂಡುಬಂದಿಲ್ಲ.

14 ತಿಂಗಳ ಬಳಿಕ ಕ್ರಿಕೆಟ್​ಗೆ ಮರಳಿದ ರಿಷಭ್​ ಪಂತ್ ಅವರ ಪ್ರದರ್ಶನದ ಮೇಲೆ ರಾಹುಲ್ ಟಿ20 ವಿಶ್ವಕಪ್​ ಭವಿಷ್ಯ ಅಡಗಿತ್ತು.​​ ಪಂತ್​ ವಿಫಲಗೊಂಡರೆ ರಾಹುಲ್​ಗೆ ಅವಕಾಶ ಸಿಗುತ್ತಿತ್ತು. ಆದರೆ ಪಂತ್​ ಬ್ಯಾಟಿಂಗ್​ ಮತ್ತು ಕೀಪಿಂಗ್​ನಲ್ಲಿ ಮಿಂಚಿದ್ದಾರೆ. ಮಾಯಾಂಕ್‌ ಯಾದವ್‌ ಐಪಿಎಲ್​ನಲ್ಲಿ ಗಂಟೆಗೆ 150 ಕಿ.ಮೀ ವೇಗದಲ್ಲಿ ಬೌಲಿಂಗ್​ ನಡೆಸಿ ಗಮನ ಸೆಳೆದಿದ್ದಾರೆ. ಗುಡ್​ ಲೆಂತ್​ ಆ್ಯಂಡ್​ ಲೈನ್​ನಲ್ಲಿ ಬೌಲಿಂಗ್​ ಕೂಡ ಮಾಡುತ್ತಾರೆ. ಹೀಗಾಗಿ ಇವರಿಗೆ ಬಿಸಿಸಿಐ ಮಣೆ ಹಾಕಲಿದೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಇಂಡೋ-ಪಾಕ್ ಪಂದ್ಯ ನಡೆಯುವ​ ಸ್ಟೇಡಿಯಂ ನಿರ್ಮಾಣದ 2ನೇ ವಿಡಿಯೊ ಹಂಚಿಕೊಂಡ ಐಸಿಸಿ

ವಿಶ್ವಕಪ್​ಗೆ ಭಾರತ ಸಂಭಾವ್ಯ ತಂಡ


ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಮಯಾಂಕ್ ಯಾದವ್, ಯಜುವೇಂದ್ರ ಚಹಲ್​.

ಭಾರತಕ್ಕೆ ಐರ್ಲೆಂಡ್ ಮೊದಲ ಎದುರಾಳಿ

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಎಪ್ರಿಲ್‌ ಕೊನೆಯ ವಾರದಲ್ಲಿ ಪ್ರಕಟಿಸಲಿದೆ ಎನ್ನಲಾಗಿದೆ. ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

Continue Reading

ಕ್ರೀಡೆ

T20 World Cup 2024: ಇಂಡೋ-ಪಾಕ್ ಪಂದ್ಯ ನಡೆಯುವ​ ಸ್ಟೇಡಿಯಂ ನಿರ್ಮಾಣದ 2ನೇ ವಿಡಿಯೊ ಹಂಚಿಕೊಂಡ ಐಸಿಸಿ

T20 World Cup 2024: 34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಇನ್ನು ಕೆಲವೇ ತಿಂಗಳು ಮಾತ್ರ ಬಾಕಿ ಉಳಿದಿದೆ. ಇದೀಗ ನ್ಯೂಯಾರ್ಕ್‌ನಲ್ಲಿ ನಡೆಯುವ ಪಂದ್ಯಗಳಿಗಾಗಿ ನಿರ್ಮಿಸಲಾಗುತ್ತಿರುವ ವಿಶೇಷ ವ್ಯವಸ್ಥೆಯ ಸ್ಟೇಡಿಯಂನ 2ನೇ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ನ್ಯೂಯಾರ್ಕ್​ನಲ್ಲಿ ನಿಮಾಣಗೊಳ್ಳುತ್ತಿರುವ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನ(Nassau County International Cricket Stadium) 2ನೇ ಹಂತದ ಕಾಮಗಾರಿಯ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಮಾರ್ಚ್​ 5ರಂದು ಆರಂಭಿಕ 30 ದಿನಗಳ ಟೈಮ್‌ಲ್ಯಾಪ್ಸ್ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ, ಇದೀಗ ಮತ್ತೆ 30 ದಿನಗಳ ಎರಡನೇ ವೀಡಿಯೊವನ್ನು ಅನಾವರಣಗೊಳಿಸಲಾಗಿದೆ.

2ನೇ ಹಂತದ ವಿಡಿಯೊ

ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಘರ್ಷಣೆ ಸೇರಿದಂತೆ ಭಾರತದ ಎಲ್ಲಾ ಗುಂಪು-ಹಂತದ ಪಂದ್ಯಗಳಿಗೆ ಈ ಕ್ರೀಡಾಂಗಣವು ಅಣಿಯಾಗಿದೆ. ಅಚ್ಚರಿ ಎಂದರೆ ಈ ಸ್ಟೇಡಿಯಂ ಅನ್ನು ನಿರ್ಮಾಣ ಮಾಡಿದ್ದೇ ಭಾರತ ಮತ್ತು ಪಾಕಿಸ್ತಾನ ಎದುರಿನ ಪಂದ್ಯಕ್ಕಾಗಿ.

ಐಸಿಸಿ ಹಂಚಿಕೊಂಡಿರುವ ಈ 2ನೇ ವಿಡಿಯೊದಲ್ಲಿ ಮಾರ್ಚ್​ 4ರಿಂದ ಮಾರ್ಚ್ 31ರ ತನಕ ​ಸಾಗಿದ ಎಲ್ಲ ಕಾರ್ಯ ವೈಕರಿಯ ದೃಶ್ಯಗಳನ್ನು ಕಾಣಬಹುದಾಗಿದೆ. ಬಹುತೇಕ ಕೊನೆಯ ಹಂತಕ್ಕೆ ಬಂದು ತಲುಪಿದ್ದೇವೆ ಎಂದು ಐಸಿಸಿ ಈ ವಿಡಿಯೊಗೆ ಕ್ಯಾಪ್ಷನ್​ ನೀಡಿದೆ. ನ್ಯೂಯಾರ್ಕ್ ಕ್ರೀಡಾಂಗಣವು ಇನ್ನೊಂದು ತಿಂಗಳೊಳಗೆ ಎದ್ದು ನಿಲ್ಲಲಿದೆ ಎಂದು ವರದಿಯಾಗಿದೆ. ಈಗಾಗಲೇ ಹಲವು ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಉಳಿದಿರುವ ಕೆಲಸ ಬರದಿಂದ ಸಾಗುತ್ತಿದೆ. ಮೊದಲ ಹಂತದಲ್ಲಿ ಹಂಚಿಕೊಂಡ ವಿಡಿಯೊದಲ್ಲಿ ಜನವರಿ 11ರಿಂದ ಆರಂಭವಾದ ಕೆಲಸದಿಂದ ಹಿಡಿದು ಸದ್ಯ ಮಾರ್ಚ್​ 4ರ ತನಕದ ಸಾಗಿದ ಕಾರ್ಯವೈಕರಿಯನ್ನು ತೋರಿಸಲಾಗಿತ್ತು.

ಇದನ್ನೂ ಓದಿ T20 World Cup 2024: ಏಪ್ರಿಲ್‌ ಕೊನೆಯ ವಾರದಲ್ಲಿ ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ

ಮೊದಲ ಹಂತದಲ್ಲಿ ಪ್ರಟಿಸಿದ ವಿಡಿಯೊ

ತಾತ್ಕಾಲಿಕ ಕ್ರೀಡಾಂಗಣ


34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Continue Reading
Advertisement
Neha Murder Case
ಹುಬ್ಬಳ್ಳಿ27 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Neha Murder case Niranjan urges Joshi to guarantee the lives of Hindu girls
ಕ್ರೈಂ35 mins ago

Neha Murder Case: ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ ಸರ್: ಜೋಶಿಗೆ ನೇಹಾ ತಂದೆ ನಿರಂಜನ್ ಮನವಿ

Kannada Serials TRP IPL Matches Effected On Kannada Serial
ಕಿರುತೆರೆ48 mins ago

Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

IPL 2024
ಕ್ರೀಡೆ53 mins ago

IPL 2024: ಡಿಆರ್​ಎಸ್​ ಚೀಟಿಂಗ್ ವೇಳೆ ಸಿಕ್ಕಿ ಬಿದ್ದ ಮುಂಬೈ ಇಂಡಿಯನ್ಸ್​; ವಿಡಿಯೊ ವೈರಲ್​

Job Alert
ಉದ್ಯೋಗ58 mins ago

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರಕ್ಟ್‌ ಲಿಂಕ್‌

lok sabha election 2024 1st phase voting
ಪ್ರಮುಖ ಸುದ್ದಿ1 hour ago

Lok Sabha Election 2024: ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಲ, ಮಣಿಪುರ, ಛತ್ತೀಸ್‌ಗಢದಲ್ಲಿ ಹಿಂಸಾಚಾರ

pesticide everest fish curry masala
ವೈರಲ್ ನ್ಯೂಸ್2 hours ago

Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

Take strict action in Neha Murder Case CM instructs to DG
ಕ್ರೈಂ2 hours ago

Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

IPL 2024
ಕ್ರಿಕೆಟ್3 hours ago

IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

Murder case In Raichur
ರಾಯಚೂರು3 hours ago

Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ27 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ11 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌