Appu Namana | ರೇಷ್ಮೆ ಸೀರೆಯಲ್ಲಿ ಮೂಡಿದ ಪುನೀತ್‌ ಭಾವಚಿತ್ರ; ಅಭಿಮಾನಿಗಳಿಂದ ಅಶ್ವಿನಿಗೆ ಉಡುಗೊರೆ - Vistara News

ಕರ್ನಾಟಕ

Appu Namana | ರೇಷ್ಮೆ ಸೀರೆಯಲ್ಲಿ ಮೂಡಿದ ಪುನೀತ್‌ ಭಾವಚಿತ್ರ; ಅಭಿಮಾನಿಗಳಿಂದ ಅಶ್ವಿನಿಗೆ ಉಡುಗೊರೆ

ರಾಜ್ಯದ ಮೂಲೆ ಮೂಲೆಯಲ್ಲೂ ಅಭಿಮಾನಿಗಳು ಪುನೀತ್‌ ರಾಜಕುಮಾರ್‌ ಸ್ಮರಣಾರ್ಥ ವಿಶೇಷ ರೀತಿಯಲ್ಲಿ ಗೌರವವನ್ನು (Appu Namana) ಸಲ್ಲಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದ ಸೀರೆ ತಯಾಕರೊಬ್ಬರು ರೇಷ್ಮೆ ಸೀರೆಯಲ್ಲಿ ನಗುಮೊಗದ ಪುನೀತ್‌ ಭಾವಚಿತ್ರವನ್ನು ಮೂಡಿಸಿದ್ದಾರೆ.

VISTARANEWS.COM


on

appu namana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪುನೀತ್‌ ರಾಜಕುಮಾರ್ ಅಭಿಮಾನಿಗಳು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರಿಗೆ ವಿಶೇಷ ಉಡುಗೊರೆ ನೀಡುವ ಮೂಲಕ ಅಭಿಮಾನ (Appu Namana) ಮೆರೆಯುತ್ತಿದ್ದಾರೆ. ರೇಷ್ಮೆ ಸೀರೆಯಲ್ಲಿ ಅಪ್ಪು ಭಾವಚಿತ್ರ ಮೂಡುವಂತೆ ಮಾಡಿದ್ದು, ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.

Appu Namana

ಚಿಕ್ಕಬಳ್ಳಾಪುರದ ರೇಷ್ಮೇ ಸೀರೆ ಡಿಸೈನರ್ಸ್‌ಗಳಿಂದ ವಿಭಿನ್ನ ರೀತಿಯಲ್ಲಿ ಗೌರವ ಸಲ್ಲಿಸುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್‌ಗೆ ಉಡುಗೊರೆ ನೀಡಲು ಕಂಠೀರವ ಸ್ಟುಡಿಯೋಗೆ ರೇಷ್ಮೆ ಸೀರೆ ತಂದಿದ್ದರು. ಆದರೆ, ಆ ಗಲಾಟೆಯಲ್ಲಿ ಅಶ್ವಿನಿಯವರ ಭೇಟಿಯಾಗದೆ ಇದ್ದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಬಳಿಕ ಸದಾಶಿವನಗರದ ಮನೆಗೆ ತೆರಳಿ ಅಶ್ವಿನಿ ಅವರಿಗಾಗಿ ತಂದಿದ್ದ ರೇಷ್ಮೆ ಸೀರೆಯನ್ನು ರಾಘವೇಂದ್ರ ರಾಜಕುಮಾರ್‌ ಅವರಿಗೆ ಹಸ್ತಾಂತರ ಮಾಡಿದರು. 9 ಬಗೆಯ ಅಪ್ಪು ಚಿತ್ರಗಳನ್ನು ರೇಷ್ಮೆ ಸೀರೆಯಲ್ಲಿ ಡಿಸೈನ್ ಮಾಡಲಾಗಿದೆ. ಅಭಿಮಾನಿಗಳು ತಂದಿದ್ದ ಸೀರೆಯನ್ನು ಪಡೆದ ರಾಘವೇಂದ್ರ ರಾಜಕುಮಾರ್‌ ಧನ್ಯವಾದ ತಿಳಿಸಿದರು.

ಇದನ್ನೂ ಓದಿ | Appu Namana | ಪುನೀತ್‌ ಹೆಸರಲ್ಲಿ ವೃದ್ಧಾಶ್ರಮ, ಕಾಲೋನಿಗೆ ಅಪ್ಪು ಹೆಸರಿಟ್ಟ ಅಭಿಮಾನಿಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Actor Darshan: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದಾಗ ಅವಘಡ ನಡೆದಿದೆ.

VISTARANEWS.COM


on

Actor Darshan
Koo

ಮಂಡ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ನಟ ದರ್ಶನ್ (Actor Darshan) ಅವರು ಶುಕ್ರವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದರೆ, ಪ್ರಚಾರದ ವೇಳೆ ನಟ ದರ್ಶನ್ ಇದ್ದ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿರುವುದು ಕಂಡುಬಂದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ.

ಈ ಘಟನೆಯಲ್ಲಿ ನಟ ದರ್ಶನ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು. ಈ ಘಟನೆಯ ಬಳಿಕ ನಟ ದರ್ಶನ್ ಅವರು ಚುನಾವಣಾ ಪ್ರಚಾರ ಮೊಟಕುಗೊಳಿಸಿ, ಬೆಂಗಳೂರಿಗೆ ತೆರಳಿದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ | letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Fraud Case in Bengaluru

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

Fraud Case in bengaluru

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೇಪಾಳ್ಯ ಸೇರಿದಂತೆ ವಿವಿಧೆಡೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಶುಕ್ರವಾರ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚಿಸಿದರು. ಯಲಹಂಕ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಬಿಜೆಪಿಗೆ ಭರ್ಜರಿ ಮತಗಳ ಲೀಡ್ ಸಿಗಲಿದೆ ಎಂದರು.

VISTARANEWS.COM


on

Chikkaballapur Lok Sabha Constituency NDA candidate Dr K Sudhakar election campaign
Koo

ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ. ಕೆ.ಸುಧಾಕರ್, ಯಲಹಂಕ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರೊಂದಿಗೆ ಶುಕ್ರವಾರ ಚುನಾವಣಾ (Lok Sabha Election 2024) ಪ್ರಚಾರ ಕೈಗೊಂಡು, ಮತಯಾಚನೆ ಮಾಡಿದರು.

ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೇಪಾಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಚುನಾವಣಾ ಪ್ರಚಾರ ಮತ್ತು ಸಭೆ ನಡೆಸಿ, ಮತಯಾಚನೆ ಮಾಡಿದರು.

ಇದನ್ನೂ ಓದಿ: Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

ಈ ವೇಳೆ ಮಾತನಾಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್‌, ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಒಂದಾದ ಬಳಿಕ ಕಾಂಗ್ರೆಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ಕಳೆದ ಬಾರಿ 2019ರಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜಿಪಿಗೆ 45,000 ಮತಗಳ ಲೀಡ್ ದೊರೆತಿತ್ತು, ಈ ಬಾರಿ ಎನ್‌ಡಿಎಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಶುಕ್ರವಾರ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Chikkaballapur Lok Sabha Constituency Congress candidate Raksha Ramaiah election campaign in Yalahanka
Koo

ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಶುಕ್ರವಾರ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.

ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ವಿವಿಧ ರಸ್ತೆಗಳಲ್ಲಿ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಚುನಾವಣಾ ಪ್ರಚಾರ ನಡೆಸಿದರು. ನಂತರ ಕೆಂಪೇಗೌಡರ ಪ್ರತಿಮೆ ಮತ್ತು ಡಾ.ಪುನೀತ್ ರಾಜ್‌ಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ವಾರ್ಡ್ ನಂಬರ್ 2 ರಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ‌, ನಂತರ ರೋಡ್ ಶೋ ಮೂಲಕ ಸಾಮಾಕ್ಷಮ್ಮ ರಸ್ತೆ, ಬಡಾವಣೆ ರಸ್ತೆ, ಮಸೀದಿ ರಸ್ತೆ, ಡೌನ್ ಬಜಾರ್ ರಸ್ತೆ, ಓಎಂಎಸ್ ರಸ್ತೆ, ಹೊಸಬೀದಿ, ಡೌನ್ ಬಜಾರ್ ರಸ್ತೆ, ಓಎಂಎಸ್ ರಸ್ತೆ, ಹೊಸಬೀದಿ ಬಸ್ ನಿಲ್ದಾಣ ನಂತರ ವಾರ್ಡ್ ನಂಬರ್ 4ರಲ್ಲಿ ಚಿಕ್ಕಬೊಮ್ಮಸಂದ್ರ ಕ್ರಾಸ್‌ನಿಂದ ಅಟ್ಟೂರು ಮುಖ್ಯರಸ್ತೆವರೆಗೆ ಹಾಗೂ ವಾರ್ಡ್ ನಂಬರ್ 3 ರಲ್ಲಿ ಶನಿ ಮಹಾತ್ಮಾ ದೇವಸ್ಥಾನದಿಂದ ಅಟ್ಟೂರು ಗ್ರಾಮದವರೆಗೆ ಚುನಾವಣಾ ಪ್ರಚಾರ ನಡೆಸಿದರು.

ಇದನ್ನೂ ಓದಿ: CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

ಈ ಸಂದರ್ಭದಲ್ಲಿ ಅಭ್ಯರ್ಥಿ ರಕ್ಷಾ ರಾಮಯ್ಯ ಮಾತನಾಡಿ, ಡಾ. ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸಿಕೊಂಡರು. ಶಾಲಾ ದಿನಗಳಲ್ಲಿ ಪುನೀತ್ ಅವರೊಂದಿಗಿನ ಒಡನಾಟವನ್ನು ನೆನಪು ಮಾಡಿಕೊಂಡರು. ಯುವ ಜನಾಂಗಕ್ಕೆ ಪುನೀತ್ ರಾಜ್‌ಕುಮಾರ್ ಸ್ಫೂರ್ತಿಯಾಗಿದ್ದರು ಎಂದು ತಿಳಿಸಿದರು.

ಹಸಿವು ಮುಕ್ತ ಕರ್ನಾಟಕ ಕಾಂಗ್ರೆಸ್ ಗುರಿಯಾಗಿದ್ದು, ಬಡತನ ನಿರ್ಮೂಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಆದ್ಯತೆ ನೀಡುತ್ತಿದೆ. ನಮ್ಮ ಗುರಿ ಸಾಧನೆಗೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು.

ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳ ಮೂಲಕ ಜನರನ್ನು ವಂಚಿಸಿದೆ. ಹತ್ತು ವರ್ಷಗಳಲ್ಲಿ ಇಪ್ಪತ್ತು ಕೋಟಿ ಉದ್ಯೋಗ ಸೃಷ್ಟಿಯಾಗಬೇಕಾಗಿತ್ತು. ಉದ್ಯೋಗ ಸೃಜನೆಯಲ್ಲಿ ಶೇ 5 ರಷ್ಟು ಸಾಧನೆ ಮಾಡಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಬಡವರ ಪರವಾಗಿದ್ದು, ಜನ ಸಾಮಾನ್ಯರ ಹಿತ ರಕ್ಷಣೆಗೆ ಬದ್ಧವಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಇದಕ್ಕೆ ಸ್ವಷ್ಟ ಉದಾಹರಣೆಯಾಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಜನ ಸಾಮಾನ್ಯರ ಸಂಕಷ್ಟಗಳನ್ನು ನಿವಾರಣೆ ಮಾಡುತ್ತಿದೆ. ಕನ್ನಡ ನಾಡಿನ ಮಾತೆಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ತಮ್ಮನ್ನು ಆಶೀರ್ವದಿಸಿ ಬೆಂಬಲಿಸಬೇಕು ಎಂದು ರಕ್ಷಾ ರಾಮಯ್ಯ ಮನವಿ ಮಾಡಿದರು.

ಇದನ್ನೂ ಓದಿ: Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಸನ್ನ ಕುಮಾರ್, ಪಕ್ಷದ ಹಿರಿಯ ಮುಖಂಡರಾದ ಕೇಶವ ರಾಜಣ್ಣ, ಗೋಪಾಲ್ ಕೃಷ್ಣ ಹಾಗೂ ಪಕ್ಷದ ಕಾರ್ಯಕರ್ತರು, ಇತರರು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Lok Sabha Election 2024: ಕಾರವಾರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ನಡೆಯಿತು.

VISTARANEWS.COM


on

kaalnadige Jatha programme in Uttara kannada
Koo

ಕಾರವಾರ: ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ (Voting Awareness) ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಕಳೆದ ವಿಧಾನಸಭಾ ಚುನಾವಣೆಗಿಂತ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾರರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪಾರರ್ದಶಕ ಮತ್ತು ನ್ಯಾಯ ಸಮ್ಮತವಾದ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನೋಂದಾಯಿತ ನಾಗರಿಕರು ಹಾಗೂ ದಿವ್ಯಾಂಗ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತದಾರರನ್ನು ಜಾಗೃತಗೊಳಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಮಾತನಾಡಿ, ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ತಾವೆಲ್ಲರೂ ಯಾವುದೇ ಆಮಿಷಗಳಿಗೆ ಒಳಗಾಗದೇ ಜಾಗೃತ ಮತದಾರರಾಗಬೇಕು.

ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ಅಕ್ಕಪಕ್ಕದ ಮನೆಯವರಿಗೆ ಕಡ್ಡಾಯ ಮತದಾನದ ಮಹತ್ವವನ್ನು ಮನವರಿಕೆ ಮಾಡಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ಸಮಾಜಕ್ಕೆ ಉತ್ತಮರೆನಿಸಬಹುದಾದ ನಾಯಕರನ್ನು ಆರಿಸುವಲ್ಲಿ ಪ್ರಜ್ಞಾವಂತ ಯುವ ಮತದಾರರು ನೆರವಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಆವರಣದಿಂದ ಆರಂಭಗೊಂಡ ಜಾಥಾವು ಡಾ.ಪಿಕಳೆ ರಸ್ತೆ, ಸುಭಾಷ್ ಚಂದ್ರ ಬೋಸ್ ವೃತ್ತ, ಸವಿತಾ ಹೋಟೆಲ್ ವೃತ್ತ, ಟಿಎಚ್‌ಒ ಆಫೀಸ್ ಸರ್ಕಲ್ ಮಾರ್ಗವಾಗಿ ಸಾಗಿ ಜಿ.ಪಂ. ಆವರಣದಲ್ಲಿ ಅಂತ್ಯಗೊಂಡಿತು. ಬಳಿಕ ಜಿ.ಪಂ. ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ‘ನಾ ಭಾರತ’ ಚುನಾವಣಾ ಜಾಗೃತಿ ಗೀತೆಯನ್ನು ಪ್ರದರ್ಶಿಸಲಾಯಿತು.

ಇದನ್ನೂ ಓದಿ: Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Continue Reading
Advertisement
Lok Sabha Election 2024
ಅವಿಭಾಗೀಕೃತ4 seconds ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ18 ಕಿ.ಮೀ. ಪ್ರಯಾಣ ಬೆಳೆಸಿದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ10 mins ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ30 mins ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ35 mins ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Boat Capsizes
ದೇಶ48 mins ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ56 mins ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು1 hour ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ2 hours ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ2 hours ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ2 hours ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ8 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ18 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌