Election | 2023ರ ವಿಧಾನಸಭಾ ಚುನಾವಣೆ ಪ್ರಣಾಳಿಕೆಗೆ ಕಾಂಗ್ರೆಸ್‌ ಸಿದ್ಧತೆ; ಇಲ್ಲಿವೆ ಪ್ರಮುಖ ಅಂಶಗಳು - Vistara News

ಕರ್ನಾಟಕ

Election | 2023ರ ವಿಧಾನಸಭಾ ಚುನಾವಣೆ ಪ್ರಣಾಳಿಕೆಗೆ ಕಾಂಗ್ರೆಸ್‌ ಸಿದ್ಧತೆ; ಇಲ್ಲಿವೆ ಪ್ರಮುಖ ಅಂಶಗಳು

ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಆಗುತ್ತಿರುವ ಟಾಪ್ 7 ಅಂಶಗಳು ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದ್ದು, ದಲಿತರು, ರೈತರು, ಯುವಕರು, ಮಹಿಳೆಯರನ್ನು ಗುರಿಯಾಗಿಸಿಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ ಎಂಬುದು ತಿಳಿದುಬಂದಿದೆ.

VISTARANEWS.COM


on

Jharkhand Congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯನ್ನು(Election) ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ಅದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಮತದಾರರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದ ಸಮಿತಿ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುತ್ತಿದ್ದು, ಸಮಿತಿಗೆ ಹಿರಿಯ ನಾಯಕರು ಕೊಟ್ಟ ಸಲಹೆಗಳ ಕುರಿತ ಎಕ್ಸ್‌ಕ್ಲೂಸಿವ್ ಮಾಹಿತಿ ಇಲ್ಲಿದೆ.

ಪ್ರಣಾಳಿಕೆಯಲ್ಲಿ ಪ್ರಸ್ತಾಪ ಆಗುತ್ತಿರುವ ಟಾಪ್ 7 ಅಂಶಗಳು ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದ್ದು, ದಲಿತರು, ರೈತರು, ಯುವಕರು, ಮಹಿಳೆಯರನ್ನು ಗುರಿಯಾಗಿಸಿಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ ಎನ್ನಲಾಗಿದೆ.

1.ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಜಾರಿ: ದಲಿತ ಸಮುದಾಯದಲ್ಲಿ ಬೃಹತ್ ವೋಟ್‌ ಬ್ಯಾಂಕ್ ಆಗಿರುವ ಎಡಗೈ ಸಮುದಾಯವನ್ನು ಉಳಿಸಿಕೊಳ್ಳಲು ಪ್ರಣಾಳಿಕೆಯಲ್ಲಿ ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಈಗಾಗಲೇ ಪರಮೇಶ್ವರ್‌ಗೆ ಈ ಬಗ್ಗೆ ಸಲಹೆ ನೀಡಿರುವ ಕೈ ಹಿರಿಯ ನಾಯಕರು, ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿ ಅದಕ್ಕೂ ಮೊದಲು ಲಂಬಾಣಿ ಮತ್ತು ಬಲಗೈ ಸಮುದಾಯದ ಮುಖಂಡರ ಜತೆ ಸಭೆ ನಡೆಸಲು ಸೂಚಿಸಿದ್ದಾರೆ. ಸದಾಶಿವ ಆಯೋಗದ ವರದಿಯಿಂದ ನಿಮ್ಮ ಸಮುದಾಯಗಳಿಗೆ ಅನ್ಯಾಯವಾಗಲ್ಲ, ನಿಮ್ಮನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಮನವರಿಕೆ ಮಾಡಿಕೊಡಲು ಸಲಹೆ ನೀಡಿದ್ದಾರೆ.

ಇದನ್ನೂ ಓದಿ | ʼಬಿಲ್ಲವ ಸಮುದಾಯಕ್ಕೆ ಸರ್ಕಾರದಿಂದ ಮೋಸʼ: ಆದೇಶದ ಪ್ರತಿಯನ್ನು ಹರಿದು ಹಾಕಿದ ಸ್ವಾಮೀಜಿ

ಈ ಬಗ್ಗೆ 2018ರ ಚುನಾವಣೆಗೂ ಮೊದಲು ಮಾಜಿ ಸಚಿವ ಆಂಜನೇಯ ಅವರಿಗೆ ಟಾಸ್ಕ್ ಕೊಡಲಾಗಿತ್ತು. ಆದರೆ ಅಂದು ಅವರು ವಿಫಲರಾಗಿದ್ದರು. ಹೀಗಾಗಿ 2023ರ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಈ ಅಂಶವನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ. ಇದರಿಂದ ಆ ಸಮುದಾಯದ ವೋಟ್‌ ಬ್ಯಾಂಕ್ ಹಿಡಿದಿಟ್ಟಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಆದರೆ ಇದರಿಂದ ಆಗುವ ಲಾಭಕ್ಕಿಂತಲೂ ನಷ್ಟವೇ ಜಾಸ್ತಿ ಎಂಬ ಆತಂಕ ಸಹ ಇದೆ. ಹಾಗೆಯೇ ಎಸ್‌ಸಿ ಸಮುದಾಯದಲ್ಲಿ ಶೈಕ್ಷಣಿಕ, ಆರ್ಥಿಕ ಮುಂದವರಿದ ಲಂಬಾಣಿ ಹಾಗೂ ಬಲಗೈ ಸಂಬಂಧಿತ ಜಾತಿಗಳ ಮತದಾರರು ಚುನಾವಣೆಯಲ್ಲಿ ಪಕ್ಷದ ವಿರುದ್ಧ ನಿಲ್ಲಬಹುದು ಎಂಬ ಆತಂಕವೂ ಇದೆ. ಹೀಗಾಗಿ ಸಮುದಾಯದ ಮುಖಂಡರನ್ನು ಮನವೊಲಿಸಲು ಸದಾಶಿವ ಆಯೋಗ ವರದಿ ಜಾರಿ ಮಾಡುವುದನ್ನು ಪ್ರಣಾಳಿಕೆಯಲ್ಲಿ ಸೇರಿಸುವಂತೆ ಸೂಚನೆ ನೀಡಲಾಗಿದೆ.

2.ರೈತರಿಗೆ ಸಾಲಮನ್ನಾ ಗಿಫ್ಟ್: ಕೃಷಿ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಲು ರೈತರಿಗೆ 50 ಸಾವಿರ ರೂ.ಗಳವೆರೆಗೆ ಸಾಲಮನ್ನಾ ಭಾಗ್ಯ ಕೊಡುವ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಸ್ತಾಪವಾಗಿದೆ.

3.ಉದ್ಯೋಗ ಸೃಷ್ಟಿ, ಖಾಲಿ ಹುದ್ದೆ ಭರ್ತಿ: ಯುವ ಮತದಾರರನ್ನು ಸೆಳೆಯಲು ಉದ್ಯೋಗ ಸೃಷ್ಟಿ, ಖಾಲಿ ಹುದ್ದೆ ತುಂಬುವ ಭರವಸೆ ನೀಡುವ ಅಂಶಗಳು ಪ್ರಣಾಳಿಕೆಯಲ್ಲಿ ಸೇರಿವೆ.

4.ಸ್ತ್ರೀ ಶಕ್ತಿ ಸಂಘಗಳ ಟಾರ್ಗೆಟ್‌: ಮಹಿಳಾ ಸಬಲೀಕರಣಕ್ಕಾಗಿ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲದ ಹಣ ಏರಿಕೆ, ಸಬ್ಸಿಡಿ ಕೊಡುವುದು.

5.ನೀರಾವರಿ ಯೋಜನೆ ಪೂರ್ಣಕ್ಕೆ ಟೈಮ್ ಬಾಂಡ್ ನಿಗದಿ, ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು: ಕೃಷ್ಣಾ, ಕಾವೇರಿ, ತುಂಗಭದ್ರಾ ಯೋಜನೆಗಳಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಟೈಮ್ ಬಾಂಡ್ ನಲ್ಲಿ ಪೂರ್ಣ ಮಾಡುವುದು. ಪ್ರತಿ ವರ್ಷ ನೀರಾವರಿ ಯೋಜನೆಗಳಿಗೆ 1.50 ಲಕ್ಷ ಕೋಟಿ ರೂ.ಗಳಿಗೆ ಅಧಿಕ ಹಣ ಖರ್ಚು ಮಾಡುವುದು.

6.ಬ್ರಾಂಡ್ ಬೆಂಗಳೂರು ಮರುಸೃಷ್ಟಿ: ಬೆಂಗಳೂರು ಮೆಟ್ರೋ ಮೂರನೇ ಹಂತ ಪೂರ್ಣಗೊಳಿಸುವುದು, ನಗರದ ನಾಲ್ಕು ದಿಕ್ಕು ಸಂಪರ್ಕಿಸಲು ಸಬ್ ಅರ್ಬನ್ ರೈಲು ಯೋಜನೆಯನ್ನು ಟೈಮ್ ಬಾಂಡ್‌ನಲ್ಲಿ ಮುಗಿಸುವುದು, ಬಿಜೆಪಿ ಸರ್ಕಾರದ ಸಮಯದಲ್ಲಿ ಬೆಂಗಳೂರು ಬ್ರಾಂಡ್‌ಗೆ ಆಗಿರುವ ಧಕ್ಕೆ ಸರಿಪಡಿಸಿ ಬ್ರಾಂಡ್ ಬೆಂಗಳೂರು ಮರು ಸೃಷ್ಟಿ ಮಾಡುವುದು.

7.ಕಮಿಷನ್‌ಗೆ ಕಡಿವಾಣ, ಜನಸ್ನೇಹಿ ಆಡಳಿತ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಕಮಿಷನ್ ಆರೋಪಕ್ಕೆ ತೆರೆ ಎಳೆಯುವುದು. ಸರ್ಕಾರಿ ಕಚೇರಿಯಲ್ಲಿ 24×7 ಸಿಸಿ ಟಿವಿ ಅಳವಡಿಕೆ, ಅಧಿಕಾರಿಗಳು, ಜನಸ್ನೇಹಿಯಾಗಿ ಕೆಲಸ ಮಾಡುವ ಅಂಶಗಳು ಪ್ರಣಾಳಿಕೆಯಲ್ಲಿವೆ.

ಇದನ್ನೂ ಓದಿ | ಸಚಿವ ಮುನಿರತ್ನ ವಿರುದ್ಧ ಮಹಿಳಾ ಅಭ್ಯರ್ಥಿ ಘೋಷಿಸಿದ ಡಿಕೆಶಿ: ಮತ್ತೊಮ್ಮೆ ಫಲ ಕೊಡುತ್ತಾ ತಂತ್ರಗಾರಿಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

Road Accident: ಬುಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Road Accident: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಿಂದ ಮಹಾರಾಷ್ಟ್ರದ ಮೈಂದರಿಗಿಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬುಲೇರೋ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದರಿಂದ ತೀವ್ರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಅಸುನೀಗಿದ್ದಾರೆ. ಸ್ಥಳಕ್ಕೆ ಮಾದನಹಿಪ್ಪರಗಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

VISTARANEWS.COM


on

Road Accident between Bolero and bike Couple dies on the spot
Koo

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದ ಮಡ್ಡಿ ಬಳಿ ಬುಲೇರೋ ಹಾಗೂ ದ್ವಿ ಚಕ್ರ ವಾಹನ‌ಗಳ ನಡುವೆ ರಸ್ತೆ ಅಪಘಾತ (Road Accident) ಸಂಭವಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುರುಸಿದ್ದ (42), ಮಧುಮತಿ (34) ಮೃತ ದುರ್ದೈವಿಗಳು. ಇವರು ಮಾದನಹಿಪ್ಪರಗಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಿಂದ ಮಹಾರಾಷ್ಟ್ರದ ಮೈಂದರಿಗಿಗೆ ದಂಪತಿ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬುಲೇರೋ ನಿಯಂತ್ರಣಕ್ಕೆ ಸಿಗದೆ ಪಕ್ಕದ ಚರಂಡಿಗೆ ಹೋಗಿ ಬಿದ್ದಿದೆ.

ಸ್ಥಳಕ್ಕೆ ಮಾದನಹಿಪ್ಪರಗಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ (Murder case) ಹೋಗಿದ್ದಾನೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿ (Hubballi News) ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಶರೀಫ್‌ಸಾಬ್ ಕಮಡೊಳ್ಳಿ ಎಂಬಾತ ಹತ್ಯೆಯಾದವನು. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲೇ ಶರೀಪ್‌ಸಾಬ್‌ನ ಕೊಲೆಯಾಗಿದೆ. ಶಶಿಧರ ಚೆನ್ನೋಜಿ ಕೊಲೆ ಆರೋಪಿ ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Continue Reading

ಬೆಂಗಳೂರು

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

Cubbon park : ಪಾರ್ಕಿಂಗ್‌ ಜಾಗದಲ್ಲಿ ಕಾರು ತೆಗೆಯುವ ವಿಚಾರಕ್ಕೆ ಶುರುವಾದ ಗಲಾಟೆಯು ವಿಕೋಪಕ್ಕೆ ತಿರುಗಿದೆ. ಕಾರಲ್ಲಿದ್ದ ಮಹಿಳೆಯರಿಬ್ಬರು ಯುವಕನನ್ನು ಅಟ್ಟಾಡಿಸಿಕೊಂಡು ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದಾರೆ. ಇತ್ತ ಮಹಿಳೆಯರ ಗೂಂಡಾ ವರ್ತನೆಗೆ ಸಾರ್ವಜನಿಕರು ಆಕ್ರೋಶ (Assault case) ಹೊರಹಾಕಿದ್ದಾರೆ.

VISTARANEWS.COM


on

By

Assault case Cubbon park
Koo

ಬೆಂಗಳೂರು: ಸಣ್ಣದಾಗಿ ಶುರುವಾದ ಜಗಳವು ಹೊಡಿಬಡಿ ಹಂತಕ್ಕೆ ತಲುಪಿತ್ತು. ಮಹಿಳೆಯರಿಬ್ಬರು ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ (Assault Case) ಘಟನೆ ಬೆಂಗಳೂರಲ್ಲಿ ನಡೆದಿದೆ. ಮಹಿಳೆಯರ ವಿರುದ್ಧ ಅಲ್ಲಿದ್ದ ಪುರುಷರು ತಿರುಗಿ ಬಿದ್ದಿದ್ದರು. ಮೂರು ದಿನಗಳ ಹಿಂದೆ ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ (cubbon park) ಈ ಘಟನೆ ನಡೆದಿದೆ.

ಕಬ್ಬನ್‌ ಪಾರ್ಕ್‌ನಲ್ಲಿ ಯುವಕನೊಬ್ಬ ಪಾರ್ಕಿಂಗ್‌ ಜಾಗದಿಂದ ಕಾರು ತೆಗೆಯುತ್ತಿದ್ದ. ಇದೇ ವೇಳೆ ಮಹಿಳೆಯರಿಬ್ಬರು ಇದ್ದ ಕಾರು ಮುಂದಿನಿಂದ ಬಂದಿದೆ. ಈ ವಿಚಾರಕ್ಕೆ ಯುವಕನೊಂದಿಗೆ ಮಹಿಳೆಯರು ವಾಗ್ವಾದಕ್ಕೆ ಇಳಿದಿದ್ದರು. ಮಾತು ವಿಕೋಪಕ್ಕೆ ತಿರುಗಿದ್ದು, ಯುವಕನ ತಪ್ಪಿಲ್ಲದಿದ್ದರು ಮಹಿಳೆಯರಿಬ್ಬರು ಅಟ್ಟಾಡಿಸಿಕೊಂಡು ಹೊಡೆದು ಹಲ್ಲೆ ಮಾಡಿದ್ದಾರೆ.

ಮಾತ್ರವಲ್ಲದೆ ಮಹಿಳೆಯರಿಬ್ಬರು ಯುವಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ್ದಾರೆ. ಇತ್ತ ಮಹಿಳೆಯರ ವರ್ತನೆಗೆ ಅಲ್ಲಿದ್ದವರು ಆಕ್ರೋಶ ಹೊರಹಾಕಿದರು. ಮಹಿಳೆಯರ ಗೂಂಡಾ ವರ್ತನೆಗೆ ಸಿಟ್ಟಾಗಿ ನಂತರ ಯುವಕನ ಪರವಾಗಿ ನಿಂತಿದ್ದಾರೆ. ಮಹಿಳೆಯರ ಹಾರಾಟ ಹಾಗೂ ಚಿರಾಟಕ್ಕೆ ಸಾರ್ವಜನಿಕರು ವಾಪಾಸ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಹೈದರಾಬಾದ್‌: ಕೆಲವೊಮ್ಮೆ ಜನಪ್ರತಿನಿಧಿ(Politicians)ಗಳು ತಾವು ಜನಸೇವಕರು ಎಂಬುದನ್ನೇ ಮರೆತು ದರ್ಪದಿಂದ ವರ್ತಿಸುವ ಘಟನೆ ಆಗಾಗ ಕಣ್ಣ ಮುಂದೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಆಂಧ್ರ ಪ್ರದೇಶದಲ್ಲಿ(Andra Pradesh) ನಡೆದಿದ್ದು, ಮತದಾರನ ಮೇಲೆ ಶಾಸಕ(Andra Pradesh MLA)ನೋರ್ವ ದರ್ಪ ಮೆರೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗುತ್ತಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಏನಿದು ಘಟನೆ?

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದೆ. ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಮತದಾರರನಿಗೆ ಕಪಾಳಮೋಕ್ಷ ಮಾಡಿರುವ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಟಿಡಿಪಿ ಪ್ರತಿಕ್ರಿಯಿಸಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿದೆ. ಆ ಹತಾಶೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ವೈಎಸ್‌ಆರ್‌ ಕಾಂಗ್ರೆಸ್‌ ನಿರಾಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ.

ಇತ್ತೀಚೆಗೆ ಬಿಜೆಪಿ ಮುಖಂಡ, ನಟಿ ಅಮೂಲ್ಯ ಮಾವ ರಾಮಚಂದ್ರ ಅವರು ಕೂಡ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರಿಗೆ ಕಪಾಳಮೋಕ್ಷ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

Prajwal Revanna Case: ಪೆನ್ ಡ್ರೈವ್ ಅನ್ನು ಶಾಸಕ ಎ. ಮಂಜು ಅವರಿಗೆ ಕೊಟ್ಟಿದ್ದಾಗಿ ಭಾನುವಾರ ನವೀನ್‌ ಗೌಡ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ. ಈ ಆರೋಪಕ್ಕೆ ಸಿಟ್ಟಾಗಿರುವ ಮಂಜು ಈಗ ದೂರು ನೀಡಿದ್ದಾರೆ. ನವೀನ್ ಗೌಡನಿಗೆ ಏಪ್ರಿಲ್‌ 20ರಂದು ಅಶ್ಲೀಲ ವಿಡಿಯೊದ ಪೆನ್‌ಡ್ರೈವ್‌ ಸಿಗುತ್ತದೆ. ಅದನ್ನು ಏಪ್ರಿಲ್‌ 21ರಂದು ನನಗೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ನನಗೆ ಪೆನ್ ಡ್ರೈವ್ ಅನ್ನು ಯಾಕೆ ಕೊಡಬೇಕು ಎಂಬುದನ್ನು ಮನಸ್ಸು ಮುಟ್ಟಿ ಹೇಳಿಕೊಳ್ಳಲಿ. ನವೀನ್ ಗೌಡ ನನಗೆ ಪರಿಚಯವೇ ಇಲ್ಲ. ನವೀನ್ ಗೌಡ ತಪ್ಪಿಸಿಕೊಳ್ಳಲು ಹಾಗೂ ಎಸ್ಐಟಿ ತನಿಖೆಯ ದಿಕ್ಕು ತಪ್ಪಿಸಲು ಈ ಹೇಳಿಕೆ ಕೊಟ್ಟಿದ್ದಾರೆ ಎಂದು ಎ. ಮಂಜು ದೂರಿದ್ದಾರೆ.

VISTARANEWS.COM


on

A Manju and Naveen Gowda
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು (A Manju) ಎಂದು ಕಾಂಗ್ರೆಸ್‌ ಕಾರ್ಯಕರ್ತ ನವೀನ್‌ ಗೌಡ (Naveen Gowda) ಆರೋಪಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದರ ವಿರುದ್ಧ ಎಸ್‌ಐಟಿಗೆ ದೂರು ದಾಖಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಂಜು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು, ನವೀನ್ ಗೌಡ ವಿರುದ್ಧ ದೂರು ನೀಡಿದ್ದಾರೆ. ಪೆನ್ ಡ್ರೈವ್ ಅನ್ನು ಶಾಸಕ ಎ. ಮಂಜು ಅವರಿಗೆ ಕೊಟ್ಟಿದ್ದಾಗಿ ಭಾನುವಾರ ನವೀನ್‌ ಗೌಡ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ. ಈ ಆರೋಪಕ್ಕೆ ಸಿಟ್ಟಾಗಿರುವ ಮಂಜು ಈಗ ದೂರು ನೀಡಿದ್ದಾರೆ.

ನನಗೆ ಏಪ್ರಿಲ್ 20 ರಂದು ಪೆನ್ ಡ್ರೈವ್ ಸಿಕ್ಕಿತ್ತು. ನಾನದನ್ನು ಏಪ್ರಿಲ್‌ 21ರಂದು ಅರಕಲಗೂಡು ಶಾಸಕ ಮಂಜು ಅವರಿಗೆ ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದ. ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿತ್ತು. ಆದರೆ, ಪೋಸ್ಟ್ ಮಾಡಿ‌ ಸ್ವಲ್ಪ ಸಮಯದ ಬಳಿಕ ನವೀನ್ ಗೌಡ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತನಾಗಿದ್ದ. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನವೀನ್ ಗೌಡನ ಮೇಲೆ ಈಗಾಗಲೇ ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷವಾಗಿ ಶಾಸಕ ಎ. ಮಂಜು ವಿರುದ್ಧ ಪೋಸ್ಟ್ ಹಾಕಿ ಕೆಲವೇ ಸಮಯದ ಬಳಿಕ ಡಿಲೀಟ್‌ ಮಾಡಿದ್ದ.

ದೂರು ನೀಡಿದ ಎ. ಮಂಜು

ಈ ಸಂಬಂಧ ಎಸ್‌ಐಟಿಗೆ ಬಂದ ಶಾಸಕ ಎ. ಮಂಜು ಅವರು ನವೀನ್‌ ಗೌಡನ ಮೇಲೆ ದೂರು ದಾಖಲು ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೀನ್ ಗೌಡನಿಗೆ ಏಪ್ರಿಲ್‌ 20ರಂದು ಅಶ್ಲೀಲ ವಿಡಿಯೊದ ಪೆನ್‌ಡ್ರೈವ್‌ ಸಿಗುತ್ತದೆ. ಅದನ್ನು ಏಪ್ರಿಲ್‌ 21ರಂದು ನನಗೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ನನಗೆ ಪೆನ್ ಡ್ರೈವ್ ಅನ್ನು ಯಾಕೆ ಕೊಡಬೇಕು ಎಂಬುದನ್ನು ಮನಸ್ಸು ಮುಟ್ಟಿ ಹೇಳಿಕೊಳ್ಳಲಿ. ನವೀನ್ ಗೌಡ ನನಗೆ ಪರಿಚಯವೇ ಇಲ್ಲ. ನವೀನ್ ಗೌಡ ತಪ್ಪಿಸಿಕೊಳ್ಳಲು ಹಾಗೂ ಎಸ್ಐಟಿ ತನಿಖೆಯ ದಿಕ್ಕು ತಪ್ಪಿಸಲು ಈ ಹೇಳಿಕೆ ಕೊಟ್ಟಿದ್ದಾರೆ. ನನಗೆ ಗೊತ್ತಿಲ್ಲದೆಯೇ ಈ ಪ್ರಕರಣದ ಹಿಂದೆ ಯಾರಿದ್ದಾರೆಂದು ಹೇಳಲ್ಲ ಎಂದು ಹೇಳಿದರು.

ಫೇಸ್‌ಬುಕ್‌ ಹ್ಯಾಕ್‌ ಆಗಿದೆ ಎಂದು ನವೀನ್‌ ಈಗ ಹೇಳುತ್ತಿದ್ದಾನೆ. ಅಂದು ನಾನು ಮದುವೆಗಾಗಿ ಕಲ್ಯಾಣ ಮಂಟಪಕ್ಕೆ ಹೋಗಿದ್ದು ನಿಜ. ಆದರೆ, ನವೀನ್ ಗೌಡ ಭೇಟಿ ಆಗಲೇ ಇಲ್ಲ. ಸತ್ಯ ಹೊರಗೆ ಬರಲಿ ಅಂತಾ ಇವತ್ತು ದೂರು ಕೊಟ್ಟಿದ್ದೇನೆ. ದೇವೇಗೌಡ ಕುಟುಂಬದಿಂದ ನನ್ನನ್ನು ದೂರ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಹಾಗಾಗಿ ಈ ರೀತಿ ಕೃತ್ಯ ಮಾಡಿದ್ದಾರೆ. ದೇವೇಗೌಡರು ನನಗೆ ಕೊನೆಯ ಅವಕಾಶವನ್ನು ನೀಡಿದ್ದರು. ನಾನು ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಗೆದ್ದು ಶಾಸಕನಾಗಿದ್ದೇನೆ. ಆದರೆ, ಈಗ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಎಸ್ಐಟಿಯವರು ನವೀನ್‌ನನ್ನು ಬಂಧಿಸಬೇಕು ಎಂದು ಒತ್ತಾಯ ಮಾಡಿದ್ದೇನೆ ಎಂದು ಎ. ಮಂಜು ಹೇಳಿದರು.

ಇದನ್ನೂ ಓದಿ: Prajwal Revanna Case: ಎಸ್‌ಐಟಿಗೆ ಸವಾಲೆಸೆದ ನವೀನ್‌ ಗೌಡ; ದೇವರಾಜೇಗೌಡ, ಪ್ರೀತಂಗೌಡ ಆಪ್ತರು ಎಸ್‌ಐಟಿ ಕಸ್ಟಡಿಗೆ?

ಈ ಪ್ರಕರಣದ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಲೇಬೇಕು. ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಘಟನೆ ಬಳಿಕ ದೇವೇಗೌಡರ ನಿವಾಸಕ್ಕೆ ಹೋಗಿದ್ದೆ. ಧೈರ್ಯವಾಗಿ ಇರಿ ಅಂತಾ ಹೇಳಿ ಬಂದಿದ್ದೇನೆ. ಎಚ್.ಡಿ. ರೇವಣ್ಣ ಅವರನ್ನು ಭೇಟಿ ಮಾಡಿ ಬಂದಿದ್ದೆ. ಬೇಲ್ ವಿಚಾರಣೆ ನಡೆಯುತ್ತಿದೆ. ಏನಾಗುತ್ತದೆ ಎಂದು ನೋಡಬೇಕು ಎಂದು ಹೇಳಿದರು.

Continue Reading

ಚಿನ್ನದ ದರ

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Gold Rate today: ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,715ಕ್ಕೆ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,325 ಆಗಿದೆ. ಚಿನ್ನದ ಬೆಲೆ 10 ಗ್ರಾಂಗೆ ₹862.50ರಷ್ಟಿದೆ.

VISTARANEWS.COM


on

gold rate today 34
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹10 ಹಾಗೂ ₹11 ಇಳಿಕೆಯಾಗಿವೆ. ಅಕ್ಷಯ ತದಿಗೆಯಂದು ಚಿನ್ನ ಬೆಳ್ಳಿ ದರಗಳು ತೀವ್ರವಾಗಿ ಏರಿಕೆ ಕಂಡಿದ್ದವು. ಚಿನ್ನದ ಮಾರುಕಟ್ಟೆಯಲ್ಲಿ ಭಾರಿ ವ್ಯಾಪಾರ ಆಗಿತ್ತು. ಇಂದು ಅದು ಹಿಂದಿನ ಸ್ಥಿತಿಗೆ ಮರಳಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,715ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,150 ಮತ್ತು ₹6,71,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,325 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,600 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,250 ಮತ್ತು ₹7,32,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹86.25, ಎಂಟು ಗ್ರಾಂ ₹690 ಮತ್ತು 10 ಗ್ರಾಂ ₹862.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,625 ಮತ್ತು 1 ಕಿಲೋಗ್ರಾಂಗೆ ₹86,250 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,30073,380
ಮುಂಬಯಿ67,150 73,250
ಬೆಂಗಳೂರು67,150 73,250
ಚೆನ್ನೈ67,25073,360

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading
Advertisement
Road Accident between Bolero and bike Couple dies on the spot
ಕಲಬುರಗಿ2 mins ago

Road Accident: ಬುಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Arvind Kejriwal
ದೇಶ12 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ರಿಲೀಫ್‌; ಸಿಎಂ ಸ್ಥಾನ ವಜಾಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

Assault case Cubbon park
ಬೆಂಗಳೂರು18 mins ago

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

A Manju and Naveen Gowda
ಕ್ರೈಂ30 mins ago

Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

Viral Video
ದೇಶ44 mins ago

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

POK Explainer in Kannada
ರಾಜಕೀಯ45 mins ago

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

Vijay Surya changes his name on mothers day
ಕಿರುತೆರೆ49 mins ago

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

gold rate today 34
ಚಿನ್ನದ ದರ1 hour ago

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Shilpa Shetty sister Shamita visit Kedarnath with their mother
ಬಾಲಿವುಡ್1 hour ago

Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

Drowned in water
ಮೈಸೂರು1 hour ago

Drowned in Water : ತಲಕಾಡು ಪ್ರವಾಸಕ್ಕೆ ಹೋದ ಯುವತಿ ‌ನೀರಿನಲ್ಲಿ ಮುಳುಗಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ7 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ9 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ20 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ20 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ24 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌